
ವರದಿ : ಶಬ್ಬೀರ್ ಅಹ್ಮದ್, ಶ್ರೀನಿವಾಸಪುರ ಶ್ರೀನಿವಾಸಪುರ: ಹೆದ್ದಾರಿ ಅಭಿವೃದ್ಧಿ ಪ್ರಾಧಿಕಾರದಿಂದ ಪರಿಹಾರ ಧನವನ್ನು ಪಡೆಯುವ ಫಲಾನುಭವಿಗಳು ಉತ್ಪಾದನಾ ಚಟುವಟಿಕೆಯಲ್ಲಿ ತೊಡಗಿಸಬೇಕು. ಎಂದು ತಹಶೀಲ್ದಾರ್ ಎಸ್.ಎಂ.ಶ್ರೀನಿವಾಸ್ ಹೇಳಿದರು.ಪಟ್ಟಣದ ಸರ್ಕಾರಿ ನೌಕರರ ಭವನದಲ್ಲಿ ಕರ್ನಾಟಕ ರಾಜ್ಯ ಹೆದ್ದಾರಿ ಅಭಿವೃದ್ಧಿ ಯೋಜನೆ ಹಾಗೂ ಸ್ಕೊಡ್ವೆಸ್ ಸಂಸ್ಥೆ ವತಿಯಿಂದ ಹೆದ್ದಾರಿ ಬದಿ ವ್ಯಾಪಾರಿಗಳಿಗಾಗಿ ಏರ್ಪಡಿಸಿದ್ದ ಆದಾಯ ಉತ್ಪನ್ನ ಚಟುವಟಿಕೆ ಕಾರ್ಯಾಗಾರ ಉದ್ಘಾಟಿಸಿ ಮಾತನಾಡಿ, ಚಿಂತಾಮಣಿಯಿಂದ ಆಂಧ್ರಪ್ರದೇಶದ ಗಡಿಯ ವರೆಗಿನ ಅಂತರ ರಾಜ್ಯ ಹೆದ್ದಾರಿ ಬದಿಯಲ್ಲಿ ವ್ಯಾಪಾರ ಚಟುವಟಿಕೆ ನಡೆಸುತ್ತಿದ್ದ 143 ಫಲಾನುಭವಿಗಳಿಗೆ […]

ವರದಿ ಶಬ್ಬೀರ್ ಅಹಮ್ಮದ್ ಶ್ರೀನಿವಾಸಪುರ ಕೋಲಾರ : ವೇಮಗಲ್ನ “ ಸೀತಿ ಬೆಟ್ಟಕ್ಕೆ ಹಸಿರು ಹೊದಿಕೆ ” ಎಂಬ ಕಾರ್ಯಕ್ರಮಕ್ಕೆ ಗಿಡಗಳನ್ನು ಹಸ್ತಾಂತರಿಸಿ ಹಾಗೂ ಗಿಡ ನೆಡುವ ಮೂಲಕ ಕಾರ್ಯಕ್ರಮಕ್ಕೆ ಕೋಲಾರ ಜಿಲ್ಲಾಧಿಕಾರಿಗಳಾದ ಸಿ ಸತ್ಯಭಾಮ ಅವರು ಚಾಲನೆ ನೀಡಿದರು . ನಿವೃತ್ತ IAS ಅಧಿಕಾರಿಗಳಾದ ಅಮರನಾರಾಯಣ ರವರು ತಮ್ಮ ” ಬೋಳು ಬೆಟ್ಟಕ್ಕೆ ಬನದ ಮೆರಗು ” ಎಂಬ ಪರಿಕಲ್ಪನೆಯಲ್ಲಿ ಸೀತಿ ಬೆಟ್ಟದಲ್ಲಿ ವಿವಿಧ ಜಾತಿಯ ಸುಮಾರು ಒಂದು ಸಾವಿರ ಗಿಡಗಳನ್ನು ನೆಡವ ಕಾರ್ಯವನ್ನು ನೆರವೇರಿಸಿ […]

ವರದಿ ಶಬ್ಬೀರ್ ಅಹಮ್ಮದ್ ಶ್ರೀನಿವಾಸಪು ಕೋಲಾರ : ಟೈಪ್ 2 , ಟೈಪ್ -3 ನಗರಗಳಲ್ಲಿ ಕೈಗಾರಿಕಾ ಅಭಿವೃದ್ಧಿ ಮಾಡಲು ಸರ್ಕಾರದಿಂದ ಒತ್ತು ನೀಡಲಾಗುತ್ತಿದೆ ಎಂದು ಬೃಹತ್ ಮತ್ತು ಮಧ್ಯಮ ಹಾಗೂ ಸಾರ್ವಜನಿಕ ಉದ್ದಿಮೆ ಸಚಿವರಾದ ಜಗದೀಶ ಶೆಟ್ಟರ ಅವರು ತಿಳಿಸಿದರು . ಇಂದು ಜಿಲ್ಲೆಯ ಕೆ.ಜಿ.ಎಫ್ ತಾಲ್ಲೂಕಿನ ಭಾರತ್ ಗೋಲ್ಡ್ ಮೈನ್ಸ್ ಲಿನ ಸ್ಥಳ ವೀಕ್ಷಣೆ ಮಾಡಿ ನಂತರ ಬಿ.ಇ.ಎಂ.ಎಲ್ ಗೆಸ್ಟ್ ಹೌಸ್ನಲ್ಲಿ ಪತ್ರಿಕಾಗೋಷ್ಠಿಯನ್ನು ಉದ್ದೇಶಿಸಿ ಅವರು ಮಾತನಾಡಿದರು , ಬಿಜಿಎಂಎಲ್ ಒಡೆತನದ ಭೂಮಿಯಲ್ಲಿ ಕೈಗಾರಿಕೆಗಳನ್ನು […]

ವರದಿ ಶಬ್ಬೀರ್ ಅಹಮ್ಮದ್ ಶ್ರೀನಿವಾಸಪುರ ಶ್ರೀನಿವಾಸಪುರ: ವಿದ್ಯಾರ್ಥಿಗಳು ಸಾಧನೆಯ ಹಾದಿಯಲ್ಲಿ ಸಾಗಬೇಕು. ಶಿಕ್ಷಣದಿಂದ ಬದುಕು ಕಂಡುಕೊಳ್ಳಬೇಕು ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಉಮಾದೇವಿ ಹೇಳಿದರು. ಪಟ್ಟಣದ ಸರ್ಕಾರಿ ನೌಕರರ ಭವನದಲ್ಲಿ ಕರ್ನಾಟಕ ರಾಜ್ಯ ಎಸ್ಸಿ, ಎಸ್ಟಿ ಪ್ರಾಥಮಿಕ ಹಾಗೂ ಮಾಧ್ಯಮಿಕ ಶಾಲಾ ಶಿಕ್ಷಕರ ಕ್ಷೇಮಾಭಿವೃದ್ಧಿ ಸಂಘದ ವತಿಯಿಂದ ಎಸ್ಸೆಸ್ಸೆಲ್ಸಿ ಹಾಗೂ ಪಿಯುಸಿ ಪರೀಕ್ಷೆಯಲ್ಲಿ ಹೆಚ್ಚು ಅಂಕ ಗಳಿಸಿದ ವಿದ್ಯಾರ್ಥಿಗಳಿಗೆ ಶನಿವಾರ ಏರ್ಪಡಿಸಿದ್ದ ಸನ್ಮಾನ ಮಾರಂಭ ಉದ್ಘಾಟಿಸಿ ಮಾತನಾಡಿ, ಪೋಷಕರು ತಮ್ಮ ಮಕ್ಕಳ ವಿದ್ಯಾಭ್ಯಾಸಕ್ಕೆ ಹೆಚ್ಚಿನ ಗಮನ ನೀಡಬೇಕು ಎಂದು […]

ವರದಿ : ಶಬ್ಬೀರ್ ಅಹ್ಮದ್, ಶ್ರೀನಿವಾಸಪುರ ಕೋಲಾರ,ಆ.29: ಮೂಲೆ ಗುಂಪಾಗುತ್ತಿರುವ ಉತ್ತಮ ಬರಹಗಾರರನ್ನು ಹಾಗೂ ಯುವ ಬರಹಗಾರನ್ನು ಗುರ್ತಿಸಿ ಸನ್ಮಾನಿಸಿ: ವಿ. ಮುನಿರಾಜು ಕೋಲಾರ,ಆ.29: ಜಿಲ್ಲೆಯಲ್ಲಿ ಮೂಲೆ ಗುಂಪಾಗುತ್ತಿರುವ ಉತ್ತಮ ಬರಹಗಾರರನ್ನು ಹಾಗೂ ಯುವ ಬರಹಗಾರನ್ನು ಗುರ್ತಿಸುವ ನಿಟ್ಟಿನಲ್ಲಿ ವಿಕೆಎಫ್ ಸಂಸ್ಥೆ ಉತ್ತಮ ಸೇವೆಯನ್ನು ಮಾಡುತ್ತಿದೆ ಎಂದು ಕೋಲಾರ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಜಿಲ್ಲಾಧ್ಯಕ್ಷ ವಿ. ಮುನಿರಾಜು ಅವರು ಹೇಳಿದರು. ಇಲ್ಲಿನ ಮುನೇಶ್ವರ ನಗರದ ಬಡಾವಣೆಯಲ್ಲಿ ವಿಶ್ವ ಮಾನವ ಕುವೆಂಪು ಫೌಂಡೇಷನ್ ವತಿಯಿಂದ ಸಾಹಿತಿ ಹಾಗೂ […]

ವರದಿ : ಶಬ್ಬೀರ್ ಅಹ್ಮದ್, ಶ್ರೀನಿವಾಸಪುರ ಕೋಲಾರ:- ಕೋಲಾರ,ಚಿಕ್ಕಬಳ್ಳಾಪುರ ಡಿಸಿಸಿ ಬ್ಯಾಂಕ್ ವತಿಯಿಂದ ದಕ್ಷಿಣ ಕಸಬಾ ಸೊಸೈಟಿ ಆಶ್ರಯದಲ್ಲಿ ಮಹಿಳಾ ಸಂಘಗಳಿಗೆ 1.5 ಕೋಟಿ ರೂ ಸಾಲ ವಿತರಣೆ ಕಾರ್ಯಕ್ರಮವನ್ನು ಆ.29ರ ಶನಿವಾರ ಬೆಳಗ್ಗೆ 11-30 ಗಂಟೆಗೆ ತಾಲ್ಲೂಕಿನ ದೊಡ್ಡಹಸಾಳ ಗ್ರಾ.ಪಂ ಆವರಣದಲ್ಲಿ ಶಾಸಕ ಕೆ.ಶ್ರೀನಿವಾಸಗೌಡ ಉದ್ಘಾಟಿಸುವರು.ಕಾರ್ಯಕ್ರಮದ ಅಧ್ಯಕ್ಷತೆಯನ್ನು ಬ್ಯಾಂಕಿನ ಅಧ್ಯಕ್ಷರಾದ ಬ್ಯಾಲಹಳ್ಳಿ ಗೋವಿಂದಗೌಡರು ವಹಿಸಲಿದ್ದು, ಬ್ಯಾಂಕಿನ ನಿರ್ದೇಶಕರಾದ ಎಂ.ಎಲ್.ಅನಿಲ್ಕುಮಾರ್, ನಾಗನಾಳಸೋಮಣ್ಣ, ಕೆ.ವಿ.ದಯಾನಂದ್, ಯಲವಾರಸೊಣ್ಣೆಗೌಡ, ವ್ಯವಸ್ಥಾಪಕ ನಿರ್ದೇಶಕ ರವಿ, ಕಸಬಾ ಎಸ್ಎಫ್ಸಿಎಸ್ ಅಧ್ಯಕ್ಷ ಚೋಳಘಟ್ಟ ಶ್ರೀನಿವಾಸ್ ಉಪಸ್ಥಿತರಿರುವರು […]

ವರದಿ : ಶಬ್ಬೀರ್ ಅಹ್ಮದ್, ಶ್ರೀನಿವಾಸಪುರ ಕೋಲಾರ:- ವಿದ್ಯಾಗಮ ವಿನೂತನ ಯೋಜನೆಯಾಗಿದ್ದು, ಇದನ್ನು ವಿದ್ಯಾರ್ಥಿಕ್ರೇಂದ್ರೀಕೃತವಾಗಿಸಿ ಪೋಷಕರು, ಎಸ್ಡಿಎಂಸಿ ಸಹಕಾರ, ಸ್ವಯಂಸೇವಕರ ಸಹಭಾಗಿತ್ವದಲ್ಲಿ ಪರಿಣಾಮಕಾರಿಯಾಗಿ ಅನುಷ್ಟಾನಗೊಳಿಸಿ ಎಂದು ಕ್ಷಣ ಗುಣಮಟ್ಟ ವಿಭಾಗದ ನಿರ್ದೇಶಕರೂ ಹಾಗೂ ವಿದ್ಯಾಗಮನ ಯೋಜನೆಯ ರಾಜ್ಯ ನೋಡಲ್ ಅಧಿಕಾರಿ ಗೋಪಾಲಕೃಷ್ಣ ಸೂಚನೆ ನೀಡಿದರು.ಜಿಲ್ಲೆಗೆ ಆಗಮಿಸಿದ್ದ ಅವರು ನಗರದ ಡಿಡಿಪಿಐ ಕಚೇರಿಯಲ್ಲಿ ವಿದ್ಯಾಗಮ ಯೋಜನೆಯ ಪ್ರಗತಿ ಪರಿಶೀಲನೆ ನಡೆಸಿ ಅಧಿಕಾರಿಗಳನ್ನುದ್ದೇಶಿಸಿ ಮಾತನಾಡುತ್ತಿದ್ದ ಅವರು, ಎಸ್ಸೆಸ್ಸೆಲ್ಸಿ ಉತ್ತಮ ಫಲಿತಾಂಶ ಸಾಧನೆಗಾಗಿ ಅಭಿನಂದನೆ ಸಲ್ಲಿಸಿದರು.ತಾಲ್ಲೂಕುವಾರು ಮ್ಯಾಪಿಂಗ್ ಆಗದಿರುವ ಮಕ್ಕಳನ್ನು ಗುರುತಿಸಿ, […]

ವರದಿ : ಶಬ್ಬೀರ್ ಅಹ್ಮದ್, ಶ್ರೀನಿವಾಸಪುರ ಕೋಲಾರ.ಆ.28: ಎ.ಪಿ.ಎಂ.ಸಿ ಮಾರುಕಟ್ಟೆಗೆ ಅವಶ್ಯಕತೆಯಿರುವ 40 ಎಕರೆ ಜಮೀನನ್ನು ಮಂಜೂರು ಮಾಡಿಬೇಕೆಂದು ರೈತಸಂಘದಿಂದ ಕೃಷಿ ಉತ್ಪನ್ನ ಮಾರುಕಟ್ಟೆ ಬಳಿ ರಸ್ತೆ ಬಂದ್ ಮಾಡಿ ಶಿರೆಸ್ತಾದಾರ್ ಅನಂತ್ಕುಮಾರಿರವರಿಗೆ ಮನವಿ ನೀಡಿ ಅಗ್ರಹಿಸಲಾಯಿತು.ಹೋರಾಟದ ನೇತೃತ್ವವಹಿಸಿ ಮಾತನಾಡಿದ ರಾಜ್ಯ ಉಪಾದ್ಯಕ್ಷ ಕೆ.ನಾರಾಯಣಗೌಡ ಏಷ್ಯಾದಲ್ಲೇ 2ನೇ ಅತಿದೊಡ್ಡ ಮಾರುಕಟ್ಟೆಯಾಗಿರುವ ಕೋಲಾರ ಎಪಿಎಂಸಿ ಮಾರುಕಟ್ಟೆಯಲ್ಲಿನ ಟೊಮೆಟೊ ಮತ್ತು ತರಕಾರಿಗಳು ದೇಶವಿದೇಶಗಳಿಗೆ ರಫ್ತಾಗುತ್ತಿದ್ದು ಇಲ್ಲಿಗೆ ಬರುವ ವ್ಯಾಪಾರಸ್ಥರು ಮಾರುಕಟ್ಟೆಯಲ್ಲಿನ ಜಾಗದ ಸಮಸ್ಯೆಯಿಂದ ಬೆಳೆಗೆ ತಕ್ಕ ಬೆಲೆ ನೀಡಲು ಹಿಂಜರಿಯುತ್ತಿದ್ದಾರೆ. […]

ವರದಿ : ಶಬ್ಬೀರ್ ಅಹ್ಮದ್, ಶ್ರೀನಿವಾಸಪುರ ಶ್ರೀನಿವಾಸಪುರ: ಪೋಷಕರು ತಮ್ಮ ಮಕ್ಕಳನ್ನು ಸರ್ಕಾರಿ ಶಾಲೆಗೆ ಸೇರಿಸುವ ಮೂಲಕ ಸರ್ಕಾರದ ಶೈಕ್ಷಣಿಕ ಸೌಲಭ್ಯ ಸದುಪಯೋಗ ಪಡಸಿಕೊಳ್ಳಬೇಕು ಎಂದು ಬಿಇಒ ಉಮಾದೇವಿ ಹೇಳಿದರು. ತಾಲ್ಲೂಕಿನ ಪೆದ್ದೂರು ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯನ್ನು 6 ವರ್ಷಗಳ ಬಳಿಕ ಗುರುವಾರ ಪನರಾರಂಭ ಮಾಡಿ ಮಾನಾಡಿ, ಪೋಷಕರು ತಮ್ಮ ಮಕ್ಕಳನ್ನು ಖಾಸಗಿ ಶಾಲೆಗಳಿಗೆ ಸೇರಿಸಿದ ಪರಿಣಾಮವಾಗಿ ಶಾಲೆಯನ್ನು ಮುಚ್ಚಲಾಗಿತ್ತು. ಆದರೆ ಈಗ ಶಿಕ್ಷಣ ಇಲಾಖೆ ಸಿಬ್ಬಂದಿ ಹಾಗೂ ಶಿಕ್ಷಕರು ಪೋಷಕರ ಮನವೊಲಿಸಿ 15 […]