ಶ್ರೀನಿವಾಸಪುರ: ವಿದ್ಯಾರ್ಥಿಗಳುು ಮಾದಕ ಪದಾರ್ಥ ಸೇವನೆಯಿಂದ ದೂರವಿರಬೇಕು ಎಂದು ಪೊಲೀಸ್ ಇನ್ಸ್ಪೆಕ್ಟರ್ ಜೆ.ಸಿ.ನಾರಾಯಣಸ್ವಾಮಿ ಹೇಳಿದರು.ಪಟ್ಟಣದ ಸರ್ಕಾರಿ ಬಾಲಕಿಯರ ಪದವಿಪೂರ್ವ ಕಾಲೇಜು ಮೈದಾನದಲ್ಲಿ ಪೊಲೀಸ್ ಇಲಾಖೆ ಹಾಗೂ ಪದವಿ ಪೂರ್ವ ಶಿಕ್ಷಣ ಇಲಾಖೆ ವತಿಯಿಂದ ಅಂತರ ರಾಷ್ಟ್ರೀಯ ಮಾದಕ ದ್ರವ್ಯ ವಿರೋಧಿ ದಿನಾಚರಣೆ ಅಂಗವಾಗಿ ಸೋಮವಾರ ಏರ್ಪಡಿಸಿದ್ದ ಮಾದಕ ವಸ್ತು ವಿರೋಧಿ ಜಾಥಾಗೆ ಚಾಲನೆ ನೀಡಿ ಮಾತನಾಡಿದರು.ಮಾದಕ ವಸ್ತು ಸೇವನೆ ಮತ್ತು ಅಕ್ರಮ ಮಾರಾಟ ಕಾನೂನು ಬಾಹಿರ. ನಗರ ಪ್ರದೇಶದ ಕೆಲವು ವಿದ್ಯಾರ್ಥಿಗಳು ಅಂಥ ದಂಧೆಯಲ್ಲಿ ತೊಡಗಿರುವುದು ದುರದೃಷ್ಟಕರ […]
ಶ್ರೀನಿವಾಸಪುರ: ತಾಲೂಕಿನ ಮುಸ್ಲಿಮ್ಸ್ ಎಂಪ್ಲಾಯೇಸ್ ಅಸೋಸಿಯೇಷನ್ ವತಿಯಿಂದ ಕೋಲಾರದ ನೂತನ ಜಿಲ್ಲಾಧಿಕಾರಿಗಳಾದ ಅಕ್ರಂ ಪಾಷ ಅವರನ್ನು ಭೇಟಿ ಮಾಡಿ ಅಭಿನಂದಿಸಿದರು. ನಿಯೋಗದಲ್ಲಿ ಮುಸ್ಲಿಮ್ಸ್ ಎಂಪ್ಲಾಯೇಸ್ ಅಸೋಸಿಯೇಷನ್ ಸಲೀಂ ಅಹ್ಮದ್ ಅಬ್ದುಲ್ ವಾಜಿದ್, ಮೊಹಮ್ಮದ್ ಅಲಿ, ಮೊಹಮ್ಮದ್ ಸಾದಿಕ್, ಅಕ್ಮಲ್ ಪಾಷಾ, ತಾಜ್ ಪಾಷಾ, ಸೈಯದ್ ಗೌಸ್, ನಾಸೀರ್ ಪಾಷ ಉಪಸ್ಥಿತರಿದ್ದರು.
ಶ್ರೀನಿವಾಸಪುರ: ಕನ್ಯಕಾ ಪರಮೇಶ್ವರಿ ದೇವಾಲಯದಲ್ಲಿ ಆರ್ಯವೈಶ್ಯ ಮಂಡಳಿ ಟ್ರಸ್ಟ್, ಲಲಿತಾ ಮಹಿಳಾ ಸಂಘ ಹಾಗೂ ವಾಸವಿ ಯುವಕದ ವತಿಯಿಂದ ಶನಿವಾರ ದೇವಾಲಯದ 32ನೇ ವಾರ್ಷಿಕೋತ್ಸವ ಆಚರಿಸಲಾಯಿತು. ವಾರ್ಷಿಕೋತ್ಸವ ಅಂಗವಾಗಿ ಹಲವಾರು ಧಾರ್ಮಿಕ ಹಾಗೂ ಸಾಂಸ್ಕøತಿಕ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು.ದೇವಾಲಯದಲ್ಲಿ ದೇವಿ ವಿಗ್ರಹಕ್ಕೆ ವಿಶೇಷ ಅಲಂಕಾರ ಹಾಗೂ ಅಕ್ಕಿ ಅಭಿಷೇಕ ಮಾಡಲಾಯಿತು. ಲಲಿತಾ ಮಹಿಳಾ ಮಂಡಳಿ ಸದಸ್ಯರ ವತಿಯಿಂದ ಕನ್ಯಕಾಪರಮೇಶ್ವರಿ ಕುರಿತ ಭಕ್ತಿ ಗೀತೆಗಳ ಗಾಯನ ಏರ್ಪಡಿಸಲಾಗಿತ್ತು.ಪ್ರತಿಭಾ ಪುರಸ್ಕಾರ ಕಾರ್ಯಕ್ರಮದಲ್ಲಿ ಎಸ್ಸೆಸ್ಸೆಲ್ಸಿ, ಪಿಯುಸಿ ಮತ್ತು ಪದವಿ ಪರೀಕ್ಷೆಯಲ್ಲಿ ಗಣನೀಯ ಸಾಧನೆ […]
ಶ್ರೀನಿವಾಸಪುರ: ತಾಲ್ಲೂಕಿನ ನೀಲಟೂರು ಗ್ರಾಮದಲ್ಲಿ ಶನಿವಾರ ಜಮೀನು ವಿವಾದಕ್ಕೆ ಸಂಬಂಧಿಸಿದಂತೆ ವ್ಯಕ್ತಿಯೊಬ್ಬರನ್ನು ಚಾಕುವಿನಿಂದ ಇರಿದು ಕೊಲೆ ಮಾಡಲಾಗಿದೆ.ಪ್ರಸಾದ್ (33) ಕೊಲೆಯಾದ ಯುವಕ.ಪ್ರಸಾದ್ ಮತ್ತು ಕಿರಣ್ ಕುಟುಂಬದ ಮಧ್ಯೆ ಜಮೀನು ವಿವಾದಕ್ಕೆ ಸಂಬಂಧಿಸಿದಂತೆ ಮಾವಿನ ಕಾಯಿ ಕೀಳುವ ವಿಚಾರದಲ್ಲಿ ಜಗಳವಾಗಿದೆ. ಕಿರಣ್, ಪ್ರಸಾದ್ ಮುಖಕ್ಕೆ ಕಾರದ ಪುಡಿ ಎರಚಿ ಕಬ್ಬಿಣದ ರಾಡ್ ಮತ್ತು ಚಾಕುವಿನಿಂದ ಹಲ್ಲೆ ಮಾಡಿದ್ದಾನೆ. ತೀವ್ರವಾಗಿ ಗಾಯಗೊಂಡಿದ್ದ ಪ್ರಸಾದ್ ಅವರನ್ನು ಆಂಬುಲೆನ್ಸ್ನಲ್ಲಿ ಕೋಲಾರದ ಜಾಲಪ್ಪ ಆಸ್ಪತ್ರೆಗೆ ಕೊಂಡೊಯ್ಯುವಾಗ ಮಾರ್ಗ ಮಧ್ಯದಲ್ಲಿ ಮೃತಪಟ್ಟರು ಎಂದು ಹೇಳಲಾಗಿದೆ.ಆರೋಪಿ ಕಿರಣ್ […]
ಬೆಂಗಳೂರು: ಪತ್ರಕರ್ತರು ಸದಾ ಒತ್ತಡದಲ್ಲಿರುತ್ತಾರೆ. ವೃತ್ತಿಯಲ್ಲಿ ಸಕ್ರೀಯರಾಗಬೇಕಾದರೆ, ಸದಾ ಆರೋಗ್ಯವನ್ನು ಕಾಪಾಡಬೇಕಾಗಿರುವುದು ಬಹಳ ಮುಖ್ಯ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವರಾದ ದಿನೇಶ್ ಗುಂಡುರಾವ್ ಅಭಿಪ್ರಾಯಪಟ್ಟರು. ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ (ಕೆಯುಡಬ್ಲ್ಯೂಜೆ) ಮತ್ತು ಬಿಬಿಎಂಪಿ ಸಹಯೋಗದೊಂದಿಗೆ ಪತ್ರಕರ್ತರಿಗೆ ಏರ್ಪಡಿಸಿದ್ದ ಉಚಿತ ಆರೋಗ್ಯ ತಪಾಸಣಾ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು. ಪತ್ರಕರ್ತರು ಸಮಾಜ ಮತ್ತು ಸರ್ಕಾರದ ನಡುವಿನ ಸಂಪರ್ಕ ಸೇತುವೆಯಂತೆ ಕಾರ್ಯವೆಸಗುತ್ತಿರುವ ಕಾರಣ ಶಿಸ್ತಿನ ಜೀವನವನ್ನು ಪಾಲಿಸಬೇಕಾಗುತ್ತದೆ. ಹಾಗಾಗಿ ನಿರಂತರ ಆರೋಗ್ಯ ತಪಾಸಣೆಗಳೂ ಅವರಿಗೆ ಅತ್ಯಗತ್ಯ […]
ಕೋಲಾರ, ಜೂ.24: ರೈತ ಸಂಘದ ರಾಜ್ಯ ಸಂಚಾಲನ ಸಮಿತಿ ಚುಕ್ಕಿ ನಂಜುಂಡಸ್ವಾಮಿ ಮತ್ತು ಕೆ.ಟಿ ಗಂಗಾದರ್ ರವರ ನೇತೃತ್ವದಲ್ಲಿ ಸಹಕಾರಿ ಸಂಘಗಳಲ್ಲಿರುವ ಮಹಿಳೆಯರ ಸ್ತ್ರೀ ಶಕ್ತಿ ಸಾಲ ಮನ್ನಾ ಮಾಡಬೇಕು ಮತ್ತು ಮುಂಬುರುವ ಬಜೆಟ್ನಲ್ಲಿ ರೈತ ಪರ ಯೋಜನೆಗಳನ್ನು ಜಾರಿ ಮಾಡಬೇಕೆಂದು ಉಪ ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ರವರನ್ನು ಬೇಟಿ ಮಾಡಿ ರೈತ ಸಂಘದ ರಾಜ್ಯ ಸಂಚಾಲನಾ ಸಮಿತಿಯಿಂದ ಒತ್ತಾಯಿಸಲಾಯಿತು.ಚುಕ್ಕಿ ನಂಜುಂಡಸ್ವಾಮಿ ಮಾತನಾಡಿ ಮುಂದಿನ ದಿನಗಳಲ್ಲಿ ನಮ್ಮ ರಾಜ್ಯದ ರೈತರು ಬೆಳೆಯುವ ಅಕ್ಕಿಯನ್ನು ಅನ್ನಭಾಗ್ಯ ಯೋಜನೆಗೆ ಬಳಸಿಕೊಂಡರೆ ಬಡವರಿಗೆ […]
ಶ್ರೀನಿವಾಸಪುರ: ಸ್ವಸಹಾಯ ಸಂಘಗಳ ಸದಸ್ಯರು ನಿಯಮಾನುಸಾರ ಸಂಘದ ವ್ಯವಹಾರ ನಿರ್ವಹಿಸಬೇಕು ಎಂದು ರಾಷ್ಟ್ರೀಯ ನಗರ ಜೀವನೋಪಾಯ ಅಭಿಯಾನ ಯೋಜನೆ ಜಿಲ್ಲಾ ಘಟಕದ ಮಿಷನ್ ವ್ಯವಸ್ಥಾಪಕ ಗೋವಿಂದ ಮೂರ್ತಿ ಹೇಳಿದರು.ಪಟ್ಟಣದ ಪುರಸಭಾ ಕಚೇರಿ ಸಭಾಂಗಣದಲ್ಲಿ ಶುಕ್ರವಾರ ಏರ್ಪಡಿಸಿದ್ದ ನಗರ ಜೀವನೋಪಾಯ ಅಭಿಯಾನ ಯೋಜನೆಯಡಿ ಸ್ವಸಹಾಯ ಸಂಘ ಮತ್ತು ಪ್ರದೇಶ ಮಟ್ಟದ ಒಕ್ಕೂಟದ ಸದಸ್ಯರಿಗೆ ಏರ್ಪಡಿಸಿದ್ದ ಒಂದು ದಿನದ ತರಬೇತಿ ಕಾರ್ಯಕ್ರಮದಲ್ಲಿ ಮಾತನಾಡಿದರು.ಸಹಕಾರ ಸಂಘ ಸದಸ್ಯರು ಸರ್ಕಾರದ ಸೌಲಭ್ಯ ಪಡೆದು ಜೀವನೋಪಾಯ ಕಂಡುಕೊಳ್ಳುವ ನಿಟ್ಟಿನಲ್ಲಿ ಸಾಂಘಿಕ ಪ್ರಯತ್ನ ನಡೆಸಬೇಕು. ಆ […]
ಶ್ರೀನಿವಾಸಪುರ: ಮಾನವೀಯ ಮೌಲ್ಯ ಬಿತ್ತುವ ಕಾರ್ಯ ನಿರಂತರವಾಗಿ ನಡೆಯಬೇಕು ಎಂದು ಚಿಕ್ಕಬಳ್ಳಾಪುರ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷ ಹಾಗೂ ಶಿಕ್ಷಣ ತಜ್ಞ ಕೋಡಿ ರಂಗಪ್ಪ ಹೇಳಿದರು.ಪಟ್ಟಣದ ಭೈರವೇಶ್ವರ ವಿದ್ಯಾನಿಕೇತನದ ಸಭಾಂಗಣದಲ್ಲಿ ಕೋಲಾರದ ಕೃಷಿ ಸಂಸ್ಕøತಿ ಕೇಂದ್ರದ ವತಿಯಿಂದ ಶುಕ್ರವಾರ ಏರ್ಪಡಿಸಿದ್ದ ‘ಮರೆತ ದಾರಿಗಳ ಹರಿಕಾರ ಶ್ರೀರಾಮರೆಡ್ಡಿ’ ಕೃತಿ ಬಿಡುಗಡೆ ಸಮಾರಂಭ ಉದ್ಘಾಟಿಸಿ ಅವರು ಮಾತನಾಡಿದರು.ಶಿಕ್ಷಣ ತಜ್ಞ ಎಂ.ಶ್ರೀರಾಮರೆಡ್ಡಿ ಮರೆತ ಮಾನವೀಯ ಪರಂಪರೆಗೆ ಜೀವ ಕೊಟ್ಟ ಚೈತನ್ಯ ಶೀಲ ವ್ಯಕ್ತಿ. ಮಕ್ಕಳಿಗೆ ಅಕ್ಷರದ ಜತೆಗೆ ಆಲೋಚನೆ ಕಲಿಸಿದ […]
ಶ್ರೀನಿವಾಸಪುರ, ಜೂ.22ಸರ್ಕಾರಿ ಆಸ್ಪತ್ರೆ ಮತ್ತು ಸರ್ಕಾರಿ ವೈದ್ಯರ ಬಗ್ಗೆ ಸಾರ್ವಜನಿಕರಲ್ಲಿರುವ ಅಸಡ್ಡೆ ಮನೋಭಾವ ದೂರವಾಗಬೇಕು, ವೈದ್ಯಕೀಯ ವೆಚ್ಚ ದುಬಾರಿಯಾಗಿರುವುದರಿಂದ ಹಲವಾರು ಕುಟುಂಬಗಳು ಆರ್ಥಿಕ ಸಂಕಷ್ಟಕ್ಕೆ ತುತ್ತಾಗಿದ್ದಾವೆ ಆದ್ದರಿಂದ ಯಾವುದೇ ರೀತಿಯ ಖಾಯಿಲೆಗಳಿದ್ದರೂ ಸರ್ಕಾರಿ ಆಸ್ಪತ್ರೆಗಳಲ್ಲಿ ನುರಿತ ವೈದ್ಯರು ಇದ್ದಾರೆ. ಅಂತಹ ಕಡೆ ವೈದ್ಯಕೀಯ ಸೇವೆ ಪಡೆದರೆ ಉತ್ತಮ ಎಂದು ಎ.ಪಿ.ಎಂ.ಸಿ. ಮಾಜಿ ಅಧ್ಯಕ್ಷ ಸೋಮಯಾಜಲಹಳ್ಳಿ ರಮೇಶ್ಬಾಬು ಅಭಿಪ್ರಾಯಪಟ್ಟರು.ಬೆಂಗಳೂರಿನ ಪ್ರತಿಷ್ಠಿತ ಆಸ್ಪತ್ರೆಯಾದ ಸಂಜಯಗಾಂಧಿ ಟ್ರಾಮ ಮತ್ತು ಅಸ್ಥಿ ಚಿಕಿತ್ಸಾ ಸಂಸ್ಥೆಯ ನಿರ್ದೇಶಕರಾದ ನಿರಂಜನಗೌಡ ಮತ್ತು ಸಂಸ್ಥೆಯ ಪ್ರಾದ್ಯಾಪಕ ಹಾಗೂ […]

