ವರದಿ: ಶಬ್ಬೀರ್ ಅಹಮ್ಮದ್, ಶ್ರೀನಿವಾಸಪುರ ಕೋಲಾರ : – ಮುಂದಿನ ಸೋಮವಾರ ಪೋಲೀಸ್ , ನಗರಸಭೆ ಅಧಿಕಾರಿಗಳು ಹಾಗೂ ಕಾರು ಚಾಲಕರ ಸಂಘದ ಪದಾಧಿಕಾರಿಗಳ ಸಭೆ ಕರೆದು ನಗರದಲ್ಲಿ ಕಾರು ನಿಲ್ದಾಣ ಜಾಗದ ಸಮಸ್ಯೆಯನ್ನು ಬಗೆಹರಿಸುವುದಾಗಿ ಜಿಲ್ಲಾಧಿಕಾರಿ ಡಾ.ಆರ್.ಸೆಲ್ವಮಣಿ ಹೇಳಿದರು . ನಗರದ ಕಾರು ನಿಲ್ದಾಣದಲ್ಲಿ ಸೋಮವಾರ ಜಿಲ್ಲಾ ರೋಟರಿ ಸೆಂಟ್ರಲ್ ಹಾಗೂ ಸಿಎಂಆರ್ . ಫೌಂಡೇಶನ್ ವತಿಯಿಂದ ಖಾಸಗಿ ಕಾರು ಚಾಲಕರಿಗೆ ಹಾಗೂ ಮಾಲೀಕರಿಗೆ ಆಹಾರ ಕೀಟ್ಗಳನ್ನು ವಿತರಿಸಿ ಮಾತನಾಡಿದರು . ಕೊರೋನಾದಿಂದ ಇಡೀ ವಿಶ್ವವೇ […]
ವರದಿ : ಶಬ್ಬೀರ್ ಅಹಮ್ಮದ್ ಶ್ರೀನಿವಾಸಪುರ ಕೋಲಾರ:- ನಾನು ಓದುವ ಸಮಯದಲ್ಲಿ ಹಣವಿಲ್ಲದೇ ಶಿಕ್ಷಣ ಪಡೆಯಲಿಲ್ಲ, ಆದರೂ ನಾನು ಹುಟ್ಟಿ ಬೆಳೆದ ಕ್ಷೇತ್ರದ ವಿದ್ಯಾರ್ಥಿಗಳು ವಿದ್ಯೆಯಿಂದ ವಂಚಿತರಾಗಬಾರದು ಎಂಬ ಮನೋಭಾವನೆಯಿಂದ ವಿದ್ಯೆ ಕಲಿತು ಜಿಲ್ಲೆಯ ಕೀರ್ತಿ ದೇಶದಲ್ಲಿ ಪ್ರಚಲಿಸಬೇಕಾಗಿದ್ದು, ಮೊದಲ ಹಂತದಲ್ಲಿ ಶಿಕ್ಷಣಕ್ಕೆ ಆಧ್ಯತೆ ನೀಡುತ್ತಿದ್ದೇನೆ ಎಂದು ಸಮಾಜ ಸೇವಕ ಕೆ.ಜಿ.ಎಫ್ ಬಾಬು ತಿಳಿಸಿದರು. ನಗರದ ಜೂನಿಯರ್ ಕಾಲೇಜು ಮೈದಾನದಲ್ಲಿ ಸೋಮವಾರ ಕೋಲಾರ ವಿಧಾನಸಭಾ ಕ್ಷೇತ್ರದ 23 ಸಾವಿರ ವಿಧ್ಯಾರ್ಥಿಗಳಿಗೆ ಎರಡು ಹಂತದಲ್ಲಿ ಆರು ತಿಂಗಳಿಗೆ ಒಮ್ಮೆ […]
ವರದಿ: ಶಬ್ಬೀರ್ ಅಹಮ್ಮದ್, ಶ್ರೀನಿವಾಸಪುರ ಕೋಲಾರ : ಖೋಖೋ ಗ್ರಾಮೀಣ ಜನಪ್ರಿಯ ಕ್ರೀಡೆ, ರಾಜ್ಯದ ಎಲ್ಲಾ ಶಾಲಾ ಕಾಲೇಜುಗಳಲ್ಲಿ ಖೋಖೋ ಆಡುವ ವಿಧ್ಯಾರ್ಥಿಗಳು ಇದ್ದಾರೆ, ಯುವ ಜನತೆಯಲ್ಲಿ ಕ್ರಿಯಾಶೀಲತೆ ಹಾಗೂ ಉತ್ಸಾಹ ತುಂಬುವ ಕ್ರೀಡೆಯಾಗಿದೆ. ಈ ಕ್ರೀಡೆಯಲ್ಲಿ ಎಲ್ಲಾ ವರ್ಗದ ಯುವ ಜನರು ಭಾಗವಹಿಸುತ್ತಾರೆ ಏಕೆಂದರೆ ಇಲ್ಲಿ ದೈಹಿಕ ಆರೋಗ್ಯ ಮಾತ್ರವೇ ಬಂಡವಾಳ, ಆರ್ಥಿಕ ಹೊರೆ ಅಷ್ಟೇನೂ ಇರುವುದಿಲ್ಲ. ಹಾಗಾಗಿ ದೇಶದ ಎಲ್ಲಾ ಗ್ರಾಮೀಣ ಮತ್ತು ನಗರಗಳಲ್ಲಿ ಈ ಕ್ರೀಡೆ ಜನಪ್ರಿಯವಾಗಿದೆ. ಇದೀಗ ಕಳೆದ ಎರಡು ದಿನಗಳಿಂದ […]
ವರದಿ: ಶಬ್ಬೀರ್ ಅಹಮ್ಮದ್, ಶ್ರೀನಿವಾಸಪುರ ಶ್ರೀನಿವಾಸಪುರ: ತಾಲ್ಲೂಕಿನ ತಾಡಿಗೋಳ್ ಗ್ರಾಮದ ಸಮೀಪ ರಾಜ್ಯ ರಸ್ತೆ ಸಾರಿಗೆ ಬಸ್ನಲ್ಲಿ ಯುವಕರ ಗುಂಪೊಂದು, ಯುವತಿಯೊಬ್ಬಳನ್ನು ಚುಡಾಯಿಸಿದ ಎನ್ನಲಾದ ಯುವಕನೊಬ್ಬನ ಮೇಲೆ ಹಲ್ಲೆ ನಡೆಸಿರುವ ಘಟನೆ ನಡೆದಿದೆ.ತಾಲ್ಲೂಕಿನ ಗೌನಿಪಲ್ಲಿ ಗ್ರಾಮದಿಂದ ಶ್ರೀನಿವಾಸಪುರಕ್ಕೆ ಬರುತ್ತಿದ್ದ ರಾಜ್ಯ ರಸ್ತೆ ಸಾರಿಗೆ ಸಂಸ್ಥೆ ಬಸ್ನಲ್ಲಿ ಈ ಘಟನೆ ನಡೆದಿದೆ. ಹಲ್ಲೆಗೆ ಒಳಗಾದ ಯುಕನನ್ನು ಬಾಬು ಎಂದು ಗುರ್ತಿಸಲಾಗಿದೆ. ಬಾವು ಈ ಹಿಂದೆ ತಾಡಿಗೋಳ್ ಗ್ರಾಮಕ್ಕೆ ಸೇರಿದ ಯುವತಿಯೊಬ್ಬಳನ್ನು ಚುಡಾಯಿಸಿದ್ದ, ಹಾಗೆ ಮಾಡದಂತೆ ಎಚ್ಚರಿಕೆ ನೀಡಲಾಗಿತ್ತು. ಆದರೆ […]
ವರದಿ: ಶಬ್ಬೀರ್ ಅಹಮ್ಮದ್, ಶ್ರೀನಿವಾಸಪುರ ಶ್ರೀನಿವಾಸಪುರ: ದರಖಾಸ್ತುದಾರರಿಗೆ ನಿಯಮಾನುಸಾರ ಜಮೀನು ಮಂಜೂರು ಮಾಡಲಾಗುವುದು. ಎಂದು ಶಾಸಕ ಕೆ.ಆರ್.ರಮೇಶ್ ಕುಮಾರ್ ಹೇಳಿದರು.ಪಟ್ಟಣದ ತಾಲ್ಲೂಕು ಕಚೇರಿ ಸಭಾಂಗಣದಲ್ಲಿ ಕಂದಾಯ ಇಲಾಖೆ ವತಿಯಿಂದ ಶನಿವಾರ ಏರ್ಪಡಿಸಿದ್ದ ದರಖಾಸ್ತು ಕಮಿಟಿ ಸಭೆಯಲ್ಲಿ ಮಾತನಾಡಿ, ಮೊದಲಿಗೆ ನಿಯಮ 53 ರ ಅಡಿಯಲ್ಲಿ ಹಾಕಲಾಗಿರುವ ಅರ್ಜಿಗಳನ್ನು ಇತ್ಯರ್ಥಪಡಿಸಲಾಗುವುದು. ನಿಯಮ 57 ಅಡಿ ಸಲ್ಲಿಸಲಾಗಿರುವ ಅರ್ಜಿಗಳ ಇತ್ಯರ್ಥಕ್ಕೆ ಸರ್ಕಾರ ಇನ್ನೂ ಅನುಮೋದನೆ ನೀಡಿಲ್ಲ ಎಂದು ಹೇಳಿದರು.ಸಭೆಯಲ್ಲಿ ವಿವಿಧ ಇಲಾಖೆಗಳ ಪ್ರಗತಿ ಪರಿಶೀಲನೆ ಮಾಡಲಾಯಿತು. ಸಂಬಂಧಪಟ್ಟ ಇಲಾಖೆ ಅಧಿಕಾರಿಗಳು […]
ವರದಿ: ಶಬ್ಬೀರ್ ಅಹಮ್ಮದ್, ಶ್ರೀನಿವಾಸಪುರ ಕೋಲಾರ:- ಶ್ರೀಗೋಕುಲ ಮಿತ್ರ ಬಳಗದಿಂದ ಶನಿವಾರ ನಗರದ ಶ್ರೀನಲ್ಲೂರಮ್ಮ ಅನಾಥಾಶ್ರಮ ಮತ್ತು ಮುಸ್ಸಂಜೆ ಬಳಗದ ಎಲ್ಲಾ ವಾಸಿಗಳಿಗೆ ಹೊದಿಕೆಯನ್ನು ವಿತರಿಸಲಾಯಿತು.ಶ್ರೀಗೋಕುಲ ಮಿತ್ರಬಳಗದವತಿಯಿಂದ ಭಾರತ ಸೇವಾದಳ ಜಿಲ್ಲಾಧ್ಯಕ್ಷ, ಪತ್ರಕರ್ತರ ಸಹಕಾರ ಸಂಘದ ಅಧ್ಯಕ್ಷ ಕೆ.ಎಸ್.ಗಣೇಶ್ ಹುಟ್ಟುಹಬ್ಬದ ಅಂಗವಾಗಿ ಈ ಕಾರ್ಯಕ್ರಮವನ್ನು ಏರ್ಪಡಿಸಲಾಗಿತ್ತು.ಶ್ರೀನಲ್ಲೂರಮ್ಮ ಆಶ್ರಮದ ಮುಂಭಾಗ ಆಯೋಜಿಸಲಾಗಿದ್ದ ಕಾರ್ಯಕ್ರಮದಲ್ಲಿ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಕೆ.ಚಂದ್ರಾರೆಡ್ಡಿ ಮಾತನಾಡಿ, ಪತ್ರಕರ್ತರ ಸಂಘದ ಚಟುವಟಿಕೆಗಳಲ್ಲಿ ಸುದೀರ್ಘವಾಗಿ ಕಾರ್ಯನಿರ್ವಹಿಸುತ್ತಿರುವ ಕೆ.ಎಸ್.ಗಣೇಶ್ರ ಹುಟ್ಟುಹಬ್ಬವನ್ನು ಶ್ರೀಗೋಕುಲ ಮಿತ್ರಬಳಗವು ಪ್ರತಿ ವರ್ಷವೂ ಸೇವಾ ಕಾರ್ಯಕ್ರಮಗಳ […]
ವರದಿ: ಶಬ್ಬೀರ್ ಅಹಮ್ಮದ್, ಶ್ರೀನಿವಾಸಪುರ ಕೋಲಾರ:- ದೈಹಿಕ ಶಿಕ್ಷಕರ ಬಹುಕಾಲದ ಬೇಡಿಕೆಗಳನ್ನು ಶೀಘ್ರ ಈಡೇರಿಸುವ ಕುರಿತು ಎಲ್ಲಾ ಅಗತ್ಯ ಕ್ರಮಗಳನ್ನು ಕೈಗೊಳ್ಳುವುದಾಗಿ ರಾಜ್ಯ ಪ್ರಾಥಮಿಕ ಹಾಗೂ ಪ್ರೌಢಶಿಕ್ಷಣ ಸಚಿವ ಬಿ.ಸಿ.ನಾಗೇಶ್ ಭರವಸೆ ನೀಡಿದರು.ಕೋಲಾರ ಜಿಲ್ಲೆಯ ಪದಾಧಿಕಾರಿಗಳು ಸೇರಿದಂತೆ ರಾಜ್ಯ ದೈಹಿಕ ಶಿಕ್ಷಕರ ಸಂಘದಿಂದ ಬೆಂಗಳೂರಿನ ಶಾಸಕರ ಭವನದಲ್ಲಿ ಆಯೋಜಿಸಿದ್ದ ಸಂಘದ ಕಾರ್ಯಕಾರಿ ಸಭೆಗೆ ಚಾಲನೆ ನೀಡಿ, ಸಂಘ ನೀಡಿದ ಸನ್ವಾನ ಸ್ವೀಕರಿಸಿ ಅವರು ಮಾತನಾಡುತ್ತಿದ್ದರು.ಮಕ್ಕಳಲ್ಲಿ ಶಿಸ್ತು ಸಂಸ್ಕಾರ ಬೆಳೆಸುವ ಅತಿ ಪ್ರಮುಖ ಹೊಣೆ ಹೊತ್ತಿರುವ ದೈಹಿಕ ಶಿಕ್ಷಕರ […]
ವರದಿ: ಶಬ್ಬೀರ್ ಅಹಮ್ಮದ್, ಶ್ರೀನಿವಾಸಪುರ ಶ್ರೀನಿವಾಸಪುರ: 250 ಪ್ರಥಮಿಕ ಆರೋಗ್ಯ ಕೇಂದ್ರಗಳನ್ನು ಮೇಲ್ದರ್ಜೆಗೆ ದರ್ಜೆಗೆ ಏರಿಸಲಾಗುವುದು ಎಂದು ಆರೋಗ್ಯ ಸಚಿವ ಡಾ. ಕೆ.ಸುಧಾಕರ್ ಹೇಳಿದರು.ತಾಲ್ಲೂಕಿನ ಬೈರಗಾನಪಲ್ಲಿ ಗ್ರಾಮದಲ್ಲಿ ಬುಧವಾರ ಏರ್ಪಡಿಸಿದ್ದ ಸಮಾರಂಭದಲ್ಲಿ ನೂತನ ಪ್ರಾಥಮಿಕ ಆರೋಗ್ಯ ಕೇಂದ್ರದ ಕಟ್ಟಡ ಉದ್ಘಾಟಿಸಿ ಮಾತನಾಡಿದ ಅವರು, ಮೇಲ್ದರ್ಜೆಗೆ ಏರಿಸಲಾದ ಪ್ರಾಥಮಿಕ ಆರೋಗ್ಯ ಕೇಂದ್ರಗಳಲ್ಲಿ ಪ್ರಥಮಿ ಚಿಕಿತ್ಸೆ ಮಾತ್ರವಲ್ಲದೆ, ಅಗತ್ಯ ಬಿದ್ದಾಗ ಶಸ್ತ್ರ ಚಿಕಿತ್ಸೆ ನಡೆಸುವ ವ್ಯವಸ್ಥೆ ಕಲ್ಪಿಸಲಾಗುವುದು ಎಂದು ಹೇಳಿದರು.ಈ ಸಂದರ್ಭದಲ್ಲಿ, ಬರಲಿರುವ ವಿಧಾನ ಸಭಾ ಚುನಾವಣೆಯಲ್ಲಿ ಮಾಜಿ ಶಾಸಕ […]
ವರದಿ: ಶಬ್ಬೀರ್ ಅಹಮ್ಮದ್, ಶ್ರೀನಿವಾಸಪುರ ಕೋಲಾರ: ಜಿಲ್ಲೆಗೆ ಸರ್ಕಾರಿ ಮೆಡಿಕಲ್ ಕಾಲೇಜು ಮಂಜೂರು ಮಾಡಿ, ಸರಕಾರಿ ಆಸ್ಪತ್ರೆಗಳ ಅವ್ಯವಸ್ಥೆಗಳನ್ನು ಸರಿಪಡಿಸಿ, ಇಲಾಖೆಯಲ್ಲಿ ಖಾಲಿಯಿರುವ ಹುದ್ದೆಗಳನ್ನು ಭರ್ತಿ ಮಾಡಿ, ಜಿಲ್ಲೆಯಲ್ಲಿನ ನಕಲಿ ಕ್ಲಿನಿಕ್ಗಳಿಗೆ ಕಡಿವಾಣ ಹಾಕಲು ವಿಶೇಷ ತಂಡ ರಚನೆ ಮಾಡಬೇಕೆಂದು ಒತ್ತಾಯಿಸಿ ರೈತಸಂಘದಿಂದ ಆರೋಗ್ಯ ಸಚಿವರಾದ ಡಾ.ಕೆ.ಸುಧಾಕರ್ ಅವರಿಗೆ ಮನವಿ ಸಲ್ಲಿಸಲಾಯಿತು.ಮನವಿ ಸಲ್ಲಿಸಿ ಮಾತನಾಡಿದ ಮಹಿಳಾ ಘಟಕದ ಜಿಲ್ಲಾಧ್ಯಕ್ಷೆ ಎ.ನಳಿನಿಗೌಡ, ಬಯಲುಸೀಮೆಯ ಜಿಲ್ಲೆಯಲ್ಲಿ ಖಾಸಗಿ ಮೆಡಿಕಲ್ ಕಾಲೇಜು, ಇದೆ. ಆದರೆ ಸರ್ಕಾರಿ ಮೆಡಿಕಲ್ ಕಾಲೇಜು ಇಲ್ಲ. ಅನೇಕ […]

