ವರದಿ: ಶಬ್ಬೀರ್ ಅಹಮ್ಮದ್, ಶ್ರೀನಿವಾಸಪುರ ಕೋಲಾರ : ನಿವಾರ್ ಚಂಡಮಾರುತವು ಜಿಲ್ಲೆಯಾದ್ಯಂತ ಮುಂಬರುವ 3 ದಿನಗಳ ಕಾಲ ಬಿರುಗಾಳಿಯಿಂದ ಕೂಡಿದ ಅತಿ ಹೆಚ್ಚಿನ ಪ್ರಮಾಣದ ಮಳೆಯಾಗುವುದಾಗಿ ಭಾರತದ ಹವಮಾನ ಇಲಾಖೆ ಹಾಗೂ ರಾಜ್ಯ ವಿಪತ್ತು ನಿರ್ವಹಣಾ ಘಟಕದಿಂದ ತಿಳಿಸಿದ್ದು , ಈ ಸಂಬಂಧ ಜಿಲ್ಲೆಯಾದ್ಯಾಂತ ಮಳೆಯಿಂದ ಸಾರ್ವಜನಿಕ ಆಸ್ತಿ ಹಾಗೂ ಮಾನವ , ಜಾನುವಾರುಗಳ ಜೀವ ಹಾನಿಯಾಗದಂತೆ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಂಡು ಪ್ರತಿದಿನ ಹಾನಿಯ ಬಗ್ಗೆ ವರದಿಯನ್ನು ಜಿಲ್ಲಾಧಿಕಾರಿಗಳ ಕಛೇರಿಗೆ ಸಲ್ಲಿಸಬೇಕು ಎಂದು ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರದ ಅಧ್ಯಕ್ಷರು […]
ವರದಿ: ಶಬ್ಬೀರ್ ಅಹಮ್ಮದ್, ಶ್ರೀನಿವಾಸಪುರ ಕೋಲಾರ:- ಬದುಕುವ ಆಸೆಯಿಂದ ಬ್ಯಾಂಕಿಗೆ ಬರುವ ಪ್ರತಿಬಡವನಿಗೂ ಸಾಲ ನೀಡುವಂತಾಗಲು ಡಿಸಿಸಿ ಬ್ಯಾಂಕ್ಅನ್ನು ಸದೃಢಗೊಳಿಸಿ, ರೈತರನ್ನು ನಂಬದೇ ಕಳ್ಳರಿಗೆ ಸಾಲ ನೀಡುವ ವಾಣಿಜ್ಯ ಬ್ಯಾಂಕುಗಳ ಬಾಗಿಲು ಮುಚ್ಚುವ ಪರಿಸ್ಥಿತಿ ಬರಬೇಕು ಎಂದು ಮಾಜಿ ವಿಧಾನ ಸಭಾಧ್ಯಕ್ಷ ಹಾಗೂ ಶಾಸಕ ಕೆ.ಆರ್.ರಮೇಶ್ಕುಮಾರ್ ಆಶಿಸಿದರು.ಬುಧವಾರ ತಾಲ್ಲೂಕಿನ ಸುಗಟೂರು ಎಸ್ಎಫ್ಸಿಎಸ್ ಆಶ್ರಯದಲ್ಲಿ ಡಿಸಿಸಿ ಬ್ಯಾಂಕ್ ವತಿಯಿಂದ ಮಹಿಳಾ ಸ್ವಸಹಾಯ ಸಂಘಗಳಿಗೆ 1.74 ಕೋಟಿ ರೂ ಸಾಲ ವಿತರಿಸಿ, 32 ಕೋಟಿ ವಹಿವಾಟು ನಡೆಸುತ್ತಿರುವ ಸೊಸೈಟಿ ಮುಂದಿನ […]
ವರದಿ: ಶಬ್ಬೀರ್ ಅಹಮ್ಮದ್, ಶ್ರೀನಿವಾಸಪುರ ಕೋಲಾರ : ಕೋವಿಡ್ ಸಂದರ್ಭದಲ್ಲಿ ಗಮನಾರ್ಹ ಸೇವೆ ಸಲ್ಲಿಸಿರುವ ಜಿಲ್ಲಾಸ್ಪತ್ರೆಗೆ ಖನಿಜ ಪ್ರತಿಷ್ಠಾನ ನಿಧಿಗೆ ಸಂಗ್ರಹವಾಗಿರುವ ಮೊತ್ತದಲ್ಲಿ ಉನ್ನತ ಮಟ್ಟದಲ್ಲಿ ಮೂಲಭೂತ ಸೌಲಭ್ಯವನ್ನು ಕಲ್ಪಿಸಲಾಗುವುದು ಎಂದು ಅಬಕಾರಿ ಸಚಿವರು ಮತ್ತು ಜಿಲ್ಲಾ ಉಸ್ತುವಾರಿ ಸಚಿವರಾದ ಹೆಚ್ ನಾಗೇಶ್ ಅವರು ತಿಳಿಸಿದರು . ಇಂದು ಜಿಲ್ಲಾಧಿಕಾರಿಗಳ ಕಛೇರಿಯ ನ್ಯಾಯಾಂಗ ಸಭಾಂಗಣದಲ್ಲಿ ಹಮ್ಮಿಕೊಂಡಿದ್ದ , ಕೋಲಾರ ಜಿಲ್ಲಾ ಖನಿಜ ಪ್ರತಿಷ್ಠಾನ ನಿಧಿಗೆ ಸಂಗ್ರಹವಾಗಿರುವ ಮೊತ್ತವನ್ನು ಗಣಿ ಬಾದಿತ ಗ್ರಾಮಗಳಲ್ಲಿ ವಿನಿಯೋಗಿಸುವ ಸಭೆಯ ಅಧ್ಯಕ್ಷತೆ ವಹಿಸಿ ಅವರು […]
ವರದಿ : ಶಬ್ಬೀರ್ ಅಹಮ್ಮದ್ ಶ್ರೀನಿವಾಸಪುರ ಶ್ರೀನಿವಾಸಪುರ : ತಾಲ್ಲೂಕಿನ ಗೌನಿಪಲ್ಲಿ ಗ್ರಾಮದ ದೊಡ್ಡ ಪ್ರಮಾಣದ ಪ್ರಾಥಮಿಕ ಕೃಷಿ ಪತ್ತಿನ ಸೇವಾ ಸಹಕಾರ ಸಂಘದ ಅಧ್ಯಕ್ಷರಾಗಿ ಶಂಕರ್ ಪ್ರಸಾದ್, ಉಪಾಧ್ಯಕ್ಷೆಯಾಗಿ ನಾಸಿರಾ ವೈ.ರಿಯಾಜ್ ಪಾಷ ಬುಧವಾರ ಅವಿರೋಧ ಆಯ್ಕೆಯಾದರು. ಆಯ್ಕೆ ಬಳಿಕ ಸಂಘದ ಅಧ್ಯಕ್ಷ ಶಂಕರ್ ಪ್ರಸಾದ್ ಮಾತನಾಡಿ, ‘ಸಹಕಾರ ಸಂಘ, ಹಾಗೂ ಫಲಾನುಭವಿಗಳ ಅಭಿವೃದ್ಧಿಗೆ ಪ್ರಾಮಾಣಿಕ ಪ್ರಯತ್ನ ಮಾಡುತ್ತೇನೆ. ಬಡ್ಡಿರಹಿತ ಸಾಲ ವ್ಯವಸ್ಥೆಯನ್ನು ಮುಂದುವರಿಸಿಕೊಂಡು ಹೋಗುತ್ತೇನೆ. ಸಹಕಾರ ಸಂಘದ ವ್ಯಾಪ್ತಿಗೆ ಬರುವ ಎಲ್ಲ ಗ್ರಾಮಗಳ ಫಲಾನುಭವಿಗಳಿಗೆ […]
ವರದಿ: ಶಬ್ಬೀರ್ ಅಹಮ್ಮದ್, ಶ್ರೀನಿವಾಸಪುರ ಶ್ರೀನಿವಾಸಪುರ: ಹಾಲು ಒಕ್ಕೂಟದ ವ್ಯಾಪ್ತಿಯ ಹಾಲು ಉತ್ಪಾದಕರ ಸಹಕಾರ ಸಂಘಗಳಿಗೆ ಹಾಕುವುದರ ಮೂಲಕ ವಿವಿಧ ಸೌಲಭ್ಯಗಳನ್ನು ಪಡೆದುಕೊಳ್ಳಬೇಕು ಎಂದು ಕೋಚಿಮುಲ್ ನಿರ್ದೇಶಕ ಎನ್.ಹನುಮೇಶ್ ಹೇಳಿದರು. ತಾಲ್ಲೂಕಿನ ಮರಿಪಲ್ಲಿ ಗ್ರಾಮದಲ್ಲಿ ಹಾಲು ಉತ್ಪಾದಕರ ಸಹಕಾರ ಸಂಘದ ನೂತನ ಸಹಕಾರ ಸಂಘವನ್ನು ಉದ್ಘಾಟಿಸಿ ಮಾತನಾಡಿ, ಕೆಲವು ಹಾಲು ಉತ್ಪಾದಕರು ತಾವು ಉತ್ಪಾದಿಸಿದ ಹಾಲನ್ನು ಖಾಸಗಿ ಡೇರಿಗಳಿಗೆ ಹಾಕುವುದುದರ ಮೂಲಕ ಸೌಲಭ್ಯಗಳಿಂದ ವಂಚಿತರಾಗುತ್ತಿದ್ದಾರೆ. ಸಹಕಾರ ಸಂಘದ ಆಡಳಿತ ಮಂಡಳಿ ಸದಸ್ಯರು ಹಾಗೂ ಸಿಬ್ಬಂದಿ ಹಾಲು ಉತ್ಪಾದಕರಿಗೆ […]
ವರದಿ: ಶಬ್ಬೀರ್ ಅಹಮ್ಮದ್, ಶ್ರೀನಿವಾಸಪುರ ಶ್ರೀನಿವಾಸಪುರ: ಕೇಂದ್ರ ಹಾಗೂ ರಾಜ್ಯ ಸರ್ಕಾರಗಳ ರೈತ ವಿರೋಧಿ ನೀತಿ ವಿರುದ್ಧ ಅಖಿಲ ಭಾರತ ರೈತ ಸಂಘರ್ಷ ಸಮನ್ವಯ ಸಮಿತಿ ನೇತೃತ್ವದಲ್ಲಿ ನ.26ರಂದು ಗ್ರಾಮೀಣ ಭಾರತ ಬಂದ್ ನಡೆಸಲಾಗುವುದು ಎಂದು ಕರ್ನಾಟಕ ಪ್ರಾಂತ ರೈತ ಸಂಘದ ಜಿಲ್ಲಾ ಘಟಕದ ಅಧ್ಯಕ್ಷ ಪಿ.ಆರ್.ಸೂರ್ಯನಾರಾಯಣ ಹೇಳಿದರು. ಪಟ್ಟಣದ ಕೆಪಿಆರ್ಎಸ್ ಕಚೇರಿ ಸಭಾಂಗಣದಲ್ಲಿ ಸೊಮವಾರ ಏರ್ಪಡಿಸಿದ್ದ ಅಖಿಲ ಭಾರತ ರೈತ ಸಂಘರ್ಷ ಸಮನ್ವಯ ಸಮಿತಿಯ ಪದಾಧಿಕಾರಿಗಳ ಸಭೆಯಲ್ಲಿ ಮಾತನಾಡಿ, ಕೇಂದ್ರ ಸರ್ಕಾರ ಜಾರಿಗೆ ತಂದಿರುವ ಭೂಮಿ, […]
ವರದಿ ಶಬ್ಬೀರ್ ಅಹಮ್ಮದ್ ಶ್ರೀನಿವಾಸಪುರ ಶ್ರೀನಿವಾಸಪುರ: ಬಿಜೆಪಿ ಕಾರ್ಯಕರ್ತರು ಪ್ರಶಿಕ್ಷಣ ಪಡೆದು ಭವಿಷ್ಯದ ನಾಯಕರಾಗಬೇಕು ಎಂದು ಜಿಲ್ಲಾ ಬಿಜೆಪಿ ಘಟಕದ ಅಧ್ಯಕ್ಷ ಡಾ. ಕೆ.ಎನ್.ವೇಣುಗೋಪಾಲ್ ಹೇಳಿದರು. ಪಟ್ಟಣದ ಹೊರವಲಯದ ವಿಐಪಿ ಪಬ್ಲಿಕ್ ಸ್ಕೂಲ್ ಸಭಾಂಗಣದಲ್ಲಿ ಶನಿವಾರ ಏರ್ಪಡಿಸಿದ್ದ ಬಿಜೆಪಿ ಮಂಡಲ ಪ್ರಶಿಕ್ಷಣ ವರ್ಗ ಉದ್ಘಾಟಿಸಿ ಮಾತನಾಡಿ, ಕಾರ್ಯಕರ್ತರು ಪಕ್ಷದ ನಿಜವಾದ ಆಸ್ತಿ. ಸಾಂಘಿಕ ಪ್ರಯತ್ನದ ಮೂಲಕ ಪಕ್ಷವನ್ನು ಇನ್ನಷ್ಟು ಬಲಪಡಿಸಬೇಕು ಎಂದು ಹೇಳಿದರು. ಬಿಜೆಪಿ ಅತಿ ಹೆಚ್ಚು ಸಂಖ್ಯೆಯ ಕಾರ್ಯಕರ್ತರನ್ನು ಒಳಗೊಂಡಿರುವ ಏಕೈಕ ರಾಜಕೀಯ ಪಕ್ಷವಾಗಿದೆ. ವಿಚಾರ […]
ವರದಿ: ಶಬ್ಬೀರ್ ಅಹಮ್ಮದ್ ಶ್ರೀನಿವಾಸಪುರ ಶ್ರೀನಿವಾಸಪುರ : ಸಾಹಿತ್ಯದಲ್ಲಿ ರಾಷ್ಟ್ರೀಯ ಭಾವನೆ ಬಿಂಬಿಸುವುದು ಇಂದಿನ ಅಗತ್ಯವಾಗಿದೆ. ಸಾಹಿತಿಗಳು ರಾಷ್ಟ್ರೀಯ ಹಿತಾಸಕ್ತಿಗೆ ಪೂರಕವಾದ ಸಾಹಿತ್ಯ ರಚನೆಯಲ್ಲಿ ತೊಡಗಬೇಕು ಎಂದು ಅಖಿಲ ಭಾರತೀಯ ಸಾಹಿತ್ಯ ಪರಿಷತ್ತಿನ ತಾಲ್ಲೂಕು ಘಟಕದ ಸಂಚಾಲಕಿ ಟಿ.ಎಸ್.ಮಾಯಾ ಬಾಲಚಂದ್ರ ಹೇಳಿದರು. ಪಟ್ಟಣದ ರಾಮ ಮಂದಿರದ ಸಭಾಂಗಣದಲ್ಲಿ ಶನಿವಾರ ಏರ್ಪಡಿಸಿದ್ದ ಅಖಿಲ ಭಾರತೀಯ ಸಾಹಿತ್ಯ ಪರಿಷತ್ತಿನ ತಾಲ್ಲೂಕು ಘಟಕದ ಕಾರ್ಯಕರ್ತರ ಸಭೆ ಉದ್ಘಾಟಿಸಿ ಮಾತನಾಡಿ, ಹಿರಿಯ ಸಾಹಿತಿಗಳ ಮಾರ್ಗದರ್ಶನದಲ್ಲಿ ಕಿರಿಯ ಲೇಖಕರನ್ನು ದೇಶದ ಹಿತಾಸಕ್ತಿಗೆ ಪೂರಕವಾಗಿ ರೂಪಿಸುವುದು […]
ವರದಿ: ಶಬ್ಬೀರ್ ಅಹಮ್ಮದ್, ಶ್ರೀನಿವಾಸಪುರ ಹಾಲು ಉತ್ಪಾದಕರು ಯಾವುದೇ ಕಾರಣಕ್ಕೂ ತಮ್ಮ ಹಾಲನ್ನು ಖಾಸಗಿ ಡೈರಿಗಳಿಗೆ ಕಳುಹಿಸಬೇಡಿ. ಬದಲಾಗಿ ಸರ್ಕಾರಿ ಹಾಲು ಡೈರಿಗಳಿಗೆ ಹಾಲನ್ನು ನೀಡುವುದರಿಂದ ರೈತರಿಗೆ ವಿಮೆ, ತಮ್ಮ ಹಸುಗಳಿಗೆ ವೈದ್ಯಕೀಯ ಚಿಕಿತ್ಸೆ ಮತ್ತು ಸರ್ಕಾರದಿಂದ ದೊರೆಯುವ ಪ್ರೋತ್ಸಾಹ ಧನವನ್ನು ಪಡೆಯಲು ಸಾದ್ಯವಾಗುತ್ತದೆ. ಎಂದು ಮಾಜಿ ವಿಧಾನ ಸಭಾಧ್ಯಕ್ಷ ಹಾಗೂ ಶಾಸಕ ಕೆ.ಆರ್ ರಮೇಶ್ ಕುಮಾರ್ ರೈತರಿಗೆ ಕರೆನೀಡಿದರು. ಅವರು ಇಂದು ಯಲ್ದೂರು ಹೋಬಳಿ ಶೆಟ್ಟಿಹಳ್ಳಿಗ್ರಾಮದಲ್ಲಿ ಹಮ್ಮಿಕೊಂಡಿದ್ದ ಶೆಟ್ಟಿಹಳ್ಳಿ ಹಾಲು ಉತ್ಪಾದಕರ ಸಹಕಾರ ಸಂಘದ ನೂತನ […]