
ವರದಿ: ಶಬ್ಬೀರ್ ಅಹ್ಮದ್, ಶ್ರೀನಿವಾಸಪುರ ಶ್ರೀನಿವಾಸಪುರ: ಜನರು ಆರೋಗ್ಯದ ಕಡೆ ಹೆಚ್ಚು ಗಮನ ಕೊಡಬೇಕು ಎಂದು ರೋಟರಿ ಶ್ರೀನಿವಾಸಪುರ ಸೆಂಟ್ರಲ್ ಅಧ್ಯಕ್ಷ ಡಾ. ವೈ.ವಿ.ವೆಂಕಟಾಚಲ ಹೇಳಿದರು.ತಾಲ್ಲೂಕಿನ ಯಲ್ದೂರು ಗ್ರಾಮದ ಶ್ರೀನಿವಾಸ ಪಬ್ಲಿಕ್ ಶಾಲೆ ಆವರಣದಲ್ಲಿ ವಿವಿಧ ರೋಟರಿ ಕ್ಲಬ್ ಘಟಕಗಳಿಂದ ಶನಿವಾರ ಏರ್ಪಡಿಸಿದ್ದ ಉಚಿತ ಆರೋಗ್ಯ ತಪಾಸಣಾ ಶಿಬಿರದಲ್ಲಿ ಮಾತನಾಡಿ, ಬಡ ರೋಗಿಗಳಿಗೆ ಉತ್ತಮ ಗುಣಮಟ್ಟದ ಚಿಕಿತ್ಸೆ ನೀಡುವ ಉದ್ದೇಶದಿಂದ ಸೇವಾ ಸಂಸ್ಥೆಗಳು ಉಚಿತ ಆರೋಗ್ಯ ಶಿಬಿರಗಳನ್ನು ಏರ್ಪಡಿಸುತ್ತವೆ. ಅರ್ಹ ಫಲಾನುಭವಿಗಳು ಅವುಗಳ ಪ್ರಯೋಜನ ಪಡೆದುಕೊಳ್ಳಬೇಕು ಎಂದು ಹೇಳಿದರು.ರೋಟರಿ […]

ವರದಿ: ಶಬ್ಬೀರ್ ಅಹ್ಮದ್, ಶ್ರೀನಿವಾಸಪುರ ಕೋಲಾರ: ಕೇವಲ 4 ವರ್ಷ ವಯಸ್ಸಿನ ಪುಟಾಣಿ, ಕೋಲಾರ ಜಿಲ್ಲೆಯ ಬಂಗಾರಪೇಟೆ ತಾಲ್ಲೂಕಿನ ವೇಣುಗೋಪಾಲಪುರ ಗ್ರಾಮದ ಎನ್.ವರ್ಷಿತ ಗೌಡ ಇಂಡಿಯಾ ಬುಕ್ ಆಫ್ ರೆಕಾಡ್ರ್ಸ್ನಲ್ಲಿ ಸ್ಥಾನ ಪಡೆಯುವ ಮೂಲಕ ಹೊಸ ದಾಖಲೆ ಬರೆದು ಆಶ್ಚರ್ಯ ಸೃಷ್ಟಿಸಿದ್ದಾಳೆ.ಇತ್ತೀಚಿಗೆ ನಡೆದ ಸ್ಪರ್ಧೆಯಲ್ಲಿ ಇಂಡಿಯಾ ಬುಕ್ ಆಫ್ ರೆಕಾಡ್ರ್ಸ್ ಸಂಸ್ಥೆ ಎನ್.ವರ್ಷಿತ ಗೌಡ ಪ್ರತಿಭೆ ಗುರುತಿಸಿದ್ದು ಪ್ರಮಾಣ ಪತ್ರ ಹಾಗೂ ಸ್ಮರಣಿಕೆ ನೀಡಿ ಗೌರವಿಸಿದೆ.ವೇಣುಗೋಪಾಲಪುರ ಗ್ರಾಮದ ವಿ.ನಾಗೇಶ್ ಹಾಗೂ ಎಸ್.ಅಶ್ವಿನಿ ದಂಪತಿಯ ಪುತ್ರಿಯಾಗಿರುವ ವರ್ಷಿತಗೌಡ ಕೇವಲ ನಾಲ್ಕು […]

ವರದಿ: ಶಬ್ಬೀರ್ ಅಹ್ಮದ್, ಶ್ರೀನಿವಾಸಪುರ ಕೋಲಾರ,ಮೇ.21: ವಿದ್ಯಾನಿಧಿ ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿಯ ಅಧ್ಯಕ್ಷರಾಗಿ ವಿ.ನಾಗಭೂಷಣ ಹಾಗೂ ಉಪಾಧ್ಯಕ್ಷರಾಗಿ ಎಸ್.ಜಗದೀಶ್ ರವರು ಅವಿರೋಧವಾಗಿ ಆಯ್ಕೆಯಾಗಿದ್ದಾರೆ.ನಿನ್ನೆ ನಡೆದ ಅಧ್ಯಕ್ಷ ಉಪಾಧ್ಯಕ್ಷರ ಚುನಾವಣೆಯಲ್ಲಿ ಎಲ್ಲಾ ನಿರ್ದೇಶಕರುಗಳ ಉಪಸ್ಥಿತಿಯಲ್ಲಿ ಒಮ್ಮತದಿಂದ ಅಧ್ಯಕ್ಷರಾಗಿ ವಿ.ನಾಗಭೂಷಣ ಹಾಗೂ ಉಪಾಧ್ಯಕ್ಷರಾಗಿ ಎಸ್.ಜಗದೀಶ್ ರವರನ್ನು ಅವಿರೋಧವಾಗಿ ಆಯ್ಕೆ ಮಾಡಿದರು.ಈ ಸಂದರ್ಭದಲ್ಲಿ ವಿದ್ಯಾನಿಧಿ ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿಯ ನಿರ್ದೇಶಕರುಗಳಾದ ಎ.ಸದಾನಂದ, ಜಮೀರ್ ಅಹಮದ್, ಹನುಮಂತಪ್ಪ, ಕಿರಣ್ಕುಮಾರ್, ರಾಮಕೃಷ್ಣಪ್ಪ, ವೈ.ಸಿ ಮುನೇಗೌಡ, ಲಕ್ಷ್ಮೀನಾರಾಯಣ, ಪುರುಷೋತ್ತಮ, ಮುನಿಯಪ್ಪ, ಅಶೋಕ್ಕುಮಾರ್, ಮುನಿಸ್ವಾಮಿ, ಶಖೀಲ್ […]

ವರದಿ: ಶಬ್ಬೀರ್ ಅಹ್ಮದ್, ಶ್ರೀನಿವಾಸಪುರ ಕೋಲಾರ:- ಆಪತ್ಕಾಲದಲ್ಲಿ ನೆರವಾಗಲು ಪತ್ರಕರ್ತರಿಗಾಗಿ 1 ಕೋಟಿ ರೂಗಳ ಕ್ಷೇಮಾಭಿವೃದ್ದಿ ನಿಧಿ ಸ್ಥಾಪನೆ ಮಾಡುವುದಾಗಿ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಬಿ.ವಿ.ಗೋಪಿನಾಥ್ ಘೋಷಣೆ ಮಾಡಿದರು.ಶುಕ್ರವಾರ ನಗರದ ಪತ್ರಕರ್ತರ ಭವನದಲ್ಲಿ ಕಾರ್ಯನಿರತ ಪತ್ರಕರ್ತರ ಸಮಸ್ಯೆಗಳ ಕುರಿತು ಚರ್ಚೆ ಹಾಗೂ ಕಾರ್ಯಚಟುವಟಿಕೆಗಳ ಕುರಿತು ನಡೆದ ಸಂವಾದ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಅವರು ಮಾತನಾಡುತ್ತಿದ್ದರು.ಪತ್ರಕರ್ತರ ಕ್ಷೇಮಾಭಿವೃದ್ದಿಯನ್ನು 25 ಸಾವಿರ ರೂಗಳ ಮೂಲಧನ ಹಾಕಿ ಆರಂಭಿಸುವ ಮೂಲಕ ಈ ನಿಧಿಯನ್ನು ಬೆಳೆಸೋಣ, ಪತ್ರಕರ್ತರಿಗೆ ಆರೋಗ್ಯ ಮತ್ತಿತರ ಸಮಸ್ಯೆಗಳಿಗೆ […]

ವರದಿ: ಶಬ್ಬೀರ್ ಅಹ್ಮದ್, ಶ್ರೀನಿವಾಸಪುರ ಶ್ರೀನಿವಾಸಪುರ: ಬೆಳೆ ನಷ್ಟ ಅನುಭವಿಸಿರುವ ಮಾವು ಹಾಗೂ ಟೊಮೆಟೊ ಬೆಳೆಗಾರರಿಗೆ ನಷ್ಟಪರಿಹಾರ ನೀಡುವಂತೆ ಆಗ್ರಹಿಸಿ, ಕರ್ನಾಟಕ ಪ್ರಾಂತ ರೈತ ಸಂಘದ ತಾಲ್ಲೂಕು ಘಟಕದ ಸದಸ್ಯರು ಪಟ್ಟಣದ ತಾಲ್ಲೂಕು ಕಚೇರಿ ಮುಂದೆ ಶುಕ್ರವಾರ ಪ್ರತಿಭಟನೆ ನಡೆಸಿದರು.ಕರ್ನಾಟಕ ಪ್ರಾಂತ ರೈತ ಸಂಘದ ಜಿಲ್ಲಾ ಘಟಕದ ಉಪಾಧ್ಯಕ್ಷ ಪಾತಕೋಟ ನವೀನ್ ಕುಮಾರ್ ಪ್ರತಿಭಟನೆ ನಿರತ ರೈತರನ್ನು ಉದ್ದೇಶಿಸಿ ಮಾತನಾಡಿ, ಇಪ್ಪತ್ತು ದಿನಗಳಿಂದ ಆಗಾಗ ಸುರಿದ ಭಾರಿ ಮಳೆ, ಬಿರುಗಾಳಿ ಹಾಗೂ ಆಲಿಕಲ್ಲಿನ ಹೊಡೆತಕ್ಕೆ ಸಿಕ್ಕಿ ಮಾವು ಹಾಗು […]

ವರದಿ: ಶಬ್ಬೀರ್ ಅಹ್ಮದ್, ಶ್ರೀನಿವಾಸಪುರ ಶ್ರೀನಿವಾಸಪುರ: ಶ್ರೀನಿವಾಸಪುರ ತಾಲ್ಲೂಕಿನ ಅಡ್ಡಗಲ್ ಗ್ರಾಮ ಪಂಚಾಯಿತಿ ಅಧ್ಯಕ್ಷರಾಗಿ ಟಿ.ವಿ.ರೆಡ್ಡಪ್ಪ, ಉಪಾಧ್ಯಕ್ಷೆಯಾಗಿ ಮಂಗಮ್ಮ ಎರಡನೇ ಅವಧಿಗೆ ಗುರುವಾರ ಅವಿರೋಧ ಆಯ್ಕೆಯಾಗಿದ್ದಾರೆ.ಹಿಂದಿನ ಅಧ್ಯಕ್ಷರು ಹಾಗೂ ಉಪಾಧ್ಯಕ್ಷರ ರಾಜೀನಾಮೆಯಿಂದ ತೆರವಾಗಿದ್ದ ಸ್ಥಾನಗಳಿಗೆ ಗುರುವಾರ ಚುನಾವಣೆ ಏರ್ಪಡಿಸಲಾಗಿತ್ತು. ಗ್ರಾಮ ಪಂಚಾಯಿತಿಯ ಎಲ್ಲಾ 17 ಸದಸ್ಯರು ಹಾಜರಿದ್ದು, ಮತದಾನ ಇಲ್ಲದೆ ಅದ್ಯಕ್ಷರು ಹಾಗೂ ಉಪಾಧ್ಯಕ್ಷರನ್ನು ಅವಿರೋಧ ಆಯ್ಕೆ ಮಾಡಿದರು.ಚುನಾವಣಾಧಿಕಾರಿ ಎಂ.ಎನ್.ಗಣೇಶ್, ಪಿಡಿಒ ಚಂದ್ರಶೇಖರ್, ಮುಖಂಡ ದೊರೆಸ್ವಾಮಿರೆಡ್ಡಿ ಇದ್ದರು.

ವರದಿ: ಶಬ್ಬೀರ್ ಅಹ್ಮದ್, ಶ್ರೀನಿವಾಸಪುರ ಶ್ರೀನಿವಾಸಪುರದಲ್ಲಿ ಶುಕ್ರವಾರ ಸೂರ್ಯನಾರಾಯಣಸ್ವಾಮಿ ದೇವಾಲಯ ನಿರ್ಮಾಣ ಕಾಮಗಾರಿಗೆ ಶಾಸಕ ಕೆ.ಆರ್.ರಮೇಶ್ ಕುಮಾರ್ ಶಂಕುಸ್ಥಾಪನೆ ನೆರವೇರಿಸಿದರು.

ವರದಿ: ಶಬ್ಬೀರ್ ಅಹ್ಮದ್, ಶ್ರೀನಿವಾಸಪುರ ಶ್ರೀನಿವಾಸಪುರದಲ್ಲಿ ಶುಕ್ರವಾರ ತಾಲ್ಲೂಕು ದಲಿತ ಪರ ಸಂಘಟನೆಗಳ ಕಾರ್ಯಕರ್ತರು, ನಿವೃತ್ತ ನ್ಯಾಯಮೂರ್ತಿ ಎಚ್.ಎನ್.ನಾಗಮೋಹನದಾಸ್ ಅವರ ವರದಿ ಜಾರಿಗಾಗಿ ವಾಲ್ಮೀಕಿ ಪ್ರಸನ್ನಾನಂದ ಸ್ವಾಮೀಜಿ ಕೈಗೊಂಡಿರುವ ಧರಣಿ ಸತ್ಯಾಗ್ರಹ ಬೆಂಬಲಿಸಿ ಮೆರವಣಿಗೆ ನಡೆಸಿದರು.

ವರದಿ: ಶಬ್ಬೀರ್ ಅಹ್ಮದ್, ಶ್ರೀನಿವಾಸಪುರ ಕೋಲಾರ: ಐ.ಸಿ.ಎ.ಆರ್-ಕೃಷಿ ವಿಜ್ಞಾನ ಕೇಂದ್ರ, ಕೋಲಾರ, ತೋಟಗಾರಿಕೆ ಮಹಾವಿದ್ಯಾಲಯ, ಕೋಲಾರ, ಆತ್ಮ ಯೋಜನೆ, ಕೃಷಿ ಇಲಾಖೆ, ಕೋಲಾರ, ತೋಟಗಾರಿಕೆ ಇಲಾಖೆ, ಕೋಲಾರ ಇವರ ಸಂಯುಕ್ತಾಶ್ರಯದಲ್ಲಿ ದಿನಾಂಕ 20.05.2022 ರಂದು “ವಿಶ್ವ ಜೇನುನೋಣ ದಿನ”ಯನ್ನು ಕೃಷಿ ವಿಜ್ಞಾನ ಕೇಂದ್ರ, ಕೋಲಾರದಲ್ಲಿ ಹಮ್ಮಿಕೊಳ್ಳಲಾಯಿತು.ಈ ಕಾರ್ಯಕ್ರಮದಲ್ಲಿ ಸಂಪನ್ಮೂಲ ವ್ಯಕ್ತಿಗಳಾಗಿ ಡಾ. ಅಶ್ವಥಾನಾರಾಯಣರೆಡ್ಡಿ, ಸಹಾಯಕ ಪ್ರಾಧ್ಯಾಪಕರು (ಕೀಟಶಾಸ್ತ್ರ), ತೋಟಗಾರಿಕೆ ಮಹಾವಿದ್ಯಾಲಯ, ಕೋಲಾರರವರು ಮಾತನಾಡಿ ಜೇನಿನ ಮಹತ್ವ, ಅವುಗಳ ಸಂರಕ್ಷಣೆ, ವಿವಿಧ ರೀತಿಯ ಜೇನು ನೊಣಗಳ ಬಗ್ಗೆ ಸವಿಸ್ತಾರವಾಗಿ ಮಾಹಿತಿ […]