ಕೋಲಾರ; ಫೆ.26: ಮಾ.1 ರಿಂದ ಸರ್ಕಾರಿ ನೌಕರರು 7ನೇ ವೇತನ ಆಯೋಗದ ವರದಿ ಜಾರಿಗಾಗಿ ಅನಿರ್ಧಿಷ್ಠಾವಧಿ ಮುಷ್ಕರ ಕೈಬಿಟ್ಟು ಜನಸಾಮಾನ್ಯರಿಗೆ ತೊಂದರೆಯಾಗದ ರೀತಿ ಸರ್ಕಾರದ ಜೊತೆ ಮಾತುಕತೆಗೆ ಮುಂದಾಗಬೇಕೆಂದು ರೈತಸಂಘದ ರಾಜ್ಯ ಉಪಾಧ್ಯಕ್ಷ ಕೆ.ನಾರಾಯಣಗೌಡ ಸರ್ಕಾರಿ ನೌಕರರಿಗೆ ಮನವಿ ಮಾಡಿದ್ದಾರೆ.ಈ ಕುರಿತು ಪತ್ರಿಕಾ ಹೇಳಿಕೆ ನೀಡಿರುವ ಅವರು, ಸರ್ಕಾರಿ ನೌಕರರ ಮುಷ್ಕರಕ್ಕೆ ನಮ್ಮ ಅಭ್ಯಂತರವಿಲ್ಲ. ಅವರ ನ್ಯಾಯಯುತ ಹಕ್ಕುಗಳಾದ 7ನೇ ವೇತನ ಆಯೋಗದ ವರದಿ ಜಾರಿ ಹಾಗೂ ಎನ್ಪಿಎಸ್ ರದ್ದತಿಗೆ ರಾಜ್ಯ ವ್ಯಾಪಿ ಮಾ.1ರಿಂದ ಅನಿರ್ಧಿಷ್ಠಾವಧಿ ಮುಷ್ಕರದಿಂದ […]
ಶ್ರೀನಿವಾಸಪುರ: ಸಾಹಿತ್ಯ ಸಮಾಜದಲ್ಲಿ ಮಾನವೀಯತೆ ಬೆಳೆಸುವ ಸಾಧನವಾಗಬೇಕು ಎಂದು ಕೋಲಾರ ಜಿಲ್ಲಾ ಸಾಹಿತ್ಯ ಪರಿಷತ್ತಿನ ಅಧ್ಯಕ್ಷ ಎನ್.ಬಿ.ಗೋಪಾಲಗೌಡ ಹೇಳಿದರು.ಪಟ್ಟಣದ ಎಸ್ವಿ ಪ್ಯಾರಾ ಮೆಡಿಕಲ್ ಕಾಲೇಜು ಸಭಾಂಗಣದಲ್ಲಿ ಸುಗಟೂರಿನ ಗೆಳೆಯರ ಬಳಗದ ವತಿಯಿಂದ ಶನಿವಾರ ಏರ್ಪಡಿಸಿದ್ದ ಸಮಾರಂಭದಲ್ಲಿ ಸಾಹಿತಿ ಪನಸಮಾಕನಹಳ್ಳಿ ಆರ್.ಚೌಡರೆಡ್ಡಿ ಅವರಿಗೆ ಧರ್ಮೇಶ್ ಸಾಹಿತ್ಯ ಪ್ರಶಸ್ತಿ ಪ್ರದಾನ ಮಾಡಿ ಮಾತನಾಡಿದರು.ಸಾಹಿತಿ ತನ್ನ ಬದುಕು ಮತ್ತು ಬರಹದ ಮಧ್ಯೆ ಸಮನ್ವಯ ಸಾಧಿಸಬೇಕು. ಬರೆದಂತೆ ಬದುಕಿದಾಗ ಮಾತ್ರ ಸಾಮಾಜಿಕ ಮನ್ನಣೆ ದೊರೆಯುತ್ತದೆ. ಆ ನಿಟ್ಟಿನಲ್ಲಿ ಸಾಹಿತಿ ಪನಸಮಾಕನಹಳ್ಳಿ ಆರ್.ಚೌಡರೆಡ್ಡಿ ಮಾದರಿಯಾಗಿದ್ದಾರೆ. […]
ಕೋಲಾರ:- ದೇಶದಲ್ಲಿ ಭ್ರಷ್ಟಾಚಾರದ ಶಿಶುಗಳನ್ನು ಸೃಷ್ಟಿಸಿ ಪೋಷಿಸಿದ ಕಾಂಗ್ರೆಸ್ ಪಕ್ಷವನ್ನು ಅಧಿಕಾರದಿಂದ ದೂರ ಉಳಿಸಿ ರಾಜ್ಯವನ್ನು ಸಂರಕ್ಷಿಸಲು ವಿಧಾನಸಭಾ ಚುನಾವಣೆಯಲ್ಲಿ ಮತ್ತೆ ಬಿಜೆಪಿಗೆ ಮತ ನೀಡಲು ಕೇಂದ್ರ,ರಾಜ್ಯ ಸರ್ಕಾರಗಳ ಜನಪರ ಯೋಜನೆಗಳ ಕುರಿತು ಜನತೆಗೆ ತಿಳಿಸಿ ಎಂದು ಕಾರ್ಯಕರ್ತರಿಗೆ ಮಾಜಿ ಸಚಿವ ವರ್ತೂರು ಪ್ರಕಾಶ್ ಕರೆ ನೀಡಿದರು.ನಗರದ ಬಂಗಾರಪೇಟೆ ವೃತ್ತದಲ್ಲಿನ ಬಿ.ಆರ್. ಅಂಬೇಡ್ಕರ್ ಪ್ರತಿಮೆಗೆ ಮಾಲಾರ್ಪಣೆ ಮಾಡಿ, ನವ ಕರ್ನಾಟಕ ನಿರ್ಮಾಣಕ್ಕಾಗಿ ಕೇಂದ್ರ ಮತ್ತು ರಾಜ್ಯ ಸರ್ಕಾರ ಜಾರಿಗೆ ತಂದಿರುವ ಜನಪರ,ಪ್ರಗತಿಪರ ಯೋಜನೆಗಳ ಕುರಿತು ಜನತೆಗೆ ಅರಿವು […]
ಮಕ್ಕಳಲ್ಲಿ ಪ್ರಾಚ್ಯಪ್ರಜ್ಞೆ ಬೆಳೆಸಲು ಸಹಕಾರಿ-ವೆಂಕಟಾಚಲಪತಿ
ಕೋಲಾರ:- ಸರ್ಕಾರಿ ಶಾಲೆಗಳ ಹಿಂದುಳಿದ, ಅಲ್ಪಸಂಖ್ಯಾತ,ಇತರೆ ವರ್ಗಗಳ ವಿದ್ಯಾರ್ಥಿಗಳ ಕರ್ನಾಟಕ ದರ್ಶನ ಶೈಕ್ಷಣಿಕ ಪ್ರವಾಸಕ್ಕೆ ಶುಕ್ರವಾರ ಬೆಳಗ್ಗೆ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಶಿಕ್ಷಣ ಸಂಯೋಜಕರಾದ ವೆಂಕಟಾಚಲಪತಿ ಹಾಗೂ ರಾಘವೇಂದ್ರ ಚಾಲನೆ ನೀಡಿದರು.ನಗರದ ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿ ಮುಂದೆ ತಾಲ್ಲೂಕಿನ ವಿವಿಧ ಶಾಲೆಗಳಿಂದ ಆಗಮಿಸಿದ್ದ ವಿದ್ಯಾರ್ಥಿಗಳನ್ನು ಹೊತ್ತ ಸಾರಿಗೆ ಸಂಸ್ಥೆ ಬಸ್ಸಿಗೆ ಪೂಜೆ ಸಲ್ಲಿಸುವ ಮೂಲಕ ಕರ್ನಾಟಕ ದರ್ಶನ ಪ್ರವಾಸಕ್ಕೆ ಶುಭ ಕೋರಲಾಯಿತು. ಜ್ಞಾನಾಭಿವೃದ್ದಿಗೆ ಪ್ರವಾಸ ಸಹಕಾರಿ ಈ ಸಂದರ್ಭದಲ್ಲಿ ಮಾತನಾಡಿದ ಇಸಿಒ ವೆಂಕಟಾಚಲಪತಿ, ಮಕ್ಕಳಲ್ಲಿ […]
ಕೋಲಾರ:- ಏಳನೇ ವೇತನ ಆಯೋಗದ ವರದಿ ಜಾರಿ, ಎನ್ಪಿಎಸ್ ರದ್ದತಿಗೆ ಆಗ್ರಹಿಸಿ ರಾಜ್ಯ ಸರ್ಕಾರಿ ನೌಕರರ ಸಂಘ ಮಾ.1 ರಿಂದ ಅನಿರ್ಧಿಷ್ಟ ಮುಷ್ಕರಕ್ಕೆ ಕರೆ ನೀಡಿದ್ದು, ಭವಿಷ್ಯದ ಬದುಕಿಗಾಗಿ ಕರ್ತವ್ಯಕ್ಕೆ ಗೈರಾಗಿ’ ಎಂದು ಸರ್ಕಾರಿ ನೌಕರರಿಗೆ ನೌಕರರ ಸಂಘದ ಜಿಲ್ಲಾಧ್ಯಕ್ಷ ಜಿ.ಸುರೇಶ್ಬಾಬು ಕರೆ ನೀಡಿ, ಸಾರ್ವಜನಿಕರೂ ಸಹಕಾರ ನೀಡಲು ಮನವಿ ಮಾಡಿದರು. ನಗರದ ಜಿಲ್ಲಾಡಳಿತ ಭವನದ ಮುಂಭಾಗ ಮುಷ್ಕರದ ಭಿತ್ತಿಪತ್ರ ಹಾಗೂ ಕರಪತ್ರಗಳನ್ನು ಬಿಡುಗಡೆ ಮಾಡಿದ್ದಲ್ಲದೇ ನಂತರ ಪ್ರತಿ ಇಲಾಖೆ ಕಚೇರಿಗೂ ತೆರಳಿ ನೌಕರರಿಗೆ ಕರಪತ್ರ ವಿತರಿಸಿ, […]
ಶ್ರೀನಿವಾಸಪುರ: ಮತದಾರರು ರಾಜ್ಯದ ಹಿತಕ್ಕಾಗಿ ಜೆಡಿಎಸ್ ಬೆಂಬಲಿಸಬೇಕು ಎಂದು ಮಾಜಿ ಶಾಸಕ ಜಿ.ಕೆ.ವೆಂಕಟಶಿವಾರೆಡ್ಡಿ ಹೇಳಿದರು.ತಾಲ್ಲೂಕಿನ ಜೆವಿ ಕಾಲೋನಿಯಲ್ಲಿ ಬುಧವಾರ ಏರ್ಪಡಿಸಿದ್ದ ಜೆಡಿಎಸ್ ಚುನಾವಣಾ ಪ್ರಚಾರ ಸಭೆಯಲ್ಲಿ ಮಾತನಾಡಿದ ಅವರು, ರಾಜ್ಯದಲ್ಲಿ ಕಾಂಗ್ರೆಸ್ ಹಾಗೂ ಬಿಜೆಪಿ ಮುಖಂಡರ ನಡುವೆ ನಡೆಯುತ್ತಿರುವ ವಾಕ್ಸಮರ ಹಾಗೂ ಕಿತ್ತಾಟದಲ್ಲಿ ನಾಗರಿಕರು ಬಡವಾಗಿದ್ದಾರೆ. ಅಭಿವೃದ್ಧಿ ಶೂನ್ಯವಾಗುತ್ತಿದೆ ಎಂದು ಹೇಳಿದರು.ಈ ಬಾರಿ ಎಚ್.ಡಿ.ಕುಮಾರಸ್ವಾಮಿ ಮುಖ್ಯ ಮಂತ್ರಿಯಾಗುವುದು ಶತಸಿದ್ಧ. ಅವರು ಮುಖ್ಯ ಮಂತ್ರಿಯಾದ 24 ಗಂಟೆಗಳಲ್ಲಿ ಸ್ತ್ರೀ ಶಕ್ತಿ ಸಂಘಗಳು ಪಡೆದುಕೊಂಡಿರುವ ಡಿಸಿಸಿ ಬ್ಯಾಂಕ್ ಸಾಲ ಮನ್ನಾ […]
ಶ್ರೀನಿವಾಸಪುರ: ಪಟ್ಟಣದಲ್ಲಿ ಪಕ್ಷಾತೀತವಾಗಿ ಎಲ್ಲ ವಾರ್ಡ್ಗಳ ಅಭಿವೃದ್ಧಿಗೆ ಒತ್ತುನೀಡಲಾಗುವುದು ಎಂದು ಪುರಸಭಾಧ್ಯಕ್ಷೆ ಎಂ.ಎನ್.ಲಲಿತಾ ಶ್ರೀನಿವಾಸ್ ಹೇಳಿದರು.ಪಟ್ಟಣದ ಪುರಸಭಾ ಕಚೇರಿ ಸಭಾಂಗಣದಲ್ಲಿ ಬುಧವಾರ ಏರ್ಪಡಿಸಿದ್ದ ಸರ್ವಸದಸ್ಯರ ಸಾಮಾನ್ಯ ಸಭೆ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಬೇಸಿಗೆಯಲ್ಲಿ ಕುಡಿಯುವ ನೀರು ಸಮಸ್ಯೆ ಎದುರಾಗದಂತೆ ಎಚ್ಚರ ವಹಿಸಲಾಗುವುದು. ರಸ್ತೆ, ಚರಂಡಿ ದುರಸ್ತಿ ಹಾಗೂ ಸ್ವಚ್ಛತೆಗೆ ಹೆಚ್ಚಿನ ಗಮನ ಹರಿಸಲಾಗುವುದು ಎಂದು ಹೇಳಿದರು.ಪುರಸಭೆ ಉಪಾಧ್ಯಕ್ಷೆ ಆಯಿಷಾ ನಯಾಜ್ ಮಾತನಾಡಿ, ಸರ್ವ ಸದಸ್ಯರ ಸಭೆಗೆ ಆದಾಯ ಮತ್ತು ಖರ್ಚಿನ ಮಾಹಿತಿ ನೀಡಬೇಕು. ಹಾಗೆ ಮಾಡದೆ […]
ಕೋಲಾರ : ಸರ್ಕಾರ ಮತ್ತು ಮಾಧ್ಯಮಗಳ ನಡುವೆ ವಾರ್ತಾ ಮತ್ತು ಸಾರ್ವಜನಿಕ ಸಂರ್ಪಕ ಇಲಾಖೆ ಸೇತುವೆ ಮಾದರಿಯಲ್ಲಿ ಕಾರ್ಯನಿರ್ವಹಿಸುತ್ತಿದೆ ಎಂದು ಇಲಾಖೆಯ ನಿರ್ದೇಶಕರಾದ ಸೌಮ್ಯ ಅವರು ತಿಳಿಸಿದರು. ನಗರದ ಪತ್ರಕರ್ತರ ಭವನದಲ್ಲಿ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದಿಂದ ವಾರ್ತಾ ಇಲಾಖೆ ಮತ್ತು ಮಾಧ್ಯಮಗಳ ನಡುವೆ ಸಮನ್ವಯತೆ ಮೂಢಿಸಲು ಮತ್ತು ಇಲಾಖೆಯಿಂದ ಪತ್ರಕರ್ತರಿಗೆ ಮತ್ತು ಸಣ್ಣ ಪತ್ರಿಕೆಗಳಿಗೆ ಆಗಬೇಕಾದ ಸೌಲಭ್ಯಗಳ ಕುರಿತು ಇಲಾಖೆಯ ನಿರ್ದೇಶಕರೊಂದಿಗೆ ಆಯೋಜಿಸಿದ್ದ ಚರ್ಚೆಯಲ್ಲಿ ಭಾಗವಹಿಸಿ ಅವರು ಮಾತನಾಡಿದರು. ಸಾರ್ವಜನಿಕರಿಗೆ ಮಾಹಿತಿಗಳನ್ನು ತಲುಪಿಸುವ ಜವಾಬ್ದಾರಿಯನ್ನು ಹೊತ್ತಿರುವ […]
ಕೋಲಾರ:- ರಾಜ್ಯದಲ್ಲಿ ನಡೆಯುತ್ತಿರುವ ಮಕ್ಕಳ ಅಪಹರಣ, ದೌರ್ಜನ್ಯ ಪ್ರಕರಣಗಳ ಮಾಹಿತಿ ಹಾಗೂ ತಡೆಗೆ ಸರ್ಕಾರ ಕೈಗೊಂಡ ಕ್ರಮಗಳ ಕುರಿತು ಪ್ರಶ್ನಿಸಿದ ವಿಧಾನಪರಿಷತ್ನಲ್ಲಿ ಸದಸ್ಯ ಇಂಚರ ಗೋವಿಂದರಾಜು ಅವರಿಗೆ ಉತ್ತರಿಸಿದ ರಾಜ್ಯ ಗೃಹ ಸಚಿವ ಅರಗ ಜ್ಞಾನೇಂದ್ರ, ಕಳೆದ ಐದು ವರ್ಷಗಳಲ್ಲಿ 6160 ಪೋಕ್ಸೋ ಪ್ರಕರಣ ದಾಖಲಾಗಿದೆ ಎಂದು ಸದನಕ್ಕೆ ಉತ್ತರ ನೀಡಿದರು.ಎಂಎಲ್ಸಿ ಗೋವಿಂದರಾಜು ವಿಧಾನಪರಿಷತ್ನಲ್ಲಿ ಮಾತನಾಡಿ, ರಾಜ್ಯದಲ್ಲಿ ಕಳೆದ 5 ವರ್ಷದಲ್ಲಿ ಮಕ್ಕಳ ಅಪಹರಣ ಮತ್ತು ಅಪರಾಧಗಳ ಪ್ರಕರಣಗಳು, ಹಾಗೂ ಕಳೆದ ಎಂಟು ವರ್ಷಗಳಲ್ಲಿ ಸುಮಾರು ಐದು […]