ವರದಿ : ಶಬ್ಬೀರ್ ಅಹ್ಮದ್, ಶ್ರೀನಿವಾಸಪುರ ಶ್ರೀನಿವಾಸಪುರ: ಪಟ್ಟಣದ ತಾಲ್ಲೂಕು ಕಚೇರಿ ಎದುರು ವಿವಿಧ ಕಾರ್ಮಿಕ ಸಂಘಟನೆಗಳ ಸದಸ್ಯರು ತಮ್ಮ ಬೇಡಿಕೆ ಈಡೇರಿಸುವಂತೆ ಸರ್ಕಾರವನ್ನು ಆಗ್ರಹಿಸಿ ಗುರುವಾರ ಧರಣಿ ನಡೆಸಿದರು. ಕೇಂದ್ರ ಹಾಗೂ ರಾಜ್ಯ ಸರ್ಕಾರದ ವಿರುದ್ಧ ಘೋಷಣೆ ಕೂಗಿದರು. ಕರ್ನಾಟಕ ಪ್ರಾಂತ ರೈತ ಸಂಘದ ಜಿಲ್ಲಾ ಘಟಕದ ಅಧ್ಯಕ್ಷ ಪಿ.ಆರ್.ಸೂರ್ಯನಾರಾಯಣ ಧರಣಿ ನಿರತ ಕಾರ್ಮಿಕರನ್ನು ಉದ್ದೇಶಿಸಿ ಮಾತನಾಡಿ, ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ರೈತರು, ಕಾರ್ಮಿಕರು ಮತ್ತು ದಲಿತರಿಗೆ ಸಂಬಂಧಿಸಿದ ಕಾಯ್ದೆಗಳನ್ನು ಸುಗ್ರೀವಾಜ್ಞೆ ಮೂಲಕ ಜಾರಿಗೆ […]
ವರದಿ ಶಬ್ಬೀರ್ ಅಹಮ್ಮದ್ ಶ್ರೀನಿವಾಸಪುರ ಶ್ರೀನಿವಾಸಪುರ: ಪೌರ ಕಾರ್ಮಿಕರು ಮಕ್ಕಳ ಶಿಕ್ಷಣಕ್ಕೆ ಆದ್ಯತೆ ನೀಡಬೇಕು ಎಂದು ಪುರಸಭೆ ಮುಖ್ಯಾಧಿಕಾರಿ ವಿ.ಮೋಹನ್ ಕುಮಾರ್ ಹೇಳಿದರು. ಪಟ್ಟಣದ ಪುರಸಭೆ ಕಚೇರಿ ಸಭಾಂಗಣದಲ್ಲಿ ಬುಧವಾರ ಏರ್ಪಡಿಸಲಾಗಿದ್ದ ಪೌರ ಕಾರ್ಮಿಕರ ದಿನಾಚರಣೆ ಸಮಾರಂಭ ಉದ್ಘಾಟಿಸಿ ಮಾತನಾಡಿ, ಪೌರ ಕಾರ್ಮಿಕರಿಗೆ ಗೃಹ ಭಾಗ್ಯ ಯೋಜನೆಯಡಿ ಮನೆಗಳನ್ನು ನಿರ್ಮಿಸಿಕೊಳ್ಳಲು ತಲಾ ರೂ.7.5 ಲಕ್ಷ ಆರ್ಥಿಕ ನೆರವು ನೀಡಲಾಗುವುದು. ಪೌರ ಕಾರ್ಮಿಕರಿಗೆ ಉಚಿತ ನಿವೇಶನ ನೀಡಲು ಅಗತ್ಯವಾದ ಜಮೀನು ಮಂಜೂರು ಮಾಡುವಂತೆ ಜಿಲ್ಲಾಧಿಕಾರಿಗಳನ್ನು ಕೋರಲಾಗಿದೆ ಎಂದು ಹೇಳಿದರು. […]
ವರದಿ : ಶಬ್ಬೀರ್ ಅಹ್ಮದ್, ಶ್ರೀನಿವಾಸಪುರ ಶ್ರೀನಿವಾಸಪುರ: ತಾಲ್ಲೂಕು ಸಮಾಜ ಕಲ್ಯಾಣ ಇಲಾಖೆ ಸಹಾಯಕ ನಿರ್ದೇಶಕರ ಕಚೇರಿಗೆ ಜಿಲ್ಲಾ ಪಂಚಾಯಿತಿ ಸಾಮಾಜಿಕ ನ್ಯಾಯ ಸ್ಥಾಯಿ ಸಮಿತಿ ಅಧ್ಯಕ್ಷ ಸಿ.ಎನ್.ಅರುಣ್ ಪ್ರಸಾದ್ ಭೇಟಿ ನೀಡಿ ಪರಿಶೀಲಿಸಿದರು. ಕಡತಗಳನ್ನು ಪರಿಶೀಲಿಸಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿ, ಅಧಿಕಾರಿಗಳು ಟೆಂಡರ್ ಕರೆಯದೆ ಕಾಮಗಾರಿ ನಿರ್ವಹಿಸುವುದರ ಮೂಲಕ ಕೆಪಿಟಿಪಿ ಕಾಯ್ದೆ ಉಲಂಘಿಸಿದ್ದಾರೆ. ಕಾಮಗಾರಿ ಗುತ್ತಿಗೆ ನೀಡುವ ಮುನ್ನ ವಾರ್ತಾ ಪ್ರಚಾರ ಇಲಾಖೆ ಮೂಲಕ ಪತ್ರಿಕೆಗಳಲ್ಲಿ ಟೆಂಡರ್ ಕರೆದು, ಕಡಿಮೆ ಹಣಕ್ಕೆ ಕಾಮಗಾರಿ ನಿರ್ವಹಿಸುವ ವ್ಯಕ್ತಿಗಳಿಗೆ ಕಾಮಗಾರಿ […]
ವರದಿ : ಶಬ್ಬೀರ್ ಅಹ್ಮದ್, ಶ್ರೀನಿವಾಸಪುರ ಕೋಲಾರ ; ಕಸ ಮುಕ್ತ ನಗರ, ಪ್ಲಾಸ್ಟಿಕ್ ಮುಕ್ತ ನಗರ ಮತ್ತು ನಗರದ ಸ್ವಚ್ಚತೆಯನ್ನು ಕಾಪಾಡಿಕೊಂಡು ಸುಂದರವಾಗಿ ಕಾಣುವಂತೆ ಮಾಡುವಲ್ಲಿ ಪೌರಕಾರ್ಮಿಕರ ಪಾತ್ರ ಅತ್ಯಂತ ಮುಖ್ಯವಾಗಿದೆ ಎಂದು ಕೋಲಾರ ನಗರಸಭೆಯ ಪೌರಾಯುಕ್ತರಾದ ಶ್ರೀಕಾಂತ್ ಅವರು ತಿಳಿಸಿದರು. ಇಂದು ಕೋಲಾರ ನಗರ ಸಭೆಯ ಆವರಣದಲ್ಲಿ ಹಮ್ಮಿಕೊಂಡಿದ್ದ, ಪೌರಕಾರ್ಮಿಕರ ದಿನಾಚರಣೆ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು. ಹಿಂದಿನ ದಿನಗಳಲ್ಲಿ ಪೌರಕಾರ್ಮಿಕರನ್ನು ನಿರ್ಲಕ್ಷಿಸುತ್ತಿದ್ದರು. ಆದರೆ ಇತ್ತಿಚಿನ ದಿನಗಳಲ್ಲಿ ಕೋವಿಡ್ ಸಂದರ್ಭದಲ್ಲಿ ಅವರ ಸೇವೆಯನ್ನು ಮನಗಂಡು […]
ವರದಿ : ಶಬ್ಬೀರ್ ಅಹ್ಮದ್, ಶ್ರೀನಿವಾಸಪುರ ಶ್ರೀನಿವಾಸಪುರ : ರಾಜ್ಯದಲ್ಲಿ ಡ್ರಗ್ಸ್ ಪ್ರಕರಣದ ಸುದ್ದಿ ತೀವ್ರ ಚರ್ಚೆಗೆ ಗ್ರಾಸವಾಗಿರುವಂ ತೆಯೇ ಇತ್ತ ಕೋಲಾರದಲ್ಲಿ ಪೊಲೀಸರು ಬರೋಬ್ಬರಿ 14 ಲಕ್ಷ ರೂ ಮೌಲ್ಯದ ಗಾಂಜಾವನ್ನು ವಶಕ್ಕೆ ಪಡೆದಿದ್ದಾರೆ . ಕಾರಿನಲ್ಲಿ ಗಾಂಜಾ ಸಾಗಿಸುತ್ತಿದ್ದ ಕುರಿತು ಖಚಿತ ಮಾಹಿತಿ ಪಡೆದ ಕೊಲಾರ ಎಸ್ ಪಿ ಕಾರ್ತಿಕ್ ರೆಡ್ಡಿ ಅವರ ನೇತೃತ್ವದ ಸೈಬರ್ ಅಪರಾಧ , ಆರ್ಥಿಕ ಮತ್ತು ನಾರ್ಕೋಟಿಕ್ ( ಸಿಇಎನ್ ) ವಿಭಾಗದ ವಿಶೇಷ ತಂಡ ಈ ಕಾರ್ಯಾಚರಣೆ […]
ವರದಿ : ಶಬ್ಬೀರ್ ಅಹ್ಮದ್, ಶ್ರೀನಿವಾಸಪುರ ಕೋಲಾರ.ಸೆ.21, ನಗರಾದ್ಯಂತ ಹದಗೆಟ್ಟಿರುವ ರಸ್ತೆಗಳನ್ನು ಸರಿಪಡಿಸುವ ಜತೆಗೆ ಜನಪ್ರತಿಧಿನಿಗಳು ಅಧಿಕಾರಿಗಳ ಹಗ್ಗಜಗ್ಗಾಟ ಬಿಟ್ಟು, ಜಿಲ್ಲೆಯ ಸಮಗ್ರ ಅಭಿವೃದ್ಧಿಗೆ ಮುಂದಾಗಬೇಕೆಂದು ಒತ್ತಾಯಿಸಿ ರೈತ ಸಂಘದಿಂದ ಡೂಮ್ ಲೈಟ್ ವೃತ್ತದ ಪೆಟ್ರೋಲ್ ಬಂಕ್ ಬಳಿ ಜನಪ್ರತಿನಿದಿಗಳ ಅಣುಕು ಪ್ರದರ್ಶನ ಮಾಡಿ ರಸ್ತೆಯಲ್ಲಿ ಬಿದ್ದಿರುವ ಹಳ್ಳದಲ್ಲಿ ಬಾಗೀನ ಅರ್ಪಿಸುವ ಮೂಲಕ ನಗರಸಭೆ ಅಧಿಕಾರಿ ಮಂಜುನಾಥ್ರವರಿಗೆ ಮನವಿ ನೀಡಿ ಒತ್ತಾಯಿಸಲಾಯಿತು.ಹೋರಾಟದ ನೇತೃತ್ವವಹಿಸಿ ಮಾತನಾಡಿದ ರಾಜ್ಯ ಉಪಾದ್ಯಕ್ಷ ಕೆ.ನಾರಾಯಣಗೌಡ ಜಿಲ್ಲಾ ಕೇಂದ್ರ ಕೋಲಾರದಲ್ಲಿನ ರಸ್ತೆಗಳು ಇಂದು ಜನಸಾಮಾನ್ಯರ […]
ವರದಿ : ಶಬ್ಬೀರ್ ಅಹ್ಮದ್, ಶ್ರೀನಿವಾಸಪುರ ಶ್ರೀನಿವಾಸಪುರ: ಪರಿಸರ ಮಾಲಿನ್ಯ ತಡೆಯಲು ಹಾಗೂ ಸ್ವಚ್ಚ ಗಾಳಿಯನ್ನು ಪಡೆಯಲು ಪೂರಕವಾಗಿ ಗಿಡ ಮರಗಳನ್ನು ಬೆಳೆಸಬೇಕು, ಸ್ವಚ್ಚ ಪರಿಸರ ನಿರ್ಮಾಣಕ್ಕಾಗಿ ಸಮಾಜದ ಎಲ್ಲ ವರ್ಗದ ಜನರು ಸಹಕರಿಸಬೇಕು ಎಂದು ಬಿ.ಜೆ.ಪಿ. ಜಿಲ್ಲಾ ಅಧ್ಯಕ್ಷ ಡಾ. ಕೆ.ಎನ್. ವೇಣುಗೋಪಾಲ್ ತಿಳಿಸಿದರು.ಪಟ್ಟಣದ ಪೆÇಲೀಸ್ ವಸತಿ ಗೃಹದ ಆವರಣದಲ್ಲಿ ಶ್ರೀನಿವಾಸಪುರ ರೋಟರಿ ಸಂಸ್ಥೆಯ ವತಿಯಿಂದ ಈಗಾಗಲೆ ಹಲವಾರು ತರಹದ ಗಿಡಗಳನ್ನು ನಾಟಿ ಮಾಡಿದ್ದು, ರೋಟರಿ ಸಂಸ್ಥೆ ಮತ್ತು ಗೊರವಿಮಾಕಲಹಳ್ಳಿ ಗ್ರಾಮದ ವಿನಾಯಕ ಯುವಕ ಸಂಘದ […]
ಕೋಲಾರ,ಸೆ.19: ರೈತರಿಗೆ ಮತ್ತು ಕಾರ್ಮಿಕರಿಗೆ ಮಾರಕವಾಗುವ ಭೂ ಸುಧಾರಣಾ ಕಾಯ್ದೆ ಎ.ಪಿ.ಎಂ.ಸಿ., ವಿದ್ಯುತ್, ಕಾರ್ಮಿಕ ಕಾಯ್ದೆಗಳನ್ನು ಯಾವುದೇ ಕಾರಣಕ್ಕೂ ಅಧಿವೇಶನದಲ್ಲಿ ಅಂಗೀಕಾರ ಮಾಡದಂತೆ ಒತ್ತಾಯಿಸಿ ರೈತ ಸಂಘದಿಂದ ರೈತರು ಬೆಳೆದ ಬೆಳೆಗಳು ತರಕಾರಿ ಸೊಪ್ಪು ಮತ್ತು ಕೋಳಿಗಳ ಮೂಲಕ ಕೋಲಾರಮ್ಮ ನ ದೇವಸ್ಥಾನದಿಂದ ಜಿಲ್ಲಾ ಕಾರಾಗೃಹದವರೆಗೂ ಜೈಲ್ ಬರೋ ಚಳುವಳಿ ಮಾಡಿ ರೈತ ವಿರೋದಿ ಕಾಯ್ದೆಗಳನ್ನು ಕಾಯ್ದೆಗಳನ್ನು ಕೈಬಿಡಿ ಇಲ್ಲವಾದರೆ ನಮ್ಮನ್ನು ಜೈಲಿಗೆ ಹಾಕಿ ಎಂಬ ಘೋಷಣೆಯೊಂದಿಗೆ ತಹಶೀಲ್ದಾರ್ರವರ ಮುಖಾಂತರ ಸರ್ಕಾರಕ್ಕೆ ಮನವಿ ನೀಡಿ ಒತ್ತಾಯಿಸಲಾಯಿತು. ರಾಜ್ಯ […]
ವರದಿ : ಶಬ್ಬೀರ್ ಅಹ್ಮದ್, ಶ್ರೀನಿವಾಸಪುರ ಕೋಲಾರ ಸೆ.18: ಬಳ್ಳಾರಿ ಜಿಲ್ಲೆಯ ರೈತ ಹೋರಾಟಗಾರ್ತಿ ಮತ್ತು ರೈತ ಮಹಿಳೆ ಮೇಲೆ ಹಲ್ಲೆ ಮಾಡಿ, ಅತ್ಯಾಚಾರ, ಕೊಲೆಯತ್ನ ನಡೆಸಿರುವ ಆರೋಪಿಗಳನ್ನು ಕೂಡಲೇ ಬಂಧಿಸಿ ಕಠಿಣ ಶಿಕ್ಷೆ ವಿಧಿಸುವಂತೆ ಒತ್ತಾಯಿಸಿ ರೈತ ಸಂಘದಿಂದ ಜಿಲ್ಲಾ ಪೋಲಿಸ್ ವರಿಷ್ಠಾಧಿಕಾರಿಗಳ ಮುಖಾಂತರ ಮುಖ್ಯಮಂತ್ರಿಗಳಿಗೆ ಮನವಿ ನೀಡಿ ಒತ್ತಾಯಿಸಲಾಯಿತು.ರೈತ ಸಂಘದ ರಾಜ್ಯ ಉಪಾದ್ಯಕ್ಷ ಕೆ.ನಾರಾಯಣಗೌಡ ಮಾತನಾಡಿ ಬಳ್ಳಾರಿ ಜಿಲ್ಲೆಯ ಹಡಗಲಿ ತಾಲೂಕಿನ ರೈತಸಂಘದ ಹೋರಾಟಗಾರ್ತಿ ಸೆ.5ರಂದು ಹೊಳಲು ಗ್ರಾಮದ ಸಮೀಪ ಹೊಲಕ್ಕೆ ಹೋದ ಸಂದರ್ಭದಲ್ಲಿ […]