ವರದಿ: ಶಬ್ಬೀರ್ ಅಹ್ಮದ್, ಶ್ರೀನಿವಾಸಪುರ ಶ್ರೀನಿವಾಸಪುರ 1 : ವಿದ್ಯೆಯು ಕದಿಯಲಾಗದ ಸಂಪತ್ತು , ಪೋಷಕರು ತಮ್ಮ ಮಕ್ಕಳಿಗೆ ಆಸ್ತಿ , ಅಂತಸ್ತು ಮಾಡುವುದರ ಬದಲು ವಿದ್ಯೆ ಎಂಬ ಸಂಪತ್ತನ್ನು ಮಾಡಿಕೊಡಿ ಎಂದು ಇಒ ಎಸ್.ಆನಂದ್ ಕರೆ ನೀಡಿದರು.ಪಟ್ಟಣದ ನೌಕರರ ಭವನದಲ್ಲಿ ಶನಿವಾರ ಸ್ನೇಹ ಸಂಗಮ ಸೇವಾ ಟ್ರಸ್ಟ್ ವತಿಯಿಂದ ಎಸ್ಎಸ್ಎಲ್ಸಿ ವಾರ್ಷಿಕ ಪರೀಕ್ಷೆಯಲ್ಲಿ ಅತಿ ಹೆಚ್ಚು ಅಂಕಗಳನ್ನು ಪಡೆದ ವಿದ್ಯಾಥಿಗಳಿಗೆ ಪ್ರತಿಭಾ ಪುರಸ್ಕಾರ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದರು.ವಿದ್ಯೆಯಂಬದನ್ನು ಸಹೋದರರೊಂದಿಗೆ ಆಗಲಿ, ಕಳ್ಳರಿಂದಾಗಲಿ, ರಾಜನಿಂದಗಾಲಿ ಹಂಚಿಕೊಳ್ಳಲು ಸಾಧ್ಯವಿಲ್ಲ. […]
ವರದಿ: ಶಬ್ಬೀರ್ ಅಹ್ಮದ್, ಶ್ರೀನಿವಾಸಪುರ ಕೋಲಾರ:- ಜೆಡಿಎಸ್ನಿಂದ ನನ್ನನ್ನು 7 ತಿಂಗಳ ಹಿಂದೆಯೇ ಉಚ್ಛಾಟನೆ ಮಾಡಿರುವುದಾಗಿ ಸಂಸದ ಪ್ರಜ್ವಲ್ ರೇವಣ್ಣ ಹೇಳಿದ್ದಾರೆ. ಹೀಗಿರುವಾಗ ರಾಜ್ಯಸಭೆ ಚುನಾವಣೆಯಲ್ಲಿ ನಾನು ಕಾಂಗ್ರೆಸ್ ಪಕ್ಷಕ್ಕೆ ಮತ ಹಾಕಿದ್ದೇನೆ, ನಾನು ಯಾರಿಗೆ ಮತ ಹಾಕಿದರೆ ಅವರಿಗೇನು? ನನ್ನನ್ನು ಕೇಳಲು ಕುಮಾರಸ್ವಾಮಿ ಮತ್ತು ಜೆಡಿಎಸ್ ಮುಖಂಡರಿಗೆ ಯಾವ ಹಕ್ಕಿದೆ ಎಂದು ಶಾಸಕ ಕೆ.ಶ್ರೀನಿವಾಸಗೌಡ ಪ್ರಶ್ನಿಸಿದರು.ಶನಿವಾರ ನಗರದ ಪತ್ರಕರ್ತರ ಭವನದಲ್ಲಿ ಶನಿವಾರ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಜೆಡಿಎಸ್ ಪಕ್ಷದಿಂದ ಉಚ್ಛಾಟನೆ ಮಾಡಿರುವುದಾಗಿ ಅವರೇ ಹೇಳಿಕೊಂಡಿದ್ದಾರೆ. ಹೀಗಿರುವಾಗ […]
ವರದಿ: ಶಬ್ಬೀರ್ ಅಹ್ಮದ್, ಶ್ರೀನಿವಾಸಪುರ ಕೋಲಾರ,ಜೂ,10: ನಗರದ ಬಿ.ಎಂ.ಎಸ್ ಶಾಲೆಯ ವಿದ್ಯಾರ್ಥಿನಿ ಮಸೀಹ ಅಮೀನ್ ಪ್ರಸಕ್ತ ಸಾಲಿನಲ್ಲಿ ನಡೆದ ಎಸ್.ಎಸ್.ಎಲ್.ಸಿ ಪರೀಕ್ಷೆಯ ಮರು ಮೌಲ್ಯಮಾಪನದಲ್ಲಿ 614 ಅಂಕ ಗಳಿಸುವ ಮೂಲಕ ಬೆಂಗಳೂರು ಮಾಂಟೆಸ್ಸರಿ ಶಾಲೆಗೆ ಟಾಪರ್ ಆಗಿ ಹೊರಹೊಮ್ಮಿದ್ದಾರೆ.ಎಸ್.ಎಸ್.ಎಲ್.ಸಿ ಫಲಿತಾಂಶ ಪ್ರಕಟಗೊಂಡಾಗ ವಿದ್ಯಾರ್ಥಿನಿ ಮಸೀಹ ಅಮೀನ್ 596 ಅಂಕಗಳಿಸಿದ್ದು, ವಿದ್ಯಾರ್ಥಿನಿ ಮರುಮೌಲ್ಯಮಾಪನದಲ್ಲಿ ಹೆಚ್ಚುವರಿ 18 ಅಂಕಗಳನ್ನು ಗಳಿಸಿ ಒಟ್ಟರೆಯಾಗಿ 614 ಅಂಕ ಗಳಿಸುವ ಮೂಲಕ ಬೆಂಗಳೂರು ಮಾಂಟೆಸ್ಸರಿ ಶಾಲೆಗೆ ಟಾಪರ್ ಆಗಿ ಹೊರಹೊಮ್ಮಿದ್ದು, ಶಾಲಾ ಆಡಳಿತ ಮಂಡಳಿಯಿಂದ ವಿದ್ಯಾರ್ಥಿಯನ್ನು […]
ವರದಿ: ಶಬ್ಬೀರ್ ಅಹ್ಮದ್, ಶ್ರೀನಿವಾಸಪುರ ಕೋಲಾರ,ಜೂ.9: ರಾಜ್ಯಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷಕ್ಕೆ ಮತ ಹಾಕುವ ಮೂಲಕ ಶಾಸಕ ಕೆ.ಶ್ರೀನಿವಾಸಗೌಡ ಕ್ಷೇತ್ರದ ಜನರಿಗೆ ನಂಬಿಕೆ ದ್ರೋಹ ಮಾಡಿದ್ದಾರೆ. ಇವರಿಗೆ ನೈತಿಕತೆ ಇದ್ದರೆ ಈ ಕೂಡಲೇ ಶಾಸಕ ಸ್ಥಾನಕ್ಕೆ ರಾಜಿನಾಮೆ ನೀಡಬೇಕೆಂದು ತಾಲೂಕು ಜೆಡಿಎಸ್ ಅಧ್ಯಕ್ಷೆ ಕುರ್ಕಿರಾಜೇಶ್ವರಿ ಆಗ್ರಹಿಸಿದ್ದಾರೆ.ಈ ಕುರಿತು ಪತ್ರಿಕಾ ಹೇಳಿಕೆ ನೀಡಿರುವ ಅವರು ರಾಜ್ಯಸಭೆ ಚುನಾವಣೆಯಲ್ಲಿ ಜೆಡಿಎಸ್ ಪಕ್ಷದ ವಿರುದ್ದ ಕೆಲವು ಶಾಸಕರು ಮುನಿಸಿಕೊಂಡಿದ್ದರೂ ಕೂಡ ಅವರು ಜೆಡಿಎಸ್ ಅಭ್ಯರ್ಥಿಗೆ ಮತ ಚಲಾಯಿಸಿ ತಮ್ಮ ನಿಷ್ಠೆಯನ್ನ ತೋರ್ಪಡಿಸಿದ್ದಾರೆ. ಆದರೆ […]
ವರದಿ: ಶಬ್ಬೀರ್ ಅಹ್ಮದ್, ಶ್ರೀನಿವಾಸಪುರ ಕೋಲಾರ:- ಪಕ್ಷಾತೀತ ಹಾಗೂ ಜಾತ್ಯಾತೀತವಾಗಿ ಪ್ರತಿ ಹೆಣ್ಣು ಮಕ್ಕಳಿಗೂ ಬಡ್ಡಿ ರಹಿತ ಸಾಲ ಸೌಲಭ್ಯ ತಲುಪಿಸುವ ಸಂಕಲ್ಪ ಹೊಂದಿರುವ ಡಿಸಿಸಿ ಬ್ಯಾಂಕ್ಗೆ ಆಣೆ,ಪ್ರಮಾಣ ಮಾಡಿಸಿಕೊಂಡು ಸಾಲ ನೀಡುವ ದುಸ್ಥಿತಿ ಬಂದಿಲ್ಲ ಎಂದು ಕೋಲಾರ,ಚಿಕ್ಕಬಳ್ಳಾಪುರ ಡಿಸಿಸಿ ಬ್ಯಾಂಕ್ ಅಧ್ಯಕ್ಷ ಬ್ಯಾಲಹಳ್ಳಿಗೋವಿಂದಗೌಡ ತಿಳಿಸಿದರು.ನಗರದ ಡಿಸಿಸಿ ಬ್ಯಾಂಕ್ ಶಾಖೆ ಆವರಣದಲ್ಲಿ ಕೋಲಾರ ನಗರದ ಹಲವಾರು ಸ್ತ್ರೀಶಕ್ತಿ ಸಂಘಗಳಿಗೆ ಬಡ್ಡಿರಹಿತ ಸಾಲ ವಿತರಿಸಿ ಅವರು ಮಾತನಾಡುತ್ತಿದ್ದರು.ಡಿಸಿಸಿ ಬ್ಯಾಂಕ್ ಸಾಲ ನೀಡುವಾಗ ಜಾತಿ, ಪಕ್ಷ ಯಾವುದು ಎಂದು ಕೇಳಿದ ನಿದರ್ಶನವಿದ್ದರೆ […]
JANANUDI.COM NETWORK ಕುಂದಾಪುರ: ದಿನಾಂಕ 9ರಂದು ಇಲ್ಲಿನ ಭಂಡಾರ್ಕಾರ್ಸ್ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿಗಳಿಗೆ ಪರಿಚಯ ಕಾರ್ಯಕ್ರಮ ನಡೆಯಿತು.ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ್ದ ವಿಶ್ವಸ್ಥ ಮಂಡಳಿಯ ಹಿರಿಯ ಸದಸ್ಯರಾದ ಶಾಂತಾರಾಮ್ ಪ್ರಭು ಮಾತನಾಡಿ ವಿದ್ಯಾರ್ಥಿಗಳು ಕನಸು ಕಟ್ಟಿಕೊಂಡು ಕಾಲೇಜಿಗೆ ಪ್ರವೇಶ ತೆಗೆದುಕೊಂಡಿದ್ದಾರೆ. ಉನ್ನತ ಗುರಿಯನ್ನು ಕಟ್ಟಿಕೊಂಡಿದ್ದಾರೆ. ವಿದ್ಯಾರ್ಥಿಗಳು ಇಲ್ಲಿನ ಸೌಲಭ್ಯಗಳನ್ನು ಸದುಪಯೋಗ ಪಡಿಸಿಕೊಂಡು ಉನ್ನತ ಸಾಧನೆ ಮಾಡುವತ್ತ ಹೆಜ್ಜೆ ಹಾಕಬೇಕು. ಮುಂದಿನ ದಿನಗಳಲ್ಲಿ ಪಿ.ಯು.ಸಿ ನಂತರ ಹೆಚ್ಚಿನ ಶಿಕ್ಷಣ ಪಡೆಯಲು ಅವಕಾಶವಿದೆ.ಸವಾಲುಗಳನ್ನು ಎದುರಿಸಲು ತಯಾರಾಗಿ. ಜೀವನದಲ್ಲಿ ಯಶಸ್ಸನ್ನು ಪಡೆಯುವುದರೊಂದಿಗೆ […]
ವರದಿ: ಶಬ್ಬೀರ್ ಅಹ್ಮದ್, ಶ್ರೀನಿವಾಸಪುರ ಕೋಲಾರ:- ಹಿಂದಿನ ಶಾಸಕರು ಕ್ಷೇತ್ರವನ್ನು ಅಭಿವೃದ್ಧಿಪಡಿಸಿದ ಕಾರಣದಿಂದ ಪ್ರತಿಹಳ್ಳಿಯಲ್ಲು ಬದಲಾವಣೆಯ ವಾತಾವರಣ ಸೃಷ್ಟಿಯಾಗಿದೆ. ಮುಂದಿನ ಚುನಾವಣೆಯಲ್ಲಿ ಮತದಾರರು ಅಶೀರ್ವಾದ ಮಾಡಿದರೆ ಮಾದರಿ ಕ್ಷೇತ್ರವನ್ನಾಗಿ ಅಭಿವೃದ್ಧಿಪಡಿಸಲಾಗುವುದು ಎಂದು ಜೆಡಿಎಸ್ ಮುಖಂಡ ಸಿಎಂಆರ್ ಶ್ರೀನಾಥ್ ತಿಳಿಸಿದರು.ನಗರದಲ್ಲಿ ತಮ್ಮ ಕಚೇರಿಯಲ್ಲಿ ಕಳೆದ ರಾತ್ರಿ ತಾಲ್ಲೂಕಿನ ಹೊನ್ನೇಹಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ವಿವಿಧ ಗ್ರಾಮಗಳ 90ಕ್ಕೂ ಹೆಚ್ಚು ಮುಖಂಡರನ್ನು, ಯುವಕರನ್ನು ಜೆಡಿಎಸ್ ಪಕ್ಷಕ್ಕೆ ಸೇರ್ಪಡೆ ಮಾಡಿಕೊಂಡು ಮಾತನಾಡಿದರು. ನಾನು ರೈತನಾಗಿದ್ದು, ರೈತರ ಸಮಸ್ಯೆಗಳು ಏನು ಎಂಬುದು ಹತ್ತಿರದಿಂದ ಬಲ್ಲವನಾಗಿದ್ದೇನೆ. […]
ವರದಿ: ಶಬ್ಬೀರ್ ಅಹ್ಮದ್, ಶ್ರೀನಿವಾಸಪುರ ಕೋಲಾರ:- ಜಿಲ್ಲೆ ಮಾತ್ರವಲ್ಲದೆ ನೆರೆಯ ಆಂಧ್ರಪ್ರದೇಶ ಹಾಗೂ ತಮಿಳುನಾಡಿನ ಜಿಲ್ಲೆಗಳಿಂದಲೂ ಚಿಕಿತ್ಸೆಗೆ ಆಗಮಿಸುವ ಎಸ್ಎನ್ಆರ್ ಆಸ್ಪತ್ರೆಯನ್ನು ಕಾಡುತ್ತಿರುವ ವೈದ್ಯ ಸಿಬ್ಬಂದಿ ಕೊರತೆಯನ್ನು ಸರಕಾರ ಕೂಡಲೇ ನಿವಾರಿಸಬೇಕೆಂದು ರೋಟರಿ ಸೆಂಟ್ರಲ್ ಅಧ್ಯಕ್ಷ ಸಮಾಜ ಸೇವಕ ಸಿ.ಎಂ.ಆರ್ ಶ್ರೀನಾಥ್ ಆಗ್ರಹಿಸಿದರು.ನಗರದ ಎಸ್ಎನ್ಆರ್ ಆಸ್ಪತ್ರೆಯ ಆವರಣದಲ್ಲಿ ಗುರುವಾರ ವಾಹನ ನಿಲುಗಡೆ ಸೂಚನಾ ಫಲಕಗಳನ್ನು ಕೊಡುಗೆಯಾಗಿ ನೀಡಿ ಚಾಲನೆ ನೀಡಿದ ಕಾರ್ಯಕ್ರಮದಲ್ಲಿ ಅವರು ಮಾತನಾಡುತ್ತಿದ್ದರು.ಕೊರೊನಾ ಎರಡು ಮೂರು ಅಲೆಯನಂತರ ಒಂದಷ್ಟು ಆಧುನಿಕ ಸೌಲಭ್ಯಗಳು ಎಸ್ಎನ್ಆರ್ ಆಸ್ಪತ್ರೆಗೆ ಸೇರ್ಪಡೆಯಾಗಿವೆ, ಆದರೆ, […]
ವರದಿ: ಶಬ್ಬೀರ್ ಅಹ್ಮದ್ ಶ್ರೀನಿವಾಸಪುರ ಶ್ರೀನಿವಾಸಪುರ : ಕಡ್ಡಾಯ ಶಿಕ್ಷಣ ಹಕ್ಕು ( ಆರ್ಟಿಇ ) ಅಡಿಯಲ್ಲಿ ಅರ್ಜಿಗಳನ್ನು ಅಂಗಿಕರಿಸಬೇಕಾದ ಶಿಕ್ಷಣ ಇಲಾಖೆ ಅಧಿಕಾರಿಗಳು ಅರ್ಜಿಗಳನು ಅಂಗಿಕರಿಸದೆ ಎ೦ದು ಕರ್ನಾಟಕ ದಲಿತ ಯುವ ಸೇನೆ ಅಕ್ರಮ ಎಸಗಿದ್ದಾರೆ ಆರೋಪಿಸಿ , ಕರ್ನಾಟಕ ಆಡಳಿತ ಸುಧಾರಣೆ ಆಯೋಗಕ್ಕೆ ದೂರು ನೀಡಿದೆ . ಇಂದು ತಾಲೂಕಿಗೆ ಆಗಮಿಸಿದ್ದ ಸುಧಾರಣೆ ಕರ್ನಾಟಕ ಆಡಳಿತ ಆಯೋಗದ ತಂಡ ವಿವಿಧ ಕಚೇರಿಗಳಿಗೆ ಭೇಟಿ ನೀಡಿದ್ದರು . ಈ ಸಂದರ್ಭದಲ್ಲಿ ಕರ್ನಾಟಕ ದಲಿತ ಯುವ ಸೇನೆಯ […]