ಶ್ರೀನಿವಾಸಪುರ : ಯಾವ ಮಕ್ಕಳು ಆನಾರೋಗ್ಯದಿಂದ ಇರುತ್ತಾರೋ ಅವರನ್ನ ಮಾತ್ರೆ ತೆಗೆದುಕೊಳ್ಳುವಂತೆ ಬಲವಂತ ಮಾಡಬೇಡಿ ಎಂದು ಟಿಎಚ್‌ಒ ಮಹ್ಮದ್ ಷರೀಪ್ ಮಾಹಿತಿ ನೀಡಿದರು.ಪಟ್ಟಣದ ಚಿಂತಾಮಣಿ ರಸ್ತೆ ಉರ್ದು ಶಾಲೆಯ ಆವರಣದಲ್ಲಿ ಮಂಗಳವಾರ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ತಾಲೂಕು ಆರೋಗ್ಯ ಇಲಾಖೆ ಸಹಯೋಗದಲ್ಲಿ ನಮ್ಮ ಕ್ಲೀನಿಕ್ ವತಿಯಿಂದ ರಾಷ್ಟ್ರೀಯ ಜಂತುಹುಳ ನಿವಾರಣಾ ದಿನ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದರು. ಅಂತಹ ಮಕ್ಕಳಿಗೆ ಅರೋಗ್ಯವಂತರಾದ ಮೇಲೆ ವೈದ್ಯರ ಸಲಹೆಯನ್ನ ಪಡೆದು ಮಾತ್ರೆಯನ್ನು ಕೊಡುವಂತೆ ತಿಳಿಸಿದರು. ಅಪೌಷ್ಟಿಕತೆ […]

Read More

ಶ್ರೀನಿವಾಸಪುರ : ತಿಂಗಳಿಗೆ ಎರಡು ಬಾರಿ ಕುಂದುಕೊರತೆ ಸಭೆಗಳನ್ನು ಆಯೋಜಿಸಲಾಗುವುದು. ಒಂದನ್ನು ಪುರಸಭೆಗೆ ಸಂಬಂಧಿಸಿದಂತೆ ಹಾಗೂ ಮತ್ತೊಂದನ್ನು ವಿಧಾನಸಭಾ ಕ್ಷೇತ್ರಕ್ಕೆ ಸಂಬಂಧಿಸಿದಂತೆ ವಿವಿಧ ಇಲಾಖೆಗಳ ಅಧಿಕಾರಿಗಳೊಂದಿಗೆ ನಡೆಸಲಾಗುವುದು ಎಂದು ಶಾಸಕ ಜಿ.ಕೆ.ವೆಂಕಟಶಿವಾರೆಡ್ಡಿ ಹೇಳಿದರು. ಪಟ್ಟಣದ ಪುರಸಭೆ ಕಚೇರಿಯಲ್ಲಿ ಮಂಗಳವಾರ ನಡೆದ ಕುಂದುಕೊರತೆ ಸಭೆಯಲ್ಲಿ ಅವರು ಮಾತನಾಡಿದರು. ಪಟ್ಟಣದ ಚಿಂತಾಮಣಿ ವೃತ್ತದಿಂದ ಮುಳಬಾಗಿಲು ವೃತ್ತದವರೆಗೆ ರಸ್ತೆ ಅಭಿವೃದ್ಧಿಗೆ ₹5 ಕೋಟಿ ವೆಚ್ಚದಲ್ಲಿ ಕಾಮಗಾರಿ ಕೈಗೊಳ್ಳಲಾಗುವುದು ಎಂದು ತಿಳಿಸಿದರು. ಪಟ್ಟಣದಲ್ಲಿನ ರಾಜಕಾಲುವೆಗಳು ಒತ್ತುವರಿಯಾಗಿರುವುದು ಗಮನಕ್ಕೆ ಬಂದಿದ್ದು, ಅವುಗಳನ್ನು ವಶಪಡಿಸಿಕೊಂಡು ಅಭಿವೃದ್ಧಿಪಡಿಸಲು […]

Read More

ಶ್ರೀನಿವಾಸಪುರ : ಮಾಜಿ ಶಾಸಕ ಕೆ.ಆರ್. ರಮೇಶ್‌ಕುಮಾರ್ ಅವರ ಅಭಿಮಾನಿಗಳ ಬಳಗದ ವತಿಯಿಂದ ಪಟ್ಟಣದ ಸರ್ಕಾರಿ ಬಾಲಕೀಯರ ಪದವಿ ಪೂರ್ವ ಕಾಲೇಜು ಆಟದ ಮೈದಾನದಲ್ಲಿ ಹೊನಲು ಬೆಳಕಿನ ಅಂತರರಾಜ್ಯ ವಿಆರ್‌ಕೆ ವಾಲಿಬಾಲ್ ಪಂದ್ಯಾವಳಿಯನ್ನು ಆಯೋಜಿಸಲಾಗಿದೆ. ಪಂದ್ಯಾವಳಿ ಫೆಬ್ರವರಿ 14ರ ಶನಿವಾರ ಸಂಜೆ 5 ಗಂಟೆಗೆ ಆರಂಭವಾಗಲಿದ್ದು, 15ರ ಭಾನುವಾರ ಫೈನಲ್ ಪಂದ್ಯ ನಡೆಯಲಿದೆ. ಬೆಂಗಳೂರು, ಮಂಗಳೂರು ಸೇರಿದಂತೆ ಆಂಧ್ರ ಪ್ರದೇಶ ಹಾಗೂ ತಮಿಳುನಾಡಿನಿಂದ ತಂಡಗಳು ಭಾಗವಹಿಸಲಿವೆ. ಪಟ್ಟಣದ ಪಿಎಲ್‌ಡಿ ಬ್ಯಾಂಕ್ ಕಚೇರಿಯಲ್ಲಿ ಸೋಮವಾರ ಆಯೋಜಿಸಿದ್ದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ […]

Read More

ಕೋಲಾರ : ಸರ್ಕಾರದ ಸೌಲಭ್ಯಗಳು ವಿಳಂಬವಿಲ್ಲದೆ ಜನರಿಗೆ ತಲುಪಬೇಕು. ಸಾರ್ವಜನಿಕರ ಕೆಲಸಗಳಿಗೆ ಸ್ಪಂದಿಸದೆ ನಿರ್ಲಕ್ಷ್ಯ ವಹಿಸುವ ಅಧಿಕಾರಿಗಳ ವಿರುದ್ಧ ಕಠಿಣ ಶಿಸ್ತುಕ್ರಮ ಜರುಗಿಸಲಾಗುವುದು ಎಂದು ಪೌರಾಡಳಿತ ಹಾಗೂ ಹಜ್ ಸಚಿವ ರಹೀಂ ಖಾನ್ ಅವರು ಅಧಿಕಾರಿಗಳಿಗೆ ಖಡಕ್ ಎಚ್ಚರಿಕೆ ನೀಡಿದರು. ಇಂದು ಕೆಜಿಎಫ್ ನಗರಸಭೆ ಆವರಣದಲ್ಲಿ ನಡೆದ ನಗರ ಸ್ಥಳೀಯ ಸಂಸ್ಥೆಗಳ ಪ್ರಗತಿ ಪರಿಶೀಲನಾ ಸಭೆಗಳ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ರಾಜ್ಯದಲ್ಲಿ ಮಳೆಯ ಅಭಾವ ಇರುವ ಹಿನ್ನೆಲೆಯಲ್ಲಿ ಜಿಲ್ಲೆಯ ಯಾವುದೇ ಭಾಗದಲ್ಲೂ ಕುಡಿಯುವ ನೀರಿಗೆ ಹಾಹಾಕಾರ […]

Read More

ಶ್ರೀನಿವಾಸಪುರ : ತಾಲ್ಲೂಕಿನ ರೋಣುರು ಗ್ರಾಮಪಂಚಾಯಿತಿ ಅಧ್ಯಕ್ಷೆ, ಉಪಾಧ್ಯಕ್ಷರು ಹಾಗೂ ಸದಸ್ಯರ ಸಮನ್ವಯ ಮತ್ತು ಸಹಕಾರದಿಂದ ಪಂಚಾಯಿತಿಯ ವ್ಯಾಪ್ತಿಯ ಎಲ್ಲಾ ಹಳ್ಳಿಗಳ ಸಮಗ್ರ ಅಭಿವೃದ್ಧಿ ಸಾಧ್ಯವಾಗಿದೆ ಎಂದು ಪಂಚಾಯಿತಿ ಅಭಿವೃದ್ಧಿ ಅಧಿಕಾರಿ (ಪಿಡಿಒ) ಕೆ. ಮಹೇಶ್ ತಿಳಿಸಿದರು. ಸೋಮವಾರ ರೋಣುರು ಗ್ರಾಮಪಂಚಾಯಿತಿ ಕಚೇರಿಯಲ್ಲಿ ಅಧ್ಯಕ್ಷೆ, ಉಪಾಧ್ಯಕ್ಷರು ಹಾಗೂ ಸದಸ್ಯರಿಗೆ ಅಭಿನಂದನೆ ಸಲ್ಲಿಸಿ ಮಾತನಾಡಿದ ಅವರು, ನರೇಗಾ ಕಾಮಗಾರಿಗಳನ್ನು ಉತ್ತಮ ಗುಣಮಟ್ಟದಲ್ಲಿ ಅನುಷ್ಠಾನಗೊಳಿಸಿದ ಹಿನ್ನೆಲೆಯಲ್ಲಿ ರೋಣುರು ಗ್ರಾಮಪಂಚಾಯಿತಿ 2025–26 ಸಾಲಿನಲ್ಲಿ ಪ್ರಥಮ ಸ್ಥಾನ ಪಡೆದು ಉತ್ತಮ ಗ್ರಾಮ ಪಂಚಾಯಿತಿ […]

Read More

ಶ್ರೀನಿವಾಸಪುರ : ಐದು ವರ್ಷದ ಸದಸ್ಯರ ಅವಧಿ ಮುಕ್ತಯವಾದ್ದರಿಂದ ಪಂಚಾಯಿತಿ ವತಿಯಿಂದ ಎಲ್ಲಾ ಅಧ್ಯಕ್ಷ, ಉಪಾಧ್ಯಕ್ಷ ಹಾಗು ಸದಸ್ಯರಿಗೆ ಅಭಿನಂದನೆಯನ್ನ ಹಮ್ಮಿಕೊಳ್ಳಲಾಗಿದೆ ಎಂದು ಪಿಡಿಒ ಮಂಜುನಾಥರೆಡ್ಡಿ ಹೇಳಿದರು.ತಾಲೂಕಿನ ಜೆ.ತಿಮ್ಮಸಂದ್ರ ಗ್ರಾ.ಪಂ. ಕಚೇರಿಯಲ್ಲಿ ಸೋಮವಾರ ಗ್ರಾ.ಪಂ ಅಧ್ಯಕ್ಷ,ಉಪಾಧ್ಯಕ್ಷ ಹಾಗು ಸದಸ್ಯರಿಗೆ ಅಭಿನಂದಿಸಿ ಮಾತನಾಡಿದರು. ಪಂಚಾಯಿತಿಯ ಎಲ್ಲಾ ಗ್ರಾಮಗಳ ಅಭಿವೃದ್ಧಿಗಾಗಿ ಹಾಗು ಗ್ರಾಮಗಳಲ್ಲಿನ ಮೂಲಭೂತ ಸೌಲಭ್ಯಗಳಿಗೆ ಒಗ್ಗಟ್ಟಿನಿಂದ ಅಧ್ಯಕ್ಷ ಹಾಗು ಸದಸ್ಯರು ಎಲ್ಲರೂ ಸಹಕರಿಸಿರುವ ಹಿನ್ನೆಲೆಯಲ್ಲಿ ಎಲ್ಲರಿಗೂ ಕೃತಜ್ಞನತೆ ಸಲ್ಲಿಸುತ್ತೇನೆ ಎಂದರು. ಈ ಸಮಯದಲ್ಲಿ ಅಧ್ಯಕ್ಷೆ ರತ್ನಮ್ಮ.ಕೆ, ಉಪಾಧ್ಯಕ್ಷೆ ಭಾರತಮ್ಮ, […]

Read More

ಶ್ರೀನಿವಾಸಪುರ: ಪಟ್ಟಣದ  ಆಂಬಿಷನ್ ನ್ಯಾಷನಲ್ ಶಾಲೆಯಲ್ಲಿ 2025–26ನೇ ಶೈಕ್ಷಣಿಕ ಸಾಲಿನ ಅಂಗವಾಗಿ ಶನಿವಾರ ಸೃಜನಾತ್ಮಕ ಮಕ್ಕಳ ವಾರ್ಷಿಕ ಕಲಾ, ಕರಕುಶಲ ಹಾಗೂ ವಿಜ್ಞಾನ ಪ್ರದರ್ಶನವನ್ನು ಯಶಸ್ವಿಯಾಗಿ ಆಯೋಜಿಸಲಾಯಿತು. ಶಾಲೆಯ ನಿರ್ವಹಣಾ ಮಂಡಳಿ, ಶಿಕ್ಷಕ ವೃಂದ ಹಾಗೂ ವಿದ್ಯಾರ್ಥಿಗಳ ಸಹಕಾರದಲ್ಲಿ ನಡೆದ ಈ ಪ್ರದರ್ಶನದಲ್ಲಿ, ವಿದ್ಯಾರ್ಥಿಗಳು ಸಮಾಜೋಪಯೋಗಿ ಮತ್ತು ದೈನಂದಿನ ಜೀವನಕ್ಕೆ ಸಂಬಂಧಿಸಿದ ವಿವಿಧ ವಿಷಯಾಧಾರಿತ ಮಾದರಿ ಹಾಗೂ ಪ್ರದರ್ಶನಗಳನ್ನು ಸಿದ್ಧಪಡಿಸಿ ವೀಕ್ಷಕರ ಗಮನ ಸೆಳೆದರು.  ಸಂಚಾರ ನಿಯಮಗಳ ಮಹತ್ವ, ರೈಲ್ವೆ ಸಂಚಾರ ವ್ಯವಸ್ಥೆ, ಮಾನವ ಜೀರ್ಣಾಂಗ ವ್ಯವಸ್ಥೆ, […]

Read More

ಶ್ರೀನಿವಾಸಪುರ : ಈಗಾಗಲೇ ನನ್ನ ಅವಧಿಯಲ್ಲಿ ತಾಲ್ಲೂಕಿನ ವಿವಿಧ ಭಾಗಗಳಲ್ಲಿ ಅನೇಕ ಅಭಿವೃದ್ಧಿ ಕಾಮಗಾರಿಗಳಿಗೆ ಚಾಲನೆ ನೀಡಲಾಗಿದೆ. ಪಾತಕೋಟೆ ರಸ್ತೆ ಕಾಮಗಾರಿಯನ್ನು ಕೈಗೆತ್ತಿಕೊಳ್ಳಲು ಸೂಚನೆ ನೀಡಲಾಗಿದೆ. ಅಲ್ಲದೆ ಗೌಡತಾತಗಡ್ಡ ಪುಲಗೂರಕೋಟೆ ರಸ್ತೆ ಕಾಮಗಾರಿ ಪೂರ್ಣಗೊಂಡಿದೆ. ಸಾತನೂರು ಗೊಲ್ಲಪಳ್ಳಿ ಗ್ರಾಮದಲ್ಲಿ ಅನೇಕ ವರ್ಷಗಳಿಂದ ಬಾಕಿ ಉಳಿದಿದ್ದ ಕಾಮಗಾರಿಯನ್ನು ಅಂದಾಜು ₹60 ಲಕ್ಷ ವೆಚ್ಚದಲ್ಲಿ ಸಿಸಿ ರಸ್ತೆ ನಿರ್ಮಿಸುವ ಮೂಲಕ ಪೂರ್ಣಗೊಳಿಸಲಾಗಿದೆ ಎಂದು ಶಾಸಕ ಜಿ.ಕೆ. ವೆಂಕಟಶಿವಾರೆಡ್ಡಿ ಹೇಳಿದರು. ತಾಲ್ಲೂಕಿನ ಲಕ್ಷ್ಮಿಪುರ ಗ್ರಾಮದಲ್ಲಿ ಮಂಗಳವಾರ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಭೂಮಿ […]

Read More

ಕೋಲಾರ, ಫೆಬ್ರವರಿ 3 : ಸ್ವಾತಂತ್ರ‍್ಯ ಬಂದು 78 ವರ್ಷಗಳು ಕಳೆದರೂ ಕರ್ನಾಟಕ ಸೇರಿದಂತೆ ಭಾರತದ ಹಲವಾರು ರಾಜ್ಯಗಳಲ್ಲಿ ಆರೋಗ್ಯದ ಹಕ್ಕು ಇನ್ನೂ ಜಾರಿ ಆಗಿಲ್ಲ. ಭಾರತದಲ್ಲಿ ಪ್ರತಿ ವರ್ಷ ಆರೋಗ್ಯ ಚಿಕಿತ್ಸೆಯ ಖರ್ಚುಗಳಿಂದಾಗಿ 10 ಕೋಟಿ ಜನರು ಬಡತನಕ್ಕೆ ತಳ್ಳಲ್ಪಡುತ್ತಿದ್ದಾರೆ. ಆರೋಗ್ಯ ಸೇವೆ ಹಾಗು ಚಿಕಿತ್ಸೆ ವೆಚ್ಚಗಳು ದಿನೇ ದಿನೇ ದುಬಾರಿಯಾಗುತ್ತಿದ್ದು ಖರ್ಚು ಭರಿಸಲಾರದೆ ಎಷ್ಟೋ ಜನರು ಸಾವನ್ನಪ್ಪುತ್ತಿದ್ದಾರೆ. ಇಂತಹ ಪರಿಸ್ಥಿತಿಯಲ್ಲಿ, ಕೋಲಾರ ಜಿಲ್ಲಾ ಆಸ್ಪತ್ರೆಗಳು ಮತ್ತು ಸಾರ್ವಜನಿಕ ಆರೋಗ್ಯ ವ್ಯವಸ್ಥೆಯನ್ನು ಒಟ್ಟಾರೆಯಾಗಿ ಬಲಪಡಿಸುವ ಬದಲು, […]

Read More
1 14 15 16 17 18 389