
ವರದಿ: ಶಬ್ಬೀರ್ ಅಹಮ್ಮದ್, ಶ್ರೀನಿವಾಸಪುರ ಅಲೂಗಡ್ಡೆ ಬೆಳೆ ಕ್ಷೇತ್ರೋತ್ಸವ: ಆಲೂಗಡ್ಡೆ ಬೆಳೆಯಲ್ಲಿ ಅಂಗಮಾರಿ ರೋಗವು ಪ್ರಮುಖ ರೋಗವಾಗಿದ್ದು ಇದರ ನಿರ್ವಹಣೆಯ ಬಗ್ಗೆ ಕೃಷಿ ವಿಜ್ಞಾನ ಕೇಂದ್ರ, ಕೋಲಾರವು ತಾಲ್ಲೂಕಿನ ಯಡಹಳ್ಳಿ ಗ್ರಾಮದಲ್ಲಿ ಶ್ರೀ. ಶಾಮಾಚಾರಿ ರೈತರ ಹೊಲದಲ್ಲಿ ಮುಂಚೂಣಿ ಪ್ರಾತ್ಯೆಕ್ಷಿಕೆ ಹಮ್ಮಿಕೊಂಡಿದ್ದು, ದಿನಾಂಕ 05.02.2021 ರಂದು ‘ಆಲೂಗಡ್ಡೆ ಬೆಳೆಯ ಕ್ಷೇತ್ರೋತ್ಸವ’ದಲ್ಲಿ ಪಾಲ್ಗೊಂಡಿದ್ದ ಕೃಷಿ ವಿಜ್ಞಾನ ಕೇಂದ್ರದ ಸಸ್ಯ ಸಂರಕ್ಷಣೆ ವಿಜ್ಞಾನಿಯಾದ ಡಾ. ಅಂಬಿಕಾ ಡಿ.ಎಸ್ ರೈತರನ್ನು ಉದ್ದೇಶಿಸಿ ಮಾತನಾಡಿ ಆಲೂಗಡ್ಡೆ ಬೆಳೆಯಲ್ಲಿ ಬರುವ ಅಂಗಮಾರಿ ರೋಗದ ನಿಯಂತ್ರಣಕ್ಕೆ […]

ವರದಿ: ಶಬ್ಬೀರ್ ಅಹಮ್ಮದ್, ಶ್ರೀನಿವಾಸಪುರ ಶ್ರೀನಿವಾಸಪುರ: ಪಟ್ಟಣದ ಅಭಿವೃದ್ಧಿಗೆ ಸರ್ಕಾರದಿಂದ ಕೊಟ್ಯಂತರ ರೂಪಾಯಿ ತಂದರೂ, ಅಭಿವೃದ್ಧಿ ಕಾರ್ಯಗಳು ನಡೆಯುತ್ತಿಲ್ಲ ಎಂಬ ಶಾಸಕ ಕೆ.ಆರ್.ರಮೇಶ್ ಕುಮಾರ್ ಅವರ ಆರೋಪ ಸತ್ಯಕ್ಕೆ ದೂರವಾದದು ಎಂದು ಪುರಸಭಾಧ್ಯಕ್ಷೆ ಎಂ.ಎನ್.ಲಲಿತಾ ಶ್ರೀನಿವಾಸ್ ಹೇಳಿದರು.ಪಟ್ಟಣದ ಪುರಸಭಾ ಕಚೇರಿ ಸಭಾಂಗಣದಲ್ಲಿ ಗುರುವಾರ ಏರ್ಪಡಿಸಿದ್ದ ಪತ್ರಿಕಾ ಗೋಷ್ಠಿಯಲ್ಲಿ ಮಾತನಾಡಿದ ಅವರು, ಈಚೆಗೆ ನಡೆದ ಗಣರಾಜ್ಯೋತ್ಸವ ಸಮಾರಂಭದ ಬಳಿಕ ಶಾಸಕರು, ಆಡಳಿತ ಪಕ್ಷದ ಸದಸ್ಯರ ವಿರುದ್ಧ ಆರೋಪ ಮಾಡಿರುವುದು ಸರಿಯಲ್ಲ. ಈ ಹಿಂದೆ ಎಂಟು ವರ್ಷಗಳ ಕಾಲ ಪುರಸಭೆ […]

ವರದಿ: ಶಬ್ಬೀರ್ ಅಹಮ್ಮದ್, ಶ್ರೀನಿವಾಸಪುರ ಶ್ರೀನಿವಾಸಪುರ: ಕುಡಿಯುವ ನೀರಿನ ಸೌಲಭ್ಯ ಹಾಗೂ ಸ್ವಚ್ಛತೆಗೆ ಮೊದಲ ಆದ್ಯತೆ ನೀಡಲಾಗುವುದು ಎಂದು ಪುರಸಭಾಧ್ಯಕ್ಷೆ ಎಂ.ಎನ್.ಲಲಿತಾ ಶ್ರೀನಿವಾಸ್ ಹೇಳಿದರು.ಪಟ್ಟಣದ ಪುರಸಭಾ ಕಚೇರಿ ಸಭಾಂಗಣದಲ್ಲಿ ಗುರುವಾರ ಏರ್ಪಡಿಸಿದ್ದ ಸರ್ವ ಸದಸ್ಯರ ಸಾಮಾನ್ಯ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಪಟ್ಟಣದ ಅಭಿವೃದ್ಧಿಗೆ ಪೂಕವಾದ ಯೋಜನೆಗಳನ್ನು ರೂಪಿಸಿ ಜಾರಿಗೆ ತರುವಲ್ಲಿ ಎಲ್ಲ ಸದಸ್ಯರೂ ಸಹಕಾರ ನೀಡಬೇಕುಎಂದು ಹೇಳಿದರು.ಪುರಸಭೆ ಮುಖ್ಯಾಧಿಕಾರಿ ವಿ.ಮೋಹನ್ ಕುಮಾರ್ ಮಾತನಾಡಿ, ಪುರಸಭೆಗೆ ಹೊಸದಾಗಿ ಆಯ್ಕೆಯಾಗಿರುವ ಸದಸ್ಯರು, ತಮ್ಮ ಕರ್ತವ್ಯಗಳ ಬಗ್ಗೆ ತಿಳಿದುಕೊಳ್ಳಬೇಕು. […]

ವರದಿ: ಶಬ್ಬೀರ್ ಅಹಮ್ಮದ್, ಶ್ರೀನಿವಾಸಪುರ ಐಸಿಎಆರ್-ಕೃಷಿ ವಿಜ್ಞಾನ ಕೇಂದ್ರ, ಕೋಲಾರವು ತೋಟಗಾರಿಕೆ ಇಲಾಖೆ ಮತ್ತು ಕೃಷಿ ಇಲಾಖೆಯ ಸಿಬ್ಬಂದಿಗಳಿಗೆ ದಿನಾಂಕ 03.02.2021 ರಂದು ಕೃಷಿ ವಿಜ್ಞಾನ ಕೇಂದ್ರ, ಕೋಲಾರದಲ್ಲಿ ‘ತೆಂಗಿನ ಸುರುಳಿ ಸುತ್ತುವ ಬಿಳಿನೊಣದ ನಿರ್ವಹಣೆ ತರಬೇತಿ ಕಾರ್ಯಕ್ರಮ’ ವನ್ನು ಹಮ್ಮಿಕೊಳ್ಳಲಾಗಿತ್ತು.ಹಿರಿಯ ವಿಜ್ಞಾನಿ ಮತ್ತು ಮುಖ್ಯಸ್ಥರಾದ ಶ್ರೀ ತುಳಸಿರಾಮರವರು ಈ ಕಾರ್ಯಕ್ರಮದಲ್ಲಿ ಪಾಲ್ಗೊಂಡು ತೆಂಗಿನ ಸುರುಳಿ ಸುತ್ತುವ ಬಿಳಿನೊಣದ ನಿರ್ವಹಣೆಯ ಬಗ್ಗೆ ಸವಿಸ್ತಾರವಾಗಿ ತೋಟಗಾರಿಕೆ ಮತ್ತು ಕೃಷಿ ಅಧಿಕಾರಿಗಳಿಗೆ ತಿಳಿಸಿದರು. ಈ ಕೀಟವು 2016ನೇ ಸಾಲಿನಲ್ಲಿ ಮೊಟ್ಟಮೊದಲ […]

ವರದಿ: ಶಬ್ಬೀರ್ ಅಹಮ್ಮದ್, ಶ್ರೀನಿವಾಸಪುರ ಶ್ರೀನಿವಾಸಪುರ: ಮಾವು ಮತ್ತು ಟೊಮೆಟೊ ಬೆಳೆ ರಕ್ಷಣೆಗೆ ರೈತರು ಅಗತ್ಯ ಕ್ರಮ ಕೈಗೊಳ್ಳಬೇಕು ಎಂದು ಕೃಷಿ ವಿಜ್ಞಾನ ಕೇಂದ್ರದ ಸಸ್ಯ ಸಂರಕ್ಷಣಾ ವಿಜ್ಞಾನಿ ಡಾ. ಡಿ.ಎಸ್.ಅಂಬಿಕಾ ಹೇಳಿದರು.ತಾಲ್ಲೂಕಿನ ಸಾತಾಂಡ್ಲಹಳ್ಳಿ ಗ್ರಾಮದಲ್ಲಿ ತೊಟಗಾರಿಕಾ ಇಲಾಖೆ ಹಾಗೂ ಕೋಲಾರದ ಐಸಿಎಆರ್ ಕೃಷಿ ವಿಜ್ಞಾನ ಕೇಂದ್ರದ ವತಿಯಿಂದ ಮಂಗಳವಾರ ಏರ್ಪಡಿಸಿದ್ದ ರೈತರ ಬೆಳೆಗಳಿಗೆ ಕೀಟ ಹಾಗೂ ರೋಗ ಹತೊಟಿ ಅರಿವು ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಅವರು, ಶೇ.90 ರಷ್ಟು ರೈತರು ಮಾವು ಬೆಳೆಯ ಮೇಲೆ ಆಧಾರ […]

ವರದಿ: ಶಬ್ಬೀರ್ ಅಹಮ್ಮದ್, ಶ್ರೀನಿವಾಸಪುರ ಕೋಲಾರ:- ಜನರ ಸಮಸ್ಯೆಗಳಿಗೆ ಧ್ವನಿಯಾಗುವ ಪತ್ರಿಕಾ ಮಾಧ್ಯಮಗಳಿಗೆ ಸಮಾಜದಲ್ಲಿ ಗೌರವವಿದೆ, ತಪ್ಪು ಮಾಡುವವರಿಗೆ ನಿಮ್ಮನ್ನು ಕಂಡರೆ ಭಯವಿರಬೇಕು, ನಿಮ್ಮಲ್ಲೂ ವೃತ್ತಿಯ ಘನತೆಗೆ ಕುತ್ತು ಬಾರದಂತೆ ನಡೆದುಕೊಳ್ಳುವ ಬದ್ದತೆಯೂ ಇರಬೇಕು ಎಂದು ಸಮಾಜ ಸೇವಕ ಹಾಗೂ ಮಾಜಿ ಶಾಸಕ ಕೊತ್ತೂರು ಮಂಜುನಾಥ್ ಕರೆ ನೀಡಿದರು.ನಗರದ ಪತ್ರಕರ್ತರ ಭವನದಲ್ಲಿ ಅವರೇ 26 ಲಕ್ಷ ರೂ ಕೊಡುಗೆ ನೀಡಿ ನವೀಕರಿಸಿದ ಹವಾನಿಯಂತ್ರಿತ ಮಿನಿಸಭಾಂಗಣದ ಉದ್ಘಾಟನೆ ನೆರವೇರಿಸಿ ಮಾತನಾಡುತ್ತಿದ್ದರು.ಅಭಿವೃದ್ದಿ ವಿಚಾರಗಳಲ್ಲಿ ಎಲ್ಲರೂ ಏನೇ ಭಿನ್ನಾಭಿಪ್ರಾಯಗಳಿದ್ದರೂ ಬದಿಗೆ ಸರಿಸಿ […]

JANANUDI.COM NETWORK ಕುಂದಾಪುರ.ಭಂಡಾರ್ಕಾರ್ಸ್ ಕಲಾ ಮತ್ತು ವಿಜ್ಞಾನ ಕಾಲೇಜು. ಇಲ್ಲಿ ಕನ್ನಡ ವಿಭಾಗದ ವತಿಯಿಂದ ಕನ್ನಡ ಸಹ ಪ್ರಾಧ್ಯಾಪಕರಾದ ಗಣಪತಿ ಭಟ್.ಪಿ ಇವರಿಗೆ ಬೀಳ್ಕೊಡುಗೆ ಸಮಾರಂಭ ನೆರವೇರಿತು.ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ ಕಾಲೇಜಿನ ಪ್ರಾಂಶುಪಾಲರಾದ ಡಾ.ಎನ್.ಪಿ.ನಾರಾಯಣ ಶೆಟ್ಟಿಯವರು ಭಂಡಾರ್ಕಾರ್ಸ್ ಕಾಲೇಜಿನಲ್ಲಿ ಗಣಪತಿ ಭಟ್ ರವರನ್ನು ನಾನು ಹಿಂದಿನಿಂದಲೂ ಗಮನಿಸಿದಂತೆ ನಿಷ್ಠೆಯಿಂದ ಸೇವೆ ಸಲ್ಲಿಸಿದ್ದಾರೆ.ಕಷ್ಟಕರ ದಿನವಾದ ಕೊರೋನಾ ಸಂದರ್ಭದಲ್ಲಿಯೂ ಕೂಡ ತಂತ್ರಜ್ಞಾನದ ಆನ್ಲೈನ್ ತರಗತಿಯನ್ನು ನಿರ್ವಹಣೆ ಮಾಡಿರುವುದನ್ನು ನೆನಪಿಸಿಕೊಂಡರು.ವಿದ್ಯಾರ್ಥಿಗಳಿಗೆ ಒಳ್ಳೆಯ ಉಪನ್ಯಾಸಕ ನಾಗಿ ಕನ್ನಡ ಜ್ಞಾನಧಾರೆಯೆರೆಯುವಲ್ಲಿ ಪ್ರಯತ್ನಶೀಲರಾಗಿದ್ದರೆಂದು ಅಭಿಪ್ರಾಯ ವ್ಯಕ್ತಪಡಿಸಿದರು.ಕಾರ್ಯಕ್ರಮ […]

JANANUDI.COM NETWORK ಕುಂದಾಪುರ,ಜ.31: ಕುಂದಾಪುರ ಕಥೊಲಿಕ್ ಸಭಾ ವತಿಯಿಂದ ಶಿಕ್ಷಣ ಕ್ಷೇತ್ರದಲ್ಲಿ 2019 -20 ಸಾಲಿನಲ್ಲಿ ಎಸ್.ಎಸ್.ಎಲ್.ಸಿ, ಪಿ.ಯು.ಸಿ. ಪದವಿ, ವ್ರತ್ತಿಪರ ಪದವಿಸ್ನಾನಕೋತ್ತರ ಪದವಿಗಳಲ್ಲಿ ಉತ್ತಮ ಸಾಧನೆ ಗೈದ ಕುಂದಾಪುರ ಚರ್ಚಿನ ಪ್ರತಿಭಾವಂತ ವಿಧ್ಯಾರ್ಥಿಗಳನ್ನು ಸನ್ಮಾನಿಸುವ ಕಾರ್ಯಕ್ರಮ ಜನವರಿ 31 ರಂದು ಚರ್ಚ್ ವೆರಾಂಡದಲ್ಲಿ ನೆಡೆಯಿತು.ಚರ್ಚಿನ ಪ್ರಧಾನ ಧರ್ಮಗುರು ಅ|ವಂ|ಸ್ಟ್ಯಾನಿ ತಾವ್ರೊ ಸಾಧನೆ ಮಾಡಿದವರಿಗೆ ಸನ್ಮಾನಿಸಿ ಪುರಸ್ಕರಿಸಿ ಶುಭ ಹಾರೈಸಿದರು. ಕುಂದಾಪುರ ಕಥೊಲಿಕ್ ಸಭಾದ ಅಧ್ಯಕ್ಷ ಬರ್ನಾಡ್ ಡಿಕೋಸ್ತಾ ಸ್ವಾಗತಿಸಿದರು ಸಹಾಯಕ ಧರ್ಮಗುರು ವಂ| ವಿಜಯ್ ಡಿಸೋಜಾ […]

ವರದಿ: ಶಬ್ಬೀರ್ ಅಹಮ್ಮದ್, ಶ್ರೀನಿವಾಸಪುರ ಕೋಲಾರ,ಜ.29: ರಸ್ತೆ ಸುರಕ್ಷತಾ ನಿಯಮಗಳನ್ನು ಕಟ್ಟುನಿಟ್ಟಾಗಿ ಪಾಲಿಸುವಂತೆ ಮಾಡಲು ವಾಣಿಜ್ಯ ವಾಹನ ಚಾಲಕರಿಗಾಗಿ ಜಿಲ್ಲೆಯಾದ್ಯಂತ ಪುನಶ್ಚೇತನ ಕಾರ್ಯಾಗಾರ ಆಯೋಜಿಸಬೇಕೆಂದು ಕರ್ನಾಟಕ ಅಸಂಘಟಿತ ಕಾರ್ಮಿಕ ಪರಿಷತ್ ಅಧ್ಯಕ್ಷ ಕೆ.ವಿ.ಸುರೇಶ್ಕುಮಾರ್ ಹೇಳಿದರು.ನಗರದ ಆರ್ಟಿಒ ಕಚೇರಿಯಲ್ಲಿ ಶನಿವಾರ ಆಯೋಜಿಸಲಾಗಿದ್ದ 32 ನೇ ರಾಷ್ಟ್ರೀಯ ರಸ್ತೆ ಸುರಕ್ಷತಾ ಸಪ್ತಾಹ ಕಾರ್ಯಕ್ರಮದ ಅಧ್ಯಕ್ಷತೆವಹಿಸಿ ಅವರು ಮಾತನಾಡುತ್ತಿದ್ದರು.ಕಾರ್ಯಾಗಾರದಲ್ಲಿ ರಸ್ತೆ ಸುರಕ್ಷತಾ ನಿಯಮಗಳನ್ನು ಪಾಲಿಸುವ ಕುರಿತು ಚಾಲಕರಲ್ಲಿ ಅರಿವು ಮೂಡಿಸುವುದರ ಜೊತೆಗೆ, ಕೇಂದ್ರ ಸರಕಾರದ ಸಾಮಾಜಿಕ ಭದ್ರತಾ ಮಂಡಳಿಯ ಪ್ರಯೋಜನಗಳ ಕುರಿತಂತೆ […]