ಶ್ರೀನಿವಾಸಪುರದ ಅಬ್ಬಾಸ್ ಬಾಬು, ನ್ಯೂ ಆಂಧ್ರ ಬಾಡಿ ಬಿಲ್ಡಿರ್ಸ್ ಅಸೋಸಿಯೇಷನ್ ವತಿಯಿಂದ ಈಚೆಗೆ ರಾಯಚೂಟಿಯಲ್ಲಿ ಏರ್ಪಡಿಸಿದ್ದ ದೇಹದಾಢ್ರ್ಯ ಸ್ಪರ್ಧೆಯಲ್ಲಿ ಪ್ರಥಮ ಸ್ಥಾನ ಪಡೆದಿದ್ದಾರೆ.
ಶ್ರೀನಿವಾಸಪುರ : ಸರ್ಕಾರಿ ನೌಕರರು ಸಂಬಳಕ್ಕಾಗಿ ಮಾತ್ರವೇ ಸೇವೆ ಸಲ್ಲಿಸಿದರೆ ಸಾಲದು ಜೊತೆಗೆ ಪ್ರಾಮಾಣಿಕತೆಯೂ ಇದ್ದರೆ ಜೀವನಪೂರ್ತಿ ಸಾರ್ಥಕತೆ ಇರುತ್ತದೆ ಅಂತಹ ಪ್ರಮಾಣಿಕ ವ್ಯಕ್ತಿಗಳನ್ನು ಸಾರ್ವಜನಿಕರು ಗೌರವಿಸುತ್ತಾರೆ ಎಂದು ಕಾರ್ಯ ಪಾಲಕ ಇಂಜನೀಯರ್ ಕೋಲಾರ ವಿಬಾಗ ಇಇ ಆರ್.ಚಂದ್ರಶೇಖರ್ ಹೇಳಿದರು.ಪಟ್ಟಣದ ಪಿಡಬ್ಲೂಡಿ ಕಛೇರಿಯಲ್ಲಿ ನಿವೃತ್ತರಾದ ಸಹಾಯಕ ಕಾರ್ಯಪಾಲಕ ಇಂಜಿನೀಯರ್ ಎಂ.ಕೆ.ಹುಸೇನ್‍ಸಾಬ್ ರವರಿಗೆ ಬೀಳ್ಕೋಡಿಗೆ ಸನ್ಮಾನ ಸಮಾರಂಭದಲ್ಲಿ ಬಾಗವಹಿಸಿ ಮಾತನಾಡಿ ಉತ್ತಮ ಕೆಲಸ ಕಾರ್ಯಗಳಿಂದ ತಮ್ಮ ಜೀವನದಲ್ಲಿ ಯಶಸ್ಸು ಪಡೆಯಲು ಸಾಧ್ಯವಿದ್ದು, ಎಂ.ಕೆ.ಹುಸೇನ್‍ಸಾಬ್ 37 ವರ್ಷಗಳ ಸರ್ಕಾರಿ ಕೆಲಸ […]
ಶ್ರೀನಿವಾಸಪುರದಲ್ಲಿ ಪುನೀತ್ ರಾಜ್‍ಕುಮಾರ್ ಪುಣ್ಯತಿಥಿ ಪ್ರಯುಕ್ತ ಅಪ್ಪು ಅಭಿಮಾನಿಗಳ ಸಂಘದಿಂದ ಶನಿವಾರ ಏರ್ಪಡಿಸಿದ್ದ ಅನ್ನದಾನ ಕಾರ್ಯಕ್ರಮಕ್ಕೆ ವಿಧಾನ ಪರಿಷತ್ ಮುಖ್ಯ ಸಚೇತಕ ಡಾ. ವೈ.ಎ.ನಾರಾಯಣಸ್ವಾಮಿ ಚಾಲನೆ ನೀಡಿದರು. ಬಿಜೆಪಿ ಜಿಲ್ಲಾ ಘಟಕದ ಅಧ್ಯಕ್ಷ ಡಾ. ಕೆ.ಎನ್.ವೇಣುಗೋಪಾಲ್, ಸಂಘದ ಅಧ್ಯಕ್ಷ ಎಸ್.ಎಚ್.ನಾರಾಯಣಮೂರ್ತಿ ಇದ್ದರು.
ಶ್ರೀನಿವಾಸಪುರ: ಕೆಂಪೇಗೌಡರ ಆಡಳಿತ ಮಾದರಿಯಾಗಿದೆ.ಎಂದು ವಿಧಾನ ಪರಿಷತ್ತಿನ ಮುಖ್ಯ ಸಚೇತಕ ಡಾ. ವೈ.ಎ.ನಾರಾಯಣಸ್ವಾಮಿ ಹೇಳಿದರು.ಪಟ್ಟಣದ ಬಾಲಾಂಜನೇಯಸ್ವಾಮಿ ದೇವಾಲಯದ ಆವರಣದಲ್ಲಿ ತಾಲ್ಲೂಕು ಆಡಳಿತ ಹಾಗೂ ವಿವಿಧ ಸಂಘ ಸಂಸ್ಥೆಗಳ ವತಿಯಿಂದ ಬೆಂಗಳೂರಿನಲ್ಲಿ ನಾಡಪ್ರಭು ಕೆಂಪೇಗೌಡರ 108 ಅಡಿ ಎತ್ತರದ ಪ್ರತಿಮೆ ಸ್ಥಾಪನೆ ಪ್ರಯುಕ್ತ ಶನಿವಾರ ಏರ್ಪಡಿಸಿದ್ದ ಮೃತ್ತಿಕೆ ಸಂಗ್ರಹ ರಥಯಾತ್ರೆ ಉದ್ಘಾಟಿಸಿ ಮಾತನಾಡಿದ ಅವರು, ವಿಮಾನ ನಿಲ್ದಾಣದ ಸಮೀಪ ಕೆಂಪೇಗೌಡರ ಪುತ್ಥಳಿ ಸ್ಥಾಪನೆ ನಾಡಿಗೆ ಹೆಮ್ಮೆಯ ಸಂಗತಿಯಾಗಿದೆ ಎಂದು ಹೇಳಿದರು.ಪುತ್ಥಳಿ ಅನಾವಣರಣ ಕಾರ್ಯಕ್ರಮ ನ.11 ರಂದು ನಡೆಯಲಿದ್ದು, ಪ್ರಧಾನಿ […]
ಶ್ರೀನಿವಾಸಪುರ: ಕೋಲಾರ ವಿಧಾನಸಭಾ ಕ್ಷೇತ್ರದಿಂದ ಮಾಜಿ ಮುಖ್ಯ ಮಂತ್ರಿ ಸಿದ್ದರಾಮಯ್ಯ ಸ್ಪರ್ಧಿಸಲಿದ್ದು, ಎಲ್ಲ ವರ್ಗದ ಜನರೂ ಅವರನ್ನು ಬೆಂಬಲಿಸಬೇಕು ಎಂದು ಶಾಸಕ ಕೆ.ಆರ್.ರಮೇಶ್ ಕುಮಾರ್ ಹೇಳಿದರು.ಪಟ್ಟಣದ ತಾಲ್ಲೂಕು ಕಚೇರಿ ಆವರಣದಲ್ಲಿ, ತಾಲ್ಲೂಕು ವಾಲ್ಮೀಕಿ ಸಂಘದ ವತಿಯಿಂದ ಶನಿವಾರ ಏರ್ಪಡಿಸಿದ್ದ ವಾಲ್ಮೀಕಿ ಜಯಂತಿ ಸಮಾರಂಭದಲ್ಲಿ ಮಾತನಾಡಿದ ಅವರು, ಸಿದ್ದರಾಮಯ್ಯ ಅವರು ಕೈಗೊಂಡ ನಿರ್ಧಾರದಿಂದಾಗಿ ಬಡವರು, ಅನ್ನ ತಿನ್ನುವಂತಾಗಿದೆ. ಬಡವರಿಗೆ ಅಕ್ಕಿ ನೀಡಿದ ಪರಿಣಾಮವಾಗಿ ಹಸಿವು ಮುಕ್ತ ಕರ್ನಾಟಕದ ಕನಸು ನನಸಾಗಿದೆ. ಬಡವರ ಪರ ಕಾಳಜಿ ಇರುವ ಸಿದ್ದರಾಮಯ್ಯ ಅವರನ್ನು […]
ಶ್ರೀನಿವಾಸಪುರ 1 : ದೀಪಾವಳಿಯ ವೇಳೆ ಒಂದು ದಿನವನ್ನು ಬಲಿಪಾಡ್ಯಮಿ ಎಂದು ಬಲಿ ಚಕ್ರವರ್ತಿಯ ನೆನಪಿಗಾಗಿ ಆಚರಿಸಲಾಗುತ್ತದೆ ಎಂದು ಮೇಧಾ ಗುರು ಜ್ಯೋತಿರ್ವಿಜ್ಞಾನ ಕೇಂದ್ರದ ಸಂಸ್ಥಾಪಕ ವೆಲ್ಲಾಲ ಸತ್ಯನಾರಾಯಣಶಾಸ್ತ್ರಿ ತಿಳಿಸಿದರು.ತಾಲೂಕಿನ ರಾಯಲ್ಪಾಡು ಗ್ರಾಮದಲ್ಲಿನ ಶ್ರೀ ಕಾಶೀವಿಶ್ವೇಶ್ವರ ದೇವಾಲಯದಲ್ಲಿ ಬುಧವಾರ ಬಲಿ ಪಾಡ್ಯಮಿ,ಬಲೀಂದ್ರ ಪೂಜಾ ಅಂಗವಾಗಿ ನಡೆದ ಗೋಪೂಜೆ ಕಾರ್ಯಕ್ರಮದಲ್ಲಿ ಮಾತನಾಡಿದರು.ಈ ದಿನ ಲಕ್ಷ್ಮೀ ಪೂಜೆ, ಗೋಪೂಜೆ ಇವುಗಳನ್ನು ಮಾಡಲಾಗುವುದು ಯಾಕೆಂದರೆ, ಬಲಿ ಚಕ್ರವರ್ತಿಯ ಸಾಮ್ರಾಜ್ಯದಲ್ಲಿ ಗೋವುಗಳಿಗೆ ಅತಿಯಾದ ಮಹತ್ವ ನೀಡಲಾಗುತ್ತಿತ್ತು, ಅದಕ್ಕೆ ಪೂಜೆಗಳನ್ನು ಆರಾಧನೆಯನ್ನು ಮಾಡಲಾಗುತ್ತಿತ್ತು. ಅದರ […]
ಶ್ರೀನಿವಾಸಪುರ 1 : ಕೆಂಪೇಗೌಡರು ಒಂದು ಜಾತಿಗೆ ಸೀಮಿತವಾಗಿಲ್ಲ. ಎಲ್ಲಾ ಜನಾಂಗಕ್ಕೆ ಬೇಕಾದವರು ಆದ್ದರಿಂದ ತಾಲ್ಲೂಕಿನ ಎಲ್ಲಾ ಜನಾಂಗದವರು ಪಕ್ಷಾತೀತವಾಗಿ ಈ ಕಾರ್ಯಕ್ರಮದಲ್ಲಿ ಭಾಗವಹಿಸ ಬೇಕು ಎಂದು ಸರ್ಕಾರದ ಮುಖ್ಯ ಸಚೇತಕ ವೈ.ಎ.ನಾರಾಯಣಸ್ವಾಮಿ ಹೇಳಿದರು.ಪಟ್ಟಣದ ತಹಶೀಲ್ದಾರ್ ಕಛೇರಿಯ ಸಭಾಂಗಣದಲ್ಲಿ ಗುರುವಾರ ನಡೆದ ಪೂರ್ವಬಾವಿ ಸಭೆಯಲ್ಲಿ ಬೆಂಗಳೂರಿನ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಬಳಿ ಅನಾವರಣಗೊಳ್ಳಲಿರುವ ನಾಡಪ್ರಭು ಕೆಂಪೇಗೌಡರ 108 ಅಡಿ ಎತ್ತರದ ಪ್ರತಿಮೆಗೆ ಮೃತ್ತಿಕೆ ಸಂಗ್ರಹ ಅಭಿಯಾನದ ಬಗ್ಗೆ ಮಾತನಾಡಿದರು.ಇದೇ ತಿಂಗಳು 29.30 ರಂದು ತಾಲೂಕಿನ 5 ಹೋಬಳಿ […]
ಶ್ರೀನಿವಾಸಪುರ: ಅನ್ಯ ಭಾಷೆಗಳ ಪ್ರಭಾವ ಇರುವ ಗಡಿ ಭಾಗದ ಜನರು ತಮ್ಮ ದಿನ ನಿತ್ಯದ ವ್ಯವಹಾರದಲ್ಲಿ ಕನ್ನಡ ಬಳಸಬೇಕು ಎಂದು ತಹಶೀಲ್ದಾರ್ ಶಿರಿನ್ ತಾಜ್ ಹೇಳಿದರು.ಪಟ್ಟಣದ ಸರ್ಕಾರಿ ಬಾಲಕಿಯರ ಪದವಿ ಪೂರ್ವ ಕಾಲೇಜು ಮೈದಾನದಲ್ಲಿ ತಾಲ್ಲೂಕು ಆಡಳಿತದ ವತಿಯಿಂದ ಏರ್ಪಡಿಸಲಾಗಿದ್ದ ಕೋಟಿ ಕಂಠ ಗಾಯನ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಅವರು, ಅತಿ ಪುರಾತನ ಭಾಷೆಗಳಲ್ಲಿ ಒಂದಾದ ಕನ್ನಡ ಒಂದು ಸುಂದರ ಹಾಗೂ ಶಕ್ತಿಯುತ ಭಾಷೆಯಾಗಿದ್ದು, ಸಾಹಿತ್ಯ ಕ್ಷೇತ್ರದಲ್ಲಿ ತನ್ನದೇ ಮುಂಚೂಣಿಯಲ್ಲಿದೆ ಎಂದು ಹೇಳಿದರು.ನಮ್ಮ ಸುಂದರ ಹಾಗೂ ಅರ್ಥಗರ್ಭಿತ […]
ಕೋಲಾರ:- ಗುರುಭವನ ನಿರ್ಮಿಸಲು ಉದ್ದೇಶಿಸಿರುವ ಹಳೆ ಮಾಧ್ಯಮಿಕ ಶಾಲಾ ಆವರಣದಲ್ಲಿನ ಶಿಥಿಲಗೊಂಡ ಐದು ಕಟ್ಟಡಗಳನ್ನು ಲೋಕೋಪಯೋಗಿ ಇಲಾಖೆ ಅನುಮತಿ ನೀಡಿರುವ ಹಿನ್ನಲೆಯಲ್ಲಿ ನೆಲಸಮಗೊಳಿಸಲು ಕ್ರಮ ಕೈಗೊಂಡಿದ್ದು, ಗುರುಭವನ ನಿರ್ಮಾಣಕ್ಕೆ ಅಗತ್ಯ ನಿವೇಶನ ಸಿದ್ದಗೊಳಿಸಲಾಗುತ್ತಿದೆ ಎಂದು ಗುರುಭವನ ಸಮಿತಿ ಅಧ್ಯಕ್ಷರೂ ಆಗಿರುವ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಉಪನಿರ್ದೇಶಕ ಕೃಷ್ಣಮೂರ್ತಿ ತಿಳಿಸಿದರು.ನಗರದ ಮಾಧ್ಯಮಿಕ ಶಾಲಾ ಆವರಣದಲ್ಲಿನ ಶಿಥಿಲಗೊಂಡ ಹಳೆ ಕಟ್ಟಡಗಳನ್ನು ಜೆಸಿಬಿ ಮೂಲಕ ನೆಲಸಮಗೊಳಿಸುವ ಕಾರ್ಯವನ್ನು ವೀಕ್ಷಿಸಿದ ನಂತರ ಅವರು ಮಾತನಾಡುತ್ತಿದ್ದರು.ಗುರುಭವನ ನಿರ್ಮಾಣ ಹಲವಾರು ವರ್ಷಗಳಿಂದ ನೆನೆಗುದಿಗೆ […]