
ಶ್ರೀನಿವಾಸಪುರ: ಪಟ್ಟಣದ ತಾಲ್ಲೂಕು ಕಚೇರಿಗೆ ಶನಿವಾರ ಜಿಲ್ಲಾಧಿಕಾರಿ ಅಕ್ರಂ ಪಾಷ ಭೇಟಿ ನೀಡಿ ಸಿಬ್ಬಂದಿ ಕಾರ್ಯನಿರ್ವಹಣೆ ಪರಿಶೀಲಿಸಿದರು.ಕಚೇರಿಯ ಬೇರೆ ಬೇರೆ ವಿಭಾಗಗಳಿಗೆ ಭೇಟಿ ನೀಡಿ, ಆಯಾ ವಿಭಾಗದಲ್ಲಿ ಆಗಿರುವ ಪ್ರಗತಿ ಬಗ್ಗೆ ಮಾಹಿತಿ ಪಡೆದುಕೊಂಡರು. ಮತದಾರರ ಪಟ್ಟಿ ಪರಿಷ್ಕರಣೆ ಪ್ರಗತಿ ಪರಿಶೀಲಿಸಿದರು. ಸಿಬ್ಬಂದಿಗೆ ಅಗತ್ಯವಾದ ಸಲಹೆ ಸೂಚನೆ ನೀಡಿದರು.ಸಿಬ್ಬಂದಿಯೊಂದಿಗೆ ಮಾತನಾಡಿದ ಅವರು, ಕಂದಾಯ ಇಲಾಖೆ ಸಿಬ್ಬಂದಿ ಸಾರ್ವಜನಿಕರ ಸಮಸ್ಯೆ ನಿವಾರಣೆಗೆ ಹೆಚ್ಚಿನ ಗಮನ ನೀಡಬೇಕು. ಕಚೇರಿಗೆ ಬರುವ ಅರ್ಜಿಗಳ ವಿಲೇವಾರಿ ನಿಗದಿತ ಕಾಲಮಿತಿಯೊಳಗೆ ನಡೆಯಬೇಕು. ರೈತರು ಮತ್ತು […]

ಕೋಲಾರ ನವಂಬರ್ 4 : ಬಾಲ ಕಾರ್ಮಿಕತೆಯು ಮಕ್ಕಳ ಬೆಳವಣಿಗೆಯನ್ನು ಕಡಿತಗೊಳಿಸುತ್ತದೆ ಮತ್ತು ಅವರ ಬಾಲ್ಯವನ್ನು ಕಸಿದುಕೊಳ್ಳುತ್ತದೆ. ವಿವಿಧ ಕಾರ್ಖಾನೆಗಳಲ್ಲಿ ಅವರಿಗೆ ವೈದ್ಯಕೀಯ ನೆರವು ನೀಡದ ಕಾರಣ ಅವರು ಅನೇಕ ರೋಗಗಳಿಂದ ಬಳಲುತ್ತಿದ್ದಾರೆ. ಅವರು ಅನೈರ್ಮಲ್ಯ ವಾತಾವರಣದಲ್ಲಿ ವಾಸಿಸುತ್ತಿದ್ದಾರೆ. ಅನಕ್ಷರತೆ ಅವರನ್ನು ಸಮಾಜದಲ್ಲಿ ಹಿಂದುಳಿದಂತೆ ಮಾಡುತ್ತದೆ. ಅವರು ಜೀವನದಲ್ಲಿ ಯಶಸ್ವಿಯಾಗಲು ಯಾವುದೇ ಅವಕಾಶವನ್ನು ಕಂಡುಕೊಳ್ಳುವುದಿಲ್ಲ ಎಂದು ಕಾನೂನು ಸೇವಾ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ನ್ಯಾಯಮೂರ್ತಿ ಸುನಿಲ ಎಸ್. ಹೊಸಮನಿ ತಿಳಿಸಿದರು.ಕೋಲಾರ ತಾಲ್ಲೂಕು ಕೊಂಡರಾಜನಹಳ್ಳಿ ಗ್ರಾಮದಲ್ಲಿ ಜಿಲ್ಲಾಡಳಿತ, ಜಿಲ್ಲಾ […]

ಶ್ರೀನಿವಾಸಪುರ : ಪಟ್ಟಣದ ತಿಲಕ್ ರಸ್ತೆಯು ಒಂದು ರೀತಿಯಲ್ಲಿ ಸ್ಲಂ ಏರಿಯಾದಂತೆ ಇದ್ದು, ತಿಲಕ್‍ರಸ್ತೆ ಹಾಗು ಆಜಾದ್‍ರಸ್ತೆಗಳಲ್ಲಿ ಚರಂಡಿಗಳು ಸಂಪೂರ್ಣ ಕಸ ಕಡ್ಡಿಗಳಿಂದ ತುಂಬಿದ್ದು ಚರಂಡಿಗಳಲ್ಲಿ ನೀರು ಸರಾಗವಾಗಿ ಹರಿಯದ ಕಾರಣ ನಿಂತಲ್ಲೇ ಚರಂಡಿ ನೀರು ನಿಂತು ಸೊಳ್ಳೆಗಳ ಕಾಟ ಹೆಚ್ಚಾಗುತ್ತಿದೆ.ಪುರಸಭೆಯ ಪಟ್ಟಣದ ವಾರ್ಡ್ ನಂಬರ್ 4 ರ ತಿಲಕ್ ರಸ್ತೆ . ವಾರ್ಡ್ ನಂಬರ್ 12 ರ ಆಜಾದ್‍ರಸ್ತೆಗಳಲ್ಲಿ ಚರಂಡಿಗಳ ಸ್ವಚ್ಚತೆ ಇಲ್ಲದೆ ಸೊಳ್ಳೆಗಳ ಕಾಟವು ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದ್ದು, ಈ ಭಾಗದ ಸಾರ್ವಜನಿಕರು ಜ್ವರ, […]

ಬೆಂಗಳೂರು: ಸುದ್ದಿ ಮನೆಯಲ್ಲಿ ಸುದೀರ್ಘ ಅವಧಿಗೆ ಪತ್ರಕರ್ತರಾಗಿ ಸೇವೆ ಸಲ್ಲಿಸಿ ಅಗಲಿದ ಸಿ.ಆರ್.ಕೃಷ್ಣರಾವ್, ಕೆ.ಎಸ್.ಸಚ್ಚಿದಾನಂದಮೂರ್ತಿ, ಜಿ.ಎನ್.ರಂಗನಾಥ ರಾವ್, ಪಿ.ಎಂ.ಮಣ್ಣೂರ, ಕೆ.ಪ್ರಹ್ಲಾದರಾವ್, ಗುಡಿಬಂಡೆ ನರಸಿಂಹಮೂರ್ತಿ, ಟಿ.ಎಸ್.ರಾಜಾರಾವ್ ಅವರುಗಳಿಗೆ ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ (ಕೆಯುಡಬ್ಲ್ಯೂಜೆ) ನುಡಿ ನಮನ ಸಲ್ಲಿಸಿ, ಅವರೆಲ್ಲರ ಭಾವಚಿತ್ರಕ್ಕೆ ಪುಷ್ಪನಮನ ಸಲ್ಲಿಸಲಾಯಿತು.ಕಾರ್ಯಕ್ರಮದ ಆರಂಭದಲ್ಲಿ ಹಿರಿಯ ಚೇತನಗಳ ಸ್ಮರಣಾರ್ಥ ಎರಡು ನಿಮಿಷ ಮೌನ ಪ್ರಾರ್ಥನೆ ನಡೆಸಲಾಯಿತು.ಸಂಘದ ರಾಜ್ಯಾಧ್ಯಕ್ಷ ಶಿವಾನಂದ ತಗಡೂರು, ನುಡಿನಮನ ಕಾರ್ಯಕ್ರಮಕ್ಕೆ ಪ್ರಾಸ್ತಾವಿಕ ಮಾತುಗಳನ್ನಾಡಿ, ಅಗಲಿದ ಹಿರಿಯ ಪತ್ರಕರ್ತರುಗಳು ಕೆಯುಡಬ್ಲ್ಯೂಜೆ ಜೊತೆಗೆ ಹೊಂದಿದ್ದ ಒಡನಾಟ ಮೆಲುಕು […]

ಕೋಲಾರ,ನ.3: ಕೆಯುಡಬ್ಲ್ಯೂಜೆ ದತ್ತಿನಿಧಿ ಪ್ರಶಸ್ತಿಗೆ ಅಮೋಘ ನ್ಯೂಸ್‍ನ ಕೆಪಿಎಸ್ ಪ್ರಮೋದ್ ಅವರು ತಮ್ಮ ತಂದೆಯ ಹೆಸರಿನಲ್ಲಿ ಒಂದು ಲಕ್ಷ ರೂ ದೇಣಿಗೆ ಚೆಕ್ ಅನ್ನು ಸಂಘದ ರಾಜ್ಯಾಧ್ಯಕ್ಷ ಶಿವಾನಂದ ತಗಡೂರು ಅವರಿಗೆ ಹಸ್ತಾಂತರಿಸಿದರು.ಈ ಸಂದರ್ಭದಲ್ಲಿ ಕೊಪ್ಪಳ ವಿವಿ ಕುಲಪತಿ ಪೆÇ್ರ.ಬಿ.ಕೆ.ರವಿ, ಸಂಘದ ಪ್ರಧಾನ ಕಾರ್ಯದರ್ಶಿ ಜಿ.ಸಿ.ಲೋಕೇಶ, ಖಜಾಂಚಿ ವಾಸುದೇವ ಹೊಳ್ಳ ಹಾಜರಿದ್ದರು.ಮಂಡ್ಯ ಜಿಲ್ಲೆಯ ಪೌರವಾಣಿ ಪತ್ರಿಕೆ ಮೂಲಕ ಪತ್ರಿಕೋದ್ಯಮ ಪ್ರವೇಶ ಮಾಡಿದ ಕೆ.ಪ್ರಹ್ಲಾದರಾವ್ ಅವರು ಉದಯ ಟಿವಿ ಜಿಲ್ಲಾ ವರದಿಗಾರರಾಗಿ, ಪಿಟಿಐ ವರದಿಗಾರರಾಗಿ ದಶಕಗಳ ಕಾಲ ಸೇವೆ […]

ಶ್ರೀನಿವಾಸಪುರ: ರಾಜ್ಯದಲ್ಲಿ ಮುಖ್ಯ ಮಂತ್ರಿ ಬದಲಾವಣೆ ವಿಚಾರ ವಿರೋಧ ಪಕ್ಷಗಳ ಸೃಷ್ಟಿ ಎಂದು ಉನ್ನತ ಶಿಕ್ಷಣ ಸಚಿವ ಡಾ. ಎಂ.ಸಿ.ಸುಧಾಕರ್ ಹೇಳಿದರು.ಪಟ್ಟಣದಲ್ಲಿ ಈಚೆಗೆ ಕೊಲೆಯಾದ ಜಿಲ್ಲಾ ಪಂಚಾಯಿತಿ ಮಾಜಿ ಅಧ್ಯಕ್ಷ ಹಾಗೂ ಕಾಂಗ್ರೆಸ್ ಮುಖಂಡ ಎಂ.ಶ್ರೀನಿವಾಸನ್ ಅವರ ನಿವಾಸಕ್ಕೆ ಬುಧವಾರ ಭೇಟಿ ನೀಡಿ ಕುಟುಂಬಸ್ಥರಿಗೆ ಸಾಂತ್ವನ ಹೇಳಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿ, ವಿರೋಧ ಪಕ್ಷಗಳ ಮುಖಂಡರು ಮುಖ್ಯ ಮಂತ್ರಿ ಬದಲಾವಣೆ ಕುರಿತು ಅನಗತ್ಯ ಗೊಂದಲ ಉಂಟುಮಾಡುತ್ತಿದ್ದಾರೆ ಎಂದು ಹೇಳಿದರು.ಹಿರಿಯ ಕಾಂಗ್ರೆಸ್ ಮುಖಂಡ ಹಾಗೂ ಮಾಜಿ ಶಾಸಕ ಕೆ.ಆರ್.ರಮೇಶ್ […]

ಶ್ರೀನಿವಾಸಪುರ: ಕನ್ನಡ ಭಾಷೆ ಹಾಗೂ ಕನ್ನಡಿಗರ ಬದುಕು ಭದ್ರವಾಗಲು ಅಗತ್ಯವಾದ ಯೋಜನೆ ರೂಪಿಸಿ ಜಾರಿಗೆ ತರಬೇಕು ಎಂದು ಶಾಸಕ ಜಿ.ಕೆ.ವೆಂಕಟಶಿವಾರೆಡ್ಡಿ ಹೇಳಿದರು.ಪಟ್ಟಣದ ಸರ್ಕಾರಿ ಬಾಲಕಿಯರ ಪದವಿ ಪೂರ್ವ ಕಾಲೇಜು ಮೈದಾನದಲ್ಲಿ ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿಯಿಂದ ಬುಧವಾರ ಏರ್ಪಡಿಸಿದ್ದ ಕನ್ನಡ ರಾಜ್ಯೋತ್ಸವ ಸಮಾರಂಭ ಉದ್ಘಾಟಿಸಿ ಮಾತನಾಡಿದ ಅವರು, ಬೇರೆ ಭಾಷೆಗಳ ಪ್ರಭಾವ ಹೆಚ್ಚಾಗಿರುವ ಗಡಿ ಭಾಗದಲ್ಲಿನ ಜನರು ತಮ್ಮ ದಿನ ನಿತ್ಯದ ವ್ಯವಹಾರದಲ್ಲಿ ಕನ್ನಡ ಭಾಷೆ ಬಳಸಬೇಕು ಎಂದು ಹೇಳಿದರು.ತಾಲ್ಲೂಕಿನ ಸರ್ವತೋಮುಖ ಅಭಿವೃದ್ಧಿಗೆ ಆದ್ಯತೆ ನೀಡಲಾಗಿದೆ. ಶ್ರೀನಿವಾಸಪುರ […]

ಶ್ರೀನಿವಾಸಪುರ: ಕಾಂಗ್ರೆಸ್ ಮುಖಂಡ ಎಂ.ಶ್ರೀನಿವಾಸನ್ ಅವರ ಕೊಲೆ ಖಂಡಿಸಿ ಪಟ್ಟಣದಲ್ಲಿ ಸಂಪೂರ್ಣ ಶಾಂತಿಯುತ ಬಂದ್ ಆಚರಿಸಲಾಯಿತು.ಪಟ್ಟಣದಲ್ಲಿ ಅಂಗಡಿ ಮುಂಗಟ್ಟು ಮುಚ್ಚಲಾಗಿತ್ತು. ಚಿತ್ರ ಮಂದಿರ, ತರಕಾರಿ ಮಾರುಕಟ್ಟೆ ಮುಚ್ಚಲ್ಪಟ್ಟಿದ್ದವು. ಶಾಲಾ ಕಾಲೇಜುಗಳಿಗೆ ರಜೆ ಘೊಷಿಸಲಾಗಿತ್ತು. ಸರ್ಕಾರಿ ಕಚೇರಿಗಳು ಹಾಗೂ ಬ್ಯಾಂಕ್‍ಗಳು ಜನರಿಲ್ಲದೆ ಬಣಗುಡುತ್ತಿದ್ದವು. ಪಟ್ಟಣದಲ್ಲಿ ಬಸ್ ಸಂಚಾರ ಸ್ಥಗಿತಗೊಂಡಿತ್ತು. ಆಟೋಗಳು ರಸ್ತೆಗೆ ಇಳಿಯಲಿಲ್ಲ. ಬಸ್ ನಿಲ್ದಾಣ ಬಸ್‍ಗಳಿಲ್ಲದೆ ಬಿಕೋ ಎನ್ನುತ್ತಿತ್ತು. ಪ್ರಯಾಣಿಕರು ಬಸ್‍ಗಾಗಿ ಕಾದು ಬಸವಳಿದರು. ಪಟ್ಟಣದ ಹೊರವಲಯದಲ್ಲಿ ಬಸ್‍ನಿಂದ ಇಳಿದ ಪ್ರಯಾಣಿಕರು ಪಟ್ಟಣಕ್ಕೆ ಕಾಲ್ನಡಿಗೆಯಲ್ಲಿ ಸಾಗುತ್ತಿದ್ದ ದೃಶ್ಯ […]

ಕೋಲಾರ,ಅ.31: ಯಾವುದೇ ಪ್ರತಿಫಲಾಪೇಕ್ಷೆ ಇಲ್ಲದೆ ಎಲೆಮರೆಯ ಕಾಯಂತೆ ಕನ್ನಡ ತಾಯಿಯ ಸೇವೆಯಲ್ಲಿ ತೊಡಗಿರುವ ರಮೇಶ್ ಮತ್ತು ಸುರೇಶ್ ನಮಗೆ ಮಾದರಿ ಎಂದು ಕೋಲಾರ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಬಿ.ವಿ.ಗೋಪಿನಾಥ್ ಅಭಿಪ್ರಾಯಪಟ್ಟರು. ಕರ್ನಾಟಕ ರಾಜ್ಯೋತ್ಸವ ಸಲುವಾಗಿ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘವು ಪತ್ರಕರ್ತರ ಭವನದಲ್ಲಿ ಮಂಗಳವಾರ ಆಯೋಜಿಸಿದ್ದ ಕನ್ನಡದ ಸೇವೆಯಲ್ಲಿ ತೊಡಗಿರುವ ಕನ್ನಡ ತಾಯಿಯ ಪರಿಚಾರಕರನ್ನು ಸನ್ಮಾನಿಸುವ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಈಗ ಪರಿಚಾರಕರು ಎಂಬ ಮನಸ್ಥಿತಿ ಹೋಗಿದೆ. ಮೌಲ್ಯ ಕಳೆದುಕೊಂಡಿದೆ. ಕನ್ನಡದ […]