ವರದಿ: ಶಬ್ಬೀರ್ ಅಹ್ಮದ್, ಶ್ರೀನಿವಾಸಪುರ ಶ್ರೀನಿವಾಸಪುರ:  ಗಡಿ ಭಾಗದಲ್ಲಿ ವಾಹನ ಸಂಚಾರ ನಿರ್ಬಂಧಿಸಬೇಕು: ಜಿಲ್ಲಾಧಿಕಾರಿ ಸತ್ಯಭಾಮ ಸೂಚನೆ  ಶ್ರೀನಿವಾಸಪುರ:  ಗಡಿ ಭಾಗದಲ್ಲಿ ವಾಹನ ಸಂಚಾರ ನಿರ್ಬಂಧಿಸಬೇಕು ಎಂದು ಜಿಲ್ಲಾಧಿಕಾರಿ ಸತ್ಯಭಾಮ ಸೂಚಿಸಿದರು.   ತಾಲ್ಲೂಕಿನ ರಾಯಲ್ಪಾಡು ಸಮೀಪದ ಅಂತರ ರಾಜ್ಯ ಚೆಕ್ ಪೋಸ್ಟ್‌ಗೆ ಮಂಗಳವಾರ ಅಧಿಕಾರಿಗಳೊಂದಿಗೆ ಭೇಟಿ ನೀಡಿ ಪರಿಶೀಲಿಸಿದ ಬಳಿಕ ಮಾತನಾಡಿ, ಕೊರೊನಾ ವೈರಾಣು ಹರಡುವುದನ್ನು ತಡೆಯುವುದು ಇಂದಿನ ಅಗತ್ಯವಾಗಿದೆ. ಚೆಕ್ ಪೋಸ್ಟ್‌ನಲ್ಲಿ ಕಾರ್ಯನಿರ್ವಹಿಸುವ ಸಿಬ್ಬಂದಿ ನಿಗದಿತ ನಿಯಮಗಳನ್ನು ತಪ್ಪದೆ ಪಾಲಿಸಬೇಕು ಎಂದು ಹೇಳಿದರು.   […]

Read More

ವರದಿ: ಶಬ್ಬೀರ್ ಅಹ್ಮದ್, ಶ್ರೀನಿವಾಸಪುರ   ಗ್ರಾಮೀಣ ಪ್ರದೇಶಗಳನ್ನು ಮರೆತಿರುವ ಜನಪ್ರತಿನಿದಿಗಳನ್ನು ಹುಡುಕಿಕೊಟ್ಟು ಅಗತ್ಯ ವಸ್ತುಗಳನ್ನು ದುಪ್ಪಟ್ಟು ಬೆಲೆಗೆ ಮಾರಾಟ ಮಾಡುತ್ತಿರುವ ಅಂಗಡಿಗಳ ವಿರುದ್ದ ಕ್ರಮ ಕೈಗೊಳ್ಳಬೇಕು- ರೈತಸಂಘ     ಕೋಲಾರ: ಮಾ.30: ನಗರಕ್ಕೆ ಸೀಮಿತವಾಗಿ ಗ್ರಾಮೀಣ ಪ್ರದೇಶಗಳನ್ನು ಮರೆತಿರುವ ಜನಪ್ರತಿನಿದಿಗಳನ್ನು ಹುಡುಕಿಕೊಟ್ಟು ಅಗತ್ಯ ವಸ್ತುಗಳನ್ನು ದುಪ್ಪಟ್ಟು ಬೆಲೆಗೆ ಮಾರಾಟ ಮಾಡುತ್ತಿರುವ ಅಂಗಡಿಗಳ ವಿರುದ್ದ ಕ್ರಮ ಕೈಗೊಳ್ಳಬೇಕೆಂದು ರೈತಸಂಘದ ಕಾರ್ಯಕರ್ತರು ಜಿಲ್ಲಾಡಳಿತವನ್ನು ಪತ್ರಿಕಾ ಹೇಳಿಕೆಯ ಮುಖಾಂತರ ಒತ್ತಾಯಿಸಿದ್ದಾರೆ. ಈ ಕುರಿತು ಪತ್ರಿಕಾ ಹೇಳಿಕೆ ನೀಡಿರುವ ರಾಜ್ಯ […]

Read More

ವರದಿ ಶಬ್ಬೀರ್ ಅಹಮ್ಮದ್ ಶ್ರೀನಿವಾಸಪುರ ಶ್ರೀನಿವಾಸಪುರ: ವರ್ತಕರು ಮಾ.30 ರಿಂದ ಕಡ್ಡಾಯವಾಗಿ ಪಟ್ಟಣದ ಸರ್ಕಾರಿ ಬಾಲಕಿಯರ ಪದವಿ ಪೂರ್ವ ಕಾಲೇಜು ಮೈದಾನದಲ್ಲಿ ವ್ಯಾಪಾರ ವಹಿವಾಟು ನಡೆಸಬೇಕು : ತಹಶೀಲ್ದಾರ್‌ ಎಸ್‌.ಎಂ.ಶ್ರೀನಿವಾಸ್‌    ಪಟ್ಟಣದ ಪುರಸಭಾ ಕಚೇರಿ ಸಭಾಂಗಣದಲ್ಲಿ ಭಾನುವಾರ ಏರ್ಪಡಿಸಿದ್ದ ವರ್ತಕರ ಸಭೆಯಲ್ಲಿ ಮಾತನಾಡಿ, ವರ್ತಕರಿಗೆ ವಸ್ತುಳನ್ನು ಇಟ್ಟುಕೊಳ್ಳಲು ಕೊಠಿಗಳನ್ನು ನೀಡಲಾಗುವುದು. ಪ್ರತಿದಿನ ನಿಗದಿತ ಸಂಖ್ಯೆಯ ವರ್ಗಕರು ವ್ಯಾಪಾರ ಮಾಡಲು ಅವಕಾಶ ನೀಡಲಾಗುವುದು. ಪಟ್ಟಣದಲ್ಲಿ ಅಂಗಡಿ ತೆರೆಯಲು ಅವಕಾಶ ಇರುವುದಿಲ್ಲ ಎಂದು ಹೇಳಿದರು.    ಅಗತ್ಯ ವಸ್ತುಗಳನ್ನು […]

Read More

ವರದಿ: ಶಬ್ಬೀರ್ ಅಹ್ಮದ್, ಶ್ರೀನಿವಾಸಪುರ ಶ್ರೀನಿವಾಸಪುರ:  ಅಡ್ಡಗಲ್‌ ಗ್ರಾಮದಲ್ಲಿ ಗ್ರಾಮ ಪಂಚಾಯಿತಿ ವತಿಯಿಂದ ಶನಿವಾರ ವೈರಾಣು ನಿರೋಧಕ ಔಷಧ ಸಿಂಪಡಣೆ ಮಾಡಲಾಯಿತು.   ಆರೋಗ್ಯ ನಿರೀಕ್ಷಕ ಸುಬ್ರಮಣಿ ಗ್ರಾಮಸ್ಥರನ್ನು ಉದ್ದೇಶಿಸಿ ಮಾತನಾಡಿ, ಕೊರೊನಾ ತಡೆಗೆ ಗ್ರಾಮಸ್ಥರು ಸಹಕರಿಸಬೇಕು. ನಗರ ಪ್ರದೇಶದಂತೆ ಗ್ರಾಮೀಣ ಪ್ರದೇಶದಲ್ಲೂ ಜನರು ಸಾಮಾಜಿಕ ಅಂತರ ಕಾಯ್ದುಕೊಳ್ಳಬೇಕು. ಸ್ವಚ್ಛತೆಗೆ ಆದ್ಯತೆ ನೀಡಬೇಕು. ಹೊರಗಡೆಯಿಂದ ಬರುವ ವ್ಯಕ್ತಿಗಳ ಬಗ್ಗೆ ಎಚ್ಚರ ವಹಿಸಬೇಕು. ಕೊರೊನಾ ರೋಗದ ಲಕ್ಷಣಗಳು ಕಂಡುಬಂದಲ್ಲಿ ವೈದ್ಯರಿಗೆ ತಿಳಿಸಬೇಕು ಎಂದು ಹೇಳಿದರು.   ಪಿಡಿಒ ಚಂದ್ರಪ್ರಕಾಶ್‌ […]

Read More

ವರದಿ: ಶಬ್ಬೀರ್ ಅಹ್ಮದ್, ಶ್ರೀನಿವಾಸಪುರ ಶ್ರೀನಿವಾಸಪುರ ಚೆಕ್‌ ಪೋಷ್ಟ್‌ಗಳಿಗೆ ತಹಶೀಲ್ದಾರ್‌ ಎಸ್‌.ಎಂ.ಶ್ರೀನಿವಾಸ್‌ ಸಿಬ್ಬಂದಿಯೊಂದಿಗೆ ಭೇಟಿ  ಶ್ರೀನಿವಾಸಪುರ ತಾಲ್ಲೂಕಿನ ಅಂತರ ರಾಜ್ಯ ಗಡಿಯಲ್ಲಿ ಸ್ಥಾಪಿಸಲಾಗಿರುವ ರಾಯಲ್ಪಾಡ್, ಸೋಮಿಯಾಜಲಹಳ್ಳಿ ಹಾಗೂ ಶೆಟ್ಟಿಹಳ್ಳಿ ಚೆಕ್‌ ಪೋಷ್ಟ್‌ಗಳಿಗೆ ತಹಶೀಲ್ದಾರ್‌ ಎಸ್‌.ಎಂ.ಶ್ರೀನಿವಾಸ್‌ ಸಿಬ್ಬಂದಿಯೊಂದಿಗೆ ಭೇಟಿ ನೀಡಿದ್ದರು. 

Read More

ಶಬ್ಬೀರ್ ಅಹಮ್ಮದ್ ಶ್ರೀನಿವಾಸಪುರ ಶ್ರೀನಿವಾಸಪುರ,  ಕೊರೊನಾ ವೈರಾಣು ಹರಡುವುದನ್ನು ತಡೆಯಲು ಪ್ರಕಟಿಸಲಾಗಿರುವ ಮಾರ್ಗ ಸೂಚಿಯನ್ನು ಉಲ್ಲಂಘಿಸುವವರವಿರುದ್ಧ ಶಿಸ್ತು ಕ್ರಮ ಜರುಗಿಸಲಾಗುವುದು: ಎಂ.ಶ್ರೀನಿವಾಸ್‌   ಪಟ್ಟಣದ ತಾಲ್ಲೂಕು ಕಚೇರಿ ಸಭಾಂಗಣದಲ್ಲಿ ಶುಕ್ರವಾರ ಏರ್ಪಡಿಸಿದ್ದ ಪುರಸಭೆ ಅಧಿಕಾರಿಗಳು, ವ್ಯಾಪಾರಿಗಳು, ಮೌಲ್ವಿಗಳು ಹಾಗೂ ಸಾರ್ವಜನಿಕರ ಸಭೆಯಲ್ಲಿ ಮಾತನಾಡಿ, ವ್ಯಾಪಾರಿಗಳು ತಮ್ಮ ಅಂಗಡಿ ಮುಂಗಟ್ಟಿನ ಮುಂದೆ, ಗ್ರಾಹಕರು ಸಾಮಾಜಿಕ ಅಂತರ ಕಾಯ್ದುಕೊಳ್ಳಲು ಅನುಕೂಲವಾಗುವಂತೆ ಎರಡು ಮೀಟರ್‌ ಅಂತರದಲ್ಲಿ ಗೆರೆ ಹಾಕಬೇಕು. ಯಾವುದೇ ಕಾರಣಕ್ಕೂ ನೂಕುನುಗ್ಗಲು ಉಂಟಾಗದಂತೆ ಎಚ್ಚರ ವಹಿಸಬೇಕು ಎಂದು ಹೇಳಿದರು.  ತಹಶೀಲ್ದಾರ್‌ […]

Read More

ವರದಿ: ಶಬ್ಬೀರ್ ಅಹ್ಮದ್, ಶ್ರೀನಿವಾಸಪುರ ಶ್ರೀನಿವಾಸಪುರ ಜಿ.ಪಂ.ನಿರ್ವಹಣಾಧಿಕಾರಿ ಸುದರ್ಶನ್‌, ಜಿ. ಪೊಲೀಸ್‌ ವರಿಷ್ಠಾಧಿಕಾರಿ ಕಾರ್ತಿಕ್‌ ರೆಡ್ಡಿ  ಕೊರೊನಾ ನಿಯಂತ್ರಣಕ್ಕೆ ತಾಲ್ಲೂಕು ಆಡಳಿತದಿಂದ ಕೈಗೊಳ್ಳಲಾದ ಮುಂಜಾಗ್ರತಾ ಕ್ರಮಗಳನ್ನು ಪರಿಶೀಲಿಸಿದರು. ಶ್ರೀನಿವಾಸಪುರ:  ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಸುದರ್ಶನ್‌, ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ ಕಾರ್ತಿಕ್‌ ರೆಡ್ಡಿ  ಭೇಟಿ ನೀಡಿ ಕೊರೊನಾ ನಿಯಂತ್ರಣಕ್ಕೆ ತಾಲ್ಲೂಕು ಆಡಳಿತದಿಂದ ಕೈಗೊಳ್ಳಲಾಗಿರುವ ಮುಂಜಾಗ್ರತಾ ಕ್ರಮಗಳನ್ನು ಪರಿಶೀಲಿಸಿದರು.    ಕರ್ನಾಟಕ ಆಂಧ್ರಪ್ರದೇಶದ ಗಡಿಯಲ್ಲಿ ಸ್ಥಾಪಿಸಲಾಗಿರುವ ತಾಲ್ಲೂಕಿನ ತನಿಖಾ ಕೇಂದ್ರಕ್ಕೆ ಭೇಟಿ ನೀಡಿ ಪೊಲೀಸ್, ಕಂದಾಯ ಹಾಗೂ ಆರೋಗ್ಯ […]

Read More

ವರದಿ: ಶಬ್ಬೀರ್ ಅಹ್ಮದ್, ಶ್ರೀನಿವಾಸಪುರ ಶ್ರೀನಿವಾಸಪುರ: ಪಟ್ಟಣದಲ್ಲಿ ಕರೊನಾ ಹಿನ್ನೆಲೆಯಲ್ಲಿ ಮುಂಜಾಗ್ರತಾ ಕ್ರಮವಾಗಿ ಪುರಸಭೆ ಸಿಬ್ಬಂದಿ  ಸಾರ್ವಜನಿಕ ಸ್ಥಳಗಳಲ್ಲಿ ಔಷಧ ಸಿಂಪಡಣೆ ಮಾಡಿದರು. ಪುರಸಭೆ ವತಿಯಿಂದ ಪಟ್ಟಣದಲ್ಲಿ ಸ್ವಚ್ಛತೆ ಪಾಲನೆಗೆ ಮೊದಲ ಆದ್ಯತೆ ನೀಡಲಾಗಿದೆ. ಕೊರೊನಾ ವೈರಸ್‌ ತಡೆಗೆ ಪೂರಕವಾದ ಎಲ್ಲ ಕ್ರಮ ಕೈಗೊಳ್ಳಲಾಗಿದೆ. ಈಗ ಪಟ್ಟಣದ ಎಲ್ಲ ವಾರ್ಡ್‌ಗಳಲ್ಲೂ ಔಷಧ ಸಿಂಪಡಣೆ ಮಾಡಲಾಗುವುದು. ಈಗಾಗಲೇ ಸಿಂಪಡಣಾ ಕಾರ್ಯ ಪ್ರಾರಂಭಿಸಲಾಗಿದೆ. ಸಿಂಪಡಣೆಗೆ ಅಗತ್ಯವಾದ ವಾಹನ ಹಾಗೂ ಸಲಕರಣೆಗಳನ್ನು ಸಿದ್ಧ ಸ್ಥಿತಿಯಲ್ಲಿ ಇಡಲಾಗಿದೆ ಎಂದು ಆರೋಗ್ಯ ನಿರೀಕ್ಷಕ ಕೆ.ಜಿ.ರಮೇಶ್‌ ವರದಿಗಾರ‘ಗೆ […]

Read More

ವರದಿ: ಶಬ್ಬೀರ್ ಅಹ್ಮದ್, ಶ್ರೀನಿವಾಸಪುರ ಶ್ರೀನಿವಾಸಪುರ: ಪಟ್ಟಣದಲ್ಲಿ ಇದೇ ಮೊದಲ ಬಾರಿಗೆ ಪಟ್ಟಣದಾದ್ಯಂತ ನಾಗರಿಕ ಸಂಚಾರ ಸಂಪೂರ್ಣ ಸ್ಥಗಿತ ಶ್ರೀನಿವಾಸಪುರ: ಪಟ್ಟಣದಲ್ಲಿ ಇದೇ ಮೊದಲ ಬಾರಿಗೆ ಪಟ್ಟಣದಾದ್ಯಂತ ನಾಗರಿಕ ಸಂಚಾರ ಸಂಪೂರ್ಣ ಸ್ಥಗಿಗೊಂಡಿತ್ತು. ಯಾರೊಬ್ಬರೂ ಮನೆಯಿಂದ ಹೊರಗೆ ಬರಲಿಲ್ಲ.  ಪಟ್ಟಣದಲ್ಲಿ ಅಂಗಡಿ ಮುಂಗಟ್ಟು ಸಂಪೂರ್ಣ ಮುಚ್ಚಲಾಗಿತ್ತು. ಎಪಿಎಸಿ ಮಾರುಕಟ್ಟೆಯಲ್ಲಿ ವ್ಯಾಪಾರ ವಹಿವಾಟು ಸ್ಥಗಿತಗೊಂಡಿತ್ತು,  ರಾಜ್ಯ ರಸ್ತೆ ಸಾರಿಗೆ ಸಂಸ್ಥೆ ಬಸ್‌ ನಿಲ್ದಾಣ, ಬಸ್‌ ಹಾಗೂ ಪ್ರಯಾಣಿಕರಿಲ್ಲದೆ ಬಿಕೋ ಎನ್ನುತ್ತಿತ್ತು. ಆಟೋಗಳು ರಸ್ತೆಗೆ ಇಳಿಯಲಿಲ್ಲ. ಯಾವುದೇ ವಾಹನ ಸಂಚಾರ […]

Read More