ಕೆಜಿಎಫ್., ಮೇ.29 : ಕೆಜಿಎಫ್ ಪೊಲೀಸ್ ಜಿಲ್ಲೆಯ ರಾಬರ್ಟ್‍ಸನ್‍ಪೇಟೆ ಪೊಲೀಸ್ ಠಾಣೆಯ ಪೊಲೀಸರು ಗಾಂಜಾ ಮಾರಾಟ ಪ್ರಕರಣಕ್ಕೆ ಸಂಬಂಧಿಸಿದಂತೆ ಮೂವರು ಆರೋಪಿಗಳನ್ನು ಬಂಧಿಸಿ, ಅವರಿಂದ ಸುಮಾರು ರೂ. 5,00,000/- ಮೌಲ್ಯದ 6 ಕೆಜಿ 340 ಗ್ರಾಂ ಒಣ ಗಾಂಜಾವನ್ನು ಹಾಗೂ ಕೃತ್ಯಕ್ಕೆ ಬಳಸಿದ ದ್ವಿಚಕ್ರವಾಹನವನ್ನು ವಶಪಡಿಸಿಕೊಳ್ಳುವಲ್ಲಿ ಯಶಸ್ವಿಯಾಗಿದ್ದಾರೆ.ಮೇ.29 ರಂದು ಬೆಳಿಗ್ಗೆ ರಾಬರ್ಟ್‍ಸನ್‍ನ್‍ಪೇಟೆ ಪೊಲೀಸ್ ಠಾಣಾ ಸರಹದ್ದು, ಪಾರಾಂಡಹಳ್ಳಿಯ ಹೊರವಲಯದ ಕ್ಯಾಸಂಬಳ್ಳಿ ರಸ್ತೆಯ ಬದಿಯಲ್ಲಿ ದ್ವಿಚಕ್ರವಾಹನದಲ್ಲಿ ಗಾಂಜಾ ಮಾರಾಟ ಮಾಡುತ್ತಿರುವ ಬಗ್ಗೆ ಖಚಿತ ಮಾಹಿತಿ ಆಧರಿಸಿ, ರಾಬರ್ಟ್‍ಸನ್‍ಪೇಟೆ ಪೊಲೀಸ್ […]

Read More

ಕೋಲಾರ:- ಜಿಲ್ಲಾಧ್ಯಂತ ಇರುವ ಕೈಗಾರಿಕೆಗಳ ಸಿಎಸ್‍ಆರ್ ನಿಧಿಯನ್ನು ಎರಡು ವರ್ಷಗಳ ಕಾಲ ಶಾಲೆಗಳ ಸಮಗ್ರ ಅಭಿವೃದ್ದಿಗೆ ಬಳಸಲು ನಿರ್ಧರಿಸಿದ್ದೇವೆ, ಇದರ ಜತೆಗೆ ಒಪಿಎಸ್ ಹಾಗೂ 7ನೇ ವೇತನ ಆಯೋಗ ಜಾರಿಗಾಗಿ ಆಗ್ನೇಯ ಶಿಕ್ಷಕರ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಡಿ.ಟಿ.ಶ್ರೀನಿವಾಸ್‍ರನ್ನು ಗೆಲ್ಲಿಸುವಂತೆ ಶಾಸಕ ಕೊತ್ತೂರು ಮಂಜುನಾಥ್ ಕರೆ ನೀಡಿದರು. ತಾಲ್ಲೂಕಿನ ಅರಾಭಿಕೊತ್ತನೂರು ಸರ್ಕಾರಿ ಶಾಲೆಯಲ್ಲಿ ಡಿಟಿ ಶ್ರೀನಿವಾಸ್ ಪರ ಶಿಕ್ಷಕರ ಮತಯಾಚಿಸಿದ ಅವರು, ಸಿಎಸ್‍ಆರ್ ನಿಧಿಯನ್ನು ಶಾಲೆಗಳಲ್ಲಿ ಶೌಚಾಲಯ, ಕಟ್ಟಡ ದುರಸ್ಥಿ, ಹೊಸ ಕಟ್ಟಡಗಳ ನಿರ್ಮಾಣ ಅಗತ್ಯ ಮೂಲಸೌಲಭ್ಯಗಳನ್ನು […]

Read More

ಕೋಲಾರ:- ಸತತ 18 ವರ್ಷಗಳ ಶಿಕ್ಷಕರ ಸಮಸ್ಯೆಗಳಿಗೆ ಸದನದ ಒಳಗೆ ಹಾಗೂ ಹೊರಗೆ ಹೋರಾಟ ಮಾಡುತ್ತಾ ಅನೇಕ ಸಮಸ್ಯೆಗಳ ಪರಿಹಾರಕ್ಕೆ ಕಾರಣರಾಗಿರುವ ಹಸನ್ಮುಖಿ ಶಿಕ್ಷಕರ ಸ್ನೇಹಿ ನಾಯಕರೆಂದೇ ಗುರುತಿಸಿಕೊಂಡಿರುವ ಬಿಜೆಪಿ-ಜೆಡಿಎಸ್ ಮೈತ್ರಿ ಅಭ್ಯರ್ಥಿ ಡಾ.ವೈ.ಎ.ನಾರಾಯಣಸ್ವಾಮಿ ಅವರನ್ನು ಶಿಕ್ಷಕರು ಬೆಂಬಲಿಸಬೇಕು ಜೆಡಿಎಸ್ ಮುಖಂಡ ಸಿಎಂಆರ್.ಶ್ರೀನಾಥ್ ಮನವಿ ಮಾಡಿದರು.ಗುರುವಾರ ತಾಲ್ಲೂಕಿನ ಅರಾಭಿಕೊತ್ತನೂರು ಸರ್ಕಾರಿ ಪ್ರೌಢಶಾಲೆಯಲ್ಲಿ ಆಗ್ನೇಯ ಶಿಕ್ಷಕರ ಕ್ಷೇತ್ರದ ಮೈತ್ರಿ ಅಭ್ಯರ್ಥಿ ಡಾ.ವೈ.ಎ.ನಾರಾಯಣಸ್ವಾಮಿ ಪರ ಮತಯಾಚಿಸಿದ ಅವರು, ಶಿಕ್ಷಣ ಮತ್ತು ಶಿಕ್ಷಕರ ಬಗ್ಗೆ ಕಾಳಜಿ ಹೊಂದಿರುವ ವ್ಯಕ್ತಿ ಸದನದಲ್ಲಿ ಇರಬೇಕು […]

Read More

ಕೋಲಾರ : ಮತ ಎಣಿಕೆಗೆ ನಿಗಧಿಪಡಿಸಿರುವ ಸೂಚನೆಗಳ ಕ್ರಮಬದ್ಧತೆಯಲ್ಲಿ ಯಾವುದೇ ರೀತಿಯ ವ್ಯತ್ಯಾಸವಾಗದಂತೆ ನಿಯಮಗಳನ್ನು ಪರಿಪಾಲಿಸಿ ಮತ ಎಣಿಕೆ ಕಾರ್ಯವನ್ನು ಯಶಸ್ವಿಗೊಳಿಸಲು ಜಿಲ್ಲಾಧಿಕಾರಿ ಅಕ್ರಂ ಪಾಷ ಸೂಚಿಸಿದರು.ಇಂದು ನಗರದ ಜಿಲ್ಲಾಡಳಿತ ಭವನದ ಆಡಿಟೋರಿಯಂನಲ್ಲಿ ಹಮ್ಮಿಕೊಳ್ಳಲಾಗಿದ್ದ ಲೋಕಸಭಾ ಚುನಾವಣೆ – 2024ರ ಮತ ಎಣಿಕೆ ಪೂರ್ವ ಸಿದ್ಧತೆ ತರಬೇತಿಯ ಅಧ್ಯಕ್ಷತೆ ವಹಿಸಿದ್ದ ಜಿಲ್ಲಾಧಿಕಾರಿ ಮತ ಎಣಿಕೆಗೆ ನಿಯೋಜನೆಗೊಂಡ ಅಧಿಕಾರಿ ಮತ್ತು ಸಿಬ್ಬಂದಿಗೆ ಸಲಹೆ ಸೂಚನೆಗಳನ್ನು ನೀಡಿದರು.ಮತ ಎಣಿಕೆ ಜೂನ್ 4ರಂದು ಸರ್ಕಾರಿ ಪ್ರಥಮ ದರ್ಜೆ ಕಾಲೇಜ್ ನಲ್ಲಿ ನಡೆಯಲಿದೆ. […]

Read More

ಶ್ರೀನಿವಾಸಪುರ : ತಾಲೂಕಿನ ರೋಣುರು ಹಾಗು ತಿಮ್ಮಸಂದ್ರ ರಸ್ತೆಯಲ್ಲಿನ ಮಾವಿನ ತೋಪು ಒಂದರಲ್ಲ್ಲಿ ಕೋಳಿ ಪಂದ್ಯಗಳನ್ನು ಆಡುತ್ತಿರುವ ಬಗ್ಗೆ ಖಚಿತ ಮಾಹಿತಿಯನ್ನು ಪಡೆದ ಹಿನ್ನೆಲೆಯಲ್ಲಿ ಮಂಗಳವಾರ ಶ್ರೀನಿವಾಸಪುರ ಪೊಲೀಸ್ ಠಾಣೆಯ ಪೊಲೀಸ್ ನಿರೀಕ್ಷಕ ಎಂ.ಬಿ.ಗೊರವನಕೊಳ್ಳ ನೇತೃತ್ವದಲ್ಲಿ ಕೋಳಿ ಪಂದ್ಯ ಅಡ್ಡೆಯ ಮೇಲೆ ದಾಳಿ ನಡೆಸಿ 9 ಬೈಕುಗಳು ಹಾಗು ಒಂದು ಕೋಳಿಯನ್ನ ವಶಪಡಿಸಿಕೊಂಡು ಕೇಸು ದಾಖಲಿಸಿಕೊಂಡಿದ್ದಾರೆ.ಪಿಎಸ್‍ಐ ಶಿವಪ್ಪ, ಸಿಬ್ಬಂದಿಗಳಾದ ಆನಂದ್, ಪತ್ರಿಬಸಪ್ಪ, ಸಂಪತ್, ಶ್ರೀನಾಥ್ , ಸಂತೋಷ್, ಅಂಬರೀಶ್, ಗಣೇಶ್, ಮಂಜುನಾಥ್, ರಮೇಶ್ ದಾಳಿಯಲ್ಲಿ ಪಾಲ್ಗುಂಡಿದ್ದರು.

Read More

ಶ್ರೀನಿವಾಸಪುರ : 29 ಮತ್ತು 30 ಕ್ಕೆ ಸಿದ್ಧತಾ ಕಾರ್ಯ ಮುಗಿಸಿ, 31ಕ್ಕೆ ತಳಿರು ತೋರಣಗಳೊಂದಿಗೆ ಶಾಲಾ ಪ್ರಾರಂಭೋತ್ಸವವನ್ನು ಮಾಡಬೇಕು . ನಲಿಕಲಿಗೆ ವಿದ್ಯಾ ಪ್ರವೇಶ, ಮತ್ತು ಸೇತುಬಂಧ 4 ರಿಂದ 10 ರ ವರೆಗೆ ಸೇತು ಬಂದ ಕಾರ್ಯಕ್ರಮವನ್ನು ಸುತ್ತೋಲೆಯಂತೆ ಕ್ರಮ ಕೈಗೊಂಡು ಎಸ್‍ಎಪಿ ತಯಾರಿಕೆಗೆ ಸಿದ್ಧತೆ ಮಾಡಿಕೊಳ್ಳುವುದು ಎಂದು ಬಿಆರ್‍ಸಿ ಕೆ.ಸಿ.ವಸಂತಾ ತಿಳಿಸಿದರು.ಪಟ್ಟಣದ ಬಿಆರ್‍ಸಿ ಕಚೇರಿಯಲ್ಲಿ ಸೋಮವಾರ ಶಾಲಾ ಪ್ರಾರಂಭೋತ್ಸವದ ಅಂಗವಾಗಿ ಬಿಆರ್‍ಪಿ ಮತ್ತು ಕ್ಲಸ್ಟರ್‍ಗಳ ಸಿಆರ್‍ಪಿಗಳ ಪೂರ್ವಬಾವಿ ಸಭೆಯಲ್ಲಿ ಮಾತನಾಡಿದರು.ಶಿಕ್ಷಣ ಇಲಾಖೆಯು 2024-25 […]

Read More

ಕೋಲಾರ:- ಭಾರತದ ಮೊದಲ ಪ್ರಧಾನ ಮಂತ್ರಿ ದಿವಂಗತ ಜವಾಹರಲಾಲ್ ನೆಹರು ಅವರ ಪುಣ್ಯ ಸ್ಮರಣೆಯಂದು ರಾಜ್ಯ ಆಹಾರ ನಾಗರಿಕ ಸರಬರಾಜು ಮತ್ತು ಗ್ರಾಹಕ ವ್ಯವಹಾರಗಳ ಸಚಿವ ಕೆಹೆಚ್. ಮುನಿಯಪ್ಪ ತಮಿಳುನಾಡು ರಾಜ್ಯದ ಮದುರೈ ನ ತಳ್ಳಕುಳಂ ನಲ್ಲಿ ನೆಹರು ಪ್ರತಿಮೆಗೆ ಮಾಲಾರ್ಪಣೆ ಮಾಡಿದರು.ಈ ಸಂದರ್ಭದಲ್ಲಿ ಮಾತನಾಡಿದ ಅವರು, ಪ್ರಧಾನಿಯಾಗಿ ಅಲಿಪ್ತ ನೀತಿಯ ನೇತರಾರಾಗಿ, ಶಾಂತಿಧೂತರಾಗಿ, ಪಂಚಮಶೀಲ ತತ್ವಗಳನ್ನು ಜಾರಿಗೆ ತರುತ್ತಾರೆ, ಉತ್ತರ, ಭಾಷಣಕಾರರು, ಲೇಖಕರು ಆಗಿದ್ದರು. 1955 ರಲ್ಲಿ ಭಾರತರತ್ನ, 1964 ರಲ್ಲಿ ಪ್ರಧಾನಿಯಾಗಿದ್ದಾಗಲೇ ಮರಣ ಹೊಂದುತ್ತಾರೆ.ಸುಮಾರು […]

Read More

ಕೋಲಾರ : ಕೋಲಾರ ಜಿಲ್ಲೆಯ ಅನುದಾನ ರಹಿತ ಅಥವಾ ಅನುದಾನಿತ ಖಾಸಗಿ ಶಾಲೆಗಳಲ್ಲಿ ಮಕ್ಕಳ ಪ್ರವೇಶಾತಿಗಾಗಿ ಯಾವುದೇ ರೀತಿಯ ಡೊನೇಷನ್ ಪಡೆಯುವಂತಿಲ್ಲ ಒಂದು ವೇಳೆ ಕಾನೂನು ಬಾಹಿರವಾಗಿ ದೇಣಿಗೆ ಪಡೆದಿರುವುದು ಕಂಡುಬಂದಲ್ಲಿ ಅಂತಹ ಶಾಲೆಗಳ ನೋಂದಣಿ ರದ್ದು ಮಾಡಿ ಆಡಳಿತ ಮಂಡಳಿಯ ವಿರುದ್ಧ ಕಠಿಣ ಕ್ರಮ ತೆಗೆದುಕೊಳ್ಳಲಾಗುವುದು ಎಂದು ಜಿಲ್ಲಾಧಿಕಾರಿ ಅಕ್ರಂ ಪಾಷ ಅವರು ಎಚ್ಚರಿಕೆ ನೀಡಿದ್ದಾರೆ. ಪ್ರಸಕ್ತ ಶೈಕ್ಷಣಿಕ ಸಾಲಿಗೆ ಇಂದಿನಿಂದ ಪ್ರವೇಶ ಪ್ರಕ್ರಿಯೆ ಆರಂಭಗೊಂಡಿದೆ ಕೆಲವು ಶಾಲೆಗಳಲ್ಲಿ ಡೊನೇಷನ್ ಪಡೆಯಲಾಗುತ್ತದೆ ಎಂದು ಸಾರ್ವಜನಿಕ ವಲಯದಲ್ಲಿ […]

Read More

ಕೋಲಾರ,ಮೇ.27: ಪ್ರತಿಯೊಬ್ಬರೂ ಪ್ರಥಮ ಚಿಕಿತ್ಸೆ ಕುರಿತು ಅರಿವು ಹಾಗೂ ತರಬೇತಿ ಪಡೆದು ಸಕಾಲದಲ್ಲಿ ತೊಂದರೆಗೊಳಗಾದವರಿಗೆ ನೆರವು ನೀಡಿದಾಗ ಅಮೂಲ್ಯವಾದ ಜೀವವನ್ನು ಉಳಿಸಲು ಸಹಕಾರಿಯಾಗುತ್ತದೆ ಎಂದು ದೇವರಾಜ ಅರಸು ವೈದ್ಯಕೀಯ ಸಂಶೋಧನಾ ಕೇಂದ್ರದ ತುರ್ತು ಚಿಕಿತ್ಸ ವಿಭಾಗದ ಕನ್ಸಲ್‌ಟೆಂಟ್ ಡಾ.ರಾಜೇಶ್ ಅವರು ತಿಳಿಸಿದರು. ತುರ್ತು ವೈದ್ಯಕೀಯ ಚಿಕಿತ್ಸಾ ದಿನಾಚರಣೆ ಅಂಗವಾಗಿ ನಗರದ ಆರ್.ಎಲ್.ಜಾಲಪ್ಪ ಆಸ್ಪತ್ರೆ ಮತ್ತು ದೇವರಾಜ ಅರಸು ವೈದ್ಯಕೀಯ ಸಂಶೋಧನಾ ಕೇಂದ್ರ ಹಾಗೂ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಸಹಯೋಗದಲ್ಲಿ, ಇಂದು ನಗರದ ಪತ್ರಕರ್ತರ ಭವನದಲ್ಲಿ ಏರ್ಪಡಿಸಿದ್ದ […]

Read More
1 27 28 29 30 31 322