ಸಿದ್ದರಾಮಯ್ಯ ನಂತರ ಡಿ.ಕೆ.ಶಿವಕುಮಾರ್ ಮುಖ್ಯಮಂತ್ರಿಯಾಗುವುದು ನಿಶ್ಚಿತ – ಸಚಿವ ಬಿ.ಝೆಡ್. ಜಮೀರ್ ಅಹ್ಮದ್ ಖಾನ್ಶ್ರೀನಿವಾಸಪುರ: ಕಾಂಗ್ರೆಸ್ ಪಕ್ಷವು ಡಿ.ಕೆ.ಶಿವಕುಮಾರ್ ಅವರ ನೇತೃತ್ವದಲ್ಲಿ ರಾಜ್ಯದಲ್ಲಿ ಅಧಿಕಾರಕ್ಕೆ ಬಂದಿದ್ದು, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ನಂತರ ಡಿ.ಕೆ.ಶಿವಕುಮಾರ್ ಅವರೇ ರಾಜ್ಯದ ಮುಖ್ಯಮಂತ್ರಿಯಾಗುವುದು ನಿಶ್ಚಿತ ಎಂದು ವಸತಿ ಸಚಿವ ಬಿ.ಝೆಡ್. ಜಮೀರ್ ಅಹ್ಮದ್ ಖಾನ್ ಹೇಳಿದರು.ತಾಲೂಕಿನ ಲಕ್ಷ್ಮಿಪುರ ಗ್ರಾಮದಲ್ಲಿ ಶುಕ್ರವಾರ ನೂತನವಾಗಿ ನಿರ್ಮಾಣಗೊಂಡ ನೂರಾನಿ ಮಸೀದಿಯನ್ನು ಉದ್ಘಾಟಿಸಿ ಮಾತನಾಡಿದ ಅವರು, ರಾಜ್ಯದಲ್ಲಿ ನವೆಂಬರ್ ತಿಂಗಳಲ್ಲಿ ಕ್ರಾಂತಿ ಆಗಲಿದೆ ಎಂದು ಕೆಲವರು ವದಂತಿ ಹಬ್ಬಿಸಿದ್ದರು. […]
ಶ್ರೀನಿವಾಸಪುರ : ತಾಲೂಕಿನ ಕಸಬಾ ಹೋಬಳಿಯ ಚಲ್ದಿಗಾನಹಳ್ಳಿ ಗ್ರಾಮಪಂಚಾಯಿತಿಗೆ ಸಂಬಂಧಿಸಿದಂತೆ ಒಟ್ಟು 17 ಸದಸ್ಯರು ಇದ್ದು, 12 ಸದಸ್ಯರು ಡಿಸೆಂಬರ್ 20 ರಂದು ಪ್ರಸ್ತುತ ಇರುವ ಅಧ್ಯಕ್ಷರಾದ ಶ್ರೀನಿವಾಸ್ ವಿರುದ್ಧ ಅರ್ಜಿ ನೀಡಿ ಅವಿಶ್ವಾಸ ವ್ಯಕ್ತಪಡಿಸಿದ್ದರು. ಈ ಹಿನ್ನೆಲೆಯಲ್ಲಿ ಬುಧವಾರ ಉಪವಿಭಾಗಧಿಕಾರಿ ಡಾ|| ಮೈತ್ರಿ ಗ್ರಾಮಪಂಚಾಯಿತಿ ಕಚೇರಿಗೆ ಬೇಟಿ ನೀಡಿ ಸದಸ್ಯರ ಅಭಿಪ್ರಾಯವನ್ನು ಸಂಗ್ರಹಿಸಲಾಗಿದೆ ಎಂದು ಮಾಹಿತಿ ನೀಡಿದರು.ಸಭೆಯಲ್ಲಿ ಅಧ್ಯಕ್ಷರ ವಿರುದ್ಧ 12 ಸದಸ್ಯರು ಕೈ ಎತ್ತುವ ಮೂಲಕ ಅವಿಶ್ವಾಸವನ್ನು ವ್ಯಕ್ತಪಡಿಸಲಾಗಿ ಸಭೆಯ ನಿರ್ಣಯವನ್ನು ಜಿಲ್ಲಾಚುನಾವಣಾಧಿರಿಗಳಿಗೆ ಮಾಹಿತಿ […]
ಶ್ರೀನಿವಾಸಪುರ : ಪಟ್ಟಣದ ಜಾಕಿರ್ ಹುಸೇನ್ ಮೊಹಲ್ಲಾದ ಸರ್ಕಾರಿ ಉರ್ದು ಹಾಗೂ ಆಂಗ್ಲ ಮಾಧ್ಯಮ ಹಿರಿಯ ಪ್ರಾಥಮಿಕ ಶಾಲೆಯ ವಿದ್ಯಾರ್ಥಿಗಳಿಗೆ ಅಗತ್ಯವಿರುವ ಎಲ್ಲ ರೀತಿಯ ಶೈಕ್ಷಣಿಕ ನೆರವು ನೀಡಲಾಗುವುದು ಎಂದು ಎಪಿಜೆ ಅಬ್ದುಲ್ ಕಲಾಂ ವೆಲ್ಫೇರ್ ಟ್ರಸ್ಟ್ ಅಧ್ಯಕ್ಷ ಹಾಗೂ ಎಂ.ಪಿ. ಫ್ರೂಟ್ಸ್ ಮಾಲಿಕ ಅಬ್ದುಲ್ ಮುಜೀದ್ ಭರವಸೆ ನೀಡಿದರು.ಶಾಲೆಯಲ್ಲಿ ಎಪಿಜೆ ಅಬ್ದುಲ್ ಕಲಾಂ ವೆಲ್ಫೇರ್ ಟ್ರಸ್ಟ್ ವತಿಯಿಂದ ಆಯೋಜಿಸಿದ್ದ ಸಮಾರಂಭದಲ್ಲಿ ನೂತನ ವರ್ಷದ ಕ್ಯಾಲೆಂಡರ್ ಬಿಡುಗಡೆ ಮಾಡಿ ಮಾತನಾಡಿದ ಅವರು, ಉರ್ದು ಶಾಲೆಯ ವಿದ್ಯಾರ್ಥಿಗಳು ಗುಣಮಟ್ಟದ […]
ಶ್ರೀನಿವಾಸಪುರ : ಪಟ್ಟಣದ ಗಫಾರ್ ಖಾನ್ ಮೊಹಲ್ಲಾದ ಖಾನ್ ಸಾಬ್ ಮಸೀದಿ ಸುತ್ತಮುತ್ತ ಬೀದಿ ನಾಯಿಗಳ ಹಾವಳಿ ಮಿತಿ ಮೀರಿದ್ದು, ಸಾರ್ವಜನಿಕರ ದೈನಂದಿನ ಜೀವನವೇ ಅಸ್ತವ್ಯಸ್ತಗೊಂಡಿದೆ. ಇತ್ತೀಚೆಗೆ ಮೇಕಿಗಳ ಮೇಲೆ ಬೀದಿ ನಾಯಿಗಳು ದಾಳಿ ನಡೆಸಿ ಸಾವನ್ನಪ್ಪಿರುವ ಘಟನೆ ನಡೆದ ಬಳಿಕ, ಪ್ರದೇಶದಲ್ಲಿ ಭಯಭೀತಿಯ ವಾತಾವರಣ ನಿರ್ಮಾಣವಾಗಿದೆ.ದಿನದಿಂದ ದಿನಕ್ಕೆ ಬೀದಿ ನಾಯಿಗಳ ಸಂಖ್ಯೆ ಹೆಚ್ಚುತ್ತಿರುವುದರಿಂದ ಮಕ್ಕಳು, ಮಹಿಳೆಯರು ಹಾಗೂ ವೃದ್ಧರು ಮನೆಯಿಂದ ಹೊರಗೆ ಬರಲು ಕೂಡ ಹಿಂಜರಿಯುವ ಸ್ಥಿತಿ ಎದುರಾಗಿದೆ. ಪ್ರತಿ ದಿನ ಬೆಳಗ್ಗೆ ಹಾಗೂ ಸಂಜೆ […]
ಶ್ರೀನಿವಾಸಪುರ: ಪಟ್ಟಣದ ಅಲ್ಪಸಂಖ್ಯಾತರ ಮೌಲಾನ ಆಜಾದ್ ಮಾದರಿ ಶಾಲೆಗೆ ಜಿಲ್ಲಾ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ ಜಿಲ್ಲಾ ಅಧಿಕಾರಿ ಮೈಲೇರಪ್ಪ ಅವರು ಮಂಗಳವಾರ ಭೇಟಿ ನೀಡಿ, ಶಾಲಾ ಆವರಣದಲ್ಲಿ ನಡೆಯುತ್ತಿರುವ ಹಾಗೂ ಪೂರ್ಣಗೊಂಡಿರುವ ಸಿವಿಲ್ ಕಾಮಗಾರಿಗಳನ್ನು ಪರಿಶೀಲಿಸಿ, ಕಾಮಗಾರಿಗಳ ಗುಣಮಟ್ಟವನ್ನು ಅವಲೋಕಿಸಿದರು. ಶಾಲೆಯ ಕಟ್ಟಡಗಳು, ತರಗತಿ ಕೋಣೆಗಳು, ಮೂಲಸೌಕರ್ಯಗಳು ಹಾಗೂ ವಿದ್ಯಾರ್ಥಿಗಳಿಗೆ ಒದಗಿಸಲಾಗಿರುವ ಸೌಲಭ್ಯಗಳ ಬಗ್ಗೆ ಮಾಹಿತಿ ಪಡೆದ ಜಿಲ್ಲಾ ಅಧಿಕಾರಿ, ಕಾಮಗಾರಿಗಳು ನಿಗದಿತ ಮಾನದಂಡಗಳಿಗೆ ಅನುಗುಣವಾಗಿ ನಡೆದಿರುವುದನ್ನು ಪರಿಶೀಲಿಸಿದರು. ಗುಣಮಟ್ಟದಲ್ಲಿ ಯಾವುದೇ ತಾರತಮ್ಯ ಇರಬಾರದು ಹಾಗೂ ವಿದ್ಯಾರ್ಥಿಗಳಿಗೆ […]
ಶ್ರೀನಿವಾಸಪುರ : ರಾಜ್ಯ ಸರ್ಕಾರ ರೈತ ವಿರೋಧಿ ಕ್ರಮಗಳನ್ನು ಅನುಸರಿಸುತ್ತಿದ್ದು, ಅರಣ್ಯ ಇಲಾಖೆ ದೋರಣೆಯನ್ನು ಖಂಡಿಸಿ ರೈತರ ಪರ ಹೋರಾಟವನ್ನು ಮುಂದುವರಿಸಲಾಗುವುದು ಎಂದು ಅಖಿಲ ಭಾರತ ಕಿಸಾನ್ ಸಂಘದ ಕಾರ್ಯದರ್ಶಿ ವಿಜುಕೃಷ್ಣ ಎಚ್ಚರಿಕೆ ನೀಡಿದರು. ಪಟ್ಟಣದ ಪ್ರವಾಸಿ ಮಂದಿರದಲ್ಲಿ ಮಂಗಳವಾರ ಕೆಪಿಆರ್ಎಸ್ ಹಾಗೂ ಅಖಿಲ ಭಾರತ ಕಿಸಾನ್ ಸಂಘದ ವತಿಯಿಂದ ಆಯೋಜಿಸಿದ್ದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಬೆಳಗಾವಿಯಲ್ಲಿ ನಡೆದ ವಿಧಾನಸಭೆ ಚರ್ಚೆಯಲ್ಲಿ ಶಾಸಕ ಜಿ.ಕೆ. ವೆಂಕಟಶಿವಾರೆಡ್ಡಿ ಕೇಳಿದ ಪ್ರಶ್ನೆಗೆ ಅರಣ್ಯ ಸಚಿವ ಈಶ್ವರ ಖಂಡ್ರೆ ನೀಡಿದ ಉತ್ತರ […]
ಕೋಲಾರ : ಡಿಜಿಟಲ್ ಯುಗದಲ್ಲಿ ತಂತ್ರಜ್ಞಾನವು ನಮ್ಮನ್ನು ಆವರಿಸಿಕೊಂಡಿದೆ. ಆದರೆ ನಾವು ತಂತ್ರಜ್ಞಾನಕ್ಕೆ ಗುಲಾಮರಾಗದೆ, ಅದನ್ನು ನಮ್ಮ ಹತೋಟಿಯಲ್ಲಿಟ್ಟುಕೊಂಡು ಜಾಗೃತ ಗ್ರಾಹಕರಾಗಿ ವ್ಯವಹರಿಸಬೇಕು ಎಂದು ಕೋಲಾರ ಜಿಲ್ಲಾಧಿಕಾರಿ ಡಾ. ಎಂ. ಆರ್. ರವಿ ಅವರು ತಿಳಿಸಿದರು. ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ ಗ್ರಾಹಕರ ವ್ಯಾಜ್ಯಗಳ ಪರಿಹಾರ ಆಯೋಗ ಹಾಗೂ ವಿವಿಧ ಇಲಾಖೆಗಳ ಸಂಯುಕ್ತಾಶ್ರಯದಲ್ಲಿ ಹಮ್ಮಿಕೊಳ್ಳಲಾಗಿದ್ದ, ‘ರಾಷ್ಟ್ರೀಯ ಗ್ರಾಹಕರ ದಿನಾಚರಣೆ 2025-26 ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡುತ್ತಿದ್ದರು. ಈ ವರ್ಷದ ಘೋಷವಾಕ್ಯವಾದ ಡಿಜಿಟಲ್ ನ್ಯಾಯದ ಮೂಲಕ ಸಮರ್ಥ ಮತ್ತು […]
ಶ್ರೀನಿವಾಸಪುರ : ಠಾಣೆಗೆ ಯಾರೇ ಬಂದರೂ ಸೌಜನ್ಯದಿಂದ ಮಾತನಾಡಿ ಅವರ ಸಮಸ್ಯೆಗಳನ್ನ ಆಲಿಸಿ ನೊಂದು ಬಂದತವರಿಗೆ ಅಧಿಕಾರಿಗಳು ನ್ಯಾಯವನ್ನು ಒದಗಿಸಿ ನಮ್ಮ ಇಲಾಖೆಯ ಬಗ್ಗೆ ಅವರಿಗೆ ನಂಬಿಕೆ ಬರುತ್ತದೆ ಎಂದು ನೂತನ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕನಿಕಾ ಸಕ್ರಿವಾಲಾ ಹೇಳಿದರು.ಪಟ್ಟಣದ ಪೊಲೀಸ್ ಠಾಣೆಗೆ ಶನಿವಾರ ನೂತನ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ದಿಡೀರ್ ಬೇಟಿ ನೀಡಿ ಕಾನೂನು ವ್ಯವಸ್ಥೆ ಬಗ್ಗೆ ಅಧಿಕಾರಿಗಳೊಂದಿಗೆ ಚರ್ಚಿಸಿ ನಂತರ ಸುದ್ದಿಗಾರರೊಂದಿಗೆ ಮಾತನಾಡಿದರು. ಸಿಬ್ಬಂದಿ ಕಡಿಮೆ ಇದೆ ಸುಗಮ ಸಂಚಾರಕ್ಕೆ ಹೆಚ್ಚು ಆದ್ಯತೆ ನೀಡಬೇಕು […]
ಶ್ರೀನಿವಾಸಪುರ : ಜೀವನವೆಂಬ ನದಿಯು ಹರಿ ಹರಿಯುತ್ತ ತನ್ನಲ್ಲಿನ ಕಲ್ಮಶವನ್ನು ತೊಳೆದು, ನಿಕಲ್ಮಶವಾದ ನೀರಾದಾಗ ಅದು ನಮ್ಮನ್ನು ಕಾಪಾಡುತ್ತದೆ ಜೀವನವೆಂಬ ಸಾಗರವನ್ನು ಸಾಗಲು ಸಾಧ್ಯವಾಗುತ್ತದೆ ಎಂದು ಜಿಲ್ಲಾಧಿಕಾರಿ ಎಂ.ಆರ್.ರವಿ ಹೇಳಿದರು.ತಾಲೂಕಿನ ರಾಯಲ್ಪಾಡು ಗ್ರಾಮದ ಸರ್ಕಾರಿ ಪದವಿ ಪೂರ್ವ ಕಾಲೇಜು ಹಾಗು ಪ್ರೌಡಶಾಲಾವರಣದಲ್ಲಿ ಶನಿವಾರ ಅರಿವು ಕೇಂದ್ರ ವತಿಯಿಂದ ಅರಿವು ಭಾರತ ಅಡಿಯಲ್ಲಿ ನಮ್ಮ ನಡೆ ಅಸ್ಪೃಶ್ಯತೆ ಮುಕ್ತ ಭಾರತದೆಡೆಗೆ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದರು. ಇಂದು ಅರಿವು ಕೇಂದ್ರವು ಸಮಾಜದಲ್ಲಿನ ಅಸ್ಪೃಶ್ಯತೆಯನ್ನು ಹೋಗಲಾಡಿಸುವ ಮತ್ತು ಸಾಮಾಜಿಕ ಸಮಾನತೆಯನ್ನು […]

