ವರದಿ: ಶಬ್ಬೀರ್ ಅಹ್ಮದ್, ಶ್ರೀನಿವಾಸಪುರ ಕೋಲಾರ:- ಕೋಲಾರ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘ ಹಾಗೂ ಪತ್ರಿಕೋದ್ಯಮ ಮತ್ತು ಸಮೂಹ ಸಂವಹನ ವಿಭಾಗ, ಬೆಂಗಳೂರು ಉತ್ತರ ವಿಶ್ವವಿದ್ಯಾಲಯ, ಕೋಲಾರ ಇವರ ಸಹಯೋಗದಲ್ಲಿ ನಡೆದ ಪತ್ರಿಕಾ ದಿನಾಚರಣೆ ಕಾರ್ಯಕ್ರಮದಲ್ಲಿ ಪತ್ರಕರ್ತರ ಸಂಘ ನೀಡುವ ವಾರ್ಷಿಕ ಪ್ರಶಸ್ತಿಗೆ ಭಾಜನರಾದ ಪತ್ರಕರ್ತರನ್ನು ಬೆಂಗಳೂರು ಉತ್ತರ ವಿವಿ ಕುಲಪತಿ ನಿರಂಜನ ವಾನಳ್ಳಿ ಮತ್ತಿತರರು ಸನ್ಮಾನಿಸಿದರು.ದಿವಂಗತ ಕೆ.ಆರ್.ಕೃಷ್ಣಸ್ವಾಮಿ ಅವರ ನೆನಪಿನಲ್ಲಿ ಕೋಲಾರದ ಸಾಕ್ಷಿ ದಿನಪತ್ರಿಕೆಯ ಜಿಲ್ಲಾ ವರದಿಗಾರ ಡಿ.ಎಸ್.ಮಂಜುನಾಥ್, ಜಿ.ನಾರಾಯಣಸ್ವಾಮಿ ಅವರ ನೆನಪಿನಲ್ಲಿ ಕೆ.ಜಿ.ಎಫ್‍ನ ಸುವರ್ಣ ಟೈಮ್ಸ್ […]
ವರದಿ: ಶಬ್ಬೀರ್ ಅಹ್ಮದ್, ಶ್ರೀನಿವಾಸಪುರ ಕೋಲಾರ:- ಜಿಲ್ಲಾ ಕೇಂದ್ರದಲ್ಲಿ ಭಾರತ ಸೇವಾದಳ ಭವನ ನಿರ್ಮಾಣಕ್ಕೆ ಶಕ್ತಿ ಮೀರಿ ಶ್ರಮಿಸೋಣ ಎಂದು ಸಮಾಜ ಸೇವಕ ಸಿಎಂಆರ್ ಶ್ರೀನಾಥ್ ಹೇಳಿದರು.ನಗರದ ರೋಟರಿ ಸೆಂಟ್ರಲ್ ಭವನದಲ್ಲಿ ಶುಕ್ರವಾರ ಭಾರತ ಸೇವಾದಳ ಜಿಲ್ಲಾ ಸಮಿತಿಯ ನೂತನ ಪದಾಧಿಕಾರಿಗಳ ಆಯ್ಕೆ ಸಮಾರಂಭದಲ್ಲಿ ಸೇವಾದಳ ಜಿಲ್ಲಾ ಗೌರವಾಧ್ಯಕ್ಷರಾಗಿ ಆಯ್ಕೆಯಾದ ನಂತರ ಅವರು ಮಾತನಾಡುತ್ತಿದ್ದರು.ದೇಶದ ಸಾರ್ವಭೌಮತೆಯನ್ನು ಕಾಪಾಡಿಕೊಳ್ಳಲು ಸೇವಾದಳದ ಪಾತ್ರ ಹಿರಿದು ಎಂದು ಹೇಳಿದ ಅವರು, ಸೇವಾದಳದಂತ ಸಂಸ್ಥೆಯಲ್ಲಿ ಲಾಭಾಂಶರಹಿತವಾಗಿ ಸೇವೆಯ ಧ್ಯೇಯದೊಂದಿಗೆ ಸಮಾಜ ಸೇವೆ ಸಲ್ಲಿಸಲು ತಮಗೆ […]
ವರದಿ: ಶಬ್ಬೀರ್ ಅಹ್ಮದ್, ಶ್ರೀನಿವಾಸಪುರ ಕೋಲಾರ:- ಕೋಲಾರ ತಾಲೂಕಿನ ಪ್ರೌಢಶಾಲಾ ಸಹ ಶಿಕ್ಷಕರ ಸಂಘದ ನಿರ್ದೇಶಕರ ಚುನಾವಣೆಗೆ ನಾಮಪತ್ರ ಸಲ್ಲಿಸಿದ್ದ 15 ಮಂದಿಯಲ್ಲಿ ಆರು ಮಂದಿ ನಾಮಪತ್ರ ವಾಪಸ್ಸು ಪಡೆದ ಹಿನ್ನಲೆಯಲ್ಲಿ 9 ಮಂದಿ ಅವಿರೋಧವಾಗಿ ಆಯ್ಕೆಯಾದರು.ಸರ್ಕಾರಿ ಪ್ರೌಢಶಾಲೆಗಳಿಂದ ಆರು ಮಂದಿ ಹಾಗೂ ಅನುದಾನಿತ ಶಾಲೆಗಳಿಂದ ಮೂವರನ್ನು ಅವಿರೋಧವಾಗಿ ಆಯ್ಕೆ ಮಾಡಲಾಗಿದೆ.ಸರ್ಕಾರಿ ಪ್ರೌಢಶಾಲೆಗಳಿಂದ ಶಿವಕುಮಾರ್, ಕೆ.ನಾರಾಯಣರೆಡ್ಡಿ, ಗಂಗಾಧರಮೂರ್ತಿ, ಡಿ.ಎನ್.ಮುಕುಂದ, ಸುರೇಶ್, ರಾಜು ಆಗಿದ್ದು, ಅನುದಾನಿತ ಶಾಲೆಗಳಿಂದ ಸುಭಾಷ್ ಶಾಲೆಯ ಕೃಷ್ಣೇಗೌಡ, ತೊಟ್ಲಿ ಶಾಂತಿನಿಕೇತನ ಶಾಲೆಯವೇಣುಗೋಪಾಲಕೃಷ್ಣನಾಯಕ್, ಮಾತೃಭೂಮಿ ಶಾಲೆಯ ಬೈಯ್ಯಮ್ಮ […]
ವರದಿ: ಶಬ್ಬೀರ್ ಅಹ್ಮದ್, ಶ್ರೀನಿವಾಸಪುರ ಶ್ರೀನಿವಾಸಪುರ: ಶಿಕ್ಷಕರು ವಯೋನಿವೃತ್ತಿ ಬಳಿಕ ತಮ್ಮ ಶೈಕ್ಷಣಿಕ ಅನುಭವವನ್ನು ಸಮಾಜದ ಅಭಿವೃದ್ಧಿಗಾಗಿ ಬಳಸಬೇಕು ಎಂದು ಜಿಲ್ಲಾ ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಅಶೋಕ್ ಹೇಳಿದರು.ತಾಲ್ಲೂಕಿನ ಕುಪ್ಪಹಳ್ಳಿ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಗುರುವಾರ ಏರ್ಪಡಿಸಿದ್ದ ಬೀಳ್ಕೊಡುಗೆ ಸಮಾರಂಭದಲ್ಲಿ, ಶಾಲೆಯಲ್ಲಿ 40 ವರ್ಷಗಳ ಕಾಲ ಶಿಕ್ಷಕರಾಗಿ ಹಾಗೂ ಮುಖ್ಯ ಶಿಕ್ಷಕರಾಗಿ ಸೇವೆ ಸಲ್ಲಿಸಿ ನಿವೃತ್ತರಾದ ಕೆ.ಎಚ್.ಸಂಪತ್ ಕುಮಾರ್ ಮತ್ತು ಅವರ ಪತ್ನಿ ಎಂ.ವಿ.ಅರ್ಚನ ಅವರನ್ನು ಸನ್ಮಾನಿಸಿ ಮಾತನಾಡಿದರು.ತಾಲ್ಲೂಕು ಸರ್ಕಾರಿ ನೌಕರರ ಸಂಘದ ಅಧ್ಯಕ್ಷ […]
ವರದಿ: ಶಬ್ಬೀರ್ ಅಹ್ಮದ್, ಶ್ರೀನಿವಾಸಪುರ ಶ್ರೀನಿವಾಸಪುರ: ನ್ಯಾಯಬೆಲೆ ಅಂಗಡಿಗಳಲ್ಲಿ ಅವ್ಯವಹಾರ ತಡೆಯುವಂತೆ ಸರ್ಕಾರವನ್ನು ಆಗ್ರಹಿಸಿ ಕರ್ನಾಟಕ ರಾಷ್ಟ್ರ ಸಮತಿ ಪಕ್ಷದ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು.ಕರ್ನಾಟಕ ರಾಷ್ಟ್ರ ಸಮತಿ ಪಕ್ಷದ ಜಿಲ್ಲಾ ಘಟಕದ ಅಧ್ಯಕ್ಷೆ ಇಂದಿರಾ ರಾಘವರೆಡ್ಡಿ ಪ್ರತಿಭಟನೆ ನಿರತ ಕಾರ್ಯಕರ್ತರನ್ನು ಉದ್ದೇಶಿಸಿ ಮಾತನಾಡಿ, ಸರ್ಕಾರ ಪಟ್ಟಣ ಹಾಗೂ ಗ್ರಾಮೀಣ ಪ್ರದೇಶದ ನ್ಯಾಯಬೆಲೆ ಅಂಗಡಿಗಳಲ್ಲಿ ನಡೆಯುತ್ತಿರು ಅವ್ಯಾವಹಾರ ತಡೆಯಬೇಕು ಎಂದು ಆಗ್ರಹಿಸಿದರು.ನ್ಯಾಯಬೆಲೆ ಅಂಗಡಿ ಮಾಲೀಕರು ಕಾನೂನು ಬಾಹಿರವಾಗಿ ಗ್ರಾಹಕರಿಂದ ಹೆಚ್ಚು ಹಣ ವಸೂಲು ಮಾಡುತ್ತಿದ್ದಾರೆ. ಈ ಬಗ್ಗೆ ಪ್ರಶ್ನಿಸುವ ವ್ಯಕ್ತಿಗಳ […]
ಕೋಲಾರ:- ಭಾರತ ಸೇವಾದಳ 2022-27ರ ಜಿಲ್ಲಾ ಕಾರ್ಯಕಾರಿ ಸಮಿತಿಗೆ ಇಂದು ನಡೆದ ಚುನಾವಣೆಯಲ್ಲಿ ಹಾಲಿ ಅಧ್ಯಕ್ಷ ಕೆ.ಎಸ್.ಗಣೇಶ್ ಸೇರಿದಂತೆ ಕೆ.ಜಯದೇವ್,ಕೆ.ವಿ.ಜಗನ್ನಾಥ್,ಬಿ.ಎಂ.ಮುಭಾರಕ್,ಸಿಎಂಆರ್.ಶ್ರೀನಾಥ್,ಎಂ.ನಾಗರಾಜ್,ಜಿ.ಶ್ರೀನಿವಾಸ್ ಆಯ್ಕೆಯಾಗಿದ್ದಾರೆ.ಒಟ್ಟು 15 ಸ್ಥಾನಗಳಿಗೆ ಚುನಾವಣೆ ನಡೆಯಬೇಕಿದ್ದು, ಇದರಲ್ಲಿ ಈಗಾಗಲೇ 8 ಮಂದಿ ಅವಿರೋಧವಾಗಿ ಆಯ್ಕೆಯಾಗಿದ್ದು, ಉಳಿದ 7 ಸ್ಥಾನಗಳಿಗೆ ಮಾತ್ರ ಇಂದು ನಗರದ ಪತ್ರಕರ್ತರ ಭವನದಲ್ಲಿ ಚುನಾವಣೆ ನಡೆಯಿತು.ಸದರಿ ಚುನಾವಣೆಯಲ್ಲಿ ಒಟ್ಟು 530 ಮತಗಳ ಪೈಕಿ 345 ಮತಗಳು ಚಲಾವಣೆಯಾಗಿದ್ದು, ಅದರಲ್ಲಿ 5 ಮತ ತಿರಸ್ಕøತಗೊಂಡಿತ್ತು. ಇದರಲ್ಲಿ ಕೆಎಸ್.ಗಣೇಶ್-321, ಕೆ.ಜಯದೇವ್-301, ಕೆ.ವಿ.ಜಗನ್ನಾಥ್-301, ಬಿ.ಎಂ.ಮುಭಾರಕ್-283,ಸಿಎಂಆರ್ ಶ್ರೀನಾಥ್-283, ಎಂ.ನಾಗರಾಜ್-260, […]
ವರದಿ: ಶಬ್ಬೀರ್ ಅಹ್ಮದ್, ಶ್ರೀನಿವಾಸಪುರ ಕೋಲಾರ:- ಯಾವುದೇ ಗೊಂದಲಕ್ಕೆಡೆ ನೀಡದಂತೆ ಸೋಮವಾರ ಜಿಲ್ಲೆಯ 8 ಕೇಂದ್ರಗಳಲ್ಲಿ ಎಸ್ಸೆಸ್ಸೆಲ್ಸಿ ವಿಜ್ಞಾನ ವಿಷಯದ ಪೂರಕ ಪರೀಕ್ಷೆ ಅತ್ಯಂತ ಯಶಸ್ವಿಯಾಗಿ ನಡೆದಿದ್ದು, ಕೇವಲ 45 ಮಂದಿ ಮಾತ್ರ ಗೈರಾಗಿದ್ದರು ಎಂದು ಪರೀಕ್ಷಾ ನೋಡಲ್ ಅಧಿಕಾರಿ ಎ.ಎನ್.ನಾಗೇಂದ್ರಪ್ರಸಾದ್ ತಿಳಿಸಿದ್ದಾರೆ.ನಗರದ ಕಾರಂಜಿಕಟ್ಟೆಯ ಸುಭಾಷ್ ಪ್ರೌಢಶಾಲೆ ಪರೀಕ್ಷಾ ಕೇಂದ್ರದಲ್ಲಿ ಪರೀಕ್ಷೆಗೆ ಬರುವ ಮಕ್ಕಳಿಗೆ ಸ್ವತಃ ಥರ್ಮಲ್ ಸ್ಕ್ರೀನಿಂಗ್ ಮಾಡಿ, ಸ್ಯಾನಿಟೈಸರ್ ಹಾಕಿ ಕೇಂದ್ರಕ್ಕೆ ಬಿಡಲಾಯಿತು.ಶಾಲಾ ಪುನರಾವರ್ತಿತ ಅಭ್ಯರ್ಥಿಗಳು 84 ಮಂದಿ ಪರೀಕ್ಷೆಗೆ ನೋಂದಾಯಿಸಿದ್ದು, 73 ಮಂದಿ ಹಾಜರಾಗಿ […]
ವರದಿ: ಶಬ್ಬೀರ್ ಅಹ್ಮದ್, ಶ್ರೀನಿವಾಸಪುರ ಕೋಲಾರ:- ಜಿಲ್ಲಾ ಸಹಶಿಕ್ಷಕರ ಸಂಘದ ಚುನಾವಣೆ ಗೊಂದಲದ ಗೂಡಾಗಿದ್ದು, ಅರ್ಹ ಶಿಕ್ಷಕರನ್ನೇ ಮತದಾರರ ಪಟ್ಟಿಯಿಂದ ಕೈಬಿಟ್ಟಿರುವದು ನೂರಾರು ಶಿಕ್ಷಕರ ಆಕ್ರೋಶಕ್ಕೆ ಕಾರಣವಾಗಿದ್ದು, ಪಟ್ಟಿಯಲ್ಲಿನ ಲೋಪ ಸರಿಪಡಿಸುವವರೆಗೂ ಚುನಾವಣೆ ನಡೆಸಬಾರದು ಎಂದು ಜಿಲ್ಲಾಅನುದಾನಿತ ಶಿಕ್ಷಕರ ಸಂಘ ಆಗ್ರಹಿಸಿತು.ನಗರದ ಮೆಥೋಡಿಸ್ಟ್ ಶಾಲೆಯಲ್ಲಿ ನಡೆದ ಜಿಲ್ಲೆಯ ಅನುದಾನಿತ ಶಾಲಾ ಶಿಕ್ಷಕರ ಸಂಘದ ಪ್ರತಿನಿಧಿಗಳು, ಶಿಕ್ಷಕರು, ಈವರೆಗೂ ಅಧಿಕಾರಲ್ಲಿದ್ದ ಪದಾಧಿಕಾರಿಗಳು ತಮ್ಮ ಮರು ಆಯ್ಕೆಯಾಗಿ ಇಂತಹ ಪಕ್ಷಪಾತ ಧೋರಣೆ ಅನುಸರಿಸಿದ್ದಾರೆ ಎಂದು ಟೀಕಿಸಿದರು.ತಮಗೆ ಬೇಕಾದವರನ್ನು ಮಾತ್ರ ಮತದಾರರ ಪಟ್ಟಿಯಲ್ಲಿ […]
ವರದಿ: ಶಬ್ಬೀರ್ ಅಹ್ಮದ್, ಶ್ರೀನಿವಾಸಪುರ ಶ್ರೀನಿವಾಸಪುರ: ಬೆಂಗಳೂರು ನಿರ್ಮಾತೃ ಕೆಂಪೇಗೌಡರ ಪರಿಸರ ಪ್ರಜ್ಞೆ ಅನುಕರಣೀಯ ಎಂದು ತಹಶೀಲ್ದಾರ್ ಶರಿನ್ ತಾಜ್ ಹೇಳಿದರು.ಪಟ್ಟಣದ ತಾಲ್ಲೂಕು ಕಚೇರಿ ಆವರಣದಲ್ಲಿ ತಾಲ್ಲೂಕು ಆಡಳಿತದ ವತಿಯಿಂದ ಸೋಮವಾರ ಏರ್ಪಡಿಸಿದ್ದ ಕೆಂಪೇಗೌಡರ 513ನೇ ಜಯಂತಿ ಸಮಾರಂಭ ಉದ್ಘಾಟಿಸಿ ಅವರು ಮಾತನಾಡಿ, ಮಹಾನ್ ವ್ಯಕ್ತಿಗಳ ಜಯಂತಿ ಸಮಾರಂಭದಲ್ಲಿ ಸಮಾಜದ ಎಲ್ಲ ಸಮುದಾಯದ ಜನರು ಭಾಗವಹಿಸಿದಾಗ ಸಂಭ್ರಮದ ವಾತಾವರಣ ನಿರ್ಮಾಣವಾಗುತ್ತದೆ ಎಂದು ಅಭಿಪ್ರಾಯಪಟ್ಟರು.ಭೈರವೇಶ್ವರ ವಿದ್ಯಾನಿಕೇತನದ ನಿರ್ದೇಶಕ ಎ.ವೆಂಕಟರೆಡ್ಡಿ ಮಾತನಾಡಿ, ಜಾತ್ಯಾತೀತರು ಹಾಗೂ ಲೋಕಹಿತ ಚಿಂತಕರಾಗಿದ್ದ ಕೆಂಪೇಗೌಡರನ್ನು, ಯಾವುದೇ ಒಂದು […]