
ಶ್ರೀನಿವಾಸಪುರದಲ್ಲಿ ಶುಕ್ರವಾರ ತಾಲ್ಲೂಕು ವಿಶ್ವಕರ್ಮ ಕ್ಷೇಮಾಭಿವೃದ್ಧಿ ಸಂಘದ ವತಿಯಿಂದ ತಹಶೀಲ್ದಾರ್ ಶಿರಿನ್ ತಾಜ್ ಅವರನ್ನು ಸಂಘದ ಅಧ್ಯಕ್ಷ ಕೆ.ಮೋಹನಾಚಾರಿ ಸನ್ಮಾನಿಸಿದರು. ಕಂದಾಯ ನಿರೀಕ್ಷಕ ಬಿ.ವಿ.ಮುನಿರೆಡ್ಡಿ, ರವಿಚಂದ್ರಾಚಾರಿ, ರಾಮಚಂದ್ರಾಚಾರಿ ಇದ್ದರು.

ಶ್ರೀನಿವಾಸಪುರ: ತಮಿಳು ನಾಡಿಗೆ ಕಾವೇರಿ ನೀರು ಹರಿಸುವುದನ್ನು ವಿರೋಧಿಸಿ ವಿವಿಧ ಸಂಘಟನೆಗಳು ಶುಕ್ರವಾರ ನೀಡಿದ್ದ ರಾಜ್ಯ ಬಂದ್‍ಗೆ ತಾಲ್ಲೂಕಿನಲ್ಲಿ ಸ್ಪಂದನೆ ಕಂಡುಬರಲಿಲ್ಲ.ತಾಲ್ಲೂಕಿನಾದ್ಯಂತ ಸರ್ಕಾರಿ ಕಚೇರಿ, ಬ್ಯಾಂಕ್, ಶಾಲಾ ಕಾಲೇಜು ಎಂದಿನಂತೆ ಕಾರ್ಯನಿರ್ವಹಿಸಿದವು. ಕೆಎಸ್‍ಆರ್‍ಟಿಸಿ ಬಸ್ ಹಾಗೂ ಆಟೋ ಸೇವೆ ಸಾಮಾನ್ಯವಾಗಿತ್ತು. ಅಂಗಡಿ ಮುಂಗಟ್ಟು ತೆರೆದಿತ್ತು. ಮಾರುಕಟ್ಟೆಗಳಲ್ಲಿ ಜನಸಂದಣಿ ಎಂದಿನಂತೆಯೇ ಇತ್ತು. ಖಾಸಗಿ ಬಸ್ ಮಾಲೀಕರ ಸಂಘ ಬಂದ್‍ಗೆ ಬೆಂಬಳ ಸೂಚಿಸಿದ್ದರಿಂದ ಖಾಸಗಿ ಬಸ್‍ಗಳ ಓಡಾಟ ಇರಲಿಲ್ಲ. ಮುಂಜಾಗ್ರತಾ ಕ್ರಮವಾಗಿ ಪಟ್ಟಣದಲ್ಲಿ ಪೊಲೀಸ್ ಬಂದೊಬಸ್ತ್ ಮಾಡಲಾಗಿತ್ತು.ಕರ್ನಾಟಕ ರಾಜ್ಯ ಜನಸ್ಪಂದನ […]

ಶ್ರೀನಿವಾಸಪುರ: ಶ್ರೀನಿವಾಸಪುರ ತಾಲ್ಲೂಕಿನ ಕಲ್ಲೂರು ಗ್ರಾಮದ ಸರ್ಕಾರಿ ಪ್ರಾಥಮಿಕ ಶಾಲೆಯಲ್ಲಿ ಏರ್ಪಡಿಸಿದ್ದ ಸಮವಸ್ತ್ರ ವಿತರಣೆ ಹಾಗೂ ಅಭಿನಂದನಾ ಸಮಾರಂಭವನ್ನು ಗ್ರಾಮ ಪಂಚಾಯಿತಿ ಉಪಾಧ್ಯಕ್ಷ ಚಲಪತಿ ಉದ್ಘಾಟಿಸಿದರು.ಸರ್ಕಾರಿ ಶಾಲೆಗಳ ಅಭಿವೃದ್ದಿಗೆ ಸಮುದಾಯ ಸಹಾಯ ಹಸ್ತ ನೀಡಬೇಕು. ವಿದ್ಯಾರ್ಥಿಗಳು ಸರ್ಕಾರದ ಯೋಜನೆಗಳ ಜತೆಗೆ ದಾನಿಗಳ ನೆರವು ಪಡೆದು ಶೈಕ್ಷಣಿಕವಾಗಿ ಮುಂದೆ ಬರಬೇಕು ಎಂದು ಗ್ರಾಮ ಪಂಚಾಯಿತಿ ಉಪಾಧ್ಯಕ್ಷ ಚಲಪತಿ ಹೇಳಿದರು.ತಾಲ್ಲೂಕಿನ ಕಲ್ಲೂರು ಗ್ರಾಮದ ಸರ್ಕಾರಿ ಪ್ರಾಥಮಿಕ ಶಾಲೆಯಲ್ಲಿ ಭಾನುವಾರ ಏರ್ಪಡಿಸಿದ್ದ ವಿದ್ಯಾರ್ಥಿಗಳಿಗೆ ಸಮವಸ್ತ್ರ ವಿತರಣೆ ಹಾಗೂ ಅಭಿನಂದನಾ ಸಮಾರಂಭ ಉದ್ಘಾಟಿಸಿ […]

ಶ್ರೀನಿವಾಸಪುರ: ಪೌರಕಾರ್ಮಿಕರು ನಿಜವಾದ ಕ್ಷೇಮ ಪಾಲಕರು. ಪೌರಕಾರ್ಮಿಕರ ಕ್ಷೇಮಾಭಿವೃದ್ಧಿಗೆ ಪೂರಕವಾದ ಎಲ್ಲ ಕ್ರಮ ಕೈಗೊಳ್ಳಲಾಗುವುದು. ಎಂದು ಶಾಸಕ ಜಿ.ಕೆ.ವೆಂಕಟಶಿವಾರೆಡ್ಡಿ ಹೇಳಿದರು.ಪಟ್ಟಣದ ಪುರಸಭಾ ಕಚೇರಿ ಸಭಾಂಗಣದಲ್ಲಿ ಮಂಗಳವಾರ ಏರ್ಪಡಿಸಿದ್ದ ಪೌರಕಾರ್ಮಿಕರ ದಿನಾಚರಣೆ ಸಮಾರಂಭ ಉದ್ಘಾಟಿಸಿ ಮಾತನಾಡಿದ ಅವರು, ಪೌರಕಾರ್ಮಿಕರು ತಮ್ಮ ನಿಸ್ವಾರ್ಥ ಸೇವೆ ಮೂಲಕ ನಾಗರಿಕರ ಪ್ರೀತಿ ಹಾಗೂ ಗೌರಕ್ಕೆ ಪಾತ್ರರಾಗಿದ್ದಾರೆ ಎಂದು ಹೇಳಿದರು.ಪಟ್ಟಣದ ನಾಗರಿಕರಿಗೆ ನೀರು ಹಂಚಿಕೆ ಹಾಗೂ ಸ್ವಚ್ಛ ಪರಿಸರ ನಿರ್ಮಾಣ ಮಾಡುವುದರದ ಮೂಲಕ ನಾಗರಿಕರ ಆರೋಗ್ಯ ರಕ್ಷಣೆ ಮಾಡುವ ಪೌರಕಾರ್ಮಿಕರ ಬಗ್ಗೆ ಲಘುವಾಗಿ ಮಾತನಾಡಬಾರದು. […]

ಕೋಲಾರ:- ಜಿಲ್ಲೆಯ ಮಾಲೂರು ತಾಲ್ಲೂಕಿನ ದೊಂಬ್ರಹಳ್ಳಿ ಗ್ರಾಮದ ಸ.ನಂ.173ರ 6 ಎಕರೆ 19 ಗುಂಟೆ ಸುಮಾರು 15 ಕೋಟಿ ಮೌಲ್ಯದ ಜಮೀನಿಗೆ ಅಕ್ರಮ ದಾಖಲೆ ಸೃಷ್ಟಿಸಿ ಅಮಾನತ್ತಾಗಿದ್ದ ಕಂದಾಯ ನಿರೀಕ್ಷಕ ಎಂ.ಕೆ.ಶ್ರೀಪತಿ ಹಾಗೂ ಪ್ರಥಮ ದರ್ಜೆ ಗುಮಾಸ್ತ ಪ್ರಸಾದ್‍ಕುಮಾರ್ ಅವರನ್ನು ಮಾಲೂರು ಶಾಸಕ ನಂಜೇಗೌಡರು ಕಂದಾಯ ಸಚಿವ ಕೃಷ್ಣ ಬೈರೇಗೌಡರ ಮೇಲೆ ಪ್ರಭಾವ ಬೀರಿ ಆಯಾಕಟ್ಟಿನ ಜಾಗಕ್ಕೆ ವರ್ಗಾವಣೆ ಮಾಡಿಸಿರುವುದನ್ನು ರದ್ದುಪಡಿಸಲು ಸಾಮಾಜಿಕ ಕಾರ್ಯಕರ್ತ ಮಂಜುನಾಥ್ ಸಚಿವ ಭೈರತಿ ಸುರೇಶ್‍ಅವರಿಗೆ ಮನವಿ ಮಾಡಿದರು.ನಗರದ ರಂಗಮಂದಿರದಲ್ಲಿ ನಡೆದ ಜನತಾದರ್ಶನದಲ್ಲಿ […]

ಕೋಲಾರ:- ಭೂಗಳ್ಳರನ್ನು ವೇದಿಕೆಯಲ್ಲಿ ಕೂರಿಸಿಕೊಂಡು ಜಿಲ್ಲಾ ಉಸ್ತುವಾರಿ ಸಚಿವರು ನಡೆಸಿದ್ದು ಜನತಾದರ್ಶನವಲ್ಲ ಅದು ಕಾಂಗ್ರೆಸ್ ದರ್ಶನ, ಕೇವಲ ಒಂದೂವರೆ ಗಂಟೆಯಲ್ಲಿ ಮುಗಿಸಿದ ಈ ಕಾರ್ಯಕ್ರಮದಲ್ಲಿ ಜನರ ಒಂದೇ ಒಂದು ಸಮಸ್ಯೆಗೂ ಪರಿಹಾರ ಸಿಗಲಿಲ್ಲ ಎಂದು ಸಂಸದ ಎಸ್.ಮುನಿಸ್ವಾಮಿ ಟೀಕಿಸಿದರು.ನಗರದ ಟಿ.ಚನ್ನಯ್ಯ ರಂಗಮಂದಿರದಲ್ಲಿ ಸೋಮವಾರ ನಡೆದ ರಾಜ್ಯ ಸರ್ಕಾರದ ಬಹು ನಿರೀಕ್ಷಿತ ಜನತಾದರ್ಶನ ಕಾರ್ಯಕ್ರಮದಲ್ಲಿ ಶಾಸಕ ಎಸ್.ಎನ್.ನಾರಾಯಣಸ್ವಾಮಿ ಮತ್ತು ತಮ್ಮ ನಡುವೆ ನಡೆದ ಮಾತಿನ ಚಕಮಕಿಯ ನಂತರ ಸುದ್ದಿಗಾರರೊಂದಿಗೆ ಅವರು ಮಾತನಾಡುತ್ತಿದ್ದರು.ಎಲ್ಲೂ ಶಾಸಕ ಎಸ್.ಎನ್.ನಾರಾಯಣಸ್ವಾಮಿ ಹೆಸರು ಪ್ರಸ್ತಾಪಿಸಲಿಲ್ಲ ಆದರೆ […]

ಪಟ್ಟಣದ ಪುರಸಭೆ ಕಛೇರಿಯಲ್ಲಿ ಭಾನುವಾರ ಬೀದಿ ಬದಿ ವ್ಯಾಪಾರಿಗಳಿಗೆ ಕೇಂದ್ರ ಸರ್ಕಾರದ ಪಿಎಂ ಸ್ವಾನಿಧಿ ಯೋಜನೆಯಲ್ಲಿ ಅರ್ಹ ಫಲನಾಭುವಿಗಳಿಗೆ ಮಂಜೂರಾತಿ ಪತ್ರಗಳನ್ನು ವಿತರಣೆ ಮಾಡಿ ಮಾತನಾಡಿದರು.ಬೀದಿ ಬದಿ ವ್ಯಾಪಾರಿಗಳಾದ ಹೂವಿನ ವ್ಯಾಪಾರಿಗಳು, ತರಕಾರಿ ವ್ಯಾಪಾರಿಗಳು, ಹಣ್ಣು ವ್ಯಾಪಾರಿಗಳು ಸಾಲಕ್ಕಾಗಿ ಯಾವ ರೀತಿಯಾಗಿ ಅರ್ಜಿ ಸಲ್ಲಿಸಬೇಕು, ಯಾವ ರೀತಿಯಾಗಿ ಮರುಪಾವತಿ ಮಾಡಬೇಕು ಎಂಬುದರ ಬಗ್ಗೆ ಮಾಹಿತಿ ನೀಡುತ್ತಾ, ಮೊದಲಿಗೆ 10 ಸಾವಿರ ಸಾಲವನ್ನು ಮರುಪಾವತಿ ಮಾಡಿದ ನಂತರ 20 ಸಾವಿರ ಪಡೆಯಬಹುದು, ಅದೇ ರೀತಿಯಾಗಿ ಹಂತ ಹಂತವಾಗಿ ಒಂದು […]

*ಲೇಖನ: ಶಬೀನಾ ವೈ.ಕೆ* ವಿಶೇಷಚೇತನರಿಗಾಗಿ ಮೀಸಲಿರಿಸಿದ 5% ಅನುದಾನದಲ್ಲಿ ದೇಶದಲ್ಲಿಯೇ ಪ್ರಪ್ರಥಮ ಬಾರಿಗೆ ಮೂರು ಚಕ್ರಗಳ ಸ್ಕೂಟರ್‌ನ್ನು ವಿತರಿಸಿದ ಕೀರ್ತಿ ಕರ್ನಾಟಕದ ವಿಜಯಪುರ ಜಿಲ್ಲೆಗೆ ಸಲ್ಲುತ್ತದೆ. ಇದಕ್ಕಾಗಿ 2008-09ರ ಅವಧಿಯಲ್ಲಿ ಹೋರಾಟ ನಿರತ ನಲವತ್ತಕ್ಕೂ ಹೆಚ್ಚು ವಿಶೇಷಚೇತನರು ಒಂದು ದಿನ ದರ್ಗಾ ಜೈಲಿನ ಅತಿಥಿಗಳಾಗಬೇಕಾಯ್ತು. ಹದಿಮೂರು-ಹದಿನಾಲ್ಕು ವರ್ಷಗಳ ಹಿಂದಿನ ಸಾರಿಗೆ, ಸಂವಹನ, ಸಂಪರ್ಕ ಸೇರಿದಂತೆ ವಿಶೇಷಚೇತನರಿಗೆ ಬೇಕಾದ ಸೌಕರ್ಯ ಸೌಲಭ್ಯಗಳು ಅಷ್ಟಾಗಿ ಅರಿವಿಗೆ ಬಾರದ ದಿನಗಳವು. ಅದರಲ್ಲಿಯೂ ಹೆಚ್ಚಿನ ವಿಶೇಷಚೇತನರು ಮನೆಗಳಲ್ಲಿ ಮೂಲೆಗುಂಪಾದ ಉದಾಹರಣೆಗಳೇ ಅಧಿಕ. ಈ […]

ಕೋಲಾರ:- ಕೋಲಾರ ಚಿಕ್ಕಬಳ್ಳಾಪುರ ಕಾರ್ಯನಿರತ ಪತ್ರಕರ್ತರ ವಿವಿಧೋದ್ದೇಶ ಸಹಕಾರ ಸಂಘ ನಿಯಮಿತದ ಮುಂದಿನ ಐದು ವರ್ಷಗಳ ಅವಗೆ ಅಧ್ಯಕ್ಷರಾಗಿ ಕೆ.ಎಸ್.ಗಣೇಶ್ ಸತತ ಮೂರನೇ ಬಾರಿ ಅವಿರೋಧವಾಗಿ ಆಯ್ಕೆಯಾಗಿ ಹ್ಯಾಟ್ರಿಕ್ ಗೆಲುವಿನ ಸಾಧನೆ ಮಾಡಿದರು.ಸಂಘದ ಉಪಾಧ್ಯಕ್ಷರಾಗಿ ಅಬ್ಬಣಿ ಶಂಕರ್ ಅವಿರೋಧವಾಗಿ ಆಯ್ಕೆಯಾದರು.ನಗರದ ಅಂತರಗಂಗೆ ರಸ್ತೆಯಲ್ಲಿರುವ ಪತ್ರಕರ್ತರ ಭವನದಲ್ಲಿ ಗುರುವಾರ ಚುನಾವಣಾಧಿಕಾರಿ ಶಿವಶಂಕರ್ ಅಧ್ಯಕ್ಷತೆಯಲ್ಲಿ ಜರುಗಿದ ಚುನಾವಣಾ ಸಭೆಯಲ್ಲಿ ಇವರ ಅವಿರೋಧ ಆಯ್ಕೆಯನ್ನು ಘೋಷಿಸಲಾಯಿತು.ಇದಕ್ಕೂ ಮುನ್ನ ಜರುಗಿದ ನಿರ್ದೇಶಕರ ಚುನಾವಣೆಯಲ್ಲಿ ಸಂಘದ ನಿರ್ದೇಶಕರಾಗಿ 19 ಮಂದಿ ಅವಿರೋಧವಾಗಿ ಆಯ್ಕೆಯಾಗಿದ್ದರು.ಸಂಘದ ನಿರ್ದೇಶಕರಾಗಿ […]