ಶ್ರೀನಿವಾಸಪುರ : ಶ್ರೀನಿವಾಸಪುರ ವಿಧಾನಸಭಾ ಕ್ಷೇತ್ರದಲ್ಲಿ ಬದಲಾವಣೆ ಗಾಳಿ ಬೀಸುತ್ತಿದೆ. ಮತದಾರರು ಅಭಿವೃದ್ಧಿ ಪರವಾದ ಅಭ್ಯರ್ಥಿ ಆಯ್ಕೆಗಾಗಿ ಕಾಯುತ್ತಿದ್ದಾರೆ ಎಂದು ಎಪಿಎಂಸಿ ಮಾಜಿ ಅಧ್ಯಕ್ಷ ರಾಜೇಂದ್ರ ಪ್ರಸಾದ್ ಹೇಳಿದರು. ಪಟ್ಟಣದ ಮುಳಬಾಗಲು ವೃತ್ತದ ಸಮೀಪ ಸಭಾಂಗಣದಲ್ಲಿ ಏರ್ಪಡಿಸ ಲಾಗಿದ್ದ ವಿವಿಧ ರಾಜಕೀಯ ಪಕ್ಷಗಳ ಮುಖಂಡರು ಹಾಗೂ ಕಾರ್ಯಕರ್ತರ ಸಭೆಯಲ್ಲಿ ಮಾತನಾಡಿದ ಅವರು , ನಾಲ್ಕು ದಶಕಗಳಿಂದ ಇಬ್ಬರು ವ್ಯಕ್ತಿಗಳು ಮಾತ್ರ ತಾಲ್ಲೂಕಿನ ಶಾಸಕರಾಗಿ ಆಯ್ಕೆಯಾಗುತ್ತ ಬಂದಿದ್ದಾರೆ . ಆದರೆ ಅಭಿವೃದ್ಧಿ ವಿಷಯದಲ್ಲಿ ಕ್ಷೇತ್ರ ಹಿಂದುಳಿದೆ ಎಂದು ಹಾಲಿ […]
ಶ್ರೀನಿವಾಸಪುರದಲ್ಲಿ ಬುಧವಾರ ಕೆ ಆರ್ ಎಸ್ ಪಕ್ಷದ ವತಿಯಿಂದ ರಾಜ್ಯ ಘಟಕದ ಉಪಾಧ್ಯಕ್ಷ ಎಸ್.ಎಚ್.ಲಿಂಗೇಗೌಡ ಅವರ ನೇತೃತ್ವದಲ್ಲಿ ಮಹಾ ಭಿಕ್ಷೆ ಪಾದಯಾತ್ರೆ ಏರ್ಪಡಿಸಲಾಗಿತ್ತು. ಜಿಲ್ಲಾ ಘಟಕದ ಅಧ್ಯಕ್ಷ ಇಂದ್ರ ರಾಘವರೆಡ್ಡಿ, ತಾಲ್ಲೂಕು ಅಧ್ಯಕ್ಷ ಇಮ್ರಾನ್ ಮತ್ತಿತರ ಪದಾಧಿಕಾರಿಗಳು ಇದ್ದರು
ಶ್ರೀನಿವಾಸಪುರ: ಕೋಲಾರ ಜಿಲ್ಲೆಯಲ್ಲಿ ಪಂಚರತ್ನ ರಥಯಾತ್ರೆ ಹಾಗೂ ಪ್ರವಾಸ ಯಶಸ್ವಿಯಾಗಿದ್ದು, ಐದು ವಿಧಾನಸಭಾ ಕ್ಷೇತ್ರಗಳಲ್ಲೂ ಜೆಡಿಎಸ್ ಅಭ್ಯರ್ಥಿಗಳು ಗೆಲುವು ಸಾಧಿಸುವ ವಿಶ್ವಾಸವಿದೆ ಎಂದು ಎಚ್.ಡಿ.ಕುಮಾರಸ್ವಾಮಿ ಹೇಳಿದರು.ನಕ್ಕಲಗಡ್ಡ ಗ್ರಾಮದಲ್ಲಿ ಬುಧವಾರ ಪತ್ರಿಕಾ ಗೋಷ್ಠಿಯಲ್ಲಿ ಮಾತನಾಡಿ, ಜಿಲ್ಲೆಯ ಕೆರೆಗಳಿಗೆ ಹರಿಸಲಾಗಿರುವ ಕೆಸಿ ವ್ಯಾಲಿ ಕೊಳಚೆ ನೀರು, ಹಣ್ಣು ಮತ್ತು ತರಕಾರಿ ಬೆಳೆಗಳಿಗೆ ಮಾರಕವಾಗಿದೆ. ಜನರ ಆರೊಗ್ಯ ಜನರ ಆರೋಗ್ಯ ಕೆಡಿಸುತ್ತಿದೆ ಎಂದು ಹೇಳಿದರು.ಕೆಸಿ ವ್ಯಾಲಿ ಕೊಳಚೆ ನೀರು ಶುದ್ಧೀಕರಣ ಯಂತ್ರಗಳು ಕೆಟ್ಟಿಹೋಗಿವೆ. ಶುದ್ಧೀಕರಿಸದ ನೀರನ್ನೇ ಕೆರೆಗಳಿಗೆ ಹರಿಸಲಾಗುತ್ತಿದೆ. ರಾಜ್ಯದಲ್ಲಿ ಜೆಡಿಎಸ್ […]
ತಾಯಲೂರು; ನ.23: ಚೆನ್ನೈ ಕಾರಿಡಾರ್ ರಸ್ತೆಗೆ ಭೂಮಿ ಕಳೆದುಕೊಂಡಿರುವ ರೈತರ ಜಮೀನಿನಿ ಪಿ ನಂಬರ್ ದುರಸ್ಥಿ ಮಾಡಲು ವಿಶೇಷ ತಂಡ ರಚನೆ ಮಾಡಿ ಮರ ಕಳೆದುಕೊಂಡಿರುವ ರೈತರಿಗೆ ಪರಿಹಾರ ಬಿಡುಗಡೆ ಮಾಡಬೇಕೆಂದು ನೊಂದ ರೈತರಿಂದ ಜಿಲ್ಲಾಡಳಿತಕ್ಕೆ ಆಗ್ರಹ.ಭೂಮಿ ಕಳೆದುಕೊಂಡ ಗಡಿ ಭಾಗದ ಚುಕ್ಕನಹಳ್ಳಿ ವ್ಯಾಪ್ತಿಯ ಕಾರಿಡಾರ್ ರಸ್ತೆಯ ಮೇಲೆ ನಷ್ಟ ಬೆಳೆ ಸಮೇತ ಹೋರಾಟ ಮಾಡಿ ಪರಿಹಾರಕ್ಕಾಗಿ ಆಹೋರಾತ್ರಿ ಧರಣಿ ಮಾಡುವ ಎಚ್ಚರಿಕೆಯನ್ನು ತಾಲೂಕು ಆಡಳಿತಕ್ಕೆ ನೊಂದ ರೈತ ವೆಂಕಟೇಶ್, ರಾಮೇಗೌಡ ನೀಡಿದರು.ರಸ್ತೆ ಅಭಿವೃದ್ಧಿಗೆ ನೂರಾರು ವರ್ಷಗಳಿಂದ […]
ಶ್ರೀನಿವಾಸಪುರ: ಇಲ್ಲಿ ಡಾ. ಪುನೀತ್ ರಾಜ್ಕುಮಾರ್ ಅಭಿಮಾನಿಗಳ ಬಳಗದ ವತಿಯಿಂದ ಕನ್ನಡ ರಾಜ್ಯೋತ್ಸವದ ಅಂಗವಾಗಿ ಶನಿವಾರ ರಾತ್ರಿ ಏರ್ಪಡಿಸಿದ್ದ ರಸಮಂಜರಿ ಕಾರ್ಯಕ್ರಮವನ್ನು ತಹಶೀಲ್ದಾರ್ ಶಿರಿನ್ ತಾಜ್ ಉದ್ಘಾಟಿಸಿದರು.ತುಮಕೂರು ಕಲಾವಿದರು ಹಾಗೂ ಜಿಜಿ ವೇಣ ವಿದ್ಯಾಸಂಸ್ಥೆ ವಿದ್ಯಾರ್ಥಿಗಳು ರಸಮಂಜರಿ ಕಾರ್ಯಕ್ರಮ ನಡೆಸಿಕೊಟ್ಟರು. ಚಳಿಯನ್ನು ಲೆಕ್ಕಿಸದೆ ಪ್ರೇಕ್ಷಕರು ಕಿಕ್ಕಿರಿದು ತುಂಬಿದ್ದರು. ಪುನೀತ್ ರಾಜ್ ಕುಮಾರ್ ಚಿತ್ರಗಳ ಹಾಡುಗಳು ಹಾಗೂ ಮಿಮಿಕ್ರಿ ಮೂಲಕ ಕಲಾವಿದರು ಪ್ರೇಕ್ಷಕರ ಚಪ್ಪಾಳೆ ಗಿಟ್ಟಿಸಿದರು.ಈ ಸಂದರ್ಭದಲ್ಲಿ ಸಾಹಿತಿ, ಕವಿ, ಕಲಾವಿದರು ಹಾಗೂ ಗಣ್ಯ ವ್ಯಕ್ತಿಳನ್ನು ಸನ್ಮಾನಿಸಿ, ನೆನೆಪಿನ […]
ಶ್ರೀನಿವಾಸಪುರ: ತಾಲ್ಲೂಕಿನ ಜೆಡಿಎಸ್ ಕಾರ್ಯಕರ್ತರು ನ.22 ರಂದು ಶ್ರೀನಿವಾಸಪುರ ವಿಧಾನಸಭಾ ಕ್ಷೇತ್ರದಲ್ಲಿ ಏರ್ಪಡಿಸಲಾಗಿರುವ ಪಂಚರತ್ನ ರಥಯಾತ್ರೆ ಯಶಸ್ಸಿಗೆ ಸಹಕರಿಸಬೇಕು ಎಂದು ಜಿಲ್ಲಾ ಜೆಡಿಎಸ್ ಅಧ್ಯಕ್ಷ ಹಾಗೂ ಮಾಜಿ ಶಾಸಕ ಜಿ.ಕೆ.ವೆಂಕಟಶಿವಾರೆಡ್ಡಿ ಹೇಳಿದರು.ಪಟ್ಟಣದ ಜೆಡಿಎಸ್ ಕಚೇರಿ ಸಭಾಂಗಣದಲ್ಲಿ ಭಾನುವಾರ ಏರ್ಪಡಿಸಿದ್ದ ತಾಲ್ಲೂಕು ಜೆಡಿಎಸ್ ಕಾರ್ಯಕರ್ತರ ಸಭೆಯಲ್ಲಿ ಮಾತನಾಡಿದ ಅವರು, ಪಂಚರತ್ನ ಯೋಜನೆ ಜೆಡಿಎಸ್ ಮಹತ್ವಾಕಾಂಕ್ಷಿ ಯೋಜನೆಯಾಗಿದ್ದು, ರಾಜ್ಯದ ಸರ್ವತೋಮುಖ ಪ್ರಗತಿಗೆ ಪೂರಕವಾಗಿದೆ. ಆ ಕುರಿತು ಜನರ ಗಮನ ಸೆಳೆಯುವ ಉದ್ದೇಶದಿಂದ ಪಂಚರತ್ನ ರಥಯಾತ್ರೆ ಕೈಗೊಳ್ಳಲಾಗಿದೆ ಎಂದು ಹೇಳಿದರು.ಶ್ರೀನಿವಾಸಪುರ ವಿಧಾನ […]
ಕೋಲಾರ:- ಸಹಕಾರ ರಂಗದಲ್ಲಿ ಟೀಕೆಗಳು ಸಹಜ ಆದರೆ ನಾವು ಜನರ ಹಣಕ್ಕೆ ಕಾವಲುಗಾರರಂತೆ ಕೆಲಸ ಮಾಡುತ್ತಿದ್ದೇವೆಯೇ ಎಂಬುದರ ಕುರಿತು ಆತ್ಮವಿಮರ್ಶೆ ಮಾಡಿಕೊಳ್ಳುವ ಮೂಲಕ ಸಂಸ್ಥೆ ಕಟ್ಟುವ ಕೆಲಸ ಮಾಡಬೇಕು ಎಂದು ಎಂದು ಕೋಲಾರ,ಚಿಕ್ಕಬಳ್ಳಾಪುರ ಡಿಸಿಸಿ ಬ್ಯಾಂಕ್ ಅಧ್ಯಕ್ಷ ಬ್ಯಾಲಹಳ್ಳಿ ಗೋವಿಂದಗೌಡ ಅಭಿಪ್ರಾಯಪಟ್ಟರು.ನಗರದ ಪತ್ರಕರ್ತರ ಭವನದಲ್ಲಿ ಕರ್ನಾಟಕ ರಾಜ್ಯ ಸಹಕಾರ ಮಹಾಮಂಡಳ, ಜಿಲ್ಲಾ ಸಹಕಾರ ಒಕ್ಕೂಟ, ಡಿಸಿಸಿ ಬ್ಯಾಂಕ್,ಜಿಲ್ಲಾ ಕಾರ್ಯನಿರತ ಪತ್ರಕರ್ತರ ವಿವಿಧೋದ್ದೇಶ ಸಹಕಾರ ಸಂಘ, ಕಾರಂಜಿಕಟ್ಟೆಯ ನರ್ಮದಾ ಮಹಿಳಾ ಪತ್ತಿನ ಸಹಕಾರ ಸಂಘ ಇವರ ಸಂಯುಕ್ತಾಶ್ರಯದಲ್ಲಿ ಹಮ್ಮಿಕೊಂಡಿದ್ದ […]
ಶ್ರೀನಿವಾಸಪುರ: ಪ್ರತಿಯೊಬ್ಬರೂ ಡಾ. ಪುನೀತ್ ರಾಜ್ಕುಮಾರ್ ಅವರ ಆದರ್ಶ ಪಾಲಿಸಬೇಕು ಎಂದು ಪೊಲೀಸ್ ಸರ್ಕಲ್ ಇನ್ಸ್ಪೆಕ್ಟರ್ ಜೆ.ಸಿ.ನಾರಾಯಣಸ್ವಾಮಿ ಹೇಳಿದರು.ಪಟ್ಟಣದ ಪುರಸಭಾ ಕಚೇರಿ ಸಮೀಪ ಡಾ. ಪುನೀತ್ ರಾಜ್ಕುಮಾರ್ ಅಭಿಮಾನಿಗಳ ಬಳಗದ ವತಿಯಿಂದ ಶನಿವಾರ ಏರ್ಪಡಿಸಿದ್ದ ಕನ್ನಡ ರಾಜ್ಯೋತ್ಸವ ಸಮಾರಂಭದಲ್ಲಿ ಮಾತನಾಡಿದ ಅವರು, ಪುನೀತ್ ರಾಜ್ಕುಮಾರ್ ನೆನಪಲ್ಲಿ ಕನ್ನಡ ರಾಜ್ಯೋತ್ಸವ ಆಚರಿಸುತ್ತಿರುವುದು ಸ್ತುತ್ಯಾರ್ಹ ಸಂಗತಿಯಾಗಿದೆ ಎಂದು ಹೇಳಿದರು.ಪುನೀತ್ ರಾಜ್ಕುಮಾರ್ ಅವರ ಸ್ಮರಣಾರ್ಥ ರಕ್ತದಾನ ಶಿಬಿರ ಏರ್ಪಡಿಸಲಾಗಿದೆ. ಅನ್ನ ಸಂತರ್ಪಣೆ ಮುಂತಾದ ಸಮಾಜ ಮುಖಿ ಚಟುವಟಿಕೆ ಕೈಗೊಳ್ಳಲಾಗಿದೆ. ಇಂಥ ಸೇವಾ […]
ಶ್ರೀನಿವಾಸಪುರ: ಜನರು ಅಧಿಕಾರಿಗಳ ಗ್ರಾಮ ವಾಸ್ತವ್ಯ ಕಾರ್ಯಕ್ರಮ ಸದುಪಯೋಗ ಪಡಿಸಿಕೊಳ್ಳಬೇಕುಎಂದು ತಹಶೀಲ್ದಾರ್ ಶಿರಿನ್ ತಾಜ್ ಹೇಳಿದರು.ತಾಲ್ಲೂಕಿನ ಪಾತನೆಲವಂಕಿ ಗ್ರಾಮದಲ್ಲಿ ಶನಿವಾರ ಏರ್ಪಡಿಸಿದ್ದ ಜಿಲ್ಲಾಧಿಕಾರಿ ನಡೆ ಹಳ್ಳಿ ಕಡೆ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಅವರು ಕೆಲವು ಸಮಸ್ಯೆಗಳನ್ನು ಸ್ಥಳದಲ್ಲಿಯೇ ಪರಿಹರಿಸಲು ಸಾಧ್ಯವಾಗುತ್ತದೆ. ಇನ್ನು ಕೆಲವು ಸಮಸ್ಯೆಗಳನ್ನು ಕಾಲ ಮಿತಿಯಲ್ಲಿ ಪರಿಹರಿಸಲಾಗುವುದು. ಗ್ರಾಮದ ಸ್ಮಶಾನ ಒತ್ತುವರಿ ತೆರವುಗೊಳಿಸಿ, ಶಾಂತಿ ಧಾಮ ಯೋಜನೆಯಡಿ ಅಭಿವೃದ್ಧಿಪಡಿಸಲಾಗುವುದು. ಕೆರೆಯಲ್ಲಿ ನೀರು ಮುಗಿದ ಬಳಿಕ ಕೆರೆ ಒತ್ತುವರಿ ತೆರವುಗೊಳಿಸಿ ಕೆರೆ ಅಭಿವೃದ್ಧಿ ಕೈಗೊಳ್ಳಲಾಗುವುದು. ಪಹಣಿ ಜೋಡಣೆಗೆ […]