ಕೋಲಾರ;- ಅಧಿಕಾರಿಗಳ ನಿರ್ಲಕ್ಷದಿಂದಾಗಿ ಯುಗಾದಿಗೆ ಬಡವರ ಮನೆಯಲ್ಲಿ ಯುಗಾದಿ ಹಬ್ಬದಂದು ಹಸಿವು ನೀಗಿಸಿ ಸಂಭ್ರಮಕ್ಕೆ ಕಾರಣವಾಗಬೇಕಾಗಿದ್ದ ಲಕ್ಷಾಂತರ ಮೌಲ್ಯದ ಅಕ್ಕಿ, ಬೇಳೆ, ಬೆಲ್ಲ ಮಳೆಯಿಂದಾಗಿ ನೀರುಪಾಲದ ಘಟನೆ ಗುರುವಾರ ನಡೆದಿದೆ.ಕಳೆದ ಮಾ.9 ರಂದು ಜಿಲ್ಲಾಧಿಕಾರಿಗಳ ಸೂಚನೆ ಮೇರೆಗೆ ಆಹಾರ ಇಲಾಖೆ ಅಧಿಕಾರಿಗಳು ಧಾಳಿ ಹಡೆಸಿ ಅಕ್ರಮ ದಾಸ್ತಾನು ಹಾಗೂ ಚುನಾವಣೆ ಹಿನ್ನೆಲೆ ವಶಕ್ಕೆ ಪಡೆದಿದ್ದ ಆಹಾರ ಧಾನ್ಯಗಳು ಇಂದು ದಿಢೀರನೆ ಸುರಿದ ಭಾರಿ ಆಲಿಕಲ್ಲು ಮಳೆಗೆ ನೀರುಪಾಲಾಗಿದ್ದು, ಇದಕ್ಕೆ ಅಧಿಕಾರಿಗಳೇ ನೇರ ಹೊಣೆ ಎಂದು ಕೋಲಾರ,ಚಿಕ್ಕಬಳ್ಳಾಫುರ ಡಿಸಿಸಿ […]
ಶ್ರೀನಿವಾಸಪುರ: ಮಿಸ್ಟರ್ ರಮೇಶ್ ಕುಮಾರ್ 4 ಬಾರಿ ಶಾಸಕರಾಗಿ 2 ಬಾರಿ ಸ್ವೀಕರ್ ಆಗಿ ಮಂತ್ರಿಯಾಗಿ ಈ ಪಟ್ಟಣಕ್ಕೆ ನಿಮ್ಮ ಕೊಡುಗೆ ಏನೆಂದು ಪ್ರಶ್ನಿಸಿದ ಮಾಜಿ ಶಾಸಕ ಜಿ.ಕೆ ವೆಂಕಟಶಿವಾರೆಡ್ಡಿ.ಪಟ್ಟಣದ ಅಂಬೇಡ್ಕರ್ ಪಾಳ್ಯ, ಸಂತೆ ಮೈದಾನ, ಹಳೇಪೇಟೆ, ಶಂಕರಮಠ, ರಾಮಕ್ರಷ್ಣಾರಸ್ತೆ, ಕಟ್ಟೆಕೆಳಗಿನಪಾಳ್ಯ, ಮಾರುತಿ ನಗರ, ವಾರ್ಡಗಳಲ್ಲಿ ಅದ್ದೂರಿಯಾಗಿ ಪಟಾಕಿಗಳನ್ನು ಸಿಡಿಸಿ ಪುಷ್ಪಮಾಲೆಗಳನ್ನು ಹಾಕಿ ಜೈ ಕಾರಗಳನ್ನು ಕೂಗುತ್ತಾ ಬರಮಾಡಿಕೊಂಡು ಬೂತ್ ಮಟ್ಟದ ಕಾರ್ಯಕರ್ತರ ಸಭೆಯನ್ನು ಉದ್ದೇಶಿಸಿ ಮಾತನಾಡಿದ ವೆಂಕಟಶಿವಾರೆಡ್ಡಿ, ಈ ಪಟ್ಟಣದ ಅಭಿವೃದ್ದಿಗೆ ನಿಮ್ಮ ಕೊಡುಗೆ ಏನೂ […]
ಕೋಲಾರ,ಮಾ.16: ಕಾಳ್ಗಿಚ್ಚು ನಿಯಂತ್ರಣಕ್ಕೆ ವಿಶೇಷ ತಂಡ ರಚನೆ ಮಾಡುವ ಜೊತೆಗೆ ಕರಪತ್ರದ ಮುಖಾಂತರ ಜನ ಜಾಗೃತಿ ಮೂಡಿಸಿ ಕಾಳ್ಗಿಚ್ಚು ಹಂಚುವ ಕಿಡಿಗೇಡಿಗಳ ವಿರುದ್ದ ಗೂಂಡಾ ಕಾಯ್ದೆಯಲ್ಲಿ ಕೇಸು ದಾಖಲಿಸುವಂತೆ ರೈತ ಸಂಘದಿಂದ ಉಪ ಅರಣ್ಯ ಸಂರಕ್ಷಣಾಧಿಕಾರಿ ಏಡುಕೊಂಡಲಯ್ಯರವರಿಗೆ ಮನವಿ ನೀಡಿ ಅಗ್ರಹಿಸಲಾಯಿತು.ಪ್ರತಿ ವರ್ಷ ಬೇಸಿಗೆ ಬಂತೆಂದರೆ ಅರಣ್ಯಕ್ಕೆ ಬೆಂಕಿಯ ಅಪಾಯವೂ ಬರುತ್ತದೆ ಎಂಬ ಮುಂಜಾಗ್ರತೆ ಇದ್ದರೂ ಸರ್ಕಾರ ಮತ್ತು ಅರಣ್ಯ ಇಲಾಖೆ ಯಾವುದೇ ಮುಂಜಾಗ್ರತ ಕ್ರಮ ವಹಿಸದೆ ಮೂಕ ಪ್ರಾಣಿಗಳ ಜೀವ ಜೊತೆ ಚೆಲ್ಲಾಟ ಆಡುತ್ತಿದ್ದಾರೆಂದು ರೈತ […]
ಶ್ರೀನಿವಾಸಪುರ 2 : ಕಸಬಾ ರೇಷ್ಮೆ ಸಹಕಾರ ಸಂಘವು ಅದ್ಬುತವಾಗಿ ಕಾರ್ಯನಿರ್ವಹಿಸುತ್ತಿರುವ ಹಿನ್ನಲೆಯಲ್ಲಿ ಇಂದು ನೂತನ ಗೋದಾಮು, ಮಳಿಗೆಗಳು ನಿರ್ಮಿಸಿಕೊಳ್ಳಲು ಸಾಧ್ಯವಾಯಿತು ಎಂದು ಶಾಸಕ ಕೆ.ಆರ್.ರಮೇಶ್‍ಕುಮಾರ್ ಹೇಳಿದರು.ಪಟ್ಟಣದ ಕಸಬಾ ರೇಷ್ಮೆ ಬೆಳೆಗಾರರ ಹಾಗು ರೈತ ಸೇವ ಸಹಕಾರ ಸಂಘದ ನೂತನ ಗೋದಾಮು ಮತ್ತು ಮಳಿಗೆಗಳನ್ನು ಬುಧವಾರ ಉದ್ಗಾಟಿಸಿ ಮಾತನಾಡಿದರು.70ಲಕ್ಷ ಮೊತ್ತದಲ್ಲಿ ಎಂಎಸ್‍ಸಿ ಯೋಜನೆ ಅಡಿಯಲ್ಲಿ ನಿರ್ಮಿಸಲಾದ ಗೋದಾಮು, ಮಳಿಗಗೆಳನ್ನು ಸದ್ಭಳಕೆ ಮಾಡಿಕೊಳ್ಳುವಂತೆ ಸಲಹೆ ನೀಡಿ, ಈ ಮಳಿಗೆಗಳು ಸಾರ್ವಜನಿಕವಾಗಿ ಉಪಯೋವಾಗುವಂತೆ ಬಳಸಿಕೊಂಡು ಆರ್ಥಿಕವಾಗಿ ಸಭಲರಾಗುವಂತೆ ಕಿವಿಮಾತು ಹೇಳಿದರು.ಕಸಬಾ […]
ಶ್ರೀನಿವಾಸಪುರ: ಸಂವಿಧಾನದ ಆಶಯದಂತೆ ನಡೆದುಕೊಂಡಾಗ ಸಾಮಾಜಿಕ ಬದಲಾವಣೆ ಸಾಧ್ಯವಾಗುತ್ತದೆ ಎಂದು ಶಾಸಕ ಕೆ.ಆರ್.ರಮೇಶ್ ಕುಮಾರ್ ಹೇಳಿದರು.ತಾಲ್ಲೂಕಿನ ದೊಡ್ಡಬಂದಾರ್ಲಹಳ್ಳಿಯಲ್ಲಿ ಮಂಗಳವಾರ, ಒಟ್ಟು ರೂ.40 ಲಕ್ಷ ವೆಚ್ಚದಲ್ಲಿ ನಿರ್ಮಿಸಲಾಗಿರುವ ನೂತನ ಅಂಬೇಡ್ಕರ್ ಸಮುದಾಯ ಭವನ, ಅಂಗನವಾಡಿ ಕಟ್ಟಡ ಹಾಗೂ ಶಾಲಾ ಕೊಠಡಿ ಉದ್ಘಾಟಿಸಿ ಮಾತನಾಡಿದ ಅವರು, ಗ್ರಾಮಸ್ಥರು ಸೌಲಭ್ಯ ಸದುಪಯೋಗಪಡಿಸಿಕೊಳ್ಳಬೇಕು ಎಂದು ಹೇಳಿದರು.ತಾಲ್ಲೂಕಿನ ಕೆರೆಗಳಿಗೆ ಕೆಸಿ ವ್ಯಾಲಿ ನೀರು ಹರಿಸಲಾಗುತ್ತಿದೆ. ಇನ್ನೊಂದು ವರ್ಷದಲ್ಲಿ ಎತ್ತಿನ ಹೋಳೆ ನೀರು ಹರಿದುಬರಲಿದೆ. ಆಗ ನೀರಿನ ಸಮಸ್ಯೆ ನೀಗುತ್ತದೆ. ಜಲ್ ಜೀವನ್ ಮಿಷನ್ ಯೋಜನೆಯಡಿ […]
ಶ್ರೀನಿವಾಸಪುರ: ಮತದಾರರು ಬರಲಿರುವ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿಗಳಿಗೆ ಮತ ನಿಡುವುದರ ಮೂಲಕ ಸ್ಥಿರ ಸರ್ಕಾರ ರಚಿಸಲು ಸಹಕರಿಸಬೇಕು ಎಂದು ಕಂದಾಯ ಸಚಿವ ಆರ್.ಅಶೋಕ್ ಹೇಳಿದರು.ಪಟ್ಟಣದ ಮುಳಬಾಗಿಲು ವೃತ್ತದಿಂದ ಎಂಜಿ ರಸ್ತೆಯಲ್ಲಿ ಮಂಗಳವಾರ ಏರ್ಪಡಿಸಿದ್ದ ರೋಡ್ ಷೋನಲ್ಲಿ ಭಾಗವಹಿಸಿ ಮಾತನಾಡಿದ ಅವರು, ರಾಜ್ಯದ ಮತದಾರರು ಸುಭದ್ರ ಸರ್ಕಾರ ಬಯಸುತ್ತಿದ್ದಾರೆ. ಅದಕ್ಕೆ ಪೂರಕವಾಗಿ ಬಿಜೆಪಿ ಅವರ ಮೊದಲ ಆಯ್ಕೆಯಾಗಿದೆ ಎಂದು ಹೇಳಿದರು.ರಾಜ್ಯದಲ್ಲಿ ಕಾಂಗ್ರೆಸ್ 70, ಜೆಡಿಎಸ್ 20 ಸ್ಥಾನ ಗೆದ್ದರೆ ಹೆಚ್ಚು. ಇನ್ನು ಮಾಜಿ ಮುಖ್ಯ ಮಂತ್ರಿ ಸಿದ್ದರಾಮಯ್ಯ […]
ಕೋಲಾರ:- ಎಸ್ಸೆಸ್ಸೆಲ್ಸಿ ನಿಮ್ಮ ಜೀವನದ ಪ್ರಮುಖ ಘಟ್ಟವಾಗಿದ್ದು, ಪರೀಕ್ಷೆಗೆ ಇನ್ನೂ ಕೇವಲ 15 ದಿನಗಳು ಮಾತ್ರವಿದೆ, ಪ್ರತಿಕ್ಷಣವೂ ಉಪಯುಕ್ತವಾಗಿದೆ, ಸಮಯ ವ್ಯರ್ಥ ಮಾಡದೇ ಶ್ರದ್ಧೆಯಿಂದ ಅಭ್ಯಾಸ ಮಾಡಿದರೆ ಸಾಧನೆ ಸುಲಭ ಎಂದು ಜಿಲ್ಲಾ ಶಿಕ್ಷಣ ತರಬೇತಿ ಮತ್ತು ಸಂಶೋಧನಾ ಸಂಸ್ಥೆ ಹಿರಿಯ ಉಪನ್ಯಾಸಕ ಬಾಲಾಜಿ ಕರೆ ನೀಡಿದರು.ಮಂಗಳವಾರ ತಾಲ್ಲೂಕಿನ ಅರಾಭಿಕೊತ್ತನೂರು ಸರ್ಕಾರಿ ಪ್ರೌಢಶಾಲೆಯಲ್ಲಿ ಎಸ್ಸೆಸ್ಸೆಲ್ಸಿ ಮಕ್ಕಳಿಗೆ ಪರೀಕ್ಷಾ ಪೂರ್ವ ಮಾರ್ಗದರ್ಶನ ನೀಡಿದ ಅವರು, ಪ್ರತಿ ಕ್ಷಣವೂ ಅಮೂಲ್ಯವಾಗಿದ್ದು, ಓದಲು ಕಿವಿಮಾತು ಹೇಳಿದರು.ಹೊರಗಿನ ತಿಂಡಿ ತಿನ್ನದೇ ಆರೋಗ್ಯ ಕಾಪಾಡಿಕೊಳ್ಳುವ […]
ಶ್ರೀನಿವಾಸಪುರ: ಎಲ್ಲ ವರ್ಗದ ಜನರ ಅಭ್ಯುದಯಕ್ಕಾಗಿ ಮತದಾರರು ಜೆಡಿಎಸ್ ಬೆಂಬಲಿಸಬೇಕು. ಮಾಜಿ ಮುಖ್ಯ ಮಂತ್ರಿ ಎಚ್.ಡಿ.ಕುಮಾರಸ್ವಾಮಿ ಅವರ ಕೈ ಬಲಪಡಿಸಬೇಕು ಎಂದು ಮಾಜಿ ಶಾಸಕ ಹಾಗೂ ಜಿಲ್ಲಾ ಜೆಡಿಎಸ್ ಅಧ್ಯಕ್ಷ ಜಿ.ಕೆ.ವೆಂಕಟಶಿವಾರೆಡ್ಡಿ ಹೇಳಿದರು.ಪಟ್ಟಣದ ಜಾಕೀರ್ ಹುಸೇನ್ ಮೊಹಲ್ಲಾದಲ್ಲಿ ಭಾನುವಾರ ಏರ್ಪಡಿಸಿದ್ದ ಜೆಡಿಎಸ್ ಕಾರ್ಯಕರ್ತರ ಸಮಾವೇಶದಲ್ಲಿ ಮಾತನಾಡಿದ ಅವರು, ಜೆಡಿಎಸ್, ಬಿಜೆಪಿ ಬಿ ಟೀಂ ಎಂದು ಕಾಂಗ್ರೆಸ್ ಮುಖಂಡರು ಹೇಳುವುದರ ಮೂಲಕ ಅಲ್ಪ ಸಂಖ್ಯಾತರ ಮತ ತಪ್ಪಿಸುವ ಪ್ರಯತ್ನ ಮಾಡುತ್ತಿದ್ದಾರೆ. ಆದರೆ ಅದು ಸತ್ಯಕ್ಕೆ ದೂರವಾದ ಸಂಗತಿ ಎಂಬುದು […]
ಶ್ರೀನಿವಾಸಪುರ: ಪಟ್ಟಣದಲ್ಲಿ ಭಾನುವಾರ ಲೋಕಕಲ್ಯಾಣಾರ್ಥ ಶ್ರೀನಿವಾಸ ಕಲ್ಯಾಣ ಮಹೋತ್ಸವ ಏರ್ಪಡಿಸಲಾಗಿತ್ತು. ಅದರ ಅಂಗವಾಗಿ ಹಲವಾರು ಧಾರ್ಮಿಕ ಹಾಗೂ ಸಾಂಸ್ಕøತಿಕ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು.ಪಟ್ಟಣದ ಕನಕ ಸಮುದಾಯ ಭವನದ ಸಮೀಪ ವಿಶೇಷವಾಗಿ ನಿರ್ಮಿಸಲಾಗಿದ್ದ ವಿಶಾಲವಾದ ಪೆಂಡಾಲ್ ಕೆಳಗಿನ ಭವ್ಯ ವೇದಿಕೆಯಲ್ಲಿ, ತಿರುಪತಿಯಿಂದ ತರಲಾಗಿದ್ದ ದೇವರ ವಿಗ್ರಹಗಳಿಗೆ ಪುಷ್ಪಾಲಂಕಾರ ಮಾಡಿ ಕಲ್ಯಾಣೋತ್ಸವ ನೆರವೇರಿಸಲಾಯಿತು.ಪಟ್ಟಣ ಹಾಗೂ ತಾಲ್ಲೂಕಿನ ವಿವಿಧೆಡೆಗಳಿಂದ ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸಿದ್ದ ಜನ ಕಲ್ಯಾಣ ಮಹೋತ್ಸವ ಕಣ್ತುಂಬಿಕೊಂಡರು. ಕಲ್ಯಾಣೋತ್ಸವದ ನಡುವೆ ಭಕ್ತಾದಿಗಳಿಂದ ಗೋವಿಂದ ನಾಮ ಸ್ಮರಣೆ ಮುಗಿಲು ಮುಟ್ಟಿತ್ತು. ತಿರುಪತಿಯಿಂದ ಆಗಮಿಸಿದ್ದ […]