
ವರದಿ: ಶಬ್ಬೀರ್ ಅಹ್ಮದ್, ಶ್ರೀನಿವಾಸಪುರ ಶ್ರೀನಿವಾಸಪುರ: ಅಧಿಕಾರಿಗಳು ದರಕಾಸ್ತು ಹಾಗೂ ಪೋಡಿ ಪ್ರಕರಣಗಳನ್ನು ಶೀಘ್ರವಾಗಿ ಇತ್ಯರ್ಥಪಡಿಸಬೇಕು ಎಂದು ಶಾಸಕ ಕೆ.ಆರ್.ರಮೇಶ್ ಕುಮಾರ್ ಹೇಳಿದರು.ಪಟ್ಟಣದ ತಾಲ್ಲೂಕು ಕಚೇರಿ ಸಭಾಂಗಣದಲ್ಲಿ ಗುರುವಾರ ಏರ್ಪಡಿಸಿದ್ದ ಅಧಿಕಾರಿಗಳ ಸಭೆಯಲ್ಲಿ ಅವರು ಮಾತನಾಡಿ, ದರಕಾಸ್ತು ಜಮೀನು ಮಂಜೂರು ಮಾಡುವ ಮುನ್ನ ಸಂಬಂಧಪಟ್ಟ ಅಧಿಕರಿಗಳು ಸ್ಥಳ ಪರಿಶೀಲನೆ ನಡೆಸಬೇಕು. ಕ್ರಮಬದ್ಧವಾಗಿ ಇದ್ದರೆ ಮಾತ್ರ ಅರ್ಜಿ ಇತ್ಯರ್ಥಪಡಿಸಬೇಕು ಎಂದು ಸೂಚಿಸಿದರು.ಸ್ಮಶಾನ, ಕೆರೆ ಹಾಗೂ ಕಾಲುವೆಗಳ ಒತ್ತುವರಿ ತೆರವುಗೊಳಿಸಲು ಆದ್ಯತೆ ನೀಡಬೇಕು. ಸಾರ್ವಜನಿಕ ಆಸ್ತಿಗಳ ಒತ್ತುವರಿಯನ್ನು ಯಾವುದೇ ಮುಲಾಜಿಲ್ಲದೆ ತೆರವುಗೊಳಿಸಬೇಕು. […]

ವರದಿ: ಶಬ್ಬೀರ್ ಅಹ್ಮದ್, ಶ್ರೀನಿವಾಸಪುರ ಶ್ರೀನಿವಾಸಪುರ 3 : ಎಪಿಎಂಸಿ ಪ್ರಾಂಗಣದಲ್ಲಿ ರೈತ ಕಟ್ಟೆಯನ್ನು ರೈತರಿಗಾಗಿ ಉಳಿಸುವಲ್ಲಿ 15ವರ್ಷಗಳಿಂದ ನಿರಂತರವಾಗಿ ಹೋರಾಟಗಳನ್ನು ಮಾಡುತ್ತಲೇ ಬಂದಿದ್ದೆವು ಎಂದು ಮಾವು ಬೆಳಗಾರರ ಜಿಲ್ಲಾಧ್ಯಕ್ಷ ನೀಲೂಟುರು ಚಿನ್ನಪ್ಪರೆಡ್ಡಿ ಹೇಳಿದರು.ಪಟ್ಟಣದ ಎಪಿಎಂಸಿ ಪ್ರಾಂಗಣದಲ್ಲಿ ಮಾವು ಉತ್ಪಾದಕ ಸಂಸ್ಥೆಯು ಬುಧವಾರ ರೈತರ ಹರಾಜು ಕಟ್ಟೆಯ ಉದ್ಗಾಟನಾ ಕಾರ್ಯಕ್ರಮದಲ್ಲಿ ಮಾತನಾಡಿದರು.ಈ ವರ್ಷ ನಮ್ಮ ಮಾವು ಉತ್ಪಾದಕರ ಸಂಸ್ಥೆಯಿಂದ ಎಪಿಎಂಸಿಯ ಕಾರ್ಯದರ್ಶಿಗಳಿಗೆ ಪತ್ರದ ಮುಖೇನ ಬೇಡಿಕೆಯನ್ನು ನೀಡಲಾಗಿತ್ತು . ಇತ್ತೀಚಿಗೆ ಎಪಿಎಂಸಿ ಕಚೇರಿಯಲ್ಲಿ ಶಾಸಕರ ನೇತೃತ್ವದಲ್ಲಿ ತಾಲೂಕು ಅಧಿಕಾರಿಗಳ […]

ವರದಿ: ಶಬ್ಬೀರ್ ಅಹ್ಮದ್, ಶ್ರೀನಿವಾಸಪುರ ಶ್ರೀನಿವಾಸಪುರ: ಜನರು ತಂಬಾಕು ಪದಾರ್ಥ ಸೇವನೆಯಿಂದ ದೂರವಿರಬೇಕು ಎಂದು ಜೆಎಂಎಫ್‍ಸಿ ನ್ಯಾಯಾಲಯದ ಪ್ರಧಾನ ಸಿವಿಲ್ ನ್ಯಾಯಾಧೀಶ ಬಿ.ಕೆ.ಮನು ಹೇಳಿದರು.ಪಟ್ಟಣದ ಸಾಯಿ ವಿಜಯ ಪದವಿ ಪೂರ್ವ ಕಾಲೇಜಿನಲ್ಲಿ ತಾಲ್ಲೂಕು ಕಾನೂನು ಸೇವೆಗಳ ಸಮಿತಿ, ವಕೀಲರ ಸಂಘ, ಆರೋಗ್ಯ ಇಲಾಖೆ, ಪೊಲೀಸ್ ಇಲಾಖೆ, ಶಿಕ್ಷಣ ಮತ್ತಿತರ ಇಲಾಖೆಗಳ ವತಿಯಿಂದ ಮಂಗಳವಾರ ಏರ್ಪಡಿಸಿದ್ದ ವಿಶ್ವ ತಂಬಾಕು ನಿಷೇಧ ದಿನಾಚರಣೆ ಸಮಾರಂಭ ಹಾಗೂ ಕಾನೂನು ಅರಿವು ನೆರವು ಕಾರ್ಯ ಮಾತನಾಡಿದ ಅವರು, ತಂಬಾಕು ಸೇವನೆಯಿಂದ ಉಂಟಾಗುವ ದುಷ್ಪರಿಣಾಮಗಳ ಬಗ್ಗೆ […]

ವರದಿ: ಶಬ್ಬೀರ್ ಅಹ್ಮದ್, ಶ್ರೀನಿವಾಸಪುರ ಶ್ರೀನಿವಾಸಪುರ: ಕನ್ನಡವನ್ನು ಉಳಿಸಿ ಬೆಳೆಸಲು ಕನ್ನಡದ ಅಭಿಮಾನ ಉದಾರ ಉಳ್ಳ ಮಹನೀಯರು ದತ್ತಿನಿಧಿಯನ್ನು ಇಡಲಾಗಿದ್ದು ಅವರ ಆಶಯಗಳು ಈಡೇರಿಸುವಹಾಗೆ ನಾವು ಕನ್ನಡದ ದತ್ತಿ ಕಾರ್ಯಕ್ರಮ ಮಾಡುತ್ತಿದ್ದೇವೆ ಎಂದು ಕಸಾಪ ಜಿಲ್ಲಾದ್ಯಕ್ಷ ಎನ್.ಬಿ ಗೋಪಾಲ್ ಗೌಡ ತಿಳಿಸಿದ್ದಾರೆ.ತಾಲ್ಲೂಕಿನ ಕಲ್ಲೂರು ಆದರ್ಶ ವಿದ್ಯಾಸಂಸ್ಥೆಯಲ್ಲಿ ತಾಲ್ಲೂಕು ಕನ್ನಡ ಸಾಹಿತ್ಯ ಪರಿಷತ್ ವತಿಯಿಂದ ದತ್ತಿನಿಧಿ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಕಸಾಪ ಜಿಲ್ಲಾದ್ಯಕ್ಷ ಎನ್.ಬಿ ಗೋಪಾಲ್ ಗೌಡ ಕನ್ನಡದ ಅಭಿಮಾನಿಗಳಿಂದ ಕನ್ನಡವನ್ನು ಕಟ್ಟಿ ಉಳಿಸಿ ಬೆಳೆಸಲು ದತ್ತಿಯನ್ನು ಇಟ್ಟಿರುವ ಕನ್ನಡ […]

ವರದಿ: ಶಬ್ಬೀರ್ ಅಹ್ಮದ್, ಶ್ರೀನಿವಾಸಪುರ ಕೋಲಾರ: ಕೃಷಿ ವಿಜ್ಞಾನ ಕೇಂದ್ರ, ಕೋಲಾರ ಹಾಗೂ ಕೃಷಿ ಇಲಾಖೆ, ಆತ್ಮ ಯೋಜನೆ, ಕೋಲಾರ ಇವರ ಸಂಯುಕ್ತಾಶ್ರಯದಲ್ಲಿ ರೈತರಿಗೆ “ಗರೀಬ್ ಕಲ್ಯಾಣ ಸಮ್ಮೇಳನ ಹಾಗೂ ಪ್ರಧಾನಮಂತ್ರಿ ಕಿಸಾನ್ ಸಮ್ಮಾನ ನಿಧಿ” ನೇರ ಪ್ರಸಾರ ಕಾರ್ಯಕ್ರಮವನ್ನು ದಿನಾಂಕ 31.05.2022 ರಂದು ಕೃಷಿ ವಿಜ್ಞಾನ ಕೇಂದ್ರ, ಕೋಲಾರದಲ್ಲಿ ಹಮ್ಮಿಕೊಳ್ಳಲಾಗಿತ್ತು. ಈ ಕಾರ್ಯಕ್ರಮದಲ್ಲಿ “ಗರೀಬ್ ಕಲ್ಯಾಣ ಸಮ್ಮೇಳನ ಹಾಗೂ ಪ್ರಧಾನಮಂತ್ರಿ ಕಿಸಾನ್ ಸಮ್ಮಾನ ನಿಧಿ” ಯೋಜನೆಗೆ ಚಾಲನೆ ನೀಡಿದ ಸನ್ಮಾನ್ಯ ಪ್ರಧಾನಮಂತ್ರಿಗಳಾದ ಶ್ರೀ ನರೇಂದ್ರ ಮೋದಿಯವರು ದೇಶದ […]

ವರದಿ: ಶಬ್ಬೀರ್ ಅಹ್ಮದ್, ಶ್ರೀನಿವಾಸಪುರ ಕೋಲಾರ, ಮೇ.31: ರೈತ ನಾಯಕ ರಾಕೇಶ್ ಟಿಕಾಯಿತ್ ರವರ ಮೇಲೆ ಮಸಿ ಬಳಿದು ಹಲ್ಲೆ ಮಾಡಿ ಕೊಲೆ ಮಾಡಲು ಮುಂದಾಗಿದ್ದ ದಂದೆಕೋರರ ವಿರುದ್ದ ಗೂಂಡಾ ಕಾಯ್ದೆಯಲ್ಲಿ ಕೇಸು ದಾಖಲಿಸಬೇಕೆಂದು ರೈತ ಸಂಘದಿಂದ ಕಪ್ಪು ಬಟ್ಟೆ ದರಿಸಿ ಅಪರ ಜಿಲ್ಲಾಧಿಕಾರಿಗಳ ಮೂಲಕ ಗೃಹ ಮಂತ್ರಿಗಳಿಗೆ ಮನವಿ ನೀಡಿ ಒತ್ತಾಯಿಸಲಾಯಿತು.ರೈತ ಹೋರಾಟವನ್ನು ದಮನ ಮಾಡಲು ಕೇಂದ್ರ ಮತ್ತು ರಾಜ್ಯ ಸರ್ಕಾರ ಬಿಜೆಪಿ ಹೆಸರಿನಲ್ಲಿ ಗೂಂಡಾಗಳನ್ನು ಬಿಟ್ಟು ರೈತ ನಾಯಕರ ಮೇಲೆ ಹಲ್ಲೆ ಕೊಲೆ ಮಾಡಲು ಮುಂದಾಗಿರುವುದು […]

ವರದಿ : ಶಬ್ಬೀರ್ ಅಹ್ಮದ್ ಶ್ರೀನಿವಾಸಪುರ ಶ್ರೀನಿವಾಸಪುರ : ಪೋಷಕರು ಗುಣಮಟ್ಟದ ಶಿಕ್ಷಣ ಪಡೆಯಲು ಮಕ್ಕಳನ್ನು ಸರ್ಕಾರಿ ಶಾಲೆಗಳಿಗೆ ಸೇರಿಸಿ ಗುಣಮಟ್ಟದ ಹಾಗೂ ಮೌಲ್ಯಾಧಾರಿತ ಶಿಕ್ಷಣಕ್ಕೆ ವಿಶೇಷ ಆದ್ಯತೆ ನೀಡಿದೆ ಎಂದು ಶಾಸಕ ಕೆ.ಆರ್.ರಮೇಶ್ ಕುಮಾರ್ ತಿಳಿಸಿದರು . ಪಟ್ಟಣದ ತ್ಯಾಗರಾಜ ನಗರ ( ಬೈರೆಡ್ಡಿ ಶಾಲೆ ) ಗೆ ಸೋಮವಾರ ಬೇಟಿ ನೀಡಿ ಶಾಲೆಯ ಶೈಕ್ಷಣಿಕ ಪ್ರಗತಿ ಹಾಗು ಮೂಲಭೂತ ಸೌಲ ಭ್ಯಗಳನ್ನು ಪರಿಶೀಲಿಸಿ ಮಾತ ನಾಡಿದರು . ಶಾಲಾವರಣದಲ್ಲಿ ಶಿಥಿಲ ಗೊಂಡಿರುವ 6 ಕೊಠಡಿ […]

ವರದಿ: ಶಬ್ಬೀರ್ ಅಹ್ಮದ್, ಶ್ರೀನಿವಾಸಪುರ ಕೋಲಾರ:- ಪತ್ರಕರ್ತರು ಸ್ವಾಭಿಮಾನದಿಂದ ಬದುಕು ನಡೆಸಲು ಕೋಲಾರ ಚಿಕ್ಕಬಳ್ಳಾಪುರ ಡಿಸಿಸಿ ಬ್ಯಾಂಕ್ ರಾಜ್ಯದಲ್ಲೇ ಮೊದಲ ಬಾರಿಗೆ ಭದ್ರತೆ ರಹಿತ ಸಾಲ ಸೌಲಭ್ಯ ಒದಗಿಸಿದೆ ಎಂದು ಬ್ಯಾಂಕಿನ ಅಧ್ಯಕ್ಷ ಬ್ಯಾಲಹಳ್ಳಿ ಗೋವಿಂದಗೌಡ ತಿಳಿಸಿದರು.ನಗರದ ಡಿಸಿಸಿ ಬ್ಯಾಂಕ್ ಕಚೇರಿಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಪತ್ರಕರ್ತರು ರಚಿಸಿಕೊಂಡಿರುವ ಡಿವಿಜಿ ಪುರುಷರ ಸ್ವಸಹಾಯ ಸಂಘಕ್ಕೆ 5 ಲಕ್ಷ ರೂ ಸಾಲ ಸೌಲಭ್ಯ ಹಾಗೂ ಸಂಘದ ಎಲ್ಲಾ ಸದಸ್ಯರಿಗೂ ಎಟಿಎಂ ಕಾರ್ಡ್ ವಿತರಿಸಿ ಅವರು ಮಾತನಾಡುತ್ತಿದ್ದರು.ಪತ್ರಕರ್ತರು ಯಾರ ಮುಂದೆಯೂ ಕೈಚಾಚಬೇಕಾಗಿಲ್ಲ, ಸ್ವಾಭಿಮಾನದ […]

JANANUDI.COM NETWORK ಬೆ೦ಗಳೂರು: ಕೇರಳಕ್ಕೆ ಈಗಾಗಲೇ ಮುಂಗಾರು ಪ್ರವೇಶ ಮಾಡಿದ್ದು, ರಾಜ್ಯದಲ್ಲಿಯೂ ಇ೦ದಿನಿ೦ದ ಮಳೆ ಆರ೦ಭವಾಗುವ ಸೂಚನೆ ಲಭಿಸಿದ್ದು. ಮು೦ದಿನ ಮೂರು ದಿನಗಳಲ್ಲಿ ಕೇರಳಹಾಗೂ ಮಾಹೆ ಲಕ್ಷದ್ದೀಪದಲ್ಲಿ ಗುಡುಗು ಸಹಿತ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ. ಆ೦ಧ್ರಪ್ರದೇಶ, ತೆಲಂಗಾಣ, ಕರ್ನಾಟಕ ಹಾಗೂ ತಮಿಳುನಾಡು, ಪುದುಚೇರಿ ಹಾಗೂ ಕಾರೈಕಲ್‌ನಲ್ಲಿ ಮಳೆಯಾಗುವ ಸಾಧ್ಯತೆ ಇದೆ ಎ೦ದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಈ ಬಾರಿ ವಾಡಿಕೆಗಿ೦ತ ಮೂರು ದಿನ ಮೊದಲು ಮುಂಗಾರು ಕೇರಳಕ್ಕೆ ಪ್ರವೇಶಿಸಿದ್ದು, ಮು೦ದಿನ 3-4 ದಿನಗಳ […]