ವರದಿ:ಶಬ್ಬೀರ್ಅಹಮ್ಮದ್,ಶ್ರೀನಿವಾಸಪುರ ಕೋಲಾರ: ಜನರ ಕಷ್ಟಕ್ಕೆ ಸ್ಪಂದನೆ ನೀಡುವ ಮೂಲಕ ಗರ್ಭಿಣಿ ಮತ್ತು ಬಾಣಂತಿಯರಿಗೆ ತವರು ಮನೆ ಉಡುಗೊರೆ ನೀಡುತ್ತಿರುವ ಸಮಾಜ ಸೇವಕ ಚಂದನ್ಗೌಡರಂತಹ ಮಕ್ಕಳನ್ನು ಮಹಿಳೆಯರು ಜನ್ಮ ನೀಡಬೇಕೆಂದು ಕೋಡಿಮಠದ ಶ್ರೀಗಳು ಹೇಳಿದರು.ಚಂದನವನ ಚಾರಿಟೆಬಲ್ ಟ್ರಸ್ಟ್ ಅಧ್ಯಕ್ಷ ಹಾಗೂ ಸಮಾಜ ಸೇವಕ ಚಂದನ್ ಗೌಡರು ತಾಲೂಕಿನ ವೇಮಗಲ್ನಲ್ಲಿ ಆಯೋಜಿಸಿದ್ದ,ಗರ್ಭಿಣಿ ಮತ್ತು ಬಾಣಂತಿಯರಿಗೆ ಮಡಿಲು ತುಂಬುವ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿ, ಹೆಣ್ಣು ಮಕ್ಕಳನ್ನು ಗೌರವಿಸುವ ಕಡೆ ದೇವರು ನೆಲೆಸುತ್ತಾರೆ. ಹೀಗಾಗಿ ಮಹಿಳೆಯರಿಗೆ ತವರು ಮನೆ ಉಡುಗೊರೆ ನೀಡುತ್ತಿರುವ ಚಂದನ್ಗೌಡರ […]
ವರದಿ:ಶಬ್ಬೀರ್ಅಹಮ್ಮದ್,ಶ್ರೀನಿವಾಸಪುರ ಶ್ರೀನಿವಾಸಪುರ: ಎಸ್ಎಫ್ಐ, ಜನವಾದಿ ಮಹಿಳಾ ಸಂಘಟನೆ ಹಾಗೂ ದಲಿತ ಹಕ್ಕುಗಳ ಸಮಿತಿ ಸದಸ್ಯರು, ಈಚೆಗೆ ತಾಲ್ಲೂಕಿನ ತಾಡಿಗೋಳ್ ಗ್ರಾಮದ ಸಮೀಪ ವಿದ್ಯಾರ್ಥಿನಿಯರು ಹಾಗೂ ಅವರ ಪೋಷಕರ ಮೇಲೆ ಕಿಡಿಗೇಡಿಗಳು ನಡೆಸಿರುವ ಹಲ್ಲೆಯನ್ನು ಖಂಡಿಸಿ ಮೆರವಣಿಗೆ ನಡೆಸಿದರು.ಘಟನೆಯನ್ನು ಖಂಡಿಸಿ ತಾಲ್ಲೂಕು ಕಚೇರಿ ಮುಂದೆ ಪ್ರತಿಭಟನೆ ನಡೆಸಲಾಯಿತು. ಈ ಸಂದರ್ಭದಲ್ಲಿ ಕರ್ನಾಟಕ ಪ್ರಾಂತ ರೈತ ಸಂಘದ ನಿಲ್ಲಾ ಉಪಾಧ್ಯಕ್ಷ ಪಾತಕೋಟ ನವೀನ್ ಕುಮಾರ್ ಮಾತನಾಡಿ, ವಿದ್ಯಾರ್ಥಿನಿಯರ ಮೇಲೆ ಪುಂಡರಿಂದ ನಡೆದಿರುವ ಹಲ್ಲೆ ಮಾನವೀಯ ಕೃತ್ಯ. ನಾಗರಿಕ ಸಮಾಜ ಈ […]
ವರದಿ:ಶಬ್ಬೀರ್ಅಹಮ್ಮದ್,ಶ್ರೀನಿವಾಸಪುರ ಕೋಲಾರ:- ವ್ಯಾಜ್ಯವಿಲ್ಲದೆ ರಾಜಿ ಸಂಧಾನದ ಮೂಲಕ ವ್ಯಾಜ್ಯ ಇತ್ಯರ್ಥಗೊಳಿಸಿ ನ್ಯಾಯ ದೊರಕಿಸಿ ಕೊಡಲು ಸೆ.30 ರಂದು ಜಿಲ್ಲಾ ನ್ಯಾಯಾಲಯದ ಅವರಣದಲ್ಲಿ ಮೆಗಾ ಲೋಕ್ ಅದಾಲತ್ ಕ್ರಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ ಎಂದು ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರಾದ ಕೆ.ಆರ್.ನಾಗರಾಜ್ ತಿಳಿಸಿದರು.ವಕೀಲರ ಸಂಘದ ಸಭಾಂಗಣದಲ್ಲಿ ಸೋಮವಾರ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ವಕೀಲರ ಸಂಘದ ಸಂಯುಕ್ತ ಅಶ್ರಯದಲ್ಲಿ ಸೆ.30ರ ಮೆಘಾ ಅದಾಲತ್ನ ಪೂರ್ವಭಾವಿಯಾಗಿ ನಡೆದ ಮನವರಿಕಾ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡುತ್ತಿದ್ದರು.ಸರ್ವರಿಗೂ ನ್ಯಾಯ ಎಂಬುದು ರಾಷ್ರೀಯ ಕಾನೂನು ಸೇವೆಗಳ […]
ವರದಿ:ಶಬ್ಬೀರ್ಅಹಮ್ಮದ್,ಶ್ರೀನಿವಾಸಪುರ ಶ್ರೀನಿವಾಸಪುರ ; ತಾಲ್ಲೂಕಿನ ಕಲ್ಲೂರು ಗ್ರಾಮದ ಸಮೀಪ ರೂ.15 ಕೋಟಿ ವೆಚ್ಚದಲ್ಲಿ ನೂತನ ನ್ಯಾಯಾಲಯ ಕಟ್ಟಡ ನಿರ್ಮಿಸಲಾಗುವುದು ಎಂದು ಹೈಕೋರ್ಟ್ ನ್ಯಾಯಾಧೀಶ ಬಿ.ವೀರಪ್ಪರೆಡ್ಡಿ ಹೇಳಿದರು.ಶನಿವಾರ ಪಟ್ಟಣದ ಹೊರವಲಯದ ಕಲ್ಲೂರು ಗ್ರಾಮದ ಸಮೀಪ ನಿರ್ಮಿಸಲಾಗುವ ನೂತನ ನ್ಯಾಯಾಲಯ ಕಟ್ಟಡದ ಸ್ಥಳ ಪರಿಶೀಲನೆ ನಡೆಸಿ ಮಾತನಾಡಿದ ಅವರು, ಕಟ್ಟಡ ನಿರ್ಮಾಣಕ್ಕೆ ರೂ.15 ಕೋಟಿ ಮಂಜೂರಾಗಿದೆ. ಸಧ್ಯದಲ್ಲಿಯೇ ಕಟ್ಟಡ ನಿರ್ಮಾಣ ಕಾಮಗಾರಿ ಪ್ರಾರಂಭಿಸಲಾಗುವುದು ಎಂದು ಹೇಳಿದರು.ನ್ಯಾಯಾಲಯದಲ್ಲಿರು ಹಳೆ ಪ್ರಕರಣಗಳನ್ನು ಇತ್ಯರ್ಥಪಡಿಸಲು ವಕೀಲರು ಸಹಕರಿಸಬೇಕು. ಸಾರ್ವಜನಿಕರಲ್ಲಿ ನ್ಯಾಯಾಲಯದ ಬಗ್ಗೆ ಗೌರವ ಭಾವನೆಯಿದೆ. […]
ವರದಿ ಶಬ್ಬೀರ್ ಅಹಮ್ಮದ್ ಶ್ರೀನಿವಾಸಪುರ ಶ್ರೀನಿವಾಸಪುರ : ತಾಲ್ಲೂಕಿನ ತಾಡಿಗೋಲ್ ಕ್ಲಾಸ್ನಲ್ಲಿ ಬಸ್ಸಿನಲ್ಲಿ ಪ್ರಯಾಣಿಸುತ್ತಿದ್ದ ವಿದ್ಯಾರ್ಥಿನಿಯರನ್ನು ಥಳಿಸಿರುವ ಪುಂಡ ಪೋಕರಿಗಳ ವಿರುದ್ಧ ಪೊಲೀಡರು ಕಠಿಣ ಕ್ರಮ ಕೈಗೊಳ್ಳಬೇಕು ಎಂದು ಶಾಸಕ ಕೆ.ಆರ್.ರಮೇಶ್ ಕುಮಾರ್ ಆಗ್ರಹಪಡಿಸಿದರು . ಪಟ್ಟಣದ ಸರ್ಕಾರಿ ಆಸ್ಪತ್ರೆಗೆ ಗುರುವಾರ ಭೇಟಿ ನೀಡಿ ಈಚೆಗೆ ತಾಲ್ಲೂಕಿನ ತಾಡಿಗೋಳ್ ಗ್ರಾಮದ ಸಮೀಪ ನಡೆದ ಘರ್ಷಣೆಯಲ್ಲಿ ಹಲ್ಲೆಗೊಳಗಾಗಿ ಚಿಕಿತ್ಸೆ ಪಡೆಯುತ್ತಿರುವ ವಿದ್ಯಾರ್ಥಿನಿಯರು ಹಾಗೂ ಪೋಷಕರನ್ನು ಭೇಟಿಯಾಗಿ ಸಾಂತ್ವನ ಹೇಳಿ ಮಾತನಾಡಿದರು . ಈ ಘಟನೆಯಲ್ಲಿ ಹಲ್ಲೆಗೆ ಒಳಗಾಗಿರುವ ವಿದ್ಯಾರ್ಥಿನಿಯರನ್ನು […]
ವರದಿ ಶಬ್ಬೀರ್ ಅಹಮ್ಮದ್ ಶ್ರೀನಿವಾಸಪುರ ಕೋಲಾರ :- ಮುಂದಿನ ಪೀಳಿಗೆಯು ಆರೋಗ್ಯಕರವಾಗಿರಬೇಕಾದರೆ ಅಪೌಷ್ಟಿಕತೆಯ ಬಗ್ಗೆ ಗರ್ಭಿಣಿಯರಿಗೆ ಹಾಗೂ ಬಾಣಂತಿಯರಿಗೆ ಅರಿವು ಮೂಡಿಸಿ , ಅಪೌಷ್ಟಿಕತೆಯನ್ನು ನಿರ್ಮೂಲನೆ ಮಾಡಿ ಆರೋಗ್ಯಕರ ತಾಯಿ ಮಗುವಿನ ಸಮಾಜ ನಿರ್ಮಿಸಲು ಎಲ್ಲರೂ ಸಹಕರಿಸಬೇಕು ಎಂದು ಜಿಲ್ಲಾಧಿಕಾರಿಗಳಾದ ಡಾ || ಆರ್ . ಸೆಲ್ವಮಣಿ ಅವರು ತಿಳಿಸಿದರು . ಇಂದು ಜಿಲ್ಲಾಧಿಕಾರಿಗಳ ಕಚೇರಿಯ ನ್ಯಾಯಾಂಗ ಸಭಾಂಗಣದಲ್ಲಿ ಜಿಲ್ಲಾಡಳಿತ , ಜಿಲ್ಲಾಪಂಚಾಯತ್ , ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಕೋಲಾರ , ಸ್ಪಿರುಲಿನ್ ಫೌಂಡೇಶನ್ […]
ವರದಿ:ಶಬ್ಬೀರ್ಅಹಮ್ಮದ್,ಶ್ರೀನಿವಾಸಪುರ ಕೋಲಾರ ಸೆಪ್ಟೆಂಬರ್ 9 : ಶ್ರೀನಿವಾಸಪುರ ತಾಲ್ಲೂಕಿನ ತಾಡಿಗೋಳ್ ಗ್ರಾಮದ ಹೆಣ್ಣು ಮಗಳ ಮೇಲೆ ಹಲ್ಲೆ ಮಾಡಿರುವವರ ಮೇಲೆ ಕ್ರಿಮಿನಲ್ ಕೇಸು ದಾಖಲಿಸಿ, ಅವರನ್ನು ಗಡಿ ಪಾರು ಮಾಡಿ, ದಲಿತ ಹೆಣ್ಣುಮಕ್ಕಳಿಗೆ ಸೂಕ್ತ ಪೊಲೀಸ್ ಬಂದೋಬಸ್ತ್ ನೀಡುವಂತೆ ದಲಿತ ಸಂಘರ್ಷ ಸಮಿತಿಯ-ಕರ್ನಾಟಕ ಕೋಲಾರ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳಿಗೆ ಮನವಿ ನೀಡಿ ಒತ್ತಾಯಿಸಿದರು.ಸೆಪ್ಟೆಂಬರ್ 9ರಂದು ಬೆಳಿಗ್ಗೆ 8:30ಕ್ಕೆ ಚಿಂತಾಮಣಿ ಕಾಲೇಜಿಗೆ ಬಸ್ಸಿನಲ್ಲಿ ಹೊರಟಿದ್ದ ಹೆಣ್ಣು ಮಕ್ಕಳನ್ನು 50 ಮಂದಿ ಸವರ್ಣೀಯರ ಯುವರ ಕುಂಪು ಲೈಂಗಿಕ ಕಿರುಕುಳ ನೀಡಿ, […]
ವರದಿ: ಶಬ್ಬೀರ್ ಅಹಮ್ಮದ್, ಶ್ರೀನಿವಾಸಪುರ ಕೋಲಾರ:- ಶಿಕ್ಷಣ ವಂಚಿತ ಮಕ್ಕಳನ್ನು ಶಾಲೆಗೆ ಸೇರಿಸಿ ವಿದ್ಯಾಭ್ಯಾಸ ಕೊಡಿಸುವುದು ಪ್ರತಿಯೊಬ್ಬ ನಾಗರೀಕರ ಸಾಮಾಜಿಕ ಜವಾಬ್ದಾರಿಯಾಗಬೇಕೆಂದು ಕೋಲಾರ ರೋಟರಿ ಸೆಂಟ್ರಲ್ ಅಧ್ಯಕ್ಷ ಸಿ.ಎಂ.ಆರ್.ಶ್ರೀನಾಥ್ ಹೇಳಿದರು.ನಗರದ ಹೊರವಲಯದ ಕೊಂಡರಾಜನಹಳ್ಳಿ ಗ್ರಾಮೀಣ ಗ್ರಂಥಾಲಯದಲ್ಲಿ ಭಾರತ ಸೇವಾದಳ ಜಿಲ್ಲಾ ಮತ್ತು ತಾಲೂಕು ಸಮಿತಿಗಳು ಹಾಗೂ ಕೋಲಾರ ರೋಟರಿ ಸೆಂಟ್ರಲ್ವತಿಯಿಂದ ಆಯೋಜಿಸಲಾಗಿದ್ದ ವಿಶ್ವ ಸಾಕ್ಷರತಾ ದಿನಾಚರಣೆ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡುತ್ತಿದ್ದರು.ವಯೋಮಾನ ಮೀರಿ ಕಲಿಕೆಯ ಆಸಕ್ತಿ ಇರುವರೆಲ್ಲರಿಗೂ ಕಲಿಯುವ ಅವಕಾಶ ಕಲ್ಪಿಸಿದಾಗ ದೇಶ ಸಂಪೂರ್ಣ ಸಾಕ್ಷರತೆ ಹೊಂದಲು […]
ವರದಿ: ಶಬ್ಬೀರ್ ಅಹಮ್ಮದ್, ಶ್ರೀನಿವಾಸಪುರ ಕೋಲಾರ,ಸೆ.7: ನಗರದ ಸ್ವಚ್ಛತೆಗಾಗಿ ನಿರಂತರವಾಗಿ ಶ್ರಮಿಸುವ ಪೌರ ಕಾರ್ಮಿಕರಿಗೆ ಆರೋಗ್ಯ ತಪಾಸಣೆ ಶಿಬಿರಗಳ ಆಯೋಜನೆ ನಮ್ಮೆಲ್ಲರ ಜವಾಬ್ದಾರಿಯಾಗಬೇಕು ಎಂದು ನಗರಸಭೆ ಉಪಾಧ್ಯಕ್ಷ ಎನ್.ಎಸ್. ಪ್ರವೀಣ್ಗೌಡ ಅವರು ಹೇಳಿದರು.ನಗರದ ಅಂತರಗಂಗೆ ರಸ್ತೆಯ ಆರ್ ಎಲ್ ಜಾಲಪ್ಪ ಆಸ್ಪತ್ರೆ ಆವರಣದಲ್ಲಿ ಕೋಲಾರ ನಗರಸಭೆ ವತಿಯಿಂದ ಹಮ್ಮಿಕೊಳ್ಳಲಾಗಿದ್ದ ಪೌರ ಕಾರ್ಮಿಕರಿಗೆ ಆರೋಗ್ಯ ತಪಾಸಣೆ ಶಿಬಿರ ಕಾರ್ಯಕ್ರಮದಲ್ಲಿ ಮಾತನಾಡಿ, ಪೌರ ಕಾರ್ಮಿಕರರು ಆರೋಗ್ಯವಾಗಿದ್ದಾಗ ಮಾತ್ರ ನಗರಸಭೆ ವ್ಯಾಪ್ತಿಯ ನಿವಾಸಿಗಳು ಆರೋಗ್ಯವಂತ ಜೀವನ ಸಾಗಿಸಲು ಸಾಧ್ಯವಾಗಿರುತ್ತದೆ ಎಂದರು.ಪೌರ ಕಾರ್ಮಿಕರರು […]

