ಶ್ರೀನಿವಾಸಪುರ : ಕೇಂದ್ರ ಚುನಾವಣಾ ಆಯೋಗದ ವಿಶೇಷ ಸಮಗ್ರ ಮತದಾರರ ಪಟ್ಟಿ ಪರಿಷ್ಕರಣೆ (SIR) ಕಾರ್ಯಕ್ರಮದಡಿ ನಿಖರ ಹಾಗೂ ಶುದ್ಧ ಮತದಾರರ ಪಟ್ಟಿಯನ್ನು ಸಿದ್ಧಪಡಿಸುವ ಉದ್ದೇಶದಿಂದ ಗ್ರಾಮೀಣ ಮಟ್ಟದಲ್ಲಿ ಜಾಗೃತಿ ಜಾಥಾ ಸೇರಿದಂತೆ ವಿವಿಧ ಅರಿವು ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗುವುದು ಎಂದು ತಾಲೂಕು ಚುನಾವಣಾಧಿಕಾರಿ (ಇಆರ್ಒ) ಟಿ.ಕೆ. ರಮೇಶ್ ತಿಳಿಸಿದರು. ಪಟ್ಟಣದ ತಾಲೂಕು ಕಚೇರಿ ಸಭಾಂಗಣದಲ್ಲಿ ಸೋಮವಾರ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ವಿಧಾನಸಭಾ ಕ್ಷೇತ್ರದಲ್ಲಿ 2 ಲಕ್ಷಕ್ಕೂ ಅಧಿಕ ಮತದಾರರಿದ್ದು, ಜೂನ್ 30ರಿಂದ ಜುಲೈ 29ರವರೆಗೆ ಬೂತ್ […]
ಕೋಲಾರ:- ಉಪ ಅರಣ್ಯ ಸಂರಕ್ಷಣಾಧಿಕಾರಿಗಳು ಸೇರಿದಂತೆ ಇಲಾಖೆಯ ವಿವಿಧ ಅಧಿಕಾರಿಗಳು ನಡೆಸಿರುವ ಭ್ರಷ್ಟಾಚಾರ, ಸಂಬಂಧಿಕರು, ಆಪ್ತರ ಹೆಸರಿನಲ್ಲಿ ಮಾಡಿರುವ ಅಪಾರ ಆಸ್ತಿಯ ಕುರಿತು ಸಮಗ್ರ ತನಿಖೆ ನಡೆಸಬೇಕು ಎಂದು ಆಗ್ರಹಿಸಿ ಮತ್ತು ಸರ್ವಜನಿಕರಿಗೆ ಅಗತ್ಯ ಗಿಡಗಳನ್ನು ಒದಗಿಸಬೇಕು, ಕೃಷಿ ಅರಣ್ಯ ಪ್ರೋತ್ಸಾಹಧನದ ಮೊತ್ತ ಹೆಚ್ಚಿಸಲು ಆಗ್ರಹಿಸಿ ಬಹುಜನ ಸಮೈಖ್ಯ ಸಮಿತಿಯಿಂದ ಜಿಲ್ಲಾಧಿಕಾರಿಗಳ ಕಚೇರಿ ಮುಂದೆ ಪ್ರತಿಭಟನೆ ನಡೆಸಿ ಮನವಿ ಸಲ್ಲಿಸಲಾಯಿತು.ಮನವಿ ಸಲ್ಲಿಸಿ ಮಾತನಾಡಿದ ಸಂಘಟನೆಯ ಮುಖಂಡರು, ಅರಣ್ಯ ಇಲಾಖೆ ವತಿಯಿಂದ ಸರ್ವಜನಿಕರಿಗೆ ಉತ್ತಮವಾದ ಎತ್ತರವಾದ ಹುಣಸೆ, ತೇಗ, […]
ಕೋಲಾರ:- ದೇವರು ಕೊಟ್ಟಿದ್ದನ್ನು ಇತರರಿಗೆ ಹಂಚಿ, ಬಡವರಿಗೆ ಸಹಾಯ ಮಾಡುವ ಮಾಡುವ ಸೇವಾ ಕಾರ್ಯಗಳಿಂದ ಮನಸ್ಸಿಗೆ ನೆಮ್ಮದಿ, ಶಾಂತಿಯನ್ನು ನೀಡುತ್ತವೆ ಎಂದು ಎಲ್.ಜಿ.ಫೌಂಡೇಷನ್ ಸಂಸ್ಥಾಪಕ ಎಂ.ಲಕ್ಷ್ಮಣ್ಗೌಡ ತಿಳಿಸಿದರು.ನಗರದ ಪತ್ರಕರ್ತರ ಭವನದಲ್ಲಿ ಸೋಮವಾರ ಕೋಲಾರ ಮತ್ತು ಚಿಕ್ಕಬಳ್ಳಾಪುರ ಜಿಲ್ಲಾ ಕಾರ್ಯನಿರತ ಪತ್ರಕರ್ತರ ವಿವಿಧೋದ್ದೇಶ ಸಹಕಾರ ಸಂಘ ನಿಯಮಿತ ಹಾಗೂ ಎಲ್.ಜಿ ಫೌಂಡೇಷನ್ ವತಿಯಿಂದ ಪತ್ರಕರ್ತರ ಮಕ್ಕಳಿಗೆ ಹಾಗೂ 11 ಸರ್ಕಾರಿ ಶಾಲೆಯ 600 ಮಕ್ಕಳಿಗೆ ಶೈಕ್ಷಣಿಕ ಪರಿಕರಗಳ ವಿತರಣಾ ಕಾರ್ಯಕ್ರಮಕ್ಕೆ ಚಾಲನೆ ನೀಡಿ, ಮಕ್ಕಳಿಗೆ ಬ್ಯಾಗ್, ನೋಟ್ಪುಸ್ತಕಗಳು ಸೇರಿದಂತೆ […]
ಶ್ರೀನಿವಾಸಪುರ : ಕ್ಷೇತ್ರದ ಸಮಗ್ರ ಅಭಿವೃದ್ಧಿಗೆ ಆದ್ಯತೆ ನೀಡಿರುವ ಶಾಸಕ ಜಿ.ಕೆ. ವೆಂಕಟಶಿವಾರೆಡ್ಡಿ ಅವರ ಪ್ರಯತ್ನದ ಫಲವಾಗಿ ರಸ್ತೆ ಅಭಿವೃದ್ಧಿ ಸೇರಿದಂತೆ ವಿವಿಧ ಮೂಲಸೌಕರ್ಯ ಕಾಮಗಾರಿಗಳಿಗೆ ಸರ್ಕಾರದಿಂದ ಅನುದಾನ ಬಿಡುಗಡೆಯಾಗಿದ್ದು, ಪುರಸಭೆ ವ್ಯಾಪ್ತಿಯ ಹಲವು ರಸ್ತೆ ಕಾಮಗಾರಿಗಳಿಗೆ ಚಾಲನೆ ದೊರೆತಿದೆ. ಹಲವು ವರ್ಷಗಳಿಂದ ಅಭಿವೃದ್ಧಿಗಾಗಿ ಕಾಯುತ್ತಿದ್ದ ಸಾರ್ವಜನಿಕರು ಈ ಬೆಳವಣಿಗೆಯನ್ನು ಸ್ವಾಗತಿಸಿದ್ದು, ಕಾಮಗಾರಿಗಳು ಗುಣಮಟ್ಟ ಹಾಗೂ ಸಂಪೂರ್ಣ ಪಾರದರ್ಶಕತೆಯಿಂದ ಅನುಷ್ಠಾನಗೊಳ್ಳಬೇಕು ಎಂಬ ಆಗ್ರಹವೂ ವ್ಯಕ್ತಪಡಿಸಿದ್ದಾರೆ. ಕಾಮಗಾರಿಗಳಿಗೆ ಚಾಲನೆ ನೀಡುವ ವೇಳೆ ಶಾಸಕ ಜಿ.ಕೆ. ವೆಂಕಟಶಿವಾರೆಡ್ಡಿ ಅವರು ಗುತ್ತಿಗೆದಾರರು […]
ಶ್ರೀನಿವಾಸಪುರ : ತಾಲ್ಲೂಕಿನ ಮೀಸಗಾನಹಳ್ಳಿ ಕ್ರಾಸ್ ಸಮೀಪ ನಡೆದಿದೆ. ಮೃತರನ್ನು ಚಿಂತಾಮಣಿ ಪಟ್ಟಣದ ಉಮೇಶ್ (45) ಎಂದು ಗುರುತಿಸಲಾಗಿದೆ. ಇವರು ಪತ್ರಿಕೆ ಸಾಗಾಟ ಮಾಡುತ್ತಿದ್ದ ವಾಹನದ ಚಾಲಕರಾಗಿದ್ದು, ಯಲ್ದೂರು ಗ್ರಾಮದಲ್ಲಿ ಪತ್ರಿಕೆಗಳನ್ನು ವಿತರಣೆ ಮಾಡಿ ವಾಪಸ್ಸು ತೆರಳುತ್ತಿದ್ದ ವೇಳೆ ಈ ಅಪಘಾತ ಸಂಭವಿಸಿದೆ ಎಂದು ತಿಳಿದುಬಂದಿದೆ. ಅಪಘಾತದ ತೀವ್ರತೆಗೆ ವಾಹನ ಸಂಪೂರ್ಣ ಜಖಂಗೊಂಡಿದ್ದು, ಸ್ಥಳೀಯರು ತಕ್ಷಣ ನೆರವಿಗೆ ಧಾವಿಸಿದ್ದಾರೆ. ಆದರೆ ಅಷ್ಟರಲ್ಲೇ ಚಾಲಕ ಮೃತಪಟ್ಟಿರುವುದಾಗಿ ತಿಳಿದುಬಂದಿದೆ. ಘಟನೆ ಸಂಬಂಧ ಶ್ರೀನಿವಾಸಪುರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದ್ದು, […]
ಶ್ರೀನಿವಾಸಪುರ : ಪಿಡಿಪಿಎಸ್ ಸ್ಕೀಮ್ ೧ ತಿಂಗಳು ಇರುತ್ತದೆ .ಯಾವುದೇ ಕಾರಣಕ್ಕೂ ರೈತರು ಆತುರವನ್ನು ಪಡುಬಾರದೆಂದು ತಿಳಿ ಹೇಳಿದರು. ರೈತರು ಹಣ್ಣು ಆಗದೀರ ಮಾರುಕಟ್ಟೆ ಮಾವಿನ ಕಾಯಿಗಳು ತೆಗೆದು ಕೊಂಡುಬಾರದೆಂದರು. ಹಂತ ಹಂತವಾಗಿ ಕಾಯಿಗಳನ್ನು ಕೀಳಬೇಕು ಸರ್ಕಾರವು ಜಾರಿಗೆ ತಂದಿರುವ ಈ ಸೌಲಭ್ಯಗಳನ್ನು ಸದುಪಯೋಗಪಡಿಸಿಕೊಳ್ಳಬೇಕು ಎಂದರು.ಎಲ್ಲಾ ರೈತರು ಅಧಿಕಾರಿಗಳೊಂದಿಗೆ ಸಹಕರಿಸಬೇಕೆಂದು ಜಿಲ್ಲಾಧಿಕಾರಿ ಡಾ.ಎಂ.ಆರ್.ರವಿ ಮನವಿ ಮಾಡಿದರು. ಪಟ್ಟಣದ ಎಪಿಎಂಸಿ ಕಚೇರಿ ಸಭಾಂಗಣದಲ್ಲಿ ಶುಕ್ರವಾರ ಮಾವು ಬೆಳೆಗಾರ ಸಮಸ್ಯೆಗಳ ಬಗ್ಗೆ ಚರ್ಚಿಸಿ ಮಾತನಾಡಿದರು. ನಾಳೆ ಬೆಳಗ್ಗೆಯಿಂದಲೇ ರೈತರು ರಿಜಿಸ್ಟ್ರೇಷನ್ […]
ಶ್ರೀನಿವಾಸಪುರ, ಜೂ. 26: ಕೇಂದ್ರ ಹಾಗೂ ರಾಜ್ಯ ಸರ್ಕಾರಗಳ ಜಂಟಿ ಸಹಭಾಗಿತ್ವದಲ್ಲಿ ಜಾರಿಗೊಂಡಿರುವ ಮಾವು ಬೆಲೆ ವ್ಯತ್ಯಾಸ ಪಾವತಿ ಯೋಜನೆ (PDPS)ಯ ಲಾಭ ತಾಲ್ಲೂಕಿನ ಪ್ರತಿಯೊಬ್ಬ ಅರ್ಹ ಮಾವು ಬೆಳೆಗಾರನಿಗೂ ತಲುಪುವಂತೆ ಅಧಿಕಾರಿಗಳು ಅಗತ್ಯ ಕ್ರಮ ಕೈಗೊಳ್ಳಬೇಕು. ರೈತರ ನೋಂದಣಿ ಪ್ರಕ್ರಿಯೆಯಲ್ಲಿ ಯಾವುದೇ ರೀತಿಯ ತೊಂದರೆ, ವಿಳಂಬ ಅಥವಾ ಲೋಪಗಳು ಉಂಟಾಗದಂತೆ ಕಟ್ಟುನಿಟ್ಟಿನ ಮೇಲ್ವಿಚಾರಣೆ ವಹಿಸಬೇಕು ಎಂದು ಜಿಲ್ಲಾಧಿಕಾರಿ ಡಾ. ಎಂ.ಆರ್. ರವಿ ಅಧಿಕಾರಿಗಳಿಗೆ ಸೂಚನೆ ನೀಡಿದರು. ಸರ್ಕಾರವು ಮಾವು ಬೆಳೆಗಾರರ ಹಿತದೃಷ್ಟಿಯಿಂದ ಪ್ರತಿ ಕ್ವಿಂಟಾಲ್ಗೆ ₹1,750 […]
ಶ್ರೀನಿವಾಸಪುರ : ಪುರಸಭೆಯಲ್ಲಿ ಕಾರ್ಯನಿರ್ವಹಿಸುತ್ತಿರುವ ಖಾಯಂ ಪೌರಕಾರ್ಮಿಕರಿಗೆ ಪೌರಕಾರ್ಮಿಕ ಗೃಹಭಾಗ್ಯ ಯೋಜನೆಯಡಿಯಲ್ಲಿ ಗೃಹ ನಿರ್ಮಾಣ ಮಾಡಿಕೊಡಲು ಜಿಲ್ಲಾಧಿಕಾರಿಗಳನ್ನು ಪುರಸಭೆ ಮಾಜಿ ಅಧ್ಯಕ್ಷ ಬಿ.ಆರ್.ಬಾಸ್ಕರ್ ಒತ್ತಾಯಿಸಿದರು.ಪಟ್ಟಣದ ಪುರಸಭೆ ಕಚೇರಿಯಲ್ಲಿ ಗುರುವಾರ ನಡೆದ ಪತ್ರಿಕಾ ಗೋಷ್ಟಿಯಲ್ಲಿ ಮಾತನಾಡಿದರು. ಪುರಸಭೆಯ ಪೌರಕಾರ್ಮಿಕರಿಗೆ ವಸತಿ ಹಾಗು ಮೂಲ ಭೂತ ಸೌಲಭ್ಯಗಳನ್ನು ಕಲ್ಪಿಸುವ ಸರ್ಕಾರದ ಪೌರಕಾರ್ಮಿಕರ ಗೃಹಭಾಗ್ಯ ಯೋಜನೆಯಡಿಯಲ್ಲಿ 30 ಪೌರಕಾರ್ಮಿಕರಿಗೆ ಎಹೆಚ್ಪಿ ಘಟಕದಡಿ ಗೃಹ ನಿರ್ಮಾಣ ಮಾಡಲು ಈಗಾಗಲೇ ಜಿಲ್ಲಾ ಮಟ್ಟದ ಸಮಿತಿಯ ಶಿಫಾರಸ್ಸಿನಂತೆ 32 ನೇ ರಾಜ್ಯ ಮಟ್ಟದ ಸಮಿತಿಯ ಸಭೆ […]
ಬೆಂಗಳೂರು: ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ನೂತನ ಆಯುಕ್ತರಾಗಿ ಅಧಿಕಾರ ವಹಿಸಿಕೊಂಡಿರುವ ಎಂ.ಎನ್. ಅನುಚೇತ್ ಅವರನ್ನು ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ (ಕೆಯುಡಬ್ಲ್ಯೂಜೆ) ರಾಜ್ಯಾಧ್ಯಕ್ಷ ಶಿವಾನಂದ ತಗಡೂರು ನೇತೃತ್ವದ ಪದಾಧಿಕಾರಿಗಳ ನಿಯೋಗ ಭೇಟಿ ಮಾಡಿ ಶುಭ ಹಾರೈಸಿತು. ಈ ಸಂದರ್ಭದಲ್ಲಿ ಕೆಯುಡಬ್ಲ್ಯೂಜೆ ರಾಜ್ಯ ಪ್ರಧಾನ ಕಾರ್ಯದರ್ಶಿ ಜಿ.ಸಿ. ಲೋಕೇಶ್, ರಾಜ್ಯ ಖಜಾಂಚಿ ವಾಸುದೇವ ಹೊಳ್ಳ, ರಾಜ್ಯ ಸಮಿತಿ ಸದಸ್ಯ ದೇವರಾಜು ಸೇರಿದಂತೆ ಹಲವರು ಉಪಸ್ಥಿತರಿದ್ದರು. ಭೇಟಿಯ ವೇಳೆ ಗ್ರಾಮೀಣ ಪತ್ರಕರ್ತರಿಗೆ ಬಸ್ ಪಾಸ್ ಸೌಲಭ್ಯ ಹಾಗೂ […]

