ವರದಿ:ಶಬ್ಬೀರ್ಅಹಮ್ಮದ್,ಶ್ರೀನಿವಾಸಪುರ ಕೋಲಾರ:- ಭಾರತದಲ್ಲಿ ಇತ್ತೀಚೆಗೆ ಯುವಕರಲ್ಲಿ ಹೆಚ್ಚುತ್ತಿರುವ ಹೃದಯಾಘಾತದಿಂದ ಪಾರಾಗಲು ಜೀವನ ಶೈಲಿ ಬದಲಿಸಿಕೊಳ್ಳಬೇಕೆಂದು ಮಣಿಪಾಲ್ ಆಸ್ಪತ್ರೆಯ ಇಂಟರ್ವೆನ್ಯನಲ್ ಕಾರ್ಡಿಯಾಲಜಿ ಡಾ.ಪ್ರದೀಪ್ ಹಾರನಹಳ್ಳಿ ಸಲಹೆ ನೀಡಿದರು.ಪತ್ರಕರ್ತರ ಭವನದಲ್ಲಿ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘ ಹಾಗೂ ಮಣಿಪಾಲ್ ಆಸ್ಪತ್ರೆ ಸಹಯೋಗದಲ್ಲಿ ಸಂಘದ ಅಧ್ಯಕ್ಷ ವಿ.ಮುನಿರಾಜು ಅಧ್ಯಕ್ಷತೆಯಲ್ಲಿ ನಡೆದ ಯುವ ಜನರಲ್ಲಿ ಹೃದಯಾಘಾತ ಹೆಚ್ಚಾಗುವುದರ ಹಿಂದೆ ಕಾರಣ ಏನಿದೆ ಎಂಬ ವಿಷಯದ ಬಗ್ಗೆ ನೇರ ಸಂವಾದ ಕಾರ್ಯಕ್ರಮದಲ್ಲಿ ಅವರು ಮಾತನಾಡುತ್ತಿದ್ದರು.ಬದಲಾದ ಜೀವನ ಶೈಲಿಯ ಜೊತೆಗೆ ತಾಂತ್ರಿಕತೆ ಹೆಚ್ಚಾದಂತೆ ದೈಹಿಕ ಶ್ರಮ […]
ವರದಿ:ಶಬ್ಬೀರ್ಅಹಮ್ಮದ್,ಶ್ರೀನಿವಾಸಪುರ ಶ್ರೀನಿವಾಸಪುರ: ತಾಡಿಗೋಳ್ ಕ್ರಾಸ್ನಲ್ಲಿ ವಿದ್ಯಾರ್ಥಿನಿಯರ ಮೇಲೆ ನಡೆದಿರುವ ದೌರ್ಜನ್ಯವನ್ನು ಖಂಡಿಸಿ ಇದೆ ತಿಂಗಳು 20 ರಂದು ತಾಡಿಗೋಳ್ ಗ್ರಾಮದಿಂದ ಕಾಲ್ನಡಿಗೆ ಜಾಥಾ ಹಾಗೂ ಬಹಿರಂಗ ಸಭೆಯನ್ನು ತಾಲ್ಲೂಕು ಕಛೇರಿಯ ಮುಂದೆ ಹಮ್ಮಿಕೊಂಡಿದ್ದೇವೆಂದು ದಲಿತ ಸಂಘರ್ಷ ಸಮಿತಿಯ ರಾಜ್ಯ ಮುಖಂಡರಾದ ಎನ್. ಮುನಿಸ್ವಾಮಿ ತಿಳಿಸಿದರು.ಪಟ್ಟಣದ ಪ್ರವಾಸ ಮಂದಿರದಲ್ಲಿ ಸುದ್ದಿಗೋಷ್ಠಿಯನ್ನು ಏರ್ಪಡಿಸಿ ಮಾತನಾಡಿದ ಮುನಿಸ್ವಾಮಿ ಇದೇ ತಿಂಗಳು 20 ರಂದು ಸೋಮವಾರ 9 ಗಂಟೆಗೆ ತಾಡಿಗೋಳ್ ಗ್ರಾಮದಿಂದ ಕಾಲ್ನಡಿಗೆ ಜಾಥಾವನ್ನು ಎಲ್ಲಾ ದಲಿತ ಸಂಘಟನೆಗಳ ಒಕ್ಕೂಟದಿಂದ ಈ ಕಾರ್ಯಕ್ರಮವನ್ನು […]
ವರದಿ:ಶಬ್ಬೀರ್ಅಹಮ್ಮದ್,ಶ್ರೀನಿವಾಸಪುರ ಶ್ರೀನಿವಾಸಪುರಒಬ್ಬ ವಿದ್ಯಾರ್ಥಿಯಲ್ಲಿ ಯಾವ ಪ್ರತಿಭೆ ಇದೆ ಎಂದು ಗಮನಿಸಿ ಅವರಿಗೆ ಸೂಕ್ತ ರೀತಿಯಲ್ಲಿ ತರಬೇತಿ ನೀಡಿ ರಾಜ್ಯ ರಾಷ್ಟಮಟ್ಟದಲ್ಲಿ ಗುರುತಿಸುವಂತೆ ಮಾಡುವಲ್ಲಿ ದೈಹಿಕ ಶಿಕ್ಷಕರ ಪಾತ್ರ ಮಹತ್ವವಳ್ಳದ್ದು ಎಂದು ದೈಹಿಕ ಶಿಕ್ಷಕರ ಸಂಘದ ತಾಲ್ಲೂಕು ಅಧ್ಯಕ್ಷ ರಮೇಶ್ರೆಡ್ಡಿ ತಿಳಿಸಿದರು. ತಾಲ್ಲೂಕಿನ ರೋಣೂರು ಸರ್ಕಾರಿ ಕನ್ನಡ ಮಾದರಿ ಹಿರಿಯ ಪ್ರಾಥಮಿಕ ಶಾಲೆಯ ಸಭಾಂಗಣದಲ್ಲಿ ದೈಹಿಕ ಶಿಕ್ಷಣ ಶಿಕ್ಷಕರ ಒಂದು ದಿನದ ಕಾರ್ಯಗಾರದಲ್ಲಿ ಭಾಗವಹಿಸಿ ಮಾತನಾಡಿದ ರಮೇಶ್ರೆಡ್ಡಿ ವಿದ್ಯಾರ್ಥಿಗಳಿಗೆ ಶಿಸ್ತು, sಸಮಯ ಪ್ರಜ್ಞೆ, ಸೇವಾ ಮನೋಭಾವ ಮತ್ತು ನಾಯಕತ್ವ […]
ವರದಿ:ಶಬ್ಬೀರ್ಅಹಮ್ಮದ್,ಶ್ರೀನಿವಾಸಪುರ ಶ್ರೀನಿವಾಸಪುರ, ಕೋವಿಡ್ ಲಸಿಕೆಯನ್ನು 18 ವರ್ಷ ಮೇಲ್ಪಟ್ಟ ಎಲ್ಲರೂ ಪಡೆಯಬಹುದು ಯಾವುದೇ ರೀತಿಯ ತೊಂದರೆಯಾಗುವುದಿಲ್ಲ. ಕೋವಿಡ್ ಲಸಿಕೆಯಿಂದ ತೊಂದರೆ ಉಂಟಾಗುತ್ತದೆ ಎಂಬ ವದಂತಿಗಳಿಗೆ ಕಿವಿಕೊಡಬಾರದು ಎಂದು ಕೃಷಿ ಇಲಾಖೆಯ ಸಹಾಯಕ ನಿರ್ದೇಶಕ ಹಾಗೂ ನೋಡಲ್ ಅಧಿಕಾರಿ ಧನಂಜಯ್ ತಿಳಿಸಿದರು.ತಾಲ್ಲೂಕಿನ ರೋಣೂರು ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಲಸಿಕೆಯ ಬಗ್ಗೆ ಮನೆ ಮನೆಗೆ ತೆರಳಿ ಕೋವಿಡ್ ಲಸಿಕೆಯ ಬಗ್ಗೆ ತಿಳಿಸಿ ಬೃಹತ್ ಪ್ರಮಾಣದ ಲಸಿಕೆ ನೀಡುವ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದ ಧನಂಜಯ್ ಕೋವಿಡ್ ಸೋಂಕು ಯಾವಾಗ, ಹೇಗೆ, […]
ವರದಿ:ಶಬ್ಬೀರ್ಅಹಮ್ಮದ್,ಶ್ರೀನಿವಾಸಪುರ ಶ್ರೀನಿವಾಸಪುರದ ಹಳೆ ಪೇಟೆಯ ಉಗ್ರಹರಸಿಂಹಸ್ವಾಮಿ ದೇವಾಲಯದಲ್ಲಿ ಮಹಾದ್ವಾರ ಉದ್ಘಾಟನೆ ಹಾಗೂ ಕುಂಭಾಭಿಷೇಕದ ಪ್ರಯುಕ್ತ ದೇವರ ವಿಗ್ರಹಕ್ಕೆ ವಿಶೇಷ ಅಲಂಕಾರ ಮಾಡಲಾಗಿತ್ತು.
ವರದಿ:ಶಬ್ಬೀರ್ಅಹಮ್ಮದ್,ಶ್ರೀನಿವಾಸಪುರ ಶ್ರೀನಿವಾಸಪುರದಲ್ಲಿ ಗುರುವಾರ ಜಿಲ್ಲಾ ಪ್ರಗತಿಪರ ಮಹಿಳಾ ಸಂಘಟನೆಗಳ ಒಕ್ಕೂಟದ ಸದಸ್ಯರು, ಈಚೆಗೆ ತಾಡಿಗೋಳ್ ಸಮೀಪ ವಿದ್ಯಾರ್ಥಿನಿಯರ ಮೇಲೆ ಹಲ್ಲೆ ನಡೆಸಿದ ದುಷ್ಕರ್ಮಿಗಳ ವಿರುದ್ಧ ಕಠಿಣ ಕ್ರಮ ಜರುಗಿಸುವಂತೆ ಆಗ್ರಹಿಸಿ ತಹಶೀಲ್ದಾರ್ ಎಸ್.ಎಂ.ಶ್ರೀನಿವಾಸ್ ಅವರಿಗೆ ಮನವಿ ಪತ್ರ ಸಲ್ಲಿಸಿದರು. ಮುಖಂಡರಾದ ನಳಿನಿ ಗೌಡ, ಶಾಂತಮ್ಮ ಶಿಲ್ಪ, ನೇತ್ರ, ಅರುಣ, ರತ್ನ, ರುಚಿತ, ಶಾಮಲ, ಲಕ್ಷ್ಮಿ, ಶಶಿ ರಾಜು, ಶ್ರೀನಾಥ್ ಇದ್ದರು.
ವರದಿ:ಶಬ್ಬೀರ್ಅಹಮ್ಮದ್,ಶ್ರೀನಿವಾಸಪುರ ಕೋಲಾರ : ದೇಶ ಕೋವಿಡ್ ಸಂಕಷ್ಟಕ್ಕೆ ಸಿಲುಕಿದಾಗ ಬಿ.ಜೆ.ಪಿ ಪಕ್ಷ ಜನರ ಸಂಕಷ್ಟಕ್ಕೆ ನೆರವಾಗಿ ಸಮರ್ಥವಾಗಿ ಸ್ಪಂದಿಸಿದೆಯೆಂದು ಬಿ.ಜೆ.ಪಿ. ರಾಜ್ಯ ಕಾರ್ಯದರ್ಶಿ ಕೇಶವ್ ಪ್ರಸಾದ್ ಹೇಳಿದರು.ನಗರದ ಡೂಂ ಲೈಟ್ ಸರ್ಕಲ್ ಬಳಿ ಕುಡಾ ಅಧ್ಯಕ್ಷ ಓಂ ಶಕ್ತಿ ಚಲಪತಿ ಅವರ ಕಛೇರಿಯ ಬಳಿ ಪ್ರಧಾನಿ ನರೇಂದ್ರ ಮೋದಿ ಅವರ ಹುಟ್ಟುಹಬ್ಬದ ಪ್ರಯುಕ್ತ ಭಾರತೀಯ ಜನತಾ ಪಾರ್ಟಿ ವತಿಯಿಂದ ಆಟೋ ಚಾಲಕರಿಗೆ ಆಹಾರ ಕಿಟ್ಗಳ ವಿತರಣೆ ಹಾಗೂ ಸಾರ್ವಜನಿಕರಿಗೆ ಕೊರೊನಾ ಲಸಿಕಾ ಅಭಿಯಾನಕ್ಕೆ ಅವರು ಚಾಲನೆ ನೀಡಿ […]
ವರದಿ:ಶಬ್ಬೀರ್ಅಹಮ್ಮದ್,ಶ್ರೀನಿವಾಸಪುರ “ಅಂತರರಾಷ್ಟ್ರೀಯ ಸಿರಿಧಾನ್ಯಗಳ ವರ್ಷ 2023” ಹಾಗೂ “ಪೋಷಣ ಮತ್ತು ವೃಕ್ಷಾರೋಹಣ ಅಭಿಯಾನ”ಉತ್ತಮ ಆರೋಗ್ಯಕ್ಕಾಗಿ ಸಿರಿಧಾನ್ಯಗಳ ಬಳಕೆಯ ಪ್ರಾಮುಖ್ಯತೆಕೋಲಾರ ; ಐಸಿಎಆರ್-ಕೃಷಿ ವಿಜ್ಞಾನ ಕೇಂದ್ರ, ಕೋಲಾರ, ಆತ್ಮ ಯೋಜನೆ, ಕೃಷಿ ಇಲಾಖೆ, ಕೋಲಾರ ಹಾಗೂ ಇಂಡಿಯನ್ ಫಾರ್ಮರ್ಸ್ ಫರ್ಟಿಲೈಜರ್ಸ್ ಕೋ-ಆಪರೇಟಿವ್ ಸಂಸ್ಥೆ (Iಈಈಅಔ) ಇವರ ಸಂಯುಕ್ತಾಶ್ರಯದಲ್ಲಿ ಭಾರತದ ಅಮೃತ ಮಹೋತ್ಸವ 75ನೇ ಸ್ವಾತಂತ್ರ್ಯೋತ್ಸವದ ಸ್ಮರಣಾರ್ಥ ರೈತರಿಗಾಗಿ “ಅಂತರರಾಷ್ಟ್ರೀಯ ಸಿರಿಧಾನ್ಯಗಳ ವರ್ಷ 2023” ಹಾಗೂ “ಪೋಷಣ ಮತ್ತು ವೃಕ್ಷಾರೋಹಣ ಅಭಿಯಾನ” ವನ್ನು ದಿನಾಂಕ 17.09.2021 ರಂದು ಐಸಿಎಆರ್-ಕೃಷಿ ವಿಜ್ಞಾನ […]
ವರದಿ:ಶಬ್ಬೀರ್ಅಹಮ್ಮದ್,ಶ್ರೀನಿವಾಸಪುರ ಕೋಲಾರ: ಮಕ್ಕಳಲ್ಲಿ ಹೆಚ್ಚಾಗುತ್ತಿರುವ ವೈರಲ್ ಫೀವರ್ ತಡೆಗೆ ವಿಶೇಷ ವೈದ್ಯರ ತಂಡ ರಚಿಸುವ ಜೊತೆಗೆ ಜಿಲ್ಲೆಯಲ್ಲಿನ ನಕಲಿ ಕ್ಲಿನಿಕ್ಗಳಿಗೆ ಕಡಿವಾಣ ಹಾಕುವಂತೆ ಆಗ್ರಹಿಸಿ ರೈತಸಂಘದಿಂದ ಆರೋಗ್ಯ ಇಲಾಖೆಯ ವೈದ್ಯಾಧಿಕಾರಿ ಡಾ.ಚಂದನ್ಗೆ ಮನವಿ ಸಲ್ಲಿಸಲಾಯಿತು.ಮನವಿ ಸಲ್ಲಿಸಿ ಮಾತನಾಡಿದ ರೈತಸಂಘದ ರಾಜ್ಯ ಉಪಾಧ್ಯಕ್ಷ ಕೆ.ನಾರಾಯಣಗೌಡ, ಕೊರೊನಾ 1ನೇ, 2ನೇ ಅಲೆಗಳಿಂದ ತತ್ತರಿಸಿದ್ದ ಜನರು ಇದೀಗ ಕೊಂಚ ಮಟ್ಟಿಗೆ ಚೇತರಿಕೆ ಕಾಣುತ್ತಿರುವ ಸಂದರ್ಭದಲ್ಲಿ ಈಗಾಗಲೇ ತಜ್ಞರು ನೀಡಿರುವ ಮೂರನೇ ಅಲೆಗೆ ಸಂಬಂಧಿಸಿದ ವರದಿಯು ಎಚ್ಚರಗೊಳಿಸುತ್ತಿದೆ.ಮೂರನೇ ಅಲೆಯು ಮಕ್ಕಳ ಮೇಲೆ ಹೆಚ್ಚಿನ […]

