
ಶ್ರೀನಿವಾಸಪುರ 1 : ಕಚೇರಿಯಲ್ಲಿ ಆಸನ ವ್ಯವಸ್ಥೆ ಇಲ್ಲ, ಶೌಚಾಲಯದ ವ್ಯವಸ್ಥೆ, ಕುಡಿಯುವ ನೀರಿನ ವ್ಯವಸ್ಥೆ ಇಲ್ಲ ಎಂದು ಸಾರ್ವಜನಿಕರ ಪ್ರಶ್ನೆಗೆ ಉತ್ತರಿಸಿ, ಮುಂದಿನ ದಿನಗಳಲ್ಲಿ ಪ್ರತಿಯೊಂದು ಹಂತ ಹಂತವಾಗಿ ವ್ಯವಸ್ಥೆ ಮಾಡಿಕೊಡಲಾಗುವುದು ಎಂದು ಜಿಲ್ಲಾಧಿಕಾರಿ ರವಿ ಭರವಸೆ ನೀಡಿದರು.ಪಟ್ಟಣದ ತಹಶೀಲ್ದಾರ್ ಕಚೇರಿಗೆ ಬುಧವಾರ ದೀಡಿರ್ ಬೇಟಿ ನೀಡಿ ಕಚೇರಿಯಲ್ಲಿನ ದಾಖಲೆಗಳನ್ನು ಪರಿಶೀಲಿಸಿ ಮಾತನಾಡಿದರು.ದಾಖಲೆಗಳು ಕೆಲವೊಮ್ಮೆ ಹರಿದುಹೋಗುತ್ತದೆ. ಕಳೆದುಹೋಗುವ ಸಂದರ್ಭವು ಇರಬಹುದು , ಮೂಲ ದಾಖಲೆಗಳು ನಾಪತ್ತೆಯಾಗುವುದು ಈ ಹಿನ್ನೆಲೆಯಲ್ಲಿ ಇಲಾಖೆ ವತಿಯಿಂದ ದಾಖಲೆಗಳನ್ನು ಡಿಜಟಲೀಕರಣ ಮೂಲಕ […]

ಕೋಲಾರ:- ಎಸ್ಸೆಸ್ಸೆಲ್ಸಿ ಮಕ್ಕಳಲ್ಲಿನ ಪರೀಕ್ಷಾ ಗೊಂದಲ ನಿವಾರಣೆಗಾಗಿ ಮಾ.13 ರ ಗುರುವಾರ ಬೆಳಗ್ಗೆ 11 ಗಂಟೆಯಿಂದ ಮಧ್ಯಾಹ್ನ 2 ಗಂಟೆಯವರೆಗೂ ನಗರದ ಶಾಲಾ ಶಿಕ್ಷಣ ಇಲಾಖೆಯ ಉಪನಿರ್ದೇಶಕರ ಕಚೇರಿಯ ಡಿವಿಜಿ ಸಭಾಂಗಣದಲ್ಲಿ `ಫೋನ್ ಇನ್ ಕಾಯಕ್ರಮ’ ಹಮ್ಮಿಕೊಳ್ಳಲಾಗಿದೆ ಎಂದು ಡಿಡಿಪಿಐ ಕೃಷ್ಣಮೂರ್ತಿ ತಿಳಿಸಿದ್ದಾರೆ.ಈ ಕುರಿತು ಮಾಹಿತಿ ನೀಡಿರುವ ಅವರು, ಫೋನ್ ಇನ್ ಕಾರ್ಯಕ್ರಮದಲ್ಲಿ ತಮ್ಮೊಂದಿಗೆ ಶಿಕ್ಷಣಾಧಿಕಾರಿಗಳು, ವಿಷಯ ಪರಿವೀಕ್ಷಕರು, ವಿಷಯ ಸಂಪನ್ಮೂಲ ವ್ಯಕ್ತಿಗಳು ಪಾಲ್ಗೊಳ್ಳಲಿದ್ದು, ವಿದ್ಯಾರ್ಥಿಗಳು ಭಾಷಾ ಮತ್ತು ಐಚ್ಚಿಕ ವಿಷಯಗಳಿಗೆ ಮತ್ತು ಪರೀಕ್ಷೆಗೆ ಸಂಬಂಧಿಸಿದ ಗೊಂದಲಗಳಿದ್ದರೆ […]

ಬರಹ ; ಶಬ್ಬೀರ್ ಅಹ್ಮದ್, ಶ್ರೀನಿವಾಸಪುರ ಶ್ರೀನಿವಾಸಪುರ : ರಂಜಾನ್ ಮಾಸವು ಮುಸ್ಲಿಂ ಸಮುದಾಯದ ಪವಿತ್ರ ಉಪವಾಸ ಮತ್ತು ಪ್ರಾರ್ಥನೆಯ ಸಮಯ. ಈ ಅವಧಿಯಲ್ಲಿ ಊಟದ ತಯಾರಿ ಮತ್ತು ಆಹಾರದ ವ್ಯಾಪಾರವು ಹೆಚ್ಚಾಗುತ್ತದೆ.ಶ್ರೀನಿವಾಸಪುರ ಪಟ್ಟಣದಲ್ಲಿಯೂ ಈ ಸಂಭ್ರಮ ಸ್ಪಷ್ಟವಾಗಿ ಕಾಣಸಿಗುತ್ತಿದ್ದು, ವಿಶೇಷವಾಗಿ ಆಜಾದ್ ರಸ್ತೆ, ಜಾಮಿಯಾ ಮಸೀದಿ, ಸೂಫಿಯ ಮಸೀದಿ ಹಾಗೂ ನೂರಾಣಿ ಮಸೀದಿ ಸುತ್ತಮುತ್ತಲಿನ ಪ್ರದೇಶಗಳು ಸಮೋಸ ಖರೀದಿ ಕೇಂದ್ರಗಳಾಗಿವೆ.ಶ್ರೀನಿವಾಸಪುರದಲ್ಲಿ ರಂಜಾನ್ ತಿಂಗಳ ವಿಶೇಷ ಆಹಾರಗಳ ಬೇಡಿಕೆ ಹೆಚ್ಚಿದ್ದು, ಸಮೋಸ ವ್ಯಾಪಾರಕ್ಕೆ ಭಾರೀ ಗರಿಗೆದರಿದೆ. ಪ್ರತಿದಿನ […]

ಶ್ರೀನಿವಾಸಪುರದಲ್ಲಿ, ರಾಜ್ಯ ಮಟ್ಟದ ಮಹಿಳಾ ಮಾಣಿಕ್ಯ ಪ್ರಶಸ್ತಿ ಪಡೆದ ಭಾರತೀಯ ಸಾಹಿತ್ಯ ಪರಿಷತ್ತಿನ ಜಿಲ್ಲಾ ಘಟಕದ ಪ್ರಧಾನ ಕಾರ್ಯದರ್ಶಿ ಮಾಯಾ ಬಾಲಚಂದ್ರ ಅವರನ್ನು ಕನ್ನಡ ಸಾಹಿತ್ಯ ಪರಿಷತ್ತಿನ ವತಿಯಿಂದ ಸೋಮವಾರ ಸನ್ಮಾನಿಸಲಾಯಿತು.ಮಾಯಾ ಬಾಲಚಂದ್ರ ಪ್ರತಿಭೆಗೆ ಸಂದ ಪ್ರಶಸ್ತಿಶ್ರೀನಿವಾಸಪುರ: ಪಟ್ಟಣದ ಸಪ್ತಸ್ವರ ಸಂಗೀತ ವಿದ್ಯಾಲಯದಲ್ಲಿ ಸೋಮವಾರ ಏರ್ಪಡಿಸಿದ್ದ ಸಮಾರಂಭದಲ್ಲಿ ರಾಜ್ಯ ಮಟ್ಟದ ಮಹಿಳಾ ಮಾಣಿಕ್ಯ ಪ್ರಶಸ್ತಿ ಪಡೆದ ಭಾರತೀಯ ಸಾಹಿತ್ಯ ಪರಿಷತ್ತಿನ ಜಿಲ್ಲಾ ಘಟಕದ ಪ್ರಧಾನ ಕಾರ್ಯದರ್ಶಿ ಮಾಯಾ ಬಾಲಚಂದ್ರ ಅವರನ್ನು ಕನ್ನಡ ಸಾಹಿತ್ಯ ಪರಿಷತ್ತಿನ ವತಿಯಿಂದ ಸೋಮವಾರ […]

ಶ್ರೀನಿವಾಸಪುರ : ತಾಲೂಕಿನ ಬೈರಗಾನಹಳ್ಳಿ ಗ್ರಾಮ ಪಂಚಾಯಿತಿಯಲ್ಲಿ ಒಟ್ಟು ೧೬ ಸದಸ್ಯರಿದ್ದು ಅದರಲ್ಲಿ ೯ ಸದಸ್ಯರು ಹಾಜರಿದ್ದರು ಇನ್ನುಳಿದ ೭ ಸದಸ್ಯರು ಗೈರುಹಾಜರಾಗಿದ್ದರು.ಈ ಹಿಂದೆ ಅಧ್ಯಕ್ಷರಾಗಿದ್ದ ನೇತ್ರಾವತಿ ರಾಜಿನಾಮೆಯಿಂದ ತೆರವಾಗಿದ್ದ ಸ್ಥಾನಕ್ಕೆ ಸೋಮವಾರ ನಡೆದ ಚುನಾವಣೆಯಲ್ಲಿ ಪರಿಶಿಷ್ಟ ಜಾತಿಗೆ ಸಂಬಂದಿಸಿದ ಸಮುದಾಯಕ್ಕೆ ಅಧ್ಯಕ್ಷ ಸ್ಥಾನ ಮೀಸಲಾಗಿ ಪರಿಶಿಷ್ಟ ಜಾತಿ ಸಮುದಾಯಕ್ಕೆ ಸೇರಿದ ಬೈಕೊತ್ತೂರು ಚಿನ್ನ ವೆಂಕಟರವಣ ಒಬ್ಬರೇ ನಾಮಪತ್ರ ಸಲ್ಲಿಸಿದ ಹಿನ್ನೆಲೆಯಲ್ಲಿ ಅವರನ್ನು ಚುನಾವಣಾ ಅಧಿಕಾರಿ ಕಲ್ಯಾಣ ಸ್ವಾಮಿ ಘೋಷಿಸಿದರು.ಮುಖಂಡ ರಘುನಾಥ ರೆಡ್ಡಿ ಮಾತನಾಡಿ ಸರ್ಕಾರದ ಯೋಜನೆಗಳ […]

ಕೋಲಾರ:- ಸಂಸ್ಕಾರ ಕಲಿಸುವುದು ಶಿಕ್ಷರಷ್ಟೇ ಪೋಷಕರದ್ದು ಜವಾಬ್ದಾರಿಯಾಗಿದೆ, ಗುಣಾತ್ಮಕ ಶಿಕ್ಷಣ ಸಿಗುವ ಸರ್ಕಾರಿ ಶಾಲೆಗಳ ಬಗ್ಗೆ ಕೀಳಿರಿಮೆ ತೊರೆದು ಮಕ್ಕಳನ್ನು ದಾಖಲಿಸಿ ನಮ್ಮೂರ ಶಾಲೆ ಅಭಿವೃದ್ದಿಗೆ ಗ್ರಾಮದ ಪ್ರತಿಯೊಬ್ಬರೂ ಕೈಜೋಡಿಸಿ ಎಂದು ಶಾಸಕ ಸಮೃದ್ದಿ ಮಂಜುನಾಥ್ ಕರೆ ನೀಡಿದರು.ಜಿಲ್ಲೆಯ ಮಲ್ಲನಾಯಕನಹಳ್ಳಿ ಸರ್ಕಾರಿ ಪ್ರೌಢಶಾಲೆಯಲ್ಲಿ ಶಾಲಾ ವಾರ್ಷಿಕೋತ್ಸವ ಹಾಗೂ ಮಹಿಳಾ ದಿನಾಚರಣೆಗೆ ಚಾಲನೆ ನೀಡಿದ ಅವರು, ಸಾಧಕ ಮಕ್ಕಳಿಗೆ ಬಹುಮಾನ ವಿತರಿಸಿ ಮಾತನಾಡಿದರು.ಸರ್ಕಾರಿ ಶಾಲೆಗಳೆಂಬ ಕೀಳಿರಿಮೆ ತೋರದಿರಿ, ಗುಣಾತ್ಮಕ ಶಿಕ್ಷಣ ಹಾಗೂ ಸಂಸ್ಕಾರ ಕಲಿಸುವ ಸಾಧಕ ಶಿಕ್ಷಕರು ಇಲ್ಲಿ […]

ಶ್ರೀನಿವಾಸಪುರ ತಾಲ್ಲೂಕಿನ ಪನಸಮಾಕನಹಳ್ಳಿ ಗ್ರಾಮದಲ್ಲಿ ಶನಿವಾರ, ಅಖಿಲ ಭಾರತೀಯ ಸಾಹಿತ್ಯ ಪರಿಷತ್ತಿನ ತಾಲ್ಲೂಕು ಘಟಕದಿಂದ ಸಾಹಿತಿ ಆರ್.ಚೌಡರೆಡ್ಡಿ, ಪತ್ನಿ ಬಿ.ವಿ.ಸುಗುಣ ಅವರನ್ನು ಸನ್ಮಾನಿಸಲಾಯಿತು.ಸಾಹಿತ್ಯ ಸಮಾಜ ಕಟ್ಟುವ ಸಾಧನವಾಗಬೇಕು – ಆರ್.ಚೌಡರೆಡ್ಡಿಶ್ರೀನಿವಾಸಪುರ: ತಾಲ್ಲೂಕಿನ ಪನಸಮಾಕನಹಳ್ಳಿ ಗ್ರಾಮದಲ್ಲಿ ಅಖಿಲ ಭಾರತೀಯ ಸಾಹಿತ್ಯ ಪರಿಷತ್ತಿನ ತಾಲ್ಲೂಕು ಘಟಕದ ವತಿಯಿಂದ ಶನಿವಾರ, ಸಾಹಿತಿಗಳ ಸಂಪರ್ಕ ಅಭಿಯಾನ ಕಾರ್ಯಕ್ರಮದಡಿ ಜಿಲ್ಲೆಯ ಹಿರಿಯ ಸಾಹಿತಿ ಆರ್.ಚೌಡರೆಡ್ಡಿ ಅವರನ್ನು ಸನ್ಮಾನಿಸಿ ಸಂವಾದ ನಡೆಸಲಾಯಿತು.ಅಖಿಲ ಭಾರತೀಯ ಸಾಹಿತ್ಯ ಪರಿಷತ್ತಿನ ತಾಲ್ಲೂಕು ಘಟಕದ ಅಧ್ಯಕ್ಷ ಹಾಗೂ ಸಾಹಿತಿ ಎನ್.ಶಂಕರೇಗೌಡ, ಸಾಹಿತಿ […]

ಶ್ರೀನಿವಾಸಪುರ: ಫೆಬ್ರವರಿ ಮಾಹೆಯಲ್ಲಿ ಕರ್ನಾಟಕ ಪ್ರೌಢ ಶಿಕ್ಷಣ ಪರೀಕ್ಷಾ ಮಂಡಳಿ ನಡೆಸಿದ ಕಂಪ್ಯೂಟರ್ ಆಫೀಸ್ ಆಟೋಮೇಶನ್ ಪರೀಕ್ಷೆಗಳಲ್ಲಿ ಪಟ್ಟಣದ ಕರ್ನಾಟಕ ವಾಣಿಜ್ಯ ಮತ್ತು ಕಂಪ್ಯೂಟರ್ ಶಿಕ್ಷಣ ಸಂಸ್ಥೆಗೆ(ಕಿಟ್) 06 ಡಿಸ್ಟಿಂಗ್‍ಷನ್ಸ್ ನೊಂದಿಗೆ (ಡಿಸ್ಟಿಂಗ್‍ಷನ್ಸ್) ಶೇಕಡ 100ರಷ್ಟು ಫಲಿತಾಂಶ ದೊರೆತಿದೆ ಎಂದು ಸಂಸ್ಥೆಯ ಪ್ರಾಂಶುಪಾಲರಾದ ಎನ್. ಕೃಷ್ಣಮೂರ್ತಿ ತಿಳಿಸಿದ್ದಾರೆ.ಪಟ್ಟಣದ ಎಂ.ಜಿ.ರಸ್ತೆಯಲ್ಲಿರುವ ಕರ್ನಾಟಕ ವಾಣಿಜ್ಯ ಮತ್ತು ಕಂಪ್ಯೂಟರ್ ಶಿಕ್ಷಣ ಸಂಸ್ಥೆಗೆ (ಕಿಟ್) ಕಳೆದ ಫೆಬ್ರವರಿ ಮಾಹೆಯಲ್ಲಿ ರಾಜ್ಯಮಟ್ಟದಲ್ಲಿ ಕರ್ನಾಟಕ ಪ್ರೌಡ ಶಿಕ್ಷಣ ಪರೀಕ್ಷ ಮಂಡಳಿಯು ನಡೆಸಿದ ಕಂಪ್ಯೂಟರ್ ಆಫೀಸ್ ಆಟೋಮೇಶನ್ […]

ಶ್ರೀನಿವಾಸಪುರ : ವಿದ್ಯಾರ್ಥಿಗಳು ತಮ್ಮ ಶಿಕ್ಷಣದ ನಂತರ ತಮ್ಮ ವೃತ್ತಿ ಜೀವನದಲ್ಲಿ ಎಷ್ಟೇ ಉನ್ನತ ಸ್ಥಾನಕ್ಕೇರಿದರು ಜನ್ಮ ಕೊಟ್ಟ ತಂದೆ ತಾಯಿ ವಿದ್ಯೆ ನೀಡಿದ ಗುರು ಶಾಲೆ ಹಾಗೂ ತಮ್ಮ ಊರನ್ನು ಎಂದಿಗೂ ಮರೆಯಬಾರದು ಎಂದು ಜ್ಙಾನಾದ್ರಿ ಪದವಿ ಕಾಲೇಜಿನ ಪ್ರಾಂಶುಪಾಲ ಮಲ್ಲಿಕಾರ್ಜುನ ರೆಡ್ಡಿ ಕರೆ. ನೀಡಿದರು. ಶ್ರೀನಿವಾಸಪುರ ತಾಲೂಕಿನ ಯಲ್ದೂರು ಗ್ರಾಮದ ನ್ಯಾಷನಲ್ ಹೈಸ್ಕೂಲಿನಲ್ಲಿ ಹಮ್ಮಿಕೊಂಡಿದ್ದ 10ನೇ ತರಗತಿ ವಿದ್ಯಾರ್ಥಿಗಳ ಬೀಳ್ಕೊಡುಗೆ ಸಮಾರಂಭದಲ್ಲಿ ಭಾಗವಹಿಸಿ ಮಾತನಾಡುತ್ತಾ ವಿದ್ಯಾರ್ಥಿಗಳು ತಂದೆ-ತಾಯಿಗಳು ಹಾಗೂ ಗುರುಗಳ ಸಹಕಾರದೊಂದಿಗೆ ಹೆಚ್ಚು ಶ್ರಮವಹಿಸಿ […]