ವರದಿ: ಶಬ್ಬೀರ್ ಅಹಮ್ಮದ್, ಶ್ರೀನಿವಾಸಪುರ ಕೋಲಾರ:- ಆರ್ಥಿಕ ವರ್ಷ ಮುಗಿಯಲು 3 ದಿನ ಬಾಕಿ ಇದೆ, ಹಗಲಿರುಳು ದುಡಿದು ಸಾಲ ವಸೂಲಾತಿ ಮಾಡಿ ಎನ್‍ಪಿಎ 2.5 ರಿಂದ 1.5ಕ್ಕೆ ಇಳಿಸಿದ್ದೆ ಆದರೆ ಇದು ದೇಶದ ಸಹಕಾರಿ ರಂಗದ ಇತಿಹಾಸದಲ್ಲೇ ಮೈಲಿಗಲ್ಲಾಗಲಿದೆ ಎಂದು ಕೋಲಾರ,ಚಿಕ್ಕಬಳ್ಳಾಪುರ ಡಿಸಿಸಿ ಬ್ಯಾಂಕ್ ಅಧ್ಯಕ್ಷ ಬ್ಯಾಲಹಳ್ಳಿ ಗೋವಿಂದಗೌಡ ತಿಳಿಸಿದರು.ನಗರದ ಡಿಸಿಸಿ ಬ್ಯಾಂಕ್ ಸಭಾಂಗಣದಲ್ಲಿ ಶನಿವಾರ ಅವಿಭಜಿತ ಜಿಲ್ಲೆಯ ಎಲ್ಲಾ ಡಿಸಿಸಿ ಬ್ಯಾಂಕ್ ಶಾಖೆಗಳ ವ್ಯವಸ್ಥಾಪಕರೊಂದಿಗೆ ನಡೆಸಿದ ಈ ಆರ್ಥಿಕ ವರ್ಷದ ಕೊನೆಯ ಆನ್‍ಲೈನ್ ಪ್ರಗತಿ […]

Read More

ವರದಿ: ಶಬ್ಬೀರ್ ಅಹಮ್ಮದ್, ಶ್ರೀನಿವಾಸಪುರ ಶ್ರೀನಿವಾಸಪುರ: ಭೂಮಿಯಲ್ಲಿ ತೇವಾಂಶದ ಕೊರತೆ ಎದುರಿಸುತ್ತಿರುವ ರೈತರು ಮಾವಿಗೆ ಪರ್ಯಾಯವಾಗಿ ಗೋಡಂಬಿ ಬೆಳೆಯುವುದು ಸೂಕ್ತ ಎಂದು ಹೊಗಳಗೆರೆ ತೋಟಗಾರಿಕಾ ಸಂಶೋಧನಾ ಮತ್ತು ವಿಸ್ತರಣಾ ಕೇಂದ್ರದ ಮುಖ್ಯಸ್ಥ ಡಾ. ಆರ್.ಕೆ.ರಾಮಚಂದ್ರ ಹೇಳಿದರು.ತಾಲ್ಲೂಕಿನ ಶ್ಯಾಗತ್ತೂರು ಗ್ರಾಮದಲ್ಲಿ, ಬಾಗಲಕೋಟೆಯ ತೋಟಗಾರಿಕೆ ವಿಜ್ಞಾನಗಳ ವಿಶ್ವವಿದ್ಯಾಲಯ, ಹೊಗಳಗೆರೆ ತೋಟಗಾರಿಕಾ ಸಂಶೋಧನಾ ಮತ್ತು ವಿಸ್ತರಣಾ ಕೇಂದ್ರ, ಅಖಿಲ ಭಾರತ ಸಮನ್ವಯ ಗೋಡಂಬಿ ಸಂಶೋಧನಾ ಯೋಜನೆ ವತಿಯಿಂದ, ಗೇರು ಬೆಳೆಯಲ್ಲಿ ಅಧಿಕ ಇಳುವರಿಗಾಗಿ ವೈಜ್ಞಾನಿಕ ಉತ್ಪಾದನಾ ತಾಂತ್ರಿಕತೆಗಳು ಎಂಬ ವಿಷಯ ಕುರಿತು […]

Read More

ವರದಿ ; ಶಬ್ಬೀರ್ ಅಹಮ್ಮದ್ ಶ್ರೀನಿವಾಸಪುರ ಕೋಲಾರ : ಖಾಸಗಿ ಆಸ್ಪತ್ರೆಗಳು ರೋಗಿಗಳಿಗೆ ಚಿಕಿತ್ಸೆ ನೀಡುವಾಗ ಮಾನವೀಯ ಮೌಲ್ಯಗಳಿಗೆ ಹೆಚ್ಚಿನ ಒತ್ತು ನೀಡಬೇಕು . ಇದರಿಂದ ಬಡವರಿಗೆ , ಹಿಂದುಳಿದವರಿಗೆ ಸೇವೆ ನೀಡಿದಂತಾಗುತ್ತದೆ ಎಂದು ಜಿಲ್ಲಾಧಿಕಾರಿಗಳಾದ ಡಾ | ಆರ್.ಸೆಲ್ವಮಣಿ ಅವರು ತಿಳಿಸಿದರು . ಇಂದು ತಮ್ಮ ಕಛೇರಿ ನ್ಯಾಯಾಂಗ ಸಭಾಂಗಣದಲ್ಲಿ ಆರೋಗ್ಯ ಇಲಾಖೆ ವತಿಯಿಂದ ಹಮ್ಮಿಕೊಂಡಿದ್ದ , ಆಯುಷ್ಮಾನ್ ಭಾರತ್ -ಆರೋಗ್ಯ ಕರ್ನಾಟಕ ಯೋಜನೆಯ ಜಿಲ್ಲಾ ಮಟ್ಟದ ಕುಂದು ಕೊರತೆಯ ಪರಿಹಾರ ಉಚಿತ ಎಂದು ಸಮಿತಿ […]

Read More

ವರದಿ: ಶಬ್ಬೀರ್ ಅಹಮ್ಮದ್, ಶ್ರೀನಿವಾಸಪುರ ಶ್ರೀನಿವಾಸಪುರ: ಅಸ್ಪ್ರಷ್ಯತೆ ಸಾಮಾಜಿಕ ಕಳಂಕವಾಗಿದ್ದು, ಅದನ್ನು ಪೂರ್ಣ ಪ್ರಮಾಣದಲ್ಲಿ ತೊಡೆದು ಹಾಕಲು ಸಮಾಜದ ಎಲ್ಲ ವರ್ಗದ ಜನ ಪ್ರಯತ್ನ ಮಾಡಬೇಕು ಎಂದು ತಹಶೀಲ್ದಾರ್ ಎಸ್.ಎಂ.ಶ್ರೀನಿವಾಸ್ ಹೇಳಿದರು.ಪಟ್ಟಣದ ಸರ್ಕಾರಿ ನೌಕರರ ಭವನದದಲ್ಲಿ ತಾಲ್ಲೂಕು ಆಡಳಿತ, ತಾಲ್ಲೂಕು ಪಂಚಾಯಿತಿ, ಸಮಜ ಕಲ್ಯಾಣ ಇಲಾಖೆ, ಪೊಲೀಸ್ ಇಲಾಖೆ, ಜನ್ಮಭೂಮಿ ಸಾಂಸ್ಕøತಿಕ ಮತ್ತು ಕ್ರೀಡಾ ಗ್ರಾಮೀಣಾಭಿವೃದ್ಧಿ ಸಂಘದ ಸಂಯುಕ್ತ ಆಶ್ರಯದಲ್ಲಿ ಅಸ್ಪøಶ್ಯತಾ ನಿವಾರಣಾ ಸಪ್ತಾಹದ ಅಂಗವಾಗಿ ಗುರುವಾರ ಏರ್ಪಡಿಸಿದ್ದ ಒಂದು ದಿನದ ಕಾರ್ಯಾಗಾರ ಉದ್ಘಾಟಿಸಿ ಮಾತನಾಡಿದರು.ತಾಲ್ಲೂಕು ಪಂಚಾಯಿತಿ […]

Read More

ವರದಿ: ಶಬ್ಬೀರ್ ಅಹಮ್ಮದ್, ಶ್ರೀನಿವಾಸಪುರ ಕೋಲಾರ:- ಪರೀಕ್ಷೆ ಕುರಿತು ಭಯ ಬೇಡ, ಮಾಸ್ಕ್,ಸ್ಯಾನಿಟೈಸರ್ ಬಳಸಿ, ಸಾಮಾಜಿಕ ಅಂತರ ಪಾಲಿಸಿ ಆತ್ಮಸ್ಥೈರ್ಯದಿಂದ ಅಭ್ಯಾಸ ಮುಂದುವರೆಸಿ, ನಿಮ್ಮ ಸುರಕ್ಷತೆಗೆ ನಿಮ್ಮ ಪೋಷಕರು,ಶಿಕ್ಷಕರು ಮಾತ್ರವಲ್ಲ ಇಡೀ ಸರ್ಕಾರವೇ ಇದೆ ಎಂದು ರಾಜ್ಯ ಪ್ರಾಥಮಿಕ ಶಿಕ್ಷಣ ಸಚಿವ ಸುರೇಶ್‍ಕುಮಾರ್ ಮಕ್ಕಳಿಗೆ ಧೈರ್ಯ ತುಂಬಿದರು.ಮುಳಬಾಗಿಲಿಗೆ ಭೇಟಿ ನೀಡಿದ ನಂತರ ಕೋಲಾರ ತಾಲ್ಲೂಕಿನ ಹುತ್ತೂರು ಸರ್ಕಾರಿ ಪ್ರೌಢಶಾಲೆಗೆ ಆಗಮಿಸಿ ಮಕ್ಕಳೊಂದಿಗೆ ಸಂವಾದ ನಡೆಸಿದ ಅವರು, ಮಕ್ಕಳನ್ನು ಕೇಳಿದ ಮೊದಲ ಪ್ರಶ್ನೆ ನಿಮಗೆ ಪರೀಕ್ಷೆ ಬೇಕೋ,ಬೇಡವೋ’ ಎಂದು. […]

Read More

ವರದಿ: ಶಬ್ಬೀರ್ ಅಹಮ್ಮದ್, ಶ್ರೀನಿವಾಸಪುರ ಕೋಲಾರ:- ಮಕ್ಕಳನ್ನು ಪೋಷಕರು ಹೆಣ್ಣು ಗಂಡು ಮಗು ತಾರತಮ್ಯ ಇಲ್ಲದಂತೆ ಸಮಾನತೆಯಿಂದ ಬೆಳೆಸಿ ಆತ್ಮವಿಶ್ವಾಸ ತುಂಬಬೇಕೆಂದು ಉಪವಿಭಾಗಾಧಿಕಾರಿ ಸೋಮಶೇಖರ್ ಹೇಳಿದರು.ದಲಿತ ಸಂಘರ್ಷ ಸಮಿತಿ ಕರ್ನಾಟಕ, ದಲಿತ ಮಹಿಳಾ ಒಕ್ಕೂಟ ಕರ್ನಾಟಕ ಆಶ್ರಯದಲ್ಲಿ ಕಾರಂಜಿಕಟ್ಟೆ ಬಡಾವಣೆಯ ಧರ್ಮರಾಯಸ್ವಾಮಿ ಸಮುದಾಯ ಭವನದಲ್ಲಿ ಗುರುವಾರ ಆಯೋಜಿಸಲಾಗಿದ್ದ ಮಹಿಳಾ ಹಕ್ಕುಗಳ ಮತ್ತು ಸಂವಿಧಾನ ಉಳಿವಿಗಾಗಿ ಹಮ್ಮಿಕೊಂಡಿದ್ದ ವಿಚಾರ ಸಂಕಿರಣ ಉದ್ಘಾಟಿಸಿ ಅವರು ಮಾತನಾಡುತ್ತಿದ್ದರು.ಭಾರತೀಯ ಪ್ರಾಚೀನ ಯುಗದಲ್ಲಿ ಮಹಿಳೆಯರಿಗೆ ಸಮಾನವಾದ ಅವಕಾಶಗಳಿದ್ದವು ಆದರೆ ಮಧ್ಯಯುಗದ ಸಂದರ್ಭದಲ್ಲಿ ಮಹಿಳೆಯರ ಸ್ಥಿತಿ […]

Read More

ವರದಿ: ಶಬ್ಬೀರ್ ಅಹಮ್ಮದ್, ಶ್ರೀನಿವಾಸಪುರ ಶ್ರೀನಿವಾಸಪುರ: ಪಟ್ಟಣದ ತಾಲ್ಲೂಕು ಕಚೇರಿ ಮುಂದೆ, ತಾಲ್ಲೂಕು ದಲಿತ ಸಂಘಟನೆಗಳ ಒಕ್ಕೂಟದ ಸದಸ್ಯರು ಬುಧವಾರ ತಮ್ಮ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ ಪ್ರತಿಭಟನೆ ನಡೆಸಿದರು.ಸರ್ಕಾರ ಪಿಟಿಸಿಎಲ್ ಕಾಯ್ದೆಯನ್ನು ಅನುಷ್ಠಾನಗೊಳಿಸಲು ಇರುವ ತೊಡಕುಗಳನ್ನು ನಿವಾರಿಸಬೇಕು. ದಲಿತರ ಭೂಮಿ ಹಕ್ಕನ್ನು ರಕ್ಷಿಸಬೇಕು. ಭೂ ಪರಭಾರೆ ಮೊಷೇಧ ಕಾಯ್ದೆಯನ್ನು ಪರಿಣಾಮಕಾರಿಯಾಗಿ ಜಾರಿಗೊಳಿಸುವಂತೆ ಜಿಲ್ಲಾಧಿಕಾರಿಗಳು ಉಪ ವಿಭಾಗಾಧಿಕಾರಿಗಳಿಗೆ ಸೂಚಿಸಬೇಕು ಎಂದು ಪ್ರತಿಭಟನಕಾರರು ಆಗ್ರಹಿಸಿದರು.ತಮ್ಮ ಬೇಡಿಕೆಗಳನ್ನು ಒಳಗೊಂಡ ಮನವಿ ಪತ್ರವನ್ನು ತಹಶೀಲ್ದಾರ್ ಎಸ್.ಎಂ.ಶ್ರೀನಿವಾಸ್ ಅವರಿಗೆ ನೀಡಲಾಯಿತು.ವಿವಿಧ ದಲಿತ ಪರ ಸಂಘಟನೆಗಳ […]

Read More

ವರದಿ: ಶಬ್ಬೀರ್ ಅಹಮ್ಮದ್, ಶ್ರೀನಿವಾಸಪುರ ಶ್ರೀನಿವಾಸಪುರದ ಪುರಸಭೆ ಕಚೇರಿಯಲ್ಲಿ ಸೋಮವಾರ, ಬೇರೆಡೆಗೆ ವರ್ಗವಾದ ಪುರಸಭೆ ಮುಖ್ಯಾಧಿಕಾರಿ ವಿ.ಮೋಹನ್ ಕುಮಾರ್ ಅವರನ್ನು ಸನ್ಮಾನಿಸಿ ಬೀಳ್ಕೊಡಲಾಯಿತು.

Read More

ವರದಿ: ಶಬ್ಬೀರ್ ಅಹಮ್ಮದ್, ಶ್ರೀನಿವಾಸಪುರ ಶ್ರೀನಿವಾಸಪುರ ತಾಲ್ಲೂಕಿನ ಗೌಡಹಳ್ಳಿ ಗ್ರಾಮದಲ್ಲಿ ಸೋಮವಾರ, ಕುಡಿಯುವ ನೀರು ಸಮಸ್ಯೆ ನಿವಾರಣೆ ಕುರಿತು ಗ್ರಾಮ ಪಂಚಾಯಿತಿ ಅಧ್ಯಕ್ಷ ಬಂಗವಾದಿ ರವಿಕುಮಾರ್ ಚರ್ಚಿಸಿದರು.

Read More