ಶ್ರೀನಿವಾಸಪುರ, ಏಪ್ರಿಲ್ 14: ತಾಲೂಕಿನ ಶ್ರೀನಿವಾಸಪುರ–ಯಲ್ದೂರು ಮುಖ್ಯ ರಸ್ತೆಯ ಸಮೀಪದಲ್ಲಿರುವ ಜಮೀನೊಂದರಲ್ಲಿ ಅಕ್ರಮವಾಗಿ ಬೆಳೆಯಲಾಗುತ್ತಿದ್ದ ಗಾಂಜಾ ಗಿಡಗಳನ್ನು ಪೊಲೀಸರು ಪತ್ತೆ ಹಚ್ಚಿ ವಶಪಡಿಸಿಕೊಂಡ ಘಟನೆ ನಡೆದಿದೆ. ಮಾಹಿತಿಯ ಪ್ರಕಾರ, ಈ ಜಮೀನು ಬೆಂಗಳೂರಿನ ಕೆ.ಆರ್.ಪುರಂ ನಿವಾಸಿ ಲಕ್ಷ್ಮಿ ಅವರಿಗೆ ಸೇರಿದ್ದು, ಅಲ್ಲಿ ಅಕ್ರಮವಾಗಿ ಗಾಂಜಾ ಬೆಳೆ ಬೆಳೆಸಲಾಗುತ್ತಿತ್ತು ಎನ್ನಲಾಗಿದೆ. ಗಾಂಜಾ ಬೆಳೆ ಬೆಳೆಯುತ್ತಿರುವ ಬಗ್ಗೆ ಖಚಿತ ಮಾಹಿತಿ ಸಿಕ್ಕ ಹಿನ್ನೆಲೆಯಲ್ಲಿ ಶ್ರೀನಿವಾಸಪುರ ಪೊಲೀಸ್ ಠಾಣೆಯ ಇನ್ಸ್ಪೆಕ್ಟರ್ ಶಂಕರಾಚಾರ್ ಅವರ ನೇತೃತ್ವದ ತಂಡ ಸ್ಥಳಕ್ಕೆ ಧಾವಿಸಿ ಪರಿಶೀಲನೆ ನಡೆಸಿತು. […]
ಕೋಲಾರ:- ಸಮ ಸಮಾಜ ನಿರ್ಮಾಣದ ಪರಿಕಲ್ಪನೆ ಸಾಕಾರಗೊಳ್ಳಲು ಇಂದು ಶಿಕ್ಷಣ ಅಗತ್ಯವಾಗಿದ್ದು ಈ ನಿಟ್ಟಿನಲ್ಲಿ ಸರ್ಕಾರಿ ಶಾಲೆಗಳಲ್ಲಿ ಗುಣಮಟ್ಟದ ಶಿಕ್ಷಣ ನೀಡುವಲ್ಲಿ ಶಿಕ್ಷಕರ ಪಾತ್ರ ಅತಿ ಮುಖ್ಯವಾಗಿದೆ ಎಂದು ಶಾಲಾ ಶಿಕ್ಷಣ ಇಲಾಖೆ ಉಪನಿರ್ದೇಶಕಿ ಅಲ್ಮಾಸ್ ಪರ್ವೀನ್ ತಾಜ್ ತಿಳಿಸಿದರು. ಸೆಂಟ್ಆನ್ಸ್ ಶಾಲೆಯ ಎಸ್ಸೆಸ್ಸೆಲ್ಸಿ ಮೌಲ್ಯಮಾಪನ ಕೇಂದ್ರದಲ್ಲಿ ವಿಜ್ಞಾನ ಶಿಕ್ಷಕರ ಸಂಘದಿAದ ನಡೆದ ಅಂಬೇಡ್ಕರ್ ಅವರ 135ನೇ ಜಯಂತಿ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಈ ಸಾಲಿನಲ್ಲಿ ನಿವೃತ್ತರಾಗುತ್ತಿರುವ ಶಿಕ್ಷಕರನ್ನು ಸನ್ಮಾನಿಸಿ, ಅವರೂ ಸನ್ಮಾನ ಸ್ವೀಕರಿಸಿ ಮಾತನಾಡುತ್ತಿದ್ದರು. ಅಂಬೇಡ್ಕರ್ ಅವರ […]
ಶ್ರೀನಿವಾಸಪುರ : ಶ್ರೀನಿವಾಸಪುರ ತಾಲ್ಲೂಕು ಕಾರ್ಯನಿರತ ಪತ್ರಕರ್ತರ ಸಂಘದ ವತಿಯಿಂದ ಪಟ್ಟಣದ ಪತ್ರಕರ್ತರ ಭವನದಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ಅವರ 136ನೇ ಜಯಂತಿಯನ್ನು ಭಕ್ತಿಭಾವದಿಂದ ಆಚರಿಸಲಾಯಿತು. ಕಾರ್ಯಕ್ರಮಕ್ಕೆ ಸಂಘದ ಅಧ್ಯಕ್ಷ ಸಿ. ನಾಗರಾಜ ಅವರು ಅಧ್ಯಕ್ಷತೆ ವಹಿಸಿದರು. ಹಿರಿಯ ಪತ್ರಕರ್ತರಾದ ಆರ್. ಚೌಡರೆಡ್ಡಿ, ಕೆ.ಎಂ. ಚೌಡಪ್ಪ, ಶಬ್ಬೀರ್ ಅಹ್ಮದ್ ಹಾಗೂ ಆರ್. ಜಿ. ನರಸಿಂಹಯ್ಯ ಸೇರಿದಂತೆ ಹಲವರು ಉಪಸ್ಥಿತರಿದ್ದರು. ಈ ಸಂದರ್ಭದಲ್ಲಿ ಆರ್. ಜಿ. ನರಸಿಂಹಯ್ಯ ಅವರು ಸಂವಿಧಾನದ ಪೀಠವನ್ನು ಓದಿ, ಎಲ್ಲರಿಗೂ ಪ್ರತಿಜ್ಞೆ ಮಾಡಿಸಿದರು. ಸಂವಿಧಾನದ […]
ಶ್ರೀನಿವಾಸಪುರ, ಏಪ್ರಿಲ್ 14: ಡಾ. ಬಿ.ಆರ್. ಅಂಬೇಡ್ಕರ್ ಅವರು ಕೇವಲ ಒಂದು ಸಮಾಜಕ್ಕೆ ಸೀಮಿತ ವ್ಯಕ್ತಿಯಲ್ಲ; ಎಲ್ಲಾ ಸಮುದಾಯಗಳಿಗೆ ಸಂವಿಧಾನದ ಮೂಲಕ ನ್ಯಾಯ ಒದಗಿಸಿದ ಮಹಾನ್ ವ್ಯಕ್ತಿ ಎಂದು ಶಾಸಕ ಜಿ.ಕೆ. ವೆಂಕಟಶಿವಾರೆಡ್ಡಿ ಹೇಳಿದರು. ಪಟ್ಟಣದ ತಹಶೀಲ್ದಾರ್ ಕಚೇರಿಯಲ್ಲಿ ಮಂಗಳವಾರ ನಡೆದ 135ನೇ ಡಾ. ಬಿ.ಆರ್. ಅಂಬೇಡ್ಕರ್ ಜಯಂತಿ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು. ಅಂಬೇಡ್ಕರ್ ಅವರ ಆದರ್ಶಗಳನ್ನು ಯಾವುದೇ ಸರ್ಕಾರವಾಗಲಿ ಪಾಲಿಸಬೇಕು. ಸಮಾಜದ ಹಿಂದುಳಿದ ವರ್ಗಗಳಿಗೆ ನ್ಯಾಯ ದೊರಕಿಸುವುದು ಅವರ ಪ್ರಮುಖ ಧ್ಯೇಯವಾಗಿತ್ತು ಎಂದು ಹೇಳಿದರು. […]
ಕೋಲಾರ:- ಪ್ರಸಕ್ತ ಸಾಲಿನ ಪ್ರತಿಷ್ಠಿತ ಅಂಬೇಡ್ಕರ್ ಪ್ರಶಸ್ತಿಗೆ ಕೋಲಾರ ಜಿಲ್ಲೆಯ ಹಿರಿಯ ದಲಿತ ಹೋರಾಟಗಾರ, ಪತ್ರಕರ್ತ, ಸಾಮಾಜಿಕ ಚಿಂತಕ, ಸಿ.ಎಂ.ಮುನಿಯಪ್ಪ ಆಯ್ಕೆಯಾಗಿರುವ ಹಿನ್ನಲೆಯಲ್ಲಿ ಅವರನ್ನು ಡಿಐಜಿಪಿ ಡಿ.ದೇವರಾಜ್ ಮತ್ತು ಹಲವು ದಲಿತ ಮುಖಂಡರು ಸನ್ಮಾನಿಸಿದರು.ರಾಜ್ಯ ಸರಕಾರವು ಕೊಡ ಮಾಡುವ ಈ ಪ್ರಶಸ್ತಿಗೆ ಸಿ.ಎಂ.ಮುನಿಯಪ್ಪ ಸೇರಿದಂತೆ ಐದು ಮಂದಿ ಸಾಧಕರನ್ನು ಆಯ್ಕೆ ಮಾಡಲಾಗಿದೆ. ಪ್ರಶಸ್ತಿಯು 5 ಲಕ್ಷ ರೂಪಾಯಿ ನಗದು ಹಾಗೂ 20 ಗ್ರಾಂ ಚಿನ್ನದ ಪದಕವನ್ನು ಒಳಗೊಂಡಿದೆ, ಇಂತಹ ಗೌರವಕ್ಕೆ ಕೋಲಾರದ ಸಿ.ಎಂ.ಮುನಿಯಪ್ಪ ಅವರ ಆಯ್ಕೆ ಸಂತಸ […]
ಕೋಲಾರ; ಲಘು ಪೋಷಕಾಂಶಗಳ ಮಿಶ್ರಣವಾದ ಮಾವು ಸ್ಪೇಷಲ್ನ್ನು ಬಳಸುವುದರಿಂದ ಉತ್ತಮ ಗುಣಮಟ್ಟದ ಇಳುವರಿ ಪಡೆಯಬಹುದು ಎಂದು ತೋಟಗಾರಿಕಾ ಮಹಾವಿದ್ಯಾಲಯ ಕೋಲಾರದ ಹಣ್ಣು ವಿಜ್ಞಾನ ವಿಭಾಗದ ಸಹಾಯಕ ಪ್ರಾಧ್ಯಾಪಕರಾದ ಡಾ. ನಾಗರಾಜ್ ಕೆ. ಎಸ್. ರವರು ತಿಳಿಸಿದರು.ಕೋಲಾರದ ತೋಟಗಾರಿಕಾ ಮಹಾವಿದ್ಯಾಲಯದ ವತಿಯಿಂದ ಅಂತಿಮ ವರ್ಷದ ವಿದ್ಯಾರ್ಥಿಗಳಿಗಾಗಿ ತಾಲ್ಲೂಕಿನ ಉಪ್ಪುಕುಂಟೆ ಗ್ರಾಮದಲ್ಲಿ ಆಯೋಜಿಸಲಾಗಿರುವ ಗ್ರಾಮೀಣ ತೋಟಗಾರಿಕಾ ಕಾರ್ಯಾನುಭವ ಶಿಬಿರದಲ್ಲಿ ಹಮ್ಮಿಕೊಳ್ಳಲಾದ ‘ಮಾವಿನ ಬೆಳೆಯಲ್ಲಿ ಮಾವು ಸ್ಪೇಷಲ್ ಬಳಕೆ ಪದ್ದತಿ ಪ್ರಾತ್ಯಕ್ಷಿಕೆ’ ಕಾರ್ಯಕ್ರಮವನ್ನು ಉದ್ದೇಶಿಸಿ ಅವರು ಮಾತನಾಡಿದರು.ಮಾವು ಸ್ಪೇಷಲ್ ಎಂಬುದು ಲಘು […]
ಕೋಲಾರ: 2026-27ನೇ ಶೈಕ್ಷಣಿಕ ಸಾಲಿಗೆ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯಡಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ಡಾ. ಎ.ಪಿ.ಜೆ ಅಬ್ದುಲ್ ಕಲಾಂ ವಸತಿ ಶಾಲೆಗಳು ಹಾಗೂ ಅಲ್ಪಸಂಖ್ಯಾತರ ಮೊರಾರ್ಜಿ ದೇಸಾಯಿ ವಸತಿ ಶಾಲೆಗಳ 6ನೇ ತರಗತಿ ಪ್ರವೇಶಕ್ಕಾಗಿ ಸಾಮಾನ್ಯ ಪ್ರವೇಶ ಪರೀಕ್ಷೆ ಇಂದು (ಏಪ್ರಿಲ್ 12) ಜಿಲ್ಲೆಯಲ್ಲಿ ನಡೆಯುತ್ತಿದೆ. ಈ ಸಂಬಂಧ ಅಲ್ಪಸಂಖ್ಯಾತರ ನಿರ್ದೇಶನಾಲಯ, ಬೆಂಗಳೂರು ನೀಡಿದ ನಿರ್ದೇಶನದಂತೆ, ಸೇವಾಸಿಂದು ಪೋರ್ಟಲ್ ಮೂಲಕ ಅರ್ಜಿಗಳನ್ನು ಆಹ್ವಾನಿಸಲಾಗಿತ್ತು. ಜಿಲ್ಲೆಯಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ವಿದ್ಯಾರ್ಥಿಗಳು ಅರ್ಜಿ ಸಲ್ಲಿಸಿರುವ ಹಿನ್ನೆಲೆ, ಅರ್ಹ ಅಭ್ಯರ್ಥಿಗಳ ಆಯ್ಕೆಗಾಗಿ ಸಾಮಾನ್ಯ ಪ್ರವೇಶ […]
ಶ್ರೀನಿವಾಸಪುರ : ಗ್ರಾಮ ಪಂಚಾಯಿತಿಗಳ ವ್ಯಾಪ್ತಿಯಲ್ಲಿ ಉಂಟಾಗುವ ಕುಡಿಯುವ ನೀರಿನ ಸಮಸ್ಯೆಗಳನ್ನು ಪರಿಹರಿಸಲು ಅನುದಾನದ ಕೊರತೆ ಇಲ್ಲ. ತಕ್ಷಣ ಕ್ರಿಯಾಯೋಜನೆಗಳನ್ನು ಸಿದ್ಧಪಡಿಸಿ, ತಾಲ್ಲೂಕು ಪಂಚಾಯಿತಿ ಇಒರಿಂದ ಅನುಮೋದನೆ ಪಡೆದು ನೀರು ಸರಬರಾಜು ವ್ಯವಸ್ಥೆಯನ್ನು ಸಮರ್ಪಕವಾಗಿ ಜಾರಿಗೊಳಿಸಬೇಕು ಎಂದು ಜಿಲ್ಲಾ ಪಂಚಾಯಿತಿ ಸಿಇಒ ಡಾ. ಪ್ರವೀಣ್ ಪಿ. ಬಾಗೇವಾಡಿ ಅಧಿಕಾರಿಗಳಿಗೆ ಸೂಚಿಸಿದರು. ತಾಲ್ಲೂಕಿನ ಹೊಗಳಗೆರೆ ಸಸ್ಯ ಕ್ಷೇತ್ರ ಸಭಾಂಗಣದಲ್ಲಿ ಶುಕ್ರವಾರ ನಡೆದ ಶ್ರೀನಿವಾಸಪುರ ಹಾಗೂ ಮುಳಬಾಗಿಲು ತಾಲ್ಲೂಕಿನ ಗ್ರಾಮಪಂಚಾಯಿತಿ ಆಡಳಿತಾಧಿಕಾರಿಗಳು ಮತ್ತು ಪಂಚಾಯತ್ ಅಭಿವೃದ್ಧಿ ಅಧಿಕಾರಿಗಳ ಸಭೆಯನ್ನು ಉದ್ಘಾಟಿಸಿ […]
ಶ್ರೀನಿವಾಸಪುರ : ಮನುಷ್ಯನು ದಿನನಿತ್ಯದ ಜಂಜಾಟಗಳಲ್ಲಿ ತೊಡಗಿರುತ್ತಾನೆ . ಅವನಿಗೆ ಮಾನಸಿಕವಾಗಿ ಒಂದಿಲ್ಲದೊಂದು ಸಮಸ್ಯೆಗಳು ಇದ್ದೇ ಇರುತ್ತದೆ. ಎಷ್ಟೇ ಮಾನಸಿಕ ಒತ್ತಡಗಳು ಇದ್ದರೂ ಸಹ ದೇವಾಲಯಗಳಿಗೆ ಬಂದು ಹೋದರೆ ಮನಸ್ಸು ಸಂತಸಗೊಳ್ಳುತ್ತದೆ . ಮಾನಸಿಕವಾಗಿ ಸದೃಡವಾಗಿ ಇರಬಹುದು ರಾಜ್ಯ ಆಹಾರ ಸಚಿವ ಕೆ.ಎಚ್.ಮುನಿಯಪ್ಪ ಎಂದರು. ತಾಲೂಕಿನ ಕೊತ್ತಪೇಟ ಗ್ರಾಮಕ್ಕೆ ಬುಧವಾರ ರಾಜ್ಯ ಆಹಾರ ಸಚಿವ ಕೆ.ಎಚ್.ಮುನಿಯಪ್ಪ ಗ್ರಾಮದ ನೂತನವಾಗಿ ನಿರ್ಮಿಸಲಾದ ಗಂಗಮ್ಮ ದೇವಿಯ ದೇವಾಲಯಕ್ಕೆ ಬೇಟಿ ನೀಡಿ ದೇವರ ದರ್ಶನ ಪಡೆದು ಮಾತನಾಡಿದರು. ದೇವಸ್ಥಾನಕ್ಕೆ ಸಂಬಂದಿಸಿದಂತೆ ಸಮುದಾಯಭವನವನ್ನು […]

