ಶ್ರೀನಿವಾಸಪುರ: ಅಧಿಕಾರಿಗಳು ಸಾರ್ವಜನಿಕರ ಸಮಸ್ಯೆಗಳಿಗೆ ಸ್ಪಂದಿಸಿ ಕಾರ್ಯನಿರ್ವಹಿಸಬೇಕು ಎಂದು ಜಿಲ್ಲಾ ಲೋಕಾಯುಕ್ತ ಎಸ್ಸಿ ಬಿ.ಕೆ.ಉಮೇಶ್ ಹೇಳಿದರು.ಪಟ್ಟಣದ ತಾಲ್ಲೂಕು ಕಚೇರಿ ಸಭಾಂಗದಲ್ಲಿ ಜಿಲ್ಲಾ ಲೋಕಾಯುಕ್ತ ಅಧಿಕಾರಿಗಳಿಂದ ಮಂಗಳವಾರ ಏರ್ಪಡಿಸಿದ್ದ ತಾಲ್ಲೂಕು ಮಟ್ಟದ ಸಾರ್ವಜನಿಕ ಕುಂದು ಕೊರತೆ ವಿಚಾರಣಾ ಸಭೆಯಲ್ಲಿ ಮಾತನಾಡಿದ ಅವರು, ಅಧಿಕಾರಿಗಳು ಹಾಗೂ ಸಿಬ್ಬಂದಿ ಸರ್ಕಾರದ ಸೌಲಭ್ಯ ಅರ್ಹ ಫಲಾನುಭವಿಗಳಿಗೆ ಸಿಗುವಂತೆ ನೋಡಿಕೊಳ್ಳಬೇಕು. ಸೌಲಭ್ಯ ವಿತರಣೆಯಲ್ಲಿ ತಾರತಮ್ಯ ಮಾಡಬಾರದು ಎಂದು ಹೇಳಿದರು.ಸಾರ್ವಜನಿಕರು ಭ್ರಷ್ಟ ಅಧಿಕಾರಿಗಳ ಭ್ರಷ್ಟಾಚಾರ ಬಯಲು ಮಾಡಬೇಕು. ಯಾವುದೇ ಆಧಿಕಾರಿ ಅಥವಾ ಸರ್ಕಾರಿ ಕಚೇರಿ ಸಿಬ್ಬಂದಿ […]
ಕೋಲಾರ:- ಹನುಮನ ದೇವಾಲಯಗಳ ತವರೂರು ಎಂದೇ ಖ್ಯಾತವಾಗಿರುವ ಕೋಲಾರ ಜಿಲ್ಲೆಯಲ್ಲಿ ಹನುಮದ್ವ್ರತವನ್ನು ಹನುಮಜಯಂತಿಯಾಗಿ ವಿಶಿಷ್ಟ ರೀತಿಯಲ್ಲಿ ಆಚರಿಸುತ್ತಿದ್ದು, ಆಂಜನೇಯನ ದೇವಾಲಯಗಳಲ್ಲಿ ವಿಶೇಷ ಪೂಜೆ, ಅಲಂಕಾರ,ಭಜನೆ, ಅನ್ನದಾಸೋಹ ನಡೆದಿದ್ದು, ಭಕ್ತರ ಸಮೂಹವೇ ಹರಿದು ಬಂತು.ಹನುಮಂತನಿಗೂ ಕೋಲಾರಕ್ಕೂ ಇರುವ ಸಂಬಂಧ ಆಶ್ಚರ್ಯ ತರಿಸುವಂತದ್ದು, ಏಕೆಂದರೆ ಜಿಲ್ಲೆಯಲ್ಲಿರುವ ಅತಿ ಹೆಚ್ಚಿನ ಸಂಖ್ಯೆಯಲ್ಲಿರುವ ಹನುಮಂತ ದೇವಾಲಯಗಳನ್ನು ಗಮನಿಸಿದರೆ ಇಂತದ್ದೊಂದು ಅನುಮಾನ ಕಾಡದಿರದು, ಹನುಮದ್ವ್ರತವಾದ ಇಂದು ಜಿಲ್ಲೆಯಲ್ಲಿ ಹನುಮ ಜಯಂತಿಯಾಗಿ ಆಚರಿಸುವುದು ವಾಡಿಕೆಯಾಗಿದೆ.ಹನುಮಜಯಂತಿ ಅಂಗವಾಗಿ ಇಂದು ಎಲ್ಲಾ ಹನುಮ ದೇಗುಲಗಳಲ್ಲೂ ವಿಶೇಷ ಪೂಜೆ, ಹೂವಿನ […]
ಕೋಲಾರ:- ತಮಿಳುನಾಡು ರಾಜ್ಯಕ್ಕೆ ಶೈಕ್ಷಣಿಕ ಪ್ರವಾಸ ಹೊರಟ ತಾಲ್ಲೂಕಿನ ಅರಾಭಿಕೊತ್ತನೂರು ಸರ್ಕಾರಿ ಶಾಲಾ ಮಕ್ಕಳಿಗೆ ಶಿಕ್ಷಕರು ಹಾಗೂ ಸಮಾಜ ಸೇವಕರಾದ ಧರ್ಮೇಶ್, ಇಸಿಒ ಬೈರೆಡ್ಡಿ ಮತ್ತಿತರರು ಶುಭ ಹಾರೈಸಿ ತಿಂಡಿ,ತಿನಿಸು,ಹಣ್ಣು ಕೊಡುಗೆಯಾಗಿ ನೀಡಿದರು.ಭಾನುವಾರ ಮಧ್ಯರಾತ್ರಿ ಪ್ರವಾಸಕ್ಕೆ ತೆರಳಿದ ಮಕ್ಕಳನ್ನು ಉದ್ದೇಶಿಸಿ ಮಾತನಾಡಿದ ಇಸಿಒ ಬೈರೆಡ್ಡಿ, ಪ್ರವಾಸ ಮಕ್ಕಳ ಶೈಕ್ಷಣಿಕ ಕಲಿಕೆಗೆ ಪೂರಕವಾಗಿರಲಿ, ಪ್ರವಾದಲ್ಲಿ ಮಕ್ಕಳು ಎಚ್ಚರಿಕೆಯಿಂದಿರಿ, ಆರೋಗ್ಯ ರಕ್ಷಣೆಗೆ ಒತ್ತು ನೀಡಿ ಎಂದು ಕಿವಿಮಾತು ಹೇಳಿದರು.ಶಿಕ್ಷಕ ಹಾಗೂ ಕೊಡುಗೈ ದಾನಿ ಸುಗಟೂರು ಧರ್ಮೇಶ್, ಸರ್ಕಾರಿ ಶಾಲಾ ಮಕ್ಕಳಿಗೆ […]
ಶ್ರೀನಿವಾಸಪುರ: ತಾಲ್ಲೂಕು ಕಚೇರಿ ಸಭಾಂಗಣದಲ್ಲಿ ತಾಲ್ಲೂಕಿನ ಯಲ್ದೂರು ಗ್ರಾಮದಲ್ಲಿ ಡಿ.9 ರಂದು ನಡೆಯಲಿರುವ 12ನೇ ತಾಲ್ಲೂಕು ಕನ್ನಡ ಸಾಹಿತ್ಯ ಸಮ್ಮೇಳನದ ಆಹ್ವಾನ ಪತ್ರಿಕೆಯನ್ನು ತಹಶೀಲ್ದಾರ್ ಶಿರಿನ್ ತಾಜ್ ಬಿಡುಗಡೆ ಮಾಡಿದರು.ಈ ಸಂದರ್ಭದಲ್ಲಿ ಅವರು ಮಾತನಾಡಿ, ಗಡಿ ಭಾಗದಲ್ಲಿ ನಡೆಯುವ ಸಾಹಿತ್ಯ ಸಮ್ಮೇಲನಕ್ಕೆ ತನ್ನದೇ ಆದ ಮಹತ್ವ ಇರುತ್ತದೆ. ಸಾಂಘಿಕ ಪ್ರಯತ್ನದ ಮೂಲಕ ಸಮ್ಮೇಳನ ಯಶಸ್ವಿಗೊಳಿಸಬೇಕು. ಯಶಸ್ಸಿನಲ್ಲಿ ಸ್ಥಳೀಯರು ಹಾಗೂ ಸ್ಥಳೀಯ ಸಂಘ ಸಂಸ್ಥೆಗಳ ಸಹಕಾರ ಮುಖ್ಯವಾಗುತ್ತದೆ ಎಂದು ಹೇಳಿದರು.ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷ ಎನ್.ಬಿ.ಗೋಪಾಲಗೌಡ ಮಾತನಾಡಿ, […]
ಶ್ರೀನಿವಾಸಪುರ: ವಿಶೇಷ ಚೇತನ ಮಕ್ಕಳು ಕೀಳರಿಮೆ ಬಿಟ್ಟು ಸಾಧನೆಯ ಹಾದಿಯಲ್ಲಿ ಸಾಗಬೇಕು ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ವಿ.ಉಮಾದೇವಿ ಹೇಳಿದರು.ಪಟ್ಟಣದ ಸರ್ಕಾರಿ ಬಾಲಕಿಯರ ಪದವಿ ಪೂರ್ವ ಕಾಲೇಜು ಮೈದಾನದಲ್ಲಿ ವಿಶ್ವ ವಿಶೇಷ ಚೇತನರ ದಿನಾಚರಣೆ ಅಂಗವಾಗಿ ಶನಿವಾರ ಏರ್ಪಡಿಸಿದ್ದ ವಿಶೇಷ ಚೇತನ ಮಕ್ಕಳ ಕ್ರೀಡಾಕೂಟ ಉದ್ಘಾಟಿಸಿ ಮಾತನಾಡಿದ ಅವರು, ಸಮಾಜದಲ್ಲಿ ಕ್ರೀಡಾಪಟುಗಳಿಗೆ ಹೆಚ್ಚಿನ ಮಾನ್ಯತೆ ಇದೆ. ವಿಶೇಷ ಚೇತನರೂ ಸಹ ಕ್ರೀಡಾ ಕ್ಷೇತ್ರದಲ್ಲಿ ಉತ್ತಮ ಸಾಧನೆ ಮಾಡಿದ್ದಾರೆ ಎಂದು ಹೇಳಿದರು.ಈಗ ವಿಶೇಷ ತರಬೇತಿ ಹಾಗೂ ವೈಜ್ಞಾನಿಕ ಉಪಕರಣಗಳ ಮೂಲಕ […]
ಶ್ರೀನಿವಾಸಪುರ 1 : ಗ್ರಾಮೀಣ ಭಾಗದಲ್ಲಿನ ಕಲಾವಿದರು ಪುರಾತನ ಕಲೆಗಳಿಗೆ ಜೀವ ತುಂಬಿ ಬೆಳಸುತ್ತಿದ್ದಾರೆ ಎಂದು ಹಿರಿಯ ಕಲಾವಿದ ಪಿ.ಮುನಿರೆಡ್ಡಿ ಹೇಳಿದರು.ತಾಲೂಕಿನ ಆರಮಾಕನ ಶೆಟ್ಟಿಹಳ್ಳಿ ಗ್ರಾಮದ ಶ್ರೀ ವೇಣುಗೋಪಾಲಸ್ವಾಮಿ ದೇವಾಲಯದ ಆವರಣದಲ್ಲಿ ಗುರುವಾರ ಕನ್ನಡ ಮತ್ತು ಸಂಸ್ಕøತಿ ಇಲಾಖೆ ಕೋಲಾರ. ಸಂಯುಕ್ತಾಶ್ರಯದಲ್ಲಿ ಗಿರಿಜನ ಯೋಜನೆಯಡಿ ಗ್ರಾಮದ ಶ್ರೀ ವಾಲ್ಮೀಕಿ ಸಂಘದ ವತಿಯಿಂದ ಜಾನಪದ ಗೀತೆ, ತತ್ವಪದಗಳ ಸಾಂಸ್ಕøತಿಕ ಕಾರ್ಯಕ್ರಮಕ್ಕೆ ಚಾಲನೆ ನೀಡಲಾಯಿತು.ವಾಟ್ಸ್‍ಪ್, ಫೇಸ್‍ಬುಕ್ ಹಾಗು ಟಿವಿ ಸೀರಿಯಲ್ ಗಳ ಮಧ್ಯೆ ಜಾನಪದ, ತತ್ವಪದಗಳ ಪುರಾತನ ಕಲೆಗಳನ್ನು ಉಳಿಸಿ […]
ಶ್ರೀ ಧರ್ಮಸ್ಥಳ ಗ್ರಾಮಾಭಿವೃದ್ಧಿ ಸಂಘದ ವತಿಯಿಂದ ಇತ್ತೀಚಿಗೆ ಪಟ್ಟಣದ ಕಸ್ತೂರಿಬಾ ಜ್ಞಾನವಿಕಾಶ ಕೇಂದ್ರದಲ್ಲಿ ಕೇಂದ್ರದ ಸದಸ್ಯರಿಗೆ ನಿಮೂನೀಯಾ ರೋಗದ ಲಕ್ಷಣಗಳ ಬಗ್ಗೆ ಹಾಗೂ ರೋಗ ಮುನ್ನೆಚ್ಚರಿಕೆ ಕ್ರಮಗಳ ಬಗ್ಗೆ ಜ್ಞಾನ ವಿಕಾಶ ಕೇಂದ್ರದ ಸಮನ್ವಯಾಧಿಕಾರಿ ಈರಮ್ಮ ನಾಗನಾಳ ವಿವರಿಸಿದರು. ಸೇವಾಪ್ರತಿನಿದಿ ಉಮಾ ಹಾಗೂ ಸದಸ್ಯರು ಇದ್ದರು
ಶ್ರೀನಿವಾಸಪುರ 1 : ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯಿಂದ ಸಿಗುವ ಎಲ್ಲಾ ಸೌಲಭ್ಯಗಳನ್ನು ಗ್ರಾಮದ ಪ್ರತಿಯೊಂದು ಕುಟುಂಬದವರು ಹಾಗು ಗ್ರಾಮಸ್ಥರು ಬಳಸಿಕೊಂಡು ಅಭಿವೃದ್ಧಿಯಾಗಬೇಕು ಎಂದು ಕೋಲಾರ ಜಿಲ್ಲಾ ಧರ್ಮಸ್ಥಳ ಗ್ರಾಮಾಭಿವೃದ್ಧಿ ಸಂಘದ ನಿರ್ದೇಶಕ ಕೆ.ಮುರಳಿಧರಶೆಟ್ಟಿ ಹೇಳಿದರು.ತಾಲೂಕಿನ ದೊಡಮಲದೊಡ್ಡಿ ಗ್ರಾಮದ ಶ್ರೀ ಲಕ್ಷ್ಮೀನರಸಿಂಹಸ್ವಾಮಿ ದೇವಸ್ಥಾನದ ಜೀರ್ಣೋಧ್ಧಾರಕ್ಕಾಗಿ ಧರ್ಮಸ್ಥಳ ಗ್ರಾಮಾಭಿವೃದ್ಧಿ ಸಂಘವತಿಯಿಂದ 2.50 ಲಕ್ಷ ರೂ ಗಳ ಡಿಡಿಯನ್ನು ದೇವಸ್ಥಾನದ ಆಡಳಿತ ಮಂಡಲಿಗೆ ಬುಧವಾರ ಹಸ್ತಾಂತರಿಸಿದರು.ತಾಲೂಕು ಯೋಜನಾಧಿಕಾರಿ ಎಸ್.ಸುರೇಶ್‍ಗೌಡ, ದೇವಸ್ಥಾನ ಕಮಿಟಿ ಅಧ್ಯಕ್ಷ ಎಂ.ಶ್ರೀನಿವಾಸಪ್ಪ, ಉಪಾಧ್ಯಕ್ಷ ಮುನಿರಾಜು, ಹಾಗೂ […]
ಶ್ರೀನಿವಾಸಪುರ 2 : ಕ್ಷೇತ್ರದ ಅಭಿವೃದ್ದಿಯೇ ನನ್ನ ಮೂಲ ಮಂತ್ರ, ನನಗೆ ಮತ ಹಾಕಿದ ಜನತೆಯ ಅಭಿವೃದ್ದಿಯೇ ನನ್ನ ಗುರಿ ಎಂದು ಶಾಸಕ ಕೆ.ಆರ್.ರಮೇಶ್‍ಕುಮಾರ್ ಹೇಳಿದರು.ತಾಲೂಕಿನ ನಂಬಿಹಳ್ಳಿ ಗ್ರಾಮದಲ್ಲಿ ಗುರುವಾರ ನಡೆದ ಪ್ರಗತಿ ಪರಿಶೀಲನಾ ಸಭೆ ಹಾಗು ಕುಂದ ಕೊರತೆ ಸಭೆಗೆ ಚಾಲನೆ ನೀಡಿ ಮಾತನಾಡಿದರು.ನನ್ನ ಕ್ಷೇತ್ರಕ್ಕೆ ಸಂಬಂದಿಸಿದ ಗ್ರಾಮಗಳಲ್ಲಿ ಬಡಕುಟುಂಬಗಳ ಸಂಖ್ಯೆಯೇ ಹೆಚ್ಚಾಗಿದ್ದು , ಅವರ ಅಭಿವೃದ್ದಿಯೇ ನನ್ನ ಗುರಿ . ಅವರಿಗೆ ಸರ್ಕಾರದ ಯೋಜನೆಗಳಿಂದ ಸಿಗುವ ಸವಲತ್ತುಗಳನ್ನು ಪಕ್ಷಾತೀತವಾಗಿ ಮನೆಯ ಬಾಗಿಲಿಗೆ ನೀಡಿ, ಮತದಾರನ […]