ಶ್ರೀನಿವಾಸಪುರ: ಚುನಾವಣೆಯಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬರುತ್ತದೆ. ಸಿದ್ದರಾಮಯ್ಯ ಮತ್ತೆ ಮುಖ್ಯ ಮಂತ್ರಿಯಾಗುತ್ತಾರೆ. ಆಗ ಸ್ತ್ರೀಶಕ್ರಿ ಸಂಘದ ಸದಸ್ಯರಿಗೆ ಡಿಸಿಸಿ ಬ್ಯಾಂಕ್ ನೀಡುವ ಬಡ್ಡಿರಹಿತ ಸಾಲದ ಮೊತ್ತ ಹೆಚ್ಚಿಸಲಾಗುವುದು ಎಂದು ಶಾಸಕ ಕೆ.ಆರ್.ರಮೇಶ್ ಕುಮಾರ್ ಹೇಳಿದರು.ತಾಲ್ಲೂಕಿನ ಮುದಿಮಡಗು ಗ್ರಾಮದಲ್ಲಿ ಸ್ಥಳೀಯ ವ್ಯವಸಾಯ ಸೇವಾ ಸಹಕಾರ ಸಂಘದ ವತಿಯಿಂದ ಭಾನುವಾರ ಏರ್ಪಡಿಸಿದ್ದ ಸಾಲ ವಿತರಣಾ ಸಮಾರಂಭದಲ್ಲಿ 65 ಸ್ತ್ರೀಶಕ್ತಿ ಸಂಘಗಳಿಗೆ ರೂ.3.25 ಕೋಟಿ ಹಾಗೂ 99 ರೈತರಿಗೆ ರೂ.99.65 ಲಕ್ಷ ಬಡ್ಡಿರಹಿತ ಸಾಲ ವಿತರಿಸಿ ಮಾತನಾಡಿದರು.ಸ್ತ್ರೀಶಕ್ತಿ ಸಂಘದ ಸದಸ್ಯರಿಗೆ ತಲಾ […]
ಶ್ರೀನಿವಾಸಪುರ: ಮಾವು ಬೆಳೆಗಾರರಿಗೆ, ಸರ್ಕಾರ ಹಾಗೂ ಫಸಲ್ ಬಿಮಾ ಯೋಜನೆ ಅನುಷ್ಠಾನ ಕಂಪನಿಯಿಂದ ಪರಿಹಾರ ಕೊಡಿಸಲು ಅಗತ್ಯ ಕ್ರಮ ಕೈಗೊಳ್ಳಲಾಗುವುದು ಎಂದು ಜಿಲ್ಲಾಧಿಕಾರಿ ವೆಂಕಟ್ ರಾಜಾ ಹೇಳಿದರು.ಪಟ್ಟಣದ ತಾಲ್ಲೂಕು ಕಚೇರಿ ಸಭಾಂಗಣದಲ್ಲಿ ಗುರುವಾರ ಏರ್ಪಡಿಸಿದ್ದ ಜಿಲ್ಲಾ ಮಾವು ಬೆಳೆಗಾರರ ಸಂಯುಕ್ತ ಹೋರಾಟ ಸಮಿತಿ ಪದಾಧಿಕಾರಿಗಳು ಹಾಗೂ ಬೆಳೆಗಾರರ ಸಭೆಯಲ್ಲಿ ಮಾತನಾಡಿದ ಅವರು, ಜಿಲ್ಲಾ ಆಡಳಿತ ರೈತರ ಹಿತರಕ್ಷಣೆಗೆ ಪೂರಕವಾಗಿ ಕೆಲಸ ಮಾಡುತ್ತಿದೆ. ಆದರೆ ಮಾಹಿತಿ ಕೊರತೆ ಹಾಗೂ ತಪ್ಪು ಸಂವಹನದ ಪರಿಣಾಮವಾಗಿ ಅದು ರೈತರ ಗಮನಕ್ಕೆ ಬರುತ್ತಿಲ್ಲ […]
ಶ್ರೀನಿವಾಸಪುರ: ಅವರೆ ಕಾಯಿ ವಹಿವಾಟು ಎಪಿಎಂಸಿ ಮಾರುಕಟ್ಟೆಗೆ ಸ್ಥಳಾಂತರಿಸುವಂತೆ ಆಗ್ರಹಿಸಿ ತಾಲ್ಲೂಕು ಕರ್ನಾಟಕ ರಕ್ಷಣಾ ವೇದಿಕೆ ಯುವಸೇನೆ ಕಾರ್ಯಕರ್ತರು ಪುರಸಭೆ ಕಚೇರಿ ಮುಂದೆ ಶನಿವಾರ ಪ್ರತಿಭಟನೆ ನಡೆಸಿದರು.ಈ ಸಂದರ್ಭದಲ್ಲಿ ವೇದಿಕೆ ಯುವಸೇನೆ ಅಧ್ಯಕ್ಷ ಶ್ರೀನಾಥ್ ಮಾತನಾಡಿ, ಪಟ್ಟಣದ ಏಕೈಕ ಮುಖ್ಯ ರಸ್ತೆಯಾದ ಎಂ.ಜಿ ರಸ್ತೆಯ ಉದ್ದಗಲಕ್ಕೂ ಪ್ರತಿ ದಿನ ಅವರೆ ಕಾಯಿ ವಹಿವಾಟು ನಡೆಸುವುದರಿಂದ, ವಾಹನ ಸಂಚಾರಕ್ಕೆ ಅಡ್ಡಿ ಉಂಟಾಗಿದೆ. ನಾಗರಿಕರ ಓಡಾಟಕ್ಕೂ ತೊಂದರೆಯಾಗಿದೆ. ವಾಹನ ಅಪಘಾತಗಳು ಸಂಭವಿಸುವುದು ಸಾಮಾನ್ಯವಾಗಿದೆ ಎಂದು ಹೇಳಿದರು.ಪಟ್ಟಣದ ಚಿಂತಾಮಣಿ ಸರ್ಕ್‍ಲ್‍ನಿಂದ ಇಂದ್ರಾ […]
ಶ್ರೀನಿವಾಸಪುರ: ಕಾರ್ಯಕರ್ತರು ಸೌಲಭ್ಯಗಳು ಅರ್ಹ ಫಲಾನುಭವಿಗಳಿಗೆ ತಲುಪುವಂತೆ ನೋಡಿಕೊಳ್ಳಬೇಕು ಎಂದು ನವ ಕರ್ನಾಟಕ ಸ್ವಾಭಿಮಾನಿ ವೇದಿಕೆ ರಾಜ್ಯ ಘಟಕದ ಅಧ್ಯಕ್ಷ ಎಂ.ಎಚ್.ರಾಮಾಂಜಿನಪ್ಪ ಹೇಳಿದರು.ಪಟ್ಟಣದಲ್ಲಿ ಶನಿವಾರ ಏರ್ಪಡಿಸಿದ್ದ ವೇದಿಕೆಯ ತಾಲ್ಲೂಕು ಘಟಕದ ಸಭೆಯಲ್ಲಿ ಮಾತನಾಡಿದ ಅವರು, ನಾಡು ನುಡಿ ಅಭಿವೃದ್ಧಿ ಹಾಗೂ ಗಡಿ ಪ್ರದೇಶದಲ್ಲಿ ನಾಗರಿಕರಿಗೆ ಮೂಲ ಸೌಕರ್ಯ ದೊರಕಿಸಿಕೊಡಲು ಪ್ರಯತ್ನಿಸಬೇಕು ಎಂದು ಹೇಳಿದರು.ವೇದಿಕೆ ಪ್ರಧಾನ ಕಾರ್ಯದರ್ಶಿ ಸಾದಿಕ್ ಅಹ್ಮದ್ ಮಾತನಾಡಿ, ಗಡಿ ಭಾಗದಲ್ಲಿ ಕನ್ನಡ ಭಾಷೆ ಬಳಕೆ ಹೆಚ್ಚಿಸಲು ಕ್ರಮ ಕೈಗೊಳ್ಳಬೇಕು. ಪ್ರತಿಯೊಬ್ಬರೂ ದಿನ ನಿತ್ಯದ ವ್ಯವಹಾರದಲ್ಲಿ […]
ನಾವೆಲ್ಲಾ ಕೂಡು ಕುಟುಂಬ ಪದ್ಧತಿಯಿಂದ ಬಂದುದರಿಂದ ನಮ್ಮಲ್ಲಿ ನಮಗರಿವಿಲ್ಲದೇ ರೀತಿ ನೀತಿ ಸಾಮಾಜಿಕ ಕಟ್ಟುಪಾಡುಗಳಿಂದ ಬದ್ಧರಾಗಿದ್ದೇವೆ. ಆದರೆ ಜಾಗತೀಕರಣದಿಂದಾಗಿ ವಿಜ್ಞಾನ ಮತ್ತು ತಾಂತ್ರಿಕತೆ ಗಣನೀಯ ಬೆಳವಣಿಗೆ ಹೊಂದಿರುವುದರ ಜೊತೆಗೆ ಸ್ಪರ್ಧಾತ್ಮಕ ಜಗತ್ತಿನಲ್ಲಿ ನಾವೆಲ್ಲ ಬಾಳಿ ಬದುಕಬೇಕಾಗಿದೆ. ಗತಕಾಲದ ರೀತಿ-ನೀತಿ ನಿಯಮ ಹಬ್ಬ-ಹರಿದಿನ ಆಚರಣೆ ನಂಬಿಕೆ ಇವುಗಳ ಅರಿವು ಇಂದಿನ ವಿದ್ಯಾರ್ಥಿಗಳಿಗೆ ಖಂಡಿತವಾಗಿಯೂ ಬೇಕಾಗುತ್ತದೆ. ಎಂದು ಶ್ರೀಮತಿ ಶಾರದಾ ಗೊಲ್ಲ ಅಧ್ಯಕ್ಷರು ಗ್ರಾಮ ಪಂಚಾಯತ್ ಹೊಸಂಗಡಿ ಇವರು ಹೇಳಿದರು. ಅವರು ಇತ್ತೀಚೆಗೆ ಅಭಿವೃದ್ಧಿ ಸಂಸ್ಥೆ (ರಿ), ಬಾಳ್ಕುದ್ರು ಹಂಗಾರಕಟ್ಟೆ, […]
ಕೋಲಾರ ಜನವರಿ 6 : ಭಾರತೀಯ ಚರಿತ್ರೆಯಲ್ಲಿ ಹೆಣ್ಣು ಮಕ್ಕಳ ಶಿಕ್ಷಣಕ್ಕಾಗಿ ನೂರ ಎಪ್ಪತ್ತು ವರ್ಷಗಳ ಹಿಂದೆಯೇ ಹೋರಾಡಿದ ದಿಟ್ಟ ಮಹಿಳೆ ಸಾವಿತ್ರಿಬಾಯಿ ಫುಲೆ. ಅಂದಿನ ಸಮಾಜದಲ್ಲಿ ಎದುರಾದ ಎಲ್ಲಾ ವಿರೋಧಗಳನ್ನು ಲೆಕ್ಕಿಸದೆ ಛಲಬಿಡದ ಧರಣಿಯಂತೆ ಹೆಣ್ಣು ಮಕ್ಕಳ ಅಕ್ಷರಕ್ರಾಂತಿಗೆ ದೀಪ ಬೆಳಗಿಸಿದರು ಎಂದು ಕನ್ನಡ ಸಾಹಿತ್ಯ ಪರಿಷತ್ತಿನ ಜಿಲ್ಲಾಧ್ಯಕ್ಷರಾದ ಎನ್.ಬಿ.ಗೋಪಾಲಗೌಡ ತಿಳಿಸಿದರು.ಕರ್ನಾಟಕ ರಾಜ್ಯ ಶಿಕ್ಷಕರ ಸಾಹಿತ್ಯ ಪರಿಷತ್ತು, ಕರ್ನಾಟಕ ರಾಜ್ಯ ಮಕ್ಕಳ ಸಾಹಿತ್ಯ ಪರಿಷತ್ತು, ಕೋಲಾರ ಜಿಲ್ಲಾ ಘಟಕ ಹಾಗೂ ಅಕ್ಷರದವ್ವ ಫಾತಿಮಾ ಶೇಖ್ ಪ್ರತಿμÁ್ಠನವು […]
ಶ್ರೀನಿವಾಸಪುರ: ರೋಣೂರು ಗ್ರಾಮದ ಲಕ್ಷ್ಮೀವೆಂಕಟರಮಣಸ್ವಾಮಿ ದೇವಾಲಯಕ್ಕೆ ಮಂಗಳವಾರ ದ್ವಾದಶಿ ಪ್ರಯಕ್ತ, ವಿಧಾನ ಪರಿಷತ್ತಿನ ಮುಖ್ಯ ಸಚೇತಕ ಡಾ. ವೈ.ಎ.ನಾರಾಯಣಸ್ವಾಮಿ ಭೇಟಿ ನೀಡಿ ದೇವರ ದರ್ಶನ ಪಡೆದರು.ಜಿಲ್ಲಾ ಬಿಜೆಪಿ ಘಟಕದ ಅಧ್ಯಕ್ಷ ಡಾ. ಕೆ.ಎನ್.ವೇಣುಗೋಪಾಲ್, ತಾಲ್ಲೂಕು ಘಟಕದ ಅಧ್ಯಕ್ಷ ಎ.ಅಶೋಕರೆಡ್ಡಿ, ಮುಖಂಡರಾದ ರೋಣೂರು ಚಂದ್ರಶೇಖರ್ ಇದ್ದರು.ದೇವಾಲಯದ ಆವರಣದಲ್ಲಿ ಸಂಗೀತ ಕಲಾವಿದೆ ಮಾಯಾ ಬಾಲಚಂದ್ರ ಅವರಿಂದ ಶಾಸ್ತ್ರೀಯ ಸಂಗೀತ ಕಾರ್ಯಕ್ರಮ ಏರ್ಪಡಿಸಲಾಗಿತ್ತು. ಸಂಗೀತ ಕಲಾವಿದರಾದ ಕೆ.ನರಸಿಂಹಮೂರ್ತಿ ಹಾಗೂ ಬಾನುತೇಜ ಅವರಿಂದ ಗೀತ ಗಾಯನ ಕಾರ್ಯಕ್ರಮ ಏರ್ಪಡಿಸಲಾಗಿತ್ತು.ತಾಲ್ಲೂಕಿನ ವಿವಿಧೆಡೆಗಳಿಂದ ಹೆಚ್ಚಿನ ಸಂಖ್ಯೆಯಲ್ಲಿ […]
ಶ್ರೀನಿವಾಸಪುರ: ವಿದ್ಯಾರ್ಥಿಗಳು ಕುತೂಹಲ ಉಳಿಸಿಕೊಳ್ಳಬೇಕು. ಕುತೂಹಲವೇ ಹೊಸ ಸಂಶೋಧನೆಗೆ ದಾರಿ ಮಾಡಿಕೊಡುತ್ತದೆ ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ವಿ.ಉಮಾದೇವಿ ಹೇಳಿದರು.ತಾಲ್ಲೂಕಿನ ಬೈರಪಲ್ಲಿ ಗ್ರಾಮದ ಭೈರವೇಶ್ವರ ವಿದ್ಯಾನಿಕೇತನದ ಆವರಣದಲ್ಲಿ ಭಾರತ ಸರ್ಕಾರದ ನ್ಯಾಷನಲ್ ಕೌನ್ಸಿಲ್ ಫಾರ್ ಸೈನ್ಸ್ ಟೆಕ್ನಾಲಜಿ ಕಮ್ಯುನಿಕೇಷನ್ ಸಹಕಾರದೊಂದಿಗೆ, ಕೆ.ಸಿ.ರೆಡ್ಡಿ ಸರೋಜಮ್ಮ ಕ್ಷೇಮಾಭಿವೃಧ್ಧಿ ಫೌಂಡೇಷನ್ ವತಿಯಿಂದ ಮಂಗಳವಾರ ಏರ್ಪಡಿಸಿದ್ದ ತಾಲ್ಲೂಕು ಮಂಟ್ಟದ ಪ್ರೌಢ ಶಾಲಾ ವಿಜ್ಞಾನ ವಸ್ತು ಪ್ರದರ್ಶನ ಉದ್ಘಾಟಿಸಿ ಮಾತನಾಡಿದರು.ಸಮಾಜದ ಎಲ್ಲ ವರ್ಗದ ಜನರಲ್ಲೂ ಒಂದು ಮಟ್ಟದಲ್ಲಿ ಮೂಢನಂಬಿಕೆ ಮನೆಮಾಡಿದೆ. ಅರಿವಿಲ್ಲದೆ ಅದರ ಪಾಲನೆಯಾಗುತ್ತಿದೆ. ಆದ್ದರಿಂದ […]
ಕೋಲಾರ: ಸಾವಿತ್ರಿ ಬಾಯಿ ಪುಲೆ ಆದರ್ಶವನ್ನು ಪ್ರತಿಯೊಬ್ಬ ಮಹಿಳೆಯೂ ಶಿಕ್ಷಣವಂತರಾಗಿ ಸದೃಢ ಸಮಾಜ ನಿರ್ಮಾಣ ಮಾಡಬೇಕೆಂದು ರೋಟರಿ ಸೆಂಟ್ರಲ್ ಅಧ್ಯಕ್ಷ ಸಿ.ಎಂ.ಆರ್.ಶ್ರೀನಾಥ್ ಹೇಳಿದರು.ನಗರದ ರೋಟರಿ ಸೆಂಟ್ರಲ್ ಕಟ್ಟಡದಲ್ಲಿ ಜಿಲ್ಲಾ ಪ್ರಾಥಮಿಕ ಶಾಲೆ ಮುಖ್ಯೋಪಾಧ್ಯಾಯರ ಸಂಘದವತಿಯಿಂದ ಆಯೋಜಿಸಲಾಗಿದ್ದ ಸಾವಿತ್ರಿ ಬಾಯಿ ಪುಲೆ ಜನ್ಮ ದಿನಾಚರಣೆ ಮತ್ತು ಸಾಧಕ ಹತ್ತು ಮಂದಿ ಶಿಕ್ಷಕಿಯರಿಗೆ ಸನ್ಮಾನ ಕಾರ್ಯಕ್ರಮದಲ್ಲಿ ಅವರು ಮಾತನಾಡುತ್ತಿದ್ದರು.ಶಿಕ್ಷಣ ಯಾವುದೇ ಮನುಷ್ಯನನ್ನು ಉನ್ನತ ಸ್ಥಾನಕ್ಕೇರಿಸುತ್ತದೆ, ಅದರಲ್ಲೂ ಮಹಿಳೆಯರು ವಿದ್ಯಾವಂತರಾದರೆ ಇಡೀ ಕುಟುಂಬ ವಿದ್ಯಾವಂತರಾದಂತಾಗುತ್ತದೆ, ಮಹಿಳೆಯರ ವಿದ್ಯಾಭ್ಯಾಸಕ್ಕೆ ಅಡ್ಡಿ ಇದ್ದ ಸಂದರ್ಭದಲ್ಲಿ […]