
ವರದಿ: ಶಬ್ಬೀರ್ ಅಹಮ್ಮದ್, ಶ್ರೀನಿವಾಸಪುರ ಶ್ರೀನಿವಾಸಪುರ ತಾಲ್ಲೂಕಿನ ಹೆಬ್ಬಟ ಗ್ರಾಮದ ಆರೋಗ್ಯ ಮತ್ತು ಕ್ಷೇಮ ಕೇಂದ್ರದಲ್ಲಿ ಶನಿವಾರ ಕೋವಿಡ್ ವಿರುದ್ಧ ಲಸಿಕೆ ನೀಡಲಾಯಿತು.ಸಿಎಚ್‍ಒ ವಿಶ್ವನಾಥ್, ಆರೋಗ್ಯ ಇಲಾಖೆ ಸಿಬ್ಬಂದಿ ಶಿಲ್ಪಾ, ಶೋಭಾ, ಶಾರದಾ, ಗ್ರಾಪಂ ಸದಸ್ಯ ಎಚ್.ಎಂ.ಅನಂತಕುಮಾರ್ ಇದ್ದರು.

ವರದಿ: ಶಬ್ಬೀರ್ ಅಹಮ್ಮದ್, ಶ್ರೀನಿವಾಸಪುರ ಶ್ರೀನಿವಾಸಪುರ: ಪಟ್ಟಣದ ಇಂದಿರಾ ಕ್ಯಾಂಟೀನ್‍ಗೆ ಶನಿವಾರ ಪುರಸಭೆಯ ಅಧಿಕಾರಿಗಳು ಭೇಟಿ ನೀಡಿ ಆಹಾರದ ಗುಣಮಟ್ಟ ಪರಿಶೀಲಿಸಿದರು.ಲಾಕ್ ಡೌನ್ ಸಂದರ್ಭದಲ್ಲಿ ಆಹಾರದ ಅಗತ್ಯ ಇರುವ ವ್ಯಕ್ತಿಗಳಿಗೆ ಉಚಿತವಾಗಿ ಊಟದ ವ್ಯವಸ್ಥೆ ಮಾಡಲಾಗಿದೆ. ಹಸಿದವರು ಇಂದಿರಾ ಕ್ಯಾಂಟೀನ್ ಕಡೆ ನೋಡುವಂತಾಗಿದೆ. ಅದ್ದರಿಂದ ಕ್ಯಾಂಟೀನ್ ಸಿಬ್ಬಂದಿ ಆಹಾರ ತಯಾರಿಸುವಾಗ ಸ್ವಚ್ಛತೆ ಹಾಗೂ ಗುಣಮಟ್ಟಕ್ಕೆ ಆದ್ಯತೆ ನೀಡಬೇಕು ಎಂದು ಪುರಸಬೆಯ ಸಮುದಾಯ ಸಂಘಟನಾಧಿಕಾರಿ ಕೆ.ಎನ್.ರಾಜೇಸ್ವರಿ ಹೇಳಿದರು.ಪುರಸಭೆ ಮುಖ್ಯಾಧಿಕಾರಿ ಡಿ.ಶೇಖರರೆಡ್ಡಿ, ಆರೋಗ್ಯ ನಿರೀಕ್ಷಕ ಎಂ.ಪೃಥ್ವಿರಾಜ್, ಕಂದಾಯ ನಿರೀಕ್ಷಕ ಎನ್.ಶಂಕರ್, […]

ವರದಿ :ಶಬ್ಬೀರ್ ಅಹಮ್ಮದ್ ಶ್ರೀನಿವಾಸಪುರ ಶ್ರೀನಿವಾಸಪುರ : ಆರೋಗ್ಯ ಇಲಾಖೆ ಸಿಬ್ಬಂದಿ ಸೇವಾ ಮನೋಭಾವನೆಯಿಂದ ಕಾರ್ಯನಿರ್ವಹಿಸುವುದರ ಮೂಲಕ ಗ್ರಾಮೀಣ ಪ್ರದೇಶದಲ್ಲಿ ಹರಡುತ್ತಿರುವ ಕೊರೊನಾ ಸೋಂಕನ್ನು ನಿಯಂತ್ರಿಸಬೇಕು ಎಂದು ವಿಧಾನ ಪರಿಷತ್ ಸದಸ್ಯ ಡಾ . ವೈ.ಎ.ನಾರಾಯಣಸ್ವಾಮಿ ಹೇಳಿದರು . ಪಟ್ಟಣದ ಕೋವಿಡ್ ಆಸ್ಪತ್ರೆ ಹಾಗೂ ಹೊರವಲಯದಲ್ಲಿನ ಕೋವಿಡ್ ಸುರಕ್ಷಾ ಕೇಂದ್ರಕ್ಕೆ ಶನಿವಾರ ಭೇಟಿ ನೀಡಿ ಪರಿಶೀಲಿಸಿದ ಬಳಿಕ ಮಾತನಾಡಿ , ಕೊರೂನಾ ಸೋಂಕು ನಿಯಂತ್ರಣ ಸರ್ಕಾರದ ಪ್ರಥಮ ಆದ್ಯತೆಯಾಗಿದೆ . ಆದ್ದರಿಂದ ಕೋವಿಡ್ ವಿರುದ್ದ ಸಲಿಕಾ ಕಾರ್ಯವನ್ನು […]

ವರದಿ: ಶಬ್ಬೀರ್ ಅಹಮ್ಮದ್, ಶ್ರೀನಿವಾಸಪುರ ಕೋಲಾರ:- ಸೊಪ್ಪು,ತರಕಾರಿ,ಟೀ ಮಾರಿ ಸ್ವಾಭಿಮಾನಿ ಜೀವನ ಕಟ್ಟಿಕೊಂಡಿದ್ದ ವಿಕಲಚೇತನರ ಕುಟುಂಬಗಳು ಲಾಕ್‍ಡೌನ್‍ನಿಂದಾಗಿ ಒಂದೊತ್ತಿನ ಊಟಕ್ಕೂ ಪರದಾಡುವಂತಾಗಿರುವುದು ಅತ್ಯಂತ ನೋವಿನ ಸಂಗತಿ, ಅಂತಹವರಿಗೆ ತಮ್ಮ ಕೈಲಾದಷ್ಟು ನೆರವು ಒದಗಿಸುವ ಪ್ರಯತ್ನ ಮಾಡುವುದಾಗಿ ಕೋಲಾರ, ಚಿಕ್ಕಬಳ್ಳಾಪುರ ಡಿಸಿಸಿ ಬ್ಯಾಂಕ್ ಅಧ್ಯಕ್ಷ ಬ್ಯಾಲಹಳ್ಳಿ ಗೋವಿಂದಗೌಡ ತಿಳಿಸಿದರು.ಮನ್ವಂತರ ಜನಸೇವಾ ಟ್ರಸ್ಟ್ ಆಶ್ರಯದಲ್ಲಿ ಶನಿವಾರ ನಗರದ ಡಿಸಿಸಿ ಬ್ಯಾಂಕ್ ಆವರಣದಲ್ಲಿ ಲಾಕ್‍ಡೌನ್‍ನಿಂದಾಗಿ ಕೆಲಸವಿಲ್ಲದೇ ಸಂಕಷ್ಟಕ್ಕೀಡಾಗಿ ಕುಟುಂಬ ಉಪವಾಸದಲ್ಲಿದೆ ಎಂದು ನೋವು ತೋಡಿಕೊಂಡ ವಿಕಲಚೇತನರಿಗೆ ಇಡೀ ತಿಂಗಳಿಗಾಗುವಷ್ಟು ಎಲ್ಲಾ ರೀತಿಯ […]

ವರದಿ: ಶಬ್ಬೀರ್ ಅಹಮ್ಮದ್, ಶ್ರೀನಿವಾಸಪುರ ಕೋಲಾರ:- ಲಸಿಕೆ ಹಾಕುವ ಸಂದರ್ಭದಲ್ಲಿ ಸಾಮಾಜಿಕ ಅಂತರ ಕಾಪಾಡಲು ಪೊಲೀಸರ ಸಹಕಾರ ಪಡೆಯುವಂತೆ ತಾಲ್ಲೂಕಿನ ಸುಗಟೂರು ಪ್ರಾಥಮಿಕ ಕೇಂದ್ರದ ಸಿಬ್ಬಂದಿಗೆ ಜಿಲ್ಲಾಧಿಕಾರಿ ಡಾ.ಆರ್.ಸೆಲ್ವಮಣಿ ಸೂಚನೆ ನೀಡಿದರು.ಶನಿವಾರ ಸುಗಟೂರು ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ಭೇಟಿ ನೀಡಿ, ಲಸಿಕೆ ಅಭಿಯಾನ, ಕೋವಿಡ್ ಪರೀಕ್ಷೆ ಕುರಿತು ಖುದ್ದು ಪರಿಶೀಲನೆ ನಡೆಸಿ ಅವರು ಮಾತನಾಡುತ್ತಿದ್ದರು.ಸುಗಟೂರು ಆರೋಗ್ಯ ಕೇಂದ್ರವನ್ನು ಸುವ್ಯವಸ್ಥಿತ ರೀತಿಯಲ್ಲಿ ನಿರ್ವಹಿಸಿರುವ ಕುರಿತು ಅಲ್ಲಿನ ವೈದ್ಯಾಧಿಕಾರಿ ಡಾ.ಕೆ.ಕಾವ್ಯ ಅವರ ಕಾರ್ಯವನ್ನು ಪ್ರಶಂಶಿಸಿದ ಅವರು, ಲಸಿಕೆ ಮತ್ತು ಕೋವಿಡ್ […]

ವರದಿ: ಶಬ್ಬೀರ್ ಅಹಮ್ಮದ್, ಶ್ರೀನಿವಾಸಪುರ ಶ್ರೀನಿವಾಸಪುರ: ಕೊರೊನಾ ಸೋಂಕಿನಿಂದ ರಕ್ಷಣೆ ಪಡೆಯಲು ಎಲ್ ಅರ್ಹ ವ್ಯಕ್ತಿಗಳು ಲಸಿಕೆ ಹಾಕಿಸಿಕೊಳ್ಳಬೇಕು. ಕೋವಿಡ್ ನಿಯಮಗಳನ್ನು ಕಡ್ಡಾಯವಾಗಿ ಪಾಲಿಸಬೇಕು ಎಂದು ಪುರಸಭೆ ಮುಖ್ಯಾಧಿಕಾರಿ ಡಿ.ಶೇಖರರೆಡ್ಡಿ ಹೇಳಿದರು.ಪಟ್ಟಣದ ಪುರಸಭಾ ಕಚೇರಿ ಆವರಣದಲ್ಲಿ ಆರೋಗ್ಯ ಇಲಾಖೆ ವತಿಯಿಂದ ಅಂಗ ವಿಕಲರು ಹಾಗೂ ಬೀದಿ ಬದಿ ವ್ಯಾಪಾರಿಗಳಿಗೆ ಶುಕ್ರವಾರ ಏರ್ಪಡಿಸಿದ್ದ ಕೊರೊನಾ ವಿರುದ್ಧ ಲಸಿಕೆ ನೀಡುವ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದರು. .ಪುರಸಭೆಯ ಸಮುದಾಯ ಸಂಘಟನಾಧಿಕಾರಿ ಕೆ.ಎನ್.ರಾಜೇಶ್ವರಿ, ಆರೋಗ್ಯ ತಪಾಸಣಾಧಿಕಾರಿ ಪೃಥ್ವಿರಾಜ್, ಗೋವಿಂದಮ್ಮ, ನಾಗೇಶ್ ಇದ್ದರು.ಲಸಿಕೆ […]

ವರದಿ: ಶಬ್ಬೀರ್ ಅಹಮ್ಮದ್, ಶ್ರೀನಿವಾಸಪುರ ಶ್ರೀನಿವಾಸಪುರ:ಮೇ.28: ತಾಲ್ಲೂಕಿನ ತಾಡಿಗೋಳ್ ಪ್ರಾಥಮಿಕ ಆರೋಗ್ಯ ಕೇಂದ್ರದ ವ್ಯಾಪ್ತಿಯ ಕಮತಂಪಲ್ಲಿ ಗ್ರಾಮದಲ್ಲಿ ಕೋವಿಡ್ ಪ್ರಕರಣಗಳು ಕಂಡು ಬಂದ ಹಿನ್ನೆಲೆಯಲ್ಲಿ ಗ್ರಾಮವನ್ನು ಇಂದು ಶುಕ್ರವಾರ ಸೀಲ್ ಡೌನ್ ಮಾಡಲಾಯಿತು.ಲಾಡ್ ಡೌನ್ ಮಾಡುವ ಮುನ್ನ ಗ್ರಾಮದಲ್ಲಿನ ಕೋವಿಡ್ ರೋಗಿಗಳನ್ನು ಆಂಬ್ಯುಲೆನ್ಸ್‍ಲ್ಲಿ ಶ್ರೀನಿವಾಸಪುರದ ಕೋವಿಡ್ ಕೇಂದ್ರಕ್ಕೆ ಸೇರಿಸಲಾಯಿತು. ಅನಂತರ ಗ್ರಾಮಕ್ಕೆ ಬರುವ ಮುಖ್ಯೆ ರಸ್ತೆ ಸೆರಿದಂತೆ, ಉಳಿದ ಎಲ್ಲಾ ರಸ್ತೆಗಳನ್ನೂ ಮುಚ್ಚಲಾಯಿತು.ಪ್ರಾಥಮಿಕ ಆರೋಗ್ಯ ಕೇಂದ್ರದ ಸುರಕ್ಷಾಧಿಕಾರಿ ಕಾಶಿ ವಿಶ್ವನಾಥ, ಕೃಷ್ಣವೇಣಿ, ಗೋವಿಂದಪ್ಪ, ಸೀನಪ್ಪ, ಆಶಾ ಹಾಗೂ […]

ವರದಿ: ಶಬ್ಬೀರ್ ಅಹಮ್ಮದ್, ಶ್ರೀನಿವಾಸಪುರ ಕೋಲಾರ:- ಕೋವಿಡ್ ಕಠಿಣ ಲಾಕ್‍ಡೌನ್ ಹಿನ್ನಲೆಯಲ್ಲಿ ನಗರದಲ್ಲಿ ವಾಹನ,ಜನ ಸಂಚಾರಕ್ಕೆ ನಿರ್ಬಂಧ ವಿಧಿಸಿದ್ದು, ಸೋಂಕು ತಡೆಯುವ ದೃಷ್ಟಿಯಿಂದ ಜನತೆ ಸಹಕಾರ ನೀಡಬೇಕು ಎಂದು ವಾರ್ಡ್ ನೋಡಲ್ ಅಧಿಕಾರಿ ಹಾಗೂ ಬಿಇಒ ಕೆ.ಎಸ್.ನಾಗರಾಜಗೌಡ ಮನವಿ ಮಾಡಿದರು.ಶುಕ್ರವಾರ ಲಾಕ್‍ಡೌನ್ ಹಿನ್ನಲೆಯಲ್ಲಿ ನಗರದ ಟೇಕಲ್ ರಸ್ತೆಯಲ್ಲಿ ಅನಗತ್ಯ ಓಡಾಟ ನಡೆಸಿದ ವಾಹನಗಳನ್ನು ತಡೆದು ಪರಿಶೀಲಿಸಿ ಅವರು ಮಾತನಾಡುತ್ತಿದ್ದರು.ಸರ್ಕಾರ ಕೋವಿಡ್ ಸೋಂಕು ತಡೆಗೆ ಲಾಕ್‍ಡೌನ್ ಅಸ್ತ್ರ ಉಪಯೋಗಿಸಿದೆ, ಜಿಲ್ಲಾಧಿಕಾರಿಗಳ ನೇತೃತ್ವದಲ್ಲಿ ಜಿಲ್ಲೆಯಲ್ಲೂ ಲಾಕ್‍ಡೌನ್ ಯಶಸ್ವಿಗೊಳಿಸಿ ಸೋಂಕು ತಡೆಯಲು […]

ವರದಿ: ಶಬ್ಬೀರ್ ಅಹಮ್ಮದ್, ಶ್ರೀನಿವಾಸಪುರ ಶ್ರೀನಿವಾಸಪುರ: ಪೌರ ಕಾರ್ಮಿಕರಿಗೆ ಸರ್ಕಾರ ವಿಶೇಷ ಸೌಲಭ್ಯ ಒದಗಿಸಬೇಕು. ಅವರ ಆರೋಗ್ಯ ರಕ್ಷಣೆಗೆ ಹೆಚ್ಚಿನ ಕಾಳಜಿ ವಹಿಸಬೇಕು ಎಂದು ಪುರಸಭಾ ಸದಸ್ಯೆ ಶಾಂತಮ್ಮ ಕೃಷ್ಣೇಗೌಡ ಹೇಳಿದರು. ಪಟ್ಟಣದ ಪುರಸಭಾ ಕಚೇರಿ ಆವರಣದಲ್ಲಿ ಗುರುವಾರ 90 ಮಂದಿ ಪೌರ ಕಾರ್ಮಿಕರಿಗೆ ಆಹಾರ ಪದಾರ್ಥಗಳ ಕಿಟ್ ವಿತರಿಸಿ ಮಾತನಾಡಿ, ‘ಪೌರ ಕಾರ್ಮಿಕರು ಕಷ್ಟದ ಜೀವನ ನಿರ್ವಹಿಸುತ್ತಿದ್ದಾರೆ. ಆದ್ದರಿಂದ ಅವರಿಗೆ ನೆರವಾಗಲೆಂದು ಆಹಾರ ಪದಾರ್ಥ ವಿತರಣೆ ಮಾಡಲಾಗುತ್ತಿದೆ. ಈಚೆಗೆ ಕೋವಿಡ್‍ನಿಂದ ಮೃತಪಟ್ಟ ಪೌರ ಕಾರ್ಮಿಕ ನಾರಾಯಣಸ್ವಾಮಿ […]