ಮುಳಬಾಗಿಲು; ಮಾ,31: ಏಪ್ರಿಲ್ ತಿಂಗಳಿನಿಂದ ಏರಿಕೆಯಾಗುವ ಅಗತ್ಯ ಔಷಧಿಗಳ ಬೆಲೆ ನಿಯಂತ್ರಣಕ್ಕೆ ಕಾನೂನು ರಚನೆ ಮಾಡಿ ಬಡವರ ಆರೋಗ್ಯ ರಕ್ಷಣೆ ಮಾಡಬೇಕೆಂದು ರೈತಸಂಘದಿಂದ ತಾಲೂಕು ಆರೋಗ್ಯ ಅಧಿಕಾರಿಗಳ ಮುಖಾಂತರ ಕೇಂದ್ರ ಸರ್ಕಾರಕ್ಕೆ ಮನವಿ ನೀಡಿ ಆಗ್ರಹಿಸಲಾಯಿತು.ಅಗತ್ಯ ವಸ್ತುಗಳ ಬೆಲೆ ಏರಿಕೆ ಜೊತೆಗೆ ಕೃಷಿ ಕ್ಷೇತ್ರದ ಅವೈಜ್ಞಾನಿಕ ಕಾನೂನು ಜಾರಿಗೆ ತಂದು ದಿನೇದಿನೇ ದೇಶದ ಬಡಜನರ ಹಕ್ಕುಗಳನ್ನು ಶ್ರೀಮಂತರಿಗೆ ಮಾರಾಟ ಮಾಡುವ ಜೊತೆಯಲ್ಲಿ ಬಡವರ ಆರೋಗ್ಯವನ್ನು ಔಷಧಿ ಬೆಲೆ ಏರಿಕೆ ಮಾಡಿ ಕಸಿಯುತ್ತಿರುವ ಕೇಂದ್ರ, ರಾಜ್ಯ ಸರ್ಕಾರದ ಜನ […]
ಶ್ರೀನಿವಾಸಪುರ: ರಾಜ್ಯದಲ್ಲಿ ವಿಧಾನಸಭಾ ಚುನಾವಣೆ ಘೋಷಣೆಯಾಗಿದ್ದು, ರಾಜಕೀಯ ಪಕ್ಷಗಳು ಸೇರಿದಂತೆ, ಚುನಾವಣಾ ಪ್ರಕ್ರಿಯೆಯಲ್ಲಿ ಪಾಲ್ಗೊಳ್ಳುವ ಪ್ರತಿಯೊಬ್ಬರೂ ಚುನಾವಣಾ ನೀತಿ ಸಂಹಿತೆ ಪಾಲಿಸಬೇಕು ಎಂದು ಶ್ರೀನಿವಾಸಪುರ ವಿಧಾನಸಭಾ ಕ್ಷೇತ್ರದ ಚುನಾವಣಾಧಿಕಾರಿ ಆರ್.ಬಿ.ನಂದಿನಿ ಹೇಳಿದರು.ಪಟ್ಟಣದ ತಾಲ್ಲೂಕು ಕಚೇರಿ ಸಭಾಂಗಣದಲ್ಲಿ ಬುಧವಾರ ಏರ್ಪಡಿಸಿದ್ದ ಸುದ್ದಿಗೊಷ್ಠಿಯಲ್ಲಿ ಮಾತನಾಡಿದ ಅವರು, ಚುನಾವಣಾ ನೀತಿ ಸಂಹಿತೆ ಪಾಲನೆಯಲ್ಲಿ ಯಾವುದೇ ಲೋಪ ಕಂಡುಬಂದರೂ, ಕಾನೂನು ಕ್ರಮ ಎದುರಿಸಬೇಕಾಗುತ್ತದೆ ಎಂದು ಎಚ್ಚರಿಸಿದರು.ಏ.13 ರಂದು ಗೆಜೆಟ್ ಸೂಚನೆ ಹೊರಡಿಸಲಾಗುವುದು. ನಾಮಪತ್ರ ಸಲ್ಲಿಸಲು ಕೊನೆ ದಿನಾಂಕ ಏ.20, ನಾಮಪತ್ರಗಳ ಪರಿಶೀಲನೆ ಏ.21, […]
ಶ್ರೀನಿವಾಸಪುರ : ಈ ಗ್ರಾಮದ ಜನತೆ ಬಹಳ ಶ್ರಮಜೀವಿಗಳು. ನಿಮ್ಮ ಮಕ್ಕಳು ಒಳ್ಳೆಯ ವಿದ್ಯಾವಂತರಾಗಬೇಕು ಎನ್ನುವುದೇ ನನ್ನ ಆಶಯ ಎಂದು ಶಾಸಕ ಕೆ.ಆರ್.ರಮೇಶ್ ಕುಮಾರ್ ಅಭಿಪ್ರಾಯಪಟ್ಟರು. ತಾಲೂಕಿನ ಗೌಡಹಳ್ಳಿ ಗ್ರಾಮದಲ್ಲಿ ಮಂಗಳವಾರ ೭.೨೫ ಲಕ್ಷದಲ್ಲಿ ನಿರ್ಮಿಸಲಾದ ಶಾಲೆಯ ನೂತನ ಕೊಠಡಿಯನ್ನು ಉದ್ಗಾಟಿಸಿ ಮಾತನಾಡಿದರು. ಈ ಶಾಲೆಯ ಮಕ್ಕಳಿಗೆ ಶೌಚಾಲಯ, ಕುಡಿಯುವ ನೀರು, ಕಾಂಪೌAಡ್ ನಿರ್ಮಿಸಬೇಕಾಗಿದ್ದು, ಮುಂದಿನ ದಿನಗಳಲ್ಲಿ ಅವುಗಳನ್ನು ನಿರ್ಮಿಸಿಕೊಡಲಾಗುವುದು ಎಂದು ಭರವಸೆ ನೀಡಿದರು . ನೀವು ಬೆಂಗಳೂರಿನಲ್ಲಿನ ಖಾಸಗಿ ಶಾಲೆಗಳಲ್ಲಿ ಹೆಚ್ಚಿನ ಶುಲ್ಕ ಪಾವತಿಸಬೇಕಾಗುತ್ತದೆ. ಈ […]
ಶ್ರೀನಿವಾಸಪುರ: ಗ್ರಾಮೀಣ ಪ್ರದೇಶದಲ್ಲಿ ಆದ್ಯತೆ ಮೇಲೆ ಅಗತ್ಯ ಮೂಲ ಸೌಕರ್ಯ ಕಲ್ಪಿಸಲಾಗಿದೆ. ಅದರಲ್ಲೂ ಕುಡಿಯುವ ನೀರು ಪೂರೈಕೆಗೆ ಮೊದಲ ಆದ್ಯತೆ ನೀಡಲಾಗಿದೆ ಎಂದು ಶಾಸಕ ಕೆ.ಅರ್.ರಮೇಶ್ ಕುಮಾರ್ ಹೇಳಿದರು.ತಾಲ್ಲೂಕಿನ ಶಿವಪುರ ಗ್ರಾಮದಲ್ಲಿ ರೂ.5 ಲಕ್ಷ ವೆಚ್ಚದಲ್ಲಿ ನಿರ್ಮಿಸಲಾಗುವ ಸಮುದಾಯ ಭವನಕ್ಕೆ ಭೂಮಿ ಪೂಜೆ ನೆರವೇರಿಸಿ ಮಾತನಾಡಿದ ಅವರು, ಕೆಸಿ ವ್ಯಾಲಿ ನೀರು ತಾಲ್ಲೂಕಿನ ಕೆರೆಗಳಿಗೆ ಹರಿದು ಬರುತ್ತಿದೆ. ಹೊಸದಾಗಿ ಕೆಲವು ಕೆರೆಗಳಿಗೆ ಕೊಳವೆ ಅಳವಡಿಸುವ ಕಾರ್ಯ ಪ್ರಗತಿಯಲ್ಲಿದೆ ಎಂದು ಹೇಳಿದರು.ಕ್ಷೇತ್ರದಲ್ಲಿ ವಸತಿ ಹೀನರಿಗೆ ಮನೆ ನಿರ್ಮಿಸಿ ಕೊಡಲಾಗಿದೆ. […]
ಶ್ರೀನಿವಾಸಪುರ: ಇಲ್ಲಿನ ರಾಘವೇಂದ್ರಸ್ವಾಮಿ ಮಠದಲ್ಲಿ ಸೋಮವಾರ ಶ್ರೀನಿವಾಸದೇವರ, ಪ್ರಾಣದೇವರ ಹಾಗೂ ರಾಘವೇಂದ್ರ ತೀರ್ಥರ ಮೃತ್ತಿಕಾ ಬಂದಾವನ ಪುನರ್ ಪ್ರತಿಷ್ಠಾಪನಾ ಕಾರ್ಯಕ್ರಮ ಏರ್ಪಡಿಸಲಾಗಿತ್ತು.ಕಾರ್ಯಕ್ರಮದ ಅಂಗವಾಗಿ ಗಣಪತಿ ಪೂಜೆ, ಪುಣ್ಯಾಹ, ಕಳಶ ಸ್ಥಾಪನೆ, ಹೋಮ, ಪೂರ್ಣಾಹುತಿ, ಪ್ರತಿಷ್ಠಾಪನೆ, ಮಹಾಭಿಷೇಕ, ಪಂಚಾಮೃತ ಅಭಿಷೇಕ, ಮೂಲ ದೇವರಿಗೆ ಮಹಾಪೂಜೆ, ನೈವೇದ್ಯ, ಮಂಗಳಾರತಿ ತೀರ್ಥ ಪ್ರಸಾದ ವಿನಿಯೋಗ ಏರ್ಪಡಿಸಲಾಗಿತ್ತು.ಈ ಸಂದರ್ಭದಲ್ಲಿ ಪ್ರಾಣದೇವರು, ರಾಘವೇಂದ್ರಸ್ವಾಮಿ ಪಾದುಕೆಗಳಿಗೆ ನೂತನ ರಜತ ಕವಚ ಸಮರ್ಪಣೆ ಮಾಡಲಾಯಿತು. ರಾಯರ ಬೃದಾವನ ಪುನರ್ ಪ್ರತಿಷ್ಠಾಪನಾ ಕಾರ್ಯಕ್ಕೆ ಸುವಿದೇಂದ್ರತೀರ್ಥ ಸ್ವಾಮೀಜಿ ಚಾಲನೆ ನೀಡಿದರು.ಗುರು […]
ಶ್ರೀನಿವಾಸಪುರ: ಹೊಸ ಕಂದಾಯ ಗ್ರಾಮಗಳ ಹೆಸರು ಬದಲಾಯಿಸಿ ಸರ್ಕಾರಿ ದಾಖಲೆಗೆ ಸೇರಿಸಲಾಗುತ್ತಿದೆ ಎಂದು ಶಾಸಕ ಕೆ.ಆರ್.ರಮೇಶ್ ಕುಮಾರ್ ಹೇಳಿದರು.ಪಟ್ಟಣದ ತಾಲ್ಲೂಕು ಕಚೇರಿ ಮುಂದೆ ಸೋಮವಾರ ಏರ್ಪಡಿಸಿದ್ದ ಸಮಾರಂಭದಲ್ಲಿ ಹೊಸ ಕಂದಾಯ ಗ್ರಾಮಗಳ ಫಲಾನುಭವಿಗಳಿಗೆ ಹಕ್ಕುಪತ್ರ ವಿತರಿಸಿ ಮಾತನಾಡಿದ ಅವರು, ಹಿಂದೆ ಜನಸಾಮಾನ್ಯರಿಗೆ ಜಮೀನು ಇರಲಿಲ್ಲ. ಅದು ರಾಜ, ಮಹಾರಾಜರ ಅಧೀನದಲ್ಲಿತ್ತು. ಮತ್ತೆ ಜೋಡಿದಾರರ ಅಧೀನಕ್ಕೆ ಬಂತು. ಮತ್ತೆ ಜಮೀನುದಾರಿಕೆ ಬಂತು ಎಂದು ಹೇಳಿದರು.ಹಿಂದೆ ಕೆಲವರನ್ನು ಗ್ರಾಮಗಳಿಂದ ಹೊರಗೆ ಇಡಲಾಗಿತ್ತು. ಅಂಥ ಜನವಸತಿ ಪ್ರದೇಶಗಳಿಗೆ ಹೆಸರು ಇರಲಿಲ್ಲ. ಆ […]
ಬಂಗಾರಪೇಟೆ; ಮಾ.26: ಜಿಲ್ಲಾದ್ಯಂತ ಸರ್ಕಾರಿ ಕೆರೆ, ರಾಜಕಾಲುವೆ, ಗುಂಡು ತೋಪು, ಗೋಮಾಳವನ್ನು ಒತ್ತುವರಿ ಮಾಡಿಕೊಂಡಿರುವ ಶಾಸಕರ ಸದಸ್ಯತ್ವವನ್ನು ರದ್ದು ಮಾಡುವ ಜೊತೆಗೆ ಚುನಾವಣೆಯಲ್ಲಿ ಸ್ಪರ್ಧಿಸದಂತೆ ಚುನಾವಣಾಧಿಕಾರಿಗಳನ್ನು ಒತ್ತಾಯಿಸಿ ಮಾ.29ರಂದು ಜಿಲ್ಲಾಧಿಕಾರಿಗಳ ಕಚೇರಿಯೆದುರು ಹೋರಾಟ ಮಾಡಲು ರೈತಸಂಘದ ಸಭೆಯಲ್ಲಿ ತೀರ್ಮಾನಿಸಲಾಯಿತು.ಪಟ್ಟಣದ ರೈಲ್ವೇ ನಿಲ್ದಾಣದ ಆವರಣದಲ್ಲಿ ನಡೆದ ಸಭೆಯಲ್ಲಿ ಮಾತನಾಡಿದ ಕಾಮಸಮುದ್ರ ಹೋಬಳಿ ಅಧ್ಯಕ್ಷ ಮುನಿಕೃಷ್ಣ, ಮಾಲೂರು ಶಾಸಕರಾದ ಕೆ.ವೈ.ನಂಜೇಗೌಡರು ಅಕ್ರಮ ಗಣಿಗಾರಿಕೆಗೆ ಗೋಮಾಳ ಜಮೀನು ಕಬಳಿಕೆ, ಶ್ರೀನಿವಾಸಪುರ ಶಾಸಕರಾದ ಕೆ.ಆರ್.ರಮೇಶ್‍ಕುಮಾರ್ ಅವರು ನೂರಾರು ಎಕರೆಗೂ ಹೆಚ್ಚು ಅರಣ್ಯ ಭೂಮಿ […]
ಶ್ರೀನಿವಾಸಪುರ: ರಾಜ್ಯ ಸರ್ಕಾರ ಅಲ್ಪ ಸಂಖ್ಯಾತರ ಶೇ.4 ರಷ್ಟು ಮೀಸಲಾತಿ ವಾಪಸ್ ಪಡೆಯುವುದರ ಮೂಲಕ ಒಂದು ಸಮುದಾಯಕ್ಕೆ ಅನ್ಯಾಯ ಮಾಡಿದೆ ಎಂದು ಶಾಸಕ ಕೆ.ಆರ್.ರಮೇಶ್ ಕುಮಾರ್ ಹೇಳಿದರು.ಪಟ್ಟಣದ ಮಾರುತಿ ಸಭಾ ಭವನದಲ್ಲಿ ಶನಿವಾರ ಏರ್ಪಡಿಸಿದ್ದ ಕಾರ್ಯಕರ್ತರ ಸಭೆ ಉದ್ಘಾಟಿಸಿ ಮಾತನಾಡಿದ ಅವರು, ಬಿಜೆಪಿ ಸರ್ಕಾರ ಸಮಾಜದಲ್ಲಿ ಮತೀಯವಾದ ಬಿತ್ತುತ್ತಿದೆ. ಸಮಾಜ ಒಡೆಯುವ ಕಾರ್ಯ ಮಾಡುತ್ತಿದೆ. ಸಮಾಜದಲ್ಲಿ ಗೋಡೆಗಳನ್ನು ನಿರ್ಮಿಸುತ್ತಿದೆ ಎಂದು ಹೇಳಿದರು.ಬಿಜೆಪಿ ಸರ್ಕಾರ ಅಲ್ಪ ಸಂಖ್ಯಾತರ ಧಾರ್ಮಿಕ ಭಾವನೆಗಳನ್ನು ಗೌರವಿಸುತ್ತಿಲ್ಲ. ಹಿಂದೂ ಧಾರ್ಮಿಕ ಸ್ಥಳಗಳಲ್ಲಿ ಅಲ್ಪ ಸಂಖ್ಯಾತರು […]
ಗ್ರಾಮೀಣ ಭಾಗದಲ್ಲಿ ಪಕ್ಷಾತೀತವಾಗಿ ವಸತಿ ರಹಿತರಿಗೆ ವಸತಿ ನೀಡಲಾಗಿದೆ. ಕುಡಿಯುವ ನೀರು, ಸಮುದಾಯಭವನಗಳನ್ನು ನಿರ್ಮಿಸಲಾಗುತ್ತಿದೆ. ಮುಖ್ಯವಾಗಿ ಕ್ಷೇತ್ರದಲ್ಲಿ ಮೂಲಭೂತ ಸೌಲಭ್ಯಗಳಿಗೆ ಮೊದಲ ಆಧ್ಯತೆ ನೀಡಲಾಗುತ್ತಿದೆ ಎಂದು ಶಾಸಕ ಕೆ.ಆರ್.ರಮೇಶ್‍ಕುಮಾರ್ ಹೇಳಿದರು.ಚಿಕ್ಕರಂಗೇಪಲ್ಲಿ ಗ್ರಾಮದಲ್ಲಿ ವಿವಿಧ ಯೋಜನೆಯಲ್ಲಿ 30 ಲಕ್ಷ ವೆಚ್ಚದ ಕಾಮಗಾರಿಗಳನ್ನು ಹಾಗು ಜಿಲ್ಲಾ ಕೋಮುಲ್ ಹಾಲು ಒಕ್ಕೂಟದಿಂದ ನಿರ್ಮಿಸಲಾದ ಹಾಲಿನ ಡೈರಿ ಕಟ್ಟಡವನ್ನು ಶುಕ್ರವಾರ ಉದ್ಗಾಟಿಸಿ ಮಾತನಾಡಿದರು.ಗ್ರಾಮೀಣ ಭಾಗದಲ್ಲಿ ಹೈನುಗಾರಿಕೆಯು ರೈತ ಹಾಗೂ ಬಡ ಕುಟುಂಬಗಳ ಆರ್ಥಿಕವಾಗಿ ಸಭಲರಾಗಲು ಕಾರಣವಾಗಿದ್ದು, ರೈತರು ಕೃಷಿಯೊಂದಿಗೆ ಹೈನುಗಾರಿಕೆಯನ್ನು ಮಾಡುವಂತೆ ಸಲಹೆ […]