ವರದಿ: ಶಬ್ಬೀರ್ ಅಹಮ್ಮದ್, ಶ್ರೀನಿವಾಸಪುರ ಶ್ರೀನಿವಾಸಪುರ: ಪಟ್ಟಣದ ಎಪಿಎಂಸಿ ಮಾರುಕಟ್ಟೆ ಟೊಮೆಟೊ ವರ್ತಕರ ಸಂಘದ ಅಧ್ಯಕ್ಷ ಎಚ್.ರವೀಂದ್ರರೆಡ್ಡಿ (47) ಭಾನುವಾರ ರಾತ್ರಿ ಹೃದಯಾಘಾತದಿಂದ ನಿಧನರಾದರು. ಅವರು ಕೆಲವು ದಿನಗಳ ಹಿಂದೆ ಅಸ್ವಸ್ಥರಾಗಿ ಚೇತರಿಸಿಕೊಂಡಿದ್ದರು.ಮೃತರಿಗೆ ಪತ್ನಿ, ಒಬ್ಬ ಪುತ್ರ ಹಾಗೂ ಪುತ್ರಿ ಇದ್ದಾರೆ.ಮೃತರ ಅಂತ್ಯ ಸಂಸ್ಕಾರವನ್ನು ತಾಲ್ಲೂಕಿನ ಚಿಲ್ಲೊರಪಲ್ಲಿ ಗ್ರಾಮದ ಹೊರ ವಲಯದಲ್ಲಿ ಸೋಮವಾರ ನೆರವೇರಿಸಲಾಯಿತು.
ವರದಿ: ಶಬ್ಬೀರ್ ಅಹಮ್ಮದ್, ಶ್ರೀನಿವಾಸಪುರ ಶ್ರೀನಿವಾಸಪುರ: ಪಟ್ಟಣದಲ್ಲಿ ಕೆಲಸವಿಲ್ಲದೆ ಬೈಕ್‍ನಲ್ಲಿ ಸುತ್ತಾಡುತ್ತಿದ್ದ ವ್ಯಕ್ತಿಗಳಿಗೆ ಪೊಲೀಸರು ಲಾಟಿ ರುಚಿ ತೋರಿಸಿದರು.ಬೆಳಿಗ್ಗೆ 6 ರಿಂದ 10 ಗಂಟೆ ವರೆಗೆ ಅಗತ್ಯ ವಸ್ತುಗಳನ್ನು ಖರೀದಿಸುವ ಅವಕಾಶ ಕಲ್ಪಿಸಲಾಗಿತ್ತು. ಆದರೆ ಪೊಲೀಸರು ವಾಹನಗಳನ್ನು ಪಟ್ಟಣ ಒಳಗೆ ಬಿಡಲಿಲ್ಲ. ಖರೀದಿಗೆ ಬಂದಿದ್ದವರು ಬೈಕ್ ಮತ್ತಿತರ ವಾಹನಹಗಳನ್ನು ಪಟ್ಟಣದ ಹೊವವಲಯದಲ್ಲಿ ನಿಲ್ಲಿಸಿ, ಕಾಲ್ನಡಿಗೆಯಲ್ಲಿ ಹೋಗಿ ತರಕಾರಿ ಮತ್ತಿತರ ಅಗತ್ಯ ವಸ್ತುಗಳನ್ನು ಖರೀದಿಸಿ ಹೊತ್ತು ತರುತ್ತಿದುದು ಕಂಡುಬಂದಿತು.ಪೊಲೀಸ್ ಹಾಗೂ ಪುರಸಭೆ ಸಿಬ್ಬಂದಿ ರಸ್ತೆಯಲ್ಲಿ ನಿಂತು, ವಿನಾಕಾರಣ ಸುತ್ತಾಡುತ್ತಿದ್ದ […]
ವರದಿ: ಶಬ್ಬೀರ್ ಅಹಮ್ಮದ್, ಶ್ರೀನಿವಾಸಪುರ ಶ್ರೀನಿವಾಸಪುರ: ಪಟ್ಟಣದಲ್ಲಿ ಪುರಸಭೆ ಅಧಿಕಾರಿಗಳು ಮಾಸ್ಕ್ ಧರಿಸದ ವ್ಯಕ್ತಿಗಳಿಗೆ ಗುಲಾಬಿ ನೀಡಿ ಅಭಿನಂದಿಸುವುದರ ಮೂಲಕ ಅರಿವು ಮೂಡಿಸಿದರು.ಪಟ್ಟಣದಲ್ಲಿ ಸಂಚರಿಸುವ ಸಾರ್ವಜನಿಕರು ಹಾಗೂ ಅಂಗಡಿ ಮಾಲೀಕರು ಕಡ್ಡಾಯವಾಗಿ ಮಾಸ್ಕ್ ಧರಿಸಿ, ವ್ಯಕ್ತಿಗತ ಅಂತರ ಪಾಲಿಸುವಂತೆ ಪುರಸಭೆ ಅಧಿಕಾರಿಗಳು ಮನವಿ ಮಾಡಿಕೊಂಡಿದ್ದರು. ಅಂಥ ವ್ಯಕ್ತಿಗಳನ್ನು ಗುರುತಿಸಿ ದಂಡ ವಿಧಿಸಿದ್ದರು. ಆದರೆ ಅದಾವುದಕ್ಕೂ ಬಗ್ಗದ ಕೆಲವರು ಮಾಸ್ಕ್ ರಹಿತವಾಗಿ ವ್ಯಾಪಾರ ವಹಿವಾಟು ಮಾಡುತ್ತಿದ್ದರು.ಪುರಸಭೆಯ ಮುಖ್ಯಾಧಿಕಾರಿ ಡಿ.ಶೇಖರ್ ರೆಡ್ಡಿ ಹಾಗೂ ಆರೋಗ್ಯ ನಿರೀಕ್ಷಕ ಪೃಥ್ವಿರಾಜ್ ಶನಿವಾರ ವಿನೂತನ […]
ವರದಿ: ಶಬ್ಬೀರ್ ಅಹಮ್ಮದ್, ಶ್ರೀನಿವಾಸಪುರ ಶ್ರೀನಿವಾಸಪುರ: ರಾಸು ವಿಮಾ ಹಾಗೂ ಹಾಲು ಉತ್ಪಾದಕರ ಸಹಕಾರ ಸಂಘದ ಕಟ್ಟಡ ಅನುದಾನದ ಚೆಕ್‍ಗಳನ್ನು ಕೋವಿಡ್ ತಡೆ ನಿಯಮಾನುಸಾರ ಫಲಾನುಭವಿಗಳಿಗೆ ನೇರವಾಗಿ ತಲುಪಿಸುವ ವ್ಯವಸ್ಥೆ ಮಾಡಲಾಗಿದೆ ಎಂದು ಕೋಚಿಮುಲ್ ನಿರ್ದೇಶಕ ಎನ್.ಹನುಮೇಶ್ ತಿಳಿಸಿದ್ದಾರೆ.ಇಷ್ಟು ದಿನ ಫಲಾನುಭವಿಗಳನ್ನು ಕ್ಯಾಂಪ್ ಕಚೇರಿಗೆ ಬರಮಾಡಿಕೊಂಡು ಸಾಮೂಹಿಕವಾಗಿ ಪರಿಹಾರದ ಚೆಕ್ ವಿತರಣೆ ಮಾಡಲಾಗುತ್ತಿತ್ತು. ಆದರೆ ಈಗ ಕೊರೊನಾ ಎರಡನೇ ಅಲೆ ತೀವ್ರವಾಗಿರುವುದರಿಂದ ಮನೆ ಬಾಗಿಲಿಗೆ ತಲುಪಿಸಲಾಗುತ್ತಿದೆ ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.ತಾಲ್ಲೂಕಿನ ಜೀಡಿಮಾಕಲಹಳ್ಳಿ ಹಾಲು ಉತ್ಪಾಕದರ ಸಂಘದ ವ್ಯಾಪ್ತಿಯಲ್ಲಿ […]
ವರದಿ: ಶಬ್ಬೀರ್ ಅಹಮ್ಮದ್, ಶ್ರೀನಿವಾಸಪುರ ಶ್ರೀನಿವಾಸಪುರ: ನಿಯಮ ಬಾಹಿರವಾಗಿ ವ್ಯಾಪಾರ ವಹಿವಾಟು ನಡೆಸುತ್ತಿದ್ದ 6 ಅಂಗಡಿಗಳ ಮೇಲೆ ಕಂದಾಯ ಹಾಗೂ ಪುರಸಭೆ ಅಧಿಕಾರಿಗಳು ದಾಳಿ ನಡೆಸಿ ಬೀಗ ಮುದ್ರೆ ಹಾಕಿದರು.ತಹಶೀಲ್ದಾರ್ ಎಸ್.ಎಂ.ಶ್ರೀನಿವಾಸ್ ಮಾತನಾಡಿ, ಕೊರೊನಾ ಸಂಕಷ್ಟದಿಂದ ಜನರನ್ನು ಪಾರುಮಾಡಲು ಸರ್ಕಾರ ಹಲವು ಕ್ರಮ ಕೈಗೊಂಡಿದೆ. ಜನತಾ ಕಫ್ರ್ಯೂ ನಿಯಮಗಳನ್ನು ಗಾಳಿಗೆ ತೂರಿ ವ್ಯವಹರಿಸುವ ವ್ಯಾಪಾರಿಗಳು ಹಾಗೂ ಸಾರ್ವಜನಿರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಹೇಳಿದರು.ಪುರಸಭೆ ಮುಖ್ಯಾಧಿಕಾರಿ ಡಿ.ಶೇಖರ್ ರೆಡ್ಡಿ ಮಾತನಾಡಿ, ಕಫ್ರ್ಯೂ ಸಂದರ್ಭದಲ್ಲಿ ಸಮಯ ಪಾಲನೆ […]
ವರದಿ: ಶಬ್ಬೀರ್ ಅಹಮ್ಮದ್, ಶ್ರೀನಿವಾಸಪುರ ಶ್ರೀನಿವಾಸಪುರ: ಕೊರೊನಾ ವಾರಿಯರ್ಸ್ ಆಗಿ ಗುತ್ತಿಗೆ, ಹೊರ ಗುತ್ತಿಗೆ ಆಧಾರ ಮೇಲೆ ಕಾರ್ಯನಿರ್ವಹಿಸುತ್ತಿರುವ ಕಾರ್ಮಿಕರಿಗೆ ಕೊರೊನಾ ನಿಯಮಾನುಸಾರ ಪರಿಹಾರ ನೀಡಬೇಕು ಎಂದು ಆಗ್ರಹಿಸಿ ಗುತ್ತಿಗೆ ಪೌರ ಕಾರ್ಮಿಕರು ತಹಶೀಲ್ದಾರ್ ಎಸ್.ಎಂ.ಶ್ರೀನಿವಾಸ್ ಅವರಿಗೆ ಮನವಿ ಪತ್ರ ಸಲ್ಲಿಸಿದರು.ಗುತ್ತಿಗೆ ಹಾಗೂ ಹೊರ ಗುತ್ತಿಗೆ ಆಧಾರ ಮೇಲೆ ಪೌರ ಕಾರ್ಮಿಕರಾಗಿ ಕಾರ್ಯನಿರ್ವಹಿಸುತ್ತಿದ್ದ ಮೂವರು ಈಚೆಗೆ ಕೊರೊನಾ ಸೋಂಕಿಗೆ ಬಲಿಯಾಗಿದ್ದಾರೆ. ಆದರೆ ಅವರ ಕುಟುಂಬಗಳಿಗೆ ಯಾವುದೇ ಪರಿಹಾರ ನೀಡಿಲ್ಲ. ಇದರಿಂದ ದುಡಿಯುವ ವ್ಯಕ್ತಿಗಳನ್ನು ಕಳೆದುಕೊಂಡ ಅವರ ಕುಟುಂಬಗಳು […]
ವರದಿ: ಶಬ್ಬೀರ್ ಅಹಮ್ಮದ್, ಶ್ರೀನಿವಾಸಪುರ ಕೋಲಾರ:- ಎಸ್ಸೆಸ್ಸೆಲ್ಸಿ ವಿದ್ಯಾರ್ಥಿಗಳನ್ನು ಆನ್‍ಲೈನ್ ಮತ್ತು ದೂರವಾಣಿ ಮೂಲಕ ಸಂಪರ್ಕಿಸಿ ನಿರಂತರವಾಗಿ ಅವರ ಶೈಕ್ಷಣಿಕ ಪ್ರಗತಿಯ ಪರಿಶೀಲನೆ ನಡೆಸುವಂತೆ ಪ್ರೌಢಶಾಲಾ ಶಿಕ್ಷಕರು ಹಾಗೂ ಮುಖ್ಯಶಿಕ್ಷಕರಿಗೆ ಡಿಡಿಪಿಐ ಕೃಷ್ಣಮೂರ್ತಿ ಕರೆ ನೀಡಿದರು.ಶುಕ್ರವಾರ ಬೆಳಗ್ಗೆ 11 ಗಂಟೆಗೆ ಜಿಲ್ಲೆಯ ಎಲ್ಲಾ ಸರ್ಕಾರಿ,ಅನುದಾನಿತ,ಖಾಸಗಿ ಪ್ರೌಢಶಾಲೆಗಳ ಮುಖ್ಯಶಿಕ್ಷಕರ ಆನ್‍ಲೈನ್ ಸಭೆ ನಡೆಸಿದ ಅವರು, ಸಾಧ್ಯವಾದಷ್ಟು ಮಕ್ಕಳ ಶೈಕ್ಷಣಿಕ ಪ್ರಗತಿ ಕುಂಠಿತವಾಗದಂತೆ ಕ್ರಮವಹಿಸಲು ಕಿವಿಮಾತು ಹೇಳಿದರು.ಕೋವಿಡ್ ಜನತಾ ಕಫ್ರ್ಯೂ ಹಿನ್ನಲೆಯಲ್ಲಿ ಹಾಗೂ ಸೋಂಕಿತರ ಸಂಖ್ಯೆ ಏರಿಕೆಯಾಗುತ್ತಿರುವ ಆತಂಕದ ನಡುವೆ […]
ವರದಿ: ಶಬ್ಬೀರ್ ಅಹಮ್ಮದ್, ಶ್ರೀನಿವಾಸಪುರ ಶ್ರೀನಿವಾಸಪುರ, ಸಾಮಾಜಿಕ ಕಾರ್ಯಗಳಿಂದ ಗುರುತಿಸಿಕೊಂಡಿರುವ ಧರ್ಮಸ್ಥಳ ಗ್ರಾಮಾಭಿವೃದ್ಧಿಯೋಜನೆಕರೋನಾ ಬಿಕ್ಕಟ್ಟಿನ ಸಂದರ್ಭದಲ್ಲಿತನ್ನ ಸೇವೆಸಲ್ಲಿಸುತ್ತಿದೆಎಂದುಸಂಸ್ಥೆಯ ಶ್ರೀನಿವಾಸಪುರತಾಲೂಕು ಯೋಜನಾಧಿಕಾರಿಗಳಾದ ಸುರೇಶ್‍ಗೌಡ.ಎಸ್‍ಅಭಿಪ್ರಾಯಪಟ್ಟರು.ಸೋಂಕಿತರುಆಸ್ಟತ್ರೆಯಿಂದ ತೆರಳಲು ಅಥವಾಆಸ್ಟತ್ರೆಯಿಂದ ಹಿಂದಿರುಗಲು ಅನುಕೂಲವಾಗಲು ತುರ್ತು ವಾಹನಕ್ಕೆ ತಹಸೀಲ್ದಾರ್ ಮತ್ತುತಾಲೂಕುದಂಡಾಧಿಕಾರಿಕಛೇರಿಎದುರು ಚಾಲನೆ ನೀಡಿ, ರಾಜಾದ್ಯಂತಒಟ್ಟು 350 ವಾಹನಗಳನ್ನು ಪರಮ ಪೂಜ್ಯಧರ್ಮಾಧಿಕಾರಿಗಳಾದ ಡಾ||ವೀರೇಂದ್ರ ಹೆಗ್ಗಡೆರವರು ಧರ್ಮಸ್ಥಳ ಗ್ರಾಮಾಭಿವೃದ್ಧಿಯೋಜನೆಯ ವತಿಯಿಂದ ವ್ಯವಸ್ಥೆಮಾಡಲಾಗಿದೆ. ಸಾಮಾನ್ಯ ವರ್ಗದವರನ್ನುಗಮನದಲ್ಲಿಟ್ಟುಕೊಂಡು ಈ ಯೋಜನೆಯನ್ನುಪ್ರಾರಂಭಿಸಲಾಗಿದೆಎಂದರು.ಈ ವೇಳೆ ತಹಸೀಲ್ದಾರ್ ಶ್ರೀನಿವಾಸ್‍ರವರುತಾಲೂಕು ಆರೋಗ್ಯಾಧಿಕಾರಿಗಳಾದ ಶ್ರೀಮತಿ ವಿಜಯರವರಿಗೆ ವಾಹನವನ್ನು ಹಸ್ತಾಂತರ ಮಾಡಿ ಮಾತನಾಡಿ, ನಿಜಕ್ಕೂಅತ್ಯಂತಉಪಯುಕ್ತ ಕೆಲಸ. ಇಲ್ಲಿನಕೋವಿಡ್ ಪರಿಸ್ಥಿತಿ […]
ವರದಿ: ಶಬ್ಬೀರ್ ಅಹಮ್ಮದ್, ಶ್ರೀನಿವಾಸಪುರ ಶ್ರೀನಿವಾಸಪುರ: ತಾಲ್ಲೂಕಿನ ಎನಮರೇಪಲ್ಲಿ ಗ್ರಾಮದ ಪಂಚಮುಖಿ ಆಂಜನೇಯಸ್ವಾಮಿ ದೇವಾಲಯದ ಧರ್ಮಾಧಿಕಾರಿ ಎಸ್.ಮಂಜುನಾಥ್ (46) ಬುಧವಾರ ಬೆಂಗಳೂರಿನ ಆಸ್ಪತ್ರೆಯೊಂದರಲ್ಲಿ ಹೃದಯಾಘಾತದಿಂದ ನಿಧನರಾಗಿದ್ದಾರೆ. ಅವರು ಕೆಲವು ದಿನಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದರು.ಮೃತರು ಪತ್ನಿ, ಇಬ್ಬರು ಪುತ್ರಿಯರನ್ನು ಅಗಲಿದ್ದಾರೆ. ಗ್ರಾಮದ ಹೊರ ವಲಯದ ಸ್ಮಶಾನದಲ್ಲಿ ಗುರುವಾರ ಅಂತ್ಯ ಸಂಸ್ಕಾರ ನಡೆಸಲಾಯಿತು.