ರಾಯಲ್ಪಾಡು ಹೋಬಳಿಯ ಕೊರಕೋನಪಲ್ಲಿ ಗ್ರಾಮದ ಸಮೀಪ ಮಂಗಳವಾರ ಜಿಂಕೆಯೊಂದನ್ನ ನುಂಗಿ ಪರದಾಡುತ್ತಿದ್ದ ಸಮಯದಲ್ಲಿ ಬೃಹತ್ ಗಾತ್ರದ ಹೆಬ್ಬಾವುನಿಂದ .ಜಿಂಕೆಯನ್ನು ರಕ್ಷಣೆ ಮಾಡಲು ಮುಂದಾದ ವ್ಯಕ್ತಿಯ ಮೇಲೆ ದಾಳಿ ನಡೆಸಿದ ಹೆಬ್ಬಾವು. ಸುಮಾರು 20 ಅಡಿ ಉದ್ದದ 50 ಕೆಜಿ ತೂಕದ ಹೆಬ್ಬಾವು. ಹೆಬ್ಬಾವಿನಿಂದ ಜಿಂಕೆ ರಕ್ಷಣೆ ಮಾಡಲು ಪ್ರಯತ್ನಿಸಿದ ಗ್ರಾಮಸ್ಥರು. ದರೆ ಹೆಬ್ಬಾವಿನ ಹೊಟ್ಟೆಯಲ್ಲಿ ಜಿಂಕೆ ಮೃತವಾಗಿರುವ ಬಗ್ಗೆ ಮಾಹಿತಿ ಲಭಿಸಿದೆ. ಸ್ಥಳಕ್ಕೆ ಅರಣ್ಯ ಇಲಾಖೆ ಅಧಿಕಾರಿಗಳು ಬೇಟಿ ಪರಿಶೀಲನೆ ಮಾಡಿದರು.
ಶ್ರೀನಿವಾಸಪುರ: ರಾಜ್ಯದ ಸರ್ವತೋಮು ಅಭಿವೃದ್ಧಿಗೆ ಪ್ರಾದೇಶಿಕ ಪಕ್ಷವಾದ ಜೆಡಿಎಸ್‍ನ್ನು ಬೆಂಬಲಿಸಬೇಕು ಎಂದು ರಾಜ್ಯ ಜೆಡಿಎಸ್ ಯುವ ಘಟಕದ ಅಧ್ಯಕ್ಷ ನಿಖಿಲ್ ಕುಮಾರಸ್ವಾಮಿ ಮನವಿ ಮಾಡಿದರು. ಪಟ್ಟಣದ ವಿವೇಕಾನಂದ ವೃತ್ತದಲ್ಲಿ ಚೈತನ್ಯ ಜನ ಜಾಗೃತಿ ವೇದಿಕೆ ವತಿಯಿಂದ ರಾಜ್ಯೋತ್ಸವದ ಅಂಗವಾಗಿ ಏರ್ಪಡಿಸಿದ್ದ ರಸ ಸಂಜೆ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು. ಕಾಂಗ್ರೆಸ್ ಆಡಳಿತದಲ್ಲಿ ದೇಶ ಅಥವಾ ರಾಜ್ಯ ಅಭಿವೃದ್ಧಿ ಕಂಡಿಲ್ಲ. ಬಿಜೆಪಿ ಮತೀಯ ಭಾವನೆ ಕೆರಳಿಸುವುದರಲ್ಲಿ ನಿರತವಾಗಿದೆ. ಆಡಳಿತ ನಡೆಸಿದ ಕಾಂಗ್ರೆಸ್ ಮುಖಂಡರು ಮೂರು ತಲೆಮಾರಿಗೆ ಸಾಕಾಗುಷ್ಟು ಸಂಪತ್ತು ಗಳಿಸಿದ್ದಾರೆ. […]
ಕೋಲಾರ:- ಜಿಲ್ಲೆಯಲ್ಲಿ ಆರಂಭವಾಗಿರುವ ಬೃಹತ್ ಕಂಪನಿಗಳು ತಮ್ಮ ಸಿಎಸ್‍ಆರ್ ನಿಧಿಯಿಂದ ಸರ್ಕಾರಿ ಶಾಲೆಗಳ ಸಮಗ್ರ ಅಭಿವೃದ್ದಿಗೆ ಕೊಡುಗೆ ನೀಡಲು ಮುಂದೆ ಬರಬೇಕು ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಿ.ದೇವರಾಜ್ ಮನವಿ ಮಾಡಿದರು.ತಾಲ್ಲೂಕಿನ ಕ್ಯಾಲನೂರು ಕರ್ನಾಟಕ ಪಬ್ಲಿಕ್ ಶಾಲೆಗೆ ವಿಸ್ಟ್ರಾನ್ ಕಂಪನಿ ಅಧಿಕಾರಿಗಳ ಮನವೊಲಿಸಿ ಶಾಲೆಗೆ ಕರೆತಂದಿದ್ದ ಎಸ್ಪಿಯವರು ಶಾಲೆ ಆವರಣದಲ್ಲಿ ಕಳೆದ ಬಾರಿ ಬಿದ್ದ ಮಳೆಗೆ ನೆಲಸಮವಾಗಿದ್ದ ಎರಡು ಕೊಠಡಿಗಳನ್ನು ತೋರಿಸಿ ಮಾತನಾಡುತ್ತಿದ್ದರು.ಸರ್ಕಾರಿ ಶಾಲೆಗಳಿಗೆ ಸರ್ಕಾರ ಸೌಲಭ್ಯ ನೀಡುತ್ತಿದೆ ಆದರೆ ಇಂದಿ ಸ್ಪರ್ಧಾತ್ಮಕ ಪೈಪೋಟಿಗೆ ಅನುಗುಣವಾಗಿ ಬಲವರ್ಧನೆಗೆ […]
ಶ್ರೀನಿವಾಸಪುರ: ರಾಜ್ಯದ ಅಭಿವೃದ್ಧಿಗಾಗಿ ಮತದಾರರು ರಾಷ್ಟ್ರೀಯ ಪಕ್ಷಗಳನ್ನು ತಿರಸ್ಕರಿಸಬೇಕು ಎಂದು ಮಾಜಿ ಮುಖ್ಯ ಮಂತ್ರಿ ಎಚ್.ಡಿ.ಕುಮಾರಸ್ವಾಮಿ ಹೇಳಿದರು.ತಾಲ್ಲೂಕಿನ ರೋಜೇನಹಳ್ಳಿ ಕ್ರಾಸ್ ಸಮೀಪ ಜೆಡಿಎಸ್ ಪಂಚರತ್ನ ರಥಯಾತ್ರೆ ಪ್ರಯುಕ್ತ ಮಂಗಳವಾರ ಏರ್ಪಡಿಸಿದ್ದ ಸಾರ್ವಜನಿಕ ಸಮಾರಂಭದಲ್ಲಿ ಮಾತನಾಡಿದ ಅವರು, ಜಿಲ್ಲೆಗೆ ಎತ್ತಿನ ಹೊಳೆ ನೀರಿಗೆ ಬದಲಾಗಿ, ಕೆಸಿ ವ್ಯಾಲಿ ಕೊಳಚೆ ನೀರು ಹರಿಸಲಾಗುತ್ತಿದೆ. ಅಂಥ ನೀರು ಬಳಸಿಕೊಂಡು ಬೆಳೆದ ಟೊಮೆಟೊ ತರಕಾರಿಗೆ ಬೆಲೆ ಸಿಗುತ್ತಿಲ್ಲ ಎಂದು ಹೇಳಿದರು.ರಾಜ್ಯದಲ್ಲಿ ಜೆಡಿಎಸ್ ಅಧಿಕಾರಕ್ಕೆ ಬಂದರೆ ರೈತರ ಮಕ್ಕಳು ಸ್ವಾಭಿಮಾನದಿಂದ ಬದುಕಲು ಪೂರಕವಾದ ಎಲ್ಲ […]
ಶ್ರೀನಿವಾಸಪುರ ತಾಲ್ಲೂಕಿನ ರೋಜೇನಹಳ್ಳಿ ಸಮೀಪ ಜೆಡಿಎಸ್ ಪಂಚರತ್ನ ರಥಯಾತ್ರೆ ಪ್ರಯುಕ್ತ ಮಂಗಳವಾರ ಏರ್ಪಡಿಸಿದ್ದ ಸಾರ್ವಜನಿಕ ಸಮಾರಂಭದಲ್ಲಿ ಮಾಜಿ ಮುಖ್ಯ ಮಂತ್ರಿ ಎಚ್.ಡಿ.ಕುಮಾರಸ್ವಾಮಿ ಮಾತನಾಡಿದರು.
ಶ್ರೀನಿವಾಸಪುರ: ಗಡಿ ಪ್ರದೇಶದಲ್ಲಿ ಕನ್ನಡ ಬಳಕೆಗೆ ಆದ್ಯತೆ ನೀಡಬೇಕು ಎಂದು ಜಿಲ್ಲಾ ಜೆಡಿಎಸ್ ಅಧ್ಯಕ್ಷ ಹಾಗೂ ಮಾಜಿ ಶಾಸಕ ಜಿ.ಕೆ.ವೆಂಕಟಶಿವಾರೆಡ್ಡಿ ಹೇಳಿದರು.ಪಟ್ಟಣದ ವಿವೇಕಾನಂದ ವೃತ್ತದಲ್ಲಿ ಚೈತನ್ಯ ಜನ ಜಾಗೃತಿ ವೇದಿಕೆ ವತಿಯಿಂದ ಸೋಮವಾರ ಏರ್ಪಡಿಸಿದ್ದ ಕನ್ನಡ ರಾಜ್ಯೋತ್ಸವ ಸಮಾರಂಭದಲ್ಲಿ ಧ್ವಜಾರೋಹಣ ನೆರವೇರಿಸಿ ಮಾತನಾಡಿದ ಅವರು ಭಾಷೆಯೊಂದಿಗೆ ಬದುಕುವ ಅವಕಾಶ ಕಲ್ಪಿಸಬೇಕು ಎಂದು ಹೇಳಿದರು.ಚೈತನ್ಯ ಜನ ಜಾಗೃತಿ ವೇದಿಕೆ ಸುಮಾರು 26 ಈ ವೃತ್ತದಲ್ಲಿ ಕನ್ನಡ ರಾಜ್ಯೋತ್ಸವ ಆಚರಿಸುತ್ತಿದೆ. ಗಡಿ ಭಾಗದ ಜನರಲ್ಲಿ ಕನ್ನಡ ಪ್ರೇಮ ಉಂಟುಮಾಡಲು ಶ್ರಮಿಸುತ್ತಿದೆ. […]
ಶ್ರೀನಿವಾಸಪುರ: ಮಾವು ಬೆಳೆಗಾರರಿಗೆ ಬೆಳೆ ನಷ್ಟ ಪರಿಹಾರ ನೀಡುವಂತೆ ಆಗ್ರಹಿಸಿ ಡಿ.8 ರಂದು ತಾಲ್ಲೂಕು ಬಂದ್ ಆಚರಿಸಲಾಗುವುದು ಎಂದು, ಜಿಲ್ಲಾ ಮಾವು ಬೆಳೆಗಾರರ ಸಂಘದ ಅಧ್ಯಕ್ಷ ಚಿನ್ನಪ್ಪರೆಡ್ಡಿ ಹೇಳಿದರು.ಪಟ್ಟಣದ ರಾಮ ಮಂದಿರದ ಆವರಣದಲ್ಲಿ ಕೋಲಾರ ಜಿಲ್ಲಾ ಮಾವು ಬೆಳೆಗಾರರ ಸಂಯುಕ್ತ ಹೋರಾಟ ಸಮತಿ ವತಿಯಿಂದ ಶನಿವಾರ ಏರ್ಪಡಿಸಿದ್ದ ಜಿಲ್ಲಾ ಮಾವು ಬೆಳೆಗಾರರ ಸಭೆಯಲ್ಲಿ ಮಾತನಾಡಿದ ಅವರು, ಅಂದು ಎಲ್ಲ ತಾಲ್ಲೂಕು ಕೇಂದ್ರಗಳಲ್ಲೂ ಮಾವು ಬೆಳೆಗಾರರು ಹಾಗೂ ವಿವಿಧ ರೈತ ಪರ ಸಂಘಟನೆಗಳ ಕಾರ್ಯಕರ್ತರು ಪ್ರತಿಭಟನೆ ನಡೆಸಿ ತಹಶೀಲ್ದಾರರಿಗೆ […]
ಶ್ರೀನಿವಾಸಪುರ 1 ; ಆತ್ಮವಿಶ್ವಾಸ, ಶ್ರದ್ದೆ , ಪರಿಶ್ರಮ ಸ್ವಾಲಂಭನೆ ಗುಣಾತ್ಮಕಗಳನ್ನು ರೂಡಿಸಿಕೊಂಡರೆ ಎಂಥಹ ಸಾಮಾನ್ಯ ಮನುಷ್ಯ ಕೂಡ ಸಾಧನೆಯ ಉತ್ತಂಗಕ್ಕೆ ಏರಬಹುದು ಎಂದು ಖ್ಯಾತ ಕಥೆಗಾರ ಕೇಶವರೆಡ್ಡಿ ಹಂದ್ರಾಳರು ಹೇಳಿದರು.ತಾಲೂಕಿನ ರಾಯಲ್ಪಾಡಿನ ಸರ್ಕಾರಿ ಪ್ರೌಡಶಾಲೆ ಹಾಗೂ ಪದವಿ ಪೂರ್ವ ಕಾಲೇಜಿನ ಸಂಯುಕ್ತ ಆಶ್ರಯದಲ್ಲಿ ಶನಿವಾರ ಶಾಲೆಯ 1983-84 ಸಾಲಿನ ಹಳೇ ವಿದ್ಯಾರ್ಥಿಗಳ ಸಂಘದವತಿಯಿಂದ ಕನ್ನಡರಾಜ್ಯೋತ್ಸವ ಪುರಸ್ಕøತ ಸಿ.ಜಿ.ಶ್ರೀನಿವಾಸ್‍ರವರಿಗೆ ಸನ್ಮಾನ ಹಾಗೂ ವಿದ್ಯಾರ್ಥಿಗಳಿಗೆ ಪ್ರೇರಣಾ ಕಾರ್ಯಕ್ರಮವನ್ನು ಉದ್ಗಾಟಿಸಿ ಮಾತನಾಡಿದರು.ಅರವತ್ತು, ಎಪ್ಪತ್ತು , ಎಂಬತ್ತರ ದಶಕಳಿಗೆ ಹೋಲಿಸಿದರೆ ಪ್ರಸ್ತುತ […]
ಕೋಲಾರ:- ಚುನಾವಣಾ ವರ್ಷವಾಗಿದ್ದು, ಬ್ಯಾಂಕ್ ಸಿಬ್ಬಂದಿಗೆ ಅಗ್ನಿಪರೀಕ್ಷೆಯ ಕಾಲ, ರಾಜಕೀಯ ಪಕ್ಷಗಳ ಘೋಷಣೆಗಳಿಂದಾಗಿ ಸಾಲ ವಸೂಲಾತಿ ಮೇಲೆ ಪರಿಣಾಮ ಬೀರುವ ಸಾಧ್ಯತೆ ಇದ್ದು, ಎಚ್ಚರಿಕೆಯಿಂದ ಬ್ಯಾಂಕ್ ಉಳಿಸುವ ಕೆಲಸ ಮಾಡಿ ಎಂದು ಕೋಲಾರ,ಚಿಕ್ಕಬಳ್ಳಾಪುರ ಡಿಸಿಸಿ ಬ್ಯಾಂಕ್ ಅಧ್ಯಕ್ಷ ಬ್ಯಾಲಹಳ್ಳಿ ಗೋವಿಂದಗೌಡ ಬ್ಯಾಂಕ್ ನೌಕರರು, ಅಧಿಕಾರಿಗಳಿಗೆ ತಾಕೀತು ಮಾಡಿದರು.ನಗರದ ಡಿಸಿಸಿ ಬ್ಯಾಂಕ್ ಸಭಾಂಗಣದಲ್ಲಿ ಶನಿವಾರ ಜಿಲ್ಲೆಯ ಡಿಸಿಸಿ ಬ್ಯಾಂಕಿನ ಎಲ್ಲಾ ಶಾಖೆಗಳ ಅಧಿಕಾರಿ,ಸಿಬ್ಬಂದಿಗಳ ಸಭೆಯಲ್ಲಿ ಪ್ರಗತಿ ಪರಿಶೀಲನೆ ನಡೆಸಿ ಅವರು ಮಾತನಾಡುತ್ತಿದ್ದರು.ಚುನಾವಣಾ ವರ್ಷವಾಗಿದ್ದು, ಸಾಲ ಮನ್ನಾ, ಬಡ್ಡಿಮನ್ನಾದಂತಹ ಘೋಷಣೆಗಳು […]