
ವರದಿ ಶಬ್ಬೀರ್ ಅಹಮ್ಮದ್, ಶ್ರೀನಿವಾಸಪುರ ಶ್ರೀನಿವಾಸಪುರ: ತಾಲ್ಲೂಕಿನಲ್ಲಿ ಆಗ್ನೇಯ ಪದವೀಧರರ ಕ್ಷೇತ್ರಕ್ಕೆ ಬುಧವಾರ ನಡೆದ ಚುನಾವಣೆಯಲ್ಲಿ ಶೇ.81.47 ರಷ್ಟು ಮತದಾನವಾಗಿದೆ. ಬೆಳಿಗ್ಗೆ ನೀರಸವಾಗಿ ಪ್ರಾರಂಭವಾದ ಮತದಾನ, ಮಧ್ಯಾಹ್ನದ ಹೊತ್ತಿಗೆ ಚುರುಕು ಪಡೆದುಕೊಂಡಿತು. ಮತದಾರರು ಉದ್ದನೆಯ ಸಾಲುಗಳಲ್ಲಿ ನಿಂತು ಮತದಾನ ಮಾಡಿದರು. ತಾಲ್ಲೂಕಿನಲ್ಲಿ ಒಟ್ಟು 4739 ಮತದಾರರಿದ್ದು, ಆ ಪೈಕಿ 3861 ಮತದಾರರು ಮತ ಚಲಾಯಿಸಿದ್ದಾರೆ. 3095 ಪುರುಷ ಮತದಾರರ ಪೈಕಿ 2547 ಹಾಗೂ 1644 ಮಹಿಳಾ ಮತದಾರರ ಪೈಕಿ 1314 ಮತದಾರರು ಮತದಾನ ಮಾಡಿದ್ದಾರೆ. […]

ವರದಿ: ಶಬ್ಬೀರ್ ಅಹಮ್ಮದ್, ಶ್ರೀನಿವಾಸಪುರ ಕೋಲಾರ.ಅ.28: ಮಹಾತ್ಮ ಗಾಂಧೀಜಿ ಗ್ರಾಮೀಣ ಇಂಧನ ಮತ್ತು ಅಭಿವೃದ್ಧಿ ಸಂಸ್ಥೆ ಬೆಂಗಳೂರು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ ಮತ್ತು ತೇಜಸ್ವಿನಿ ಗ್ರಾಮೀಣಾಭಿವೃದ್ಧಿ ಸಂಸ್ಥೆ ಎಸ್‍ಜಿ ಕೋಟೆ ಇವರ ಸಂಯುಕ್ತಾಶ್ರಯದಲ್ಲಿ ತಾಲೂಕಿನ ಹೊನ್ನೇನಹಳ್ಳಿ ಗ್ರಾಮ ಪಂಚಾಯಿತಿಗೆ ಸೇರಿದ ಕಳ್ಳಿ ಪುರ ಗ್ರಾಮದ ಸಮುದಾಯ ಭವನದಲ್ಲಿ ಮಹಿಳಾ ಸ್ವಸಹಾಯ ಸಂಘದ ಸ್ತ್ರೀಶಕ್ತಿ ಪ್ರತಿನಿಧಿಗಳಿಗೆ, ಸದಸ್ಯರಿಗೆ ನವೀಕರಿಸಬಹುದಾದ ಇಂಧನ ಘನತ್ಯಾಜ್ಯ ನಿರ್ವಹಣೆ ಹಾಗೂ ಮಳೆನೀರು ಕೊಯ್ಲು ಇತರೆ ಸಂಬಂಧಪಟ್ಟ ವಿಷಯಗಳ ಕುರಿತು ಅರಿವು ಮೂಡಿಸುವ […]

ವರದಿ: ಶಬ್ಬೀರ್ ಅಹಮ್ಮದ್, ಶ್ರೀನಿವಾಸಪುರ ಕೋಲಾರ:- ವಿಧಾನಪರಿಷತ್‍ನ ಎಲ್ಲಾ ನಾಲ್ಕೂ ಕ್ಷೇತ್ರಗಳಲ್ಲಿ ಬಿಜೆಪಿ ಗೆಲುವು ನಿಶ್ಚಿತ, 2 ಮತ್ತು 3ನೇ ಸ್ಥಾನಕ್ಕಾಗಿ ಕಾಂಗ್ರೆಸ್,ಜೆಡಿಎಸ್ ಹಾಗೂ ಪಕ್ಷೇತರ ಅಭ್ಯರ್ಥಿಗಳು ಪೈಪೋಟಿ ನಡೆಸುತ್ತಿದ್ದಾರೆ ಎಂದು ವಿಧಾನಪರಿಷತ್ ಸದಸ್ಯ ವೈ.ಎ.ನಾರಾಯಣಸ್ವಾಮಿ ತಿಳಿಸಿದರು.ವಿಧಾನಪರಿಷತ್ ಚುನಾವಣೆ ಹಿನ್ನಲೆಯಲ್ಲಿ ನಗರದ ಜೂನಿಯರ್ ಕಾಲೇಜು ಮತಗಟ್ಟೆಗೆ ಆಗಮಿಸಿದ್ದ ಅವರು, ಮತಗಟ್ಟೆ ಮುಂಭಾಗ ಸೇರಿದ್ದ ಬಿಜೆಪಿ ಕಾರ್ಯಕರ್ತರು, ಮತ್ತು ಪದವೀಧರರೊಂದಿಗೆ ಮಾತನಾಡಿದರು.ಬಿಜೆಪಿಗೆ ಬಂಡಾಯ ಅಭ್ಯರ್ಥಿಗಳಿಂದ ಯಾವುದೇ ತೊಂದರೆಯಿಲ್ಲ, ಅವಿಭಜಿತ ಜಿಲ್ಲೆಯ 9 ತಾಲ್ಲೂಕುಗಳಲ್ಲಿ ನಾವೇ ಮುಂದಿದ್ದೇವೆ ಹಾಗೆಯೇ ದಾವಣಗೆರೆ, […]

ವರದಿ : ಮಝರ್, ಕುಂದಾಪುರ ಜಾಲತಾಣಗಳನ್ನು ಬಳಸಿಕೊಂಡು ಸಾರ್ವಜನಿಕ ರಂಗದಲ್ಲಿ ಕರಾವಳಿ ಜಿಲ್ಲೆಯಲ್ಲಿಯೇ ವಿನೂತನ ಪ್ರಯೋಗಕ್ಕೆ ಮುನ್ನುಡಿ ಬರೆದಿರುವ ಯುವಕರ ಸಾಹಸ ನಿಜಕ್ಕೂ ಶ್ಲಾಘನೀಯ ಇಂದಿನ ಸ್ಪರ್ಧಾತ್ಮಕ ಯುಗದಲ್ಲಿ ಜಾಲತಾಣವನ್ನು ಸದ್ಭಳಕೆ ಮಾಡುವ ಮೂಲಕ ಸ್ವಯಂ ಉದ್ಯೋಗವನ್ನು ಸೃಷ್ಠಿ ಮಾಡಬಹುದೆಂಬ ಪ್ರಯೋಗಕ್ಕೆ ಇವರು ಮಾದರಿಯಾಗಿದ್ದಾರೆ. ಅವರ ಸಂಸ್ಥೆ ಯಶಸ್ಸಿನ ನೂತನ ಭಾಷೆಯನ್ನು ಬರೆಯಲಿ ಎಂದು ಕುಂದಾಪುರ ನಗರಪ್ರಾಧಿಕಾರದ ಮಾಜಿ ಅಧ್ಯಕ್ಷ ವಿಕಾಸ ಹೆಗ್ಡೆಯವರು ಹೇಳಿದರು. ಅವರು ಕುಂದಾಪುರ ಬಿ.ಸಿ.ರಸ್ತೆಯ ದಿವ್ಯಶ್ರೀ ಕಾಂಪ್ಲೆಕ್ಸ್‍ನಲ್ಲಿ ಓಶಿಯನ್ ವಲ್ರ್ಡ್ ಎಂಟರ್‍ಪ್ರೈಸಸ್ ಇವರ […]

ಶಬ್ಬೀರ್ ಅಹಮದ್ ಶ್ರೀನಿವಾಸಪುರ ಕೋಲಾರ.ಅ.27: ಮಾಹಿತಿ ಹಕ್ಕು ಅಧಿ ನಿಯಮದಡಿ ಕೇಳಲಾಗಿದ್ದ ಮಾಹಿತಿ ನೀಡಲು ವಿಫಲವಾದ ಹಿನ್ನೆಲೆಯಲ್ಲಿ, ತಾಲ್ಲೂಕು ಪಂಚಾಯಿತಿ ಪ್ರಥಮ ದರ್ಜೆ ಸಹಾಯಕ ಎಸ್. ಮಂಜುನಾಥ ಅವರ ವಿರುದ್ಧ ಪೆÇಲೀಸ್ ಠಾಣೆಯಲ್ಲಿ ಎಫ್‍ಐಆರ್ ದಾಖಲಿಸಲಾಗಿದೆ.ತಾಲ್ಲೂಕು ಪಂಚಾಯಿತಿ ಕಾರ್ಯಾಲಯಕ್ಕೆ ಸಂಬಂಧಿಸಿದಂತೆ ಸ್ಟಾಂಪ್ ಡ್ಯೂಟಿ ಅಡಿಯಲ್ಲಿ ಬಿಡುಗಡೆಯಾಗಿರುವ ಹಣ ಹಾಗೂ ವೆಚ್ಚಕ್ಕೆ ಸಂಬಂಧಿಸಿದಂತೆ ಎಲ್ಲಾ ದಾಖಲೆಗಳು ಅಗತ್ಯ ಮಾಹಿತಿ ನೀಡುವಂತೆ ಕೋರಿ ಪಟ್ಟಣದ ಜಾಕೀರ್ ಹುಸೇನ್ ಮೊಹಲ್ಲಾದ ಶಬ್ಬೀರ್ ಅಹಮ್ಮದ್ ಅವರು 2016ರಲ್ಲಿ ಮಾಹಿತಿ ಹಕ್ಕು ಅರ್ಜಿ ಸಲ್ಲಿಸಿದ್ದರು.ತಾಲ್ಲೂಕು […]

ವರದಿ: ಶಬ್ಬೀರ್ ಅಹಮ್ಮದ್ ಶ್ರೀನಿವಾಸಪುರ ಶ್ರೀನಿವಾಸಪುರ: ಇಲ್ಲಿಗೆ ಸಮೀಪದ ಪಾತಮುತ್ತಕಪಲ್ಲಿ ಗ್ರಾಮದಲ್ಲಿ ಮಳೆಯಿಂದಾಗಿ ಮನೆಯ ಚಾವಣಿ ಕುಸಿದು ಬಿದ್ದು ಬಾಲಕನೊಬ್ಬ ಮೃತಪಟ್ಟಿರುವ ಘಟನೆ ನಡೆಸಿದೆ. ಹರೀಶ್ (9) ಮೃತ ಬಾಲಕ. ಮೃತನ ಅಣ್ಣ ಮಣಿಕಂಠ (13) ಹಾಗೂ ತಾಯಿ ಅನಂದಮ್ಮ (40) ಸಣ್ಣಪುಟ್ಟ ಗಾಯಗಳೊಂದಿಗೆ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಭೇಟಿ: ಸಂಸದ ಎಸ್.ಮುನಿಶಾಮಿ ಗ್ರಾಮಕ್ಕೆ ಭೇಟಿ ನೀಡಿ ಸಂತ್ರಸ್ತ ಕುಟುಂಬಕ್ಕೆ ಸಾಂತ್ವನ ಹೇಳಿದರು. ವೈಯಕ್ತಿಕವಾಗಿ ರೂ.1ಲಕ್ಷದ ಚೆಕ್ ನೀಡಿದರು. ಈ ಸಂದರ್ಭದಲ್ಲಿ ಮಾತನಾಡಿ, ಜಿಲ್ಲೆಯಲ್ಲಿ ಹಳೆಯ ಮನೆಗಳು […]

ವರದಿ: ಶಬ್ಬೀರ್ ಅಹಮ್ಮದ್ ಶ್ರೀನಿವಾಸಪುರ ಕೋಲಾರ:- ಜನಿಸಿದ ಪ್ರತಿ ನವಜಾತ ಶಿಶುವನ್ನು ಪೆÇೀಲಿಯೋ ವಿರುದ್ಧ ರಕ್ಷಣೆಗೊಳಪಡಿಸಬೇಕು ಎಂದು ಜಿಲ್ಲಾ ಆರೋಗ್ಯಾಧಿಕಾರಿ ಡಾ. ವಿಜಯ್ ಕುಮಾರ್ ಹೇಳಿದರು.ನಗರದ ಗಾಂಧಿವನದಲ್ಲಿ ಪಲ್ಸ್ ಪೋಲಿಯೊ ಅರಿವು ಜಾಥಾ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡುತ್ತಿದ್ದರು.ಕಡ್ಡಾಯವಾಗಿ 5 ವರ್ಷದೊಳಗಿನ ಮಕ್ಕಳಿಗೆ ಪೋಲಿಯೊ ಲಸಿಕೆ ಹಾಕುವ ಮೂಲಕ ಅವರ ಆರೋಗ್ಯದ ಹಿತದೃಷ್ಟಿಯಿಂದ ಪೋಷಕರು ಮೊದಲ ಆದ್ಯತೆಯನ್ನು ನೀಡಬೇಕು ಎಂದರು.ಪೋಲಿಯೊ ರಹಿತವಾಗಿ ನಮ್ಮ ದೇಶವನ್ನು ಉಳಿಸಲು ವಿದೇಶಾಂಗ ಸಚಿವಾಲಯ ನಿಯಮಾವಳಿಗಳಿಗೆ ತಿದ್ದುಪಡಿ ತಂದಿದೆ. ಈ ನಿಟ್ಟಿನಲ್ಲಿ ಪೋಲಿಯೊ […]

ವರದಿ: ಶಬ್ಬೀರ್ ಅಹಮ್ಮದ್ ಶ್ರೀನಿವಾಸಪುರ ಕೋಲಾರ.ಅ.24: ನಾಡಿನ ಸಮಸ್ತ ಜನತೆಗೆ ಕೇಂದ್ರ ಸರ್ಕಾರದ ಮಾಜಿ ಮಂತ್ರಿಗಳಾದ ಶ್ರೀ.ಕೆ.ಹೆಚ್ ಮುನಿಯಪ್ಪ ರವರಿಂದ ಆಯುಧಪೂಜೆ ಮತ್ತು ವಿಜಯದಶಮಿಯ ಶುಭಾಶಯಗಳು.ನಾಡ ದೇವತೆ ಚಾಮುಂಡೇಶ್ವರಿ ದೇವಿಯು ಕೊರೋನಾ ಮಹಾಮಾರಿ ಮತ್ತು ಅತಿವೃಷ್ಟಿಯಿಂದ ರಾಜ್ಯಕ್ಕೆ ಮುಕ್ತಿ ನೀಡಿ ಜನತೆಗೆ ಸುಖ, ಶಾಂತಿ, ನೆಮ್ಮದಿ ಮತ್ತು ಸಂಮೃದ್ಧಿ ಜೀವನ ಕರುಣಿಸಲಿ ಎಂದು ಚಾಮುಂಡೇಶ್ವರಿ ದೇವಿಯನ್ನು ಪ್ರಾರ್ಥಿಸಿದ್ದಾರೆ.

ವರದಿ: ಶಬ್ಬೀರ್ ಅಹಮ್ಮದ್ ಶ್ರೀನಿವಾಸಪುರ ಶ್ರೀನಿವಾಸಪುರ: ವಿಧಾನ ಪರಿಷತ್ ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಬೆಂಬಲಿಸಬೇಕು ಎಂದು ಜಿಲ್ಲಾ ಉಸ್ತುವಾರಿ ಸಚಿವ ಎಚ್.ನಾಗೇಶ್ ಹೇಳಿದರು.ಪಟ್ಟಣದ ವಿಐಪಿ ಸಂಸ್ಥೆಯ ಆವರಣದಲ್ಲಿ ಆಗ್ನೇಯ ಪದವೀಧರ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಪರವಾಗಿ ಶುಕ್ರವಾರ ಏರ್ಪಡಿಸಿದ್ದ ಚುನಾವಣಾ ಪ್ರಚಾರ ಸಭೆ ಉದ್ಘಾಟಿಸಿ ಮಾತನಾಡಿ, ಬಿಜೆಪಿ ಅಭ್ಯರ್ತಿ ಚಿನಾದನಂದ ಎಂ ಗೌಡ, ಪದವೀಧರರ ಸೇವೆ ಮಾಡುವ ಉದ್ದೇಶದಿಂದ ಚುನಾವಣಾ ಕಣಕ್ಕೆ ಇಳಿದಿದ್ದಾರೆ. ಅವರ ಜನಪರ ಕಾಳಜಿ ಹಾಗೂ ಬಿಜೆಪಿ ಸರ್ಕಾರದ ಸಾಧನೆ ಅವರಿಗೆ ಶ್ರೀರಕ್ಷೆಯಾಗಿದೆ ಎಂದು […]