
ವರದಿ : ಶಬ್ಬೀರ್ ಅಹ್ಮದ್, ಶ್ರೀನಿವಾಸಪುರ ಶ್ರೀನಿವಾಸಪುರ: ರಾಮ ಮಂದಿರ ಭಾರತೀಯ ಸಂಸ್ಕೃತಿಯ ಪ್ರತೀಕವಾಗಲಿದೆ. ಜನರ ಪ್ರಾರ್ಥನೆ ಫಲಿಸಿದೆ ಎಂದು ಜಿಲ್ಲಾ ವಿಶ್ವ ಹಿಂದೂ ಪರಿಷತ್ತಿನ ಉಪಾಧ್ಯಕ್ಷ ಎಂ.ವೇಮಣ್ಣ ಹೇಳಿದರು. ಪಟ್ಟಣದ ಲಕ್ಷ್ಮೀನರಸಿಂಹಸ್ವಾಮಿ ದೇವಾಲಯದ ಆವರಣದಲ್ಲಿ ಅಯೋಧ್ಯೆಯಲ್ಲಿ ರಾಮ ಮಂದಿರ ನಿರ್ಮಾಣಕ್ಕೆ ನಡೆಸಲಾದ ಶಿಲಾನ್ಯಾಸ ಹಿನ್ನೆಲೆಯಲ್ಲಿ ಬುಧವಾರ ವಿಶ್ವ ಹಿಂದೂ ಪರಿಷತ್ ವತಿಯಿಂದ ಏರ್ಪಡಿಸಿದ್ದ ರಾಮ ಪೂಜಾ ಕಾರ್ಯಕ್ರಮದಲ್ಲಿ ಮಾತನಾಡಿ, ಶತಮಾನಗಳಷ್ಟು ಹಳೆಯದಾದ ವಿವಾದ ಶಾಂತಿಯುತವಾಗಿ ಕೊನೆಗೊಂಡು ಮಂದಿರ ನಿರ್ಮಾಣವಾಗುತ್ತಿರುವುದು ಸಂತೋಷ ಸಂಗತಿಯಾಗಿದೆ ಎಂದು ಹೇಳಿದರು. ತಾಲ್ಲೂಕು […]

ವರದಿ : ಶಬ್ಬೀರ್ ಅಹ್ಮದ್, ಶ್ರೀನಿವಾಸಪುರ ಕೋಲಾರ;ಕೋಲಾರ ತರಕಾರಿ ಬೆಳೆಯಲು ಪ್ರಸಿದ್ಧಿ ಹೊಂದಿದ್ದು, ಈಗ ಮುಂಗಾರು ಹಂಗಾಮು ಪ್ರಾರಂಭವಾಗಿದ್ದು ಈ ಅವಧಿಯಲ್ಲಿ ತರಕಾರಿ ಬೆಳೆಗಳಿಗೆ ಬರುವಂತಹ ರೋಗಗಳ ಸಮಗ್ರ ನಿರ್ವಹಣೆಯ ಕುರಿತು ರೈತರಲ್ಲಿ ಅರಿವು ಮೂಡಿಸುವ ಅಂತರ್ಜಾಲ ಕಾರ್ಯಾಗಾರವನ್ನು ಕೃಷಿ ವಿಜ್ಞಾನ ಕೇಂದ್ರ, ಕೋಲಾರದಲ್ಲಿ ದಿನಾಂಕ 04.08.2020 ರಂದು “ಸೊಲನೇಸಿ ತರಕಾರಿ ಬೆಳೆಯಲ್ಲಿ ಸಮಗ್ರ ರೋಗ ನಿರ್ವಹಣೆ” ಬಗ್ಗೆ ಆಯೋಜಿಸಲಾಗಿತ್ತು.ಕೃಷಿ ವಿಶ್ವವಿದ್ಯಾಲಯ ಬೆಂಗಳೂರಿನ ಸಸ್ಯ ರೋಗಶಾಸ್ತ್ರದ ಪ್ರಾಧ್ಯಾಪಕರಾದ ಡಾ. ಎನ್. ನಾಗರಾಜ್‍ರವರು ಮಾತನಾಡಿ ಸೊಲನೇಸಿ ತರಕಾರಿ ಬೆಳೆಗಳಲ್ಲಿ […]

ವರದಿ; ಶಬ್ಬೀರ್ ಅಹಮ್ಮದ್ ಶ್ರೀನಿವಾಸಪುರ ಶ್ರೀನಿವಾಸಪುರ: ಪುರಸಭಾ ಕಛೇರಿಯಲ್ಲಿ 36 ವರ್ಷಗಳಿಂದ ಸೇವೆ ಸಲ್ಲಿಸಿ, ವಯೋ ನಿವೃತ್ತಿಹೊಂದಿದ ಶ್ರೀಮತಿ ಎಂ.ವನಜಾಕ್ಷಿರವರನ್ನು ಪುರಸಭಾ ಮುಖ್ಯಾಧಿಕಾರಿ ಶ್ರೀ ವಿ.ಮೋಹನ್ ಕುಮಾರ್ ರವರ ನೇತೃತ್ವದಲ್ಲಿ ಆತ್ಮೀಯವಾಗಿ ಬೀಳ್ಕೊಡಲಾಯಿತು. ಬೀಳ್ಕೊಡುಗೆ ಸಮಾರಂಭದಲ್ಲಿ ಪುರಸಭಾ ಸದಸ್ಯ ಶ್ರೀ ಅನೀಸ್ ಅಹ್ಮದ್, ಪರಿಸರ ಅಭಿಯಂತರರಾದ ಶ್ರೀ ಎಂ.ಶೇಖರ್, ಸಮುದಾಯ ಸಂಘಟನಾಧಿಕಾರಿ ಶ್ರೀಮತಿ ಕೆ.ಎನ್.ರಾಜೇಶ್ವರಿ, ಹಿರಿಯ ಆರೋಗ್ಯ ನಿರೀಕ್ಷಕ ಶ್ರೀ ಕೆ.ಜೆ.ರಮೇಶ್ ಸೇರಿದಂತೆ ಪುರಸಭಾ ಸಿಬ್ಬಂದಿ ವರ್ಗದವರು ಹಾಜರಿದ್ದು, 36 ವರ್ಷಗಳ ಕಾಲ ಪ್ರಾಮಾಣಿಕವಾಗಿ ಶ್ರೀಮತಿ ಎಂ.ವನಜಾಕ್ಷಿರವರು […]

ವರದಿ : ಶಬ್ಬೀರ್ ಅಹ್ಮದ್, ಶ್ರೀನಿವಾಸಪುರ ಕೋಲಾರ: ಜಿಲ್ಲೆಯಲ್ಲಿ ಕೃಷಿ ಇಲಾಖೆ ಜಂಟಿ ನಿರ್ದೇಶಕರಾಗಿ 3 ವರ್ಷ ಸೇವೆಸಲ್ಲಿಸಿ ಕೇಂದ್ರ ಕಚೇರಿಗೆ ವರ್ಗಾವಣೆಗೊಂಡ ಡಾ.ಎಚ್.ಕೆ.ಶಿವಕುಮಾರ್ ಅವರಿಗೆ ಬೀಳ್ಕೊಡುಗೆ ಹಾಗೂ ನೂತನ ಜಂಟಿನಿರ್ದೇಶಕರಾದ ಅವರಿಗೆ ಸಸಿ ನೀಡುವ ಮೂಲಕ ರೈತಸಂಘದಿಂದ ಸನ್ಮಾನ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು.ಈ ಸಂದರ್ಭದಲ್ಲಿ ಮಾತನಾಡಿದ ಸಂಘಟನೆಯ ರಾಜ್ಯ ಉಪಾಧ್ಯಕ್ಷ ಕೆ.ನಾರಾಯಣಗೌಡ, ಶಿವಕುಮಾರ್ ಅವರು ಜಿಲ್ಲೆಯಲ್ಲಿ ರೈತರ ಪರವಾಗಿ ಕಳೆದ 3 ವರ್ಷಗಳಿಂದ ಉತ್ತಮವಾಗಿ ಕೆಲಸ ಮಾಡಿದ್ದಾರೆ. ಅದೇ ರೀತಿಯಾಗಿ ನೂತನ ಜಂಟಿನಿರ್ದೇಶಕರು ಕೆಲಸ ಮಾಡಬೇಕೆಂದು ಮನವಿ […]

ವರದಿ : ಶಬ್ಬೀರ್ ಅಹ್ಮದ್, ಶ್ರೀನಿವಾಸಪುರ ಕೋಲಾರ : ಜಿಲ್ಲೆಯ ಸರ್ಕಾರಿ ಜಮೀನುಗಳಾದ ಸ್ಮಶಾನ , ಗುಂಡುತೋಪು , ಬಂಡಿದಾರಿ , ಕೆರೆ ಜಮೀನುಗಳು ಒತ್ತುವರಿಯಾಗಿದ್ದು , ಜಿಲ್ಲೆಯಲ್ಲಿ ಒಟ್ಟು 7 ಸರ್ಕಾರಿ ಸರ್ವೆನಂಬರ್‌ಗಳಲ್ಲಿ ಒಟ್ಟು ಸುಮಾರು 6-33 ಎಕರೆ ಜಮೀನು ಒತ್ತುವರಿಯಾಗಿರುವುದನ್ನು ಜುಲೈ 20 ರಿಂದ ವರೆಗೆ . ಗುರುತಿಸಿ ತೆರವುಗೊಳಿಸಲಾಗಿರುತ್ತದೆ ಎಂದು ಜಿಲ್ಲಾಧಿಕಾರಿಗಳಾದ ಸಿ . ಸತ್ಯಭಾಮ ಅವರು ತಿಳಿಸಿದ್ದಾರೆ . ಜುಲೈ 25 ತೆರವುಗೊಳಿಸಿದ ಜಮೀನಿನ ವಿವರ : ಕೋಲಾರ ತಾಲ್ಲೂಕಿನ ವೇಮಗಲ್ ಹೋಬಳಿಯ […]

ವರದಿ : ಶಬ್ಬೀರ್ ಅಹ್ಮದ್, ಶ್ರೀನಿವಾಸಪುರ ಕೋಲಾರ:- ಬಡವರು,ಹೆಣ್ಣು ಮಕ್ಕಳಿಗೆ ಆರ್ಥಿಕ ಶಕ್ತಿ ತುಂಬಿರುವ ಡಿಸಿಸಿ ಬ್ಯಾಂಕ್ ವಿರುದ್ದ ಟೀಕೆ ಮಾಡದಿರಿ, ಪಕ್ಷಾತೀತವಾಗಿ ಸಲಹೆ ನೀಡಿ ಶಕ್ತಿ ತುಂಬುವ ಕೆಲಸ ಮಾಡೋಣ ಎಂದು ಅವಿಭಜಿತ ಜಿಲ್ಲೆಯ ರಾಜಕಾರಣಿಗಳಿಗೆ ಶಾಸಕ ಕೆ.ಶ್ರೀನಿವಾಸಗೌಡ ಮನವಿ ಮಾಡಿದರು.ನಗರದ ಡಿಸಿಸಿ ಬ್ಯಾಂಕ್ ಶಾಖೆ ಆವರಣದಲ್ಲಿ ವರಮಹಾಲಕ್ಷ್ಮಿ ಪೂಜೆ ನಡೆಸಿ ಮಹಿಳೆಯರಿಗೆ ಅರಿಸಿನ,ಕುಂಕುಮ,ತಾಂಬೂಲ,ಸಿಹಿ ಜತೆ ಮಡಿಲು ತುಂಬಿ ಸುಮಾರು ಒಂದು ಕೋಟಿ ರೂ ಸಾಲ ವಿತರಿಸಿ ಅವರು ಮಾತನಾಡುತ್ತಿದ್ದರು.ಬಡ ತಾಯಂದಿರ ಜತೆ ವರಮಹಾಲಕ್ಷ್ಮಿ ಹಬ್ಬ […]

ವರದಿ : ಶಬ್ಬೀರ್ ಅಹ್ಮದ್, ಶ್ರೀನಿವಾಸಪುರ ಶ್ರೀನಿವಾಸಪುರ: ತಾಲ್ಲೂಕಿನ ರೈತರು ಅನಿರೀಕ್ಷಿತ ಬೆಳೆ ನಷ್ಟ ಪರಿಹಾರ ಪಡೆಯಲು ಕರ್ನಾಟಕ ರೈತ ಸುರಕ್ಷ, ಪ್ರಧಾನ ಮಂತ್ರಿ ಫಸಲ್ ಬಿಮಾ ಯೋಜನೆಯಡಿ ವಿಮೆ ಮಾಡಿಸಬೇಕು ಎಂದು ತಾಲ್ಲೂಕು ಕೃಷಿ ಇಲಾಖೆಯ ಸಹಾಯಕ ನಿರ್ದೇಶಕ ಎಂ.ಧನಂಜಯ್ ತಿಳಿಸಿದ್ದಾರೆ. ರಾಗಿ, ಭತ್ತ, ನೆಲಗಡಲೆ, ತೊಗರಿ, ಹುರುಳಿ ಬೆಳೆಗೆ ವಿಮಾ ಸೌಲಭ್ಯ ಇರುತ್ತದೆ. ರೈತರು ನಿಗದಿತ ಸಮಯದೊಳಗೆ ನಿಯಮಾನುಸಾರ ವಿಮಾ ಹಣ ಪಾವತಿಸಿ, ಸೌಲಭ್ಯ ಪಡೆದುಕೊಳ್ಳಬಹುದಾಗಿದೆ ಎಂದು ಹೇಳಿಕೆಯಲ್ಲಿ ತಿಳಿಸಿದ್ದಾರೆ. ಕೃಷಿ ಬಳಕೆ ಉಪಕರಣಗಳನ್ನು […]

ವರದಿ : ಶಬ್ಬೀರ್ ಅಹ್ಮದ್, ಶ್ರೀನಿವಾಸಪುರ ಪಟ್ಟಣದ ಕೊರೊನಾ ಸೋಂಕಿತ ಪ್ರದೇಶ ಬೋವಿ ಕಾಲೊನಿಗೆ ಬುಧವಾರ ರಾತ್ರಿ ಭೇಟಿ ನೀಡಿ ಪರಿಶೀಲಿಸಿದ ಬಳಿಕ ಮಾತನಾಡಿ, ಸರ್ಕಾರ ಈಗ ಕ್ವರಂಟೈನ್ ಅವಧಿಯನ್ನು 7 ದಿನಗಳಿಗೆ ಇಳಿಸಿದೆ. ರೋಗ ಲಕ್ಷಣ ಕಂಡುಬರದಿದ್ದಲ್ಲಿ 7 ದಿನಗಳ ಬಳಿಕ ಮನೆಗೆ ಕಳುಹಿಸಲಾಗುವುದು. ಮನೆಯಲ್ಲಿ 7 ದಿನ ಕ್ವಾರಂಟೈನ್‌ನಲ್ಲಿ ಇರಬೇಕಾಗುತ್ತದೆ ಎಂದು ಹೇಳಿದರು. ಸೋಂಕಿತ ಪ್ರದೇಶದಲ್ಲಿ ಬಿಎಲ್‌ಒ ಮತ್ತು ಆಶಾ ಕಾರ್ಯಕರ್ತರಿಗೆ ವ್ಯವಸ್ಥೆಯ ಜವಾಬ್ದಾರಿ ವಹಿಸಲಾಗಿದೆ. ಅವರು ಸೋಂಕು ಹರಡದಂತೆ ಅಗತ್ಯವಾದ ಕ್ರಮ ಕೈಗೊಳ್ಳುವಂತೆ […]

ವರದಿ : ಶಬ್ಬೀರ್ ಅಹ್ಮದ್, ಶ್ರೀನಿವಾಸಪುರ ತಾಲ್ಲೂಕಿನ ಹೊಗಳಗೆರೆ ಗ್ರಾಮದ ಮಾವು ಅಭಿವೃದ್ಧಿ ಕೇಂದ್ರದ ಸಭಾಂಗಣದಲ್ಲಿ ಏರ್ಪಡಿಸಿದ್ದ ಅಭಿವೃದ್ಧಿ ಕಾರ್ಯಗಳ ಪರಿಶೀಲನಾ ಸಭೆಯಲ್ಲಿ ಮಾತನಾಡಿ, ತಾಲ್ಲೂಕಿನಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ಹೆಚ್ಚುತ್ತಿರುವುದರಿಂದ ಆರೋಗ್ಯ ಇಲಾಖೆ ಹಾಗೂ ಸಂಬಂಧಪಟ್ಟ ಕಾರ್ಯಕರ್ತರು ಹೆಚ್ಚು ಎಚ್ಚರಿಕೆಯಿಂದ ಕಾರ್ಯನಿರ್ವಹಿಸಬೇಕು ಎಂದು ಹೇಳಿದರು. ತಾಲ್ಲೂಕಿನಲ್ಲಿ ಈ ವರೆಗೆ 111 ಕೊರೊನಾ ಪ್ರಕರನಗಳು ವರದಿಯಾಗಿದ್ದು, 5 ಮಂದಿ ಅಸುನೀಗಿದ್ದಾರೆ. 39 ಮಂದಿ ಗುಣಮುಖರಾಗಿದ್ದಾರೆ. ಗಂಗರಗಾನಹಳ್ಳಿ ಗ್ರಾಮದ ಏಕಲವ್ಯ ಶಾಲೆ ಹಾಗೂ ಚಲ್ದಿಗಾನಹಳ್ಳಿ ಗ್ರಾಮದ ಸಮೀಪದ ಕಿತ್ತೂರು […]