ಕೋಲಾರ,ಆ.28: ಬೆಂಗಳೂರು ಉತ್ತರ ವಿಶ್ವವಿದ್ಯಾಲಯದ ಸಿಂಡಿಕೇಟ್ ಸದಸ್ಯರಾಗಿ ತಾಲೂಕಿನ ಸೀಸಂದ್ರ ಗೋಪಾಲಗೌಡ, ಅರ್ಬಾಜ್ ಪಾಷ, ಹಾಗೂ ಎಸ್.ಜೈದೀಪ್ ಅವರನ್ನು ರಾಜ್ಯಪಾಲರ ಅಜ್ಞನುಸಾರ ಉನ್ನತ ಶಿಕ್ಷಣ ಇಲಾಖೆಯ ಅಧೀನ ಕಾರ್ಯದರ್ಶಿ ಕೆ ಮಂಜುನಾಥ್ ಅವರು ನೇಮಕ ಮಾಡಿ ಆದೇಶ ಹೊರಡಿಸಿದ್ದಾರೆ,ತಾಲೂಕಿನ ಸೀಸಂದ್ರ ಗ್ರಾಮದ ಎಂ.ಗೋಪಾಲಗೌಡ ಅವರು ಕಾಂಗ್ರೆಸ್ ವಿಧ್ಯಾರ್ಥಿ ಘಟಕದ ಜಿಲ್ಲಾ ಅಧ್ಯಕ್ಷ, ರಾಜ್ಯ ಉಪಾಧ್ಯಕ್ಷರಾಗಿ ಜಿಲ್ಲಾ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಸೇರಿದಂತೆ ಬಂಗಾರಪೇಟೆ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾಗಿ ಕಾಂಗ್ರೆಸ್ ಪಕ್ಷವನ್ನು ಸಂಘಟಿಸಿದ್ದಾರೆ ವಿಧ್ಯಾರ್ಥಿ ದೆಸೆಯಿಂದಲೂ ಬೆಂಗಳೂರು ವಿವಿಯ […]
ಕೋಲಾರ:- ನಗರದ 12 ಕೇಂದ್ರಗಳಲ್ಲಿ ನಡೆದ 2023-24 ನೇ ಸಾಲಿನ ಗೆಜೆಟೆಡ್ ಪ್ರೋಬೆಷನರ್ ಗ್ರೂಪ್ ಎ ಮತ್ತು ಬಿ ವೃಂದದ ಹುದ್ದೆಗಳ ಪರೀಕ್ಷೆ ಯಾವುದೇ ಗೊಂದಲವಿಲ್ಲದೇ ನಡೆದಿದ್ದು, ಪರೀಕ್ಷೆಗೆ ನೋಂದಾಯಿಸಿದ್ದ 4422 ಅಭ್ಯರ್ಥಿಗಳ ಪೈಕಿ ಬೆಳಗಿನ ಅವಧಿ ಪರೀಕ್ಷೆಗೆ 1630 ಮಂದಿ ಹಾಗೂ ಮಧ್ಯಾಹ್ನದ ಅವಧಿಯ ಪರೀಕ್ಷೆಗೆ 1634 ಮಂದಿ ಗೈರಾಗಿದ್ದು, ಕೇಂದ್ರಗಳಿಗೆ ಜಿಲ್ಲಾಧಿಕಾರಿ ಅಕ್ರಂಪಾಷಾ, ಎಸ್ಪಿ ನಿಖಿಲ್ ಭೇಟಿ ನೀಡಿ ಪರಿಶೀಲನೆ ನಡೆಸಿದರು.ಪರೀಕ್ಷೆಗೆ ಗೈರಾದವರ ಕುರಿತು ಮಾಹಿತಿ ನೀಡಿರುವ ಶಾಲಾ ಶಿಕ್ಷಣ ಇಲಾಖೆಯ ಡಿಡಿಪಿಐ ಕೃಷ್ಣಮೂರ್ತಿ, […]
ಕೋಲಾರ:- ಭಾರತ ಸೇವಾದಳ ಸ್ಥಾಪನೆಯ ಮೂಲಕ ದೇಶಪ್ರೇಮ ಸೇವಾ ಮನೋಭಾವವನ್ನು ಸಮಾಜದಲ್ಲಿ ಭಿತ್ತಿದ ನಾರಾಯಣ ಸುಬ್ಬರಾವ್ ಹರ್ಡೀಕರ್ ಅವರ ಆದರ್ಶವನ್ನು ವಿದ್ಯಾರ್ಥಿಗಳು ಪಾಲಿಸುವ ಮೂಲಕ ದೇಶದ ಆಸ್ತಿಯಾಗಿ ಉನ್ನತಿ ಸಾಧಿಸಬೇಕು ಎಂದು ಭಾರತ ಸೇವಾದಳ ಜಿಲ್ಲಾಧ್ಯಕ್ಷ ಕೆ.ಎಸ್.ಗಣೇಶ್ ಕರೆ ನೀಡಿದರು.ನಗರದ ಹಳೇ ಮಾಧ್ಯಮಿಕ ಶಾಲೆ, ಉರ್ದು ಹಿರಿಯಪ್ರಾಥಮಿಕ ಶಾಲೆ, ಸರಕಾರಿ ಪ್ರಾಥಮಿಕ ಶಾಲಾ ಮಕ್ಕಳ ಸಮ್ಮುಖದಲ್ಲಿ ನಾ.ಸು.ಹರ್ಡೀಕರ್ ಅವರ 49ನೇ ಪುಣ್ಯ ಸ್ಮರಣೆ ಕಾರ್ಯಕ್ರಮದಲ್ಲಿ ಅವರು ಮಾತನಾಡುತ್ತಿದ್ದರು.ಕರ್ನಾಟಕದಲ್ಲಿ ಜನಿಸಿ, ಚಿಕ್ಕಂದಿನಲ್ಲಿಯೇ ತಂದೆ ತಾಯಿಯನ್ನು ಕಳೆದುಕೊಂಡರೂ ಎದೆಗುಂದದೆ ಸೇವಾ […]
ಶ್ರೀನಿವಾಸಪುರ : ರೈತರು ಬೆಳೆದ ಅನ್ನ ತಿಂದು ರೈತರಿಗೆ ದ್ರೋಹ ಮಾಡುವ ಅಧಿಕಾರಿಗಳು, ಸಚಿವರು ಕಂಡಲ್ಲಿ ರಾಜ್ಯದಾದ್ಯಂತ ತರಕಾರಿಗಳಿಂದ ಹೊಡೆಯುವ.ಚಳುವಳಿ ಮಾಡುವ ಮೂಲಕ ರೈತರ ಆಕ್ರೋಶ ವ್ಯಕ್ತಪಡಿಸಬೇಕೆಂದು ರಾಜ್ಯ ಮುಖಂಡ ಬಂಗಾವದಿ ನಾಗರಾಜ ಸಲಹೆ ನೀಡಿದರು.ತಾಲೂಕಿನ ಬಳಗೆರೆ ರಂಗೇಗೌಡರ ಟಮೋಟೋ ತೋಟಕ್ಕೆ ಗುರುವಾರ ರೈತ ಸಂಘ ವತಿಯಿಂದ ತೋಟಕ್ಕೆ ಬೇಟಿ ನೀಡಿ ಪಸಲು ಪರಿಶೀಲಿಸಿ ಮಾತನಾಡಿದರು.ರೈತರಾದ ಬಳಗೆರೆ ರಂಗೇಗೌಡ ಮಾತನಾಡಿ ಲಕ್ಷಾಂತರ ರೂಪಾಯಿ ಖಾಸಗಿ ಸಾಲ ಮಾಡಿ ಸ್ಥಳೀಯ ವ್ಯಕ್ತಿಯಾದ ಅರಿಕೆರೆ ರಾಮನಾಥ್ ರವರ ಮಾತು ಕೇಳಿ […]
ಶ್ರೀನಿವಾಸಪುರ : ಪಟ್ಟಣದ ಸರೋಜನಿ ರಸ್ತೆಯಲ್ಲಿನ ರಾಘವೇಂದ್ರ ಸ್ವಾಮಿಗಳ ಮಠದಲ್ಲಿ ಗುರುವಾರ ನಡೆದ ರಾಘವೇಂದ್ರ ಸ್ವಾಮಿಗಳ ಆರಾದನಾ ಮಹೋತ್ಸವದ ಕಾರ್ಯಕ್ರಮವು ಅದ್ದೂರಿಯಾಗಿ ನಡೆಯಿತು.ತಹಶೀಲ್ದಾರ್ ಜಿ.ಎನ್.ಸುದಿಂದ್ರ, ಪುರಸಭೆ ಮುಖ್ಯಾಧಿಕಾರಿ ವೈ.ಎನ್.ಸತ್ಯನಾರಾಯಣ, ವ್ಯವಸ್ಥಾಪಕ ನವೀನ್ ಚಂದ್ರ , ಆರೋಗ್ಯ ಅಧಿಕಾರಿ ಕೆ.ಜಿ.ರಮೇಶ್ , ಕಂದಾಯ ನಿರೀಕ್ಷಕ ಎನ್.ಶಂಕರ್, ಎಫ್‍ಡಿಎ ನಾಗೇಶ್, ಸುರೇಶ್, ಸಿಬ್ಬಂದಿ ಶಾರದ, ಭಾಗ್ಯಮ್ಮ, ಶ್ರೀನಾಥ್ ದೇವರ ದರ್ಶನ ಪಡೆದರು.
ಶ್ರೀನಿವಾಸಪುರ : ತಾಲೂಕಿನ ಯೋಜನಾ ಕಚೇರಿಯ ವ್ಯಾಪ್ತಿಯಲ್ಲಿ 2023 – 24 ನೇ ಸಾಲಿನ 669 ನೇ ನಮ್ಮೂರು ನಮ್ಮ ಕೆರೆ ಅಡ್ಡಗಲ್ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಮಲ್ಲಿಮೋರಪಲ್ಲಿಯ ಲಕ್ಕಮ್ಮನಕೆರೆ ನಾಮಫಲಕ ಅನಾವರಣ ಹಾಗೂ ಕೆರೆ ಹಸ್ತಾಂತರ ಕಾರ್ಯಕ್ರಮವನ್ನು ಹಮ್ಮಿಕೊಂಡಿದ್ದು ಈ ಕಾರ್ಯಕ್ರಮವನ್ನು ಊರಿನ ಗಣ್ಯರಾದ ಶಂಕರ್ ರೆಡ್ಡಿ ಅವರು ಉದ್ಘಾಟಿಸಿದರು.. ಕಾರ್ಯಕ್ರಮದ ಕುರಿತು ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ, ಬಿ ಸಿ ಟ್ರಸ್ಟ್ ಶ್ರೀನಿವಾಸಪುರ ತಾಲೂಕಿನ ಯೋಜನಾಧಿಕಾರಿಯವರಾದ ಪ್ರಕಾಶ್ ಕುಮಾರ್ ಮಾತನಾಡುತ್ತಾ ರಾಜ್ಯದಲ್ಲಿ 67% […]
ಕೋಲಾರ: ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘ ಹಾಗೂ ಕೋಲಾರ ಜಿಲ್ಲಾ ಛಾಯಗ್ರಾಹಕ ಸಂಘದ ಸಂಯುಕ್ತಾಶ್ರಯದಲ್ಲಿ ಹಿರಿಯ ಪತ್ರಿಕಾ ಛಾಯಗ್ರಾಹಕರಾದ ದಿವಂಗತ ಜಿ.ಸೋಮಶೇಖರ್ (ಶೇಖರ್ ಸ್ಟುಡಿಯೋ) ರವರ ನೆನಪಿನಲ್ಲಿ ಆಯೋಜಿಸಲಾದ ಕೋಲಾರ ಜಿಲ್ಲಾ ಮಟ್ಟದ ಛಾಯಾಚಿತ್ರ ಸ್ವರ್ಧೆಯಲ್ಲಿ ಗ್ರಾಮೀಣ ಜನಜೀವನ ಮತ್ತು ಕುಲಕಸುಬು ಸಂಬಧಿಸಿದಂತೆ ಕುರಿ ಕಾಯುವ ಮಹಿಳೆಯೊಬ್ಬರು ಸಂಜೆ ಸಮಯದಲ್ಲಿ ಕುರಿಗಳನ್ನು ದೊಡ್ಡಿಗೆ ಕರೆದೊಯುವ ಅತ್ಯೂತ್ತಮ ಚಿತ್ರಕ್ಕೆ ಪತ್ರಿಕಾ ಛಾಯಗ್ರಾಹಕ ಕೆ.ಎನ್.ಚಂದ್ರಶೇಖರ್ (ಕೋಲಾರ್ ನ್ಯೂಸ್ ಚಂದ್ರು) ಪ್ರಥಮ ಬಹುಮಾನ ಪಡೆದು ಕೊಂಡರು ಜೊತೆಗೆ 5000 ನಗದು ಮತ್ತು […]
ಶ್ರೀನಿವಾಸಪುರ : ಸರ್ಕಾರವು ಈ ಘಟನೆಯ ಆರೋಪಿಗಳಿಗೆ ಶೀಘ್ರವಾಗಿ ಶಿಕ್ಷೆ ನೀಡಿ, ಮುಂದಿನ ದಿನಗಳಲ್ಲಿ ಮಹಿಳಾ ಎಲ್ಲಾ ಸಿಬ್ಬಂದಿಗಳಿಗೆ ಸೂಕ್ತ ರಕ್ಷಣೆ ಕೊಡುವ ವ್ಯವಸ್ಥೆ ಮಾಡಿಕೊಡಬೇಕು ಎಂದು ಭಾರತೀಯ ವೈದ್ಯಕೀಯ ಸಂಘದ ತಾಲೂಕು ಅಧ್ಯಕ್ಷ ಡಾ|| ವೈ.ವಿ.ವೆಂಕಟಾಚಲ ಒತ್ತಾಯಿಸಿದರು.ಪಟ್ಟಣದ ತಹಶೀಲ್ದಾರ್ ಕಚೇರಿ ಮುಂಭಾಗ ಶನಿವಾರ ಭಾರತೀಯ ವೈದ್ಯ ಸಂಘ. ಶ್ರೀನಿವಾಸಪುರ ಶಾಖೆಯು ಕೋಲ್ಕತ್ತಾ ವೈದ್ಯೆ ಮೇಲೆ ಅತ್ಯಾಚಾರ ಮತ್ತು ಕೊಲೆ ವಿರೋಧಿಸಿ ವೈದ್ಯರಿಗೆ ಹಾಗು ಸಿಬ್ಬಂದಿಗೆ ರಕ್ಷಣೆ ಕೋರಿ ಸರ್ಕಾರಕ್ಕೆ ರವಾನಿಸುವಂತೆ ತಹಶೀಲ್ದಾರ್ ಜಿ.ಎನ್.ಸುದಿಂದ್ರ ಮೂಲಕ ಮನವಿ […]
ಕೋಲಾರ,ಆ.16: ಚೆನ್ನೈ ಕಾರಿಡಾರ್ ರಸ್ತೆ ಅಭಿವೃದ್ದಿಗೆ ಭೂಮಿ ಕಳೆದುಕೊಂಡಿರುವ ಗಡಿಭಾಗದ ಏತುರಹಳ್ಳಿ, ಚುಕ್ಕನಹಳ್ಳಿ ರೈತರ ಮರಗಿಡಗಳ ಎರಡನೇ ಕಂತಿನ ಪರಿಹಾರ ವಿತರಣೆ ಮಾಡುವವರೆಗೂ ಕಾಮಗಾರಿ ಸ್ಥಗಿತಗೊಳಿಸುವಂತೆ ಬುಧವಾರ ನಡೆದ ರೈತರ ಸಭೆಯಲ್ಲಿ ಗುತ್ತಿಗೆದಾರರಿಗೆ ಮಾನ್ಯ ಜಿಲ್ಲಾಧಿಕಾರಿಗಳಾದ ಆಕ್ರಂ ಪಾಷರವರು ಸೂಚನೆ ನೀಡಿದರು.ಮುಳಬಾಗಿಲು ಗಡಿಭಾಗದ ಏತುರಹಳ್ಳಿ ಚುಕ್ಕನಹಳ್ಳಿ ರೈತರಿಗೆ ಬರಬೇಕಾದ 2 ನೇ ಕಂತಿನ ಮರಗಿಡಗಳ ಪರಿಹಾರ ನೀಡಲು ಅಧಿಕಾರಿಗಳ ನಿರ್ಲಕ್ಷದ ಬಗ್ಗೆ ನೊಂದ ರೈತರಾದ ರಾಜಣ್ಣ, ನಟರಾಜ್‍ರವರು ಜಿಲ್ಲಾಧಿಕಾರಿಗಳ ಗಮನಕ್ಕೆ ತಂದಾಗ ಸಭೆ ಕರೆದು ಸಮಸ್ಯೆ ಬಗೆಹರಿಸುತ್ತೇವೆಂದು […]