ವರದಿ: ಶಬ್ಬೀರ್ ಅಹಮ್ಮದ್, ಶ್ರೀನಿವಾಸಪುರ ಅಡ್ಡಗಲ್‍ನ 1ನೇ ಕೇಂದ್ರದಲ್ಲಿ ವಯೋನಿವೃತ್ತಿ ಹೊಂದಿರುವ ಹಿನ್ನೆಲೆಯಲ್ಲಿ ಅಂಗನವಾಡಿ ಕಾರ್ಯಕರ್ತೆಯರಾದ ಅಡ್ಡಗಲ್‍ನ ಎ.ಎಸ್.ಗಾಯತ್ರಿ,ಮಲ್ಲಿಮವಾರಿಪಲ್ಲಿ ಲಕ್ಷ್ಮಿದೇವಿ,ಮೇಕಲಗಡ್ಡ ರಾಧರವರನ್ನ ಹಿರಿಯ ಮೇಲ್ವಿಚಾರಕರಾದ ನಾನಮ್ಮ, ಮೇಲ್ವಿಚಾರಕಿ ಶರಣಮ್ಮರವರು ಸನ್ಮಾನಿಸಿ ಬೀಳ್ಕೊಟ್ಟರು. ಪೋಷನ್ ಅಭಿಯಾನ ಅಧಿಕಾರಿಗಳಾದ ಸಿರಲ್, ಕಲ್ಪನ ಕಾರ್ಯಕರ್ತೆಯರಾದ ಸುಮತಿ,ಇಂದ್ರ,ಸುಲ್ತಾನ,ಲಕ್ಷ್ಮೀದೇವಮ್ಮ,ಪುಷ್ಪಾಂಜಲಿ, ಬೀಬಿಜಾನ್ ಇತರರು ಇದ್ದರು.
ಕೃಷಿ ಪರಿಕರ ಮಾರಾಟದ ಜೊತೆಗೆ ರೈತರಿಗೆ ಕೃಷಿ ಮಾಹಿತಿ ತಲುಪಿಸುವಲ್ಲಿ ಕೃಷಿ ಪರಿಕರ ಮಾರಾಟಗಾರರು ಪ್ರಾಥಮಿಕ ಮೂಲಗಳಾಗಿದ್ದು ಮತ್ತು ಹೆಚ್ಚಿನ ಮಾರಾಟಗಾರರು ಕೃಷಿಗೆ ಸಂಬಂಧಿಸಿದಂತೆ ಮೂಲ ಶಿಕ್ಷಣವನ್ನು ಹೊಂದಿರುವುದಿಲ್ಲ. ಈ ನಿಟ್ಟಿನಲ್ಲಿ ಕೃಷಿ ಪರಿಕರ ಮಾರಾಟಗಾರರಿಗೆ ಕೃಷಿ ವಿಸ್ತರಣಾ ಸೇವೆಯಲ್ಲಿ ಡಿಪ್ಲೊಮಾ ಕೋರ್ಸ್ (ದೇಸಿ) ಅತ್ಯವಶ್ಯಕವಾಗಿದೆ ಎಂದು ಸನ್ಮಾನ್ಯ ಶ್ರೀ. ಎಸ್ ಮುನಿಸ್ವಾಮಿ ಮಾನ್ಯ ಸಂಸದರು, ಕೋಲಾರ ಲೋಕಸಭಾ ಕ್ಷೇತ್ರ, ಕೋಲಾರರವರು ಅಭಿಪ್ರಾಯಪಟ್ಟರು. ಐ.ಸಿ.ಎ.ಆರ್-ಕೃಷಿ ವಿಜ್ಞಾನ ಕೇಂದ್ರ, ಟಮಕ, ಕೋಲಾರ, ಸಮೇತಿ (ದಕ್ಷಿಣ) ಕೃಷಿ ವಿಶ್ವವಿದ್ಯಾನಿಲಯ, ಬೆಂಗಳೂರು, […]
ವರದಿ: ಶಬ್ಬೀರ್ ಅಹಮ್ಮದ್, ಶ್ರೀನಿವಾಸಪುರ ಕೋಲಾರ :- ಕೋವಿಡ್ 3 ನೇ ಅಲೆ ಬರುವುದಕ್ಕೆ ಮುಂಚಿತವಾಗಿ ಮುನ್ನೆಚ್ಚರಿಕಾ ಕ್ರಮಗಳನ್ನು ವಹಿಸಿ , ಸೋಂಕು ಹೆಚ್ಚು ಹರಡುವುದನ್ನು ತಡೆಯಬೇಕು ಹಾಗೂ ಜಿಲ್ಲೆಯ ಎಲ್ಲಾ ಆಸ್ಪತ್ರೆಗಳಲ್ಲಿ ಬೆಡ್ , ಆಕ್ಸಿಜನ್ , ಐ.ಸಿ.ಯು ಹಾಗೂ ವೈದ್ಯಕೀಯ ಸಿಬ್ಬಂದಿಯ ಕೊರತೆಯಾಗದಂತೆ ಪೂರ್ವ ಸಿದ್ಧತೆ ಮಾಡಿಕೊಳ್ಳಬೇಕು ಎಂದು ಸರ್ಕಾರದ ಪ್ರಧಾನ ಕಾರ್ಯದರ್ಶಿಗಳು , ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ ಹಾಗೂ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿಗಳಾದ ಉಮಾ ಮಹಾದೇವನ್ ಅವರು ಹೇಳಿದರು . […]
ವರದಿ: ಶಬ್ಬೀರ್ ಅಹಮ್ಮದ್, ಶ್ರೀನಿವಾಸಪುರ ಶ್ರೀನಿವಾಸಪುರ: ಗ್ರಾಮಗಳಲ್ಲಿ ಕುಡಿಯುವ ನೀರು ಪೂರೈಕೆಗೆ ಮೊದಲ ಆದ್ಯತೆ ನೀಡಲಾಗಿದೆ ಎಂದು ಮಾಸ್ತೇನಹಳ್ಳಿ ಗ್ರಾಮ ಪಂಚಾಯಿತಿ ಅಧ್ಯಕ್ಷ ಬಂಗವಾದಿ ರವಿಕುಮಾರ್ ಹೇಳಿದರು.ಕುಡಿಯುವ ನೀರಿನ ಸಮಸ್ಯೆ ಎದುರಿಸುತ್ತಿರುವ ಗೌಡಹಳ್ಳಿ ಹಾಗೂ ಬಿಸನಹಳ್ಳಿ ಗ್ರಾಮಗಳಿಗೆ ಅಧಿಕಾರಿಗಳೊಂದಿಗೆ ಭೇಟಿ ನೀಡಿ ಪರಿಶೀಲಿಸಿದ ಬಳಿಕ ಮಾತನಾಡಿ, ಬೇಸಿಗೆಯಲ್ಲಿ ಕುಡಿಯುವ ನೀರು ಪೂರೈಕೆಗೆ ಮುಂಜಾಗ್ರತೆ ವಹಿಸಿದ ಪರಿಣಾಮವಾಗಿ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಸಮಸ್ಯೆ ಅಷ್ಟಾಗಿ ಕಾಡುತ್ತಿಲ್ಲ ಎಂದು ಹೇಳಿದರು.ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಚಿನ್ನಪ್ಪ, ಕಾರ್ಯದರ್ಶಿ ಶ್ರೀನಿವಾಸರೆಡ್ಡಿ, ಮುಖಂಡರಾದ […]
ವರದಿ: ಶಬ್ಬೀರ್ ಅಹಮ್ಮದ್, ಶ್ರೀನಿವಾಸಪುರ ಶ್ರೀನಿವಾಸಪುರ: ಪಟ್ಟಣದಲ್ಲಿ ನಿಷೇಧಿತ ಪ್ಲಾಸ್ಟಿಕ್ ವಸ್ತುಗಳನ್ನು ಮಾರಾಟ ಮಾಡುತ್ತಿದ್ದ ಅಂಗಡಿಗಳ ಮೇಲೆ ಪುರಸಭೆಯ ಆರೋಗ್ಯ ನಿರೀಕ್ಷಕ ಎಂ.ಪೃಥ್ವಿರಾಜ್ ಶುಕ್ರವಾರ ದಾಳಿ ನಡೆಸಿ ದಂಡ ವಿಧಿಸಿದರು.ನಿಷೇಧಿತ ಪ್ಲಾಸ್ಟಿಕ್ ಕವರ್‍ನಲ್ಲಿ ವಸ್ತುಳನ್ನು ಕೊಂಡೊಯ್ಯುತ್ತಿದ್ದ ಸಾರ್ವಜನಿಕರಿಗೆ ತಲಾ ರೂ.200 ದಂಡ ವಿಧಿಸಲಾಯಿತು. ಅಂಗಡಿ ಮಾಲೀಕರಿಗೆ ದಾಸ್ತಾನು ಮಾಡಲಾಗಿದ್ದ ವಸ್ತುಗಳ ಗಾತ್ರದ ಆಧಾರದ ಮೇಲೆ ದಂಡ ವಿಧಿಸಲಾಯಿತು. ಒಟ್ಟು ರೂ.10 ಸಾವಿರ ದಂಡ ವಸೂಲು ಮಾಡಲಾಯಿತು ಎಂದು ಹೇಳಿದರು.ಪಟ್ಟಣವನ್ನು ಪ್ಲಾಸ್ಟಿಕ್ ಮುಕ್ತಗೊಳಿಸುವ ಸಂಕಲ್ಪ ಮಾಡಲಾಗಿದೆ. ಅಂಗಡಿ ಮಾಲೀಕರು […]
ವರದಿ: ಶಬ್ಬೀರ್ ಅಹಮ್ಮದ್, ಶ್ರೀನಿವಾಸಪುರ ಕೋಲಾರ,ಜು.22: ಕೋವಿಡ್ 3ನೇ ಅಲೆ ಕುರಿತು ಮಕ್ಕಳಿಗೆ ಜಾಗೃತಿ ಮೂಡಿಸುವ ಜತೆಗೆ ಎಸ್ಸೆಸ್ಸೆಲ್ಸಿ ಪರೀಕ್ಷೆ ಎದುರಿಸಲು ಆತ್ಮಸ್ಥೈರ್ಯ ತುಂಬಲು ಸೇವಾ ಕಾರ್ಯಕ್ರಮ ಆಯೋಜಿಸಲಾಗಿದೆ ಎಂದು ಚಂದನ್‍ಗೌಡ ಫೌಂಡೇಷನ್ ಅಧ್ಯಕ್ಷರೂ ಆದ ಉದ್ಯಮಿ ಚಂದನ್ ಗೌಡ ಹೇಳಿದರು.ನಗರದ ಮೆಥೋಡಿಸ್ಟ್ ಪರೀಕ್ಷಾ ಕೇಂದ್ರದಲ್ಲಿ ಅಭ್ಯರ್ಥಿಗಳಿಗೆ ಮಾಸ್ಕ್, ಮಿನರಲ್ ವಾಟರ್ ಮತ್ತು ಬಿಸ್ಕತ್ ಪ್ಯಾಕ್ ವಿತರಿಸಿ ಮಾತನಾಡಿ, ಕೋಲಾರ ತಾಲೂಕಿನ 31 ಪರೀಕ್ಷಾ ಕೇಂದ್ರಗಳಲ್ಲೂ ಏಕ ಕಾಲಕ್ಕೆ ಮಕ್ಕಳಿಗೆ ಸೌಲಭ್ಯ ಒದಗಿಸಲಾಗುತ್ತಿದೆ ಎಂದರು.ಕೋಲಾರ ನಗರದಲ್ಲಿ ಮಾತ್ರವೇ […]
ವರದಿ: ಶಬ್ಬೀರ್ ಅಹಮ್ಮದ್, ಶ್ರೀನಿವಾಸಪುರ ಕೋಲಾರ:- ರಾಷ್ಟ್ರಧ್ವಜಕ್ಕೆ ಸಲ್ಲಬೇಕಾದ ಗೌರವವನ್ನು ಪ್ರತಿಯೊಬ್ಬ ಭಾರತೀಯ ಪ್ರಜೆ ನೀಡಲೇಬೇಕು. ಅದಕ್ಕಾಗಿ ಭಾರತ ಸೇವಾದಳದಿಂದ ಹಮ್ಮಿಕೊಳ್ಳಲಾಗುವ ಕಾರ್ಯಕ್ರಮಗಳ ಸದುಪಯೋಗವನ್ನು ಪ್ರತಿಯೊಬ್ಬರು ಪಡೆದುಕೊಳ್ಳಬೇಕು ಎಂದು ಜಿಲ್ಲಾ ಪಂಚಾಯಿತಿ ಉಪಕಾರ್ಯದರ್ಶಿ ಸಂಜೀವಪ್ಪ ಹೇಳಿದರು.ನಗರದ ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ ಭಾರತ ಸೇವಾದಳವತಿಯಿಂದ ಗುರುವಾರ ರಾಷ್ಟ್ರ ಧ್ವಜ ಅಂಗೀಕಾರ ದಿನಾಚರಣೆ ಪ್ರಯುಕ್ತ ತಾಲೂಕು ಪಂಚಾಯತ್ ಕಾರ್ಯನಿರ್ವಹಕಾಕಾರಿಗಳು ಮತ್ತು ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳಿಗಾಗಿ ಹಮ್ಮಿಕೊಂಡಿದ್ದ ರಾಷ್ಟ್ರ ಧ್ವಜ ಮಾಹಿತಿ ಕಾರ್ಯಗಾರವನ್ನು ಉದ್ಘಾಟಿಸಿ ಮಾತನಾಡಿದರು.ಪ್ರತಿಯೊಬ್ಬರೂ ರಾಷ್ಟ್ರಧ್ವಜಕ್ಕಿರುವ ಮಾನದಂಡಗಳು, ಧ್ವಜ […]
ವರದಿ: ಶಬ್ಬೀರ್ ಅಹಮ್ಮದ್, ಶ್ರೀನಿವಾಸಪುರ ಕೆಜಿಎಫ್: ಬಂಗಾರಪೇಟೆ-ಕೆಜಿಎಫ್ ವ್ಯಾಪ್ತಿಯಲ್ಲಿ ನಡೆಯುತ್ತಿರುವ ಅಕ್ರಮ ಜೂಜಾಟ, ಮಟ್ಕಾ ದಂಧೆಗೆ ಕಡಿವಾಣ ಹಾಕಿ ಬಡವರ ಕುಟುಂಬಗಳನ್ನು ರಕ್ಷಣೆ ಮಾಡಬೇಕೆಂದು ಮಾನ್ಯ ಪೊಲೀಸ್ ವರಿಷ್ಠಾಧಿಕಾರಿಗಳನ್ನು ಒತ್ತಾಯಿಸಿ ಜು.23-7-2021ರ ಶುಕ್ರವಾರ ಎಸ್ಪಿ ಕಚೇರಿ ಮುತ್ತಿಗೆ ಹಾಕಲು ರೈತಸಂಘದ ಸಭೆಯಲ್ಲಿ ತೀರ್ಮಾನಿಸಲಾಯಿತು. ಕೆಜಿಎಫ್ ಹೊರವಲಯದ ಐಟಿಐ ಆವರಣದಲ್ಲಿ ನಡೆದ ಸಭೆಯಲ್ಲಿ ಮಾತನಾಡಿದ ರೈತಸಂಘದ ರಾಜ್ಯ ಉಪಾಧ್ಯಕ್ಷ ಕೆ.ನಾರಾಯಣಗೌಡ, ಕೊರೊನಾ 1ನೇ, 2ನೇ ಅಲೆಯಿಂದ ಲಕ್ಷಾಂತರ ಕೂಲಿ ಕಾರ್ಮಿಕರು ಕೆಲಸ ಕಳೆದುಕೊಳ್ಳುವ ಜೊತೆಗೆ ರೈತರು ಬೆಳೆದ ಬೆಳೆಗಳಿಗೆ […]
ವರದಿ: ಶಬ್ಬೀರ್ ಅಹಮ್ಮದ್, ಶ್ರೀನಿವಾಸಪುರ ಕೋಲಾರ:- ನಗರದಲ್ಲಿ ಇಂದು ನಡೆದ ಎಸ್ಸೆಸ್ಸೆಲ್ಸಿ ಪರೀಕ್ಷೆಗೆ ಆಗಮಿಸಿದ್ದ ಪರೀಕ್ಷಾರ್ಥಿಗಳಿಗೆ ರೋಟರಿ ಸೆಂಟ್ರಲ್ ಅಧ್ಯಕ್ಷ ಸಿಎಂಆರ್.ಶ್ರೀನಾಥ್ ಎನ್.95 ಮಾಸ್ಕ್ ವಿತರಿಸಿದರೆ, ಸೇವಾದಳ ಅಧ್ಯಕ್ಷ ಕೆ.ಎಸ್.ಗಣೇಶ್,ಕಾರ್ಯದರ್ಶಿ ಸುಧಾಕರ್ ಮಕ್ಕಳಿಗೆ ಹೂಗುಚ್ಚ ನೀಡಿ ಶುಭ ಕೋರಿದರು.ಈ ಸಂದರ್ಭದಲ್ಲಿ ಮಾತನಾಡಿದ ರೋಟರಿ ಸೆಂಟ್ರಲ್ ಅಧ್ಯಕ್ಷ ಸಿ.ಎಂ.ಆರ್.ಶ್ರೀನಾಥ್, ಪರೀಕ್ಷೆಗೆ ಕುಳಿತ ಎಲ್ಲಾ ವಿದ್ಯಾರ್ಥಿಗಳಿಗೂ ಎನ್.95 ಮಾಸ್ಕ್ ವ್ಯವಸ್ಥೆ ಮಾಡಿದ್ದು, ಮಕ್ಕಳ ಸುರಕ್ಷತೆಗೆ ಒತ್ತು ನೀಡಲಾಗಿದೆ ಎಂದು ತಿಳಿಸಿದರು.ಮಕ್ಕಳ ಸಾಮಾಜಿಕ ಅಂತರ ಪಾಲನೆ,ಸ್ಯಾನಿಟೈಸರ್, ಮಾಸ್ಕ್ ವಿತರಣೆ ಮತ್ತಿತರ ಪರೀಕ್ಷಾ […]

