
ವರದಿ: ಶಬ್ಬೀರ್ ಅಹಮ್ಮದ್, ಶ್ರೀನಿವಾಸಪುರ ಕೋಲಾರ:- ವೇಮಗಲ್-ಕುರಗಲ್ ಪಟ್ಟಣ ಪಂಚಾಯಿತಿಯಾಗಲು ಸಚಿವ ಸಂಪುಟ ಅನುಮೋದಿಸಿ ಕಳುಹಿಸಿದ್ದ ಡ್ರಾಪ್ಟ್ ನೋಟಿಫಿಕೇಷನ್ಗೆ ರಾಜ್ಯಪಾಲರು ಅಂಕಿತ ಹಾಕಿದ್ದು, ನಗರಾಭಿವೃದ್ದಿ ಇಲಾಖೆ ಬುಧವಾರ ಅಧಿಸೂಚನೆ ಹೊರಡಿಸಿದೆ ಎಂದು ಮಾಜಿ ಸಭಾಪತಿ ವಿ.ಆರ್.ಸುದರ್ಶನ್ ತಿಳಿಸಿದ್ದಾರೆ.ಜಿಲ್ಲೆಯ ಏಕೈಕ ಪಟ್ಟಣ ಪಂಚಾಯಿತಿಯಾಗಿ ವೇಮಗಲ್-ಕುರಗಲ್ ಘೋಷಣೆಯಾಗಿದ್ದು, ಈ ಭಾಗದ ಸಮಗ್ರ ಅಭಿವೃದ್ದಿಗೆ ಅವಕಾಶಗಳು ಒದಗಿ ಬರಲಿವೆ ಎಂದು ವಿಶ್ವಾಸ ವ್ಯಕ್ತಪಡಿಸಿದ್ದಾರೆ.ಪಟ್ಟಣ ಪಂಚಾಯಿತಿಯಾಗಲು ಕಾರಣರಾದ ರಾಜ್ಯಪಾಲರು, ಮುಖ್ಯಮಂತ್ರಿಗಳು, ಸಚಿವ ಸಂಪುಟ, ರಾಜ್ಯ ಸರ್ಕಾರದ ವಿವಿಧ ಇಲಾಖೆಗಳು, ಕೋಲಾರ ಜಿಲ್ಲಾಧಿಕಾರಿಗಳು,ಜಿಪಂ ಸಿಇಒ […]

ವರದಿ: ಶಬ್ಬೀರ್ ಅಹಮ್ಮದ್, ಶ್ರೀನಿವಾಸಪುರ ಕೋಲಾರ: ಅನಾಥ ಮಕ್ಕಳ್ಳನ್ನು ಸ್ವಂತ ಮಕ್ಕಳಂತೆ ಕಾಣುವ ಮೂಲಕ ಉತ್ತಮ ಭವಿಷ್ಯವನ್ನು ರೂಪಿಸಲು ಸಹಕರಿಸಬೇಕು ಎಂದು ಡಾ.ಶಾಂತ ತಿಳಿಸಿದರು.ನಗರದ ಕಾರಂಜಿಕಟ್ಟೆಯಲ್ಲಿರುವ ಶ್ರೀ ನಲ್ಲೂರಮ್ಮ ದೇವಿ ಅನಾಥ ಮಕ್ಕಳ ಕ್ಷೇಮಾಭಿವೃದ್ಧಿ ಟ್ರಸ್ಟಿನಲ್ಲಿ ಹಾಲುಮತ ಮಹಾಸಭಾ ಜಿಲ್ಲಾ ಶಾಖೆ ವತಿಯಿಂದ ನಡೆದ 533ನೇ ಕನಕದಾಸ ಜಯಂತೋತ್ಸವ ಆಚರಣೆಯಲ್ಲಿ ಭಾಗವಹಿಸಿ ಮಾತನಾಡಿದರು. ಅನಾಥಾಶ್ರಮ ಮಕ್ಕಳಲ್ಲಿ ಆತ್ಮವಿಶ್ವಾಸ ಬೆಳೆಸುವ ಮೂಲಕ ಸ್ವಂತ ಜೀವನ ಕಟ್ಟಿಕೊಳ್ಳುವಾಗೆ ಬೆಂಬಲ ನೀಡಬೇಕು ಎಂದು ನುಡಿದರು. ಕನಕದಾಸರಂತಹ ದಾರ್ಶನಿಕರ ಜೀವನಚರಿತ್ರೆಯ ಜ್ಞಾನವನ್ನು ಮಕ್ಕಳಿಗೆ […]

ವರದಿ: ಶಬ್ಬೀರ್ ಅಹಮ್ಮದ್, ಶ್ರೀನಿವಾಸಪುರ ಕೋಲಾರ, ನ-26, ಪ್ರತಿ ಪಂಚಾಯಿತಿಗೊಂದು ರಾಗಿ ಖರೀದಿ ಕೇಂದ್ರ ತೆರೆಯಬೇಕು ಹಾಗೂ ಪ್ರತಿ ಕ್ವಿಂಟಾಲ್ ರಾಗಿಗೆಗೆ 5 ಸಾವಿರ ಬೆಂಬಲ ಬೆಲೆ ಘೋಷಣೆ ಮಾಡಿ ಬೆಳೆ ನಮೂದನೆಯಲ್ಲಾಗಿರುವ ಅವ್ಯವಸ್ಥೆಯನ್ನು ಸರಿಪಡಿಸಬೇಕೆಂದು ರೈತ ಸಂಘದಿಂದ ತಾಲ್ಲೂಕು ಕಛೇರಿ ಮುಂದೆ ರಾಗಿ ಸಮೇತ ಹೋರಾಟ ಮಾಡಿ ಶಿರಸ್ತೆದಾರ್ರವರ ಮುಖಾಂತರ ಕೃಷಿ ಮಂತ್ರಿಗೆ ಮನವಿ ನೀಡಿ ಆಗ್ರಹಿಸಲಾಯಿತು.ಹೋರಾಟದ ನೇತೃತ್ವ ವಹಿಸಿ ಮಾತನಾಡಿದ ರೈತ ಸಂಘದ ರಾಜ್ಯ ಉಪಾಧ್ಯಕ್ಷ ಕೆ.ನಾರಾಯಣಗೌಡ ರೈತರ ಕಷ್ಟ ದಲ್ಲಾಳರ ಪಾಲೆಂಬಂತೆ ಈ […]

ವರದಿ: ಶಬ್ಬೀರ್ ಅಹಮ್ಮದ್ ಶ್ರೀನಿವಾಸಪುರ ಶ್ರೀನಿವಾಸಪುರ: ಕೃಷಿಕರು ಕಂದಾಯ ಇಲಾಖೆಯ ವಿಶೇಷ ಪವತಿ ವಾರಸ್ಸು ಖಾತೆ ಆಂದೋಲನದ ಪ್ರಯೋಜನ ಪಡೆದುಕೊಳ್ಳಬೇಕು ಎಂದು ಶಿರಸ್ತೇದಾರ್ ಬಿ.ಆರ್.ಮುನಿವೆಂಕಟಪ್ಪ ಹೇಳಿದರು.ತಾಲ್ಲೂಕಿನ ಹೆಬ್ಬಟ ಗ್ರಾಮದದಲ್ಲಿ ಕಂದಾಯ ಇಲಾಖೆ ವತಿಯಿಂದ ಸೋಮವಾರ ಏರ್ಪಡಿಸಿದ್ದ ಪವತಿ ವಾರಸ್ಸು ಖಾತೆ ಆಂದೋಲನ ಕಾರ್ಯಕ್ರಮದಲ್ಲಿ ಮಾತನಾಡಿ, ಸೇವೆಯನ್ನು ರೈತರ ಮನೆ ಬಾಗಿಲಿಗೆ ಒದಗಿಸುವ ದೃಷ್ಟಿಯಿಂದ ಈ ಆಂದೋಲನ ಏರ್ಪಡಿಸಲಾಗಿದೆ ಎಂದು ಹೇಳಿದರು.ಹಿರಿಯ ಕಂದಾಯ ನಿರೀಕ್ಷಕ ಬಿ.ವಿ.ಮುನಿರೆಡ್ಡಿ ಮಾತನಾಡಿ, ಪವತಿ ವಾರಸ್ಸು ಖಾತೆ ಮಾಡಿಸಿಕೊಂಡಲ್ಲಿ ಹೆಚ್ಚು ಪ್ರಯೋಜನವಾಗುತ್ತದೆ. ಅದಕ್ಕೆ ಪೂರಕವಾಗಿ […]

ವರದಿ ಶಬ್ಬೀರ್ ಅಹಮ್ಮದ್ ಶ್ರೀನಿವಾಸಪುರ ಶ್ರೀನಿವಾಸಪುರ: ದಿಲ್ಲಿ ಚಲೋ ನಡೆಸುತ್ತಿರುವ ರೈತರ ಮೇಲೆ ನಡೆದಿರುವ ದೌರ್ಜನ್ಯ ಖಂಡಿಸಿ ಅಖಿಲ ಭಾರತ ರೈತ ಸಂಘರ್ಷ ಸಮನ್ವಯ ಸಮಿತಿಯ ತಾಲ್ಲೂಕು ಘಟಕದ ಸದಸ್ಯರು ತಾಲ್ಲೂಕು ಕಚೇರಿ ಮುಂದೆ ಪ್ರತಿಭಟನೆ ನಡೆಸಿದರು.ಕರ್ನಾಟಕ ಪ್ರಾಂತ ರೈತ ಸಂಘದ ಜಿಲ್ಲಾ ಘಟಕದ ಉಪಾಧ್ಯಕ್ಷ ಪಾತಕೋಟ ನವೀನ್ ಕುಮಾರ್ ಪ್ರತಿಭಟನೆ ನಡೆಸುತ್ತಿದ್ದ ಸಮಿತಿಯ ಸದಸ್ಯರನ್ನು ಉದ್ದೇಶಿಸಿ ಮಾತನಾಡಿ, ಕೇಂದ್ರ ಸರ್ಕಾರದ ಜಾಗತೀಕರಣ, ಉದಾರೀಕರಣ ಹಾಗೂ ಖಾಸಗೀಕರಣದ ಫಲವಾಗಿ ದೇಶದ ಕೃಷಿ ಬಿಕ್ಕಟ್ಟು ಉಲ್ಬಣಗೊಂಡಿದೆ. ರೈತ ಹಾಗೂ […]

ವರದಿ: ಶಬ್ಬೀರ್ ಅಹಮ್ಮದ್, ಶ್ರೀನಿವಾಸಪುರ ಶ್ರೀನಿವಾಸಪುರ,ಇಂದಿನ ಮಕ್ಕಳೇ ಮುಂದಿನ ದೇಶವನ್ನಾಳುವ ಪ್ರಭುಗಳು ಎನ್ನುವುದು ಅರಿತು ವಿದ್ಯಾರ್ಥಿಗಳು ಸಾಮಾಜಿಕ, ಶೈಕ್ಷಣಿಕ, ಪ್ರಗತಿಯತ್ತ ಸಾಕ್ಷರತೆ ಸಾಧನೆ ಮಾಡಿ ಉತ್ತಮ ಪ್ರಜೆಗಳು ಆಗಬೇಕೆಂದು ತಾಲ್ಲೂಕು ಪಂಚಾಯಿತಿ ಕಾರ್ಯನಿರ್ವಣಾಧಿಕಾರಿ ಎಸ್. ಆನಂದ್ ತಿಳಿಸಿದರು.ತಾಲ್ಲೂಕಿನ ನಂಬಿಹಳ್ಳಿ ಗ್ರಾಮದ ಸರ್ಕಾರಿ ಪ್ರೌಢಶಾಲೆಯ ಅವರಣದಲ್ಲಿ ಗ್ರಾಮ ಪಂಚಾಯಿತಿಯಿಂದ ಏರ್ಪಡಿಸಿದ್ದ ಮಕ್ಕಳ ಗ್ರಾಮ ಸಭೆಯಲ್ಲಿ ನೋಡಲ್ ಅಧಿಕಾರಿಯಾಗಿ ಭಾಗವಹಿಸಿ ಮಾತನಾಡಿದ ಆನಂದ್ ವಿದ್ಯಾರ್ಥಿಗಳಿಗೆ ಶಿಕ್ಷಕರು ಗುಣಮಟ್ಟದ ಶಿಕ್ಷಣವನ್ನು ನೀಡಬೇಕು ಸರ್ಕಾರ ವಿದ್ಯಾರ್ಥಿಗಳಿಗೆ ಲೇಖನಿ ಸಾಮಾಗ್ರಿಗಳು, ಬಿಸಿ ಊಟ, ಬಟ್ಟೆ, […]

ವರದಿ: ಶಬ್ಬೀರ್ ಅಹಮ್ಮದ್, ಶ್ರೀನಿವಾಸಪುರ ಶ್ರೀನಿವಾಸಪುರ: ಕುಂಚ ಕಲಾವಿದರು ತಮ್ಮ ಬೇಡಿಕೆಗಳ ಈಡೇರಿಕೆಗಾಗಿ ಸಂಘಟಿತ ಪ್ರಯತ್ನ ನಡೆಸಬೇಕು. ಕುಂಚ ಕಲಾವಿದರು ಎದುರಿಸುತ್ತಿರುವ ಸಮಸ್ಯೆಗಳ ಬಗ್ಗೆ ಸರ್ಕಾರದ ಗಮನ ಸೆಳೆಯಬೇಕು ಎಂದು ರಾಜ್ಯ ಕುಂಚ ಕಲಾವಿದರ ಸಂಘದ ಅಧ್ಯಕ್ಷ ಮುನಿರಾಜು ಹೇಳಿದರು. ತಾಲ್ಲೂಕಿನ ಎನಮರೇಪಲ್ಲಿ ಗ್ರಾಮದ ಪಂಚಮುಖಿ ಹನುಮ ದೇವಾಲಯದ ಆವರಣದಲ್ಲಿ ಭಾನುವಾರ ಏರ್ಪಡಿಸಿದ್ದ ತಾಲ್ಲೂಕು ಕುಂಚ ಕಲಾವಿದರ ಸಂಘದ ಸಭೆ ಉದ್ಘಾಟಿಸಿ ಮಾತನಾಡಿ, ಕುಂಚ ಕಲಾವಿದರು ವೃತ್ತಿ ಕೌಶಲ್ಯ ಹೆಚ್ಚಿಸಿಕೊಳ್ಳಬೇಕು. ಜನರ ಗಮನ ಸೆಳೆದು ಆರ್ಥಿಕ ಪರಿಸ್ಥಿತಿ […]

ವರದಿ: ಶಬ್ಬೀರ್ ಅಹಮ್ಮದ್, ಶ್ರೀನಿವಾಸಪುರ ಶ್ರೀನಿವಾಸಪುರ: ತಾಲ್ಲೂಕಿನ ಎಲ್ಲ ಮತಗಟ್ಟೆ ಅಧಿಕಾರಿಗಳು ಡಿ.13ರವರೆಗೆ ಪ್ರತಿ ಭಾನುವಾರ ವಿಶೇಷ ಅಭಿಯಾನ ಹಮ್ಮಿಕೊಂಡು, 18 ವರ್ಷ ತುಂಬಿದ ಯುವಕ, ಯುವತಿಯನ್ನು ಕಡ್ಡಾಯವಾಗಿ ಮತದಾರರ ಪಟ್ಟಿಗೆ ಸೇರಿಸಿಕೊಳ್ಳುತ್ತಾರೆ. ಆ ಅವಧಿಯಲ್ಲಿ ಮತದಾರರ ಪಟ್ಟಿಗೆ ಸೇರ್ಪಡೆಯಾಗಲು ನಮೂನೆ – 6, ತಿದ್ದುಪಡಿಗೆ ನಮೂನೆ – 8, ಹಾಗೂ ನಮೂನೆ 8 ಎ ಮತ್ತು ನಮೂನೆ 7 ರ ಅರ್ಜಿಗಳನ್ನು ಸ್ವೀಕರಿಸಲಾಗುವುದು ಎಂದು ತಹಶೀಲ್ದಾರ್ ಎಸ್.ಎಂ.ಶ್ರೀನಿವಾಸ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಅರ್ಹ ವ್ಯಕ್ತಿಗಳು ಈ ಅವಕಾಶವನ್ನು […]

ವರದಿ: ಶಬ್ಬೀರ್ ಅಹಮ್ಮದ್, ಶ್ರೀನಿವಾಸಪುರ ಕೋಲಾರ :ರೋಟರಿ ಸಂಸ್ಥೆ ಕೋಲಾರ ಹಾಗೂ ರೋಟರಿ ಬೆಂಗಳೂರು ಲೇಕ್ ಸೈಡ್ ಸಂಯುಕ್ತಆಶ್ರಯದಲ್ಲಿ ನಗರದಲ್ಲಿ ವಿವಿಧ ಸೇವಾಕಾರ್ಯಗಳನ್ನು ಆಯೋಜಿಸಲಾಗಿತ್ತು.ಇಲ್ಲಿನ ರೋಟರಿ ಕೋಲಾರ ಭವನದಲ್ಲಿ ತ್ರಿಲಿಂಗಿ ಸಮುದಾಯಕ್ಕೆ ಸೇರಿದ 100 ಮಂದಿಗೆ ಆಹಾರ ಸಾಮಗ್ರಿಗಳ ಪಡಿತರ ಕಿಟ್ಗಳನ್ನು ವಿತರಿಸಲಾಯಿತು.ತದನಂತg Àಅಂತರ ಗಂಗಾ ವಿಶೇಷಚೇತನ ಮಕ್ಕಳ ವಸತಿ ಶಾಲೆಯಲ್ಲಿ ಪಡಿತರ ಕಿಟ್ ಸೇರಿದಂತೆ ಹೊದಿಕೆಗಳು, ಟೀ ಶರ್ಟ್ಗಳು, ಲೇಖನ ಸಾಮಗ್ರಿಗಳನ್ನು ವಿತರಿಸಲಾಯಿತು.ರೋಟರಿಕೋಲಾರ ಸಂಸ್ಥೆಯ ಅಧ್ಯಕ್ಷ ಕೆ.ಆರ್ ಸೋಮಶೇಖರ್ , ಕಾರ್ಯದರ್ಶಿ ಎಂ. ಎಸ್. ರವಿ,ಬೆಂಗಳೂರು […]