ವರದಿ: ಶಬ್ಬೀರ್ ಅಹ್ಮದ್, ಶ್ರೀನಿವಾಸಪುರ ಕೋಲಾರ ಮಾ.23 : ಕೋಲಾರ ನಗರದಲ್ಲಿ ಕುಡಿಯುವ ನೀರಿನ ಅಭಾವ ಉಂಟಾಗಿದ್ದು, ಕೂಡಲೇ ಸರಿಪಡಿಸಬೇಕು ಹಾಗೂ 32 ವಾರ್ಡುಗಳ ಕಸವನ್ನು ಕಸ ವಿಂಗಡನೆ ಮಾಡದೆ ಸುರಿಯುತ್ತಿರುವದನ್ನು ಖಂಡಿಸಿ ಪ್ರೊ. ನಂಜುಂಡಸ್ವಾಮಿ ಸ್ಥಾಪಿತ ಕರ್ನಾಟಕ ರಾಜ್ಯ ರೈತ ಹಾಗೂ ಹಸಿರು ಸೇನೆ ಮನವಿ ಪತ್ರವನ್ನು ಕೋಲಾರ ನಗರಸಭೆಯ ಆಯುಕ್ತರಿಗೆ ಸಲ್ಲಿಸಿದರು.ರಾಜ್ಯ ಯುವ ಘಟಕದ ಅಧ್ಯಕ್ಷ ಕಲ್ವಮಂಜಲಿ ರಾಮುಶಿವಣ್ಣ ಮಾತನಾಡಿ ಕೋಲಾರ ನಗರದಲ್ಲಿ ಜನರಿಗೆ ಬೇಸಿಗೆಯಲ್ಲಿ ಕುಡಿಯುವ ನೀರಿನ ಅಭಾವ ಉಂಟಾಗುತ್ತಿದ್ದು, ನೀರಿನ ಅಭಾವವನ್ನು ನೀಗಿಸಲು […]
ಮನವಿಗೆ ಸಚಿವ ಸೋಮಣ್ಣ ಸ್ಪಂದನೆ-ತುರ್ತು ಸಭೆ-ಕುಟುಂಬಗಳ ಸರ್ವೆಗೆ ಸೂಚನೆ ವರದಿ: ಶಬ್ಬೀರ್ ಅಹ್ಮದ್, ಶ್ರೀನಿವಾಸಪುರ ಕೋಲಾರ:- ಜಿಲ್ಲೆಯ ಕೆಜಿಎಫ್ ನಗರದ ಸಂಕಷ್ಟದ ಬದುಕು ನಡೆಸುತ್ತಿರುವ ಕೊಳಚೆ ಪ್ರದೇಶಗಳ ನಿವಾಸಿಗಳಿಗೆ ಸ್ವಂತ ಸೂರು ಒದಗಿಸುವ ಮೂಲಕ ನಗರಕ್ಕೆ ಹೊಸ ರೂಪ ನೀಡುವ ನಿಟ್ಟಿನಲ್ಲಿ ಅಗತ್ಯ ಕ್ರಮ ಕೈಗೊಳ್ಳುವುದಾಗಿ ರಾಜ್ಯ ವಸತಿ ಸಚಿವ ಸೋಮಣ್ಣ ಭರವಸೆ ನೀಡಿ, ಕುಟುಂಬಗಳ ಸಮಗ್ರ ಸರ್ವೇ ನಡೆಸಲು ಸೂಚನೆ ನೀಡಿದರು.ವಿಧಾನಸಭಾ ಅಧಿವೇಶನದಲ್ಲಿ ಕೆಜಿಎಫ್ ನಗರದ ಕೊಳಚೆ ಪ್ರದೇಶದ ನಿವಾಸಿಗಳು, ಗಣಿ ಕಾರ್ಮಿಕ ಕುಟುಂಬಗಳಿರುವ ಬಡಾವಣೆಗಳ ದುಸ್ಥಿತಿ […]
ವರದಿ: ಶಬ್ಬೀರ್ ಅಹ್ಮದ್, ಶ್ರೀನಿವಾಸಪುರ ಶ್ರೀನಿವಾಸಪುರ: ತಾಲ್ಲೂಕಿನ ಕಿರುವಾರ ಗ್ರಾಮದಲ್ಲಿ ನಿರ್ಮಿಸಲಾಗಿರುವ ಸೀತಾ ಕೋದಂಡರಾಮ ದೇವಾಲಯದಲ್ಲಿ ಬುಧವಾರ ವಿಗ್ರಹ ಪ್ರತಿಷ್ಠಾಪನೆ ಮಾಡಲಾಯಿತು.ನಾಲ್ಕು ದಿನಗಳಿಂದ ದೇವಾಲಯದ ಆವರಣದಲ್ಲಿ ವಿವಿಧ ಧಾರ್ಮಿಕ ಹಾಗೂ ಸಾಂಸ್ಕøತಿಕ ಕಾರ್ಯಗಳನ್ನು ನಡೆಸಿದ ಬಳಿಕ ಗಣಪತಿ, ಸುಬ್ರಮಣ್ಯಸ್ವಾಮಿ, ಸೀತಾ, ರಾಮ, ಲಕ್ಷ್ಮಣ ಹಾಗೂ ಹನುಮ ವಿಗ್ರಹಗಳ ಸ್ಥಿರ ಬಿಂಬ ಪ್ರತಿಷ್ಠಾಪನೆ ಮಾಡಲಾಯಿತು.ಇದಕ್ಕೂ ಮೊದಲು ದೇವಾಲಯದಲ್ಲಿ ಗಣಪತಿ ಪೂಜೆ, ಪುಣ್ಯಾಹ ವಾಚನ, ಪ್ರಾಯಶ್ಚಿತ್ತ ಸಂಕಲ್ಪ, ರಕ್ಷಾ ಬಂಧನ, ಮೃತ್ಸಂಗ್ರಹಣ, ಅಂಕುರಾರ್ಪಣೆ, ಕಳಶಾರಾಧನೆ, ಅಗ್ನಿಪ್ರತಿಷ್ಠೆ, ಪಂಚದ್ರವ್ಯ ಸ್ಥಾಪನೆ, ವೇದ ಪಾರಾಯಣ, […]
ವರದಿ: ಶಬ್ಬೀರ್ ಅಹ್ಮದ್, ಶ್ರೀನಿವಾಸಪುರ ಶ್ರೀನಿವಾಸಪುರ: ಸೌಲಭ್ಯಗಳನ್ನು ಸದುಪಯೋಗ ಪಡಿಸಿಕೊಂಡು ಉತ್ತಮ ಗುಣಮಟ್ಟದ ಹಾಲು ಉತ್ಪಾದಿಸಬೇಕು ಎಂದು ಕೋಚಿಮುಲ್ ನಿರ್ದೇಶಕ ಎನ್.ಹನುಮೇಶ್ ಹೇಳಿದರು.ಪಟ್ಟಣದ ಕೋಚಿಮುಲ್ ಶಿಬಿರ ಕಚೇರಿ ಸಬಾಂಗಣದಲ್ಲಿ ಬುಧವಾರ ಏರ್ಪಡಿಸಿದ್ದ ಹಾಲು ಉತ್ಪಾದಕರ ಸಹಕಾರ ಸಂಘಗಳು ಹಾಗೂ ನಿವೃತ್ತ ನೌಕರರಿಗೆ ಸೌಲಭ್ಯ ವಿತರಣಾ ಸಮಾರಂಭದಲ್ಲಿ ಮಾತನಾಡಿದ ಅವರು, ಹಾಲು ಉತ್ಪಾದನೆ ರೈತರ ಉಪ ಕಸುಬಾಗಿ ಯಶಸ್ವಿಯಾಗಿದೆ. ಹೈನೋದ್ಯಮ ರೈತರ ನಿಜವಾದ ಬೆನ್ನೆಲುಬಾಗಿ ಮಾರ್ಪಟ್ಟಿದೆ. ಅದನ್ನು ಶ್ರದ್ಧೆಯಿಂದ ಮಾಡಬೇಕು. ವೈಜ್ಞಾನಿಕ ಪದ್ಧತಿ ಅನುಸರಿಸಿ ರಾಸು ಪಾಲನೆ ಮಾಡಬೇಕು ಎಂದು […]
ವರದಿ: ಶಬ್ಬೀರ್ ಅಹ್ಮದ್, ಶ್ರೀನಿವಾಸಪುರ ಕೋಲಾರ ಮಾ. 22 : ರಾಜ್ಯದ ಮುಖ್ಯಮಂತ್ರಿ ಕೆ.ಸಿ.ರೆಡ್ಡಿರವರ ಹುಟ್ಟೂರಿನಲ್ಲಿ ನಿವಾಸಿ ವೈದ್ಯರಿಲ್ಲ, ಆಂಬ್ಯಲೆನ್ಸ್ ಸೇವೆ ಇಲ್ಲ. ನಿವಾಸಿ ವೈದ್ಯರನ್ನು ಕೂಡಲೇ ನೇಮಿಸಬೇಕು ಮತ್ತು ಅಂಬ್ಯುಲೆನ್ಸ್ ವ್ಯವಸ್ಥೆಯನ್ನು ಕಲ್ಪಿಸಲು, ಕ್ಯಾಸಂಬಳ್ಳಿ ಹೋಬಳಿಯ ಸುತ್ತಮುತ್ತಲಿನ 130 ಹಳ್ಳಿಗಳ ವಿದ್ಯಾರ್ಥಿಗಳಿಗೆ ಪ್ರಾಥಮಿಕ ಹಂತದಿಂದ ಉನ್ನತ ವ್ಯಾಸಂಗಕ್ಕೆ ಒಂದೇ ಸೂರಿನಡಿ ವ್ಯವಸ್ಥೆ ಕಲ್ಪಿಸಿಕೊಡಲು ಸರ್ವೇ ನಂ.121ರಲ್ಲಿ 21ಎಕರೆ 30 ಗುಂಟಿಯನ್ನು ಕಾಯ್ದಿರಿಸಿ 50 ಕೋಟಿ ಅನುದಾನ ಬಿಡುಗಡೆ ಮಾಡಲು ಜಿಲ್ಲಾಡಳಿತವು ಸರ್ಕಾರಕ್ಕೆ ಶಿಫಾರರಸ್ಸು ಮಾಡಲು ಒತ್ತಾಯಿಸಿ ಜಿಲ್ಲಾಧಿಕಾರಿಗಳಿಗೆ […]
ವರದಿ: ಶಬ್ಬೀರ್ ಅಹ್ಮದ್, ಶ್ರೀನಿವಾಸಪುರ ಶ್ರೀನಿವಾಸಪುರ: ಯುವ ಸಮುದಾದಯ ಬಡವರ ಕಣ್ಣೀರು ಒರೆಸುವ ಕಾರ್ಯದಲ್ಲಿ ತೊಡಗಬೇಕು ಎಂದು ತಾಲ್ಲೂಕು ಡಾ. ಪುನೀತ್ ರಾಜ್‌ಕುಮಾರ್ ಬಳಗದ ಅಧ್ಯಕ್ಷ ಶ್ರೀನಿವಾಸ್ ಹೇಳಿದರು.ಪಟ್ಟಣದಲ್ಲಿ ಸೋಮವಾರ ಡಾ. ಪುನೀತ್ ರಾಜ್‌ಕುಮಾರ್ ಅಭಿಮಾನಿ ಬಳಗದ ವತಿಯಿಂದ ಏರ್ಪಡಿಸಿದ್ದ ಪುನೀತ್ ರಾಜ್‌ಕುಮಾರ್ ಅವರ ೪೭ನೇ ಜನ್ಮ ದಿನಾಚರಣೆ ಸಮಾರಂಭದಲ್ಲಿ ಮಾತನಾಡಿ, ಪುನೀತ್ ಅಪ್ರತಿಮ ಕಲಾವಿದರಷ್ಟೇ ಅಲ್ಲದೆ ಗುಪ್ತ ದಾನಿಯಾಗಿದ್ದರು. ಅವರ ಸಾಮಾಜಿಕ ಕಳಕಳಿ ಬಡವರ ಬದುಕಿಗೆ ಆಸರೆಯಾಗಿತ್ತು. ಅಕ್ಷರ ಕಲಿಕೆಗೆ ದಾರಿಯಾಗಿತ್ತು ಎಂದು ಹೇಳಿದರು.ಪುನೀತ್ ರಾಜ್‌ಕುಮಾರ್ ಜನ್ಮದಿನಾಚರಣೆ […]
ವರದಿ: ಶಬ್ಬೀರ್ ಅಹ್ಮದ್, ಶ್ರೀನಿವಾಸಪುರ ಶ್ರೀನಿವಾಸಪುರ: ವಿದಾನ ಪರಿಷತ್ತಿನಲ್ಲಿ ಸರ್ಕಾರದ ಮುಖ್ಯ ಸಚೇತಕರಾಗಿ ಆಯ್ಕೆಯಾದ ಡಾ|| ವೈ.ಎ ನಾರಾಯಣಸ್ವಾಮಿ ಪಟ್ಟಣಕ್ಕೆ ಆಗಮಿಸಿದ ವೇಳೆಯಲ್ಲಿ ತಾಲ್ಲೂಕು ಬಿಜೆಪಿ ಘಟಕದ ವತಿಯಿಂದ ಅದ್ದೂರಿ ಸ್ವಾಗತ ಮಾಡಲಾಯಿತು.ಪಟ್ಟಣದ ಇಂದ್ರಾಭವನ ವೃತ್ತದಲ್ಲಿ ತಾಲ್ಲೂಕು ಬಿಜೆಪಿ ಘಟಕದ ಮುಖಂಡರು ಡಾ|| ವೈ.ಎ ನಾರಾಯಣಸ್ವಾಮಿ ರವರನ್ನು ಅದ್ದೂರಿಯಾಗಿ ಸ್ವಾಗತಿಸಿ ಪಟಾಕಿ ಸಿಡಿಸಿ ಸಿಹಿ ಹಂಚಿ ಗೌರವಿಸಿ ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಜನಪರ ಕಾರ್ಯಕ್ರಮಗಳು ಮತ್ತು ಬಿಜೆಪಿ ಪಕ್ಷದ ವರಿಷ್ಠರಿಗೆ ಜೈಕಾರಗಳನ್ನು ಕೂಗಿ ಸಂಬ್ರಮಿಸಿ ವೈ.ಎ ನಾರಾಯಣಸ್ವಾಮಿ […]
ವರದಿ: ಶಬ್ಬೀರ್ ಅಹ್ಮದ್, ಶ್ರೀನಿವಾಸಪುರ ಕೋಲಾರ,ಮ.19-ನಗರದ ಕ್ಲಾಕ್ ಟವರ್ ನಲ್ಲಿ ನಮ್ಮ ಹೆಮ್ಮೆಯ ರಾಷ್ಟ್ರ ಧ್ವಜದ ಹಾರಾಟದಿಂದ ಜಿಲ್ಲೆಯಲ್ಲಿ 74 ವರ್ಷಗಳ ಬಹುದಿನಗಳ ಪ್ರಯತ್ನ, ಹೋರಾಟ ಮತ್ತು ಕನಸು ಇಂದು ನನಸಾಗಿದೆಯೆಂದು ಸಂಸದ ಎಸ್. ಮುನಿಸ್ವಾಮಿ ಸಂತಸ ವ್ಯಕ್ತಪಡಿಸಿದರು.ನಗರದ ಪ್ರಾವಾಸಿ ಮಂದಿರದಲ್ಲಿ ಪತ್ರಕರ್ತ ರೊಂದಿಗೆ ಮಾತಾನಾಡಿದ ತ್ರಿವರ್ಣ ಧ್ವಜ ಹಾರಿಸಲು ಪರೋಕ್ಷವಾಗಿ ಪ್ರತ್ಯೋಕ್ಷವಾಗಿ ಸಹಾಕರ ನೀಡಿದ ರಾಜ್ಯ ಸರ್ಕಾರ,ಜಿಲ್ಲಾ ಪೊಲೀಸ್ ಇಲಾಖೆಗೆ, ಜಿಲ್ಲಾಡಳಿತಕ್ಕೆ ಹಾಗೂ ನಗರಸಭೆ ಸಿಬ್ಬಂದಿಗೆ ಮತ್ತು ಸಹಕರಿಸಿದ ಎಲ್ಲಾ ಧರ್ಮದ ನಾಗರಿಕರಿಗೆ ಧನ್ಯವಾದಗಳನ್ನು ತಿಳಿಸಿದರಲ್ಲದೆ,ನಾವೆಲ್ಲರೂ ಭಾರತೀಯರು […]
ವರದಿ: ಶಬ್ಬೀರ್ ಅಹ್ಮದ್, ಶ್ರೀನಿವಾಸಪುರ ಶ್ರೀನಿವಾಸಪುರ: ಅಬಕಾರಿ ಇಲಾಖೆ ಅಧಕಾರಿಗಳು ತಾಲ್ಲೂಕಿನ ತಾಡಿಗೋಳ್ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕಮತಂಪಲ್ಲಿ ಕ್ರಾಸ್ ಸಮೀಪ ಕಾರೊಂದರಲ್ಲಿ ಅಕ್ರಮವಾಗಿ ಮದ್ಯ ಸಾಗಿಸುತ್ತಿದ್ದ ವ್ಯಕ್ತಿಯೊಬ್ಬನನ್ನು ಬಂಧಿಸಿ, ಮದ್ಯ ವಶಪಡಿಸಿಕೊಂಡಿದ್ದಾರೆ.ಕಾರಿನಲ್ಲಿ ಅಕ್ರಮವಾಗಿ ಮದ್ಯ ಸಾಗಿಸುತ್ತಿದ್ದ ಬಗ್ಗೆ ಸಿಕ್ಕಿದ ಖಚಿತ ಸುಳಿವಿನ ಮೇರೆಗೆ, ಶುಕ್ರವಾರ ದಾಳಿ ನಡೆಸಿದ ಅಬಕಾರಿ ಇಲಾಖೆ ಅಧಿಕಾರಿಗಳು ಕಾರಿನಲ್ಲಿದ ಸುರೇಶ್ ಎನ್ನುವ ವ್ಯಕ್ತಿಯನ್ನು ಬಂಧಿಸಿ, 34.56 ಲೀಟರ್ ಮದ್ಯ ಹಾಗೂ 54.6 ಲೀಟರ್ ಬಿಯರ್ ವಶಪಡಿಸಿಕೊಳ್ಳಲಾಗಿದೆ ಎಂದು ಅಬಕಾರಿ ಇಲಾಖೆ ಅಧಿಕಾರಿಗಳು ತಿಳಿಸಿದ್ದಾರೆ.ಅಬಕಾರಿ […]