
ವರದಿ: ಶಬ್ಬೀರ್ ಅಹ್ಮದ್, ಶ್ರೀನಿವಾಸಪುರ ಕೋಲಾರ:- ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರು ರಾಷ್ಟ್ರದ ಅಭಿವೃದ್ಧಿಯಲ್ಲಿ ಪ್ರಮುಖ ಪಾತ್ರ ವಹಿಸುತ್ತಿದ್ದು, ಕಾರ್ಮಿಕ ಇಲಾಖೆ ನೀಡುವ ಸೌಲಭ್ಯಗಳನ್ನು ಬಳಸಿಕೊಳ್ಳಲು ಜಾಗೃತಿ ಮೂಡಿಸುವ ಅಗತ್ಯವಿದೆ ಎಂದು ಅಪರ ಹಿರಿಯ ಸಿವಿಲ್ ನ್ಯಾಯಾಧೀಶರು ಹಾಗೂ ಕಾನೂನು ಸೇವಾ ಪ್ರಾಧಿಕಾರದ ಪ್ರಭಾರ ಸದಸ್ಯ ಕಾರ್ಯದರ್ಶಿ ಎನ್.ಅನುಪಮ ಕರೆ ನೀಡಿದರು.ತಾಲ್ಲೂಕಿನ ಕೋಡಿಕಣ್ಣೂರು ಗ್ರಾಮದಲ್ಲಿ ಕಾರ್ಮಿಕ ಇಲಾಖೆ, ಕಟ್ಟಡ ಕಾರ್ಮಿಕರ ಸಂಘ, ಕಾನೂನು ಸೇವಾ ಪ್ರಾಧಿಕಾರ ಹಾಗೂ ವಕೀಲರ ಸಂಘದ ಆಶ್ರಯದಲ್ಲಿ ಕಟ್ಟಡ ಕಾರ್ಮಿಕರಿಗಾಗಿ ಹಮ್ಮಿಕೊಂಡಿದ್ದ ಆರೋಗ್ಯ […]

ವರದಿ: ಶಬ್ಬೀರ್ ಅಹ್ಮದ್, ಶ್ರೀನಿವಾಸಪುರ ಶ್ರೀನಿವಾಸಪುರ 1 : ಡಾ.ವೀರೇಂದ್ರ ಹೆಗ್ಗಡೆಯವರ ಕನಸಿನ ಕೂಸಾದ ಧರ್ಮಸ್ಥಳ ಗ್ರಾಮಾಭಿವೃದ್ಧಿ ಸಂಘದ ಯೋಜನೆಗಳು ಇಂದು ರಾಜ್ಯದ ಹಳ್ಳಿ ಹಳ್ಳಿಯಲ್ಲೂ ತಲೆಯೆತ್ತಿದ್ದು, ಗ್ರಾಮಾಭಿವೃದ್ಧಿ ಯೋಜನೆಯು ಗ್ರಾಮೀಣ ಪರಿವರ್ತನೆಗೆ ಹೊಸ ಭಾಷ್ಯ ಬರೆದಿದೆ ಎಂದು ಮೇಧಾಗುರು ಜ್ಯೋತಿರ್ವಿಜ್ಞಾನ ಕೇಂದ್ರದ ಸಂಸ್ಥಾಪಕ ವೆಲ್ಲಾಲ ಸತ್ಯನಾರಾಯಣಶಾಸ್ತ್ರಿ ಅಭಿಪ್ರಾಯಪಟ್ಟರು.ರಾಯಲ್ಪಾಡಿನ ಮೇಧಾಗುರು ಜ್ಯೋತಿರ್ವಿಜ್ಞಾನ ಕೇಂದ್ರದ ಕಚೇರಿಯಲ್ಲಿ ಸೋಮವಾರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಸಂಘದ ಜಿಲ್ಲಾ ನಿರ್ದೇಶಕ ಚಂದ್ರಶೇಖರ್ರವರನ್ನು ಸನ್ಮಾನಿಸಿ ಗೌರವಿಸಲಾಯಿತು.ಗಾಂದೀಜಿಯವರ ಗ್ರಾಮ ರಾಜ್ಯದ ಪರಿಕಲ್ಪನೆ ಈ ಯೋಜನೆಯಿಂದ ಸಾಕಾರಗೊಳ್ಳುತ್ತಿದೆ. ಕೃಷಿ ಮೇಳ, […]

ವರದಿ : ಶಬ್ಬೀರ್ ಅಹ್ಮದ್ ಶ್ರೀನಿವಾಸಪುರ ಕೋಲಾರ : ಪತ್ರಕರ್ತರಿಗೆ ಕಾರ್ಮಿಕ ಕಾಯ್ದೆಗಳು ಅನ್ವಯವಾಗದಂತ ನೀತಿಗಳನ್ನು ಕಾರ್ಪೊರೇಟ್ ಸಂಸ್ಥೆಗಳ ಜೊತೆಗೂಡಿ ಸರಕಾರಗಳು ಜಾರಿಗೆ ತರುವ ಮೂಲಕ ತನ್ನ ಇಷ್ಟದಂತೆ ದುಡಿಸಿಕೊಳ್ಳುವ ಪ್ರವೃತ್ತಿ ದೇಶಕ್ಕೆ ಮತ್ತು ಪತ್ರಕರ್ತರಿಗೆ ಅಪಾಯಕಾರಿಯಾದ ಬೆಳವಣಿಗೆಗಳು ಎಂದು ಹಿರಿಯ ಪತ್ರಕರ್ತ ವಿಶ್ವ ಕುಂದಾಪುರ ತಿಳಿಸಿದರು.ನಗರದ ಪತ್ರಕರ್ತರ ಭವನದಲ್ಲಿ ಭಾನುವಾರ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ವತಿಯಿಂದ ಇದೇ ಮೊದಲ ಬಾರಿಗೆ ನಡೆದ ವಿಶ್ವ ಕಾರ್ಮಿಕ ದಿನಾಚರಣೆಯಲ್ಲಿ ಉಪನ್ಯಾಸ ನೀಡಿ ಮಾತನಾಡಿದ ಅವರು, ಮಾಧ್ಯಮ ಕ್ಷೇತ್ರವು […]

ವರದಿ: ಶಬ್ಬೀರ್ ಅಹ್ಮದ್, ಶ್ರೀನಿವಾಸಪುರ ಶ್ರೀನಿವಾಸಪುರ: ಸಾರ್ವಜನಿಕರು ರಂಜಾನ್ ಸಂದರ್ಭದಲ್ಲಿ ಶಾಂತಿ ಸುವ್ಯವಸ್ಥೆ ಪಾಲಿಸಬೇಕು. ಯಾವುದೇ ಕಾರಣಕ್ಕೂ ಶಾಂತಿ ಕದಡುವ ಕೃತ್ಯಕ್ಕೆ ಕೈ ಹಾಕಬಾರದು ಎಂದು ಪೊಲೀಸ್ ಇನ್ಸ್ಪೆಕ್ಟರ್ ಸಿ.ಜಿ.ನಾರಾಯಣಸ್ವಾಮಿ ಹೇಳಿದರು.ಪಟ್ಟಣದ ಪೊಲೀಸ್ ಠಾಣೆಯಲ್ಲಿ ರಂಜಾನ್ ಆಚರಣೆಗೆ ಸಂಬಂಧಿಸಿದಂತೆ ಶನಿವಾರ ಏರ್ಪಡಿಸಿದ್ದ ಶಾಂತಿ ಸಭೆಯಲ್ಲಿ ಮಾತನಾಡಿ, ಜನರು ಕೋಮು ಸೌಹಾರ್ದ ಕಾಪಾಡಲು ಸಹಕರಿಸಬೇಕು. ಹಬ್ಬದ ಆಚರಣೆ ಸಂದರ್ಭದಲ್ಲಿ ಯಾವುದೇ ಕಾನೂನು ಬಾಹಿರ ಚಟುವಟಿಕೆ ಕಂಡುಬಂದರೂ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಹೇಳಿದರು.ಪಟ್ಟಣ ಮತ್ತು ಪಟ್ಟಣದ ಹೊರ ವಲಯದಲ್ಲಿ ಒಂದು […]

ವರದಿ: ಶಬ್ಬೀರ್ ಅಹ್ಮದ್, ಶ್ರೀನಿವಾಸಪುರ ಶ್ರೀನಿವಾಸಪುರ: ಅವೈಜ್ಞಾನಿಕವಾಗಿ ಕೆರೆಗಳಿಗೆ ಹರಿಸುತ್ತಿರುವ ಕೆಸಿ ವ್ಯಾಲಿ ನೀರು ಈ ಭಾಗದ ಜನರಿಗೆ ಶಾಪವಾಗಿ ಪರಿಣಮಿಸುತ್ತಿದೆ ಎಂದು ಮಾಜಿ ಶಾಸಕ ಜಿ.ಕೆ.ವೆಂಕಟಶಿವಾರೆಡ್ಡಿ ಅಭಿಪ್ರಾಯಪಟ್ಟರು.ಪಟ್ಟಣದ ಜೆಡಿಎಸ್ ಕಚೇರಿ ಸಭಾಂಗಣದಲ್ಲಿ ಶನಿವಾರ ಏರ್ಪಡಿಸಿದ್ದ ಪತ್ರಿಕಾ ಗೋಷ್ಠಿಯಲ್ಲಿ ಮಾತನಾಡಿ, ಕೆಸಿ ವ್ಯಾಲಿ ನೀರನ್ನು ಕೆರೆಗಳಿಗೆ ಹರಿಸುವ ಮುನ್ನ ಮೂರನೇ ಹಂತದಲ್ಲಿ ಶುದ್ಧೀಕರಿಸಬೇಕು ಎಂದು ಆಗ್ರಹಿಸಿದರು.ಡಿಸಿಸಿ ಬ್ಯಾಂಕ್ ನೀಡುತ್ತಿರುವ ಬಡ್ಡಿ ರಹಿತ ಸಾಲ ಕೇಂದ್ರ ಸರ್ಕಾರದ ಕೊಡುಗೆ. ಸಾಲ ನೀಡಿಕೆಗೆ ಯಾರ ವಿರೋಧ ಇಲ್ಲ. ಆದರೆ ಶಾಸಕ ರಮೇಶ್ […]

ವರದಿ: ಶಬ್ಬೀರ್ ಅಹ್ಮದ್, ಶ್ರೀನಿವಾಸಪುರ ಶ್ರೀನಿವಾಸಪುರ : ಶುಕ್ರವಾರ ತಾಲೂಕಿನ ದ್ವಾರಸಂದ್ರ ಡೈರಿಗೆ ಅಧ್ಯಕ್ಷರಾಗಿ ಸಿ.ಮುನಿವೆಂಕಟಪ್ಪ, ಉಪಾಧ್ಯಕ್ಷರಾಗಿ ಕೆ.ಶ್ರೀನಿವಾಸರೆಡ್ಡಿ ಅವಿರೋಧವಾಗಿ ಆಯ್ಕೆಯಾಗಿದ್ದಾರೆ ಎಂದು ಚುನಾವಣಾಧಿಕಾರಿ ಎಂ.ಶಂಕರಪ್ಪ ತಿಳಿಸಿದರು.ನೂತನ ನಿರ್ದೇಶಕರಾಗಿ ಚಂದ್ರಾರೆಡ್ಡಿ,ಡಿ.ಕೆ.ಪ್ರಕಾಶ್ಎಂ .ಶ್ರೀನಿವಾಸಪ್ಪ, ಡಿ.ವಿ.ಸದಾಶಿವರೆಡ್ಡಿ, ವೆಂಕಟೇಶಪ್ಪ,ಮಂಜುಳ,ವೆಂಕಟಲಕ್ಷ್ಮಮ್ಮ ಹಾಗೂ ಜೆಡಿಎಸ್ನ ಡಿ.ವಿ.ವೆಂಕಟೇಶ್ರೆಡ್ಡಿ ಆಯ್ಕೆಯಾಗಿದ್ದಾರೆ. ಡೈರಿ ಕಾರ್ಯದರ್ಶಿ ವೆಂಕಟರೆಡ್ಡಿ ಇದ್ದರು.

ವರದಿ: ಶಬ್ಬೀರ್ ಅಹ್ಮದ್, ಶ್ರೀನಿವಾಸಪುರ ಶ್ರೀನಿವಾಸಪುರ : ಚಿಕ್ಕಬಳ್ಳಾಪುರ ಮಹಿಳಾ ಪೊಲೀಸ್ ಠಾಣೆಯಲ್ಲಿ ಕಾರ್ಯನಿರ್ವಹಿಸಿ ಶ್ರೀನಿವಾಸಪುರ ಪೊಲೀಸ್ ಠಾಣೆಗೆ ಪೊಲೀಸ್ ನಿರೀಕ್ಷರಾಗಿ ಜಿ.ಸಿ.ನಾರಾಯಣಸ್ವಾಮಿಯವರು ಶುಕ್ರವಾರ ಅಧಿಕಾರಿ ಸ್ವೀಕರಿಸಿದರು.

ವರದಿ: ಶಬ್ಬೀರ್ ಅಹ್ಮದ್, ಶ್ರೀನಿವಾಸಪುರ ಶ್ರೀನಿವಾಸಪುರ : ಶಾಸಕ ಕೆ.ಆರ್. ರಮೇಶ್ ಕುಮಾರ್ ಮಗ ಕ್ರಿಕೆಟ್ ಬೆಟ್ಟಿಂಗ್ನಲ್ಲಿ ಹಣ ಕಳೆದುಕೊಂಡಿರುವ ಬಗ್ಗೆ ಜೆಡಿಎಸ್ ನಾಯಕರು ಸಾಬೀತು ಮಾಡಿದರೆ ರಮೇಶ್ ಕುಮಾರ್ ಅವರಿಂದ ರಾಜಕೀಯ ನಿವೃತ್ತಿ ಕೊಡಿಸುತ್ತೆವೆ ಎಂದು ತಾಲ್ಲೂಕು ಪಂಚಾಯಿತಿ ಮಾಜಿ ಸದಸ್ಯ ಕೆ.ಕೆ.ಮಂಜು ತಿಳಿಸಿದರು . ಪಟ್ಟಣದ ಪ್ರವಾಸ ಮಂದಿರ ದಲ್ಲಿ ಗುರುವಾರ ಪತ್ರಿಕಾ ಗೋಷ್ಠಿಯಲ್ಲಿ ಮಾತನಾಡಿ , ಶ್ರೀನಿವಾಸಪು ರದಲ್ಲಿ ನಡೆದ ಜನತಾ ಜಲಧಾರೆ ಕಾರ್ಯಕ್ರಮದಲ್ಲಿ ಮಾಜಿ ಮುಖ್ಯ ಮಂತ್ರಿ ಎಚ್.ಡಿ.ಕುಮಾರಸ್ವಾಮಿ , ಜೆಡಿಎಸ್ ಪಕ್ಷದ […]

ವರದಿ: ಶಬ್ಬೀರ್ ಅಹ್ಮದ್, ಶ್ರೀನಿವಾಸಪುರ ಕೋಲಾರ:- ಕೋವಿಡ್-೧೯ರ ೪ ನೇ ಅಲೆಯನ್ನು ಎದುರಿಸಲು ಭಾರತೀಯ ರೆಡ್ ಕ್ರಾಸ್ ಸಂಸ್ಥೆ ಮುನ್ನೆಚ್ಚರಿಕಾ ಕ್ರಮವಾಗಿ ಸಾರ್ವಜನಿಕರಿಗೆ ೧೦ ಲಕ್ಷ ಮಾಸ್ಕ್ ವಿತರಿಸಲು ಸಿದ್ದತೆ ನಡೆಸಿಕೊಂಡಿದ್ದು, ಇದರ ಜತೆಯಲ್ಲೇ ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸುವ ಕಾರ್ಯವನ್ನು ಮಾಡುತ್ತಿದೆ ಎಂದು ರೆಡ್ ಕ್ರಾಸ್ ಸಂಸ್ಥೆಯ ಜಿಲ್ಲಾಧ್ಯಕ್ಷ ಡಾ.ಎನ್.ಗೋಪಾಲಕೃಷ್ಣೇಗೌಡ ತಿಳಿಸಿದರು ನಗರದ ಪತ್ರಕರ್ತರ ಭವನದಲ್ಲಿ ರೆಡ್ಕ್ರಾಸ್ ಸಂಸ್ಥೆ ಹಾಗೂ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಆಶ್ರಯದಲ್ಲಿ ನಡೆದ ಕಾರ್ಯಕ್ರಮದಲ್ಲಿ ಪತ್ರಕರ್ತರಿಗಾಗಿ ೫೫೦೦ ಮಾಸ್ಕ್ ಗಳನ್ಬು ವಿತರಿಸಿ ಅವರು […]