ವರದಿ: ಶಬ್ಬೀರ್ ಅಹಮ್ಮದ್, ಶ್ರೀನಿವಾಸಪುರ ಕೆಜಿಎಫ್; ಕೆಜಿಎಫ್ ಪೊಲೀಸ್ ಜಿಲ್ಲೆಯ ಆಂಡ್ರಸನ್ಪೇಟೆ ಪೊಲೀಸ್ ಠಾಣಾ ಸರಹದ್ದಿನಲ್ಲಿ ಮಾ.3 ರಂದು ತಡರಾತ್ರಿ ನಡೆದ ಪಿಎಸ್ಐ ಮೇಲಿನ ಹಲ್ಲೆ ಪ್ರಕರಣಕ್ಕೆ ಸಂಬಂಧಿಸಿದ ಪ್ರಮುಖ ಆರೋಪಿಯನ್ನು ಬಂಧಿಸುವಲ್ಲಿ ಸ್ಥಳೀಯ ವಿಶೇಷ ಅಪರಾಧ ಪತ್ತೆ ದಳದ ಪೊಲೀಸರು ಯಶಸ್ವಿಯಾಗಿದ್ದಾರೆಂದು ಜಿಲ್ಲಾ ರಕ್ಷಣಾಧಿಕಾರಿ ಇಲಕ್ಕಿಯಾ ಕರುಣಾಕರನ್ ಅವರು ತಿಳಿಸಿದ್ದಾರೆ.ಅವರು ಪತ್ರಿಕಾಗೋಷ್ಠಿಯನ್ನುದ್ದೇಶಿಸಿ ಮಾತನಾಡಿ, ಕಳ್ಳತನ ಪ್ರಕರಣಗಳಲ್ಲಿ ಬೇಕಾಗಿದ್ದ ಆರೋಪಿ ಅಪ್ಪೇನ್ನನ್ನು ಬಂಧಿಸಲು ಹೋಗಿದ್ದ ವೇಳೆ ಪೊಲೀಸರ ಮೇಲೆ ಮಾರಕಾಸ್ತ್ರಗಳಿಂದ ದಾಳಿ ನಡೆಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಯನ್ನು […]
ವರದಿ: ಶಬ್ಬೀರ್ ಅಹಮ್ಮದ್, ಶ್ರೀನಿವಾಸಪುರ ಶ್ರೀನಿವಾಸಪುರ: ತಾಲ್ಲೂಕಿನ ಗುಂಡಮನತ್ತ ಗ್ರಾಮದಲ್ಲಿ ಮಾನಸಿಕ ಅಸ್ವಸ್ಥೆಯೊಬ್ಬರು ನೇಣು ಬಿಗಿದುಕೊಂಡು ಅತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬುಧವಾರ ನಡೆದಿದೆ.ಮುನಿರತ್ನಮ್ಮ (58) ಆತ್ಮಹತ್ಯೆ ಮಾಡಿಕೊಂಡ ಮಹಿಳೆ. ಗ್ರಾಮದ ಹೊರ ವಲಯದ ಮಾವಿನ ತೋಟದಲ್ಲಿ ಮರಕ್ಕೆ ನೇಣು ಹಾಕಿಕೊಂಡು ಸಾವನ್ನಪ್ಪಿದ್ದಾರೆ.ಪೊಲೀಸ್ ಇನ್ಸ್ಪೆಕ್ಟರ್ ಸಿ.ರವಿಕುಮಾರ್, ಪೊಲೀಸ್ ಸಬ್ ಇನ್ಸ್ಪೆಕ್ಟರ್ ವಿಠಲ್ ತಳವಾರ್ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದರು.
ವರದಿ: ಶಬ್ಬೀರ್ ಅಹಮ್ಮದ್, ಶ್ರೀನಿವಾಸಪುರ ಶ್ರೀನಿವಾಸಪುರ: ನ್ಯಾಯಾಂಗ ಇಲಾಖೆಯ ನಿವೃತ್ತ ದಪೇದಾರ್ ಕೆ.ಕೋನಪ್ಪ (94) ಪಟ್ಟಣದ ಮಾರುತಿ ನಗರದಲ್ಲಿನ ತಮ್ಮ ನಿವಾಸದಲ್ಲಿ ಬುಧವಾರ ನಿಧನರಾದರು. ಅವರು ಕೆಲವು ದಿನಗಳಿಂದ ವಯೋಸಹಜ ಅನಾರೋಗ್ಯದಿಂದ ಬಳಲುತ್ತಿದ್ದರು.ಮೃತರು ತಾಲ್ಲೂಕು ವಕೀಲರ ಸಂಘದ ಅಧ್ಯಕ್ಷ ಕೆ.ಶಿವಪ್ಪ ಹಾಗೂ ಗಾಯಕ ಕೆ.ನರಸಿಂಹಮೂರ್ತಿ ಸೇರಿದಂತೆ ಮೂವರು ಪುತ್ರರು ಹಾಗೂ ಒಬ್ಬ ಪುತ್ರಿಯನ್ನು ಅಗಲಿದ್ದಾರೆ. ತಾಲ್ಲೂಕಿನ ಜಿ.ರೆಡ್ಡಿವಾರಿಪಲ್ಲಿ ಗ್ರಾಮದ ಸ್ಮಶಾನದಲ್ಲಿ ಅಂತ್ಯ ಸಂಸ್ಕಾರ ನಡೆಸಲಾಯಿತು.
ವರದಿ: ಶಬ್ಬೀರ್ ಅಹಮ್ಮದ್, ಶ್ರೀನಿವಾಸಪುರ ಶ್ರೀನಿವಾಸಪುರ ಅಧಿಕಾರಿಗಳು, ಹಾಲು ಉತ್ಪಾದಕರು ಉತ್ತಮ ಗುಣಮಟ್ಟದ ಹಾಲು ಉತ್ಪಾದನೆ ಮಾಡಲು ಅಗತ್ಯವಾದ ಮಾರ್ಗದರ್ಶನ ಮಾಡಬೇಕು ಎಂದು ಕೋಚಿಮುಲ್ ನಿರ್ದೇಶಕ ಎನ್.ಹನುಮೇಶ್ ಹೇಳಿದರು.ತಾಲ್ಲೂಕಿನ ಗುಂದೇಡು ಗ್ರಾಮದಲ್ಲಿ ಬುಧವಾರ ನೂತನ ಕ್ಷೀರಭವನ ಉದ್ಘಾಟಿಸಿ ಮಾತನಾಡಿದ ಅವರು, ಗುಂದೇಡು ಹಾಲು ಉತ್ಪಾದಕರ ಸಹಕಾರ ಸಂಘದಲ್ಲಿ ಕಡಿಮೆ ಸಂಖ್ಯೆಯ ಸದಸ್ಯರಿದ್ದರೂ, ಉತ್ತಮ ಗುಣಮಟ್ಟದ ಹಾಲು ಉತ್ಪಾದನೆ ಮಾಡುವುದರ ಮೂಲಕ ಮಾದರಿಯಾಗಿ ಅಭಿವೃದ್ಧಿ ಸಾಧಿಸಿದ್ದಾರೆ ಎಂದು ಹೇಳಿದರು.ಕ್ಷೀರಭವನ ನಿರ್ಮಿಸಲು ಹಾಲು ಒಕ್ಕೂಟದಿಂದ ರೂ.2 ಲಕ್ಷ, ಕರ್ನಾಟಕ ಹಾಲು […]
ವರದಿ: ಶಬ್ಬೀರ್ ಅಹಮ್ಮದ್, ಶ್ರೀನಿವಾಸಪುರ ಕೋಲಾರ : ಹಿಂಸಾ ಚಾರದಂತಹ ಅನವಶ್ಯಕ ಘಟನೆಗಳಿಂದ ಸಾವಿರಾರು ಉದ್ಯೋಗಿಗಳ ಜೀವನ ಬೀದಿಪಾಲಾಗುವ ಸಮಸ್ಯೆ ಎದುರಾಗುತ್ತದೆ . ಇನ್ನು ಮುಂದೆ ಯಾವುದೇ ರೀತಿಯ ಸಮಸ್ಯೆಗಳು ಉದ್ಭವಿಸಿದಲ್ಲಿ ಜಿಲ್ಲಾಡಳಿತ ಹಾಗೂ ಸಂಬಂಧಪಟ್ಟ ಅಧಿಕಾರಿಗಳ ಗಮನಕ್ಕೆ ತಂದು ಪರಿಹಾರ ಕಂಡುಕೊಳ್ಳಿ ಎಂದು ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಸಚಿವರಾದ ಜಗದೀಶ ಶೆಟ್ಟರ್ ಅವರು ವಿಸ್ಸಾನ್ ಕಂಪನಿ ಉದ್ಯೋಗಿಗಳಿಗೆ ಸಲಹೆ ನೀಡಿದರು . ಇತ್ತೀಚಿನ ಘಟನೆಯ ನಂತರ ಉತ್ಪಾದನೆ ಆರಂಭಿಸಿರುವ ಕೋಲಾರ ಜಿಲ್ಲೆಯ ನರಸಾಪುರ ಕೈಗಾರಿಕಾ […]
ವರದಿ: ಶಬ್ಬೀರ್ ಅಹಮ್ಮದ್, ಶ್ರೀನಿವಾಸಪುರ ಕೋಲಾರ ಮಾ.10 : ಜಿಲ್ಲಾ ರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಕೋಲಾರ ಹಾಗೂ ಈನೆಲ ಈಜಲ ಕಲೆ ಮತ್ತು ಸಂಸ್ಕøತಿಕ ಸಂಸ್ಥೆ ವತಯಿಂದ ಆಯುಷ್ಮಾನ್ ಭಾರತ್ ಆರೋಗ್ಯ ಕರ್ನಾಟಕ ವಿಶೇಷ ಜಾಗೃತಿ ಅಭಿಯಾನ ಬೀದಿ ನಾಟಕವನ್ನು ಆರೋಗ್ಯ ಮತ್ತು ಕ್ಷೇಮ ಕೇಂದ್ರಗಳ ಹಾಗೂ ಅಲ್ಲಿ ದೊರೆಯುವ ಸೇವೆಗಳ ಕುರಿತಾಗಿ ಕುರಿತು ನಾಟಕದ ಮೂಲಕ ಅರಿವು ಮೂಡಿಸಲಾಯಿತು.ಮುಳಬಾಗಿಲು ತಾಲ್ಲೂಕಿನಲ್ಲಿ ಹೋಬಳಿ ಮಟ್ಟದಲ್ಲಿ ದಿನನಿತ್ಯ ಎರಡು ಊರುಗಳಲ್ಲಿ ನಾಟಕದ ಮೂಲಕ ಕೇಂದ್ರ ರಾಜ್ಯ […]
ವರದಿ: ಶಬ್ಬೀರ್ ಅಹಮ್ಮದ್, ಶ್ರೀನಿವಾಸಪುರ ಶ್ರೀನಿವಾಸಪುರ: ಗ್ರಾಮಗಳಲ್ಲಿ ಮೂಲ ಸೌಕರ್ಯ ಕಲ್ಪಿಸಲು ಆದ್ಯತೆ ನೀಡಲಾಗಿದೆ ಎಂದು ಮಾಸ್ತೇನಹಳ್ಳಿ ಗ್ರಾಮ ಪಂಚಾಯಿತಿ ಅಧ್ಯಕ್ಷ ಬಿ.ಎಂ.ರವಿಕುಮಾರ್ ಹೇಳಿದರು.ಗ್ರಾಮದ ಗ್ರಾಮ ಪಂಚಾಯಿತಿ ಕಚೇರಿ ಸಭಾಂಗಣದಲ್ಲಿ ಮಂಗಳವಾರ ಏರ್ಪಡಿಸಿದ್ದ ಗ್ರಾಮ ಸಭೆಯಲ್ಲಿ ಮಾತನಾಡಿ, ಕುಡಿಯುವ ನೀರು ಪೂರೈಕೆ, ರಸ್ತೆ ನಿರ್ಮಣ, ಚರಣಡಿ ನಿರ್ಮಾಣ ಹಾಗೂ ಸ್ವಚ್ಛತೆಗೆ ಮೊದಲ ಆದ್ಯತೆ ನೀಡಲಾಗಿದೆ ಎಂದು ಹೇಳಿದರು.ಗ್ರಾಮ ಪಂಚಾಯಿತಿ ಉಪಾಧ್ಯಕ್ಷೆ ಭಾರತಿ, ಪಿಡಿಒ ಎಸ್.ಬಿ.ಮಂಜುನಾಥ್, ಎಸ್ಡಿಎ ಎನ್.ಎನ್.ನಂದೀಶ್, ಕೆ.ಪಿ.ನಾಗೇಶ್, ಮಂಜುನಾಥ್, ಬಚ್ಚೇಗೌಡ, ರಮೇಶ್, ಕೃಷ್ಣೇಗೌಡ, ಸದಸ್ಯರಾದ ಪ್ರಕಾಶ್, […]
ವರದಿ: ಶಬ್ಬೀರ್ ಅಹಮ್ಮದ್, ಶ್ರೀನಿವಾಸಪುರ ಶ್ರೀನಿವಾಸಪುರದ ಕರ್ನಾಟಕ ಸರ್ಕಾರಿ ಮಾದರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಸೋಮವಾರ ಏರ್ಪಡಿಸಿದ್ದ ಮಹಿಳಾ ದಿನಾಚರಣೆ ಸಮಾರಂಭದಲ್ಲಿ ಸರ್ಕಾರಿ ಆಸ್ಪತ್ರೆಯ ಚರ್ಮರೋಗ ತಜ್ಞೆ ಡಾ. ಮಮಲಮ್ಮ ಅವರನ್ನು ಸನ್ಮಾನಿಸಲಾಯಿತು. ಮುಖ್ಯ ಶಿಕ್ಷಕ ಎಂ.ಬೈರೇಗೌಡ ಇದ್ದರು.
ವರದಿ: ಶಬ್ಬೀರ್ ಅಹಮ್ಮದ್, ಶ್ರೀನಿವಾಸಪುರ ಶ್ರೀನಿವಾಸಪುರ: ಸಹಕಾರ ಸಂಘಗಳು ಪಕ್ಷಾತೀತವಾಗಿ ಬಡ್ಡಿ ರಹಿತ ಸಾಲ ಸೌಲಭ್ಯ ಕಲ್ಪಿಸಬೇಕು ಎಂದು ಡಿಸಿಸಿ ಬ್ಯಾಂಕ್ ಅಧ್ಯಕ್ಷ ಬ್ಯಾಲಹಳ್ಳಿ ಗೋವಿಂದಗೌಡ ಹೇಳಿದರು.ಪಟ್ಟಣದ ಡಿಸಿಸಿ ಬ್ಯಾಂಕ್ ಸಭಾಂಗಣದಲ್ಲಿ ಯಲ್ದೂರು ರೇಷ್ಮೆ ಬೆಳೆಗಾರರ ಹಾಗೂ ರೈತರ ಸೇವಾ ಸಹಕಾರ ಸಂಘದ ಫಲಾನುಭವಿಗಳಿಗೆ ಮಂಗಳವಾರ ರೂ.1.78 ಕೋಟಿ ಸಾಲದ ಮೊತ್ತದ ಚೆಕ್ ವಿತರಿಸಿ ಮಾತನಾಡಿ, ಪ್ರಾಮಾಣಿಕವಾಗಿ ಕೃಷಿ ಮಾಡುವ ರೈತರಿಗೆ ಸಂಖ್ಯೆಯ ಮಿತಿ ಇಲ್ಲದೆ ಬೆಳೆ ಸಾಲ ನೀಡಬೇಕು ಎಂದು ಹೇಳಿದರು.ಸಹಕಾರ ಸಂಘದ ಆಡಳಿತ ಮಂಡಳಿ […]

