
ಶ್ರೀನಿವಾಸಪುರ: ಕೋಲಾರ ಜಿಲ್ಲೆಯ ಶ್ರೀನಿವಾಸಪುರ ಪುರಸಭಾ ಕಚೇರಿಯ ಸಭಾಂಗಣದಲ್ಲಿ 2025-26ನೇ ಸಾಲಿನ ವಿವಿಧ ಬಾಬ್ತುಗಳ ಬಹಿರಂಗ ಹರಾಜು ಪುರಸಭಾ ಅಧ್ಯಕ್ಷ ಬಿ.ಆರ್. ಭಾಸ್ಕರ್ ಅವರ ಅಧ್ಯಕ್ಷತೆಯಲ್ಲಿ ಇಂದು ನಡೆಯಿತು. ಈ ಹರಾಜಿನಲ್ಲಿ ದಿನವಹಿ ಮಾರುಕಟ್ಟೆ, ವಾರದ ಸಂತೆ, ಬಸ್ ಸ್ಟ್ಯಾಂಡ್ ಶುಲ್ಕ, ಮುಸಾಫೀರ್ ಖಾನ್ ವಾಣಿಜ್ಯ ಸಂಕೀರ್ಣದ ನೆಲ ಮಹಡಿಯಲ್ಲಿ (ಸೆಲ್ಲರ್) ದ್ವಿಚಕ್ರ ವಾಹನ ನಿಲುಗಡೆ ಶುಲ್ಕ ವಸೂಲಿ ಹಕ್ಕುಗಳ ಹರಾಜು ಪ್ರಕ್ರಿಯೆ ನಡೆದಿದೆ. ಈ ಹರಾಜು ಪ್ರಕ್ರಿಯೆಯಿಂದ ₹20,40,000 (ಇಪ್ಪತ್ತು ಲಕ್ಷ ನಲವತ್ತು ಸಾವಿರ ರೂಪಾಯಿ) […]

ಕೋಲಾರ:- ಡಿಸಿಸಿ ಬ್ಯಾಂಕಿನಿಂದ ಅಸ್ಥಿತ್ವದಲ್ಲಿರದ ಯಾವುದೇ ಮಹಿಳಾ ಸ್ವಸಹಾಯ ಸಂಘಗಳಿಗೆ ಸಾಲ ನೀಡಿಲ್ಲ, ದಾಖಲೆಗಳ ನಿರ್ವಹಣೆ ಸರಿಯಾಗಿದೆ ಎಂದು ಸರ್ಕಾರವೇ ನೇಮಿಸಿದ್ದ ಸಹಕಾರ ಸಂಘಗಳ ಜಂಟಿ ನಿರ್ದೇಶಕ ಕಲ್ಲಪ್ಪ ಓಬಣ್ಣಗೋಳ್ ನೇತೃತ್ವದ ಪರಿಶೀಲನಾ ಸಮಿತಿ ವರದಿ ನೀಡಿದ್ದರೂ ವಿನಾಕಾರಣ ಆರೋಪ ಮಾಡಲಾಗುತ್ತಿದೆ, ಆಡಳಿತ ಮಂಡಳಿ ಬ್ಯಾಂಕನ್ನು ಕಣ್ಣಲ್ಲಿಕಣ್ಣಿಟ್ಟು ಕಾಪಾಡಿದ್ದೇವೆ ಎಂದು ಕೋಲಾರ,ಚಿಕ್ಕಬಳ್ಳಾಪುರ ಡಿಸಿಸಿ ಬ್ಯಾಂಕ್ ಮಾಜಿ ಅಧ್ಯಕ್ಷರಾದ ಬ್ಯಾಲಹಳ್ಳಿ ಗೋವಿಂದಗೌಡ ತಿಳಿಸಿದರು.ನಗರದ ಪತ್ರಕರ್ತರ ಭವನದಲ್ಲಿ ಈ ಸಂಬಂಧ ಸುದ್ದಿಗೋಷ್ಟಿ ನಡೆಸಿ, ದಾಖಲೆಗಳನ್ನು ಪ್ರದರ್ಶಿಸಿ ಮಾತನಾಡಿದ ಅವರು, ಮಹಿಳಾ […]

ಕೋಲಾರ ತಾಲ್ಲೂಕು ಅಬ್ಬಣಿ ಗ್ರಾಮದ ಸರ್ವೇ ನಂಬರ್ 79ರಲ್ಲಿ 91 ಎಕರೆ 06 ಗುಂಟೆ ವ್ಯಾಪ್ತಿಯ ದೊಡ್ಡಕೆರೆ ಜಮೀನಿದ್ದು,ಬಹುತೇಖ ಒತ್ತುವರಿಯಾಗಿರುತ್ತದೆ ಹಾಗೂ ಅದರಲ್ಲಿ ನಾರಾಯಣಪ್ಪ ಎಂಬುವವರ ಹೆಸರಿಗೆ ಪಹಣಿ ಸಹ ನಮೂದಾಗಿರುತ್ತದೆ. ಅದನ್ನು ವಜಾಗೊಳಿಸಿ ಒತ್ತುವರಿ ತೆರವುಗೊಳಿಸುವಂತೆ ತಹಶಿಲ್ದಾರ್, ಸಹಾಯಕ ಆಯುಕ್ತರು,ಕೋಲಾರ ಉಪವಿಭಾಗರವರಿಗೆ ಹಾಗೂ ಜಿಲ್ಲಾಧಿಕಾರಿಗಳಿಗೆ ಕರ್ನಾಟಕ ರಾಜ್ಯ ರೈತ ಸಂಘ ಮತ್ತು ಹಸಿರು ಸೇನೆ ಮಹಿಳಾ ಜಿಲ್ಲಾಧ್ಯಕ್ಷೆ ನಳಿನಿಗೌಡರವರಿಂದ ಮನವಿಯನ್ನು ಸಲ್ಲಿಸಲಾಗಿತ್ತು.ಮನವಿದಾರರ ಅರ್ಜಿ ಆಧರಿಸಿ ತಹಶಿಲ್ದಾರ್ ರವರ ವರದಿಯನ್ವಯ ಮಾನ್ಯ ಸಹಾಯಕ ಆಯುಕ್ತರಾದ ಡಾ.ಮೈತ್ರಿರವರು ತಮ್ಮ […]

ಶ್ರೀನಿವಾಸಪುರ : ಪಟ್ಟಣದ 100 ಹಾಸಿಗೆಗಳ ಸರ್ಕಾರಿ ಸಾರ್ವಜನಿಕ ಆಸ್ಪತ್ರೆಯಲ್ಲಿ ಕಳೆದ 5 ವರ್ಷಗಳಿಂದ ಕಿವಿ, ಮೂಕು, ಗಂಟಲು (ಇಎನ್‌ಟಿ) ತಜ್ಞರ ಕೊರತೆ ಉಂಟಾಗಿದೆ. ಈ ನಡುವೆ, ಸ್ತ್ರೀರೋಗ ತಜ್ಞೆ ಡಾ. ಗೌಸಿಯಾ ಬಾನು ರಾಜೀನಾಮೆ ನೀಡಿದ ಕಾರಣ, ಮಹಿಳಾ ರೋಗಿಗಳಿಗೆ ಸಮರ್ಪಕ ಚಿಕಿತ್ಸೆ ಲಭ್ಯವಿಲ್ಲ. ಶ್ರೀನಿವಾಸಪುರ ಹಾಗೂ ಸುತ್ತಮುತ್ತಲಿನ 300ಕ್ಕೂ ಹೆಚ್ಚು ಹಳ್ಳಿಗಳ ಜನತೆ ಈ ಸಮಸ್ಯೆಯಿಂದ ತೀವ್ರ ಸಂಕಷ್ಟ ಅನುಭವಿಸುತ್ತಿದ್ದಾರೆ. ಬಡ ರೋಗಿಗಳು ತುರ್ತು ಚಿಕಿತ್ಸೆಗಾಗಿ, ಖಾಸಗಿ ಆಸ್ಪತ್ರೆಗಳು, ಕೋಲಾರ , ಚಿಕ್ಕಬಳ್ಳಾಪುರ ಜಿಲ್ಲೆಯ […]

ಶ್ರೀನಿವಾಸಪುರ : ಪ್ರಪಂಚದ ಅತಿ ಹೆಚ್ಚು ಮಾವು ಉತ್ಪಾದಿಸುವ ಶ್ರೀನಿವಾಸಪುರ ತಾಲ್ಲೂಕು ಕೋಲಾರ ಜಿಲ್ಲೆಯಲ್ಲಿ ಪ್ರಮುಖ ಕೃಷಿ ಪ್ರದೇಶವಾಗಿ ಗುರುತಿಸಿಕೊಂಡಿದೆ. ಇಲ್ಲಿ ಸುಮಾರು 70% ರೈತರು ಹಾಗೂ ವ್ಯಾಪಾರಸ್ಥರು ಮಾವಿನ ಬೆಳೆಗಾರಿಕೆಯಿಂದ ಬದುಕು ಸಾಗಿಸುತ್ತಿದ್ದಾರೆ. ಸುಮಾರು 56 ಸಾವಿರ ಹೆಕ್ಟರ್ ಪ್ರದೇಶದಲ್ಲಿ ವಿವಿಧ ವೆರಿಟಿಗಳ ಮಾವಿನ ತೋಟಗಳು ಹರಡಿಕೊಂಡಿದ್ದು, ಪ್ರತಿ ದಿನ ಲಕ್ಷಾಂತರ ಟನ್ ಮಾವು ದೇಶದ ವಿವಿಧ ರಾಜ್ಯಗಳಲ್ಲದೇ ವಿದೇಶಗಳಿಗೂ ರಫ್ತು ಆಗುತ್ತದೆ. ಮಾವು ಸುಗ್ಗಿ ಮೇ ತಿಂಗಳಿನಿಂದ ಆರಂಭವಾಗುವಿದ್ದು ಪ್ರತಿವರ್ಷ ದೇಶದ ವಿವಿಧ ಭಾಗಗಳಿಂದ […]

ಕೋಲಾರ,ಮಾ.17: ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದಿಂದ ಕೆ.ಯು.ಡಬ್ಲ್ಯೂ.ಜೆ ಸಂಸ್ಥಾಪಕ ಡಿ.ವಿ.ಗುಂಡಪ್ಪ (ಡಿ.ವಿ.ಜಿ) ಅವರ ಜಯಂತಿಯನ್ನು ನಗರದ ಪತ್ರಕರ್ತರ ಭವನದಲ್ಲಿ ಸಂಘದ ಅಧ್ಯಕ್ಷ ಬಿ.ವಿ.ಗೋಪಿನಾಥ್ ಅಧ್ಯಕ್ಷತೆಯಲ್ಲಿ ಸೋಮವಾರ ಆಚರಿಸಲಾಯಿತು.ಈ ಸಂದರ್ಭದಲ್ಲಿ ಪತ್ರಕರ್ತರು ಡಿವಿಜಿ ಅವರ ಭಾವಚಿತ್ರಕ್ಕೆ ಪುಷ್ಪ ನಮನ ಸಲ್ಲಿಸಿ ಸ್ಮರಿಸಿದರು.ಡಿವಿಜಿ ಅವರ ಪ್ರಸಿದ್ಧ “ಮಂಕುತಿಮ್ಮನ ಕಗ್ಗ” ಸಾಹಿತ್ಯದ ಹುಲ್ಲಾಗು ಬೆಟ್ಟದಡಿ, ಮನೆಗೆ ಮಲ್ಲಿಗೆಯಾಗು, ಕಲ್ಲಾಗು ಕಷ್ಟಗಳ ಮಳೆಯ ವಿಧಿ ಸುರಿಯೆಟ ಬೆಲ್ಲ-ಸಕ್ಕರೆಯಾಗು ದೀನದುರ್ಬಲರಿಂಗೆಟ ಎಲ್ಲರೊಳಗೊಂದಾಗು ಮಂಕುತಿಮ್ಮ ಸೇರಿದಂತೆ ಕೆಲ ಸಾಲುಗಳನ್ನು ವಾಚನ ಮಾಡಿ ಅರ್ಥ ತಿಳಿದುಕೊಳ್ಳಲಾಯಿತು.ಪತ್ರಕರ್ತ ಕೆ.ಓಂಕಾರ […]

ಕೋಲಾರ,ಮಾ.17: ನಾನು ಎಷ್ಟೇ ಎತ್ತರಕ್ಕೆ ಬೆಳೆದಿದ್ದರೂ ಸಹ ನನ್ನ ಬೇರುಗಳು ಇರುವುದು ಕೋಲಾರದ ನೆಲದಲ್ಲಿಯೇ ಹಾಗಾಗಿ ನನ್ನ ಜನ್ಮಭೂಮಿ ಮತ್ತು ಕರ್ಮಭೂಮಿಯಾಗಿರುವ ಕೋಲಾರದ ಋಣವನ್ನು ತೀರಿಸಲು ನಿರಂತರವಾಗಿ ಶ್ರಮಿಸುವೆ ಎಂದು ಮುಖ್ಯಮಂತ್ರಿಗಳ ಮಾಧ್ಯಮ ಸಲಹೆಗಾರ ಕೆ.ವಿ.ಪ್ರಭಾಕರ್ ನುಡಿದರು.ಕೋಲಾರ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘವು ಸ್ಥಾಪಿಸಿರುವ ಒಂದುಕೋಟಿ ರೂಗಳ ಪತ್ರಕರ್ತರ ಕಲ್ಯಾಣನಿಧಿಗೆ ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರಿಂದ ಕರ್ನಾಟಕ ಸರ್ಕಾರದ 25 ಲಕ್ಷ ರೂಗಳ ಅನುದಾನವನ್ನು ಕೊಡುಗೆಯಾಗಿ ಕೊಡಿಸಿರುವ ಮುಖ್ಯಮಂತ್ರಿಗಳ ಮಾಧ್ಯಮ ಸಲಹೆಗಾರ ಕೆ.ವಿ.ಪ್ರಭಾಕರ್ ಅವರಿಗೆ ಪತ್ರಕರ್ತರ ಸಂಘದಿಂದ ಭಾನುವಾರ […]

ಶ್ರೀನಿವಾಸಪುರ 1 : ಕಚೇರಿಯಲ್ಲಿ ಆಸನ ವ್ಯವಸ್ಥೆ ಇಲ್ಲ, ಶೌಚಾಲಯದ ವ್ಯವಸ್ಥೆ, ಕುಡಿಯುವ ನೀರಿನ ವ್ಯವಸ್ಥೆ ಇಲ್ಲ ಎಂದು ಸಾರ್ವಜನಿಕರ ಪ್ರಶ್ನೆಗೆ ಉತ್ತರಿಸಿ, ಮುಂದಿನ ದಿನಗಳಲ್ಲಿ ಪ್ರತಿಯೊಂದು ಹಂತ ಹಂತವಾಗಿ ವ್ಯವಸ್ಥೆ ಮಾಡಿಕೊಡಲಾಗುವುದು ಎಂದು ಜಿಲ್ಲಾಧಿಕಾರಿ ರವಿ ಭರವಸೆ ನೀಡಿದರು.ಪಟ್ಟಣದ ತಹಶೀಲ್ದಾರ್ ಕಚೇರಿಗೆ ಬುಧವಾರ ದೀಡಿರ್ ಬೇಟಿ ನೀಡಿ ಕಚೇರಿಯಲ್ಲಿನ ದಾಖಲೆಗಳನ್ನು ಪರಿಶೀಲಿಸಿ ಮಾತನಾಡಿದರು.ದಾಖಲೆಗಳು ಕೆಲವೊಮ್ಮೆ ಹರಿದುಹೋಗುತ್ತದೆ. ಕಳೆದುಹೋಗುವ ಸಂದರ್ಭವು ಇರಬಹುದು , ಮೂಲ ದಾಖಲೆಗಳು ನಾಪತ್ತೆಯಾಗುವುದು ಈ ಹಿನ್ನೆಲೆಯಲ್ಲಿ ಇಲಾಖೆ ವತಿಯಿಂದ ದಾಖಲೆಗಳನ್ನು ಡಿಜಟಲೀಕರಣ ಮೂಲಕ […]

ಕೋಲಾರ:- ಎಸ್ಸೆಸ್ಸೆಲ್ಸಿ ಮಕ್ಕಳಲ್ಲಿನ ಪರೀಕ್ಷಾ ಗೊಂದಲ ನಿವಾರಣೆಗಾಗಿ ಮಾ.13 ರ ಗುರುವಾರ ಬೆಳಗ್ಗೆ 11 ಗಂಟೆಯಿಂದ ಮಧ್ಯಾಹ್ನ 2 ಗಂಟೆಯವರೆಗೂ ನಗರದ ಶಾಲಾ ಶಿಕ್ಷಣ ಇಲಾಖೆಯ ಉಪನಿರ್ದೇಶಕರ ಕಚೇರಿಯ ಡಿವಿಜಿ ಸಭಾಂಗಣದಲ್ಲಿ `ಫೋನ್ ಇನ್ ಕಾಯಕ್ರಮ’ ಹಮ್ಮಿಕೊಳ್ಳಲಾಗಿದೆ ಎಂದು ಡಿಡಿಪಿಐ ಕೃಷ್ಣಮೂರ್ತಿ ತಿಳಿಸಿದ್ದಾರೆ.ಈ ಕುರಿತು ಮಾಹಿತಿ ನೀಡಿರುವ ಅವರು, ಫೋನ್ ಇನ್ ಕಾರ್ಯಕ್ರಮದಲ್ಲಿ ತಮ್ಮೊಂದಿಗೆ ಶಿಕ್ಷಣಾಧಿಕಾರಿಗಳು, ವಿಷಯ ಪರಿವೀಕ್ಷಕರು, ವಿಷಯ ಸಂಪನ್ಮೂಲ ವ್ಯಕ್ತಿಗಳು ಪಾಲ್ಗೊಳ್ಳಲಿದ್ದು, ವಿದ್ಯಾರ್ಥಿಗಳು ಭಾಷಾ ಮತ್ತು ಐಚ್ಚಿಕ ವಿಷಯಗಳಿಗೆ ಮತ್ತು ಪರೀಕ್ಷೆಗೆ ಸಂಬಂಧಿಸಿದ ಗೊಂದಲಗಳಿದ್ದರೆ […]