ಕೋಲಾರ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಕಾರ್ಯಚಟುವಟಿಕೆಗಳನ್ನು ಜಾಗತೀಕರಣಗೊಳಿಸಲು ಕೋಲಾರ ಸುದ್ಧಿ ಮನೆ ವೆಬ್ ಸೈಟ್‍ನ್ನು ಜನವರಿ ತಿಂಗಳಿನಲ್ಲಿ ಲೋಕಾರ್ಪಣೆ ಮಾಡಲಾಗುವುದು ಎಂದು ಕೋಲಾರ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಬಿ.ವಿ.ಗೋಪಿನಾಥ್ ಪ್ರಕಟಿಸಿದರು.ಶನಿವಾರ ನಗರದ ಪತ್ರಕರ್ತರ ಭವನದಲ್ಲಿ ನಡೆದ ಕಾರ್ಯನಿರತ ಪತ್ರಕರ್ತರ ಸಂಘದ ಸರ್ವ ಸದಸ್ಯರ ಸಭೆಯ ಅಧ್ಯಕ್ಷತೆವಹಿಸಿ ಮಾತನಾಡಿದ ಅವರು ವೆಬ್‍ಸೈಟ್‍ಗೆ ಕೋಲಾರ ಸುದ್ದಿಮನೆ ಎಂದು ಹೆಸರಿಡಲಾಗಿದೆ ಎಂದು ತಿಳಿಸಿದರು.ಜನವರಿ ತಿಂಗಳ ಸಂಕ್ರಾಂತಿ ವೇಳೆಗೆ ವೆಬ್‍ಸೈಟ್ ಲೋಕಾರ್ಪಣೆ ಮಾಡಲಾಗುವುದು. ಅದೇ ಸಂದರ್ಭದಲ್ಲಿ ಪತ್ರಕರ್ತರ ಸಂಘದ […]

Read More

ಕೋಲಾರ:- ನಗರದ ಎಂ.ಸರಿತ ಕುಮಾರಿ ಮಂಡಿಸಿದ ಪ್ರೌಢ ಸಂಶೋಧನಾ ಪ್ರಬಂಧಕ್ಕೆ ಬೆಂಗಳೂರು ವಿವಿ ಡಾಕ್ಟರೇಟ್ ಪದವಿ ನೀಡಿ ಗೌರವಿಸಿದೆ.ಬೆಂಗಳೂರು ವಿವಿಯ 57 ನೇ ಘಟಿಕೋತ್ಸವಕಾರ್ಯಕ್ರಮದಲ್ಲಿ ಸಚಿವ ಅಶ್ವತ್ಥನಾರಾಯಣ ಮತ್ತು ಉಪ ಕುಲಪತಿ ಡಾ.ಎಸ್.ಎಂ.ಜಯಕರ್ ಮತ್ತಿತರರು ಸರಿತಕುಮಾರಿಗೆ ಡಾಕ್ಟರೇಟ್ ಪದವಿ ಪ್ರದಾನ ಮಾಡಿದ್ದಾರೆ.ಕೋಲಾರ ಜಿಲ್ಲೆಯ ಕ್ರೈಸ್ತ ಮಿಷನರಿಸಂಸ್ಥೆಗಳು ಮತ್ತು ದಲಿತ ಕ್ರೈಸ್ತ ಮಹಿಳೆಯರ ಸಮಾಜೋ ಆರ್ಥಿಕ ಬದಲಾವಣೆಯ ಚಾರಿತ್ರಿಕ ಅಧ್ಯಯನ (1900-2001) ಸಂಶೋಧನಾ ಪ್ರಬಂಧಕ್ಕೆ ಡಾಕ್ಟರೇಟ್ ಪದವಿಯನ್ನು ಅವರು ಪಡೆದುಕೊಂಡಿದ್ದಾರೆ.ಮುಳಬಾಗಿಲು ಪದವಿ ಕಾಲೇಜಿನ ಇತಿಹಾಸ ವಿಭಾಗದ ಪ್ರಾಧ್ಯಾಪಕರಾಗಿ ಎಂ.ಸರಿತಕುಮಾರಿ […]

Read More

ಕೋಲಾರ:- ರಾಜ್ಯಕ್ಕೆ ಪ್ರಥಮ ಮುಖ್ಯಮಂತ್ರಿಯನ್ನು ನೀಡಿದ ಹಾಗೂ ಅಪ್ರತಿಮ ಜನನಾಯಕರ ಹುಟ್ಟಿಗೆ ಕಾರಣವಾದ ಕೋಲಾರ,ಚಿಕ್ಕಬಳ್ಳಾಪುರ ಜಿಲ್ಲೆಗಳು ಇಂದು ಮತ ಮಾರಾಟಕೇಂದ್ರಗಳಾಗುತ್ತ ವೆ ಎಂಬ ಕೆಟ್ಟ ಪರಂಪರೆಗೆ ಸಾಕ್ಷಿಯಾಗುತ್ತಿದ್ದು, ಇಂತಹ ಕಳಂಕವನ್ನು ಹೋಗಲಾಡಿಸಲು ಮಹಿಳೆಯರು ಸಂಕಲ್ಪ ಮಾಡಬೇಕು ಎಂದು ಕೋಲಾರ,ಚಿಕ್ಕಬಳ್ಳಾಪುರ ಡಿಸಿಸಿ ಬ್ಯಾಂಕ್ ಅಧ್ಯಕ್ಷ ಬ್ಯಾಲಹಳ್ಳಿ ಗೋವಿಂದಗೌಡ ಕರೆ ನೀಡಿದರು.ನಗರದ ಕೋಲಾರಮ್ಮ ದೇವಾಲಯದಲ್ಲಿ ಶನಿವಾರ ವಿಶೇಷ ಪೂಜೆ ಸಲ್ಲಿಸಿದ ನಂತರ 22 ಮಹಿಳಾ ಸಂಘಗಳಿಗೆ 1.20ಕೋಟಿರೂ ಸಾಲ ವಿತರಿಸಿ ಅವರು ಮಾತನಾಡಿ, ಪ್ರಥಮ ಮುಖ್ಯಮಂತ್ರಿ ಕೆಸಿರೆಡ್ಡಿ, ಜನನಾಯಕರಾದ ಸಿ.ಬೈರೇಗೌಡರು, […]

Read More

ಕೋಲಾರ:- ಮಹಿಳೆಯರಂತೆ ಪುರುಷರು ಸಾಲ ಮರುಪಾವತಿಯಲ್ಲಿ ನಂಬಿಕೆ ಉಳಿಸಿಕೊಂಡರೆ ಮತ್ತಷ್ಟು ಪುರುಷ ಸಂಘಗಳಿಗೆ ಸಾಲ ಸೌಲಭ್ಯ ಒದಗಿಸುವುದಾಗಿ ಕೋಲಾರ,ಚಿಕ್ಕಬಳ್ಳಾಪುರ ಡಿಸಿಸಿ ಬ್ಯಾಂಕ್ ಅಧ್ಯಕ್ಷ ಬ್ಯಾಲಹಳ್ಳಿ ಗೋವಿಂದಗೌಡ ಭರವಸೆ ನೀಡಿದರು.ನಗರದ ಖಾದ್ರಿಪುರ ಬಡಾವಣೆಯಲ್ಲಿ ಡಿಸಿಸಿ ಬ್ಯಾಂಕಿನಿಂದ ಪುರುಷ ಸಂಘಗಳಿಗೆ ಸಾಲ ವಿತರಿಸಿ ಅವರು ಮಾತನಾಡಿ, ಡಿಸಿಸಿ ಬ್ಯಾಂಕ್ ಉಳಿಸಿ ಬೆಳೆಸಿದವರೇ ಮಹಿಳೆಯರು, ಅವರು ಸಕಾಲಕ್ಕೆ ಸಾಲ ಮರುಪಾವತಿಸುವ ಮೂಲಕ ಬ್ಯಾಂಕಿನ ಹಿರಿಮೆ ಕಾಪಾಡಿದ್ದಾರೆ ಎಂದರು.ಪುರುಷರು ಸ್ವಾವಲಂಬಿ ಬದುಕು ರೂಪಿಸಿಕೊಳ್ಳಲು ಅಗತ್ಯವಿರುವ ಸಾಲವನ್ನು ಒದಗಿಸಲು ಬ್ಯಾಂಕ್ ಸಿದ್ದವಿದೆ ಎಂದ ಅವರು, […]

Read More

ಕೋಲಾರ: ಕಂಪ್ಯೂಟರ್ ಹಾಗೂ ಟೈಪಿಂಗ್ ಕಲಿಕೆ ಹಿಂದೆ ಆಯ್ಕೆಯಾಗಿತ್ತು ಆದರೆ ಈಗ ಅನಿವಾರ್ಯವಾಗಿದೆ ಮತ್ತು ಭವಿಷ್ಯದಲ್ಲಿ ಬದುಕು ಕಟ್ಟಿಕೊಳ್ಳಲು ಅತ್ಯಗತ್ಯವೂ ಆಗಿದೆ ಎಂದು ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ರಾಜ್ಯ ಕಾರ್ಯಕಾರಿ ಸದಸ್ಯ ಕೆ.ಎಸ್.ಗಣೇಶ್ ವಿದ್ಯಾರ್ಥಿಗಳಿಗೆ ಕಿವಿಮಾತು ಹೇಳಿದರು.ನಗರದ ವೆಂಕಟೇಶ್ವರ ವಾಣಿಜ್ಯ ಮತ್ತು ಕಂಪ್ಯೂಟರ್ ವಿದ್ಯಾಸಂಸ್ಥೆ ಆಶ್ರಯದಲ್ಲಿ ಗುರುವಾರ 2023ರ ಹೊಸ ವರ್ಷದ ಕ್ಯಾಲೆಂಡರ್ ಬಿಡುಗಡೆ ಮಾಡಿ ಅವರು ಮಾತನಾಡುತ್ತಿದ್ದರು.ಕಲಿಕೆಗೆ ಅವಕಾಶ ಇರುವಾಗ ಸಮಯವನ್ನು ಸದ್ಬಳಕೆ ಮಾಡಿಕೊಳ್ಳಬೇಕು, ಕಾಲ ವ್ಯರ್ಥ ಮಾಡಬಾರದು ಎಂದ ಅವರು, ಸಾಧನೆಗೆ ಪ್ರತಿಕ್ಷಣವೂ […]

Read More

ಶ್ರೀನಿವಾಸಪುರದಲ್ಲಿ, ಗುಜರಾತಿನಲ್ಲಿ ನಡೆದ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ಪೂರ್ಣ ಬಹುಮತ ಪಡೆದ ಹಿನ್ನೆಲೆಯಲ್ಲಿ ಬಿಜೆಪಿ ಕಾರ್ಯಕರ್ತರು ಗುರುವಾರ ವಿಜಯೋತ್ಸವ ಆಚರಿಸಿದರು. ಬಿಜೆಪಿ ತಾಲ್ಲೂಕು ಅಧ್ಯಕ್ಷ ಅಶೋಕ್‍ರೆಡ್ಡಿ, ಮುಖಂಡರಾದ ಎಸ್‍ಎಲ್‍ಎನ್ ಮಂಜುನಾಥ್, ರಾಮಾಂಜಿ, ರಮೇಶ್, ರೆಡ್ಡಪ್ಪ, ಸುರೇಶ್ ನಾಯಕ್ ಇದ್ದರು.

Read More

ಶ್ರೀನಿವಾಸಪುರ: ಮಾವು ಬೆಳೆಗಾರರಿಗೆ ಪ್ರಧಾನ ಮಂತ್ರಿ ಫಸಲ್ ಬಿಮಾ ಯೋಜನೆ ಪರಿಹಾರ ನೀಡುವಂತೆ ಆಗ್ರಹಿಸಿ ಪಟ್ಟಣದಲ್ಲಿ ಸಂಪೂರ್ಣ ಶಾಂತಿಯುತ ಬಂದ್ ಆಚರಿಸಲಾಯಿತು.ಜಿಲ್ಲಾ ಮಾವು ಬೆಳೆಗಾರರ ಸಂಯುಕ್ತ ಹೋರಾಟ ಸಮಿತಿ ನೀಡಿದ್ದ ಬಂದ್ ಪ್ರಯುಕ್ತ ಶ್ರೀನಿವಾಸಪುರದಲ್ಲಿ ಅಂಗಡಿ ಮುಂಗಟ್ಟು ಮುಚ್ಚಲಾಗಿತ್ತು. ವಾಹನ ಸಂಚಾರ ಸ್ಥಗಿತಗೊಂಡಿತ್ತು. ರಾಜ್ಯ ರಸ್ತೆ ಸಾರಿಗೆ ಸಂಸ್ಥೆ ಬಸ್ ನಿಲ್ದಾಣ ಬಸ್‍ಗಳಿಲ್ಲದೆ ಬಿಕೋ ಎನ್ನುತ್ತಿತ್ತು. ಸರ್ಕಾರಿ ಕಚೇರಿಗಳು ಹಾಗೂ ಬ್ಯಾಂಕ್‍ಗಳು ತೆರೆದಿದ್ದವಾದರೂ ಜನರಿಲ್ಲದೆ ಬಿಕೋ ಎನ್ನುತ್ತಿದ್ದವು. ಖಾಸಗಿ ಶಾಲೆಗಳಿಗೆ ರಜೆ ಘೋಷಿಸಲಾಗಿತ್ತು. ಸರ್ಕಾರಿ ಶಾಲೆಗಳಲ್ಲಿ ವಿದ್ಯಾರ್ಥಿಗಳ […]

Read More

ಕೋಲಾರ:- ಜಿಲ್ಲೆಯ ಮುಳಬಾಗಿಲು ತಾಲ್ಲೂಕಿನ ಅಂಜನಾದ್ರಿ ಬೆಟ್ಟದಲ್ಲಿ ಇಬ್ಬರು ಮಕ್ಕಳಿಗೆ ತಾಯಿಯೇ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿರುವ ಹೃದಯ ವಿದ್ರಾವಕ ಘಟನೆ ಮಂಗಳವಾರ ತಡರಾತ್ರಿ ನಡೆದಿದ್ದು, ಓರ್ವ ಪುತ್ರಿ ಸುಟ್ಟು ಕರಕಲಾಗಿದ್ದು, ಮತ್ತೊಬ್ಬ ಮಗಳ ಸ್ಥಿತಿ ಚಿಂತಾಜನಕವಾಗಿದೆ.ಓರ್ವ ಮಗಳು ಅಕ್ಷಯ(8) ಸ್ಥಳದಲ್ಲೇ ಮೃತಪಟ್ಟಿದ್ದು, ಮತ್ತೊಬ್ಬ ಮಗಳು ಉದಯಶ್ರೀ(6) ಸಾವು ಬದುಕಿನ ನಡುವೆ ಹೋರಾಡುತ್ತಿದ್ದು, ಬೆಂಗಳೂರಿನ ವಿಕ್ಟೋರಿಯಾ ಆಸ್ಪತ್ರೆಗೆ ರವಾನಿಸಲಾಗಿದೆ. ಘಟನೆ ವಿವರ ಬುಧವಾರ ಮುಂಜಾನೆ ವಾಯುವಿಹಾರಕ್ಕೆಂದು ಅಂಜನಾದ್ರಿ ಬೆಟ್ಟದ ಬಳಿ ಜನ ಹೋದಾಗ ಚೀರಾಡುವ ಶಬ್ದ ಕೇಳಿಸಿದ್ದು, […]

Read More

ಶ್ರೀನಿವಾಸಪುರ ಸರ್ಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ಬೆಳಿಗ್ಗೆ 10:00 ಗಂಟೆಗೆ ಡಾll B R ಅಂಬೇಡ್ಕರ್ ರವರ ಪರಿವರಣ ದಿನಾಚರಣೆಯನ್ನು ಹಂಬಿಕೊಂಡಿದ್ದು ಹಾಗೂ SFI ಹೊಸ ಘಟಕ ವನ್ನು ರಚನೆ ಮಾಡಲಾಯಿತು ಈ ಸಂಧರ್ಭದಲ್ಲಿ ಸಭೆಯ ಅಧ್ಯಕ್ಷಯೆಯನ್ನು ಸರ್ಕಾರಿ ಬಾಲಕರ ಪದವೀ ಪೂರ್ವ ಕಾಲೀಜು ಪ್ರಾಂಶುಪಾಲರಾದ ಶೋಭಾ ಮೇಡಂ ವಯಿಸಿಕೊಂಡಿದ್ದು, ಅವರು ಅಂಬೇಡ್ಕರ್ ರವರ ಸಿಧಾಂತದ ಬಗ್ಗೆ ಮಾತನಾಡಿದರು  ಈ ಸಂದರ್ಭದಲ್ಲಿ ರಾಜ್ಯ ಕಾರ್ಯಧರ್ಶಿ ವಾಸುದೇವರೆಡ್ಡಿ ಎಸ್ ಎಫ್ ಐ ಕುರಿತು ಸುಧೀರ್ಘ ಮಾಹಿತಿಯನ್ನು ನೀಡಿದರು ಈ […]

Read More