ವರದಿ: ಶಬ್ಬೀರ್ ಅಹ್ಮದ್, ಶ್ರೀನಿವಾಸಪುರ ಶ್ರೀನಿವಾಸಪುರ 1 : ಕ್ಷೇತ್ರದ ಅಭಿವೃದ್ದಿಯೇ ನನ್ನ ಮೂಲ ಮಂತ್ರ, ನನಗೆ ಮತ ಹಾಕಿದ ಜನತೆಯ ಅಭಿವೃದ್ದಿಯೇ ನನ್ನ ಗುರಿ ಎಂದು ಕೆ.ಆರ್.ರಮೇಶ್‍ಕುಮಾರ್ ಹೇಳಿದರು.ನೆಲವಂಕಿ ಗ್ರಾಮಪಂಚಾಯಿತಿ ವ್ಯಾಪ್ತಿಯ ಗ್ರಾಮಗಳ ವಿವಿಧ ಕಾಮಾಗಾರಿಗಳನ್ನು ಗುರುವಾರ ಉದ್ಗಾಟಿಸಿ, ವೀಕ್ಷಿಸಿ ಮಾತನಾಡಿದರು.ಜನತೆ ನನ್ನ ಮೇಲಿನ ಪ್ರೀತಿ ವಿಶ್ವಾಸಕ್ಕೆ ಮತ ಹಾಕಿ ನನ್ನನ್ನು ಗೆಲ್ಲಿಸಿಕೊಟ್ಟಿದ್ದಾರೆ ಅದಕ್ಕಾಗಿ ಇಂದು ನಾನು ಅವರ ಋಣ ತೀರಿಸುವ ಉದ್ದೇಶದಿಂದ ಕ್ಷೇತ್ರದಾದ್ಯಂತ ಬಡವರಿಗೆ ಮನೆಗಳ ನಿರ್ಮಾಣ, ಶುದ್ದ ಕುಡಿಯುವ ನೀರಿನ ಸೌಲಭ್ಯ, ಸುಸಜ್ಜಿತ ರಸ್ತೆಗಳು […]
ವರದಿ: ಶಬ್ಬೀರ್ ಅಹ್ಮದ್, ಶ್ರೀನಿವಾಸಪುರ ರಾಯಲ್ಪಾಡು 1 : ಶ್ರೀನಿವಾಸಪುರ ಶಾಖೆಯ ಶೃಂಗೇರಿ ಶಂಕರಮಠದಲ್ಲಿ ಗರುವಾರ ಜಗದ್ಗುರುಗಳಾದ ಶ್ರೀಶ್ರೀಶ್ರೀ ಭಾರತೀತೀರ್ಥ ಮಹಾಸ್ವಾಮಿ 72ನೇ ವರ್ಧಂತಿ ಮಹೋತ್ಸವವದ ಅಂಗವಾಗಿ ಶಂಕರಾಚಾರ್ಯರ ಮೂಲ ಮೂರ್ತಿಗೆ ಏಕವಾರ ರುದ್ರಾಭಿಷೇಕ, ಮಂಗಳಸತ್ಯಮೂರ್ತಿ,ಆಶಾರವಿಕುಮಾರ್ ತಂಡದವತಿಯಿಂದ ಸಹಸ್ರನಾಮ ಕುಂಕುಮಾರ್ಚನೆ ಮಹಾಮಂಗಳಾರತಿ ನಡೆಯಿತು.ಶಂಕರಮಠದ ನಿರ್ದೇಶಕರಾದ ಶ್ರೀನಿವಾಸ್,ಮಂಜುನಾಥ್,ಅರ್ಚಕ ಸುಬ್ರಮಣ್ಯ,ಕೃಷ್ಣ,ಕುರುಮಾಕಲಪಲ್ಲಿ ಪ್ರಕಾಶ್,ರಾಘವೇಂದ್ರ,ನಾಗೇಂದ್ರ ಹಾಗು ಇತರರು ಇದ್ದರು.
ವರದಿ: ಶಬ್ಬೀರ್ ಅಹ್ಮದ್, ಶ್ರೀನಿವಾಸಪುರ ಶ್ರೀನಿವಾಸಪುರ 2 : ಗೌನಿಪಲ್ಲಿ ಗ್ರಾ.ಪಂ ಚುನಾವಣೆಗೆ ಸಂಬಂದಿಸಿದಂತೆ ಗುರುವಾರ ಅಧ್ಯಕ್ಷ ಗಾದೆಗೆ ಚುನಾವಣೆ ನಡೆಯಿತು. ಚುನಾವಣೆಯಲ್ಲಿ ಜೆಡಿಎಸ್‍ನ ಶೇಷಾದ್ರಿ ಅಧ್ಯಕ್ಷರಾಗಿ ಆಯ್ಕೆಯಾಗಿದ್ದಾರೆ. ಪಂಚಾಯಿತಿಗೆ ಸಂಬಂದಿಸಿದಂತೆ ಒಟ್ಟು 23 ಸ್ಥಾನಗಳ ಪೈಕಿ ಜೆಡಿಎಸ್ ಪರ 14 ಸದಸ್ಯರು, 9 ಕಾಂಗ್ರೆಸ್ ಪರ ಸದಸ್ಯರು ಇದ್ದು, ಅದರಲ್ಲಿ ಜೆಡಿಎಸ್ ಪರ ಶೇಷಾದ್ರಿ, ಕಾಂಗ್ರೆಸ್ ಪರ ಕೆ.ಎಂ ಮುನಿರಾಜು ನಾಮಪತ್ರ ಸಲ್ಲಿಸಿದ್ದರು. ಶೇಷಾದ್ರಿ 14 ಮತಗಳನ್ನು ಪಡೆದು ಜಯಶೀಲರಾಗಿದ್ದಾರೆಂದು ಚುನಾವಣಾ ಅಧಿಕಾರಿ ಶೀಗಪಲ್ಲಿ ನಾರಾಯಣಸ್ವಾಮಿ ತಿಳಿಸಿದರು. […]
ವರದಿ: ಶಬ್ಬೀರ್ ಅಹ್ಮದ್, ಶ್ರೀನಿವಾಸಪುರ ಕೋಲಾರ,ಏ.7: ಶಾಲೆಯ ರಜೆಯಲ್ಲಿ ಮಕ್ಕಳು ಕಾಲಹರಣ ಮಾಡದೆ ಬೇಸಿಗೆ ಶಿಬಿರದಲ್ಲಿ ಭಾಗವಹಿಸುವ ಮೂಲಕ ವೈವಿಧ್ಯಮಯ ಕಲಾಕೌಶಲ್ಯವನ್ನು ಬೆಳೆಸಿಕೊಳ್ಳಬೇಕೆಂದು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ಸಹಾಯಕ ಶಿಶು ಅಭಿವೃದ್ಧಿ ಯೋಜನಾಧಿಕಾರಿ ಶೋಭಾರವರು ತಿಳಿಸಿದರು.ನಗರದ ಪಿ.ಸಿ ಬಡಾವಣೆಯ ರತ್ನಮಾಲಾ ಮಹಿಳಾ ಮಂಡಳಿ ವತಿಯಿಂದ ಆಯೋಜಿಸಿದ್ದ ಮಕ್ಕಳ ಬೇಸಿಗೆ ಶಿಬಿರವನ್ನು ಜ್ಯೋತಿ ಬೆಳಗಿಸುವ ಮೂಲಕ ಅವರು ಉದ್ಘಾಟಿಸಿ ಮಾತನಾಡುತ್ತಿದ್ದರು.ಗ್ರಾಮೀಣ ಪ್ರದೇಶದಲ್ಲಿ ಮಕ್ಕಳು ಆಟವಾಡಲು ಹೊಸ ಕಲೆಯನ್ನು ಕಲಿಯಲು ಬಹಳಷ್ಟು ಅವಕಾಶಗಳಿವೆ, ಆದರೆ ನಗರ ಪ್ರದೇಶದಲ್ಲಿನ ಮಕ್ಕಳು […]
ವರದಿ: ಶಬ್ಬೀರ್ ಅಹ್ಮದ್, ಶ್ರೀನಿವಾಸಪುರ ಕೋಲಾರ:- ರೈತರು ಒಕ್ಕೂಟಕ್ಕೆ ಗುಣಮಟ್ಟದ ಹಾಲು ಪೂರೈಕೆ ಮಾಡುವುದರಿಂದ ಆದಾಯ ಹೆಚ್ಚಿಸಿಕೊಳ್ಳಬಹುದು ಎಂದು ಕೋಚಿಮುಲ್ ನಿರ್ದೇಶಕ ಡಿ.ವಿ.ಹರೀಶ್ ತಿಳಿಸಿದರು.ತಾಲ್ಲೂಕಿನ ವಿಟ್ಟಪನಹಳ್ಳಿ ಗ್ರಾಮದ ಹಾಲು ಉತ್ಪಾದಕರ ಸಹಕಾರ ಸಂಘದ ವತಿಯಿಂದ ನಿರ್ಮಿಸಲಾಗಿರುವ ಸಮೂಹ ಹಾಲು ಕರೆಯುವ ಯಂತ್ರ ಹಾಗೂ ಬಲ್ಕ್ ಮಿಲ್ಕ್ ಕೂಲರ್ ಘಟಕಗಳಿಗೆ ಚಾಲನೆ ನೀಡಿ ಅವರು ಮಾತನಾಡುತ್ತಿದ್ದರು.ವಿಟ್ಟಪ್ಪನಹಳ್ಳಿ ಎಂಪಿಸಿಎಸ್ 35 ವರ್ಷಗಳ ಇತಿಹಾಸ ಹೊಂದಿದೆ. ಒಕ್ಕೂಟದಿಂದ ಸೌಲಭ್ಯ ಪಡೆದುಕೊಂಡು ಇದೀಗ 3.5 ಲಕ್ಷ ರೂ ವೆಚ್ಚದಲ್ಲಿ ಹಾಲು ಕರೆಯುವ ಯಂತ್ರ ಹಾಗೂ […]
ವರದಿ: ಶಬ್ಬೀರ್ ಅಹ್ಮದ್, ಶ್ರೀನಿವಾಸಪುರ ಶ್ರೀನಿವಾಸಪುರ: ಕೋಮು ಸೌಹಾರ್ದ ಕದಡುವ ಸಮಾಜ ಘಾತಕ ಶಕ್ತಿಗಳನ್ನು ಬೆಂಬಲಿಸಬಾರದು ಎಂದು ಜಿಲ್ಲಾ ಜೆಡಿಎಸ್ ಘಟಕದ ಅಧ್ಯಕ್ಷ ಹಾಗೂ ಮಾಜಿ ಶಾಸಕ ಜಿ.ಕೆ.ವೆಂಕಟಶಿವಾರೆಡ್ಡಿ ಮನವಿ ಮಾಡಿದರು.ಪಟ್ಟಣದ ಜೆಡಿಎಸ್ ಕಚೇರಿ ಸಭಾಂಗಣದಲ್ಲಿ ಬುಧವಾರ ಏರ್ಪಡಿಸಿದ್ದ ತಾಲ್ಲೂಕು ಜೆಡಿಎಸ್ ಮುಖಂಡರ ಸಭೆಯಲ್ಲಿ ಮಾತನಾಡಿ, ರಾಜ್ಯದಲ್ಲಿ ಹಿಂದೂ ಹಾಗೂ ಮುಸ್ಲಿಂ ಸಮುದಾಯದ ಜನರು ಅಣ್ಣ ತಮ್ಮಂದಿರಂತೆ ಬಾಳುತ್ತಿದ್ದಾರೆ. ಕೋಮು ಸೌಹಾರ್ದಕ್ಕೆ ಧಕ್ಕೆ ಉಂಟುಮಾಡುವುದು ಸರಿಯಲ್ಲ ಎಂದು ಅಭಿಪ್ರಾಯಪಟ್ಟರು.ಆಹಾರ ಪದ್ಧತಿ ಹಾಗೂ ಆಚರಣೆಗಳು ಬೇರೆ ಬೇರೆಯಾಗಿರಬಹುದು. ಅದರಲ್ಲಿ ಹುಳುಕು […]
ವರದಿ: ಶಬ್ಬೀರ್ ಅಹ್ಮದ್, ಶ್ರೀನಿವಾಸಪುರ ಶ್ರೀನಿವಾಸಪುರ: ತಾಲ್ಲೂಕಿನ ಅಭಿವೃದ್ಧಿಗಾಗಿ ರಾಜಕೀಯ ಬದಲಾವಣೆ ತರಬೇಕಾದ ಅಗತ್ಯವಿದೆ. ಯುವ ಸಮುದಾಯ ಈ ನಿಟ್ಟಿನಲ್ಲಿ ಆಲೋಚಿಸಬೇಕು ಎಂದು ಮುಖಂಡ ಗುಂಜೂರು ಆರ್.ಶ್ರೀನಿವಾಸ ರೆಡ್ಡಿ ಹೇಳಿದರು.ತಾಲ್ಲೂಕಿನ ಗೌನಿಪಲ್ಲಿ ಗ್ರಾಮದಲ್ಲಿ ಮಂಗಳವಾರ ಏರ್ಪಡಿಸಿದ್ದ ಸಮಾರಂಭದಲ್ಲಿ ಸಾರ್ವಜನಿಕರಿಗೆ ಉಚಿತವಾಗಿ ಬ್ಯಾಗ್ ವಿತರಿಸಿ ಮಾತನಾಡಿ, ‘ರಾಜಕೀಯ ನಿಂತ ನೀರಾಗಬಾರದು. ತಾಲ್ಲೂಕಿ ಅಭಿವೃದ್ಧಿ ಕನಸು ಹೊತ್ತು ಮುಂದಿನ ವಿಧಾನಸಭಾ ಚುನಾವಣೆಯಲ್ಲಿ ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧಿಸಲು ಬಂದಿದ್ದೇನೆ’ ಎಂದು ಹೇಳಿದರು.ಜಿಲ್ಲಾ ಪಂಚಾಯಿತಿ ಮಾಜಿ ಸದಸ್ಯ ರಾಜಶೇಖರರೆಡ್ಡಿ ಮುಖಂಡರಾದ ಮಹಮದ್ ಅಲಿ, ಶ್ರೀನಿವಾಸ್, […]
ವರದಿ: ಶಬ್ಬೀರ್ ಅಹ್ಮದ್, ಶ್ರೀನಿವಾಸಪುರ ಶ್ರೀನಿವಾಸಪುರ: ಪಟ್ಟಣದಲ್ಲಿ ತಾಲ್ಲೂಕು ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿ ಹಾಗೂ ವಿವಿಧ ದಲಿತ ಪರ ಸಂಘಟನೆಗಳಿಂದ ಮಂಗಳವಾರ ಡಾ. ಬಾಬು ಜಗಜೀವನ್ ರಾಮ್ ಜಯಂತಿ ಆಚರಿಸಲಾಯಿತು.ಜಯಂತಿ ಅಂಗವಾಗಿ ಏರ್ಪಡಿಸಲಾಗಿದ್ದ ಡಾ. ಬಾಬು ಜಗಜೀವನ್ ರಾಮ್ ಅವರ ಭಾವ ಚಿತ್ರ ಮೆರವಣಿಗೆಗೆ ತಹಶೀಲ್ದಾರ್ ಹನ್ಸಾಮರಿಯ ಚಾಲನೆ ನೀಡಿದರು.ತಾಲ್ಲೂಕು ಪಂಚಾಯಿತಿ ಕಾರ್ಯನಿರ್ವಹಣಾಧಿಕಾರಿ ಎಸ್.ಆನಂದ್, ಕ್ಷೇತ್ರ ಶಿಕ್ಷಣಾಧಿಕಾರಿ ವಿ.ಉಮಾದೇವಿ, ಶಿರಸ್ತೇದಾರ್ ಮನೋಹರ ಮಾನೆ, ಹಿರಿಯ ಕಂದಾಯ ನಿರೀಕ್ಷಕ ಬಿ.ವಿ.ಮುನಿರೆಡ್ಡಿ, ಸಹಾಯಕ ಕಾರ್ಯಪಾಲಕ ಎಂಜಿನಿಯರ್ ಎಂ.ಕೆ.ಹುಸೇನ್ ಸಾಬ್, ಸಮಾಜ […]
ವರದಿ: ಶಬ್ಬೀರ್ ಅಹ್ಮದ್, ಶ್ರೀನಿವಾಸಪುರ ಕೋಲಾರ : ಜಿಲ್ಲೆಯ ಜವಾಹರ್ ನವೋದಯ ವಿದ್ಯಾಲಯದ ಹಳೆಯ ವಿದ್ಯಾರ್ಥಿಗಳು ಮಹಿಳೆಯರು ಮತ್ತು ತೃತೀಯ ಲಿಂಗಿಗಳ ಸಬಲೀಕರಣಕ್ಕಾಗಿ ಸ್ಥಾಪಿಸಿರುವ ಆಕ್ಟ್ (ಆಶ್ರಯ ಚಾರಿಟೇಬಲ್ ಟ್ರಸ್ಟ್) ಸಂಸ್ಥೆಯನ್ನು ಉದ್ಘಾಟಿಸಿದ ಕೋಲಾರ ಮತ್ತು ಚಿಕ್ಕಬಳ್ಳಾಪುರ ಜಿಲ್ಲೆಯ ಡಿಸಿಸಿ ಬ್ಯಾಂಕಿನ ಅದ್ಯಕ್ಷರಾದ ಶ್ರೀ ಬ್ಯಾಲಹಳ್ಳಿ ಎಂ ಗೋವಿಂದ ಗೌಡರು ಮಾತನಾಡಿ ಎಲ್ಲಾ ಐಟಿ ಕ್ಷೇತ್ರದಲ್ಲಿ ರುವವರು ಸಮಾಜ ಸೇವಾ ಕಾರ್ಯಗಳಲ್ಲಿ ತೊಡಗಿ ಕೊಂಡಿರುವುದು ತಿಳಿದು ತುಂಬಾ ಸಂತೋಷವಾಯಿತು.ನಿಮ್ಮ ಎಲ್ಲಾ ಸಾಮಾಜಿಕ ಕಾರ್ಯಕ್ರಮಗಳಿಗೆ ನಾನು ಸದಾ ನಿಮ್ಮೊಂದಿಗೆ ಇರುತ್ತೇನೆ […]