ಬೆಂಗಳೂರು, ಡಿ. 10; ರಾಜ್ಯ ಕಂಡ ಧೀಮಂತ ನಾಯಕ, ಮಾಜಿ ಮುಖ್ಯಮಂತ್ರಿ ಎಸ್‌ಎಂ ಕೃಷ್ಣ ಅವರು ಇಂದು (ಡಿಸೆಂಬರ್ 10) ನಸುಕಿನ ಜಾವ 2:30ರ ಸುಮಾರಿಗೆ ನಿಧನರಾದರು. ಈ ಹಿನ್ನೆಲೆಯಲ್ಲಿ ಕರ್ನಾಟಕ ಸರ್ಕಾರ ಇಂದಿನಿಂದ 3 ದಿನಗಳ ಕಾಲ ಶೋಕಾಚರಣೆ ಘೋಷಣೆ ಮಾಡಿದೆ ಇದೇ ವೇಳೆ ಬುಧವಾರ (ಡಿಸೆಂಬರ್ 11) ರಾಜ್ಯಾದ್ಯಂತ ಸರ್ಕಾರಿ ರಜೆ ಘೋಷಣೆ ಮಾಡಲಾಗಿದೆ. ಡಿಸೆಂಬರ್ 10 ರಿಂದ ಡಿಸೆಂಬರ್ 12ರವರೆಗೆ ಶೋಕಾಚರಣೆಗೆ ಘೋಷಣೆ ಮಾಡಲಾಗಿದ್ದು, ಮೂರು ದಿನಗಳ ಕಾಲ ರಾಜ್ಯ ಸರ್ಕಾರದ ಎಲ್ಲಾ […]
ಬೆಂಗಳೂರು: ಬಂಗಾಳಕೊಲ್ಲಿಯಲ್ಲಿ ಮತ್ತೆ ವಾಯುಭಾರ ಕುಸಿತ ಉಂಟಾಗಿದ್ದು, ಡಿಸೆಂಬರ್ 14 ರಿಂದ ಮತ್ತೆ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಬಂಗಾಳಕೊಲ್ಲಿಯಲ್ಲಿ ಉಂಟಾಗುವ ವಾಯುಭಾರ ಕುಸಿತದಿಂದ ಒಂದೆರಡು ದಿನ ದಕ್ಷಿಣ ಒಳನಾಡು ಹಾಗೂ ಕರಾವಳಿ ಭಾಗದ ಬಹುತೇಕ ಜಿಲ್ಲೆಗಳಲ್ಲಿ ಡಿ.14 ಹಾಗೂ 15 ರಂದು ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಗೋವಾ; ಪ್ರತಿ ವರ್ಷ ಕ್ರಿಸ್ಮಸ್ ಹಬ್ಬದ ಮೊದಲು, 3L ಸ್ನೇಹಿತರು ಬಡ 3L ವಿದ್ಯಾರ್ಥಿಗಳಿಗೆ (ಕನಿಷ್ಠ 3 ಸೌಲಭ್ಯ ವಂಚಿತರಿಗೆ) ಮತ್ತು ಅವರ ಪೋಷಕರು/ಪೋಷಕರಿಗೆ ಹೊಸ ಬಟ್ಟೆಗಳನ್ನು ಒದಗಿಸುತ್ತಾರೆ. ಈ ವರ್ಷವೂ ಕೆಲವರಿಗೆ ಹೊಸ ಬಟ್ಟೆ ನೀಡಿದ್ದಾರೆ. ಇನ್ನು ಕೆಲವರು ಕಾಯುವ ಪಟ್ಟಿಯಲ್ಲಿದ್ದಾರೆ. ಕೆಲವರ ಫೋಟೋಗಳನ್ನು ಇಲ್ಲಿ ಲಗತ್ತಿಸಲಾಗಿದೆ. ಬಡವರಲ್ಲಿ ಬಡವರೂ ಸಹ ವರ್ಷದಲ್ಲಿ ಒಮ್ಮೆಯಾದರೂ ಹೊಸ ಬಟ್ಟೆಯನ್ನು ಧರಿಸುವ ಘನತೆಯ ಹಕ್ಕನ್ನು ಹೊಂದವಬೇಕು 3L ಸ್ನೇಹಿತರು ಆಶಿಸುತ್ತಾರೆ. Goa 3L Friends provide new clothes […]
ಉತ್ತರ ಪ್ರದೇಶ: ಝಾನ್ಸಿ ಮೆಡಿಕಲ್ ಕಾಲೇಜಿನಲ್ಲಿ ಸಿಲಿಂಡರ್ ಸ್ಫೋಟಗೊಂಡು ಭಾರೀ ಅಗ್ನಿ ಅವಘಡ ಸಂಭವಿಸಿದೆ. ನವೆಂಬರ್ 15ರ ಶುಕ್ರವಾರ ರಾತ್ರಿ ಮಕ್ಕಳ ವಾರ್ಡ್‌ನಲ್ಲಿ (ಎನ್‌ಐಸಿಯು) ಬೆಂಕಿ ಕಾಣಿಸಿಕೊಂಡಿದೆ. ಈ ಘಟನೆಯಲ್ಲಿ ಹಲವು ಮಕ್ಕಳು ಸುಟ್ಟು ಕರಕಲಾಗಿದ್ದಾರೆ ಎಂದು ವರದಿಯಾಗಿದೆ. ಒಳಗಿನಿಂದ 10 ಮಕ್ಕಳ ಶವಗಳನ್ನು ಹೊರ ತೆಗೆಯಲಾಗಿದೆ. ಅಗ್ನಿಶಾಮಕ ದಳದ ಸಿಬ್ಬಂದಿ ಸ್ಥಳಕ್ಕೆ ಧಾವಿಸಿದ್ದು, ಬೆಂಕಿ ನಿಯಂತ್ರಿಸಲು ರಕ್ಷಣಾ ಕಾರ್ಯಾಚರಣೆ ನಡೆಸುತ್ತಿದ್ದಾರೆ. ಮಾಹಿತಿ ಪಡೆದ ಜಿಲ್ಲಾಧಿಕಾರಿಗಳು ಕೂಡ ಸ್ಥಳಕ್ಕೆ ಆಗಮಿಸಿದ್ದಾರೆ. ಝಾನ್ಸಿಯ ಮಹಾರಾಣಿ ಲಕ್ಷ್ಮೀಬಾಯಿ ವೈದ್ಯಕೀಯ ಕಾಲೇಜಿನ NICU (ಶಿಶು) ವಾರ್ಡ್‌ನಲ್ಲಿ […]
ಡಾ.ಪ್ರತಾಪಾನಂದ ನಾಯ್ಕ್, ಎಸ್.ಜೆ, ಲೋಯೋಲಾ ಹಾಲ್, ಮಿರಾಮರ್, ಗೋವಾ ಒಬ್ಬ ಶಸ್ತ್ರಚಿಕಿತ್ಸಕನು ತನ್ನ ಹತ್ತಿರದ ಕುಟುಂಬದ ಸದಸ್ಯರನ್ನೂ ಸಹ ಸೂಕ್ಷ್ಮವಾದ ಮತ್ತು ಸಂಕೀರ್ಣವಾದ ಕಾರ್ಯಾಚರಣೆಯನ್ನು ಮಾಡುವಾಗ ಭಾವನಾತ್ಮಕವಾಗಿ ತೊಡಗಿಸಿಕೊಳ್ಳಲು ಸಾಧ್ಯವಿಲ್ಲ. ಅವನು ತಂಪಾಗಿರಬೇಕು ಮತ್ತು ಶಾಂತವಾಗಿರಬೇಕು ಮತ್ತು ಅವನ ವೈದ್ಯಕೀಯ ಜ್ಞಾನ, ಸಾಮರ್ಥ್ಯ, ಕೌಶಲ್ಯ ಮತ್ತು ಅನುಭವವನ್ನು ಸಂಪೂರ್ಣವಾಗಿ ಅವಲಂಬಿಸಬೇಕು. ತನ್ನ ಸ್ವಂತ ಮಾತೃಭಾಷೆಗೆ ಸಂಬಂಧಿಸಿದ ಸೂಕ್ಷ್ಮ ಮತ್ತು ಸಂಕೀರ್ಣ ಸಮಸ್ಯೆಗಳೊಂದಿಗೆ ವ್ಯವಹರಿಸುವಾಗ ಭಾಷಾಶಾಸ್ತ್ರಜ್ಞನ ವಿಷಯವೂ ಅದೇ. ಈ ತತ್ವವನ್ನು ಗಮನದಲ್ಲಿಟ್ಟುಕೊಂಡು, ನಾನು ಹಿರಿಯ ಕೊಂಕಣಿ ಭಾಷಾಶಾಸ್ತ್ರಜ್ಞ […]
ಅಮ್ರೇಲಿಃ ಗುಜರಾತಿನ ಅಮ್ರೇಲಿ ಜಿಲ್ಲೆಯಲ್ಲಿ ಲಾಕ್ ಹಾಕಿಕೊಂಡು ಕಾರಿನೊಳಗೆ ಆಟವಾಡುತ್ತಿದ್ದ ಮಕ್ಕಳು ಉಸಿರುಗಟ್ಟಿ ಸಾವಿಗೀಡಾದ ಘಟನೆ ಜಿಲ್ಲೆಯ ರಾಂಧಿಯಾ ಗ್ರಾಮದಲ್ಲಿ ನಡೆದಿದೆ. 2 ರಿಂದ 7 ವರ್ಷದೊಳಗಿನ ಈ ಮಕ್ಕಳು ಲಾಕ್ ಹಾಕಿದ ಕಾರಿನೊಳಗೆ ಉಸಿರುಗಟ್ಟಿ ಸತ್ತಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಈ ಮಕ್ಕಳ ಹೆತ್ತವರು ಭರತ್ ಮಂದಾನಿ ಕೃಷಿ ತೋಟದಲ್ಲಿ ಕೆಲಸ ಮಾಡಲು ಅಂದು ಬೆಳಗ್ಗೆ 7.30ರ ವೇಳೆಗೆ ಹೋಗಿದ್ದರು. ಆಗ ಅವರ ಏಳು ಮಕ್ಕಳನ್ನು ಮನೆಯಲ್ಲಿಯೇ ಬಿಟ್ಟುಹೋಗಿದ್ದರು. ಅವರಲ್ಲಿ ನಾಲ್ವರು ಮಕ್ಕಳು ಮನೆ ಸಮೀಪ ನಿಲ್ಲಿಸಿದ್ದ […]
ನವೆಂಬರ್ 4 ರ ಸೋಮವಾರ ತಡರಾತ್ರಿ 43 ವರ್ಷದ ಬಾಲಸುಬ್ರಮಣ್ಯಂ ಮತ್ತು ಅವರ 17 ವರ್ಷದ ಮಗಳು ದೊಡ್ಡ ಸೂಟ್‌ಕೇಸ್‌ನೊಂದಿಗೆ ನಿಲ್ದಾಣಕ್ಕೆ ಬಂದಿದ್ದರು. ಬಾಲಸುಬ್ರಹ್ಮಣ್ಯಂ ಆ ಸೂಟ್‌ಕೇಸ್‌ನ್ನು ಅಲ್ಲಿಯೇ ಬಿಟ್ಟು ರೈಲ್ವೆ ನಿಲ್ದಾಣದಿಂದ ಹೊರಹೋಗಲು ಯತ್ನಿಸುತ್ತಿದ್ದರು ಎಂದು ಪ್ರತ್ಯಕ್ಷದರ್ಶಿಗಳು ತಿಳಿಸಿರುವ ಬಗ್ಗೆ ವರದಿಯಾಗಿದೆ. ಸಾಮಾನು ಸರಂಜಾಮು ಬಿಟ್ಟು ಹೋಗಿರುವ ಬಗ್ಗೆ ಆತಂಕಗೊಂಡ ಪ್ರಯಾಣಿಕರು ಕೂಡಲೇ ರೈಲ್ವೆ ರಕ್ಷಣಾ ಪಡೆ (ಆರ್‌ಪಿಎಫ್) ಅಧಿಕಾರಿಗಳಿಗೆ ಮಾಹಿತಿ ನೀಡಿದ್ದಾರೆ. ಸೂಟ್‌ಕೇಸ್ ತುಂಬಾ ದೊಡ್ಡದಾಗಿದ್ದ ಕಾರಣ, ಅಲ್ಲಿಂದ ಸ್ಥಳಾಂತರಿಸಲು ಸಾಧ್ಯವಾಗದ ಕಾರಣ ಆರ್‌ಪಿಎಫ್ […]
ಮುಂಬೈ, ಅ.27,: ಬಾಂದ್ರಾ ರೈಲು ನಿಲ್ದಾಣದಲ್ಲಿ ಜನಸಂದಣಿ ಹೆಚ್ಚಿದ್ದರಿಂದ ಉಂಟಾದ ಕಾಲ್ತುಳಿತದಲ್ಲಿ 9 ಮಂದಿ ಗಾಯಗೊಂಡ ಘಟನೆಭಾನುವಾರ ಇಂದು ನಡೆದಿದೆ. ಗಾಯಾಳುಗಳಲ್ಲಿ ಇಬ್ಬರ ಸ್ಥಿತಿ ಗಂಭೀರವಾಗಿದೆ ಎಂದು ತಿಳಿದುಬಂದಿದೆ. ನಿಲ್ದಾಣದ ಪ್ಲಾಟ್ ಫಾರ್ಮ್ 1ರಲ್ಲಿ ಜನರ ನೂಕುನುಗ್ಗಲಿನಿಂದಾಗಿ ಕಾಲ್ತುಳಿತದ ಈ ದುರ್ಥಟನೆ ಸಂಭವಿಸಿದೆ. ಗಾಯಾಳುಗಳನ್ನು ಭಾಭಾ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಬಾಂದ್ರಾ ಟರ್ಮಿನಲ್ ಒಂದನೇ ಪ್ಲಾಟ್ ಫಾರ್ಮ್ 1ರಲ್ಲಿ ಭಾನುವಾರ ಬೆಳಗ್ಗೆ 5.56ಕ್ಕೆ ಈ ದುರ್ಘಟನೆ ನಡೆದಿದೆ ಎಂದು ತಿಳಿದುಬಂದಿದೆ. ಮುಂಬೈ ಮಹಾನಗರ ಪಾಲಿಕೆ ನೀಡಿರುವ […]
ಹೊಸದಿಲ್ಲಿ: ಬಂಗಾಳ ಕೊಲ್ಲಿಯಲ್ಲಿ ಸೃಷ್ಟಿಯಾಗಿರುವ ವಾಯುಭಾರ ಕುಸಿತದ ಪರಿಣಾಮವಾಗಿ ‘ಡಾನಾ’ ಚಂಡಮಾರುತವು ಮುಂದಿನ 24 ಗಂಟೆಗಳಲ್ಲಿ ಅಂದರೆ ಗುರುವಾರ ರಾತ್ರಿ (ಅ.24) ಹಾಗೂ ಶುಕ್ರವಾರ (ಅ.25) ಒಡಿಶಾದ ಪುರಿ ಹಾಗೂ ಪಶ್ಚಿಮ ಬಂಗಾಳದ ಸಾಗರ ದ್ವೀಪ ಪ್ರದೇಶಕ್ಕೆ ಚಂಡಮಾರುತ ಅಪ್ಪಳಿಸಲಿದೆ ಎಂದು ಭಾರತೀಯ ಹವಾಮಾನ ಇಲಾಖೆ (ಐಎಂಡಿ) ಹೇಳಿದೆ. ‘ಡಾನಾ’ ಚಂಡಮಾರುತ ಪ್ರಭಾವದಿಂದ ಬಿರುಗಾಳಿ ಸಹಿತ ದೇಶದ ಈ ವಿವಿಧ ರಾಜ್ಯಗಳಿಗೆ ಭರ್ಜರಿ ಮಳೆ ಆಗಲಿದೆ. ಪ್ರತಿ ಗಂಟೆಗೆ 100-110 ಕಿ.ಮೀ. ವೇಗದಲ್ಲಿ ಗಾಳಿ ಬೀಸುತ್ತಿದ್ದು, ಮುಂದಿನ […]