
ಕೋಲಾರ:- ನಗರದ 14 ಕೇಂದ್ರಗಳಲ್ಲಿ ಜೂ.30 ರಂದು ಶಿಕ್ಷಕರ ಅರ್ಹತಾ ಪರೀಕ್ಷೆ ನಡೆಯಲಿದ್ದು, ಯಾವುದೇ ಅವ್ಯವಹಾರ,ಗೊಂದಲಗಳಿಗೆ ಅವಕಾಶವಿಲ್ಲದಂತೆ ಎಲ್ಲಾ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳುವಂತೆ ಜಿಲ್ಲಾಧಿಕಾರಿ ಅಕ್ರಂ ಪಾಷಾ ಸೂಚನೆ ನೀಡಿದರು.ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ನಡೆದ ಟಿಇಟಿ ಪರೀಕ್ಷಾ ಪೂರ್ವಸಿದ್ದತಾ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡುತ್ತಿದ್ದರು.ಕೋಲಾರ ನಗರದ ಒಟ್ಟು 14 ಕೇಂದ್ರಗಳಲ್ಲಿ ಪರೀಕ್ಷೆ ನಡೆಯುತ್ತಿದ್ದು, ಬೆಳಗಿನ ಅಧಿವೇಶನ 9-30ರಿಂದ 12ರವರೆಗೂ ಪತ್ರಿಕೆ-1ರ ಪರೀಕ್ಷೆ 9 ಕೇಂದ್ರಗಳಲ್ಲಿ ಹಾಗೂ ಮಧ್ಯಾಹ್ನ 2 ರಿಂದ 4-30 ರವರೆಗೂ ಪತ್ರಿಕೆ-2ರ ಪರೀಕ್ಷೆ […]

ಕೋಲಾರ,ಜೂ.24: ಜುಲೈ 1ರ ಪತ್ರಿಕಾ ದಿನಾಚರಣೆ ಕೊಡುಗೆಯಾಗಿ ಕೋಲಾರ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಸದಸ್ಯರಿಗೆ ಆರ್.ಎಲ್.ಜಾಲಪ್ಪ ನಾರಾಯಣ ಹೃದಯಾಲಯವು ೧೪ ವರ್ಷಗಳನ್ನು ಪೂರೈಸಿರುವ ಹಿನ್ನಲೆಯಲ್ಲಿ ಆದ್ಯತೆ ಮೇಲೆ ಹಾಗೂ ರಿಯಾಯಿತಿ ದರದ ಚಿಕಿತ್ಸೆಗಾಗಿ ಪ್ರಿವಿಲೇಜ್ ಕಾರ್ಡ್ (ಹೆಲ್ತ್ ಕಾರ್ಡ್) ಅನ್ನು ಸೋಮವಾರ ಪತ್ರಕರ್ತರ ಭವನದಲ್ಲಿ ನಡೆದ ಕಾರ್ಯಕ್ರಮದಲ್ಲಿ ವಿತರಿಸಿತು. ಸಂಘದ ಅಧ್ಯಕ್ಷ ಬಿ.ವಿ.ಗೋಪಿನಾಥ್ ಅಧ್ಯಕ್ಷತೆಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಮೊದಲ ಹಂತದಲ್ಲಿ ಕೋಲಾರ ನಗರದ ಪತ್ರಕರ್ತರಿಗೆ ಈ ಕಾರ್ಡ್ಗಳನ್ನು ನೀಡಲಾಯಿತು. ಆಸ್ಪತ್ರೆಯ ತಜ್ಞ ವೈದ್ಯ ಡಾ.ಮುರಳಿ ಬಾಬು […]

ಶ್ರೀನಿವಾಸಪುರ : ಪಟ್ಟಣದ ವಾಸವಿ ಕನ್ಯಕಾಪರಮೇಶ್ವರಿ ದೇವಸ್ಥಾನದಲ್ಲಿ ಸೋಮವಾರ 33 ನೇ ವಾರ್ಷಿಕೋತ್ಸವದ ಅಂಗವಾಗಿ ಮೂಲ ಮೂರ್ತಿಗೆ ವಿಶೇಷ ಅಲಂಕಾರವನ್ನ ಮಾಡಲಾಗಿತ್ತು .

ಶ್ರೀನಿವಾಸಪುರ : ಮನುಷ್ಯನು ದಿನನತ್ಯದ ಜಂಜಾಟಗಳಲ್ಲಿ ತೊಡಗಿರುತ್ತಾನೆ . ಅವನಿಗೆ ಮಾನಸಿಕವಾಗಿ ಒಂದಿಲ್ಲದೊಂದು ಸಮಸ್ಯೆಗಳು ಇದ್ದೇ ಇರುತ್ತದೆ. ಎಷ್ಟೇ ಮಾನಸಿಕ ಒತ್ತಡಗಳು ಇದ್ದರೂ ಸಹ ದೇವಾಲಯಗಳಿಗೆ ಬಂದು ಹೋದರೆ ಮನಸ್ಸು ಸಂತಸಗೊಳ್ಳುತ್ತದೆ . ಮಾನಸಿಕವಾಗಿ ಸದೃಡವಾಗಿ ಇರಬಹುದುಎಂದು ತಹಶೀಲ್ದಾರ್ ಜಿ.ಎನ್.ಸುದೀಂದ್ರ ತಿಳಿಸಿದರು.ಪಟ್ಟಣದ ಪೊಲೀಸ್ ಸ್ಟೇಷನ್ ಬಳಿ ಸೋಮವಾರ ಗಣಪತಿ ಪ್ರತಿಷ್ಟಾಪನಾ ಕಾರ್ಯಕ್ರಮದಲ್ಲಿ ಪಾಲ್ಗುಂಡು ಮಾತನಾಡಿದರು.ಗಣಪತಿಯು ವಿಘ್ನಗಳನ್ನು ನಿವಾರಿಸುವವನು ಈ ಕಾರಣಕ್ಕಾಗಿ ವಿಶೇಷ ಮಹತ್ವವನ್ನು ನೀಡಲಾಗಿದೆ. ಹಾಗೂ ಯಾವುದೇ ಮಂಗಳಕರ ಕಾರ್ಯವನ್ನು ಆರಂಭಿಸುವ ಮುನ್ನ ಗಣಪತಿ ಪೂಜೆಯನ್ನು ಮಾಡಲಾಗವುದು. […]

ಶ್ರೀನಿವಾಸಪುರ : ಪಟ್ಟಣದ ಎಸ್‍ಎಫ್‍ಎಸ್ ಶಾಲಾ ಪ್ರಾರಂಭೋತ್ಸವ ಕಾರ್ಯಕ್ರಮ ನಡೆಯಿತು, ಕಾರ್ಯಕ್ರಮವನ್ನು ಉದ್ಘಾಟಿಸಿದ ಫಾದರ್ ಸ್ಯಾಂಟಿ ಕುರೈನ್, ವಿದ್ಯಾರ್ಥಿಗಳಿಗೆ ಶುಭ ಕೋರಿದರು. ಈ ಸಂದರ್ಭದಲ್ಲಿ ಫಾದರ್ ನೆಲ್ಸನ್, ಶಾಲಾ ಪ್ರಾಂಶುಲರು, ಶಿಕ್ಷಕರು, ವಿದ್ಯಾರ್ಥಿಗಳು, ಮತ್ತೀತರರು ಉಪಸ್ಥಿತರಿದ್ದರು

ಕೋಲಾರ : ಕೋಲಾರ ಜಿಲ್ಲೆ ಸೇರಿದಂತೆ ಇಡೀ ರಾಜ್ಯದಲ್ಲಿ ಇ-ಖಾತಾ ಹಾಗೂ ಮೂಟೇಷನ್ ಕುರಿತು ಸಮಸ್ಯೆಯಿದ್ದು, ಇನ್ನೂ ಮೂರು ತಿಂಗಳೊಳಗಾಗಿ ಏ ಹಾಗೂ ಬಿ-ಖಾತಾ ನೀಡಲು ಕ್ರಮಕೈಗೊಳ್ಳಲಾಗುವುದೆಂದು ಪೌರಾಡಳಿತ ಮತ್ತು ಹಜ್ ಸಚಿವರಾದ ರಹೀಮ್ ಖಾನ್ ಅವರು ತಿಳಿಸಿದರು. ಜಿಲ್ಲಾಧಿಕಾರಿಗಳ ಕಛೇರಿಯಲ್ಲಿ ಇಲಾಖಾವಾರು ಪ್ರಗತಿ ಪರಿಶೀಲನೆ ನಂತರ ಸುದ್ದಿಗೋಷ್ಠಿಯಲ್ಲಿ ಮಾಧ್ಯಮದವರೊಂದಿಗೆ ಮಾತನಾಡುತ್ತಾ, ಕೋಲಾರದಲ್ಲಿ ಅರ್ಧಕ್ಕಿಂತ ಹೆಚ್ಚು ಜನರು ಅಂಗಡಿ-ಮುಂಗಟ್ಟು ಹಾಗೂ ಮನೆಗಳನ್ನು ಕಟ್ಟಿಕೊಂಡಿದ್ದಾರೆ. ಅವರಿಗೆ ರಸ್ತೆ, ವಿದ್ಯುತ್, ನೀರು, ಚರಂಡಿ ಮುಂತಾದ ಮೂಲಭೂತ ಸೌಕರ್ಯಗಳು ಬೇಕಾಗಿವೆ. ಆದರೆ […]

ಶ್ರೀನಿವಾಸಪುರ: ರೋಟರಿ ಸಂಸ್ಥೆಯು ಸೇವಾ ಮನೋಭಾವನೆಯನ್ನು ಹೊಂದಿದ್ದು, ಶಿಕ್ಷಣ ಮತ್ತುಆರೋಗ್ಯಕ್ಕೆ ಹೆಚ್ಚು ಒತ್ತು ನೀಡಲಾಗುತ್ತಿದೆಎಂದುರೋಟರಿ ಶ್ರೀನಿವಾಸಪುರ ಸೆಂಟ್ರಲ್‍ನ ಅಧ್ಯಕ್ಷರಾದ ಎಸ್.ಎನ್. ಮಂಜುನಾಥರೆಡ್ಡಿ ತಿಳಿಸಿದರು.ರೋಟರಿ ಶ್ರೀನಿವಾಸಪುರ ಸೆಂಟ್ರಲ್ ಹಾಗೂ ಬೆಂಗಳೂರಿನ ರೋಟರಿ ಸೌತ್‍ಕ್ಲಬ್‍ನ ಸಹಭಾಗಿತ್ವದಲ್ಲಿತಾಲ್ಲೂಕಿನ ಯಲ್ದೂರಿನಲ್ಲಿರುವ ಶ್ರೀ ಶ್ರೀನಿವಾಸ ಪಬ್ಲಿಕ್ ಶಾಲೆಯಲ್ಲಿ1 ರಿಂದ 10ನೇ ತರಗತಿಯ ಸುಮಾರು 150 ಮಕ್ಕಳಿಗೆ ಉಚಿತವಾಗಿ ಲೇಖನ ಸಾಮಗ್ರಿಗಳನ್ನು ವಿತರಿಸಿ ಮಾತನಾಡಿದಎಸ್.ಎನ್. ಮಂಜುನಾಥರೆಡ್ಡಿ, ವಿದ್ಯಾರ್ಥಿಗಳು ಈ ಪುಸ್ತಕಗಳನ್ನು ಉಪಯೋಗಿಸಿಕೊಳ್ಳಬೇಕು, ಒಳ್ಳೆಯ ಶಿಕ್ಷಣವನ್ನು ಪಡೆದುಕೊಳ್ಳಬೇಕು, ಭವಿಷ್ಯದಲ್ಲಿಉತ್ತಮ ಪ್ರಜೆಗಳಾಗಿ ಬೆಳೆದು ಸೇವಾ ಮನೋಭಾವವನ್ನು ಬೆಳೆಸಿಕೊಳ್ಳಬೇಕು, ರೋಟರಿ […]

ಶ್ರೀನಿವಾಸಪುರ : ಶ್ರೀನಿವಾಸಪುರ ತಾಲೂಕಿಗೆ ಬರುತ್ತಿದ್ದ ಕೆಸಿ ವ್ಯಾಲಿ ನೀರನ್ನು ಒಂದು ವರ್ಷದಿಂದ ನಿಲ್ಲಿಸಿರುತ್ತಾರೆ ಇದರಿಂದ ರೈತರಿಗೆ ತುಂಬಾ ಅನಾನುಕೂಲವಾಗಿದ್ದು, ಕೂಡಲೇ ತಾಲೂಕಿನ ಎಲ್ಲಾ ಕೆರೆಗಳಿಗೂ ನೀರನ್ನ ಹರಿಸಬೇಕೆಂದು ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ತಾಲೂಕು ಅಧ್ಯಕ್ಷ ನಂಬಿಹಳ್ಳಿ ಎನ್.ಜಿ. ಶ್ರೀರಾಮರೆಡ್ಡಿ ಒತ್ತಾಯಿಸಿದರು.ಪಟ್ಟಣದ ತಹಶೀಲ್ದಾರ್ ಕಚೇರಿ ಮುಂಭಾಗ ಗುರುವಾರ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ವತಿಯಿಂದ ಪ್ರತಿಭಟನೆ ನಡೆಸಿ ರಾಜ್ಯ ಸರ್ಕಾರದ ವಿರುದ್ಧ ಘೋಷಣೆಗಳನ್ನು ಕೂಗಿ ಪೊಲೀಸ್ ನಿರೀಕ್ಷಕ ಎಂ.ಬಿ.ಗೊರವನಕೊಳ್ಳ ರವರಿಗೆ […]

ಶ್ರೀನಿವಾಸಪುರ : ರಾಷ್ಟ್ರೀಯ ಹಬ್ಬಗಳ ಸಮಿತಿಯಿಂದ 27 ರಂದು ಕೆಂಪೇಗೌಡ ಆಚರಣೆಯನ್ನು ಎಲ್ಲಾ ಕಚೇರಿಗಳಲ್ಲಿ ಕೆಂಪೇಗೌಡರ ಭಾವಚಿತ್ರವನ್ನು ಇಟ್ಟು ಪೂಜೆ ಮಾಡಬೇಕು ನಂತರ ತಾಲೂಕು ಕಚೇರಿಯಲ್ಲಿ ನಡೆಯುವ ಕಾರ್ಯಕ್ರಮದಲ್ಲಿ ಪಾಲ್ಗುಳ್ಳಬೇಕು ಎಂದು ವಿವಿಧ ಇಲಾಖಾಧಿಕಾರಿಗಳಿಗೆ ತಹಶೀಲ್ದಾರ್ ಜಿ.ಎನ್.ಸುದೀಂದ್ರ ಸೂಚನೆ ನೀಡಿದರು.ಪಟ್ಟಣದ ತಹಶೀಲ್ದಾರ್ ಕಚೇರಿಯ ಸಭಾಂಗಣದಲ್ಲಿ ಬುಧವಾರ ಕೆಂಪೇಗೌಡ ಜಂಯಿತಿ ಆಚರಣೆಗಾಗಿ ನಡೆದ ಪೂರ್ವ ಭಾವಿ ಸಭೆಯಲ್ಲಿ ಮಾತನಾಡಿದರು.ಅಲ್ಲದೆ ಕೆಂಪೇಗೌಡರ ಜೀವನ ಚರಿತ್ರೆಯನ್ನು ವಿದ್ಯಾರ್ಥಿಗಳು ತಿಳುದುಕೊಳ್ಳುವ ನಿಟ್ಟಿನಲ್ಲಿ ಶಾಲಾಕಾಲೇಜುಗಳಲ್ಲಿ ಪ್ರಬಂದ ಸ್ಪರ್ದೆ ಮಾಡಿಸಿ ಪ್ರಬಂದ ವಿಜೇತ ವಿದ್ಯಾರ್ಥಿಗಳಿಗೆ ಬಹುಮಾನಗಳನ್ನು […]