ವರದಿ: ಶಬ್ಬೀರ್ ಅಹಮ್ಮದ್, ಶ್ರೀನಿವಾಸಪುರ ಶ್ರೀನಿವಾಸಪುರ 1 : ನಿರ್ಮಲ ಭಕ್ತಿಯಿಂದ ಮಾತ್ರ ಪರಮಾತ್ಮನ ಕೃಪೆಗೆ ಪಾತ್ರವಾಗಬಹುದು . ಆದರೆ ಭಕ್ತಿ ಪರಿಶುದ್ದವಾಗಿರಬೇಕು ಅಷ್ಟೆ. ದೇವರು ಮತ್ತೇನನ್ನೂ ಕೇಳುವುದಿಲ್ಲ ಎಂದು ರಾಯಲ್ಪಾಡಿನ ಮೇಧಾ ಗುರು ಜ್ಯೋತಿರ್ವಿಜ್ಞಾನ ಕೇಂದ್ರದ ಸಂಸ್ಥಾಪಕ ವೆಲ್ಲಾಲ ಸತ್ಯನಾರಾಯಣಶಾಸ್ತ್ರಿ ಹೇಳಿದರು.ಶುಕ್ರವಾರ ಬಯ್ಯಪಲ್ಲಿ ಗ್ರಾಮದಲ್ಲಿನ ಗ್ರಾಮದೇವತೆಯವರಾದ ಗಂಗಮ್ಮ,ಪುಲೇಕಮ್ಮ ದೇವರ ಮಂಡಲಪೂಜಾ ಧಾರ್ಮಿಕ ಕಾರ್ಯಕ್ರಮದಲ್ಲಿ ಮಾತನಾಡಿದರು.ಸ್ಥಿರ ಚಿತ್ತದಿಂದ ಐಹಿಕತ್ವವನ್ನು ಮರೆತು ಮೌನಯೋಗದಿಂದ ಭವಬಂದಗಳನ್ನು ದೂರಕ್ಕೆ ತಳ್ಳಿ ಪರಮಾತ್ಮನನ್ನು ನೆನೆಯುತ್ತಾ ಸ್ವಲ್ಪ ಸಮಯ ದೇವಸ್ಥಾನದಲ್ಲಿ ಕುಳಿತು ಬರುವುದರಿಂದ ಮನಸ್ಸಿಗೆ […]
ವರದಿ: ಶಬ್ಬೀರ್ ಅಹಮ್ಮದ್, ಶ್ರೀನಿವಾಸಪುರ ಶ್ರೀನಿವಾಸಪುರ : ರಾಜ್ಯ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಚುನಾವಣೆ ಹತ್ತಿರವಾಗುತ್ತಿದ್ದಂತೆ, ಪ್ರತ್ಯೇಕ ಬಣಗಳಲ್ಲಿ ಸ್ಪರ್ಧಿಸಿರುವ ಶಿಕ್ಷಕರು ಹಾಗೂ ಅವರ ಬೆಂಬಲಿಗರು ಶಿಕ್ಷಕರ ಮನೆಗಳಿಗೆ ತೆರಳಿ ಮತ ಯಾಚನೆ ಮಾಡುತ್ತಿದ್ದಾರೆ. ಶನಿವಾರ ಶಿಕ್ಷಕರ ಬಣಗಳ ಸದಸ್ಯರು ಪಟ್ಟಣ ಹಾಗೂ ಗ್ರಾಮೀಣ ಪ್ರದೇಶದಲ್ಲಿ ವಾಸಿಸುವ ಶಿಕ್ಷಕರಿಗೆ ತೆರಳಿ ಮತ ಯಾಚನೆ ಮಾಡಿದರು. ತಾಲ್ಲೂಕು ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಬಂಗವಾದಿ ನಾಗರಾಜ್ ಪಟ್ಟಣದಲ್ಲಿ ಮತ ಯಾಚನೆ ಸಂದರ್ಭದಲ್ಲಿ ಮಾತನಾಡಿ, ಎನ್‌ಪಿಎಸ್ ರದ್ದುಪಡಿಸಲು ಹೋರಾಟ […]
ವರದಿ: ಶಬ್ಬೀರ್ ಅಹಮ್ಮದ್, ಶ್ರೀನಿವಾಸಪುರ ಕೋಲಾರ:- ವೇತನಕ್ಕಾಗಿ ಆಗ್ರಹಿಸಿ ಅನಿರ್ಧಿಷ್ಟ ಧರಣಿ ನಡೆಸುತ್ತಿದ್ದ ಕಾರ್ಮಿಕರ ದಾಂಧಲೆಯಿಂದಾಗಿ ತಾಲ್ಲೂಕಿನ ನರಸಾಪುರ ಕೈಗಾರಿಕಾ ಪ್ರದೇಶದಲ್ಲಿನ ದೇಶದ ಮೊದಲ ಐಫೋನ್ ಕಂಪನಿಗೆ 50 ಕೋಟಿಗೂ ಹೆಚ್ಚು ಹಾನಿಯಾಗಿದ್ದು, ಈಗಾಗಲೇ 300ಕ್ಕೂ ಹೆಚ್ಚು ಕಿಡಿಗೇಡಿಗಳನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.ದೇಶದ ಮೊದಲ ಐಪೋನ್ ಬಿಡಿಭಾಗಗಳನ್ನ ತಯಾರಿಸುವ ವಿಸ್ಟ್ರಾನ್ ಕಂಪನಿಯ ವಿರುದ್ದ ನೌಕರರು ಬಂಡೆದ್ದಿದ್ದು, ರೊಚ್ಚಿಗೆದ್ದ ಕಾರ್ಮಿಕರು ಬೆಳ್ಳಂಬೆಳಿಗ್ಗೆ ಕಂಪನಿಯಲ್ಲಿನ ಗಾಜುಗಳನ್ನ ಚೂರು ಚೂರು ಮಾಡಿ ಸಿಕ್ಕ ಸಿಕ್ಕ ವಸ್ತುಗಳನ್ನು ನಾಶಪಡಿಸಿ ಧಾಂಧಲೆ ಮಾಡಿದ್ದು, ಎರಡು […]
ವರದಿ: ಶಬ್ಬೀರ್ ಅಹಮ್ಮದ್, ಶ್ರೀನಿವಾಸಪುರ ಕೋಲಾರ:- ತಾಲ್ಲೂಕಿನ ನಾಗಲಾಪುರದ ವೀರಸಿಂಹಾಸನ ಸಂಸ್ಥಾನ ಮಠದಲ್ಲಿ ಕೊನೆ ಕಾರ್ತಿಕ ಸೋಮವಾರದ ಅಂಗವಾಗಿ ಶಿವಪಾರ್ವತಿ ಕಲ್ಯಾಣೋತ್ಸವ, ಲಿಂಗೈಕ್ಯ ಶ್ರೀ ಗುರುಲಿಂಗ ಶಿವಾಚಾರ್ಯ ಸ್ವಾಮೀಜಿಗಳ 18ನೇ ವರ್ಷದ ಸಂಸ್ಥಾನೋತ್ಸವನ್ನು ಡಿ.13 ರಂದು ಹಮ್ಮಿಕೊಳ್ಳಲಾಗಿದೆ.ಕಾರ್ಯಕ್ರಮದಲ್ಲಿ ಕೊರೋನಾ ವಾರಿಯರ್ಸ್‍ಗಳು ಹಾಗೂ ಸಮಾಜ ಸೇವಕರಿಗೆ ಅಭಿನಂದನೆ ಸಲ್ಲಿಸುತ್ತಿದ್ದು, ಇಡೀ ಕಾರ್ಯಕ್ರಮವು ಸಂಸ್ಥಾನದ ಶ್ರೀ ತೇಜೇಶ ಲಿಂಗ ಶಿವಾಚಾರ್ಯ ಸ್ವಾಮೀಜಿಗಳ ಸಾನಿಧ್ಯದಲ್ಲಿ ನೆರವೇರಲಿದೆ.13 ರಂದು ಸಂಜೆ ಇಷ್ಟಲಿಂಗ ದೀಕ್ಷೆ ನಡೆಯಲಿದ್ದು, ದೀಕ್ಷೆ ಪಡೆಯಲಿಚ್ಚಿಸುವವರು ಮಠಕ್ಕೆ ಆಗಮಿಸಬೇಕು ಜತೆಯಲ್ಲಿ ದೀಕ್ಷೆ […]
ವರದಿ: ಶಬ್ಬೀರ್ ಅಹಮ್ಮದ್, ಶ್ರೀನಿವಾಸಪುರ ಶ್ರೀನಿವಾಸಪುರ: ರಾಜ್ಯ ರಸ್ತೆ ಸಾರಿಗೆ ಸಂಸ್ಥೆ ಸಿಬ್ಬಂದಿ ತಮ್ಮ ಬೇಡಿಕೆಗಳ ಈಡೇರಿಕೆಗಾಗಿ ಸರ್ಕಾರವನ್ನು ಆಗ್ರಹಿಸಿ ಮುಷ್ಕರ ನಡೆಸಿದ ಪರಿಣಾಮವಾಗಿ ಪ್ರಯಾಣಿಕರು ಹೊರ ಊರುಗಳಿಗೆ ಹೋಗಲು ಪರದಾಡಿದರು.ಬೇರೆ ಬೇರೆ ಸ್ಥಳಗಳಿಗೆ ಹೋಗಲು ಬಸ್ ನಿಲ್ದಾಣಕ್ಕೆ ಬಂದಿದ್ದ ಪ್ರಯಾಣಿಕರು ಗಂಟೆಗಟ್ಟಲೆ ಕಾದರೂ ರಸ್ತೆ ಸಾರಿಗೆ ಸಂಸ್ಥೆಯ ಬಸ್ ಸೇವೆ ಪ್ರಾರಂಭವಾಗಲಿಲ್ಲ. ಬಸ್ ಚಾಲಕರು ಹಾಗೂ ನಿರ್ವಾಹಕರು ಬಸ್‌ಗಳಿಂದ ದೂರ ಉಳಿದರು. ರಸ್ತೆ ಸಾರಿಗೆ ಸಂಸ್ಥೆ ಸೇವೆಯನ್ನೇ ನೆಚ್ಚಿಕೊಂಡಿರುವ ಗ್ರಾಮೀಣ ಪ್ರದೇಶದ ಪ್ರಯಾಣಿಕರು ಹೆಚ್ಚಿನ ತೊಂದರೆ […]
ವರದಿ: ಶಬ್ಬೀರ್ ಅಹಮ್ಮದ್, ಶ್ರೀನಿವಾಸಪುರ ಕರ್ನಾಟಕ ರಾಜ್ಯ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಚುನಾವಣೆಗೆ ಆರ್.ಅನಿಲ್‍ಕುಮಾರ್ ತಂಡದ ಮತಯಾಚನೆಗೆ ಚಾಲನೆಕೋಲಾರ :- ಡಿ.15 ರಂದು ನಡೆಯಲಿರುವ ಕರ್ನಾಟಕ ರಾಜ್ಯ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಚುನಾವಣೆ -2020 ಪ್ರಯುಕ್ತ ಆರ್.ಅನಿಲ್‍ಕುಮಾರ್ ತಂಡದ ಕೋಲಾರ ತಾಲೂಕು ಅಭ್ಯರ್ಥಿಗಳು ನಗರದ ಬಿಇಓ ಕಛೇರಿ ಆವರಣದಲ್ಲಿರುವ ಗಣಪತಿ ದೇವಾಲಯದಲ್ಲಿ ಪೂಜೆ ಸಲ್ಲಿಸಿ ಚುನಾವಣಾ ಕರಪತ್ರ ಬಿಡುಗಡೆ ಮಾಡಿ ಒಗ್ಗಟ್ಟನ್ನು ಪ್ರದರ್ಶಿಸುವ ಮೂಲಕ ಮತಯಾಚನೆಗೆ ಚಾಲನೆ ನೀಡಿದರು. ಈ ಸಂದರ್ಭದಲ್ಲಿ ಕೋಲಾರ ತಾಲೂಕು […]
ವರದಿ: ಶಬ್ಬೀರ್ ಅಹಮ್ಮದ್, ಶ್ರೀನಿವಾಸಪುರ ಕೋಲಾರ:- ಜೆಒಸಿ ಕೋರ್ಸುಗಳಿಂದ ವಿವಿಧ ಇಲಾಖೆಗಳಲ್ಲಿ ವಿಲೀನಗೊಂಡ ನೌಕರರ ಖಾಯಂ ಪೂರ್ವ ಸೇವೆ, ಹಳೆ ಪಿಂಚಣಿ ಮತ್ತಿತರ ಬೇಡಿಕೆಗಳ ಕುರಿತು ಸರ್ಕಾರದ ಹಂತದಲ್ಲಿ ಚರ್ಚಿಸಿ ಈಡೇರಿಸುವುದಾಗಿ ರಾಜ್ಯ ಪ್ರಾಥಮಿಕ ಶಿಕ್ಷಣ ಸಚಿವ ಸುರೇಶ್‍ಕುಮಾರ್ ಭರವಸೆ ನೀಡಿದರು.ಬೆಂಗಳೂರಿನ ಶಾಸಕರ ಭವನದ ಸಭಾಂಗಣದಲ್ಲಿ ಕೋಲಾರ,ಚಿಕ್ಕಬಳ್ಳಾಪುರ ಸೇರಿದಂತೆ ರಾಜ್ಯದ ವಿವಿಧ ಜಿಲ್ಲೆಗಳ ಜೆಒಸಿಯಿಂದ ವಿವಿಧ ಇಲಾಖೆಗಳಲ್ಲಿ ವಿಲೀನಗೊಂಡ ನೌಕರರ ಸಂಘದ ಪದಾಧಿಕಾರಿಗಳು ರಾಜ್ಯ ಪ್ರಾಥಮಿಕ ಶಿಕ್ಷಣ ಸಚಿವ ಸುರೇಶ್‍ಕುಮಾರ್ ಹಾಗೂ ನೂತನವಾಗಿ ಆಯ್ಕೆಯಾಗಿರುವ ವಿಧಾನಪರಿಷತ್ ಸದಸ್ಯರನ್ನು […]
ವರದಿ: ಶಬ್ಬೀರ್ ಅಹಮ್ಮದ್, ಶ್ರೀನಿವಾಸಪುರ ಕೋಲಾರ,ಡಿ.10: ಪರಿಶಿಷ್ಟ ಜಾತಿ ಒಳ ಮೀಸಲಾತಿ ಅನುಷ್ಠಾನಕ್ಕೆ ನ್ಯಾ. ಎ. ಜೆ. ಸದಾಶಿವ ಆಯೋಗ ವರದಿಯನ್ನು ಜಾರಿ ಮಾಡಲು ರಾಜ್ಯ ಸರ್ಕಾರ ಬದ್ಧವಾಗಿದೆ ಎಂದು ಆರೋಗ್ಯ ಸಚಿವ ಬಿ. ಶ್ರೀರಾಮುಲು ತಿಳಿಸಿದ್ದಾರೆ.ಇಲ್ಲಿನ ಮೌರ್ಯ ಸರ್ಕಲ್ ಬಳಿ ಕಳೆದ ನಾಲ್ಕು ದಿನಗಳಿಂದ ಕರ್ನಾಟಕ ರಾಜ್ಯ ದಲಿತ ಸಂಘರ್ಷ ಸಮಿತಿ (ಬಿ. ಕೃಷ್ಣಪ್ಪ ಬಣ) ಅಹೋ ರಾತ್ರಿ ನಡೆಸುತ್ತಿದ್ದ ಧರಣಿ ಸತ್ಯಾಗ್ರಹ ಸ್ಥಳಕ್ಕೆ ಆಗಮಿಸಿದ ಅವರು ಮಾತನಾಡಿದರು.ಧರಣಿ ನಿರತರು ಇಟ್ಟಿರುವ ಬೇಡಿಕೆಗಳಲ್ಲಿ ಸದಾಶಿವ ಆಯೋಗ […]
ವರದಿ: ಶಬ್ಬೀರ್ ಅಹಮ್ಮದ್, ಶ್ರೀನಿವಾಸಪುರ ಕೋಲಾರ-10,ಡಿ, ಜನಾಭಿಪ್ರಾಯವಿಲ್ಲವೆ ಅಧಿವೇಶನದಲ್ಲಿ ಅಂಗೀಕೃತವಾಗಿರುವ ಭೂ ಸುಧಾರಣಾ ಕಾಯ್ದೆ ಆದೇಶವನ್ನು ರದ್ದುಪಡಿಸಬೇಕೆಂದು ಆಗ್ರಹಿಸಿ ರೈತ ಸಂಘದಿಂದ ಮೆಕ್ಕೆ ಸರ್ಕಲ್‍ನಲ್ಲಿ ಮುಖ್ಯಮಂತ್ರಿ ಭೂತದಹನ ಮಾಡಿ, ಶಿರಸ್ತೇದಾರ್ ಮುಖಾಂತರ ಮಾನ್ಯ ಗೌರವಾನ್ವಿತ ರಾಜ್ಯಪಾಲರಿಗೆ ಮನವಿ ಸಲ್ಲಿಸಲಾಯಿತು.ಹೋರಾಟದ ನೇತೃತ್ವ ವಹಿಸಿ ಮಾತನಾಡಿದ ರೈತ ಸಂಘದ ರಾಜ್ಯ ಉಪಾಧ್ಯಕ್ಷ ಕೆ.ನಾರಾಯಣಗೌಡ ದೇಶವನ್ನು ಆಳ್ವಿಕೆ ಮಾಡುತ್ತಿದ್ದ ಬ್ರಿಟೀಷರು ದೇಶದಲ್ಲಿ ದುಡಿಯುವ ಕೈಗೆ ಕೆಲಸ ಕೊಡಲು ಕೃಷಿ ಭೂಮಿಯನ್ನು ನೀಡಿದರೆ ದೇಶಕ್ಕೆ ಸ್ವಾತಂತ್ರ್ಯ ಬಂದ ನಂತರ ನಮ್ಮನ್ನಾಳುವ ಸರ್ಕಾರಗಳು ತಮಗೆ […]