ವರದಿ: ಶಬ್ಬೀರ್ ಅಹಮ್ಮದ್, ಶ್ರೀನಿವಾಸಪುರ ಕೇಂದ್ರ ಸಚಿವ ಶೋಭಾ ಕರಂದ್ಲಾಜೆ ಅವರನ್ನು ಕರ್ನಾಟಕ ಅರಣ್ಯ,ಕೈಗಾರಿಕಾ ಅಭಿವೃದ್ದಿ ನಿಗಮದ ನಿರ್ದೇಶಕ ಹಾಗೂ ಬಿಜೆಪಿ ಜಿಲ್ಲಾ ಯುವಮೋರ್ಚಾ ಮಾಜಿ ಅಧ್ಯಕ್ಷ ಕೆ.ಎಸ್.ರಾಜೇಂದ್ರ ಹೂಗುಚ್ಚ ನೀಡಿ ಅಭಿನಂದಿಸಿದರು
ವರದಿ: ಶಬ್ಬೀರ್ ಅಹಮ್ಮದ್, ಶ್ರೀನಿವಾಸಪುರ ಕೋಲಾರ: ಏಷ್ಯಾದಲ್ಲೇ ಎರಡನೇ ಅತಿದೊಡ್ಡ ಮಾರುಕಟ್ಟೆಯೆಂದು ಹೆಸರು ಪಡೆದಿರುವ ಕೃಷಿ ಉತ್ಪನ್ನ ಮಾರುಕಟ್ಟೆಗೆ 50 ಎಕರೆ ಜಮೀನು ಮಂಜೂರು ಮಾಡಿ ಅಭಿವೃದ್ಧಿಪಡಿಸಿ, ರೈತರು-ವ್ಯಾಪಾರಾಸ್ಥರಿಗೆ ಆಗುತ್ತಿರುವ ಸಮಸ್ಯೆಗಳನ್ನು ತಪ್ಪಿಸಬೇಕೆಂದು ಗುರುವಾರದಂದು ಸಾಮೂಹಿಕ ನಾಯಕತ್ವದ ರೈತಸಂಘದಿಂದ ಎಪಿಎಂಸಿ ಅಧಿಕಾರಿ ವಿಜಯಲಕ್ಷ್ಮೀ ರವರಿಗೆ ಮನವಿ ಸಲ್ಲಿಸಲಾಯಿತು.ಮನವಿ ಸಲ್ಲಿಸಿ ಮಾತನಾಡಿದ ರೈತಸಂಘದ ರಾಜ್ಯ ಉಪಾಧ್ಯಕ್ಷ ಕೆ.ನಾರಾಯಣಗೌಡ, ಜಿಲ್ಲೆಯ ಉಸ್ತುವಾರಿ ಸಚಿವರು, ಜನಪ್ರತಿನಿಧಿಗಳು ಹಾಗೂ ಸಂಬಂಧಪಟ್ಟ ಕೃಷಿ ಉತ್ಪನ್ನ ಮಾರುಕಟ್ಟೆ ಆಡಳಿತ ಮಂಡಳಿಗೆ ಏಷ್ಯಾದಲ್ಲೇ 2ನೇ ಅತಿದೊಡ್ಡ ಮಾರುಕಟ್ಟೆಯ […]
ವರದಿ: ಶಬ್ಬೀರ್ ಅಹಮ್ಮದ್, ಶ್ರೀನಿವಾಸಪುರ ಶ್ರೀನಿವಾಸಪುರ : ಮುಂದಿನ ಭವಿಷ್ಯತ್ತಿಗಾಗಿ ಕೃಷಿ ಉತ್ಪನ್ನ ಮಾರುಕಟ್ಟೆ ಪ್ರಾಂಗಣವನ್ನು ( ಎ.ಪಿ.ಎಂ.ಸಿ ) ಇನ್ನು 75 ಎಕರೆ ವಿಸ್ತಾರ ಮಾಡುವ ಚಿಂತನೆ ಇದೆ ಇದಕ್ಕೆ ಪ್ರಾಂಗಣದ ಆಜೂ – ಬಾಜೂನಲ್ಲಿರುವ ಜಮೀನು ಮಾಲೀಕರ ಸಹಕಾರ ಅಗತ್ಯವಿದೆ ಎಂದು ಶಾಸಕ ಕೆ.ಆರ್.ರಮೇಶ್ ಕುಮಾರು ತಿಳಿಸಿದರು . ಎಂ.ಪಿ.ಎಂ.ಸಿ ಪ್ರಾಂಗಣದಲ್ಲಿ ಬುಧವಾರ ೪.೧೬ ಕೋಟಿ ವೆಚ್ಚದಲ್ಲಿ ವಿವಿಧ ಕಾಮಗಾರಿಗಳಿಗೆ ಚಾಲನೆ ನೀಡಿ ಮಾತನಾಡಿದ ಅವರು ಪ್ರಸ್ತುತವಿರುವ ಎ.ಪಿ.ಎಂ.ಸಿ ಯಾರ್ಡ್ ಜೊತೆಗೆ ಇನ್ನಷ್ಟು ವಿಸ್ತಾರಪಡಿಸಲು […]
ವರದಿ: ಶಬ್ಬೀರ್ ಅಹಮ್ಮದ್, ಶ್ರೀನಿವಾಸಪುರ ಕೋಲಾರ, ಆ.18: ಜಿಲ್ಲಾದ್ಯಂತ ಕಂದಾಯ ಸರ್ವೇ ಇಲಾಖೆಯಲ್ಲಿನ ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಿ ಕೆರೆ, ರಾಜಕಾಲುವೆ ಒತ್ತುವರಿ ತೆರವುಗೊಳಿಸಲು ವಿಶೇಷ ತಂಡ ರಚನೆ ಮಾಡಬೇಕೆಂದು ಜಿಲ್ಲೆಗೆ ಆಗಮಿಸಿದ ಪ್ರಾದೇಶಿಕ ಆಯುಕ್ತರಾದ ನವೀನ್‍ರಾಜ್ ಸಿಂಗ್ ಅವರಿಗೆ ಸಾಮೂಹಿಕ ನಾಯಕತ್ವದ ರೈತಸಂಘದಿಂದ ಮನವಿ ನೀಡಿ ಆಗ್ರಹಿಸಲಾಯಿತು.ಮಹಿಳಾ ಘಟಕದ ಜಿಲ್ಲಾಧ್ಯಕ್ಷೆ ಎ.ನಳಿನಿಗೌಡ ಮಾತನಾಡಿ, ಜಿಲ್ಲಾದ್ಯಂತ ಕೆರೆ, ರಾಜಕಾಲುವೆ ಗುಂಡುತೋಪುಗಳು ಪ್ರಭಾವಿಗಳು ಒತ್ತುವರಿ ಮಾಡಿಕೊಂಡಿರುವವರ ವಿರುದ್ಧ ಕ್ರಮಕೈಗೊಳ್ಳುವಂತೆ ದಾಖಲೆಗಳ ಸಮೇತ ಸಂಬಂಧಪಟ್ಟ ಅಧಿಕಾರಿಗಳಿಗೆ ಮನವಿ ಮಾಡಿದರೂ […]
ವರದಿ: ಶಬ್ಬೀರ್ ಅಹಮ್ಮದ್, ಶ್ರೀನಿವಾಸಪುರ ಕೋಲಾರ:- ಹೈಕೋರ್ಟ್ ಸೂಚಿಸಿರುವ ಆಡಳಿತಾತ್ಮಕವಾಗಿ ಸೂಚಿಸಿರುವ ವಿಷಯಗಳನ್ನು ಸರಿಪಡಿಸಿ ವೇಮಗಲ್ ಸುತ್ತಮುತ್ತಲ 20 ಗ್ರಾಮಗಳ ಜನರ ಹಿತದೃಷ್ಟಿ ಪರಿಗಣಿಸಿ ತ್ವರಿತವಾಗಿ ವೇಮಗಲ್-ಕುರಗಲ್ ಪಟ್ಟಣ ಪಂಚಾಯಿತಿ ರಚನೆ ಪ್ರಕ್ರಿಯೆ ಅಂತಿಮಗೊಳಿಸುವಂತೆ ಮಾಜಿ ಸಭಾಪತಿ ವಿ.ಆರ್.ಸುದರ್ಶನ್ ಸರ್ಕಾರವನ್ನು ಆಗ್ರಹಿಸಿದರು.ಮಂಗಳವಾರ ನಗರದ ಪತ್ರಕರ್ತರ ಭವನದಲ್ಲಿ ಈ ಸಂಬಂಧ ಸುದ್ದಿಗೋಷ್ಟಿ ನಡೆಸಿದ ಅವರು, ಹೈಕೋರ್ಟ್ ಅಂತಿಮ ಅಧಿಸೂಚನೆಗೆ ತಡೆ ನೀಡಿ,ಆಕ್ಷೇಪಣೆಗಳ ಕುರಿತು ಪೌರಾಡಳಿತ ನಿರ್ದೇಶನಾಲಯ ಸಾರ್ವಜನಿಕರನ್ನು ಕರೆಸಿ ಮಾತನಾಡಿಸಿಲ್ಲ ಎಂದು ಆಕ್ಷೇಪಿಸಿದೆ, ಸಂವಿಧಾನದ ತಿದ್ದುಪಡಿ 74 ರಡಿ […]
ವರದಿ: ಶಬ್ಬೀರ್ ಅಹಮ್ಮದ್, ಶ್ರೀನಿವಾಸಪುರ ಕೋಲಾರ ; ಜಿಲ್ಲೆಯಲ್ಲಿ ಸೀಬೆ ಪ್ರಮುಖ ಲಾಭದಾಯಕ ತೋಟಗಾರಿಕೆ ಬೆಳೆಗಳಲ್ಲಿ ಒಂದು ಜಿಲ್ಲೆಯಲ್ಲಿ ಸುಮಾರು ನಾಲ್ಕು 456 ಹೆಕ್ಟೇರ್ ಪ್ರದೇಶದಲ್ಲಿ ಈ ಬೆಳೆಯನ್ನು ಬೆಳೆಯುತ್ತಿದ್ದು ಸರಾಸರಿ ಇಳುವರಿಯು ಪ್ರತಿ ಹೆಕ್ಟೇರಿಗೆ 17 ಟನ್‍ನಷ್ಟಿದೆ. ಇನ್ನೂ ಹೆಚ್ಚಿನ ಇಳುವರಿಯನ್ನು ಪಡೆಯಲು ಸೀಬೆ ಬೆಳೆಯ ಸಮಗ್ರ ನಿರ್ವಹಣೆಯಿಂದ ಸಾಧ್ಯ ಎಂದು ರೈತರಿಗೆ ಮನವರಿಕೆ ಮಾಡಲು ಕೃಷಿ ವಿಜ್ಞಾನ ಕೇಂದ್ರ, ಕೋಲಾರ ಹಾಗೂ ಆತ್ಮ ಯೋಜನೆ ಕೃಷಿ ಇಲಾಖೆ, ಕೋಲಾರ ರವರ ಸಹಯೋಗದಲ್ಲಿ ದಿನಾಂಕ 16-8-2021 […]
ವರದಿ: ಶಬ್ಬೀರ್ ಅಹಮ್ಮದ್, ಶ್ರೀನಿವಾಸಪುರ ಶ್ರೀನಿವಾಸಪುರ: ರೈತರ ಆರ್ಥಿಕ ಅಭಿವೃದ್ಧಿಯಲ್ಲಿ ಸಾವಯವ ಕೃಷಿ ಮಹತ್ವದ ಪಾತ್ರ ವಹಿಸಿದೆ ಎಂದು ರಾಷ್ಟ್ರೀಯ ಕೃಷಿ ತಜ್ಞ ವಿಜಯ ಕಾಡೇಪುರಿ ಹೇಳಿದರು.ಪಟ್ಟಣದ ಹೊರ ವಲಯದ ಪುಂಗನೂರು ಕ್ರಾಸ್ ಸಮೀಪ ಸೀತಾ ರಾಮ ಕಲ್ಯಾಣ ಮಂಟಪದಲ್ಲಿ ಧನ್ವಂತರಿ ಲೋಕಸಿರಿ ಸಂಸ್ಥೆ ವತಿಯಿಂದ ಮಂಗಳವಾರ ಏರ್ಪಡಿಸಿದ್ದ ಸುಗ್ಗಿ ಹಬ್ಬ ಹಾಗೂ ಸಾವಯವ ಕೃಷಿ ಅರಿವು ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿ, ಬದಲಾದ ಪರಿಸ್ಥಿತಿಯಲ್ಲಿ ಮಣ್ಣಿನ ಆರೋಗ್ಯ ರಕ್ಷಣೆ ಮಹತ್ವ ಪಡೆದುಕೊಂಡಿದೆ. ರಾಸಾಯನಿಕ ಗೊಬ್ಬರಗಳ ಬಳಕೆಯಿಂದ ಮಣ್ಣು […]
ವರದಿ: ಶಬ್ಬೀರ್ ಅಹಮ್ಮದ್, ಶ್ರೀನಿವಾಸಪುರ ಶ್ರೀನಿವಾಸಪುರ: ಮಾಜಿ ಮುಖ್ಯ ಮಂತ್ರಿ ಡಿ.ದೇವರಾಜ ಅರಸು ಅವರ ಜನ್ಮದಿನಾಚರಣೆಯನ್ನು ಆ.20 ರಂದು, ಕೋವಿಡ್ ಹಿನ್ನೆಲೆಯಲ್ಲಿ ಸರಳವಾಗಿ ಆಚರಿಸಲಾಗುವುದು ಎಂದು ತಹಶೀಲ್ದಾರ್ ಎಸ್.ಎಂ.ಶ್ರೀನಿವಾಸ್ ಹೇಳಿದರು.ಪಟ್ಟಣದ ತಾಲ್ಲೂಕು ಕಚೇರಿ ಸಭಾಂಗಣದಲ್ಲಿ ಮಂಗಳವಾರ ಏರ್ಪಡಿಸಿದ್ದ ವಿವಿಧ ಇಲಾಖೆಗಳ ಅಧಿಕಾರಿಗಳು ಹಾಗೂ ವಿವಿಧ ಸಂಘ ಸಂಸ್ಥೆಗಳ ಮುಖ್ಯಸ್ಥರ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.ತಾಲ್ಲೂಕು ಪಂಚಾಯಿತಿ ಕಾರ್ಯನಿರ್ವಹಣಾಧಿಕಾರಿ ಎಸ್.ಆನಂದ್, ಸಮಾಜ ಕಲ್ಯಾಣ ಇಲಾಖೆಯ ಸಹಾಯಕ ನಿರ್ದೇಶಕ ರಾಮೇಗೌಡ, ಬಿಸಿಎಂ ಇಲಾಖೆ ಅಧಿಕಾರಿ ರವಿ, ತೋಟಗಾರಿಕೆ ಇಲಾಖೆಯ ಹಿರಿಯ […]
ವರದಿ: ಶಬ್ಬೀರ್ ಅಹಮ್ಮದ್, ಶ್ರೀನಿವಾಸಪುರ ಕೋಲಾರ,ಆ.16: ದರ್ಗಾ ಮೊಹಲ್ಲಾ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಪಾಪ್ಯುಲರ್ ಪ್ರಂಟ್ ಬ್ಲಡ್ ಪೋರಂ ವತಿಯಿಂದ ರಕ್ಷದಾನ ಶಿಬಿರವನ್ನು ಹಮ್ಮಿಕೊಳ್ಳಲಾಗಿತ್ತು.ರಕ್ತದಾನವು ಅತ್ಯಂತ ಶ್ರೇಷ್ಠ ಕಾರ್ಯವಾಗಿದೆ. ಆದರೆ ಇಂದು ಸಕಾಲದಲ್ಲಿ ರಕ್ತ ದೊರಕದೆ ಅಸಂಖ್ಯಾತ ರೋಗಿಗಳು ಸಾವನ್ನಪ್ಪುತ್ತಿರುವ ಘಟನೆಗಳೂ ನಡೆಯುತ್ತಿರುತ್ತವೆ. ಭಾರತದಲ್ಲಿ ಪ್ರತಿ ವರ್ಷ ಸುಮಾರು 1.2 ಕೋಟಿ ಯುನಿಟ್ ರಕ್ತದ ಅಗತ್ಯವಿದ್ದು, 1.1 ಕೋಟಿ ಮಾತ್ರ ಲಭ್ಯವಿದೆ. ಇಲ್ಲಿ 11.5 ಲಕ್ಷ ಯುನಿಟ್ ರಕ್ತದ ಕೊರತೆ ಇದೆ ಎಂದು ಸರಕಾರದ ಸಚಿವಾಲಯದ ವರದಿ […]