ಶ್ರೀನಿವಾಸಪುರ : ವಿದ್ಯಾರ್ಥಿಗಳು ಪಠ್ಯದ ಜೊತೆಗೆ ಪಠ್ಯೇತರ ಚಟುವಟಿಕೆಗಳಲ್ಲಿ ಸಕ್ರಿಯವಾಗಿ ಭಾಗವಹಿಸಿದರೆ ಅವರಲ್ಲಿ ಸಾಮಾನ್ಯ ಜ್ಞಾನ ವೃದ್ಧಿಯಾಗುತ್ತದೆ ಎಂದು ತಾಲ್ಲೂಕು ಯೋಜನಾಧಿಕಾರಿ (ಟಿಪಿಒ) ಎಸ್. ವೆಂಕಟಸ್ವಾಮಿ ಹೇಳಿದರು. ತಾಲೂಕಿನ ಯಲ್ದೂರು ಗ್ರಾಮದಲ್ಲಿನ ಶ್ರೀ ಶ್ರೀನಿವಾಸ ಪಬ್ಲಿಕ್ ಆಂಗ್ಲ ಮಾಧ್ಯಮ ಪ್ರಾಥಮಿಕ ಹಾಗೂ ಪ್ರೌಢಶಾಲೆಯಲ್ಲಿ ಬುಧವಾರ ಆಯೋಜಿಸಿದ್ದ ಅಂತರ್ಶಾಲಾ ರಸಪ್ರಶ್ನೆ ಸ್ಪರ್ಧೆ ಹಾಗೂ ಶಾಲಾ ವಾರ್ಷಿಕೋತ್ಸವವನ್ನು ಉದ್ಘಾಟಿಸಿ ಅವರು ಮಾತನಾಡಿದರು. ವಿದ್ಯೆ ಎಂಬುದು ಯಾರೊಬ್ಬರ ಸ್ವತ್ತಲ್ಲ. ಆಸಕ್ತಿ ಮತ್ತು ಶ್ರಮದಿಂದ ವಿದ್ಯೆ ಕಲಿಯುವವರಿಗೆ ಮಾತ್ರ ಅದು ಒಲಿಯುತ್ತದೆ. ಪೋಷಕರು […]
ಶ್ರೀನಿವಾಸಪುರ : ತಾಲ್ಲೂಕಿನಲ್ಲಿ ಬೆಳೆಯುವ ಬೆಳೆಗಳಿಗೆ ಯಾವ ರೀತಿಯಲ್ಲಿ ಕೀಟನಾಶಕಗಳನ್ನು ಸಿಂಪಡಣೆ ಮಾಡಬೇಕು ಎಂಬುದರ ಬಗ್ಗೆ ಹೊಗಳಗೆರೆ ತೋಟಗಾರಿಕೆ ಸಂಶೋಧನಾ ಮತ್ತು ವಿಸ್ತರಣಾ ಕೇಂದ್ರದ ವಿಜ್ಞಾನಿ ಹಾಗೂ ಮುಖ್ಯಸ್ಥ ಡಾ/ಬಿ. ಆಂಜನೇಯರೆಡ್ಡಿ ಮಾಹಿತಿ ನೀಡಿದರು. ಪಟ್ಟಣದ ಕೃಷಿ ಇಲಾಖೆಯ ಸಭಾಂಗಣದಲ್ಲಿ ಮಂಗಳವಾರ ರೈತ ದಿನಚಾರಣೆಗೆ ಚಾಲನೆ ನೀಡಿ ಮಾತನಾಡಿ ಸಮಗ್ರ ಕೃಷಿ ಪದ್ದತಿ ಬಗ್ಗೆ ರೈತರಿಗೆ ಅರಿವು ಮೂಡಿಸಿದರು. ಕೃಷಿ ಇಲಾಖೆ ಸಹಾಯಕ ನಿರ್ದೇಶಕ ಎಚ್.ಎಂ.ಮಹೇಶ್ಬಾಬು ಮಾತನಾಡಿ ಸರ್ಕಾರದಿಂದ ಬರುವ ಸೌಲಭ್ಯಗಳ ಬಗ್ಗೆ ವಿಸ್ತರಾವಾಗಿ ತಿಳಿಸುತ್ತಾ, ಸರ್ಕಾರ […]
ಶ್ರೀನಿವಾಸಪುರ : ಭಾತೃತ್ವ ಭಾವನೆ, ರಾಜನೀತಿ, ಮನೋಧರ್ಮ, ಮಾನವೀಯ ಮೌಲ್ಯ ಪ್ರಜಾಪ್ರಭುತ್ವ ರಾಮಾಯಣ ಮಹಾಕಾವ್ಯವು ಪರಿಚಯಿಸಿ ವಿಶ್ವಕ್ಕೆ ರಾಮಾಯಣ ಎಂಬ ಅತಿದೊಡ್ಡದಾದ ಕಾವ್ಯವನ್ನು ಕೊಡುಗೆ ನೀಡಿದ್ದಾರೆ ಎಂದು ದೊಡ್ಡಬಳ್ಳಾಪುರ ಮಠದ ಶ್ರೀ ಬ್ರಹ್ಮಾನಂದಸ್ವಾಮಿ ಆರ್ಶೀವಸಿದರು. ತಾಲೂಕಿನ ಪುಲಗೋರಕೋಟೆ ಗ್ರಾಮದಲ್ಲಿ ಮಂಗಳವಾರ ವಾಲ್ಮೀಕಿ ಸಮುದಾಯಭವನನ್ನು ಲೋಕಾರ್ಪಣೆ ಮಾಡಿ ಮಾತನಾಡಿದರು. ಇಂದು ಪ್ರತಿ ಗ್ರಾಮಗಳಲ್ಲಿ ಶ್ರೀ ಕೋದಂಡರಾಮಸ್ವಾಮಿ, ಆಂಜನೇಯಸ್ವಾಮಿ, ಇರಬೇಕಾದರೆ ಪ್ರಮುಖ ಕಾರಣ ವಾಲ್ಮೀಕಿ ಮಹರ್ಷೀ ಋಷಿಗಳೇ ಕಾರಣ . ವಾಲ್ಮೀಕಿ ಮಹರ್ಷಿರವರು ರಾಮಾಯಣವನ್ನು ರಚನೆ ಮಾಡದಿದ್ದರೆ ಇಂದು ಶ್ರೀರಾಮ, […]
ಶ್ರೀನಿವಾಸಪುರ : ಪೋಷಕರು ತಮ್ಮ ಮಕ್ಕಳು ಯಾವ ವಿಷಯದಲ್ಲಿ ಆಸಕ್ತಿ ಇರುತದೋ ಆ ವಿಷಯಕ್ಕೆ ಸಂಬಂದಿಸಿದ ಶಿಕ್ಷಣವನ್ನು ಕೊಡಿಸುವಂತೆ ಬಿಇಒ ಬಿ.ಸಿ. ಮುನಿಲಕ್ಷ್ಮಯ್ಯ ಸಲಹೆ ನೀಡಿದರು. ಪಟ್ಟಣದ ಎಸ್ಎಫ್ಎಸ್ ಶಾಲೆಯಲ್ಲಿ ಸೋಮವಾರ ನಡೆದ ಶಾಲಾವಾರ್ಷಿಕೋತ್ಸವ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದರು. ಎಲ್ಲಾ ವಿದ್ಯಾರ್ಥಿಗಳು ವೈದ್ಯರು, ಇಂಜನೀಯರ್ ಆಗಲು ಸಾಧ್ಯವಿಲ್ಲ. ವಿದ್ಯಾರ್ಥಿಯ ಜೀವನ ತನ್ನ ಗುರಿ ಕಡೆಗೆ ಇರಬೇಕು . ಇಟ್ಟುಕೊಂಡ ಗುರಿ ತಲುಪಲು ನಿರಂತರ ಪ್ರಯತ್ನ ಮತ್ತು ಶ್ರದ್ದೆ , ಭಕ್ತಿಯಿಂದ ಅಧ್ಯಯನ ಮಾಡಬೇಕು . ಆಗ […]
ಶ್ರೀನಿವಾಸಪುರ: ಪತ್ರಕರ್ತರ ಸಮಸ್ಯೆಗಳಿಗೆ ಸ್ಪಂದಿಸಿ ಪ್ರಾಮಾಣಿಕವಾಗಿ ಕೆಲಸ ಮಾಡುವ ವೃತ್ತಿಪರರಾಗಬೇಕು. ಹುದ್ದೆ ಯಾವುದೇ ಮಾನದಂಡವಲ್ಲ; ಅದು ಒಂದು ಜವಾಬ್ದಾರಿಯಾಗಿದೆ ಎಂದು ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಪ್ರಧಾನ ಕಾರ್ಯದರ್ಶಿ ಸುರೇಶ್ ಕುಮಾರ್ ಹೇಳಿದರು.ಪಟ್ಟಣದ ವಾಸವಿ ಕಲ್ಯಾಣ ಮಂಟಪದಲ್ಲಿ ನಡೆದ ಶ್ರೀನಿವಾಸಪುರ ತಾಲ್ಲೂಕು ಕಾರ್ಯನಿರತ ಪತ್ರಕರ್ತರ ಸಂಘದ ಪದಾಧಿಕಾರಿಗಳ ಚುನಾವಣೆಯಲ್ಲಿ ಮಾತನಾಡಿದ ಅವರು, ಅವಿರೋಧವಾಗಿ ಆಯ್ಕೆಯಾದ ನೂತನ ಸಮಿತಿ ಪದಾಧಿಕಾರಿಗಳಿಗೆ ಅಭಿನಂದನೆ ಸಲ್ಲಿಸಿದರು. ಎಲ್ಲರೂ ಒಗ್ಗಟ್ಟಿನಿಂದ ಸಂಘವನ್ನು ಮುನ್ನಡೆಸಬೇಕು ಎಂದು ಕರೆ ನೀಡಿದರು.ಚುನಾವಣಾಧಿಕಾರಿ ಪಾ.ಶ್ರೀ ಅನಂತರಾಮ್ ಮಾತನಾಡಿ, ಈ […]
ಶ್ರೀನಿವಾಸಪುರ : ಪಟ್ಟಣದ ಸರ್ಕಾರಿ ಪದವಿ ಪೂರ್ವ ಬಾಲಕೀಯರ ಕಾಲೇಜು ವತಿಯಿಂದ ಶನಿವಾರ ತಾಲೂಕು ಆರೋಗ್ಯ ಕೇಂದ್ರ ವತಿಯಿಂದ ಪಟ್ಟಣದ ಪ್ರಮುಖ ರಸ್ತೆಗಳಲ್ಲಿ ಪಲ್ಸ್ ಪೋಲಿಯೋ ಲಸಿಕಾ ಜಾಥ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದರು.ತಾಲೂಕಿನಲ್ಲಿ 16 ಸಾವಿರ ಮೇಲ್ಪಟ್ಟು ಮಕ್ಕಳಿಗೆ ಇದ್ದು, 4 ದಿನಗಳ ಕಾಲ ಪಲ್ಸ್ಪೋಲಿಯೋ ಲಸಿಕಾ ಕಾರ್ಯಕ್ರಮವನ್ನು ಹಮ್ಮಿಕೊಂಡಿದ್ದು 0 ಯಿಂದ 5 ವರ್ಷ ಮಗುವಿಗೆ ಎರಡು ಹನಿ ಲಸಿಕೆಯನ್ನು ಹಾಕುವುದರ ಮೂಲಕ ಯಶಸ್ವಿಗೊಳಿಸಲು ಈಗಾಗಲೇ ಟಾಸ್ಕ್ ಫೋರ್ಸ್ನ ಪದಾಧಿಕಾರಿಗಳೊಂದಿಗೆ ಚರ್ಚೆ ಮಾಡಲಾಗಿದೆ. ಈ […]
ಶ್ರೀನಿವಾಸಪುರ : ಪಟ್ಟಣದಲ್ಲಿ ರೋಗ ರುಜನಿಗಳು ಹರಡದಂತೆ ಪೌರ ಕಾರ್ಮಿಕರು ತಮ್ಮ ಆರೋಗ್ಯವನ್ನು ಲೆಕ್ಕಿಸದೆ ಪೌರರ ಆರೋಗ್ಯವನ್ನು ಕಾಪಾಡಲು ಒಂದು ರೀತಿಯಲ್ಲಿ ವೈದ್ಯಾಧಿಕಾರಿಗಳಾಗಿ ಕಾರ್ಯ ನಿರ್ವಹಿಸುತ್ತಾರೆ ಎಂದು ಹೇಳುತ್ತಾ, ಪಟ್ಟಣದ ಸ್ವಚ್ಚತೆಯಲ್ಲಿ ಪೌರಕಾರ್ಮಿಕರ ಕಾರ್ಯ ಬಹು ಮುಖ್ಯವಾದದು ಎಂದು ಪುರಸಭೆ ಮುಖ್ಯಾಧಿಕಾರಿ ನಾಗರಾಜ್. ವಿ ಹೇಳಿದರು.ಪಟ್ಟಣ ಪುರರಸಭೆವತಿಯಿಂದ ಶನಿವಾರ ಸಿ&ಡಿ ತ್ಯಾಜ್ಯ ವಿಲೇವಾರಿ ಅಂದೋಲನಕ್ಕೆ ಚಾಲನೆ ನೀಡಿ ಮಾತನಾಡಿದರು.ಪಟ್ಟಣದಲ್ಲಿ ಸ್ವಚ್ಚತೆ ಕಾಪಾಡುವುದು ಪ್ರತಿಯೊಬ್ಬ ನಾಗರೀಕನ ಜವಾಬ್ದಾರಿ ಅದಕ್ಕೆ ಪ್ರತಿಯೊಬ್ಬರು ಕೈಜೋಡಿಸಬೇಕು. ಜಿಲ್ಲಾಧಿಕಾರಿಗಳ ಆದೇಶದ ಮೇರೆಗೆ ಪುರಸಭೆ ವ್ಯಾಪ್ತಿಯ […]
ಶ್ರೀನಿವಾಸಪುರ : ಕೋಲಾರ ಜಿಲ್ಲೆಯ ಶ್ರೀನಿವಾಸಪುರ ತಾಲ್ಲೂಕಿನ ಯದರೂರು ಗ್ರಾಮದ ಸರ್ಕಾರಿ ಉರ್ದು ಶಾಲೆಯ ಅಡುಗೆ ಕೊಠಡಿ ಅತ್ಯಂತ ಶಿಥಿಲಾವಸ್ಥೆಯಲ್ಲಿದ್ದು, ಯಾವುದೇ ಕ್ಷಣದಲ್ಲಿ ಅನಾಹುತ ಸಂಭವಿಸುವ ಆತಂಕ ಇದೆ ಎಂದು ಕರ್ನಾಟಕ ರಾಜ್ಯ ಅಲ್ಪಸಂಖ್ಯಾತರ ಆಯೋಗ ಎಚ್ಚರಿಕೆ ನೀಡಿದೆ. ಅಡುಗೆ ಕೊಠಡಿಯ ಮೇಲ್ಛಾವಣಿಯಿಂದ ಸಿಮೆಂಟ್ ತುಂಡುಗಳು ಉದುರುತ್ತಿದ್ದು, ಮಕ್ಕಳ ಹಾಗೂ ಅಡುಗೆ ಸಿಬ್ಬಂದಿಯ ಜೀವಕ್ಕೆ ಅಪಾಯ ಎದುರಾಗಿರುವ ಬಗ್ಗೆ ಪ್ರಧಾನ ಮಂತ್ರಿಗಳ ಹೊಸ 15 ಅಂಶಗಳ ಕಾರ್ಯಕ್ರಮದ ಜಿಲ್ಲಾ ಸಮಿತಿ ಸದಸ್ಯ ಶಬ್ಬೀರ್ ಅಹ್ಮದ್ ಅವರು ಆಯೋಗಕ್ಕೆ […]
ಶ್ರೀನಿವಾಸಪುರ : ಪೊಲೀಸ್ ಇಲಾಖೆ ಪಕ್ಷತೀತವಾಗಿ ಕಾರ್ಯನಿರ್ವಹಿಸಬೇಕು. ಯಾರದೂ ಒತ್ತಡಕ್ಕೆ ಮಣಿದು ಇಲ್ಲಸಲ್ಲದ ಕೇಸು ದಾಖಲಿಸುವುದು ಸರಿಯಲ್ಲ ಎಂದು ಕೆಪಿಸಿಸಿ ಸದಸ್ಯ ಸಂಜಯ್ರೆಡ್ಡಿ ಹೇಳಿದರು.ತಾಲೂಕಿನ ಗೌನಿಪಲ್ಲಿ ಪೊಲೀಸ್ಠಾಣೆಯ ಮುಂಭಾಗದಲ್ಲಿ ಗುರುವಾರ ಕಾಂಗ್ರೆಸ್ ಪಕ್ಷದ ಕಾರ್ಯಕರ್ತರಿಂದ ಕಾಂಗ್ರೆಸ್ ಕಾರ್ಯಕರ್ತರ ಮೇಲೆ ಸುಳ್ಳು ಕೇಸ್ ದಾಖಲಿಸುತ್ತಿರುವ ಪೊಲೀಸ್ರ ವಿರುದ್ಧ ಧರಣಿ ನಡೆಸಿ ಮಾತನಾಡಿದರು. ಇತ್ತೀಚಿಗೆ ಗೌನಿಪಲ್ಲಿ ಪೊಲೀಸ್ ಠಾಣಾ ಮರಸನಪಲ್ಲಿ ಗ್ರಾಮದಲ್ಲಿ ನಮ್ಮ ಕಾಂಗ್ರೆಸ್ ಪಕ್ಷದ ಕಾರ್ಯಕರ್ತನ ಮೇಲೆ ಹೊಡೆದ ಜೆಡಿಎಸ್ ಪಕ್ಷದವರು ಪೊಲೀಸರ ಮೇಲೆ ಒತ್ತಡ ತಂದು ನಮ್ಮ […]

