
ವರದಿ: ಶಬ್ಬೀರ್ ಅಹಮ್ಮದ್ ಶ್ರೀನಿವಾಸಪುರ ಕೋಲಾರ:- ಕೋವಿಡ್ ಆತಂಕದ ನಡುವೆಯೇ ಸಕಲ ರೀತಿಯ ಮುಂಜಾಗ್ರತೆ ವಹಿಸಿ ಅ.4 ರಂದು ಶಿಕ್ಷಕರ ಅರ್ಹತಾ ಪರೀಕ್ಷೆಗೆ ಸಾರ್ವಜನಿಕ ಶಿಕ್ಷಣ ಇಲಾಖೆ ಸಿದ್ದತೆ ನಡೆಸಿದ್ದು, ಪ್ರಾಥಮಿಕ ಶಿಕ್ಷಕರಗಲು 1917 ಹಾಗೂ ಪ್ರೌಢಶಿಕ್ಷಕರಾಗಲು 3613 ಮಂದಿ ಸೇರಿ ಒಟ್ಟು 5530 ಅಭ್ಯರ್ಥಿಗಳು ನಗರದ 14 ಕೇಂದ್ರಗಳಲ್ಲಿ ಪರೀಕ್ಷೆ ಬರೆಯಲಿದ್ದಾರೆ ಎಂದು ಡಿಡಿಪಿಐ ಕೆ.ಎಂ.ಜಯರಾಮರೆಡ್ಡಿ ತಿಳಿಸಿದರು.ಇಲಾಖೆಯ ಸಭಾಂಗಣದಲ್ಲಿ ಪರೀಕ್ಷಾ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡುತ್ತಿದ್ದ ಅವರು, ಕೋವಿಡ್ ಆತಂಕದ ಹಿನ್ನಲೆಯಲ್ಲಿ ಇಲಾಖೆ ಎಲ್ಲಾ […]

ವರದಿ: ಶಬ್ಬೀರ್ ಅಹಮ್ಮದ್ ಶ್ರೀನಿವಾಸಪುರ ಕೋಲಾರ:- ಕರ್ತವ್ಯ ನಿರ್ವಹಣೆಯಲ್ಲಿ ಉತ್ಸಾಹ,ಕಚೇರಿಗೆ ಬರುವವರ ಸಮಸ್ಯೆಗಳಿಗೆ ಸ್ಪಂದಿಸುವಲ್ಲಿ ತೋರುವ ದಕ್ಷತೆ ಇತರೆ ಸಿಬ್ಬಂದಿಗೆ ಮಾದರಿಯಾಗಲಿ ಎಂದು ಜಿಲ್ಲಾ ಖಜಾನೆ ಉಪನಿರ್ದೇಶಕಿ ಎನ್.ರುಕ್ಮಿಣಿದೇವಿ ತಿಳಿಸಿದರು.ಜಿಲ್ಲಾ ಖಜಾನೆಯಲ್ಲಿ ಸತತ 35 ವರ್ಷಗಳ ಸೇವೆಯ ನಂತರ ನಿವೃತ್ತರಾದ ಸಹಾಯಕ ಖಜಾನಾಧಿಕಾರಿ ರಾಮಮೂರ್ತಿ ಅವರನ್ನು ಖಜಾನೆ ಇಲಾಖೆ,ಶಿಕ್ಷಣ,ಪದವಿ ಪೂರ್ವ ಶಿಕ್ಷಣ, ಸಿಡಿಪಿಒ,ವಿಕಲಚೇತನರ ಇಲಾಖೆ ಸೇರಿದಂತೆ ವಿವಿಧ ಇಲಾಖೆಗಳಿಂದ ಸನ್ಮಾನಿಸಿ ಬೀಳ್ಕೊಟ್ಟು ಅವರು ಮಾತನಾಡುತ್ತಿದ್ದರು.ಕರ್ತವ್ಯದಲ್ಲಿ ತೋರಿದ ಪ್ರಾಮಾಣಿಕತೆ, ಮಾಡಿದ ಕೆಲಸದಿಂದ ಆತ್ಮತೃಪ್ತಿ ಸಿಕ್ಕರೆ ನಿವೃತ್ತಿ ಜೀವನದಲ್ಲಿ ಹೆಚ್ಚು […]

ವರದಿ: ಶಬ್ಬೀರ್ ಅಹಮ್ಮದ್ ಶ್ರೀನಿವಾಸಪುರ ಕೋಲಾರ:- ಬೆಂಗಳೂರು ಉತ್ತರ ವಿವಿಯಲ್ಲೇ ಅತಿ ಹೆಚ್ಚು ವಿದ್ಯಾರ್ಥಿನಿಯರನ್ನು ಒಳಗೊಂಡ ಸರ್ಕಾರಿ ಮಹಿಳಾ ಕಾಲೇಜಿನಲ್ಲಿ ಸಮಸ್ಯೆಗಳಿಗೆ ತಾಳ್ಮೆಯಿಂದ ಸ್ಪಂದಿಸಿ ಸಮಸ್ಯೆ ಪರಿಹರಿಸುತ್ತಿದ್ದ ಸಜ್ಜನ ಅಧೀಕ್ಷಕ ಗೋಪಿನಾಥ್ ಎಂದು ಕಾಲೇಜಿನ ಪ್ರಾಂಶುಪಾಲ ಪ್ರೊ.ಗಂಗಾಧರರಾವ್ ಶ್ಲಾಘಿಸಿದರು.ಕಾಲೇಜು ಶಿಕ್ಷಣ ಇಲಾಖೆಯಲ್ಲಿ ಸತತ 36 ವರ್ಷಗಳ ಸೇವೆಯ ನಂತರ ಇಂದು ನಿವೃತ್ತರಾದ ಸರ್ಕಾರಿ ಮಹಿಳಾ ಕಾಲೇಜಿನ ಅಧೀಕ್ಷಕ ಗೋಪಿನಾಥ್‍ಅವರನ್ನು ಕಾಲೇಜಿನ ಉಪನ್ಯಾಸಕರ ಸಂಘ ಹಾಗೂ ಸಿಬ್ಬಂದಿ ಸನ್ಮಾನಿಸಿ ಬೀಳ್ಕೊಟ್ಟ ಸಂದರ್ಭದಲ್ಲಿ ಅವರು ಮಾತನಾಡುತ್ತಿದ್ದರು.ಸುಮಾರು 3600 ವಿದ್ಯಾರ್ಥಿನಿಯರು ವ್ಯಾಸಂಗ […]

ವರದಿ ಶಬ್ಬೀರ್ ಅಹಮ್ಮದ್ ಶ್ರೀನಿವಾಸಪು ಶ್ರೀನಿವಾಸಪುರ: ಇಲ್ಲಿನ ತಾಲ್ಲೂಕು ಕಚೇರಿ ಎದುರು ಮಂಗಳವಾರ ರಾಜ್ಯ ಆರೋಗ್ಯ ಹಾಗೂ ಕುಟುಂಬ ಕಲ್ಯಾಣ, ವೈದ್ಯಕೀಯ ಶಿಕ್ಷಣ, ಗುತ್ತಿಗೆ ಹಾಗೂ ಹೊರ ಗುತ್ತಿಗೆ ನೌಕರ ಸಂಘದ ಸದಸ್ಯರು ತಮ್ಮ ಬೇಡಿಕೆಗಳನ್ನು ಈಡೇರಿಸುವಂತೆ ಸರ್ಕಾರವನ್ನು ಆಗ್ರಹಿಸಿ ಪ್ರತಿಭಟನೆ ನಡೆಸಿದರು.ಸಂಘದ ತಾಲ್ಲೂಕು ಘಟಕದ ಅಧ್ಯಕ್ಷ ವಿ.ಶಿವಕುಮಾರ್ ಮಾತನಾಡಿ ಕೋವಿಡ್ –19 ಸಂಕಷ್ಟದ ನಡುವೆ ಈ ಸಂಘಟನೆಯ ನೌಕರರು ಜೀವದ ಮೇಲೆ ಹಂಗು ತೊರೆದು ರೋಗಿಗಳ ಸೇವೆಯಲ್ಲಿ ತೊಡಗಿದ್ದಾರೆ. ಸೋಂಕು ತಡೆಯಲು ಪೂರಕವಾಗಿ ಶ್ರಮಿಸುತ್ತಿದ್ದಾರೆ. ಆದರೂ […]

ವರದಿ: ಶಬ್ಬೀರ್ ಅಹಮ್ಮದ್ ಶ್ರೀನಿವಾಸಪುರ ಕೋಲಾರ, ಸೆ.29 : ಎ.ಪಿಎಂಸಿ ಮಾರುಕಟ್ಟೆಯ ಜಾಗದ ಸಮಸ್ಯೆ ಬಗೆಹರಿಸಿ ಮತ್ತು ಎಸ್‍ಎನ್‍ಆರ್ ಜಿಲ್ಲಾಸ್ಪತ್ರೆಯಲ್ಲಿ ಖಾಲಿಯಿರುವ ವೆಂಟಿಲೇಟರ್ ತಜ್ಞರು ಹಾಗೂ ವೈದ್ಯಕೀಯ ಸಿಬ್ಬಂದಿ ಕೂಡಲೇ ಖಾಯಂಆಗಿ ಭರ್ತಿ ಮಾಡಿ, ಸಾರ್ವಜನಿಕರಿಗೆ ಅನುಕೂಲ ಕಲ್ಪಿಸುವಂತೆ ಒತ್ತಾಯಿಸಿ ರೈತ ಸಂಘದಿಂದ ಜಿಲ್ಲಾ ಉಸ್ತುವಾರಿ ಸಚಿವರಿಗೆ ಮನವಿ ನೀಡಿ ಒತ್ತಾಯಿಸಲಾಯಿತು. ಮನವಿ ನೀಡಿ ಮಾತನಾಡಿದ ರಾಜ್ಯ ಉಪಾದ್ಯಕ್ಷ ಕೆ.ನಾರಾಯಣಗೌಡ ಈ ಹಿಂದೆ ಮಡಿವಾಳ ಗ್ರಾಮದ ಬಳಿ ಮಾರುಕಟ್ಟೆಗೆ ಸ್ಥಳ ಪರೀಶೀಲನೆ ಮಾಡಿ, ಮಾರುಕಟ್ಟೆಯ ಜಾಗದ ಸಮಸ್ಯೆಯನ್ನು […]

ವರದಿ: ಶಬ್ಬೀರ್ ಅಹಮ್ಮದ್ ಶ್ರೀನಿವಾಸಪುರ ಕೋಲಾರ,ಸೆ.28: ಕೋಲಾರ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಕಟ್ಟಡದ ನವೀಕರಣ ಕಾಮಗಾರಿಯನ್ನು ಸುಮಾರು 26 ಲಕ್ಷ ವೆಚ್ಚದಲ್ಲಿ ನಡೆಸಲು ತೀರ್ಮಾನಿಸಲಾಗಿತ್ತು.ಈ ಕಾಮಗಾರಿಯ ಸಂಪೂರ್ಣ ವೆಚ್ಚವನ್ನ ಮುಳಬಾಗಿಲು ಕ್ಷೇತ್ರದ ಮಾಜಿ ಶಾಸಕ ಕೊತ್ತೂರು ಮಂಜುನಾಥ್ ಅವರು ಭರಿಸುವುದಾಗಿ ಒಪ್ಪಿಕೊಂಡಿದ್ದರು. ಅದರಂತೆ ಕಳೆದ ಆಗಸ್ಟ್ 14 ರಂದು ಮೊದಲನೇ ಕಂತಾಗಿ 10 ಲಕ್ಷ ರೂ ಹಾಗೂ ಸೆಪ್ಟೆಂಬರ್ 28 ರಂದು ಎರಡನೇ ಕಂತಾಗಿ 10 ಲಕ್ಷ ರೂ.ಗಳನ್ನು ಕೋಲಾರ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ […]

ವರದಿ: ಶಬ್ಬೀರ್ ಅಹಮ್ಮದ್ ಶ್ರೀನಿವಾಸಪುರ ಪಟ್ಟಣದಲ್ಲಿ ಅಂಗಡಿ ಮುಂಗಟ್ಟು ಮುಚ್ಚಲ್ಪಟ್ಟಿತ್ತು. ಆಟೋ ಸೇರಿದಂತೆ ಯಾವುದೇ ವಾಹನ ಸಂಚಾರ ಇರಲಿಲ್ಲ. ಪೆಟ್ರೋಲ್ ಬಂಕ್‌ಗಳು ಕಾರ್ಯನಿರ್ವಹಿಸಲಿಲ್ಲ. ಸರ್ಕಾರಿ ಕಚೇರಿಗಳು ತೆರೆದಿದ್ದವಾದರೂ ಜನರಿಲ್ಲದೆ ಬಿಕೋ ಎನ್ನುತ್ತಿದ್ದವು. ಬೆಳಿಗ್ಗೆ ಗ್ರಾಮೀಣ ಪ್ರದೇಶದಿಂದ ಅಗತ್ಯ ವಸ್ತುಗಳ ಮಾರಾಟ ಹಾಗೂ ಖರೀದಿಗಾಗಿ ಬಂದಿದ್ದ ಜನರು ಸಮೀಪದ ಗ್ರಾಮಗಳಿಗೆ ನಡೆದು ಹೋಗುವ ದೃಶ್ಯ ಸಮಾನ್ಯವಾಗಿತ್ತು. ತಾಲ್ಲೂಕಿನ ರಾಯಲ್ಪಾಡ್, ಗೌನಿಪಲ್ಲಿ, ಸೋಮಯಾಜಲಹಳ್ಳಿ, ಲಕ್ಷ್ಮೀಸಾಗರ, ರೋಜೇನಹಳ್ಳಿ ಕ್ರಾಸ್, ರೋಣೂರು, ಯಲ್ದೂರು ಗ್ರಾಮಗಳಲ್ಲಿ ಬಂದ್ ವಿವಿಧ ಸಂಘಟನೆಗಳ ಮುಖಂಡರಾದ […]

ವರದಿ: ಶಬ್ಬೀರ್ ಅಹಮ್ಮದ್ ಶ್ರೀನಿವಾಸಪುರ ಕೋಲಾರ: ಕೋಲಾರ ಜಿಲ್ಲಾ ಕುರುಬರ ಸಂಘದಿಂದ ಪ್ರತಿಭಾ ಪುರಸ್ಕಾರವನ್ನು ಮಾಡಲಾಗುತ್ತದೆ ಎಂದು ಜಿಲ್ಲಾಧ್ಯಕ್ಷ ತಂಬಳ್ಳಿ ಮುನಿಯಪ್ಪ ಹೇಳಿದರು.ಕುವೆಂಪು ನಗರದಲ್ಲಿರುವ ಕುರುಬರ ಸಂಘದ ಹಾಸ್ಟೆಲ್‍ನಲ್ಲಿ ನಡೆದ ಸಭೆಯಲ್ಲಿ ಮಾತನಾಡಿ, ಕಳೆದ ವರ್ಷ 300ಕ್ಕೂ ಹೆಚ್ಚು ಪಿಯುಸಿ ಮತ್ತು ಎಸೆಸ್ಸೆಲ್ಸಿ ಪ್ರತಿಭೆಗಳಿಗೆ ಪುರಸ್ಕಾರ ಮಾಡಲಾಗಿದ್ದು ಈ ವರ್ಷ ಎಲ್ಲಾ ತಾಲೂಕುಗಳ ಸಮುದಾಯದ ತಾಲೂಕು ಅಧ್ಯಕ್ಷರು ಸಭೆಗಳನ್ನು ನಡೆಸಿ ಅರ್ಜಿಗಳನ್ನು ಕ್ರೋಡೀಕರಿಸಿದ ನಂತರ ಜಿಲ್ಲಾ ಮಟ್ಟದಲ್ಲಿ ಎಸ್ ಎಸ್ ಎಲ್ ಸಿ ಹಾಗೂ ಪಿಯುಸಿಯಲ್ಲಿ ಶೇ. […]

ವರದಿ : ವರದಿ : ವಾಲ್ಟರ್ ಮೊಂತೇರೊ, ಬೆಳ್ಮಣ್ಣು ರೋಟರಿ ಕ್ಲಬ್ ಬೆಳ್ಮಣ್, ಪ್ರಾಥಮಿಕ ಆರೋಗ್ಯ ಕೇಂದ್ರ ಬೆಳ್ಮಣ್ ಹಾಗೂ ವಿವಿಧ ಅಂಗನವಾಡಿ ಕೇಂದ್ರಗಳ ಸಹಯೋಗದಲ್ಲಿ ಅಂತಾರಾಷ್ಟ್ರೀಯ ಪೌಷ್ಟಿಕಾಆಹಾರ ಸಪ್ತಾಹ ಕಾರ್ಯಕ್ರಮವನ್ನು ಬೆಳ್ಮಣ್ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಹಮ್ಮಿಕೊಂಡಿದ್ದು, ಪ್ರಾಥಮಿಕ ಆರೋಗ್ಯ ಕೇಂದ್ರದ ವೈದ್ಯಾಧಿಕಾರಿ ಡಾ| ಬಿ. ಬಾಲಕೃಷ್ಣ ರಾವ್ ಸಂಪನ್ಮೂಲ ವ್ಯಕ್ತಿಯಾಗಿ ಭಾಗವಹಿಸಿ ಪೌಷ್ಟಿಕ ಆಹಾರದ ಮಹತ್ವ ಹಾಗೂ ಪೌಷ್ಟಿಕ ಆಹಾರದ ಸೇವನೆಯಿಂದ ಆಗುವ ಪ್ರಯೋಜನಗಳ ಬಗ್ಗೆ ವಿಸ್ತೃತವಾದ ಮಾಹಿತಿಯನ್ನು ನೀಡಿದರು. ಮುಖ್ಯ ಅತಿಥಿಗಳಾಗಿ ಆಗಮಿಸಿದ ಅಂಗನವಾಡಿ […]