ಶ್ರೀನಿವಾಸಪುರ: ಬೆಂಗಳೂರು ನಿರ್ಮಾತೃ ಕೆಂಪೇಗೌಡ ಅವರ ಜನಪರ ಕಾಳಜಿ ಅನುಕರಣೀಯ ಎಂದು ತಹಶೀಲ್ದಾರ್ ಶಿರಿನ್ ತಾಜ್ ಹೇಳಿದರು.ಪಟ್ಟಣದ ತಾಲ್ಲೂಕು ಕಚೇರಿ ಸಭಾಂಗಣದಲ್ಲಿ ತಾಲ್ಲೂಕು ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿ ವತಿಯಿಂದ ಮಂಗಳವಾರ ಏರ್ಪಡಿಸಿದ್ದ ಕೆಂಪೇಗೌಡ ಜಯಂತಿ ಸಮಾರಂಭದಲ್ಲಿ, ಕೆಂಪೇಗೌಡರ ಭಾವ ಚಿತ್ರಕ್ಕೆ ಮಾಲಾರ್ಪಣೆ ಮಾಡಿ ಮಾತನಾಡಿದರು.ಬೆಂಗಳೂರನ್ನು ಅರ್ಥಪೂರ್ಣವಾಗಿ ಅಭಿವೃದ್ಧಿಪಡಿಸಿದ ಕೀರ್ತಿ ಕೆಂಬಪೇಗೌಡರಿಗೆ ಸಲ್ಲುತ್ತದೆ. ಎಲ್ಲ ವರ್ಗದ ವ್ಯಾಪಾರಿಗಳಿಗೆ ಹಾಗೂ ಗ್ರಾಹಕರಿಗೆ ಅನುಕೂಲವಾಗುವಂತೆ ವಿವಿಧ ಪೇಟೆಗಳನ್ನು ನಿರ್ಮಿಸಿದರು. ಕೃಷಿ ಹಾಗೂ ಕುಡಿಯುವ ನೀರಿಗೆ ಅನುಕೂಲವಾಗುವಂತೆ ಕೆರೆಗಳನ್ನು ನಿರ್ಮಿಸಿದರು. ಎಲ್ಲ […]
ಶ್ರೀನಿವಾಸಪುರ: ತಾಲ್ಲೂಕಿನ ಯಲ್ದೂರು ಗ್ರಾಮದ ಕೃಷಿಕ ನಾರಾಯಣಸ್ವಾಮಿ ಕುಟುಂಬಕ್ಕೆ ಪೊಲೀಸ್ ರಕ್ಷಣೆ ನೀಡಬೇಕು. ಕುಟುಂಬದ ಸದಸ್ಯರ ಮೇಲೆ ಜಮೀನು ವಿವಾದಕ್ಕೆ ಸಂಬಂಧಿಸಿದಂತೆ ದೌರ್ಜನ್ಯ ನಡೆಸುತ್ತಿರುವ ವ್ಯಕ್ತಿಗಳ ವಿರುದ್ಧ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ದಲಿತ ಮುಖಂಡರಾದ ರಾಮಾಂಜಮ್ಮ ಆಗ್ರಹಿಸಿದರು.ಪಟ್ಟಣದ ಪ್ರವಾಸಿ ಮಂದಿರದಲ್ಲಿ ಮಂಗಳವಾರ ಏರ್ಪಡಿಸಿದ್ದ ಪತ್ರಿಕಾ ಗೋಷ್ಠಿಯಲ್ಲಿ ಮಾತನಾಡಿದ ಅವರು, ಯಲ್ದೂರು ಸರ್ವೆ ನಂಬರ್ 42 ಪೈಕಿ 3 ಎಕರೆ ಜಮೀನು ನಾರಾಯಣಸ್ವಾಮಿ ತಂದೆಗೆ ದರಖಾಸ್ತು ಮೂಲಕ ಮಂಜೂರಾಗಿತ್ತು. ತಂದೆ ಮರಣಾನಂತರ ನಾರಾಯಣಸ್ವಾಮಿ ಹೆಸರಿಗೆ ಪವತಿ ಖಾತೆಯಾಗಿದ್ದು, […]
ಉದ್ಯಾವರ : ಉದ್ಯಾವರದ ಸಂತ ಫ್ರಾನ್ಸಿಸ್ ಝೆವಿಯರ್ ದೇವಾಲಯದ ವ್ಯಾಪ್ತಿಗೆ ಒಳಪಟ್ಟ ಕಥೋಲಿಕ್ ಸಭಾ, ಉದ್ಯಾವರೈಟ್ಸ್ ದುಬೈ ಮತ್ತು ಶ್ರೀಸಾಮಾನ್ಯರ ಆಯೋಗದ ವತಿಯಿಂದ ಪ್ರತಿಭಾ ಪುರಸ್ಕಾರ ಮತ್ತು ಶ್ರೀಸಾಮಾನ್ಯರ ದಿನಾಚರಣೆಯನ್ನು ಸಂಭ್ರಮದಿಂದ ಆಚರಣೆ ಮಾಡಲಾಯಿತು. ಸಂತ ಫ್ರಾನ್ಸಿಸ್ ಝೆವಿಯರ್ ದೇವಾಲಯದ ಸಭಾಭವನದಲ್ಲಿ ನಡೆದ ಕಾರ್ಯಕ್ರಮದಲ್ಲಿ ದೇವಾಲಯದ ಪ್ರಧಾನ ಧರ್ಮ ಗುರುಗಳಾದ ವo. ಫಾ. ಸ್ಟ್ಯಾನಿ ಬಿ ಲೋಬೊ ಅಧ್ಯಕ್ಷತೆ ವಹಿಸಿ, ಶುಭ ಹಾರೈಸಿದರು. ಈ ಸಂದರ್ಭದಲ್ಲಿ 2022-23ನೇ ಸಾಲಿನ ಎಸ್.ಎಸ್.ಎಲ್.ಸಿ. ಮತ್ತು ಪಿಯುಸಿ ವಿಭಾಗದಲ್ಲಿ ಅತ್ಯಧಿಕ ಅಂಕ […]
ಶ್ರೀನಿವಾಸಪುರ,ಜೂ:27, ಬಜೆಟ್ನಲ್ಲಿ ಮಾವು , ರೇಷ್ಮೇ, ಟಮೋಟೊ ಗೆ ಬೆಂಬಲ ಬೆಲೆ ಘೋಷಣೆ ಮಾಡುವಂತೆ ಮಾನ್ಯ ಮುಖ್ಯಮಂತ್ರಿಗಳನ್ನು ಒತ್ತಾಯಿಸಿ ಜು.1 ರ ಶನಿವಾರ ಇಂದಿರಾ ಭವನ್ ವೃತ್ತದಲ್ಲಿ ನಷ್ಟ ಬೆಳೆ ಸಮೇತ ಹೋರಾಟ ಮಾಡಲು ಕೃಷಿ ಉತ್ಪನ್ನ ಮಾರುಕಟ್ಟೆಯಲ್ಲಿ ಕರೆದಿದ್ದ ಸಭೆಯಲ್ಲಿ ತಿರ್ಮಾನಿಸಲಾಯಿತು.ಹತ್ತಾರು ವರ್ಷಗಳಿಂದ ಮಾವು ,ಟೊಮೋಟೋ, ರೇಷ್ಮೇ ಬೆಳೆಗಾರರ ಬದಕು ಬೀದಿಗೆ ಬೀಳುತ್ತಿದೆ ಲಕ್ಷಾಂತರ ಬಂಡವಾಳ ಹಾಕಿ ಬೆಳೆದಂತಹ ಬೆಳೆಗಳು ಕೈಗೆ ಬರುವ ಸಮಯದಲ್ಲಿ ಅತಿವೃಷ್ಠಿ, ಅನಾವೃಷ್ಟಿ ಪ್ರಕೃತಿ ವಿಕೋಪಗಳು ರೋಗ ಭಾದೆಗೆ ಸಂಪೂರ್ಣ ರೈತರ […]
ಕೋಲಾರ:- ಜಾಗದ ಸಮಸ್ಯೆಯಿಂದ ಬಳಲುತ್ತಿರುವ ಕೋಲಾರ ಎಪಿಎಂಸಿ ಮಾರುಕಟ್ಟೆಯ ಕಾಯಕಲ್ಪಕ್ಕೆ ಅಗತ್ಯ ಕ್ರಮ ಕೈಗೊಳ್ಳುವುದಾಗಿಯೂ ಮೂಲಭೂತ ಸೌಲಭ್ಯಗಳನ್ನು ಒದಗಿಸುವುದಾಗಿಯೂ ಜಿಲ್ಲಾಧಿಕಾರಿ ಅಕ್ರಂಪಾಷಾ ಭರವಸೆ ನೀಡಿದರು.ನಗರದ ಎಪಿಎಂಸಿ ಸಭಾಂಗಣದಲ್ಲಿ ಸೋಮವಾರ ಅಧಿಕಾರಿಗಳು, ವಿವಿಧ ಮಂಡಿ ಮಾಲೀಕರೊಂದಿಗೆ ಸಭೆ ನಡೆಸಿದ ಬಳಿಕ ಸುದ್ದಿಗಾರರೊಂದಿಗೆ ಅವರು ಮಾತನಾಡುತ್ತಿದ್ದರು.1979ರಲ್ಲಿ ಆರಂಭವಾಗಿರುವ ಕೋಲಾರ ಮಾರುಕಟ್ಟೆಯು ಅಂದಿನಿಂದಲೂ ಅಷ್ಟೇ ಜಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದು, ಸಮಸ್ಯೆಗಳು ಹೆಚ್ಚಾಗಿವೆ. ಹೀಗಾಗಿ ಸೌಕರ್ಯಗಳನ್ನು ಕಲ್ಪಿಸಿ ಆಧುನಿಕ ಮಾರುಕಟ್ಟೆಯಾಗಿಸಲು ಅಗತ್ಯ ಕ್ರಮ ಕೈಗೊಳ್ಳುವುದಾಗಿಯೂ ಮತ್ತು ಹೆಚ್ಚುವರಿ ಜಾಗದ ಬೇಡಿಕೆ ಈಡೇರಿಕೆಗೆ ಕ್ರಮವಹಿಸುವುದಾಗಿಯೂ ತಿಳಿಸಿದರು.ಎಪಿಎಂಸಿಯಲ್ಲಿರುವ […]
ಶ್ರೀನಿವಾಸಪುರ: ವಿದ್ಯಾರ್ಥಿಗಳು ಪರೀಕ್ಷೆಯಲ್ಲಿ ಉತ್ತಮ ಅಂಕ ಗಳಿಸಲು ಸುಂದರವಾದ ಬರವಣಿಗೆ ಅಗತ್ಯ. ಬರವಣಿಗೆಯಲ್ಲಿ ಸ್ಪಷ್ಟತೆ ಇಲ್ಲವಾದಲ್ಲಿ ಮೌಲ್ಯಮಾಪಕರಿಗೆ ಓದಲು ಸಾಧ್ಯವಾಗುವುದಿಲ್ಲ ಎಂದು ಪ್ರಾಂಶುಪಾಲ ಸಿ.ಆರ್.ಪ್ರಾಣೇಶ್ ಹೇಳಿದರು.ಪಟ್ಟಣದ ಸರ್ಕಾರಿ ಬಾಲಕಿಯರ ಸರ್ಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ಬಿಸ್ ಸಂಸ್ಥೆ ವತಿಯಿಂದ ಸೋಮವಾರ ಏರ್ಪಡಿಸಿದ್ದ ಸ್ಟ್ಯಾಂಡರ್ಡ್ ರೈಟಿಂಗ್ ಕಾಂಪಿಟಿಷನ್ ಸ್ಪರ್ಧೆ ಉದ್ಘಾಟಿಸಿ ಮಾತನಾಡಿ, ಗಾಂಧೀಜಿ ಅವರು ಹೇಳುವಂತೆ ಮಕ್ಕಳು ಸುಂದರ ಬರವಣಿಗೆ ಬರೆಯಲು ಸಾಧ್ಯವಾಗಲು, ಚಿತ್ರ ಕಲೆ ಕಲಿಸಬೇಕು. ಚಿತ್ರ ಬರೆಯುವುದನ್ನು ಕಲಿತ ಮಗು ಸುಂದರವಾದ ಬರವಣೆಗೆ ಬರೆಯಬಲ್ಲದು ಎಂದು […]
ಶ್ರೀನಿವಾಸಪುರ: ವಿದ್ಯಾರ್ಥಿಗಳುು ಮಾದಕ ಪದಾರ್ಥ ಸೇವನೆಯಿಂದ ದೂರವಿರಬೇಕು ಎಂದು ಪೊಲೀಸ್ ಇನ್ಸ್ಪೆಕ್ಟರ್ ಜೆ.ಸಿ.ನಾರಾಯಣಸ್ವಾಮಿ ಹೇಳಿದರು.ಪಟ್ಟಣದ ಸರ್ಕಾರಿ ಬಾಲಕಿಯರ ಪದವಿಪೂರ್ವ ಕಾಲೇಜು ಮೈದಾನದಲ್ಲಿ ಪೊಲೀಸ್ ಇಲಾಖೆ ಹಾಗೂ ಪದವಿ ಪೂರ್ವ ಶಿಕ್ಷಣ ಇಲಾಖೆ ವತಿಯಿಂದ ಅಂತರ ರಾಷ್ಟ್ರೀಯ ಮಾದಕ ದ್ರವ್ಯ ವಿರೋಧಿ ದಿನಾಚರಣೆ ಅಂಗವಾಗಿ ಸೋಮವಾರ ಏರ್ಪಡಿಸಿದ್ದ ಮಾದಕ ವಸ್ತು ವಿರೋಧಿ ಜಾಥಾಗೆ ಚಾಲನೆ ನೀಡಿ ಮಾತನಾಡಿದರು.ಮಾದಕ ವಸ್ತು ಸೇವನೆ ಮತ್ತು ಅಕ್ರಮ ಮಾರಾಟ ಕಾನೂನು ಬಾಹಿರ. ನಗರ ಪ್ರದೇಶದ ಕೆಲವು ವಿದ್ಯಾರ್ಥಿಗಳು ಅಂಥ ದಂಧೆಯಲ್ಲಿ ತೊಡಗಿರುವುದು ದುರದೃಷ್ಟಕರ […]
ಶ್ರೀನಿವಾಸಪುರ: ತಾಲೂಕಿನ ಮುಸ್ಲಿಮ್ಸ್ ಎಂಪ್ಲಾಯೇಸ್ ಅಸೋಸಿಯೇಷನ್ ವತಿಯಿಂದ ಕೋಲಾರದ ನೂತನ ಜಿಲ್ಲಾಧಿಕಾರಿಗಳಾದ ಅಕ್ರಂ ಪಾಷ ಅವರನ್ನು ಭೇಟಿ ಮಾಡಿ ಅಭಿನಂದಿಸಿದರು. ನಿಯೋಗದಲ್ಲಿ ಮುಸ್ಲಿಮ್ಸ್ ಎಂಪ್ಲಾಯೇಸ್ ಅಸೋಸಿಯೇಷನ್ ಸಲೀಂ ಅಹ್ಮದ್ ಅಬ್ದುಲ್ ವಾಜಿದ್, ಮೊಹಮ್ಮದ್ ಅಲಿ, ಮೊಹಮ್ಮದ್ ಸಾದಿಕ್, ಅಕ್ಮಲ್ ಪಾಷಾ, ತಾಜ್ ಪಾಷಾ, ಸೈಯದ್ ಗೌಸ್, ನಾಸೀರ್ ಪಾಷ ಉಪಸ್ಥಿತರಿದ್ದರು.
ಶ್ರೀನಿವಾಸಪುರ: ಕನ್ಯಕಾ ಪರಮೇಶ್ವರಿ ದೇವಾಲಯದಲ್ಲಿ ಆರ್ಯವೈಶ್ಯ ಮಂಡಳಿ ಟ್ರಸ್ಟ್, ಲಲಿತಾ ಮಹಿಳಾ ಸಂಘ ಹಾಗೂ ವಾಸವಿ ಯುವಕದ ವತಿಯಿಂದ ಶನಿವಾರ ದೇವಾಲಯದ 32ನೇ ವಾರ್ಷಿಕೋತ್ಸವ ಆಚರಿಸಲಾಯಿತು. ವಾರ್ಷಿಕೋತ್ಸವ ಅಂಗವಾಗಿ ಹಲವಾರು ಧಾರ್ಮಿಕ ಹಾಗೂ ಸಾಂಸ್ಕøತಿಕ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು.ದೇವಾಲಯದಲ್ಲಿ ದೇವಿ ವಿಗ್ರಹಕ್ಕೆ ವಿಶೇಷ ಅಲಂಕಾರ ಹಾಗೂ ಅಕ್ಕಿ ಅಭಿಷೇಕ ಮಾಡಲಾಯಿತು. ಲಲಿತಾ ಮಹಿಳಾ ಮಂಡಳಿ ಸದಸ್ಯರ ವತಿಯಿಂದ ಕನ್ಯಕಾಪರಮೇಶ್ವರಿ ಕುರಿತ ಭಕ್ತಿ ಗೀತೆಗಳ ಗಾಯನ ಏರ್ಪಡಿಸಲಾಗಿತ್ತು.ಪ್ರತಿಭಾ ಪುರಸ್ಕಾರ ಕಾರ್ಯಕ್ರಮದಲ್ಲಿ ಎಸ್ಸೆಸ್ಸೆಲ್ಸಿ, ಪಿಯುಸಿ ಮತ್ತು ಪದವಿ ಪರೀಕ್ಷೆಯಲ್ಲಿ ಗಣನೀಯ ಸಾಧನೆ […]